ಬೆಳ್ತಂಗಡಿ: ಕಾರಿನಲ್ಲಿ ಬಂದ ಮೂವರು ಅಪರಿಚಿತ ದುಷ್ಟರು ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ಯುವತಿಯನ್ನು ಅಪಹರಿಸಲು ಯತ್ನಿಸಿದ ಘಟನೆ ಸುದೇಮುಗೇರು ಎಂಬಲ್ಲಿ ನಡೆದಿದೆ. ಈ ವೇಳೆ ಯುವತಿ ತೋರಿದ ಪ್ರತಿರೋಧ ಹಾಗೂ ಸಮಯ ಪ್ರಜ್ಞೆಯಿಂದಾಗಿ ಕಿಡ್ನಾಪರ್ಸ್ ಪ್ರಯತ್ನ ವಿಫಲವಾಗಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸುವ ಪ್ರಯತ್ನ ಇದಾಗಿದ್ದು, ಕಾರಿನ ನಂಬರ್ ಪ್ಲೇಟ್ ಕಾಣದಂತೆ ದುಷ್ಟರು ಅದಕ್ಕೆ ಬಟ್ಟೆ ಕಟ್ಟಿದ್ದರು ಎಂದು ತಿಳಿದು ಬಂದಿದೆ. ಕಾರಿನಿಂದ ಇಳಿದ ದುಷ್ಕರ್ಮಿಗಳು ಆಕೆಯನ್ನು ಬಲವಂತವಾಗಿ ಕಾರಿನೊಳಕ್ಕೆ ಹಾಕಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಯುವತಿ ತೀವ್ರ ಪ್ರತಿರೋಧವೊಡ್ಡಿ ಜೋರಾಗಿ ಬೊಬ್ಬೆ ಹೊಡೆದಿದ್ದಾಳೆ. ಅದೇ ಸಮಯದಲ್ಲಿ ಹಿಂದಿನಿಂದ ಒಂದು ಸ್ಕೂಟರ್ ಬರುತ್ತಿರುವುದನ್ನು ಕಿಡ್ನಾಪರ್ಸ್ ಗಮನಿಸಿದ್ದು, ಯುವತಿಯ ಕೈಗೆ ಚೂರಿಯಿಂದ ಇರಿದು, ಆಕೆಯ ಬ್ಯಾಗ್ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.
Author: main-admin
ಮಂಗಳೂರು : ಕಳೆದ 5 ವರ್ಷದ ಹಿಂದೆ ಮಂಗಳೂರಲ್ಲಿ 7 ವರ್ಷ 7 ತಿಂಗಳಿನ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಇಡೀ ಸಮಾಜ ತಲೆತಗ್ಗಿಸುವಂತಹ ಕೆಲಸ ಮಾಡಿದ ಮೂವರು ಅಪರಾಧಿಗಳು, ಮತ್ತೆ ಶಿಕ್ಷೆ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದಾಗ ಛೀಮಾರಿ ಹಾಕಿದ ಕೋರ್ಟ್, ಗಲ್ಲುಶಿಕ್ಷೆಯನ್ನು ಕಾಯಂಗೊಳಿಸಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಕಾಯಂಗೊಳಿಸಲು ಕೋರಿ ರಾಜ್ಯ ಸರಕಾರ ಸಲ್ಲಿಸಿದ್ದ ಅರ್ಜಿ, ಶಿಕ್ಷೆ ರದ್ದು ಕೋರಿ ಅಪರಾಧಿಗಳಾದ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಜೈಬನ್ ಆದಿವಾಸಿ ಅಲಿಯಾಸ್ ಜಯಸಿಂಗ್ ಮುಖೇಶ್ ಸಿಂಗ್, ಮುಖೇಶ್ ಸಿಂಗ್ ತಿರ್ಕಿ ಮತ್ತು ಜಾರ್ಖಂಡ್‌ನ ರಾಂಚಿಯ ಮನೀಶ್ ತಿರ್ಕಿ ಎಂಬುವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಮತ್ತು ನ್ಯಾಯಮೂರ್ತಿ ವೆಂಟಕೇಶ್ ಟಿ.ನಾಯ್ಕ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ದಾಖಲೆಗಳನ್ನು ಪರಿಶೀಲಿಸಿದ ನಂತರ ವಿಚಾರಣಾ ನ್ಯಾಯಾಲಯ ವಿಧಿಸಿರುವ ಗಲ್ಲುಶಿಕ್ಷೆ ಕಾಯಂಗೊಳಿಸಿ, ಶಿಕ್ಷೆ ರದ್ದು ಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ”ಅಪರಾಧಿಗಳು…
