ಮಂಗಳೂರು: ನಗರದ ಕಪಿತಾನಿಯೋ ಮತದಾನ ಕೇಂದ್ರದ ಎದುರು ಮಾಧ್ಯಮದ ಜತೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮಾತನಾಡುತ್ತಿದ್ದಾಗ ಆಕ್ಷೇಪಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಜತೆ ವಾಗ್ವಾದ, ಘರ್ಷಣೆ ನಡೆಯಿತು. ಪೊಲೀಸರು ಕಾರ್ಯಕರ್ತರನ್ನು ಚದುರಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಂಡಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಅಧಿಕಾರಿ ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ಬೆಳೆಸಿದ್ದಾನೆ. ಆಗ ಪೊಲೀಸ್ ಅಧಿಕಾರಿ ಎಚ್ಚರಿಕೆ ನೀಡಿ ಕಳಿಸಿದ್ದಾರೆ. ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮದ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಕೊಂಚ ಗೊಂದಲದ…
Author: main-admin
ಸುಳ್ಯ : ಎಂಡಿಎಂಎಯನ್ನು ಕಳ್ಳ ಸಾಗಟಕ್ಕೆ ಯತ್ನಿಸಿದ ದಕ್ಷಿಣ ಕನ್ನಡದ ಸುಳ್ಯದ ಇಬ್ಬರು ಯುವಕರನ್ನು ಕೇರಳ ಅಬಕಾರಿ ಪೋಲಿಸರು ಬಂಧಿಸಿದ್ದಾರೆ.ಆರೋಪಿಗಳು ಬೆಂಗಳೂರಿನಿಂದ 1. 5 ಲಕ್ಷ ರೂ.ಗೆ ಖರೀದಿಸಿದ್ದ ಎಂಡಿಎಂಎಯನ್ನು ಮಲಪ್ಪುರಂಗೆ ತಲುಪಿಸುವ ಗುರಿಯನ್ನು ಹೊಂದಿದ್ದರು ಎನ್ನಲಾಗಿದೆ. ಮಾನಂದವಾಡಿ ಅಬಕಾರಿ ವೃತ್ತ ನಿರೀಕ್ಷಕ ಎ ಪ್ರಜಿತ್ ನೇತೃತ್ವದ ತಂಡವು ಕೇರಳ ಮಾನಂದವಾಡಿಯಲ್ಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಲೆಟ್ಟಿ ಗ್ರಾಮದ ನಿವಾಸಿಗಳಾದ ಉಮ್ಮರ್ ಫಾರೂಕ್ (33) ಮತ್ತು ಎ.ಎಚ್.ಸಿದ್ದೀಕ್ ಎಂಬುವರನ್ನು ಬಂಧಿಸಿದ್ದಾರೆ.ಆರೋಪಿಗಳು ಬೆಂಗಳೂರಿನಿಂದ ಖರೀದಿಸಿದ್ದ ಎಂಡಿಎಂಎ ಯನ್ನು ಮಲಪ್ಪುರಂಗೆ ತಲುಪಿಸುವ ಗುರಿ ಹೊಂದಿದ್ದರು ಎನ್ನಲಾಗಿದೆ.ಎಂಡಿಎಂಎಯನ್ನು ಪ್ರತಿ ಗ್ರಾಂಗೆ 4000 ರೂ.ಗೆ ಮಾರಾಟ ಮಾಡಲು ಕಳ್ಳಸಾಗಣೆ ಮಾಡಲಾತ್ತು. ಆರೋಪಿಗಳು ಎಂಡಿಎಂಎ ಕಳ್ಳಸಾಗಣೆ ಮಾಡಲು ಬಳಸಿದ ಸ್ವಿಫ್ಟ್ ಡಿಸೈರ್ ಕಾರನ್ನು ಅಬಕಾರಿ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ .
ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಹಿರಿಯ ಕಾಂಗ್ರೆಸ್ ನಾಯಕನ ಆಶೀರ್ವಾದ ಸಿಕ್ಕಿದೆ. ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿಯವ್ರೇ ಖುದ್ದು ಬ್ರಿಜೇಶ್ ಚೌಟ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಜನಾರ್ದನ ಪೂಜಾರಿಯವರು ಬ್ರಿಜೇಶ್ ಚೌಟ ತಲೆ ಮೇಲೆ ಕೈ ಇಟ್ಟು, ತುಳು ಭಾಷೆಯಲ್ಲಿ ಶುಭ ಹಾರೈಸುತ್ತಾ, ಆಶೀರ್ವಾದ ಮಾಡುತ್ತಿರುವ ವಿಡಿಯೋ ಇದೀಗ ಮಂಗಳೂರು ಭಾಗದಲ್ಲಿ ವೈರಲ್ಆಗಿದೆ. ಬಿಜೆಪಿ ಅಭ್ಯರ್ಥಿಗೆ ಹಿರಿಯ ಕಾಂಗ್ರೆಸ್ ನಾಯಕನಿಂದ ಆಶೀರ್ವಾದ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ತಲೆ ಮೇಲೆ ಕೈ ಇಟ್ಟು ಆಶೀರ್ವಾದ ಮಾಡಿದ್ದಾರೆ. ಈ ವಿಡಿಯೋ ಇದೀಗ ದಕ್ಷಿಣ ಕನ್ನಡ ಭಾಗದಲ್ಲಿ ವೈರಲ್ ಆಗುತ್ತಿದೆ. ಪೂಜಾರಿ ನಿವಾಸಕ್ಕೆ ಬಂದಿದ್ದ ಬ್ರಿಜೇಶ್ ಚೌಟ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿದ್ದರು. ಲೋಕಸಭೆ ಚುನಾವಣೆ ಬಗ್ಗೆ ಮಾತುಕತೆ ನಡೆಸಿ, ಆಶೀರ್ವಾದ…
ಮಂಗಳೂರು: ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕೇರಳದ ಗಡಿ ಭಾಗಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ಇಂದಿನಿಂದ ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ ವಿಶೇಷ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು. ಈ ಚೆಕ್ ಪೋಸ್ಟ್‌ಗಳಲ್ಲಿ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಆ ಜಿಲ್ಲೆಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ನಾವು ಜಾಗರೂಕರಾಗಿರುತ್ತೇವೆ ಮತ್ತು ಮೂರು ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸುತ್ತೇವೆ ಎಂದು ಕರ್ನಾಟಕ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಉಪ್ಪಿನಂಗಡಿ: ಯುವತಿಯೋರ್ವಳು ಬೆಂಗಳೂರಿನಿಂದ ಊರಿನ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಗುಂಡ್ಯ ಬಳಿ ನಡೆದಿತ್ತು. ಈ ಬಗ್ಗೆ ಯುವತಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಯುವತಿ ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ಆರೋಪಿ ಬೆಳ್ತಂಗಡಿ ಮೂಲದ ಲಾಯಿಲ ಗ್ರಾಮದ ಮಹಮ್ಮದ್ ಅಝೀಮ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ.
ಬಂಟ್ವಾಳ : ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್ ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ದೈರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು. ಇಂತಹ ಪ್ರಕರಣಗಳು ನಿತ್ಯನಿರಂತರವಾಗಿ ನಡೆಯುತ್ತಿದೆ. ಭಯೋತ್ಪಾದಕರ ರೀತಿಯಲ್ಲಿ ಹೆಣ್ಮಕ್ಕಳ ಮೇಲೆ ಅನಾಚಾರ ಮಾಡುವಂತಹ ಘಟನೆಗಳು ನಡೆಯುತ್ತಿದೆ. ಸರಕಾರ ಹಾಗೂ ಪೋಲಿಸ್ ಇಲಾಖೆ ಸರಿಯಾದ ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲದಿದ್ದರೆ ಅರಾಜಕತೆ ನಿರ್ಮಾಣ ಮಾಡುವ ಸಾಧ್ಯತೆಗಳಿವೆ. ಇದು ದ.ಕ.ಜಿಲ್ಲೆ ಎಚ್ಚರಿಕೆಯ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದೇನೆ. ಸರಕಾರ ಬಂದ ಮೇಲೆ ಬಾರಿ ಪ್ರಮಾಣದಲ್ಲಿ ನಡೆಯುತ್ತಲೇ ಇದೆ. ಮುಂದುವರಿದು ಹುಬ್ಬಳ್ಳಿಯಲ್ಲಿ ಹತ್ಯೆ ನಡೆದಿದೆ, ಇದೀಗ ಮತ್ತೊಂದು ಪ್ರಕರಣ ಅದೇ ಭಾಗದಲ್ಲಿ ನಡೆದಿದೆ. ಹಿಂದೂ ಸಮಾಜದ ಮೇಲೆ ಮತ್ತು ಹೆಣ್ಣ್ಮಕ್ಕಳ ಮೇಲೆ ಅನ್ಯಾಯಗಳು ನಡೆದರೆ ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದ…
ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 75 ಅಪರಾಧಿಗಳ ಗಡಿಪಾರು ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಮಗ್ರ ಬಂದೋಬಸ್ತ್ ತಯಾರಿ ಮಾಡಿಕೊಳ್ಳಲಾಗಿದ್ದು, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಒಟ್ಟು 46 ಪಿಎಸ್‌ಐ ಸೆಕ್ಟರ್ ಮೊಬೈಲ್‌ಗಳು, 14 ಪಿಐ ಸೂಪರ್‌ವಿಷನ್ ಸೆಕ್ಟರ್ ಅಧಿಕಾರಿಗಳು ಹಾಗೂ 4 ಎಸಿಪಿ ನೋಡಲ್ ಅಧಿಕಾರಿಗಳನ್ನಾಗಿ ಮತ್ತು ಒಟ್ಟು ಮತಗಟ್ಟೆಗಳಿಗೆ 1003 ಪೊಲೀಸ್ ಸಿಬ್ಬಂದಿಗಳು, 350 ಗೃಹ ರಕ್ಷಕ ಸಿಬ್ಬಂದಿಗಳನ್ನು ಹಾಗೂ 17 ಫಾರೆಸ್ಟ್ ಗಾರ್ಡ್ ಗಳನ್ನು ಹಾಗೂ 36 ಕ್ರಿಟಿಕಲ್ ಮತಗಟ್ಟೆಗಳಿಗೆ ಕೇಂದ್ರಿಯ ಭದ್ರತಾ ಪಡೆ ಹಾಗೂ 16 ಎಎಸ್‌ಐ ಅವರನ್ನು ನಿಯೋಜಿಸಲಾಗಿರುತ್ತದೆ ಎಂದರು. ಮತದಾನದ ದಿನದಂದು ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆಯಕಟ್ಟಿನ ಜಾಗಗಳನ್ನು ಸೂಕ್ಷ್ಮ ಪ್ರದೇಶಗಳನ್ನಾಗಿ ಗುರುತಿಸಿ ಪಿಐ-03, ಪಿಎಸ್‌ಐ-21 ಹಾಗೂ ಎಎಸ್‌ಐ-13, ಪಿಸಿ/ಎಫ್‌ಜಿ 43 ಒಟ್ಟು 80 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆಗೊಳಿಸಿ ಮುಂಜಾಗ್ರತಾ ಕ್ರಮಗಳನ್ನು…
ಮಂಗಳೂರು: ಮತ ಚಲಾವಣೆಗೆ ಮತಗಟ್ಟೆಗೆ ಬರುವ ಮತದಾರರು ಮೊಬೈಲ್ ಪೋನ್ ಅನ್ನು ತರುವಂತಿಲ್ಲ ಎಂದು ದ.ಕ.ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ಚುನಾವಣಾ ಆಯೋಗದ ನಿಯಮದಂತೆ ಮತದಾರರು ಮತ ಚಲಾಯಿಸಲು ಬರುವಾಗ ಮೊಬೈಲ್ ಪೋನ್ ತರುವಂತಿಲ್ಲ. ಮೊಬೈಲ್ ನೊಂದಿಗೆ ಮತಗಟ್ಟೆಯೊಳಗೆ ಪ್ರವೇಶಿಸಲು ಅವಕಾಶ ನೀಡಲಾಗುವುದಿಲ್ಲ. ಒಂದು ವೇಳೆ ಮೊಬೈಲ್ ತಂದಲ್ಲಿ ಅದನ್ನು ಸೇಫ್ ಡೆಪಾಸಿಟ್ ಮಾಡಲು ವ್ಯವಸ್ಥೆ ಮಾಡಲಾಗುವುದು. ಆದರೆ ಮತ್ತೊಂದು ಸರತಿ ಸಾಲು ಆಗುವ ಬದಲು ಮತದಾರರು ಮೊಬೈಲ್ ಅನ್ನು ಮನೆಯಲ್ಲಿಯೇ ಬಿಟ್ಟು ಬರುವುದು ಉತ್ತಮ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಬಹಿಷ್ಕಾರವಿಲ್ಲ. ಕೆಲವೆಡೆ ಚುನಾವಣಾ ಬಹಿಷ್ಕಾರಕ್ಕೆ ಕರೆ ಕೊಡಲಾಗಿತ್ತು. ಅಲ್ಲಿಗೆ ಹೋಗಿ ಪರಿಶೀಲಿಸಿದಾಗ ರಸ್ತೆ ಮೊದಲಾದ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಚುನಾವಣಾ ಬಹಿಷ್ಕಾರಕ್ಕೆ ಕರೆ ನೀಡಲಾಗಿತ್ತು. ಅವರನ್ನು ಮನವೊಲಿಸಿ ಚುನಾವಣಾ ಬಹಿಷ್ಕಾರ ಕರೆಯನ್ನು ವಾಪಾಸು ಪಡೆಯಲಾಗಿದ್ದು, ಸದ್ಯ ಯಾವುದೇ ಚುನಾವಣಾ ಬಹಿಷ್ಕಾರ ಇಲ್ಲ ಎಂದು ತಿಳಿಸಿದರು.
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಚೆನ್ನೈ : ಇಬ್ಬರು ಮಾಜಿ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 51 ವರ್ಷದ ಕಲಾಕ್ಷೇತ್ರ ಫೌಂಡೇಶನ್ ನ ಮಾಜಿ ಅಧ್ಯಾಪಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಶೀಜಿತ್ ಕೃಷ್ಣ ಎಂದು ಗುರುತಿಸಲಾಗಿದೆ. 1995-2007ರ ಅವಧಿಯಲ್ಲಿ ಕಲಾಕ್ಷೇತ್ರದ ವಿದ್ಯಾರ್ಥಿಗಳಾಗಿದ್ದಾಗ ಕೃಷ್ಣ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಇಬ್ಬರು ಮಹಿಳೆಯರ ದೂರಿನ ಮೇರೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನದ ಆಧಾರದ ಮೇಲೆ ಪ್ರಾಥಮಿಕ ತನಿಖೆ ನಡೆಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ನೀಲಂಕರೈ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಇನ್ಸ್‍ಪೆಕ್ಟರ್ ನೇತೃತ್ವದ ತಂಡ ಆತನನ್ನು ಬಂಧಿಸಿದೆ. ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