ಪುತ್ತೂರು : ಸಹಪಾಠಿ ಯುವತಿಗೆ ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣದಲ್ಲಿ, ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ.ರಾವ್ ವಿರುದ್ಧ ಮಹತ್ವದ ಬೆಳವಣಿಗೆ ನಡೆದಿದೆ. ಸಂತ್ರಸ್ತೆ ಜೂನ್ 27ರಂದು ಗಂಡು ಮಗುವಿಗೆ ಜನ್ಮ ನೀಡಿದ್ದ ಹಿನ್ನೆಲೆಯಲ್ಲಿ, ಮಗು 50 ದಿನಗಳಾದ ನಂತರ ಇಂದು (ಆ.19) ಪುತ್ತೂರಿನ ನ್ಯಾಯಾಲಯದಲ್ಲಿ ಸಂತ್ರಸ್ತೆ, ಮಗು ಹಾಗೂ ಆರೋಪಿ ಮೂವರ ಡಿಎನ್‌ಎ ಪರೀಕ್ಷೆ ನಡೆಯಿತುಮಂಗಳೂರಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಪೊಲೀಸರು ಮಧ್ಯಾಹ್ನ ನ್ಯಾಯಾಲಯಕ್ಕೆ ಕರೆ ತಂದರು. ಈ ಸಂದರ್ಭದಲ್ಲಿ ಸಂತ್ರಸ್ತೆ ಯುವತಿ, ಮಗು ಮತ್ತು ಯುವತಿಯ ತಾಯಿ ಹಾಜರಿದ್ದರು. ನ್ಯಾಯಾಧೀಶರ ಸಮ್ಮುಖದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯರ ನೇತೃತ್ವದಲ್ಲಿ ವಿಧಿವಿಜ್ಞಾನ ಇಲಾಖೆಯ ಸಿಬ್ಬಂದಿ ಮೂವರ ರಕ್ತದ ಮಾದರಿಗಳನ್ನು ಸಂಗ್ರಹಿಸಿದರು. ಸಂಗ್ರಹಿಸಿದ ಮಾದರಿಗಳನ್ನು ಡಿ.ಎನ್‌ಎ ಪರೀಕ್ಷೆಗಾಗಿ ಬೆಂಗಳೂರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಮಹಿಳಾ ಠಾಣೆಯ ಪೊಲೀಸ್ ಸಿಬ್ಬಂದಿ ಬಸ್ ಮೂಲಕ ಅವುಗಳನ್ನು ಬೆಂಗಳೂರಿಗೆ ಸಾಗಿಸಿದರು. ಸಂತ್ರಸ್ತೆಯ ತಾಯಿಯೂ ಮಾದರಿಗಳ ಭದ್ರತೆಗಾಗಿ ಅವರೊಂದಿಗೆ ತೆರಳಿದ್ದಾರೆ. ಈ…
Author: main-admin
ನವದೆಹಲಿ: ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯ ಸಚಿವರು ಬಂಧನಕ್ಕೊಳಗಾದರೆ, ಅವರನ್ನು ಪದಚ್ಯುತಗೊಳಿಸುವ ಮಸೂದೆಯನ್ನು ಬುಧವಾರ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಂವಿಧಾನ (130ನೇ ತಿದ್ದುಪಡಿ) ಮಸೂದೆ 2025, ಕೇಂದ್ರಾಡಳಿತ ಸರ್ಕಾರ (ತಿದ್ದುಪಡಿ) ಮಸೂದೆ ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್‌ರಚನೆ (ತಿದ್ದುಪಡಿ) ಮಸೂದೆ– 2025 ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಈ ಮೂರೂ ಮಸೂದೆಗಳನ್ನು ಹೆಚ್ಚಿನ ಪರಿಶೀಲನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಒಪ್ಪಿಸುವ ಗೊತ್ತುವಳಿಯನ್ನೂ ಅಮಿತ್ ಶಾ ಅವರು ಮಂಡಿಸಲಿದ್ದಾರೆ. ಮಸೂದೆಯ ಪ್ರಕಾರ, 30 ದಿನಗಳ ಕಾಲ ನಿರಂತರ ಬಂಧನದಲ್ಲಿದ್ದವರನ್ನು 31ನೇ ದಿನ ಪದಚ್ಯುತಗೊಳಿಸಲು ಅವಕಾಶ ಕಲ್ಪಿಸಲಾಗುತ್ತದೆ. ಆದರೆ, ಬಂಧನದಿಂದ ಬಿಡುಗಡೆ ಆದವರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿ ಅಥವಾ ಸಚಿವರನ್ನಾಗಿ ನೇಮಿಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಗಂಭೀರ ಸ್ವರೂಪದ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇಲೆ ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಅಥವಾ ರಾಜ್ಯಗಳ ಸಚಿವರನ್ನು ಬಂಧಿಸಿ, ನ್ಯಾಯಾಂಗ…
