Author: main-admin

ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ್ ಅವರಿಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ಈ ನಿರ್ಬಂಧ ಆದೇಶ ಜಾರಿಗೊಳಿಸಲಾಗಿದ್ದು, ಆಗಸ್ಟ್ 14, 2026ರಿಂದ ನವೆಂಬರ್ 13, 2026ರವರೆಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಪುನೀತ್ ಅತ್ತಾವರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಬಂಧ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಉಡುಪಿ ಪೊಲೀಸರು ಪುನೀತ್ ಅತ್ತಾವರ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

Read More

ಉಡುಪಿ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರ್ಮಾಳ್‌ ತೆಂಕ ಪಂಚಾಯತ್ ಕಛೇರಿ ಬಳಿಯ ನಿವಾಸಿಗಳಾದ ಚಿರಾಗ್ ಪೂಜಾರಿ(26) ಹಾಗೂ ಮೊಹಮ್ಮದ್ ಇರ್ಷಾದ್(43) ಬಂಧಿತ ಆರೋಪಿಗಳು.ಈ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸಿದಾಗ ಚಿರಾಗ್ ಪೂಜಾರಿ ಹಾಗೂ ಮೊಹಮ್ಮದ್ ಇರ್ಷಾದ್ ಎಂಬವರು ಕೃತ್ಯ ನಡೆಸಲು ಹಣ ವರ್ಗಾವಣೆ ಮಾಡಲು ಸಹಾಯ ಮಾಡಿರುವುದು ಕಂಡುಬಂದಿದೆ. ಅದರಂತೆ ಇವರಿಬ್ಬರನ್ನು ಆ.12ರಂದು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ.

Read More

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದಲ್ಲಿ ಐವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50) ಅವರು ಕೆಲಸದ ನಿಮಿತ್ತ ಪರಿಚಯಸ್ಥರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳನ್ನು ಕಾರಿನಲ್ಲಿ ಕರೆದುಕೊಂಡು ಹಾಸನದತ್ತ ತೆರಳುತ್ತಿದ್ದರು. ಈ ವೇಳೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕೊಕ್ಕಡ ಕಾಪಿನಬಾಗಿಲು ಬಳಿ ಕೆಲವರು ಕಾರನ್ನು ತಡೆದು, ಬಾಲಕಿಯ ಕುರಿತು ವಿಚಾರಿಸಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಈ ದೂರಿನ ಆಧಾರದ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಧನುಷ್ (23), ದಿನೇಶ್ (45), ಪೂರ್ಣಕ್ಷ ಬಿ. (40), ಸೂರಜ್ (25) ಹಾಗೂ ರಂಜಿತ್ ಬಂಡಾರಿ (29) ಎಂಬ ಐವರನ್ನು ವಶಕ್ಕೆ ಪಡೆದಿದ್ದಾರೆ. ಪ್ರತಿದೂರು ದಾಖಲು ಇದೇ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ತಾಯಿ ಕೂಡ ಪ್ರತಿದೂರು ನೀಡಿದ್ದಾರೆ. ಶೈಕ್ ಮುಕ್ತಾರ್ (52) ಎಂಬಾತ ತನ್ನ ಮಗಳನ್ನು…

Read More

ಮಂಗಳೂರು ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿಮೊಗರು ಪ್ರದೇಶದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ 26 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ. 4 ರಂದು ಮನೆಯವರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿಗೆ ಅಳವಡಿಸಿದ್ದ ಬೀಗವನ್ನು ಆಯುಧದಿಂದ ಮುರಿದು ಒಳನುಗ್ಗಿ, ಕಪಾಟಿನಲ್ಲಿದ್ದ 14 ಗ್ರಾಂ ಚಿನ್ನದ ಸರ, ತಲಾ 2 ಗ್ರಾಂ ತೂಕದ ಎರಡು ಉಂಗುರಗಳು ಹಾಗೂ ₹25,000 ನಗದು ಹಣವನ್ನು ಕಳವು ಮಾಡಿದ್ದರು. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ. 106/2026, ಕಲಂ 305(a), 331(3) ಬಿ.ಎನ್.ಎಸ್. ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು. ತನಿಖೆ ಮುಂದುವರಿದ ಸಂದರ್ಭದಲ್ಲಿ ಆ. 11ರಂದು ನಗರದ ತಲಪಾಡಿ ಬಸ್‌ಸ್ಟ್ಯಾಂಡ್ ಬಳಿ ಆರೋಪಿ ಇರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಸಮಧನ ಸಕಹರಿ ನರಳೆ…

