Author: main-admin

ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಪಣಿಲಾಜೆಯಲ್ಲಿ ವೃದ್ಧೆಯೊಬ್ಬರು ಮನೆಯಲ್ಲಿದ್ದ ಸಂದರ್ಭದಲ್ಲಿ ಚಿನ್ನವನ್ನು ತೊಳೆದು ಕೊಡುವುದಾಗಿ ಅವರ ಎರಡು ಮುಕ್ಕಾಲು ಪವನ್ ಚಿನ್ನದ ಸರವನ್ನು ರಾಸಾಯನಿಕದ ಮೂಲಕ ಕರಗಿಸಿ ಚಿನ್ನವನ್ನು ವಂಚಿಸಿದ ಘಟನೆ ಸಂಭವಿಸಿದೆ. ಘಟನೆಯ ಕುರಿತು ಪಣಿಲಾಜೆ ನಿವಾಸಿ 90ರ ಹರೆಯದ ರುಕ್ಮಿಣಿ ಶೆಟ್ಟಿಗಾರ್ ಅವರು ದೂರು ನೀಡಿದ್ದು, ಅವರು ಫೆ. 10ರಂದು ಬೆಳಗ್ಗೆ 11.15ರ ಸುಮಾರಿಗೆ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೋರ್ವ ಚಿನ್ನಾಭರಣ ತೊಳೆದು ಕೊಡುವುದಾಗಿ ಹೇಳಿದ. ಅದನ್ನು ನಂಬಿದ ರುಕ್ಮಿಣಿಯವರು ಕಪಾಟಿನ ಲಾಕರಿನಲ್ಲಿದ್ದ ಲಕ್ಷ್ಮೀ ಪದಕ ಇರುವ ಎರಡು ಮುಕ್ಕಾಲು ಪವನ್ ನ ಚಿನ್ನದ ಸರವನ್ನು ತಂದುಕೊಟ್ಟರು. ಬಳಿಕ ಆತ ಅಂಗಳದಲ್ಲಿದ್ದ ನಳ್ಳಿಯಿಂದ ಮಗ್ ಗೆ ನೀರು ಹಾಕಿ ಬ್ರೆಶ್ ನಿಂದ ಸರವನ್ನು ತೊಳೆಯುವ ನಾಟಕ ಮಾಡಿದ್ದಾನೆ.ಮುಂದೆ ಪೇಪರ್ ನಲ್ಲಿ ಸುತ್ತಿ ಕೊಟ್ಟಿದ್ದು, ಫ್ಯಾನ್ ಗಾಳಿಗೆ ಇಟ್ಟು ಒಣಗಿಸುವಂತೆ ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಅವರು ಪೇಪರ್ ತೆರೆದು ನೋಡಿದಾಗ ಅರಶಿನ ಪುಡಿಯಂತೆ ಕಾಣುವ ಪುಡಿ ಇದ್ದು,…

Read More

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ವಿರುದ್ಧ ಹೊರಿಸಲಾದ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತೀರ್ಮಾನಿಸಿದ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಕೆ.ಎಸ್. ಮಾನು ಅವರು ಈ ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದ ವಿವರ:2025ರ ಜುಲೈ ಎರಡನೇ ವಾರದಲ್ಲಿ ಮೂಲ್ಕಿ ಬಪ್ಪನಾಡು ದೇವಸ್ಥಾನದ ಬಳಿಯಿಂದ ಅಪ್ರಾಪ್ತ ಬಾಲಕಿಯನ್ನು ಆರೋಪಿ ತನ್ನ ಬೈಕ್‌ನಲ್ಲಿ ಕುಳ್ಳಿರಿಸಿ ಉಡುಪಿ ಜಿಲ್ಲೆಯ ಕಾಪು ಬೀಚ್‌ಗೆ ಕರೆದುಕೊಂಡು ಅಲ್ಲಿನ ಅರಣ್ಯ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದ ಮತ್ತು ಈ ವಿಷಯವನ್ನು ಮನೆಯವರಿಗೆ ತಿಳಿಸಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆಯನ್ನೂ ಹಾಕಿದ್ದ. ಘಟನೆಗೆ ಸಂಬಂಧಿಸಿದಂತೆ ದಿನಾಂಕ 23-07-2025ರಂದು ದೂರು ದಾಖಲಿಸಿಕೊಂಡ ಮೂಲ್ಕಿ ಪೊಲೀಸರು, ಆರೋಪಿಯನ್ನು ಅದೇ ದಿನ ಬಂಧಿಸಿದ್ದರು. ನೊಂದ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ, ಆಕೆ ಗರ್ಭಿಣಿ ಎಂದು…