ವಿಟ್ಲ: ಬೈಕ್ ಡಿಕ್ಕಿ ಹೊಡೆದ ಪರಿಣಾಮವಾಗಿ ವೃದ್ಧ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬೈಕ್ ಸವಾರ ಪುತ್ತೂರು ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಬೈಕ್ ಸುಮಾರು 50 ಮೀಟರ್ ದೂರ ಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳೀಯರು ತಮ್ಮ ದ್ವಿಚಕ್ರ ವಾಹನದಲ್ಲಿ ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಬರ್ಕೆ ಠಾಣೆ ಪೊಲೀಸರು ದಾಳಿ ನಡೆಸಿದ್ದು ಕೈದಿಗಳನ್ನು ಶೋಧಕ್ಕೆ ಒಳಪಡಿಸಿದ್ದಾರೆ. ಈ ವೇಳೆ, ಮೂರು ಮೊಬೈಲ್ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೆ.6ರಂದು ಮಧ್ಯರಾತ್ರಿ ಜೈಲು ಸುಪರಿಡೆಂಟ್ ನೇತೃತ್ವದಲ್ಲಿ ಪೊಲೀಸರು ಕಾರಾಗೃಹದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು ಎ ಮತ್ತು ಬಿ ಬ್ಯಾರಕ್ ನಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ. ಈ ವೇಳೆ, ಎ ಬ್ಯಾರಕ್ ನಲ್ಲಿ ಎರಡು ಮತ್ತು ಬಿ ಬ್ಯಾರಕ್ ನಲ್ಲಿ ಒಂದು ಮೊಬೈಲ್ ಫೋನ್ ಪತ್ತೆಯಾಗಿದೆ. ಎ ಬ್ಯಾರಕ್ ನಲ್ಲಿ ಮುಸ್ಲಿಂ ಕೈದಿಗಳನ್ನು ಇರಿಸಲಾಗಿದ್ದು ಇಬ್ರಾಹಿಂ ಹರ್ಷದ್ ಮತ್ತು ಅಸ್ಗರ್ ಎಂಬಿಬ್ಬರು ಕೀ ಪ್ಯಾಡ್ ಮೊಬೈಲ್ ಫೋನ್ ಗಳನ್ನು ಹೊಂದಿದ್ದರು. ಬಿ ಬ್ಯಾರಕ್ ನಲ್ಲಿ ಹಿಂದು ಕೈದಿಗಳಿದ್ದು ಶೋಧ ಸಂದರ್ಭದಲ್ಲಿ ಚಂದ್ರಹಾಸ್ ಪೂಜಾರಿ ಎಂಬ ವಿಚಾರಣಾಧೀನ ಕೈದಿಯಲ್ಲಿ ಕೀ ಪ್ಯಾಡ್ ಮೊಬೈಲ್ ಫೋನ್ ಪತ್ತೆಯಾಗಿದೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಾಗೃಹಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಬಂಧಿಖಾನೆ ಇಲಾಖೆಯ ಡಿಜಿಪಿ ಅಲೋಕ್…
ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಪತ್ನಿಯ ಬಗ್ಗೆ ಅಧಿವೇಶನದಲ್ಲಿ ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಆಡಿದ್ದಾರೆ ಎನ್ನಲಾದ ಮಾತನ್ನು ಉಲ್ಲೇಖಿಸಿ ವ್ಯಕ್ತಿಯೊಬ್ಬ ಫೇಸ್ಟುಕ್ ನಲ್ಲಿ ಪೋಸ್ಟ್ ಮಾಡಿದ್ದು ಶಾಸಕರ ಪತ್ನಿಯನ್ನು ಅವಮಾನಿಸಿದ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧಿಸಿ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬಂಟ್ವಾಳ ತಾಲೂಕಿನ ಶರಣ್ ರೈ(29) ಎಂಬಾತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಶರಣ್ ರೈ ಅಮ್ಮಾಡಿ ನಿವಾಸಿಯಾಗಿದ್ದು ರಿಯಲ್ ಎಸ್ಟೇಟ್ ಕೆಲಸ ಮಾಡಿಕೊಂಡಿದ್ದಾನೆ. ಆರೋಪಿ ಫೇಸ್ಟುಕ್ ನಲ್ಲಿ ಶಾಸಕ ವೇದವ್ಯಾಸ ಕಾಮತ್ ಪತ್ನಿಯನ್ನು ಅವಮಾನಿಸುವ ರೀತಿ ಪೋಸ್ಟ್ ಮಾಡಿದ್ದು ಈ ಬಗ್ಗೆ ಮಹಿಳೆಯೊಬ್ಬರು ಪೊಲೀಸ್ ದೂರು ನೀಡಿದ್ದರು. ಇಂತಹ ಹೇಳಿಕೆಯಿಂದ ಗೃಹಿಣಿಯಾಗಿರುವ ಶಾಸಕರ ಪತ್ನಿಯ ಬಗ್ಗೆ ಸಮಾಜದಲ್ಲಿ ಅಗೌರವ ಉಂಟಾಗಿದೆ, ಮಹಿಳೆಯರ ಬಗ್ಗೆ ಕೀಳು ಅಭಿರುಚಿಯಿಂದ ಪೋಸ್ಟ್ ಮಾಡಿದ್ದಾಗಿದೆ ಎಂಬ ದೂರಿನಂತೆ ಬಂದರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕೊಣಾಜೆ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ನಿಷೇಧಿತ ಎಮ್ ಡಿಎಮ್ ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶ್ರೀರಂಗಪಟ್ಟಣ ಹುಲಿಕೆರೆ ನಿವಾಸಿ ಜೋರ್ಡನ್,(21 ) ಎಂದು ಗುರುತಿಸಲಾಗಿದೆ. ಈತ ಪ್ರಸ್ತುತ ಬಾಳೆ ಪುಣೆ ಗ್ರಾಮದ ಕುಕ್ಕುದ ಕಟ್ಟೆ ಸೈಟ್ ನಲ್ಲಿ ರುವ ಸೆಫಿಯಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ ಬಂಧಿತನಿಂದ 55 ಗ್ರಾಂ ಎಮ್ ಡಿಎಮ್ ಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, ಡಿಜಿಟಲ್ ತೂಕದ ಮಾಪನ ಯಂತ್ರ ಸಹಿತ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜ.19ರಂದು 53,03,000 ರೂ .ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಒಡಿಶಾದ ದೀಪಕ್ ಪಾತ್ರ (37) ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಒಡಿಶಾದ ದೀಪಕ್ ಪಾತ್ರ ಎಂಬಾತನನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ನೇತೃತ್ವದ ತನಿಖಾ ತಂಡ ಒಡಿಶಾ ರಾಜ್ಯಕ್ಕೆ ತೆರಳಿ ಬಂಧಿಸಿದೆ. ಈ ವೇಳೆ ಆತನಿಂದ ರೂ 80,000 ಮೌಲ್ಯದ, 1 ಕೆ.ಜಿ 788 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್…
ಮಂಗಳೂರು: ನಗರದ ನಂತೂರು ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪ್ತಿಯ ಮೃತದೇಹವನ್ನು ಖಾಸಗಿ ಆಸ್ಪತ್ರೆಯಿಂದ ಕದ್ರಿ ಪೊಲೀಸ್ ಠಾಣೆಯ ಬಳಿ ತಂದು ಪ್ರತಿಭಟನೆ ನಡೆಸಿದ ಆರೋಪದಡಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಲ್ಲಾಳ್‌ಬಾಗ್ ಸಮೀಪದ ವಿವೇಕನಗರದ ಅಮೀತ್, ಕೀರ್ತನ್, ನವೀತ್, ಭರತ್‌ರಾಜ್, ಪವನ್, ಲೋಕೇಶ್ ಮಂಗಳಾದೇವಿ, ಮನ್ವೀತ್ ಬಲ್ಲಾಳ್‌ಬಾಗ್, ಅನಿಲ್ ಕುಮಾರ್ ಕಂಕನಾಡಿ, ಪ್ರೇಮನಾಥ ಬಲ್ಲಾಳ್‌ಬಾಗ್ ಹಾಗೂ ಇತರ ಸುಮಾರು 50 ಮಂದಿ ದ್ವಿಚಕ್ರ ವಾಹನ ಮತ್ತು ಕಾರಿನಲ್ಲಿ ಆಂಬುಲೆನ್ಸ್‌ನೊಂದಿಗೆ ಬಂದು ಕದ್ರಿ ಪೊಲೀಸ್ ಠಾಣೆಯ ಬಳಿ ಅಕ್ರಮಕೂಟ ಸೇರಿ ಪ್ರತಿಭಟನೆ ನಡೆಸಿದ್ದಾರೆ. ಈ ರೀತಿ ಪ್ರತಿಭಟನೆ ಮಾಡುವುದು ಸರಿಯಲ್ಲವೆಂದು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿದರೂ ಕೇಳದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಸಾರ್ವಜನಿಕ ವಾಹನ ಸಂಚಾರಕ್ಕೂ ಇದರಿಂದ ಅಡಚಣೆಯಾಗಿದೆ ಎಂದು ಆರೋಪಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಟ್ಲ: ಸಾಲೆತ್ತೂರು-ವಿಟ್ಲ ರಸ್ತೆಯ ಕಡಂಬು ಎಂಬಲ್ಲಿ ವಿಟ್ಲದ ಕಡೆಗೆ ತೆರಳುತ್ತಿದ್ದ ಹೋಂಡಾ ಡಿಯೋ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಮಾರುತಿ ಓಮ್ನಿ ಕಾರನ್ನು ಸಾರ್ವಜನಿಕರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ ಘಟನೆ ನಡೆದಿದೆ. ಎರಡು ದಿನದ ಹಿಂದೆ ಕೆ.ಎ.19ಎಮ್.ಹೆಚ್ 1518 ನಂಬರಿನ ಮಾರುತಿ ಓಮ್ನಿ ಕಾರು ಕಡಂಬು ಸಮೀಪ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯ ಮಾಹಿತಿ ಸಹಿತ ಓಮ್ನಿ ಕಾರಿನ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಫೆ.6ರಂದು ವಿಟ್ಲ-ಸಾಲೆತ್ತೂರು ರಸ್ತೆಯಲ್ಲಿ ಓಮ್ನಿ ಕಾರನ್ನು ಕಂಡ ಸಾರ್ವಜನಿಕರು ಬೆನ್ನಟ್ಟಿದ್ದು, ಆದರೆ ಕಾರು ಸಾರ್ವಜನಿಕರ ಕಣ್ತಪ್ಪಿಸಿ ಹೋಗಿದೆ. ಹುಡುಕಾಟ ಮುಂದುವರಿಸಿದಾಗ, ತಾಮರಾಜೆ ಎಂಬಲ್ಲಿ ಮನೆಯೊಂದರ ಅಂಗಳದಲ್ಲಿ ಕಾರು ಕಂಡುಬಂದಿದ್ದು, ಬೀಡಿ ಗುತ್ತಿಗೆದಾರ ಇಸ್ಮಾಯಿಲ್ ಮಾಲಿಕತ್ವದ ಕಾರು ಎಂದು ತಿಳಿದು ಬಂದಿದೆ. ಸಾರ್ವಜನಿಕರು ಮಾಹಿತಿಯ ಮೇರೆಗೆ ತಕ್ಷಣ ಪೊಲೀಸರು ವಾಹನವನ್ನು ಪರಿಶೀಲನೆ ನಡೆಸಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಕಾರ್ಕಳ: ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸ್ಪೋಟಕ ಬಳಸಿ ಕಲ್ಲು ಬಂಡೆಗಳನ್ನು ಒಡೆದಿರುವ ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಕ್ಕುಂದೂರು ಗ್ರಾಮ ಅಯ್ಯಪ್ಪ ನಗರ ನಿವಾಸಿ ಟಿ. ರವಿಚಂದ್ರ (55) ಹಾಗೂ ಆತನ ಮಗ ಪವನ್ ಕುಮಾರ್ (31) ಬಂಧಿತರು. ಇವರು ಜ.21ರಂದು ಅಕ್ರಮವಾಗಿ ಯಾವುದೇ ಪರವಾನಿಗೆ ಹೊಂದದೇ ಸ್ಪೋಟಕ ಬಳಸಿ ಕಲ್ಲುಗಳನ್ನು ಸ್ಫೋಟಿಸಿದ್ದರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯನ್ನು ಕೈಗೊಂಡ ವೇಳೆ ಕಾರ್ಕಳ ನಗರ ಪೊಲೀಸ್ ಠಾಣಾ ಪಿಎಸ್‌ಐ ಮುರುಳೀಧರ ನಾಯ್ಕ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.










