Author: main-admin

ಮಂಗಳೂರು: ಈ ಸಾಲಿನ ಕರಾವಳಿ ಉತ್ಸವ ಕಾರ್ಯಕ್ರಮ ಡಿಸೆಂಬರ್ 19 ರಿಂದ ಜನವರಿ 4 ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಹೇಳಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಉತ್ಸವದಲ್ಲಿ ಜನಾಕರ್ಷಣೆ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತದೆ. ಸಾಂಸ್ಕøತಿಕ, ಚಿತ್ರಕಲೆ, ಸಾಹಸ ಹಾಗೂ ಪ್ರಾಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೀಚ್ ಉತ್ಸವ, ಕಲಾ ಪರ್ಬ, ಚಿತ್ರಸಂತೆ, ಫಲಪುಷ್ಪ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಜಿಲ್ಲೆಯ ಎಲ್ಲಾ ಪ್ರಮುಖ ಬೀಚ್ಗಳಲ್ಲಿ ವೈವಿಧ್ಯಮಯ ಪ್ರತ್ಯೇಕ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಚಿಂತಿಸಲಾಗಿದೆ. ಕ್ರೀಡಾ ಕಾರ್ಯಕ್ರಮಗಳಿಗೆ ಕರಾವಳಿ ಉತ್ಸವದಲ್ಲಿ ಪ್ರಾಮುಖ್ಯತೆ ನೀಡಲಾಗಿದೆ. ಪ್ರಮುಖವಾಗಿ ಬೀಚ್ ಫುಟ್ಬಾಲ್ ಮತ್ತು ವಾಲಿಬಾಲ್ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಅವರು ಹೇಳಿದರು. ಲಾಲ್ಬಾಗ್ ಕರಾವಳಿ ಉತ್ಸವ ಮೈದಾನ, ಕದ್ರಿ ಉದ್ಯಾನವನ ಹಾಗೂ ಪ್ರಮುಖ ಬೀಚ್ಗಳಲ್ಲಿ ಕಾರ್ಯಕ್ರಮ…

Read More

ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪದಲ್ಲಿ ಕಾರ್ಕಳ ಮಿಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಕಲಬುರಗಿ ನಿವಾಸಿ ಮದರಸ್ ಎಸ್ ಮಕಾಂದರ್ ವಜಾಗೊಂಡ ದೈಹಿಕ ಶಿಕ್ಷಣ ಶಿಕ್ಷಕ. ಈತ 2005ರಲ್ಲಿ ದೈಹಿಕ ಶಿಕ್ಷಣ ಶಿಕ್ಷಕನಾಗಿ ಸೇವೆಗೆ ಸೇರ್ಪಡೆಗೊಂಡಿದ್ದ. ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಈತ ವಿದ್ಯಾರ್ಥಿಗಳ ಜನಿವಾರ ತೆಗೆಸುವುದು, ಕೈಗೆ ಕಟ್ಟಿದ ದಾರ ತುಂಡರಿಸುತ್ತಿದ್ದ. ಅಲ್ಲದೆ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡುತ್ತಿದ್ದ. ಶಾಲೆಗೆ ಆಗಮಿಸಿದ್ದ ಪೋಷಕರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಶಾಲಾ ಪ್ರಾಂಶುಪಾಲರು ಈತನನ್ನು ಸೇವೆಯಿಂದ ವಜಾಗೊಳಿಸಿದ್ದಾರೆ.

