ಮೂಡುಬಿದಿರೆ: ಪ್ರತೀ ತಿಂಗಳು ಕಂತು ಕಟ್ಟಿ ಇಷ್ಟದ ವಸ್ತುವನ್ನು ಮನೆಗೆ ಕೊಂಡುಹೋಗುವ ಅದೃಷ್ಟದ “ಡ್ರೀಮ್ ಡೀಲ್” ಇದರ 2ನೇ ಆವೃತ್ತಿಯು ಎ.21 ರಿಂದ ಶುಭಾರಂಭಗೊಳ್ಳಲಿದೆ. ಇದರ ಉದ್ಘಾಟನೆಯನ್ನು ತುಳು ಚಿತ್ರರಂಗದ ನವರಸ ನಾಯಕ ಬೊಜರಾಜ್ ವಾಮಂಜೂರು, ಕಂಬಳ ಓಟಗಾರ ಶ್ರೀನಿವಾಸ ಗೌಡ, ಆಳ್ವಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ. ಮೋಹನ್ ಆಳ್ವ, ಯುವ ವಕೀಲರಾದ ಶ್ವೇತ ಜೈನ್ ಮೂಡಬಿದಿರೆ , ಅಬ್ದುಲ್ ಪುತ್ತಿಗೆ ನೆರವೇರಿಸಲಿದ್ದಾರೆ. ಈ ವಿಶೇಷ ಡ್ರೀಮ್ ಡೀಲ್‌ನಲ್ಲಿ 20 ತಿಂಗಳವರೆಗೆ ಪ್ರತಿ ತಿಂಗಳು 1000 ರೂ. ಪಾವತಿಸಿದ ನಂತರ ಉಳಿದ ಜನರು, ತಮ್ಮ ಉಳಿತಾಯದ ಮೌಲ್ಯಕ್ಕೆ ಸಮಾನವಾದ ಅಥವಾ ಉಳಿಸಿದ ಮೊತ್ತಕ್ಕಿಂತ ಹೆಚ್ಚಿನ ಮೌಲ್ಯದ ಬ್ರಾಂಡ್ ಮತ್ತು ಉತ್ತಮ ಗುಣಮಟ್ಟದ ವಸ್ತುಗಳನ್ನು ಆಯ್ಕೆ ಮಾಡಲು ಅವಕಾಶವನ್ನು ಹೊಂದಿರುತ್ತಾರೆ. ಈ ಡ್ರೀಮ್ ಡೀಲ್‌ನ ಮೊದಲ ಕಂತು ಮೇ.22 ರಂದು ಆರಂಭವಾಗಲಿದ್ದು, ಪ್ರತೀ ತಿಂಗಳು 10 ನೇ ತಾರೀಕಿಗೆ ಮುಂಚಿತವಾಗಿ ಕಂತನ್ನು ಪಾವತಿಸಿದರೆ ವಿಶೇಷ ಬಹುಮಾನ 25 ಗೋಲ್ಡ್ ರಿಂಗ್ ಪಡೆಯುವ…
Author: main-admin
ನವದೆಹಲಿ : ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದ ಫ್ಯಾಶನ್ ಇನ್ ಫ್ಲುಯೆನ್ಸರ್ ಸುರಭಿ ಜೈನ್ ಅಂಡಾಶಯ ಕ್ಯಾನ್ಸರ್ ನಿಂದಾಗಿ ತನ್ನ 30ನೇ ವರ್ಷಕ್ಕೆ ಸಾವನಪ್ಪಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶ್ರೀಮತಿ ಜೈನ್ ಅಂಡಾಶಯದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಕ್ಯಾನ್ಸರ್ ಗೆ ಸಂಬಂಧಿಸಿದಂತೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಹಂಚಿಕೊಂಡು ಆರೋಗ್ಯದ ಬಗ್ಗೆ ಇತ್ತೀಚೆಗೆ ಅಪ್ಡೇಟ್ ನ್ನು ಹಂಚಿಕೊಂಡಿದ್ದರು. ಸುರಭಿ ಜೈನ್ ಎಂಟು ವಾರಗಳ ಹಿಂದೆ ಆಸ್ಪತ್ರೆಯಲ್ಲಿ ತನ್ನ ಚಿತ್ರವನ್ನು ಹಂಚಿಕೊಂಡಿದ್ದಳು. ಗುರುವಾರ ಅವರು ನಿಧನರಾಗಿದ್ದು ಶುಕ್ರವಾರ(ಏ.19 ರಂದು) ಗಾಜಿಯಾಬಾದ್‌ನಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು ಎಂದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. “ನನ್ನ ಆರೋಗ್ಯದ ಬಗ್ಗೆ ನಾನು ನಿಮಗೆ ಎಲ್ಲವನ್ನೂ ಅಪ್‌ಡೇಟ್ ಮಾಡಿಲ್ಲ ಎಂದು ನನಗೆ ತಿಳಿದಿದೆ, ಅದು ನನಗೆ ಪ್ರತಿದಿನ ಬರುತ್ತಿರುವ ಸಂದೇಶಗಳ ಸಂಖ್ಯೆಯನ್ನು ತಪ್ಪಾಗಿ ಭಾವಿಸುತ್ತದೆ. ಆದರೆ ವಿಷಯಗಳು ಸರಿಯಾಗಿ ನಡೆಯುತ್ತಿಲ್ಲ. ಆದ್ದರಿಂದ ಹಂಚಿಕೊಳ್ಳಲು ಹೆಚ್ಚು ಇಲ್ಲ. ಕಳೆದ 2 ತಿಂಗಳುಗಳು ನಾನು ಹೆಚ್ಚಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ, ಇದು…
ಸುಳ್ಯ : ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡ ಘಟನೆ ಸುಳ್ಯ ಶ್ರೀರಾಮ್ ಪೇಟೆ ಬಳಿ ಇಂದು ನಡೆದಿದೆ. ಓಮ್ನಿ ಕಾರು ಹಾಗೂ ಸೆಲಾರಿಯೋ ಕಾರಿನ ನಡುವೆ ಶ್ರೀರಾಮ್ ಪೇಟೆ ಪೋಸ್ಟ್ ಆಫೀಸ್ ಕಚೇರಿಯ ಬಳಿ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಕಾರುಗಳ ಡಿಕ್ಕಿಯಿಂದ ಸುಳ್ಯ ಮುಖ್ಯ ಬೀದಿಯಲ್ಲಿ ಸ್ವಲ್ಪ ಹೊತ್ತು ಸಂಚಾರಕ್ಕೆ ತಡೆ ಉಂಟಾಯಿತು. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