ಬೆಂಗಳೂರು : ಕರ್ನಾಟಕದಲ್ಲಿ ಕಳೆದ 5 ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 14 ಸಾವಿರಕ್ಕಿಂತ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಹೌದು, ಕರ್ನಾಟಕದಲ್ಲಿ 5 ವರ್ಷಗಳಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದು, ಈ ಪೈಕಿ 1,336 ಮಕ್ಕಳು ಇನ್ನೂ ನಿಗೂಢವಾಗಿದ್ದಾರೆ. ಕಿಡ್ನಾಪ್ ಹಾಗೂ ನಿಗೂಢ ಆದವರ ಪೈಕಿ ಹೆಣ್ಣು ಮಕ್ಕಳೇ ಹೆಚ್ಚಾಗಿದ್ದಾರೆ ಎಂದು ರಾಜ್ಯ ಸರ್ಕಾರದ ಮಾಹಿತಿ ಹೊರಬಿದ್ದಿದೆ. ಈ ವರ್ಷ ಜುಲೈ ಅಂತ್ಯಕ್ಕೆ 2,170 ಮಕ್ಕಳು ನಾಪತ್ತೆಯಾಗಿದ್ದಾರೆ. ಕಾಣೆಯಾದವರ ಮಕ್ಕಳ ಪೈಕಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ದಾವಣಗೆರೆ, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಚಿತ್ರದುರ್ಗ, ತುಮಕೂರು, ಮೈಸೂರು ನಂತರ ಸ್ಥಾನದಲ್ಲಿವೆ. 2020ರಿಂದ ಈವರೆಗೂ ರಾಜ್ಯದಲ್ಲಿ 14,878 ಮಕ್ಕಳು ನಾಪತ್ತೆ ಪ್ರಕರಣ ದಾಖಲಾಗಿದ್ದು, ಈ ಪೈಕಿ 13,542 ಪ್ರಕರಣಗಳಲ್ಲಿ ಮಕ್ಕಳು ಪೋಷಕರ ಮಡಿಲಿಗೆ ಸೇರಿದ್ಧಾರೆ. ಬಾಕಿ 1,336 ಮಕ್ಕಳು ನಿಗೂಢವಾಗಿದ್ದಾರೆ. ಅಪಹರಣಕ್ಕೆ ಒಳಗಾದ 10,792 ಹೆಣ್ಣು ಮಕ್ಕಳ ಪೈಕಿ 1,003 ಕಾಣೆಯಾಗಿದ್ದಾರೆ. 4,086 ಗಂಡು ಮಕ್ಕಳ ಪೈಕಿ…
ಮಂಗಳೂರು: Brand Protectors India Pvt. Ltd ನ South India regional head ಸ್ಟೀಫನ್ ರಾಜ್ ರವರ ದೂರಿನ ಪ್ರಕಾರ ಉಳ್ಳಾಲ ಠಾಣಾ ವ್ಯಾಪ್ತಿಯ SPORTS WINNER ಅಂಗಡಿ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದೇವ್ ಸ್ಪೋಟ್ಸ್ ಸೆಂಟರ್ ನಲ್ಲಿ COSCO, NIVIA & YONEX ಬ್ರಾಂಡ್ ಎಂದು ಹಾಕಿರುವ ನಕಲಿ ಫುಟ್ ಬಾಲ್‍ಗಳು, ವಾಲಿಬಾಲ್ ಗಳು ಹಾಗೂ ಬ್ಯಾಡ್ಮಿಂಟನ್ ರಾಕೆಟ್‍ಗಳು ಮಾರಾಟವಾಗುತ್ತಿರುವ ಬಗ್ಗೆ ದೂರು ನೀಡಿದ ಮೇರೆಗೆ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮತ್ತು ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 18-8-2025 ರಂದು ಮತ್ತು ಮಂಗಳೂರು ಉತ್ತರ ಠಾಣೆ ವ್ಯಾಪ್ತಿಯಲ್ಲಿ ದಿನಾಂಕ 19-8-2025 ರಂದು ದಾಳಿ ಮಾಡಿ ಸುಮಾರು 300 ನಕಲಿ ವಾಲಿಬಾಲ್‍ಗಳು, ಫುಟ್ ಬಾಲ್‍ಗಳು ಹಾಗೂ ಬ್ಯಾಡ್ಮಿಂಟನ್ ರಾಕೆಟ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಮಂಗಳೂರು: ಉಪ್ಪಿನಂಗಡಿ ಠಾಣಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿಸರಗಳ್ಳತನದ ಆರೋಪಿಯೊಬ್ಬನನ್ನು ಬಂಧಿಸಿ ರೂ 5,05,000 ಮೌಲ್ಯದ ಸೊತ್ತು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಸುಳ್ಯ ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಬಂಧಿತ ಆರೋಪಿ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂ.4 ರಂದು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು, ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಪ್ಪಿನಂಗಡಿ ಠಾಣಾ ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಆರೋಪಿ ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ ಎಂಬಾತನನ್ನು ಪುತ್ತೂರಿನ ನೆಕ್ಕಿಲಾಡಿ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿತನಿಂದ ಅಂದಾಜು ರೂ 4,54,000/-ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಸೇರಿದಂತೆ, ಒಟ್ಟು 5,05,000 ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಬೈಕ್ ಗೆ ಸಂಬಂಧಿಸಿ ಮೈಸೂರು ನಗರದ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ…
ಹೋಟೆಲ್ ಉದ್ಯಮಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಕಾರ್ಕಳದ ಬೈಲೂರು ಮೂಲದ ಉದ್ಯಮಿ ಕೃಷ್ಣರಾಜ ಹೆಗ್ಡೆ(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತಮ್ಮ ಆತ್ರಾಡಿಯ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮೃತರು ತಾಯಿ, ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ : ದ್ವೇಷ ಭಾಷಣದ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಶರತ್ ಶೆಟ್ಟಿ ಇವರ ವಿರುದ್ಧ ಕೋಟ ಮತ್ತು ಬ್ರಹ್ಮಾವರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ : ದ್ವೇಷ ಭಾಷಣದ ಬಗ್ಗೆ ಕೋಟ ಮತ್ತು ಬ್ರಹ್ಮಾವರ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ. 1)ದಿನಾಂಕ 16-08-2025 ರಂಧು ಫೇಸ್ ಬುಕ್ ಪೇಜ್ ನಲ್ಲಿ ಆರೋಪಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ರವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿ ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇ಼ಷ ಭಾವನೆಯನ್ನು ಉಂಟು ಮಾಡಿರುವ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮಕ್ಕಾಗಿ ರಾಜೀವ ಕುಲಾಲ್, ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಳಾಧ್ಯಕ್ಷರು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 177/2025 US 196…
ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಜೆಪ್ಪು ಮಾರ್ಕೆಟ್ ಬಳಿಯ ನಿವಾಸಿ ಮುಸಬ್ಬ ರವರ ಮಗ ಮೊಹಮ್ಮದ್ ಸಮೀರ್ ಬಂಧಿತ ಆರೋಪಿ. ಮಲ್ಪೆ ಪೊಲೀಸ್ ಠಾಣೆಯ ಅಪರಾಧ ಕ್ರಮಾಂಕ : 124/2011 ಕಲಂ:379 IPCಯ ಕಳ್ಳತನ ಪ್ರಕರಣದಲ್ಲಿ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ಸಮೀರ್ ನನ್ನು ಮಲ್ಪೆ ಪೊಲೀಸ್ ಉಪನಿರೀಕ್ಷಕ ಅನೀಲ್ ಕುಮಾರ ಸಿಬ್ಬಂದಿಯವರಾದ ಸುರೇಶ್, ವಿಶ್ವನಾಥ, ಕುಬೇರ ರವರು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ ಆಗಸ್ಟ್ 17 ರಂದು ನ್ಯಾಯಾಲಯಕ್ಕೆ ಹಾಜರಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.