Read More

ಮಣಿಪಾಲ: ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಮಲ್ಲಪುರಂ ಮೂಲದ ಪ್ರಸ್ತುತ ಮಣಿಪಾಲದಲ್ಲಿ ವಾಸವಾಗಿರುವ ಅಜ್ಮಲ್(26) ಬಂಧಿತ ಆರೋಪಿ.2025ರ ಆ.16ರಂದು ಮಣಿಪಾಲ ಈಶ್ವರ ನಗರದ ರೂಮ್‌ನಲ್ಲಿ ಗಾಂಜಾ ಹಾಗೂ ಎಲ್‌ಎಸ್‌ಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಆಪ್ಶಿನ್ ಮತ್ತು ಶಿವನಿಧಿ ಆಚಾರ್ಯ ಎಂಬವರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ತನಿಖೆ ಮುಂದು ವರೆಸಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದ ಮತ್ತೋರ್ವ ಆರೋಪಿ ಕೇರಳ ಮೂಲದ ಮನೀಶ್ ಎಂಬಾತನನ್ನು 2025ರ ಆ.17ರಂದು ಬಂಧಿಸ ಲಾಗಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ 4ನೇ ಆರೋಪಿ ಅಜ್ಮಲ್‌ನನ್ನು ಪೊಲೀಸರು 2026ರ ಫೆ.4ರಂದು ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಬಂಧಿಸಿದ್ದಾರೆ.ಈತನಿಂದ ಸುಮಾರು 1 ಲಕ್ಷ ರೂ. ಮೌಲ್ಯದ 2084 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಈತ ಗಾಂಜಾವನ್ನು ಸರಬರಾಜು…

Read More

ಬಂಟ್ವಾಳ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ವೀರಕಂಭ ಗ್ರಾಮದ ಗಣೇಶ್ ಕೋಡಿ ಎಂಬಲ್ಲಿ ನಡೆದಿದೆ. ಗಣೇಶ್ ಕೋಡಿ ನಿವಾಸಿ ರಾಜೇಶ್ವರಿ ಎಂಬವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ಬಟ್ಟೆ-ಬರೆ ವಸ್ತುಗಳು ಎಲ್ಲವೂ ಸುಟ್ಟು ಭಸ್ಮವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ಸಂಭವಿಸಿದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮನೆಯಲ್ಲಿ ಬೆಂಕಿ ಕಾಣಿಸಿದ ಕೂಡಲೇ ಪಕ್ಕದ ಮನೆಯವರ ಗಮನಕ್ಕೆ ಬಂದಿದ್ದು, ಕೂಡಲೇ ಅಕ್ಕ ಪಕ್ಕದ ಮನೆಯವರು ಬೆಂಕಿ ನಂದಿಸಲು ಪ್ರಯತ್ನಪಟ್ಟಿದ್ದಾರೆ

Read More

ಉಪ್ಪಿನಂಗಡಿ: ಪಂಜಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ‌ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ಸಂದರ್ಭದಲ್ಲಿ ಆತನಲ್ಲಿ ಎಂಡಿಎಂಎ ಮಾದಕ ವಸ್ತು ಪತ್ತೆಯಾದ ಘಟನೆ ನಡೆದಿದೆ. ಯಾಹ್ಯಾ ಕೊಕ್ಕಡ (48) ಎಂಬಾತನೇ ಬಂಧಿತ ಆರೋಪಿ. ಮಾರಾಟದ ಉದ್ದೇಶದಿಂದ ಈತ ಮಾದಕ ವಸ್ತುವನ್ನು ತನ್ನೊಂದಿಗೆ ಇಟ್ಟುಕೊಂಡಿದ್ದ ಎಂದು ತಿಳಿದು ಬಂದಿದೆ. ಆರೋಪಿಯಿಂದ 49,000 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

