ಕಣ್ಣೂರು: ಕಾರು – ಲಾರಿ ನಡುವಿನ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಕಣ್ಣೂರು ಜಿಲ್ಲೆಯ ಚೆರುಕುನ್ನು ಸಮೀಪದ ಪುನ್ನಚೇರಿ ಎಂಬಲ್ಲಿ ಸೋಮವಾರ ರಾತ್ರಿ (ಏ.29 ರಂದು) ನಡೆದಿದೆ. ಕಾರು ಚಲಾಯಿಸುತ್ತಿದ್ದ ಕಾಸರಗೋಡು ಕಾಳೀಚನಡುಕ್ಕಂನ ಸಾಸ್ತಂಪಾರದ ಕೆ.ಎನ್.ಪದ್ಮಕುಮಾರ್ (59), ಭೀಮಾನಡಿಯ ಚೂರಿಕಟ್ಟೆಯ ಸುಧಾಕರನ್ (52), ಸುಧಾಕರನ್ ಅವರ ಪತ್ನಿ ಅಜತಾ (35), ಅವರ ತಂದೆ ಕೊಜುಮ್ಮಲ್ ಕೃಷ್ಣನ್ (65) ಮತ್ತು ಅಜಿತಾ ಅವರ ಸಹೋದರ ಅಜಿತ್ ಅವರ ಮಗ ಆಕಾಶ್ (9) ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕ ಆಕಾಶ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ. ಚೆರುಕುನ್ನು ಬಳಿಯ ಪುನ್ನಚೇರಿಯ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ. ಹಿಂಬದಿಯಿಂದ ಬಂದ ಲಾರಿ ಕಾರಿಗೆ ಢಿಕ್ಕಿ ಹೊಡೆದಿದ್ದರಿಂದ ಕಾರು ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಮಂಗಳೂರಿನಿಂದ ಬರುತ್ತಿತ್ತು.…
Author: main-admin
ಮಂಗಳೂರು: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಕೃಷಿ ರಕ್ಷಣೆಗಾಗಿ ಆಯುಧ ಪರವಾನಿಗೆ ಹೊಂದಿರುವ (ಪೊಲೀಸ್ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಆಯುಧ ಪರವಾನಿಗೆದಾರರು ತಮ್ಮ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ / ಅಧಿಕೃತ ಕೋವಿ ಹಾಗೂ ಮದ್ದುಗುಂಡು ವ್ಯಾಪರಸ್ಥರಲ್ಲಿ ಠೇವಣೆ ಇರಿಸಿದ್ದು ಈ ಆಯುಧಗಳನ್ನು ಹಿಂಪಡೆಯಲು ಆಯುಧ ಪರವಾನಿಗೆದಾರರಿಗೆ ಏ.29ರ ಸೋಮವಾರದಿಂದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ. ಷರತ್ತುಗಳು:ಯಾವುದೇ ಮೆರವಣಿಗೆ, ಜಾತ್ರೆ ಇತ್ಯಾದಿಗಳಲ್ಲಿ ಶಸ್ತ್ರಾಸ್ತ್ರವನ್ನು ಒಯ್ಯಲು ಅವಕಾಶವಿರುವುದಿಲ್ಲ. ಬೆಳೆಗಳ ರಕ್ಷಣೆಗಾಗಿ ಸದ್ರಿ ಆಯುಧಗಳನ್ನು ಮಾತ್ರ ಬಳಸತಕ್ಕದ್ದು. ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಬಹಿರಂಗವಾಗಿ ಎಲ್ಲೂ ಪ್ರದರ್ಶಿಸುವಂತಿಲ್ಲ. ಸಾರ್ವಜನಿಕರನ್ನು ಪ್ರತ್ಯಕ್ಷವಾಗಿ…
ಮಂಗಳೂರು: ಮೇ 2ರ ತನಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿಗಾಳಿ (heat wave) ಬೀಸಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಸಿದೆ ದಕ್ಷಿಣ ಕನ್ನಡದಲ್ಲಿ ಇನ್ನೂ ನಾಲ್ಕು ದಿನ ಬಿಸಿ ವಾತಾವರಣ ಮುಂದುವರಿಯಲಿದೆ. ರಾಜ್ಯದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡದ ಕೆಲವು ಪ್ರದೇಶಗಳಲ್ಲಿ ಮಾತ್ರ ಎಪ್ರಿಲ್‌ನಲ್ಲಿ ಒಂದೆರಡು ಸಾರಿ ಮಳೆ ಸುರಿದಿದೆ. ಕೆಲವು ಪ್ರದೇಶಗಳಲ್ಲಿ ಕಳೆದ ನವೆಂಬರ್‌ನಲ್ಲಿ ಕಾಣೆಯಾದ ಮಳೆ ಮತ್ತೆ ಕಾಣಿಸಿಕೊಂಡಿಲ್ಲ. ಹೀಗಾಗಿ ವಾತಾವರಣ ಬಿಸಿಯಾಗಿಯೇ ಇದೆ. ಮಾರ್ಚ್ ಆರಂಭದಿಂದಲೇ ಬಿಸಿಲ ಝಲ ತೀವ್ರಗೊಂಡಿತ್ತು. ಸೆಖೆಯಿಂದಾಗಿ ಹಿರಿಯ ನಾಗರಿಕರು ತೀವ್ರ ಸಮಸ್ಯೆ ಎದುರಿ ಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಮತ ಚಲಾಯಿಸಲು ಆಗಮಿಸಿದ ಹಿರಿಯ ನಾಗರಿಕರು ಕಷ್ಟ ಅನುಭವಿಸಿದ್ದರು. ಮಂಗಳೂರಿನಲ್ಲಿ ಸೋಮವಾರ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇತ್ತು.…
ಉಡುಪಿ : ಹಾರ್ನ್ ಹಾಕಿ ಓವರ್ ಟೇಕ್ ಮಾಡಿದಕ್ಕೆ ಕಾರು ಚಾಲಕನೊಬ್ಬ ಬಸ್ಸನ್ನು ಅಡ್ಡಗಟ್ಟಿ ಬಸ್ ಡ್ರೈವರಿಗೆ ಚಾಕುವಿನಿಂದ ಇರಿದ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಇರಿತಕ್ಕೊಳಗಾದ ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಮಾಸ್ಟರ್ ಹೆಸರಿನ ಎಕ್ಸ್ ಪ್ರೆಸ್ ಬಸ್ ಪಡುಬಿದ್ರೆ ಯ ಎರ್ಮಾಳ್ ಬಳಿ ಮುಂದಿನಿಂದ ಹೋಗುತ್ತಿದ್ದ ಕಾರು ಚಾಲಕನಿಗೆ ಹಾರ್ನ್ ಹಾಕಿ ಓವರ್ ಡೇಕ್ ಮಾಡಲು ಯತ್ನಿಸಿದ್ದಾನೆ. ಬಸ್ಸಿನ ಕರ್ಕಶ ಹಾರ್ನ್‌ಗೆ ಆಕ್ರೋಶಗೊಂಡ ಕಾರು ಚಾಲಕ ಬಸ್ಸನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಮಾಡಿ ಇರಿದು ಬಳಿಕ ಬಸ್ಸಿನಿಂದ ಇಳಿದು ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಗಾಯಗೊಂಡ ಬಸ್ ಚಾಲಕನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ಬಗ್ಗೆ ಪಡುಬಿದ್ರೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ .
ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಏಪ್ರಿಲ್ 30ರವರೆಗೆ ಹೀಟ್ ವೇವ್ ಪ್ರಭಾವ ಇರಲಿದೆ. ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್ ವೇವ್ ಹೆಚ್ಚಾಗುವ ಸಾಧ್ಯತೆ ಇದೆ. ಬಿಸಿ ಗಾಳಿ ಎಚ್ಚರಿಕೆ ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ…
ಮಂಗಳೂರಿನ ಹಲವಾರು ಪ್ರದೇಶಗಳು ಏಪ್ರಿಲ್ 30 ರಿಂದ ಮೇ 1 ರವರೆಗೆ ನೀರು ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯವನ್ನು ಅನುಭವಿಸಲಿವೆ. ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯು ನೀರಿನ ಸೇವೆಗಳನ್ನು ಸ್ಥಗಿತಗೊಳಿಸಲು ಯೋಜಿಸಿದೆ. ಮಂಗಳೂರು ನೀರು ಕಡಿತ: ಸಮಯ ಪರಿಶೀಲಿಸಿ ಎಪ್ರಿಲ್ 30ರಂದು ಬೆಳಗ್ಗೆ 6 ಗಂಟೆಯಿಂದ ಮೇ 1ರ ಬೆಳಗ್ಗೆ 6 ಗಂಟೆಯವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಯೋಜಿತ ನೀರು ಸರಬರಾಜು ಅಡಚಣೆಯು ನಗರದಾದ್ಯಂತ ವಿವಿಧ ನೆರೆಹೊರೆಗಳ ಮೇಲೆ ಪರಿಣಾಮ ಬೀರುತ್ತದೆ. ಮಂಗಳೂರಿನಲ್ಲಿ ನೀರಿನ ಕಡಿತ ಏಕೆ? ರೇಚಕ ಸ್ಥಾವರವನ್ನು ಮಂಗಳೂರು ನಗರಕ್ಕೆ ಸಂಪರ್ಕಿಸುವ ಪೈಪಿಂಗ್ ಮೂಲಸೌಕರ್ಯದ ಅಗತ್ಯ ನಿರ್ವಹಣಾ ಕಾರ್ಯಗಳಿಂದಾಗಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ತಿಳಿಸಿದೆ. ನಗರ ನಿಗಮದೊಳಗೆ ನೀರು ಸರಬರಾಜು ವ್ಯವಸ್ಥೆಯನ್ನು ಉತ್ತಮಗೊಳಿಸಲು ಎಂಎಂಸಿ ನಿರ್ವಹಣೆಗೆ ಸಹಾಯ ಮಾಡುತ್ತದೆ. ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು, ಫಳ್ನೀರು, ಮುಳಿಹಿತ್ಲು, ಬೋಳಾರ್,…
