ಕುಂದಾಪುರ: ಇಲ್ಲಿನ ತೆಕ್ಕಟ್ಟೆ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಯಿತು. ಪರಿಣಾಮ ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಇನ್ನೋವಾ ಕಾರಿನಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತದ ತೀವ್ರತೆಗೆ ಕಾರಿನ ಒಂದು ಪಾರ್ಶ್ವ ಸಂಪೂರ್ಣ ಜಖಂಗೊಂಡಿದೆ. ಕಾರಿನ ಒಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಉಪ್ಪಿನಂಗಡಿ : ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗಾಹುತಿಯಾದ ಘಟನೆ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ಸಂಭವಿಸಿದೆ. ಅಸ್ಲಂ ಎಂಬವರ ಮನೆಯಲ್ಲಿ ಶನಿವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಮನೆಯ ಮಾಲಕ ವಿದೇಶದಲ್ಲಿದ್ದು, ಅವರ ಪತ್ನಿ ಮನೆಗೆ ಬೀಗ ಹಾಕಿ ತನ್ನ ಮಕ್ಕಳೊಂದಿಗೆ ಪೇಟೆಗೆ ಹೋಗಿದ್ದರು. ಆ ಸಂದರ್ಭದಲ್ಲಿ ಮನೆಯೊಳಗಿನಿಂದ ಹೊಗೆ ಹೊರಬರುತ್ತಿರುವುದನ್ನು ಕಂಡ ಸ್ಥಳೀಯರು ಹತ್ತಿರ ಬಂದು ಪರಿಶೀಲಿಸಿದಾಗ ಮನೆಯೊಳಗೆ ಬೆಂಕಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ತಕ್ಷಣ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರೂ, ಅದು ಅಸಾಧ್ಯವಾದಾಗ ಅಗ್ನಿ ಶಾಮಕ ದಳವನ್ನು ಸ್ಥಳಕ್ಕೆ ಕರೆಸಿ ಬೆಂಕಿಯನ್ನು ನಂದಿಸಲಾಯಿತು. ಆಕಸ್ಮಿಕ ಬೆಂಕಿಯಿಂದಾಗಿ ಮನೆಯೊಳಗಿದ್ದ ಫ್ರಿಡ್ಜ್ ವಾಷಿಂಗ್ ಮೆಷಿನ್, ಪೀಠೋಪಕರಣಗಳ, ಬಟ್ಟೆಬರೆ, ಹಾಸಿಗೆ ಸಹಿತ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿದೆ ಎಂದು ಅಗ್ನಿಶಾಮಕದಳದ ಠಾಣಾಧಿಕಾರಿ ತಿಳಿಸಿದ್ದಾರೆ.
ಉಪ್ಪಿನಂಗಡಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮುದ್ರಿತವಾದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಈ ಬಾರಿಯೂ ಮೋದಿ ಅವರನ್ನು ಪ್ರಧಾನಿ ಮಾಡುವುದೇ ವಧು-ವರರಿಗೆ ನೀಡುವ ಉಡುಗೊರೆ” ಎಂದು ಮುದ್ರಿಸಿದ ವರನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಶಿವಪ್ರಸಾದ್ ಎಂಬುವವರ ಮದುವೆ ಏಪ್ರಿಲ್ 18ರಂದು ನೆರವೇರಿದೆ. ಮಾರ್ಚ್ 1ರಂದು ಮದುವೆಯ ಆಮಂತ್ರಣ ಪತ್ರ ಮುದ್ರಿಸಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದುಕೊಂಡ ಚುನಾವಣಾ ನೀತಿ ಸಂಹಿತೆ ಜಾರಿ ನಿಗಾ ತಂಡದ ಅಧಿಕಾರಿಗಳು ಏಪ್ರಿಲ್ 14ರಂದು ವರನ ಮನೆಗೆ ಭೇಟಿ ನೀಡಿ ವಿಚಾರಿಸಿದ್ದಾರೆ. ಇದು ನೀತಿ ಸಂಹಿತೆ ಉಲ್ಲಂಘನೆ ಅಲ್ಲ, ಮೋದಿಯವರ ಮೇಲಿನ ಪ್ರೀತಿ ಮತ್ತು ದೇಶದ ಮೇಲಿನ ಕಾಳಜಿಯಿಂದ ಈ ರೀತಿ ಮುದ್ರಿಸಿರುವುದಾಗಿ ಶಿವಪ್ರಸಾದ್ ಲಿಖಿತ ಹೇಳಿಕೆ ನೀಡಿದ್ದಾರೆ. ಮತದಾನದ ನಂತರ ಅಧಿಕಾರಿಗಳು ಈ ಬಗ್ಗೆ ದೂರು ದಾಖಲಿಸಿದ್ದು, ಶನಿವಾರ ಆಮಂತ್ರಣ ಪತ್ರಿಕೆ ಮುದ್ರಣ ಮಾಡಿದವರನ್ನು ಕೂಡ ಕರೆಸಿ ವಿಚಾರಿಸಲಾಗಿದೆ.