Read More

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಪುತ್ತೂರಿನ ಯುವಕನೊಬ್ಬ ಸಾವನಪ್ಪಿದ ಘಟನೆ ಚೆನ್ನರಾಯಪಟ್ಟಣದ ಬಳಿ ನಡೆದಿದೆ. ಮೃತರನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ್ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ನಲ್ಲಿ ಉದ್ಯೋಗಿಯಾಗಿದ್ದ ನಿಶಿತ್ ಅವರು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ. ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರನಾಗಿಯೂ ಗುರುತಿಸಿಕೊಂಡಿದ್ದರು. ಮನೆಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿAದ ಟ್ರೈನ್ ಹಿಡಿದಿದ್ದರು. ಜನರಲ್ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅವರು, ಸುಮಾರು 2.30ರ ಹೊತ್ತಿಗೆ ರೈಲಿನಿಂದ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಂಗಳೂರು : ಮ್ಯಾಟ್ರಿಮೋನಿ ಮೂಲಕ 9 ಯುವತಿಯರನ್ನು ಮದುವೆಯಾಗಿ ವಂಚಿಸಿದ್ದ ಆರೋಪಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಸುಶಾಂತ್ ಪೂಜಾರಿ, ಮುಲ್ಕಿನಿವಾಸಿ ಭಾಸ್ಕರ್ ಬಂಧಿಸಲಾಗಿದೆ. ವಂಚಕನ ಬಗ್ಗೆ ಮಂಗಳೂರಿನ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ ವರನನ್ನು ಹುಡುಕುತ್ತಿದ್ದ ಯುವತಿಯರಿಗೆ ವಂಚನೆ ಮಾಡುತ್ತಿದ್ದರು. ಮದುವೆ ಆಗಿ ಅವರಿಂದ ಲಕ್ಷಾಂತರ ಹಣ ಪಡೆದು ಪರಾರಿಯಾಗುತ್ತಿದ್ದರು. ಈವರೆಗೆ 9 ಯುವತಿಯರಿಗೆ ಆರೋಪಿ ಸುಶಾಂತ್ ಪೂಜಾರಿ ವಂಚಿಸಿದ್ದಾನೆ. ಸುಶಾಂತ್ ಕೃತ್ಯಕ್ಕೆ ಮುಲ್ಕಿ ನಿವಾಸಿ ಭಾಸ್ಕರ್ ಸಾಥ್ ನೀಡುತ್ತಿದ್ದ. ನಾನು ಸುಶಾಂತ್ ಮಾವ ಎಂದು ಹೇಳಿ ಯುವತಿಯರಿಗೆ ಭಾಸ್ಕರ್ ನಂಬಿಸುತ್ತಿದ್ದ. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

Read More

ಮಂಗಳೂರು : ಮಂಗಳೂರು ವಿದ್ಯಾರ್ಥಿನಿ ಕಿಡ್ನ್ಯಾಪ್ ಕೇಸ್ಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್ ಡ್ರಾಮ ಬಯಲಾಗಿದೆ. ಮಂಗಳೂರಿನ ಕಾಲೇಜಿಗೆ ಸೇರಲು ವಿದ್ಯಾರ್ಥಿನಿ ಈ ಒಂದು ಅಪಹರಣದ ನಾಟಕ ಮಾಡಿದ್ದು ಬಯಲಾಗಿದೆ. ಹೌದು ನಿನ್ನ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಅಪಹರಣದ ನಾಟಕವಾಡಿದ್ದು ಮಂಗಳೂರಿನ ಕಾಲೇಜಿಗೆ ಸೇರಲು ಯುವತಿ ಖತರ್ನಾಕ್ ಪ್ಲಾನ್ ಮಾಡಿದ್ದಾಳೆ. ಕಿಡ್ನಾಪ್ ಡ್ರಾಮ ಮಾಡಿದ್ದು, ಮಂಗಳೂರು ಕಾಲೇಜು ಸೇರಿಸುತ್ತಾರೆ ಎಂದು ಯುವತಿ ಪ್ಲಾನ್ ಮಾಡಿದ್ದಾಳೆ. ನಿನ್ನೆ ಬೆಳ್ತಂಗಡಿ ಠಾಣೆಯಲ್ಲಿ ಕಿಡ್ನ್ಯಾಪ್ ಯತ್ನ ಕೇಸ್ ದಾಖಲಾಗಿತ್ತು. ಖತರ್ನಾಕ್ ಐಡಿಯಾ! ಕಾಲೇಜಿಗೆ ಹೋಗೋಕು ಮುನ್ನ ವಿದ್ಯಾರ್ಥಿನಿ ಪುಸ್ತಕಗಳನ್ನು ಮನೆಯಲ್ಲಿ ಸುಟ್ಟು ಹಾಕಿದ್ದಾಳೆ. ಬಳಿಕ ಬ್ಯಾಗ್ ಅನ್ನು ದಾರಿಯಲ್ಲೇ ಬಿಸಾಕಿದ್ದಾಳೆ. ರಸ್ತೆ ಬದಿಯಲ್ಲಿ ಸ್ಕೂಟಿಯನ್ನು ನಿಲ್ಲಿಸಿದ್ದಾಳೆ. ಬಳಿಕ ಕಿಡ್ನ್ಯಾಪ್ ನಾಟಕ ಮಾಡಿದ್ದಾಳೆ. ಘಟನೆ ನಡೆದ ಬಳಿಕ ಶಾಸಕ ಹರೀಶ್ ಪೂಂಜಾ ಬಾಲಕಿಯನ್ನ ಭೇಟಿಯಾಗಿದ್ದಾರೆ. ಅಲ್ಲದೇ ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳೂರಿನಿಂದ ದೌಡಾಸಿದ್ದರು. ತನಿಖೆ ಮೇಲೆ ತನಿಖೆ ನಡೆಸಿದ್ದು, ಕೊನೆಗೆ ಪೊಲೀಸರ ಮುಂದೆ ವಿದ್ಯಾರ್ಥಿನಿ …