Read More

ಉಳ್ಳಾಲ ತಾಲೂಕು ಪಾವುರು ಗ್ರಾಮದ ಗಾಣದಕೊಟ್ಯ ನಿವಾಸಿ ದೇವರಾಜ್ ಪೂಜಾರಿ (49) ಎಂಬವರು 2018 ರಿಂದ ಕಾಣೆಯಾಗಿರುವ ಪ್ರಕರಣದಲ್ಲಿ, ಕೊಣಾಜೆ ಪೊಲೀಸ್ ಠಾಣೆಯವರು ಸಾರ್ವಜನಿಕರಿಂದ ಮಾಹಿತಿ ಕೋರಿದ್ದಾರೆ. ಪ್ರಕರಣದ ಹಿನ್ನೆಲೆ: ಪಿರ್ಯಾದಿದಾರರಾದ ಶ್ರೀಮತಿ ಬೂಬು ಪೂಜಾರಿ ಅವರು 07-06-2018 ರಂದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ನೀಡಿದ ದೂರು ಪ್ರಕಾರ, ಅವರ ಮಗ ದೇವರಾಜ್ ಪೂಜಾರಿ (ಆಗ 42 ವರ್ಷ) ದಿನಾಂಕ 27-05-2018 ರಂದು ಬೆಳಿಗ್ಗೆ 9.00 ಗಂಟೆಗೆ “ಕೆಲಸಕ್ಕೆ ಹೋಗಿ ಬರುತ್ತೇನೆ” ಎಂದು ಹೇಳಿ ಮನೆಯಿಂದ ಹೊರಟು ಅದರ ನಂತರ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದಾರೆ. ಈ ದೂರು ಆಧರಿಸಿ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮೊ.ನಂ: 151/2018 ಅಡಿಯಲ್ಲಿ ಮನುಷ್ಯ ಕಾಣೆಯಾಗಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ. ಕಾಣೆಯಾದ ವ್ಯಕ್ತಿಯ ವಿವರಗಳು ಹೆಸರು: ದೇವರಾಜ್ ಪೂಜಾರಿ ಪ್ರಾಯ: 49 ವರ್ಷ ತಂದೆ: ದಿ. ಸೋಮಪ್ಪ ಪೂಜಾರಿ ತಾಯಿ: ಶ್ರೀಮತಿ ಬೂಬು ಪೂಜಾರಿ ವಿಳಾಸ: ಗಾಣದಕೊಟ್ಯ ಮನೆ, ಪಾವೂರು ಗ್ರಾಮ, ಉಳ್ಳಾಲ ತಾಲೂಕು ಎತ್ತರ: ಸುಮಾರು 5 ಅಡಿ 7…

Read More

ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿದ್ದ ಗಡೀಪಾರು ಆದೇಶಕ್ಕೆ ದೊಡ್ಡ ತಿರುವು ದೊರೆತಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಾದಾತ್ಮಕ ವ್ಯಕ್ತಿ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಮಾಡಿದ್ದ ಆಡಳಿತದ ಸೆಪ್ಟೆಂಬರ್ 18ರ ಆದೇಶವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ (ನವೆಂಬರ್ 17) ರದ್ದುಪಡಿಸಿದೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, ಉಪವಿಭಾಗಾಧಿಕಾರಿಗಳ ಆದೇಶದಲ್ಲಿ ಕಾನೂನುಬದ್ಧ ಕಾರಣಗಳಿರಬೇಕೆಂಬ ಅವಶ್ಯಕತೆ ಪೂರೈಸಲಿಲ್ಲ ಎಂದು ಸ್ಪಷ್ಟಪಡಿಸಿದೆ. ಕೋರ್ಟ್ ಗಮನಿಸಿದಂತೆ, ನಿರ್ದಿಷ್ಟ ಕಾರಣಗಳು, ಸಂಬಂಧಿತ ಕಾನೂನು ಕಲಂಗಳು ಮತ್ತು ಪರ್ಯಾಯ ಆಧಾರಗಳ ಜತೆಗೇ ಗಡಿಪಾರು ಆದೇಶ ಹೊರಡಿಸುವುದು ಕಡ್ಡಾಯ. ಆದರೆ ಸೆಪ್ಟೆಂಬರ್ 18ರ ಆದೇಶದಲ್ಲಿ ಈ ಅಂಶಗಳು ಸಮರ್ಪಕವಾಗಿ ತೋರಿಸಲ್ಪಡಲಿಲ್ಲ ಎಂದು ಸೂಚಿಸಿದೆ. ಈ ಹಿನ್ನೆಲೆಯಲ್ಲಿ, ಪುತ್ತೂರು ಉಪವಿಭಾಗಾಧಿಕಾರಿಗಳಿಗೆ ಹೈಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ: ಹೊಸದಾಗಿ ವಿಚಾರಣೆ ನಡೆಸಬೇಕು ಹಾಗೂ ಸೂಕ್ತವಾದ ಕಾರಣಗಳು ಮತ್ತು ಸಂಬಂಧಿತ ಸೆಕ್ಷನ್‌ಗಳನ್ನು ಬಳಸಿ ಮತ್ತು 15 ದಿನಗಳೊಳಗೆ ಹೊಸ ಆದೇಶ ಹೊರಡಿಸುವುದು ಕಡ್ಡಾಯ ಎಂದು ತಿಳಿಸಿದೆ ಮಹೇಶ್ ಶೆಟ್ಟಿ ತಿಮರೋಡಿ ಮೇಲಿನ…

Read More

ಬೆಳ್ತಂಗಡಿ: ಹಳೆಕೋಟೆಯ ವಾಣಿ ಕಾಲೇಜ್ ಮುಂಭಾಗದಲ್ಲಿರುವ ರಾಘವೇಂದ್ರ ಪೂಜಾರಿ ಮಾಲಕತ್ವದ ಸ್ವಸ್ತಿಕ್ ಆಟೋ ಗ್ಯಾರೇಜಿನಲ್ಲಿ ನಿನ್ನೆ (ನ.16) ಅಗ್ನಿ ಅವಘಡ ಸಂಭವಿಸಿದೆ. ಆಟೋದ ಬ್ಯಾಟರಿಯ ದೋಷದಿಂದ ಬೆಂಕಿ ತಗುಲಿ ಆಟೋ ಸಮೇತ ಶಾಪ್‌ನಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಮಾರಾಟ ಮಾಡಲು ತಂದಿದ್ದ ಹಳೆ ಆಟೋವನ್ನು ಸಂಜೆ ಶಾಪ್ ಒಳಗಡೆ ಇಟ್ಟು ಬೀಗ ಹಾಕಿ ಕೆಲಸಗಾರರು ಹೋಗಿದ್ದರು. ರಾತ್ರಿ ಸುಮಾರು 8:30ರ ಸಮಯದಲ್ಲಿ ನಿಲ್ಲಿಸಿದ್ದ ಆಟೋದಲ್ಲಿದ್ದ ಬ್ಯಾಟರಿಯ ದೋಷದಿಂದ ಬೆಂಕಿ ತಗುಲಿ ಶಾಪ್ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಅಗ್ನಿಶಾಮಕ ಮತ್ತು ಪೊಲೀಸರು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಶಾಪ್‌‌ನಲ್ಲಿದ್ದ ಹಲವು ವಸ್ತುಗಳು ಸುಟ್ಟು ಕರಕಲಾಗಿವೆ.

Read More

ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯೊಬ್ಬನನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ.  ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿಯು ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. 