ಪುತ್ತೂರು: ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ. ಆರೋಪಿ ಹರ್ಷಿತ್ ಎಂಬಾತನಿಗೆ ಜಾಮೀನು ಮಂಜೂರಾಗಿದೆ. ಪುತ್ತೂರಿನ ಬನ್ನೂರು ಗ್ರಾಮದ ಬನ್ನೂರು ಬೈಲು ಎಂಬಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಾ. 13ರಂದು ಈ ಘಟನೆ ನಡೆದಿತ್ತು. ಈ ಘಟನೆಯ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ನಾಲ್ವರನ್ನು ಬಂಧಿಸಿದ್ದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಬಾಡಿಗೆ ಮನೆ ನೀಡಿ ಆಶ್ರಯ ನೀಡಿದ್ದ ಇನ್ನಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ಪೈಕಿ ಮನು ಯಾನೆ ಮನ್ವಿತ್‌ಗೆ ಆರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈಗ ಮತ್ತೋರ್ವ ಪ್ರಮುಖ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಮಂಗಳೂರು: ಪ್ರಯಾಣಿಕನೊಬ್ಬ 54.3 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದ ಘಟನೆ ಏ. 27ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸೌದಿ ಅರೇಬಿಯಾದ ದಮ್ಮಾಮ್‌ನಿಂದ ಆಗಮಿಸಿದ ಪ್ರಯಾಣಿಕ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಇದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಪಾಸಣೆಗೆ ಒಳಪಡಿಸಿದಾಗ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ. ದಕ್ಷಿಣ ಕನ್ನಡ ಮೂಲದ ಪ್ರಯಾಣಿಕನಾದ ಈಗ ತನ್ನ ಗುದನಾಳದಲ್ಲಿ 54.3 ಲಕ್ಷ ರೂಪಾಯಿ ಮೌಲ್ಯದ 825 ಗ್ರಾಂ ತೂಕದ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮೂರು ಅಂಡಾಕಾರದ ವಸ್ತುಗಳಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ. ಹೊರತೆಗೆದು ಪ್ರಕ್ರಿಯೆಗಳನ್ನು ನಡೆಸಿದ ಬಳಿಕ ನಿವ್ವಳ 750 ಗ್ರಾಂ ತೂಕದ 24 ಕ್ಯಾರೆಟ್ ಶುದ್ಧತೆಯ ಚಿನ್ನ ಇರುವುದು ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ: ಹಿರಿಯಡಕದ ನರ್ತಕಿ ಬಾರ್ ಆ್ಯಂಡ್ ರೆಸ್ಟೋರೆಂಟ್‌ನ ರೆಸ್ಟ್ ರೂಮ್ ನಲ್ಲಿ ಮಲಗಿದ್ದಲ್ಲಿಯೇ ಕ್ಲಿನರ್ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಸುಧಾಕರ (45) ಎಂದು ಗುರುತಿಸಲಾಗಿದೆ. ಸುಮಾರು 7-8 ವರ್ಷದಿಂದ ಹಿರಿಯಡ್ಕ ನರ್ತಕಿ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಕ್ಲಿನಿಂಗ್ ಕೆಲಸ ಮಾಡಿಕೊಂಡಿದ್ದರು. ಎಪ್ರಿಲ್ 26ರಂದು ಬಾರ್ ನ ರೆಸ್ಟ್ ರೂಮಿನಲ್ಲಿ ಮಲಗಿದ ಸ್ಥಿತಿಯಲ್ಲೇ ಸಾವನ್ನಪ್ಪಿದ್ದಾರೆ.
ಕುಂದಾಪುರ: ಇಲ್ಲಿನ ತೆಕ್ಕಟ್ಟೆ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಯಿತು. ಪರಿಣಾಮ ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಇನ್ನೋವಾ ಕಾರಿನಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತದ ತೀವ್ರತೆಗೆ ಕಾರಿನ ಒಂದು ಪಾರ್ಶ್ವ ಸಂಪೂರ್ಣ ಜಖಂಗೊಂಡಿದೆ. ಕಾರಿನ ಒಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.