ಸುಳ್ಯ: ಬ್ರೇಕ್ ವೈಫಲ್ಯಕ್ಕೀಡಾದ ಲಾರಿಯೊಂದು ಪಲ್ಟಿ ಯಾಗಿ ಕಂದಕಕ್ಕೆ ಉರುಳಿದ ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಬಳಿ ನಡೆದಿದೆ. ಲಾರಿ ಚಾಲಕ ಗಾಯಗೊಂಡಿದ್ದು ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಲಾರಿ ಬ್ರೇಕ್ ವೈಫಲ್ಯಕ್ಕೊಳಗಾಗಿ ಚಾಲಕನ ನಿಯಂತ್ರಣ ಕಳೆದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾಗಿದೆಯೆನ್ನಲಾಗಿದೆ
ಪುತ್ತೂರು: ಮತದಾನ ಪ್ರಕ್ರಿಯೆ ಗೌಪ್ಯವಾಗಿ ಆಗಬೇಕಾದದ್ದು ನಿಯಮ. ಆದರೆ ಮತದಾನ ಮಾಡುತ್ತಿರುವ ದೃಶ್ಯವನ್ನು ಮತದಾರನಿಬ್ಬ ಮೊಬೈಲ್‌ನಲ್ಲಿ ಫೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆ ಶುಕ್ರವಾರ ನಡೆದಿದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಪುತ್ತೂರು ತಾಲೂಕಿನ ಮತಗಟ್ಟೆಯೊಂದರಲ್ಲಿ ತಾನು ಮತದಾನ ಮಾಡುತ್ತಿದ್ದ ಫೋಟೊವನ್ನು ಕ್ಲಿಕ್ಕಿಸಿ ಯುವಕನೋರ್ವನು ವೈರಲ್ ಮಾಡಿದ್ದ. ಮತಗಟ್ಟೆಯೊಳಗೆ ಮೊಬೈಲ್ ಫೋನ್ ಒಯ್ಯುವುದು ನಿಷೇಧವಿದ್ದರೂ, ಈತ ಮೊಬೈಲ್ ಕೊಂಡೊಯ್ದಿದ್ದ. ಮತದಾನ ಮಾಡುವ ದೃಶ್ಯವನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಬಳಿಕ ಆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದಾನೆ. ಪುತ್ತೂರು ವಿಧಾನಸಭಾ ಕ್ಷೇತ್ರ – 206ರ ಮತಗಟ್ಟೆ ಸಂಖ್ಯೆ 147ರಲ್ಲಿ ಮತದಾನ ಮಾಡಿರುವ, ಆರ್ಯಾಪು, ಪುತ್ತೂರು ತಾಲೂಕು ನಿವಾಸಿ ರಂಜಿತ್ ಬಂಗೇರ ಎಂಬಾತ ತನ್ನ ಮತದಾನ ಮಾಡುವಾಗ ಮೊಬೈಲ್ ನಿಂದ ಫೋಟೋ ಕ್ಲಿಕ್ಕಿಸಿ ವಾಟ್ಸಪ್ ಗ್ರೂಪಿನಲ್ಲಿ ಹಂಚಿಕೊಂಡಿದ್ದ. ಈ ಬಗ್ಗೆ ಫ್ಲಯಿಂಗ್ ಸ್ಕ್ವಾಡ್ -2 ರ ಉಸ್ತುವಾರಿ ಅಧಿಕಾರಿಗಳ ನೀಡಿದ ದೂರಿನ ಮೇರೆಗೆ, ಕಲಂ:171 (ಎಫ್), 188 ಭಾರತೀಯ ದಂಡ ಸಂಹಿತೆ ಮತ್ತು ಕಲಂ:…