Read More

ಸುರತ್ಕಲ್ ಮಧ್ಯ ಕೊಡಿಪಾಡಿಯ ಕೋರ್ದಬ್ಬು ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು ಮಾಡಿದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಮೂಲದ ಸುಖೇಶ್ ನಾಯ್ಕ್ (40) ಬಂಧಿತ ಆರೋಪಿ. ಆ.5ರಂದು ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಕಬ್ಬಿಣದ ಆಯುಧ ಬಳಸಿ ದೈವಸ್ಥಾನದ ಬಾಗಿಲು ಹಾಗೂ ಕಿಟಕಿಯನ್ನು ಮುರಿದು ಒಳನುಗ್ಗಿದ ಆರೋಪಿ, ಕಾಣಿಕೆ ಹುಂಡಿಯನ್ನು ಕಳವು ಮಾಡಿದ್ದ. ಹುಂಡಿಯಲ್ಲಿದ್ದ ಸುಮಾರು 15 ಸಾವಿರ ನಗದು ಕಳವಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಸುರತ್ಕಲ್ ಪೊಲೀಸರು ತನಿಖೆ ಆರಂಭಿಸಿದ್ದರು. ಖಚಿತ ಮಾಹಿತಿ ಆಧರಿಸಿ ಆ.10ರಂದು ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಉಡುಪಿ ಮೂಲದ ಸುಖೇಶ್ ನಾಯ್ಕ್ (40) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ದೈವಸ್ಥಾನದಲ್ಲಿ ಕಳವು ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಸುಖೇಶ್ ನಾಯ್ಕ್ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ಪ್ರಕರಣಗಳು ದಾಖಲಾಗಿದೆ. ಈ ಪೈಕಿ ಒಂದು ಪ್ರಕರಣದಲ್ಲಿ ಆತ ಶಿಕ್ಷೆಗೊಳಗಾಗಿದ್ದಾನೆ…

Read More

ಕಾರ್ಕಳ : ಲಾಭಾಂಶದ ಆಸೆಗೆ ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 32 ಲಕ್ಷ ರೂ. ಕಳೆದುಕೊಂಡ ಘಟನೆ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜು. 17ರಂದು ಲಕ್ಷ್ಮಣ್ ಎಂಬವರಿಗೆ ಫೇಸ್ ಬುಕ್‌ನಲ್ಲಿ ಒಂದು ವೀಡಿಯೋ ಬಂದಿದ್ದು ಅದರಲ್ಲಿ JB (Julius Baer VIP Group) ಮತ್ತು 5paisa ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಡಬಲ್ ಲಾಭಾಂಶ ಕೊಡುವುದಾಗಿ ಇತ್ತು. ಅದರಲ್ಲಿದ್ದ ಲಿಂಕನ್ನು ಲಕ್ಷ್ಮಣ್ ಅವರು ಕ್ಲಿಕ್ ಮಾಡಿದಾಗ JB (Julius Baer VIP Group) ಮತ್ತು 5paisa ಎಂಬ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಿರುತ್ತಾರೆ. ವ್ಯಾಟ್ಸಪ್ ಗ್ರೂಪ್‌ನಲ್ಲಿ ಅಪರಿಚಿತರು ಹೆಚ್ಚಿನ ಲಾಭಾಂಶ ಮಾಡುವ ಷೇರು ಮತ್ತು IPOಗಳಲ್ಲಿ ಹೂಡಿಕೆ ಮಾಡಬೇಕಾಗಿ ತಿಳಿಸಿದಂತೆ ಲಕ್ಷ್ಮಣ್ ಅವರು ಜು. 17ರಿಂದ ಆ. 4ರವರೆಗೆ ಹಂತ ಹಂತವಾಗಿ ಒಟ್ಟು 32,68,000 ರೂ. ಹಣವನ್ನು ವರ್ಗಾಯಿಸಿದ್ದಾರೆ. ಆದರೆ ಅಪರಿಚಿತ ವ್ಯಕ್ತಿಯು ಈ ತನಕ ಹೂಡಿಕೆ ಮಾಡಿದ ಹಣವನ್ನಾಗಲಿ ಅಥವಾ ಲಾಭಾಂಶವನ್ನು ನೀಡದೇ ಮೋಸ…

Read More

ಮಂಗಳೂರು: ಮಹಿಳೆಯೊಬ್ಬರಿಂದ ಬಂಗಾರದ ಸರ ಕಸಿದುಕೊಂಡು ಪರಾರಿಯಾಗಿದ್ದ ಪ್ರಕರಣದಲ್ಲಿ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ವಿಶೇಷ ಪೊಲೀಸ್ ತಂಡ ವಿಜಯಪುರದಲ್ಲಿ ಬಂಧಿಸಿದೆ.ಜೂನ್ 14ರಂದು ಸೂಟರ್‌ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ಮಹಿಳೆಯೊಬ್ಬರ ಬಂಗಾರದ ಸರವನ್ನು ಕಸಿದುಕೊಂಡು ಮೋಟಾರ್‌ಸೈಕಲ್‌ನಲ್ಲಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಜೂನ್ 26ರಂದು ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಪ್ರಮುಖ ಆರೋಪಿ ಬಾಗಲಕೋಟೆ ನಿವಾಸಿ ಅಲ್ತಾಫ್ ಹುಸೈನ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಅವರನ್ನು ತಳ್ಳಿ ಪೊಲೀಸರ ವಶದಿಂದ ಪರಾರಿಯಾಗಿದ್ದನು.ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉತ್ತರ ಪ್ರದೇಶ ಮೂಲದ ರವಿ ಬೌರಾ ಹಾಗೂ ಮೊಹಮ್ಮದ್ ಸಾಹೀಲ್ ಸಿದ್ದೀಖಿ ಅಲಿಯಾಸ್ ಮೊಹಮ್ಮದ್ ಸಾಹಿಲ್ ಎಂಬ ಆರೋಪಿಗಳನ್ನು ಬಂಧಿಸಿ,…

Read More

ಮಂಗಳೂರು: ದೈವಸ್ಥಾನದ ಬಾಗಿಲು ಹಾಗೂ ಕಿಟಕಿಯನ್ನು ಮುರಿದು ಒಳನುಗ್ಗಿ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು ₹15 ಸಾವಿರ ನಗದು ಕಳವು ಮಾಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 5ರಂದು ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸುರತ್ಕಲ್ ಮಧ್ಯ ಕೊಡಿಪಾಡಿಯಲ್ಲಿರುವ ಕೋರ್ದಗಬ್ಬು ದೈವಸ್ಥಾನಕ್ಕೆ ನುಗ್ಗಿದ ಕಳ್ಳ, ಕಬ್ಬಿಣದ ಆಯುಧ ಬಳಸಿ ಬಾಗಿಲು ಮತ್ತು ಕಿಟಕಿಯನ್ನು ಮುರಿದು ಕಾಣಿಕೆ ಹುಂಡಿಯನ್ನು ಕಳವು ಮಾಡಿಕೊಂಡು ಹೋಗಿದ್ದನು. ಹುಂಡಿಯಲ್ಲಿದ್ದ ಸುಮಾರು ₹15 ಸಾವಿರ ನಗದು ಕಳವಾಗಿತ್ತು.ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದರು. ಆಗಸ್ಟ್ 10ರಂದು ಖಚಿತ ಮಾಹಿತಿಯ ಮೇರೆಗೆ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಉಡುಪಿ ತಾಲೂಕಿನ ಕುಕ್ಕಿಕಟ್ಟೆ ನಿವಾಸಿ ಸುಖೇಶ್ ನಾಯ್ಕ್ (40) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯವೆಸಗಿರುವುದನ್ನು ಒಪ್ಪಿಕೊಂಡಿದ್ದಾನೆ.ಆರೋಪಿಯನ್ನು ಆಗಸ್ಟ್ 11ರಂದು ಮಂಗಳೂರು ನಗರದ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ತನಿಖೆಯಲ್ಲಿ ಆರೋಪಿಯ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ…