Read More

ಮಂಗಳೂರು: ಬರೋಬ್ಬರಿ 250ಕ್ಕೂ ಅಧಿಕ ಸಿಮ್‌ಗಳನ್ನು ಬಳಸಿಕೊಂಡು 300ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಲಕ್ಷಗಟ್ಟಲೆ ಹಣವನ್ನು ಲಪಟಾಯಿಸಿದ ಆರೋಪಿಗಳನ್ನು ಬಂಧಿಸುವ ಮೂಲಕ ಬೃಹತ್ ಸೈಬರ್ ವಂಚನಾ ರಾಕೆಟ್ ಅನ್ನು ಮಂಗಳೂರಿನ ಸಿ.ಇ.ಎನ್. ಪೊಲೀಸರು ಪತ್ತೆಮಾಡಿದ್ದಾರೆ. ತ್ರಿಪುರಾದ ಧಲಾಯಿ ಎಂಬಲ್ಲಿನ ರಂಗ್ ರುಂಘಾ ರೀಂಗ್ ಎಂಬವರ ಪುತ್ರ ಡಮೆಂಜೋಯ್ ರೀಂಗ್(27) ಹಾಗೂ ಪಣಿಪುರದ ಕಂಗ್ಪೊಕ್ಪಿ ಜಿಲ್ಲೆಯ ಹಮ್ನ್‌ಗ್ಟೆ ರೀಯಲ್ ಕೋಂ @ ಮಂಗ್ಟೆ ಅಮೋಶ್ ಬಂಧಿತ ಆರೋಪಿಗಳು. ಇತ್ತೀಚೆಗೆ ಮಂಗಳೂರು ನಗರ ಸಿ.ಇ.ಎನ್. ಕ್ರೈಂ ಪೊಲೀಸ್ ಠಾಣೆಯಲ್ಲಿ 45/2024 Section 66(c) 66(ಡಿ) ಐಟಿ ಆಕ್ಟ್ ಮತ್ತು ಕಲಂ.೪೨೦ ಐಪಿಸಿ ಅಡಿ ಪ್ರಕಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಯಾರೋ ಅಪಚಿರಿತ ವ್ಯಕ್ತಿ ದೂರುದಾರರಿಗೆ ಕಸ್ಟಮ್ಸ್ ಹೆಸರಿನಲ್ಲಿ ಹಂತ ಹಂತವಾಗಿ ಒಟ್ಟು 7,27,000 ಹಣವನ್ನು ಪಡೆದು ವಂಚನೆ ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಕರಣ ತನಿಖೆ ನಡೆಸಿದಾಗ ಬೃಹತ್ ಸೈಬರ್ ವಂಚನಾ ರಾಕೆಟ್ ಬಯಲಾಗಿದೆ. ಈ ಪ್ರಕರಣದಲ್ಲಿ ಹಣ ವರ್ಗಾವಣೆಯಾಗಿರುವ ಬ್ಯಾಂಕ್…

Read More

ಬಂಟ್ವಾಳ : ಇಲ್ಲಿನ ಅರಳ ಗ್ರಾಮದಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ಪೊಲೀಸರು ಭಾನುವಾರ ದಾಳಿ ಮಾಡಿ ನಾಲ್ಕು ಜಾನುವಾರುಗಳನ್ನು ರಕ್ಷಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅರಳ ಗ್ರಾಮದ ನಿವಾಸಿ ಮಯ್ಯದ್ದಿ (57) ಬಂಧಿತ ಆರೋಪಿ. ಇತರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಸಿಕ್ಕಿದ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಮಾಂಸ ಮಾಡುತ್ತಿರುವುದು ಕಂಡುಬಂದಿದೆ. ಶೆಡ್‌ನಲ್ಲಿದ್ದ ಮೂರು ಹಸುಗಳನ್ನು ಮತ್ತು ಒಂದು ಕರುವನ್ನು ರಕ್ಷಿಸಲಾಗಿದೆ. ಸ್ಥಳದಿಂದ ಸುಮಾರು 150 ಕೆ.ಜಿ. ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಮನೆಯ ಶೆಡ್‌ನ್ನೆ ಕಸಾಯಿಖಾನೆಯಾಗಿ ಪರಿವರ್ತಿಸಿಕೊಂಡು ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದರು. ಮಯ್ಯದ್ದಿಯ ಮನೆ ಹಾಗೂ ಶೆಡ್‌ನ ಆವರಣವನ್ನು ಬಂಟ್ವಾಳ…

