ಬೆಳ್ತಂಗಡಿಯ ಕುತ್ಲೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಕಳ್ಳನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಇತ್ತೆ ಬರ್ಪೆ ಅಬೂಬಕರ್(71) ಬಂಧಿತ ಆರೋಪಿ. ನಾರವಿ ಗ್ರಾಮದ ಕುತ್ಲೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಎಂಬವರ ಮನೆಯಲ್ಲಿ ಅ.2 ರಿಂದ ಅ.6ರ ನಡುವೆ ಮನೆಯಲ್ಲಿ ಯಾರು ಇಲ್ಲದ ವೇಳೆ 9.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವೇಣೂರು ಪೊಲೀಸ್ ಠಾಣೆ ಸಬ್ ಇನ್ಸೆಕ್ಟರ್ ಓಮನ ಮತ್ತು ತಂಡ ನ.11 ರಂದು ರಾತ್ರಿ ವೇಣೂರು ಕುಂಭಶ್ರೀ ಬಳಿ ವಾಹನ ತಪಾಸಣೆ ಮಾಡುವ ವೇಳೆ ಅನುಮಾನಾಸ್ಪದವಾಗಿ ಸ್ಕೂಟರ್‌ನಲ್ಲಿ ಬರುತ್ತಿದ್ದ ಇತ್ತೆ ಬರ್ಪೆ ಅಬೂಬಕರ್‌ನನ್ನು ತಡೆದು ನಿಲ್ಲಿಸಿ ವಾಹನದ ದಾಖಲೆ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿ ಉಡುಪಿ ಜಿಲ್ಲೆಯ…
Author: main-admin
ಮೈಸೂರು: ಮುಂಬೈ ಪೊಲೀಸ್ ಎಂದು ಹೇಳಿಕೊಂಡು ಡಿಜಿಟಲ್ ಅರೆಸ್ಟ್ ವಾತಾವರಣ ಸೃಷ್ಟಿಸಿ ಕೇರಳದ ವ್ಯಕ್ತಿಯೊಬ್ಬರಿಂದ 20.50 ಲಕ್ಷ ರೂ. ಸುಲಿಗೆ ಮಾಡಿದ ಆರೋಪದಲ್ಲಿ ಮೈಸೂರಿನ 21 ವರ್ಷದ ಯುವತಿಯನ್ನು ಕೇರಳದ ಅಲಪ್ಪುಜ ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಅಶೋಕಪುರಂ ನಿವಾಸಿ ಚಂದ್ರಿಕಾ (21) ಬಂಧಿತ ಯುವತಿ. ಅಶೋಕಪುರಂ ಠಾಣೆ ಇನ್ಸ್‌ಪೆಕ್ಟರ್ ಸಿ.ರೋಹಿತ್ ಅವರು ‘ಈಟಿವಿ ಭಾರತ’ಕ್ಕೆ ಪ್ರತಿಕ್ರಿಯೆ ನೀಡಿ, ಅಲಪ್ಪುಜ ಸೈಬರ್ ಅಪರಾಧ ವಿಭಾಗದ ಪೊಲೀಸರು ಆರೋಪಿಯ ನಿವಾಸ ಪತ್ತೆ ಹಚ್ಚಲು ಮತ್ತು ಬಂಧಿಸಲು ನಮ್ಮ ಸಹಕಾರ ಪಡೆದಿದ್ದಾರೆ ಎಂದು ತಿಳಿಸಿದರು. ಉದ್ಯೋಗಿಯನ್ನು ಸಂಪರ್ಕಿಸಿ ಮುಂಬೈ ಪೊಲೀಸ್ ಪ್ರಧಾನ ಕಚೇರಿಯ ನೆಹಶರ್ಮ ಎಂದು ಪರಿಚಯಿಸಿಕೊಂಡಿದ್ದರು. ಬಳಿಕ ನಿಮ್ಮ ಹೆಸರಿನಲ್ಲಿ ಹಲವು ನಕಲಿ ಬ್ಯಾಂಕ್ ಖಾತೆಗಳು ಹಾಗೂ ಮೊಬೈಲ್ ಸಂಖ್ಯೆಗಳನ್ನು ತೆರೆಯಲಾಗಿದೆ. ಅವುಗಳನ್ನು ಕೋಟ್ಯಂತರ ರೂ. ಅಪರಾಧಗಳಿಗೆ ಬಳಸಲಾಗುತ್ತಿದೆ. ನೀವು 25 ಲಕ್ಷ ರೂ. ಕಮಿಷನ್ ಪಡೆದಿದ್ದೀರಿ ಎಂದು ದೂರುದಾರನಿಗೆ ಹೆದರಿಸಿದ್ದರು. ಅಲ್ಲದೆ ನಾವು ಹೇಳಿದಂತೆ ಕೇಳದಿದ್ದರೆ ಬಂಧಿಸುವುದಾಗಿ ಬೆದರಿಕೆ…
ಮಂಗಳೂರು: ನಗರದ ಮಾಲ್‌ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ವಿವಾಹಿತ ಯೊಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ನಾಪತ್ತೆಯಾಗಿರುವ ಕುರಿತು ಅವರ ಪತಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾದ ಮಹಿಳೆಯನ್ನು ಜಪ್ಪು ಸೂಟರ್‌ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ ಎನ್. (24) ಎಂದು ಗುರುತಿಸಲಾಗಿದೆ. ಸುಮಾ ಅವರು ಸೋಮವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ಕೆಲಸದ ಸ್ಥಳವನ್ನು ತಲುಪಿಲ್ಲ. ಅವರ ಪತಿ ಕುಮಾರ್ ಅವರು ಸುಮಾ ಅವರಿಗೆ ಕರೆ ಮಾಡಲು ಪ್ರಯತ್ನಿಸಿದಾಗ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ನಂತರ ಸಂಬಂಧಿಕರು ಮತ್ತು ಸ್ನೇಹಿತರ ಬಳಿ ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಕುಮಾರ್ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಸುಮಾ ಅವರು ಸುಮಾರು 5 ಅಡಿ ಎತ್ತರ, ಮಧ್ಯಮ ಮೈಕಟ್ಟು ಮತ್ತು ಗೋಧಿ ಬಣ್ಣದ ಮೈಕಟ್ಟು ಹೋಂದಿದ್ದಾರೆ. ಅವರು ಕೊನೆಯದಾಗಿ ಕಪ್ಪು ಪ್ಯಾಂಟ್ ಮತ್ತು ಕಪ್ಪು ಉದ್ದ ತೋಳಿನ ಶರ್ಟ್ ಧರಿಸಿದ್ದರು. ಅವರು ಕನ್ನಡ, ತುಳು…
ಉಪ್ಪಿನಂಗಡಿ: 10ನೇ ತರಗತಿವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.ಹರ್ಷಿತಾ ಉಪ್ಪಿನಂಗಡಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ನವೆಂಬರ್ 4ರಂದು ತಲೆನೋವು ಇದೆ ಎಂದು ಹೇಳಿ ಶಾಲೆಗೆ ತೆರಳದೇ ಮನೆಯಲ್ಲಿಯೇ ಇದ್ದಾಳೆ. ಈ ಸಂದರ್ಭಮನೆಯಲ್ಲಿ ಇದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡಿದ್ದಾಳೆ.ವಿಷಯ ತಿಳಿದ ತಕ್ಷಣ ಕೂಲಿ ಕೆಲಸಕ್ಕೆ ತೆರಳಿದ್ದ ತಾಯಿ ಗೀತಾ ಮನೆಗೆ ಬಂದು, ಆಟೋರಿಕ್ಷಾದ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಆರೈಕೆಗೆ 108 ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಹರ್ಷಿತಾ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 12ರಂದು ಬೆಳಗ್ಗೆ 1.00 ಗಂಟೆ ಸುಮಾರಿಗೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಮೃತಳ ತಂದೆ ನೀಡಿರುವ ದೂರಿನಂತೆ, ಕಡಬದ ರಾಜೇಶ್…
ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸ್ಪೋಟಕ ಅಂಶ ಬಹಿರಂಗವಾಗಿದ್ದು, ಸುಮಾರು 8 ಮಂದಿ ಶಂಕಿತರು ನಾಲ್ಕು ಪ್ರಮುಖ ಸ್ಥಳಗಳಲ್ಲಿ ಸರಣಿ ಸ್ಪೋಟ ನಡೆಸಲು ಯೋಜಿಸಿದ್ದರು ಎಂದು ತನಿಖಾ ಸಂಸ್ಥೆಗಳು ತಿಳಿಸಿವೆ. ಸುಮಾರು ಎಂಟು ಶಂಕಿತರು ನಾಲ್ಕು ಸ್ಥಳಗಳಲ್ಲಿ ಸರಣಿ ಸ್ಫೋಟ ನಡೆಸಲು ಯೋಜಿಸಿದ್ದರು. ಅವರು ತಲಾ ಎರಡು ಗುಂಪುಗಳಾಗಿ ನಾಲ್ಕು ನಗರಗಳಿಗೆ ತೆರಳಲು ಯೋಜಿಸಿದ್ದರು. ಪ್ರತಿ ಗುಂಪು ತಮ್ಮೊಂದಿಗೆ ಬಹು ಐಇಡಿಗಳನ್ನು ಸಾಗಿಸಬೇಕಿತ್ತು ಎಂದು ತನಿಖಾ ಸಂಸ್ಥೆಯ ಮೂಲಗಳು ತಿಳಿಸಿವೆ. ಇನ್ನು ದೆಹಲಿ ಕೆಂಪುಕೋಟೆ ಸ್ಫೋಟದ ಪ್ರಮುಖ ಶಂಕಿತ ಡಾ.ಉಮರ್ ಉನ್ ನಬಿ ಸೋಮವಾರ ಸಂಜೆ ಸ್ಫೋಟಗೊಂಡು ಕನಿಷ್ಠ 12 ಜನರು ಸಾವನ್ನಪ್ಪಿ ಮತ್ತು ಹಲವರು ಗಾಯಗೊಂಡ ಐ20 ಕಾರಿನ ‘ಬಾಂಬರ್’ ಎಂದು ಡಿಎನ್ಎ ಪರೀಕ್ಷೆಯ ಮೂಲಕ ದೃಢಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಉಮರ್ ನಬಿ ತಾಯಿಯ ರಕ್ತದಿಂದ ಸಂಗ್ರಹಿಸಿದ ಡಿಎನ್ಎ ಮಾದರಿಗಳು ಅಪರಾಧ ಸ್ಥಳದಲ್ಲಿ ಪತ್ತೆಯಾದ ದೇಹದ ಭಾಗಗಳೊಂದಿಗೆ ಹೊಂದಿಕೆಯಾದ ನಂತರ ಉಮರ್…
ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಎಕ್ಕೂರಿನಲ್ಲಿ ಹರಿಪ್ರಸಾದ್ ನನ್ನು ಹಾಗೂ ಪಡೀಲ್ ನಲ್ಲಿ ಮುಹಮ್ಮದ್ ಶಾರೂಕ್ ನನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಈ ಆದೇಶದಿಂದ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ. ಜಯಂತ್ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಬೇಕಾಗಿದೆ. ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು, ‘ಅರ್ಜಿದಾರರಿಗೆ ಈ ಹಿಂದೆ ಹಲವು ಬಾರಿ ನೋಟಿಸ್ ನೀಡಿರುವುದು 150 ತಾಸು ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ಆದರೆ, ಆ ನೋಟಿಸ್ ಮತ್ತು ವಿಚಾರಣೆ ನಡೆಸಿರುವ ಸಂದರ್ಭದಲ್ಲಿ ಅರ್ಜಿದಾರರನ್ನು ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿತ್ತು. ಇದೀಗ ಅರ್ಜಿದಾರರನ್ನು ಆರೋಪಿಗಳನ್ನಾಗಿ ಪರಿಗಣಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ಪೀಠ, ತಡೆಯಾಜ್ಞೆ ತೆರವುಗೊಳಿಸಿ ವಿಚಾರಣೆಯನ್ನು ಮುಂದೂಡಿತು. ಎಸ್‌ಐಟಿ ಪರ ವಕೀಲರು, ಅರ್ಜಿದಾರರ ಪ್ರಚೋದನೆ ಮೇಲೆಯೇ ಚಿನ್ನಯ್ಯ ದೂರು ನೀಡಿದ್ದಾನೆ. ನಂತರ 164 ಹೇಳಿಕೆ ನೀಡಿ ಅರ್ಜಿದಾರರ…
ಮಂಗಳೂರು : ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಗಳಿಸಬಹುದು ಎಂದು ಆಮಿಷವೊಡ್ಡಿ 2 ಕೋ.ರೂ. ವಂಚನೆ ಮಾಡಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ 2022ರ ಮೇ 1ರಂದು ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿ ತಾನು ಡೆಲ್ಟಿನ್ ರೋಯಲ್ ಕಂಪನಿಯ ಅಂಕಿತ್ ಎಂದು ಪರಿಚಯಿಸಿಕೊಂಡಿದ್ದ. ಆ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ಹಾಗೂ ಲಾಭಾಂಶವನ್ನು ನೀಡುವುದಾಗಿ ತಿಳಿಸಿದ್ದ. ಅಲ್ಲದೆ ಸುಮಿತ್ ಜೈಸ್ವಾಲ್, ಕುಶಾಗರ್ ಜೈನ್, ಅಖಿಲ್ ಎಂಬುವರ ಪರಿಚಯವನ್ನೂ ಮಾಡಿದ್ದ. ಇದನ್ನೆಲ್ಲಾ ನಂಬಿದ ತಾನು 2022ರ ಮೇ 1ರಂದು 3,500 ರೂ. ಅಂಕಿತ್ ನೀಡಿದ ಅಪರಿಚಿತ ವ್ಯಕ್ತಿಯ ಸ್ಕ್ಯಾನರ್ ಮೂಲಕ ಫೆಡರಲ್ ಬ್ಯಾಂಕ್ ಖಾತೆಯ ಮೂಲಕ ಹಣ ವರ್ಗಾಯಿಸಿದೆ. ಆ ದಿನ ತನಗೆ 1,000 ರೂ. ಲಾಭಾಂಶದ ಹಣವನ್ನು ತನ್ನ ಫೆಡರಲ್ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಬಳಿಕ ತಾನು ಹಂತ ಹಂತವಾಗಿ ಫೆಡರಲ್ ಬ್ಯಾಂಕ್, ಕೆನರಾ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್ ಹಾಗೂ…
ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖಾ ವತಿಯಿಂದ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿ ಡಾ ಅರುಣ್ ಕೆ ತಿಳಿಸಿದ್ದಾರೆ.ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು ನಿರ್ವಹಿಸುವಂತೆ ಸೂಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಅಧಿಕಾರಿ/ ಸಿಬ್ಬಂದಿಗಳನ್ನು ಪಿಕೆಟಿಂಗ್ ಪಾಯಿಂಟ್ ಕರ್ತವ್ಯದಲ್ಲಿ ನಿಯೋಜಿಸಿ ನಿಗಾ ವಹಿಸಲಾಗುತ್ತಿದೆ. ಜಿಲ್ಲೆಯ ಮುಖ್ಯ ಸ್ಥಳಗಳಲ್ಲಿ ನಾಕಾಬಂದಿಗಳನ್ನು ಅಳವಡಿಸಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಮುಖ್ಯ ಸರ್ಕಾರಿ ಕಟ್ಟಡಗಳು ಸೇರಿದಂತೆ ಜನದಟ್ಟಣೆಯ ಜಾಗಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿ ನಿಗಾ ವಹಿಸಲಾಗುತ್ತಿದೆ. ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ಕೃತ್ಯಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಜಿಲ್ಲಾ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ವಿನಂತಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.
ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರದ (NMPA) ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಸ್ಮರಣಾರ್ಥ ಕಾರ್ಯಕ್ರಮವು ನವೆಂಬರ್ 13, 2025 ರಂದು ಮಧ್ಯಾಹ್ನ 2:30 ಕ್ಕೆ ಮಂಗಳೂರಿನ ಪಣಂಬೂರಿನ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೋವಾಲ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಮತ್ತು ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡಿನ ಜಲ ಸಾರಿಗೆ ಸಚಿವ ಮಂಕಾಳ್ ವೈದ್ಯ ಅವರು ಸಹ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಂದರು ನೌಕರರು, ಅಧಿಕಾರಿಗಳು, ಪಾಲುದಾರರು, ಬಂದರು ಬಳಕೆದಾರರು, ವ್ಯಾಪಾರ ಸಂಘಗಳು, ಒಕ್ಕೂಟಗಳು ಮತ್ತು ನಿವೃತ್ತ ಸಿಬ್ಬಂದಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸೇರಿದಂತೆ ಸುಮಾರು ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. NMPA ಯ ಉಪಾಧ್ಯಕ್ಷೆ ಶ್ರೀಮತಿ ಎಸ್. ಶಾಂತಿ ಮತ್ತು NMPA ಯ ಉಪ ಸಂರಕ್ಷಕ ಕ್ಯಾಪ್ಟನ್ ಮನೋಜ್ ಜೋಶಿ ಅವರು ಇಂದು…