Read More

ಮೂಡುಬಿದಿರೆ: ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಪತಿ, ಪತ್ನಿ ಹಾಗೂ ಮಗನಿಗೆ ಸುಟ್ಟ ಗಾಯಗಳಾಗಿರುವ ಘಟನೆ ಆ. 11 ರಂದು ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಿಜಾರ್ ಬಳಿ ನಡೆದಿದೆ. ಶಿವರಾಮ (31) ಅವರ ಪತ್ನಿ ಗಂಗಾ (25) ಹಾಗೂ ಅವರ ಮಗ ಆದರ್ಶ್ (6) ಎಂಬುವವರಿಗೆ ಸುಟ್ಟ ಗಾಯಗಳಾಗಿರುತ್ತವೆ. ಮಂಗಳವಾರ ಬೆಳಗ್ಗೆ ಸುಮಾರು 6:30 ಗಂಟೆಗೆ ಈ ಘಟನೆ ಸಂಭವಿಸಿದೆ. ಪರಿಣಾಮ ಮನೆಯಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.ಶಿವರಾಮ ಅವರು ಪತ್ನಿ ಹಾಗೂ ಮಗನೊಂದಿಗೆ ಮಿಜಾರು ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರು ಆಳ್ವಾಸ್ ಕಾಲೇಜಿನಲ್ಲಿ ವಾಚ್‌ಮ್ಯಾನ್ ಆಗಿ ಕೆಲಸ ಮಾಡಿಕೊಂಡಿದ್ದರು. ಘಟನೆಯಲ್ಲಿ ಶಿವರಾಮ ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿರುತ್ತವೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಮಂಗಳೂರು : ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಾಗಿ ಗುತ್ತಿಗೆದಾರರೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 6ನೇ ಬ್ಲಾಕ್‌ನಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಕೃಷ್ಣಾಪುರ ಚಕ್ರವರ್ತಿ ಕ್ರೀಡಾಂಗಣ ಸಮೀಪದ ನಿವಾಸಿ ಭಾಸ್ಕರ (ಶೀಟ್ ಮೇಲ್ಛಾವಣಿ ನಿರ್ಮಾಣ ಗುತ್ತಿಗೆದಾರ) ಮೃತ ದುರ್ದೈವಿ. ಕೃಷ್ಣಾಪುರ 6ನೇ ಬ್ಲಾಕ್‌ನಲ್ಲಿರುವ ವಸತಿ ಸಮುಚ್ಚಯವೊಂದರ ತಗುಡು ಶೀಟ್ ಮೇಲ್ಛಾವಣಿ ನಿರ್ಮಾಣ ಕಾರ್ಯಕ್ಕಾಗಿ ಭಾಸ್ಕರ ಅವರು ಕಬ್ಬಿಣದ ರಾಡ್ ಮೂಲಕ ಅಳತೆ ತೆಗದುಕೊಳ್ಳುತ್ತಿದ್ದರು. ಈ ವೇಳೆ ಕಬ್ಬಿಣದ ರಾಡ್ ಅನ್ನು ಕಂಕುಳಲ್ಲಿಟ್ಟುಕೊಂಡು ತಿರುಗುವ ಸಂದರ್ಭದಲ್ಲಿ, ಕಟ್ಟಡದ ಪಕ್ಕದಲ್ಲೇ ಹಾದುಹೋಗಿದ್ದ ಹೈಟೆನ್ಷನ್ ವಿದ್ಯುತ್ ತಂತಿಗೆ ರಾಡ್ ಸ್ಪರ್ಶಿಸಿದೆ. ಪರಿಣಾಮ ತೀವ್ರ ಪ್ರಮಾಣದ ವಿದ್ಯುತ್ ಪ್ರವಾಹ ಹರಿದು ಭಾಸ್ಕರ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಭಾಸ್ಕರ ಅವರ ಪುತ್ರ ನೀಡಿದ ದೂರಿನನ್ವಯ ಸುರತ್ಕಲ್ ಪೊಲೀಸ್…

Read More