ಪಡುಬಿದ್ರಿ: ನಗರ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ಬೆಳಗ್ಗೆ ಕೆಂಪು ಬಣ್ಣದ ವ್ಯಾಗನರ್ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ, ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ಪುರುಷೋತ್ತಮ ಆರ್. ಆಭ್ಯಂಕರ್ ಅವರ ಪತ್ನಿ ಸುಮಂಗಲಾ ಎಂ. (55) ಎಂದು ತಿಳಿದು ಬಂದಿದೆ. ರಾಜ್ಯ ಹೆದ್ದಾರಿ-1ರಲ್ಲಿ ಪಡುಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಪರಿಣಾಮ ಅಪಘಾತ ಸಂಭವಿಸಿದೆ. ಈ ದಂಪತಿ ಕಾರ್ಕಳ ಮಾಳದಲ್ಲಿನ ಉಪನಯನ ಕಾರ್ಯಕ್ರಮಕ್ಕೆ ಮಂಗಳೂರು ಕಾವೂರಿನಿಂದ ಹೊರಟು ಹೋಗುತ್ತಿದ್ದರೆಂದು ಸಂಬಂಧಿಕರು ತಿಳಿಸಿದ್ದಾರೆ. ರಾಜ್ಯ ಹೆದ್ದಾರಿಯಲ್ಲಿ ಸಹಜವಾಗಿ ವೇಗವಾಗಿಯೇ ಬರುತ್ತಿದ್ದ ಕಾರು ಒಮ್ಮೆಲೇ ರಸ್ತೆಯ ತೀರ ಎಡಕ್ಕೆ ಚಲಿಸಿ ಡಾಮರು ರಸ್ತೆಯಿಂದ ಮಣ್ಣಿನ ರಸ್ತೆಗೆ ಇಳಿದು ರಸ್ತೆಯ ಬದಿಯಲ್ಲಿದ್ದ ಸಿಮೆಂಟ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿತ್ತು ಎನ್ನಲಾಗಿದೆ. ಈ ಅಪಘಾತದಿಂದ ಸುಮಂಗಲಾ ಎಂ. ಅವರ ಮುಖಕ್ಕೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಚಾಲಕ ಪುರುಷೋತ್ತಮ ಅವರಿಗೂ ಗಾಯಗಳಾಗಿದ್ದು, ಸಾರ್ವಜನಿಕರ…
ನೆಲ್ಯಾಡಿ: ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕೊಣಾಲು ಗ್ರಾಮದ ಕೋಲ್ಪೆ ದಿ. ಬಾಬು ಗೌಡರ ಪುತ್ರ ಉಮೇಶ ಅವರ ವಿವಾಹವು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ದಿ. ಕೊರಗಪ್ಪ ಗೌಡರವರ ಪುತ್ರಿ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು. ಬೆಳಗ್ಗೆ 11.35ರ ಮುಹೂರ್ತದಲ್ಲಿ ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ವಿವಾಹ ನಡೆದು ಮಧ್ಯಾಹ್ನ 1 ಗಂಟೆಗೆ ಕೊಲ್ಪೆಯ ವರನ ಮನೆಯಲ್ಲಿ ಸತ್ಕಾರ ಕೂಟ ನಿಗದಿಯಾಗಿತ್ತು. ಅದರಂತೆ ವರ ಹಾಗೂ ವಧುವಿನ ಕಡೆಯವರು ದೇವಸ್ಥಾನಕ್ಕೆ ಮದುವೆ ದಿಬ್ಬಣದಲ್ಲಿ ಬಂದಿದ್ದರು.ಧಾರೆಯ ಸೀರೆ ಹಾಗೂ ಶೃಂಗಾರದೊಂದಿಗೆ ಮದುವೆ ಮಂಟಪಕ್ಕೆ ಬಂದಿದ್ದ ವಧು ಸರಸ್ವತಿ ಹಾಗೂ ವರ ಉಮೇಶ ಪರಸ್ಪರ ಹೂಮಾಲೆ ಹಾಕಿಸಿಕೊಂಡಿದ್ದರು. ಇನ್ನು ವರ ಉಮೇಶ ತಾಳಿ ಕಟ್ಟಲು ಮುಂದಾಗುತ್ತಿದ್ದಂತೆ ವಧು ಸರಸ್ವತಿ ಈ ಮದುವೆ ನನಗೆ ಇಷ್ಟ ಇಲ್ಲಎಂದು ಹೇಳಿ ತಾಳಿ ಕಟ್ಟಲು ಅವಕಾಶ ನೀಡಲಿಲ್ಲ ಎಂದು…