Read More

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುವ ಕಂಬಳ, ಜಾತ್ರೆ ಯಕ್ಷಗಾನ ಹಾಗೂ ಇನ್ನಿತರ ಧಾರ್ಮಿಕ ಆಚರಣೆಗಳಿಗೆ ಯಾವುದೇ ರೀತಿ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಿತು. ಧ್ವನಿವರ್ಧಕ ಬಳಕೆಯ ನೆಪ ಹೇಳಿ ರಾತ್ರಿ ವೇಳೆ ಕಂಬಳಕ್ಕೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚನೆ ನೀಡಬೇಕು ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯಿಸಿದರು. ರಾತ್ರಿ ವೇಳೆ ನಡೆಯುವ ಜಾತ್ರೆಗಳಿಗೂ ಅಡ್ಡಿಪಡಿಸಬಾರದು ಎಂದು ಶಾಸಕಿ ಭಾಗಿರಥಿ ಮುರುಳ್ಯ ಒತ್ತಾಯಿಸಿದರು. ಯಕ್ಷಗಾನಕ್ಕೆ ಅಡ್ಡಿಪಡಿಸಿ ಜನರ ಧಾರ್ಮಿಕ ನಂಬಿಕೆಗಳಿಗೆ ಚ್ಯುತಿ ಉಂಟುಮಾಡಬೇಡಿ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಕೋರಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ದರ್ಶನ್‌ ಎಚ್‌.ವಿ ಜಿಲ್ಲಾಡಳಿತವು ಇಂತಹ ಯಾವುದೇ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿಲ್ಲ ಎಂದು ಸ್ಪಷ್ಟಪಡಿಸಿದರು. ಅಕ್ಕಪಕ್ಕದವರಿಗೆ…

Read More

ಒಂದು ವಾರದಲ್ಲಿ ಹಣವನ್ನು ಡಬಲ್ ಮಾಡಿ ಕೊಡುವುದಾಗಿ ಆಮಿಷವೊಡ್ಡಿ ಕೋಟ್ಯಂತರ ರೂ. ವಂಚಿಸಿ ಆಂಧ್ರಪ್ರದೇಶ ಮೂಲದ ದಂಪತಿ ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಆಂಧ್ರಪ್ರದೇಶದ ಅನಂತಪುರ ನಿವಾಸಿಗಳಾದ ಬೊಗ್ಗು ಶ್ರೀರಾಮಲು- ಪುಷ್ಪಾ ವಂಚಿಸಿ ಎಸ್ಕೇಪ್ ಆಗಿರುವ ದಂಪತಿ. ಈ ದಂಪತಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ವಿವಿಧ ಗ್ರಾಮಗಳ ಮಹಿಳೆಯರಿಗೆ ವಂಚಿಸಿ ಪರಾರಿಯಾಗಿದ್ದಾರೆ. ಡಬ್ಲಿಂಗ್ ಆಸೆಗೆ ರೇಣುಕಮ್ಮ ಎಂಬವರು ಜಮೀನು ಮಾರಾಟ ಮಾಡಿ 33 ಲಕ್ಷ ರೂ. ನೀಡಿದ್ದರು. ಅಲ್ಲದೇ ಮೀನಾ 40 ಲಕ್ಷ ರೂ., ಪ್ರಿಯಾಂಕ 50 ಲಕ್ಷ ರೂ. ನೀಡಿದ್ದಾರೆ. ಇನ್ನು ಟಿ ತಿರುಮಲೇಶ್ ಎಂಬವರು 17 ಲಕ್ಷ ರೂ. ನೀಡಿ ಮೋಸ ಹೋಗಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹಣ ಹಾಕಿ, ಡಬಲ್ ಮಾಡುವ ಎಂದು ವಂಚಕ ದಂಪತಿ ನಂಬಿಸಿದ್ದರು. ಅಲ್ಲದೇ ಅವರ ಮನೆಯ ರೂಂನಲ್ಲಿ ಹಣದ ಕಂತೆಗಳನ್ನು ಜೋಡಿಸಿ ವೀಡಿಯೋ ಮಾಡಿ ಕಳಿಸಿ ನಂಬಿಸಿದ್ದರು. ಸದ್ಯ 17 ಲಕ್ಷ ರೂ. ಕಳೆದುಕೊಂಡ ಟಿ. ತಿರುಮಲೇಶ್ ಜಗಳೂರು ಠಾಣೆಗೆ…

Read More