ಕಡಬ: ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗೂ ಬ್ಯಾಗೊಂದು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ಪತ್ತೆಯಾಗಿದೆ. ಬಿಳಿನೆಲೆ ಗ್ರಾಮ ನಿವಾಸಿ ಚಂದ್ರಶೇಖರ್, (39) ಎಂಬವರು ದಿನಾಂಕ:19.04.2024ರಂದು ಬೆಳಿಗ್ಗೆ ನೆರೆ-ಕೆರೆಯ ನಿವಾಸಿಗಳೊಂದಿಗೆ, ಕಾಡಿನಲ್ಲಿ ಕಟ್ಟಿಗೆ ಸೌದೆಯನ್ನು ತರಲು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ತೆರಳುತ್ತಿದ್ದಾಗ, ದಾರಿಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗು ಬ್ಯಾಗ್ ಕಂಡುಬಂದಿದ್ದು, ಸ್ವಲ್ಪ ದೂರದಲ್ಲಿ ಮರವೊಂದರಲ್ಲಿ ಬಟ್ಟೆಯೊಂದು ಮರದ ಕೊಂಬೆಯಿಂದ ನೇತಾಡುತ್ತಿರುವುದು ಕಂಡುಬಂದಿದೆ. ಕಾಡು ಪ್ರದೇಶದಲ್ಲಿ ಕೊಳೆತ ಮೃತದೇಹ ದೊರಕಿರುವ ಬಗ್ಗೆ ಸಂಶಯವಿರುವುದಾಗಿ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸು ಠಾಣೆಯಲ್ಲಿ ಯು ಡಿ ಆರ್ : 12/2024 ಕಲಂ:174 (3),(iv) CrPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನಲೆ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.24 ಬುಧವಾರ ಸಂಜೆ 6 ಗಂಟೆಯಿಂದ ಏ.26 ಶುಕ್ರವಾರ ರಾತ್ರಿ 10 ಗಂಟೆಯವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ/ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು, ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿ ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್ಸ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿಬರ್ಂಧಿಸಿದೆ. ಮತದಾನದ ದಿನದಂದು ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ.ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೇ…
ಬಜ್ಪೆ: ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿ ಬಳಿಕ ಸರಣಿಯಾಗಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಎಡಪದವು ಪೇಟೆಯಲ್ಲಿ ನಡೆದಿದೆ. ಎಡಪದವು ರಾಮಮಂದಿರ ಬಳಿ ಮಣ್ಣಿನ ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತವಾಗಿದ್ದು, ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ಈ ಘಟನೆ ಸಂಭವಿಸಿದೆ.ಲಾರಿ ನಿಲ್ಲಿಸಲು ಆಗದೆ ಚಾಲಕ, ಸುಮಾರು 500 ಮೀಟರ್ ದೂರದ ವರೆಗೂ ಲಾರಿಯನ್ನು ನಿಯಂತ್ರಿಸುವ ಪ್ರಯತ್ನ ಮಾಡಿದ್ದಾನೆ. ಆದರೆ,ರಸ್ತೆಯಲ್ಲಿ ಸರಣಿ ಅಪಘಾತ ನಡೆದಿದ್ದು, ಮೊದಲಿಗೆ ಎದುರಿಗೆ ಸಿಕ್ಕ ಸ್ವಿಫ್ಟ್ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸಂಪೂರ್ಣ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದವರಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳಿಕ ಮುಂದೆ ಚಲಿಸಿದ ಲಾರಿ, ಎಣ್ಣೆ ಪೂರೈಕೆ ಮಾಡುತ್ತಿದ್ದ ಪಿಕ್ಅಫ್ ವಾಹನಕ್ಕೆ ಡಿಕ್ಕಿಯಾಗಿದ್ದು, ರಸ್ತೆಗೆ ಪಿಕ್ ಅಪ್ ಉರುಳಿ ಬಿದ್ದ ಕಾರಣ ಎಣ್ಣೆ ಪ್ಯಾಕೆಟ್ಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದಿವೆ. ನಂತರ ಎದುರಿನಿಂದ ಬಂದ ಟ್ಯಾಂಕರ್ವೊಂದು, ಲಾರಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ…