ಬಂಟ್ವಾಳ : ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದ್ದಾನೆ. ಎಸ್ಡಿಪಿಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದ ಆರೋಪಿಯಾಗಿರುವ ಪವನ್ಗೆ ಗಾಂಜಾ ವ್ಯಸನಿಯಾಗಿರುವ ಆರೋಪಿ ಚರಣ್ ಚಾಕು ಇರಿದಿದ್ದಾನೆ. ಕೂಡಲೇ ಪವನ್ನನ್ನು ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆಯ ಬಳಿಕ ಪ್ರಾಣಾಪಾಯದಿಂದ ಗಾಯಾಳು ಪವನ್ ಪಾರಾಗಿದ್ದಾನೆ. ಮೇಲ್ನೋಟಕ್ಕೆ ಘಟನೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಇಂದು 12 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 88 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ. ರಾಜ್ಯದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 11ಗಂಟೆಯ ವೇಳೆಗೆ ಕರ್ನಾಟಕದಲ್ಲಿ 22.34% ಮತದಾನ ನಡೆದಿದೆ.ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 30.96% ದಾಖಲಾಗಿದೆ.
ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿನ ಮತ ಕೇಂದ್ರ ಸಂಖ್ಯೆ 203 ರಲ್ಲಿ ವೀರಕಂಬ ಗ್ರಾಮದ ಗಣೇಶ್ ನಿಲಯ ಕಮಲಾಕ್ಷ ಪೂಜಾರಿಯವರ ದ್ವಿತೀಯ ಪುತ್ರಿ ವಿನುತಾ ಇಂದು ತನ್ನ ವಿವಾಹ ಸುಮೂರ್ತದ ಮೊದಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ವಿರಕಂಬ ಮಜಿ ಶಾಲೆಯಲ್ಲಿ ಎರಡು ಮತ ಕೇಂದ್ರಗಳಿದ್ದು ಮಧ್ಯಾಹ್ನ ವಿಪರೀತ ಬಿಸಿಲು ಸೆಕೆ, ಹಾಗೂ ಇವತ್ತು ಬಹಳಷ್ಟು ಶುಭ ಕಾರ್ಯಕ್ರಮಗಳಿದ್ದು ಬೆಳಗ್ಗಿನಿಂದಲೇ ಎರಡು ಮತ ಕೇಂದ್ರಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದರು. ಮತದಾನ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಬೆಲ್ಲದ ವ್ಯವಸ್ಥೆ ಮಾಡಲಾಗಿದೆ.