ಬೆಂಗಳೂರು : ಜಗಳದ ಸಂದರ್ಭದಲ್ಲಿ ಹೋಗಿ ಸಾಯಿ ಎಂದು ಹೇಳಿರುವ ಮಾತು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗದು ಎಂದು ಹೈಕೋರ್ಟ್ ತೀರ್ಪು ನೀಡಿದ್ದು, ಪತಿಯ ಸಾವಿಗೆ ಕಾರಣರಾಗಿದ್ದಾರೆ ಎಂಬ ಆರೋಪದಡಿ ಮಹಿಳೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ತನ್ನ ಪತಿಯ ಆತ್ಮಹತ್ಯೆಗೆ ಪ್ರಚೋದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ದೂರು ಮತ್ತು ಪ್ರಥಮ ಮಾಹಿತಿ ವರದಿ (‘ಎಫ್ಐಆರ್’) ರದ್ದುಗೊಳಿಸುವಂತೆ ಕೋರಿ ಹುಬ್ಬಳ್ಳಿ ಮೂಲದ ಫಿಬಿ ಗೌತಮ್ ಅವರು ಸಲ್ಲಿಸಿದ್ದ ಸಲ್ಲಿಸಿದ ಕ್ರಿಮಿನಲ್ ಅರ್ಜಿಯಲ್ಲಿ, ಎಸ್. ವಿಶ್ವಜಿತ್ ಶೆಟ್ಟಿ, ಜೆ. ಅವರ ಏಕಸದಸ್ಯ ಪೀಠವು ಆತ್ಮಹತ್ಯೆಗೆ ಪ್ರಚೋದನೆಗಾಗಿ ಎಫ್ಐಆರ್ ಅನ್ನು ರದ್ದುಗೊಳಿಸಿತು ಮತ್ತು ಪತ್ನಿಯ ಆಪಾದಿತ ಚಿತ್ರಹಿಂಸೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ‘ಹೋಗಿ ಸಾಯಿ’ ಎಂಬ ಹೇಳಿಕೆಯು ಭಾರತೀಯ ನ್ಯಾಯ ಸಂಹಿತಾ, 2023 (‘ಬಿಎನ್ಎಸ್’) ನ ಸೆಕ್ಷನ್ 108 ರ ಅಡಿಯಲ್ಲಿ ಅಪರಾಧವನ್ನು ಸ್ಥಾಪಿಸಲು ಅಗತ್ಯವಾದ ನೇರ ಪ್ರಚೋದನೆಯ ಕೃತ್ಯವಲ್ಲ ಎಂದು ತೀರ್ಪು ನೀಡಿತು.ಸುಪ್ರೀಂ ಕೋರ್ಟ್ನ ವಿವಿಧ ತೀರ್ಪುಗಳನ್ನು ಉಲ್ಲೇಖಿಸಿದ ನ್ಯಾಯಾಲಯವು, ಆತ್ಮಹತ್ಯೆಗೆ…
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಲೋಕಸಭೆಯಲ್ಲಿ ಮಹತ್ವದ ಮಸೂದೆ ಮಂಡಿಸಲು ಮುಂದಾಗಿದ್ದು,ಇದೇ ಸೋಮವಾರ (ಆ.18) ರಂದು ಜೀವನ ನಿರ್ವಹಣೆ & ವ್ಯವಹಾರಗಳನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಮಸೂದೆಯ ಮಂಡನೆಗೆ ಮುಂದಾಗಿದ್ದು,ಸಣ್ಣ ಪ್ರಮಾಣದ ತಪ್ಪುಗಳಿಗೂ ಜೈಲು ಶಿಕ್ಷೆ ವಿಧಿಸುವಂತೆ ಮಾಡುವ ಕೆಲವು ಕಾನೂನುಗಳಿಗೆ ತಿದ್ದುಪಡಿ ತರಲು ಮುಂದಾಗಿದೆ. ಹೌದು ಸಣ್ಣ ಪುಟ್ಟ ತಪ್ಪುಗಳಿಗೂ ಜೈಲು ಶಿಕ್ಷೆ ವಿಧಿಸಬಹುದಾದ ಕೆಲವು ನಿಬಂಧನೆಗಳನ್ನು ತೆಗೆದುಹಾಕಲು ಅಥವಾ ಅಪರಾಧಗಳ ಪಟ್ಟಿಯಿಂದ ಹೊರಗಿಡುವ ಉದ್ದೇಶ ಹೊಂದಿರುವ ‘ಜನ ವಿಶ್ವಾಸ (ತಿದ್ದುಪಡಿ) ಮಸೂದೆ-2025’ ಅನ್ನು ಸಚಿವ ಪಿಯೂಷ್ ಗೋಯಲ್ ಲೋಕಸಭೆಯಲ್ಲಿ ಮಂಡನೆ ಮಾಡಲಿದ್ದಾರೆ. ಈ ಬಗ್ಗೆ ಲೋಕಸಭೆ ಅಧಿಕೃತ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದ್ದು ಈ ಪ್ರಕಾರವಾಗಿದೆ.ಜನರ ಜೀವನ ಮತ್ತು ವ್ಯವಹಾರಗಳನ್ನು ಸುಗಮಗೊಳಿಸುವ ಉದ್ದೇಶದಿಂದ, ಜೊತೆಗೆ ಆಡಳಿತದಲ್ಲಿ ವಿಶ್ವಾಸ ಹೆಚ್ಚಿಸುವ ಸಲುವಾಗಿ ಸಣ್ಣ ತಪ್ಪುಗಳನ್ನು ಅಪರಾಧ ಮುಕ್ತಗೊಳಿಸಲು,ತರ್ಕಬದ್ಧಗೊಳಿಸಲು ಕಾನೂನಿನಲ್ಲಿ ಮಾರ್ಪಾಡು ಮಾಡಲು ಅವಕಾಶ ಕಲ್ಪಿಸುವ ಮಸೂದೆಯನ್ನು ಸಚಿವರು ಮಂಡಿಸಲಿದ್ದಾರೆ ಎನ್ನಲಾಗಿದೆ. ಈ…