ಮಂಗಳೂರು:ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಏ.19 ರ ಗುರುವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎನ್ನಲಾಗಿದೆ. ಯಾದವ್ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದಿದೆ ಪರಿಣಾಮ ಯಾದವ್ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಟ್ಯಾಂಕರ್ ಅವರ ಮೇಲೆ ಹರಿದು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಉಡುಪಿ: ನಗರದಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ-ಅಂಬಾಗಿಲು ಮುಖ್ಯ ರಸ್ತೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಟಿಪ್ಪರ್ ನ ಅಡಿಯಲ್ಲಿ ಬೈಕ್ ಸಿಲುಕಿಕೊಂಡಿದ್ದು, ಅಪಘಾತದ ರಭಸಕ್ಕೆ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತ ಬೈಕ್ ಸವಾರ ಬ್ರಹ್ಮಾವರ ಮಟಪಾಡಿ ಮೂಲದ ಪ್ರಭಾಕರ ಆಚಾರಿ ಎಂದು ಗುರುತಿಸಲಾಗಿದೆ. ಅವರು ಪೆರಂಪಳ್ಳಿಯಿಂದ ಅಂಬಾಗಿಲು ಮುಖ್ಯರಸ್ತೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಸಹಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇರುವಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹತ್ತಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಉದ್ಯಮಿಗಳ ಮನೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಚುನಾವಣೆ ಅಕ್ರಮದ ಅನುಮಾನ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆ ಮೇಳೆ ದಾಳಿ ನಡೆಸಿದ್ದರು. ಧಾರವಾಡದಲ್ಲಿ ಉದ್ಯಮಿಯೊಬ್ಬರ ಅಕೌಂಟೆಂಟ್ ಮನೆಯಲ್ಲಿ 18 ಕೋಟಿ ಹಣ ಪತ್ತೆಯಾಗಿತ್ತು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಉದ್ಯಮಿಗಳ ಮನೆಯನ್ನೇ ಗುರಿಯಾಗಿಸಿ ಬೆಂಗಳೂರಿನಲ್ಲಿಯೂ ದಾಳಿ ನಡೆದಿದೆ ಎನ್ನಲಾಗಿದೆ.
ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸಹಿತ ನಾಲ್ವರನ್ನು ಹತ್ಯೆಗೈದ ಘಟನೆ ನಗರದ ದಾಸರ ಓಣಿಯಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ. ಹತ್ಯೆಗೀಡಾದವರನ್ನು ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27) ಹಾಗೂ ಕೊಪ್ಪಳ ಮೂಲದ ಸಂಬಂಧಿಕರಾದ ಪರಶುರಾಮ (55) ಪತ್ನಿ ಲಕ್ಷ್ಮೀ (45) ಪುತ್ರಿ ಆಕಾಂಕ್ಷಾ (16) ಎಂದು ಗುರುತಿಸಲಾಗಿದೆ. ಇವರು ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದರು. ರಾತ್ರಿ ವೇಳೆ ಮನೆಯ ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಈ ಮೂವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಮನೆ ಮಂದಿ ಪೊಲೀಸರಿಗೆ ಫೋನಾಯಿಸುತ್ತಿರುವಾಗಲೇ ತಪ್ಪಿಸಿಕೊಂಡಿದ್ದಾರೆನ್ನಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದು, ಶ್ವಾನದಳ, ಫಾರೆನ್ಸಿಕ್ ತಂಡಗಳಿಂದ ಪರಿಶೀಲನೆ ನಡೆಯುತ್ತಿದೆ.