Read More

ಮಂಗಳೂರು : ಬರೀ ಎಪಿಕೆ ಫೈಲ್‌ ಡೌನ್‌ಲೋಡ್‌ ಮಾಡಿದ ಬಳಿಕ ವ್ಯಕ್ತಿಯೊಬ್ಬರು 10 ಲ.ರೂ. ಕಳೆದುಕೊಂಡ ಕುರಿತು ದೂರು ದಾಖಲಾಗಿದೆ. ಅಪರಿಚಿತರು ಕಳುಹಿಸಿದ ಎಪಿಕೆ ಲಿಂಕ್ ಡೌನ್ಲೋಡ್ ಮಾಡಿದ ವ್ಯಕ್ತಿಯ ಖಾತೆಯಿಂದ 10 ಲ.ರೂ. ಲಪಟಾಯಿಸಿದ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.5ರಂದು ತನಗೆ ಬಂದ ಎಪಿಕೆ ಲಿಂಕ್ ಅನ್ನು ಡೌನ್ಲೋಡ್ ಮಾಡಿದ್ದೆ. ಅದರಲ್ಲಿ ತನ್ನ ಮೊಬೈಲ್ ನಂಬರ್ ನಮೂದಿಸಿದ್ದರು. ನಂತರ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ಅಪರಿಚಿತರು ಪದೇಪದೆ ಪೋನ್ ಮಾಡಿ ಕೆವೈಸಿ ದಾಖಲಾತಿಗಳನ್ನು ಕೇಳುತ್ತಿದ್ದರು. ತಾನು ನಂಬರ್ ನೀಡಿರಲಿಲ್ಲ. ಆದರೆ ಫೆ.6ರ ರಾತ್ರಿ 9.11ರಿಂದ 9.27ರ ಮಧ್ಯೆ ತನ್ನ ಯೂನಿಯನ್ ಬ್ಯಾಂಕ್ ಪದವು ಖಾತೆಯಿಂದ 10,00,000 ರೂ. ಹಂತ ಹಂತವಾಗಿ ಡೆಬಿಟ್ ಆಗಿರುವ ಬಗ್ಗೆ ಮೆಸೇಜ್ ಬಂದಿದೆ. ಎಪಿಕೆ ಲಿಂಕ್ ಮೂಲಕ ವೈಯಕ್ತಿಕ ಮಾಹಿತಿಯನ್ನು ಕದ್ದು ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ವ್ಯಕ್ತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Read More

ಕಾಸರಗೋಡು: ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲುಎನ್ಸರ್ ಆದೂರು ಮೂಲದ ಚಿನ್ನು ಪಾಪು ಎಂದೇ ಪರಿಚಿತಳಾಗಿದ್ದ ರೇಶ್ಮಾ (24) ಅವರು ಕಾಸರಗೋಡು ನಗರದ ಹೊರವಲಯ ಉಳಿಯತ್ತಡ್ಕದಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ರೇಶ್ಮಾಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಕಾಸರಗೋಡು ಭಾಷೆಯಲ್ಲಿ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಪಡೆದಿದ್ದ ಚಿನ್ನು ಪಾಪು ಅವರಿಗೆ ಎರಡು ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದರು. ರೇಶ್ಮಾ ಅವರು ಈ ಹಿಂದೆ ವಿವಾಹಿತರಾಗಿದ್ದು, ಒಂದು ಮಗುವಿನ ತಾಯಿಯಾಗಿದ್ದರು. ಪತಿಯಿಂದ ವಿಚ್ಛೇದನಗೊಂಡ ಬಳಿಕ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಈ ಘಟನೆ ಸಂಬಂಧ ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಪತ್ತೆ ಹಚ್ಚುವ ನಿಟ್ಟಿನಲ್ಲಿ ರೇಶ್ಮಾಳ ಮೊಬೈಲ್ ಫೋನ್ ಪರಿಶೀಲನೆಗೆ ಮುಂದಾಗಿದ್ದಾರೆ ಎಂದು ವರದಿ ಮೂಲಕ ತಿಳಿದು…

Read More