ಸುರತ್ಕಲ್ : ಕಡಲಿನಲ್ಲಿ ಎಂಜಿನ್ ವೈಫಲ್ಯಕ್ಕೀಡಾಗಿ ಅಪಾಯಕ್ಕೆ ಸಿಲುಕಿದ್ದ ಕಾರವಾರ ಮೂಲದ ವ್ಯಕ್ತಿಗೆ ಸೇರಿದ್ದ ಮೀನುಗಾರಿಕೆ ದೋಣಿಯನ್ನು ಪಣಂಬೂರು ಕೇಂದ್ರೀಯ ಕೋಸ್ಟ್ ಗಾರ್ಡ್ ಕಣ್ಗಾವಲಿನಲ್ಲಿರುವ ಸಾವಿತ್ರಿಬಾಯಿ ಪುಲೆ ನೌಕೆ ಮಂಗಳವಾರ ಪತ್ತೆ ಹಚ್ಚಿ ಮೀನುಗಾರರ ಸಹಿತ ದೋಣಿಯನ್ನು ರಕ್ಷಿಸಿದೆ. ಏಪ್ರಿಲ್ 14ರಂದು ತೆರಳಿದ್ದ ಆಳ ಸಮುದ್ರ ಮೀನುಗಾರಿಕೆಗೆ ದೋಣಿ ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿಕೊಂಡಿತ್ತು. ದೋಣಿಯ ಸಿಬ್ಬಂದಿ ಕರೆ ಮಾಡಿ ನೆರವನ್ನು ಕೋರಿದ ಹಿನ್ನೆಲೆಯಲ್ಲಿ ಕಾರವಾರ ಜಿಲ್ಲಾ ಮೀನುಗಾರಿಕೆ ಇಲಾಖೆಯು ನೆರವಿಗೆ ಧಾವಿಸುವಂತೆ ಕೋಸ್ಟ್ ಗಾರ್ಡ್ ಗೆ ಸೂಚಿಸಿತ್ತು. ಕಾರ್ಯಾಚರಣೆಗಿಳಿದ ಕೋಸ್ಟ್ ಗಾರ್ಡ್ ಸಿಬ್ಬಂದಿ ದೋಣಿಯನ್ನು ತಾಂತ್ರಿಕ ಸಹಾಯವನ್ನು ಒದಗಿಸಿ ಹಡಗನ್ನು ಸುರಕ್ಷಿತವಾಗಿ ಕಾರವಾರ ಬಂದರಿಗೆ ಎಳೆದು ತಂದು ಮಾಲಕರಿಗೆ ಹಸ್ತಾಂತರಿಸಿದ್ದಾರೆ.
Author: main-admin
ಮಂಗಳೂರು: ದಂತವೈದ್ಯಕೀಯ ಪದವಿ ಪೂರೈಸಿ, ಮಂಗಳವಾರದಂದೇ ಕೆಲಸಕ್ಕೆ ಹಾಜರಾಗಬೇಕಿದ್ದ ಬಿಡಿಎಸ್ ಪದವೀಧರೆ ಮಂಗಳೂರಿನ ಪಾಂಡೇಶ್ವರದಲ್ಲಿರುವ ಪಿಜಿಯಲ್ಲಿ ಅಸಹಜ ರೀತಿಯಲ್ಲಿ ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ನರಿಂಗಾನ ನಿವಾಸಿ, ದಂತ ಬಿಡಿಎಸ್ ಪದವಿಧರೆ ಸ್ವಾತಿ ಶೆಟ್ಟಿ (24) ಮೃತಪಟ್ಟ ದುರ್ದೈವಿ. ಎ.ಜೆ. ಆಸ್ಪತ್ರೆಯಲ್ಲಿ ಬಿಡಿಎಸ್ ಪದವಿ ಪೂರೈಸಿದ್ದ ಸ್ವಾತಿ ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ಎ.16ರಂದು ಕೆಲಸಕ್ಕೆ ಹಾಜರಾಗಬೇಕಿತ್ತು. ನಿನ್ನೆಯಷ್ಟೇ ತಾಯಿಯೊಂದಿಗೆ ಬಂದು ಪಾಂಡೇಶ್ವರ ಕ್ಲಿನಿಕ್ ನಲ್ಲಿ ಕೆಲಸದ ಬಗ್ಗೆ ಮಾತನಾಡಿ, ಅಲ್ಲಿಯೇ ಪಿಜಿಯಲ್ಲಿ ಉಳಿದುಕೊಂಡಿದ್ದರು. ರಾತ್ರಿ ತಾಯಿಯೊಂದಿಗೆ ಮೊಬೈಲ್ ನಲ್ಲಿ ಮಾತನಾಡಿದ್ದ ಸ್ವಾತಿ ಶೆಟ್ಟಿ, ವಿಪರೀತ ತಲೆನೋವು ಎಂದು ಹೇಳಿದ್ದರು. ಬಳಿಕ ನಾಳೆ ಮಾತನಾಡುತ್ತೇನೆ ಎಂದು ಹೇಳಿ ಕರೆ ಕಟ್ ಮಾಡಿದ್ದರು. ಮಲಗಿದ್ದ ಸ್ವಾತಿಯ ದೇಹ ಬೆಳಗ್ಗೆ ತಣ್ಣಗಾಗಿದ್ದನ್ನು ನೋಡಿ ಪಿಜಿಯಲ್ಲಿದ್ದ ಇತರರು ಪಿಜಿಯ ಸೂಪರ್ ವೈಸರ್ ಗಮನಕ್ಕೆ ತಂದಿದ್ದಾರೆ. ತಕ್ಷಣ ಆಕೆಯನ್ನು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆಕೆ ಮೃತಪಟ್ಟಿದ್ದಾಳದು ವೈದ್ಯರು ತಿಳಿಸಿದ್ದರು. ಸ್ವಾತಿ ಶೆಟ್ಟಿ ಬಾಯಲ್ಲಿ ನೊರೆ ಬಂದಿತ್ತು ಎಂದು…
ಸುಳ್ಯ: ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಡಿರುವ ಘಟನೆ ಸುಳ್ಯ ಗಾಂಧಿನಗರ ಮಸೀದಿಯ ಮುಂಭಾಗದಲ್ಲಿ ನಡೆದಿದೆ. ಗಾಂಧಿನಗರ ಪೆಟ್ರೋಲ್ ಬಂಕ್ ಮಾಲಕ ಮುಜೀಬ್ ರವರು ಬೆಳಗ್ಗೆ 5ರ ಸುಮಾರಿಗೆ ಮಸೀದಿಗೆ ಕಾರಿನಲ್ಲಿ ಬಂದಿದ್ದರು. ಕಾರನ್ನು ಮಸೀದಿಯ ಎದುರಿನ ರಸ್ತೆಯ ಇನ್ನೊಂದು ಬದಿಯಲ್ಲಿ ಗಾಂಧಿನಗರ ಕಡೆಗೆ ಮುಖ ಮಾಡಿ ನಿಲ್ಲಿಸಿದ್ದರು. ಸುಮಾರು 5.30ರ ವೇಳೆಗೆ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಹಿಂಬದಿಗೆ ಢಿಕ್ಕಿ ಹೊಡೆಯಿತು. ಢಿಕ್ಕಿಯಾದ ರಭಸಕ್ಕೆ ಕಾರು ಒಂದು ಸುತ್ತು ತಿರುಗಿ ಮತ್ತೆ ಸುಳ್ಯದ ಕಡೆ ಮುಖ ಮಾಡಿ ನಿಂತಿತು. ಈ ವೇಳೆ ಅಲ್ಲೆ ಇದ್ದ ಬೈಕ್ ಗೆ ಕಾರು ತಾಗಿತೆನ್ನಲಾಗಿದೆ. ಕಾರಿನ ಹಿಂಬದಿ ಸಂಪೂರ್ಣ ಜಖಂ ಗೊಂಡಿದೆ. ವಿಷಯ ತಿಳಿದು ಪೋಲೀಸರು ಸ್ಥಳಕ್ಕೆ ಆಗಮಿಸಿದರು.
ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತಿದ್ದ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಶಿಕ್ಷಕ ವಿರಾಜ್ ಜೈನ್ ವಿರುದ್ಧ ಲೈಂಗಿಕ ಕಿರುಕುಳ ನಿಡಿರುವ ಗಂಭೀರ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿನಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಾಳೆ. ಶಿಕ್ಷಕನ ಕಾಟಕ್ಕೆ ಭಯಗೊಂಡ ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಹಠ ಹಿಡಿದಿದ್ದಾಳೆ ಈ ವೇಳೆ ಪೋಷಕರು ವಿಚಾರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಶಿಕ್ಷಕ ವಿರಾಜ್ ಜೈನ್ ಕಳೆದ ಒಂದು ವರ್ಷದಿಂದ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ತಿಳಿಸಿದ್ದಾಳೆ. ಶಿಕ್ಷಕನ ವಿರುದ್ಧ ಪೋಷಕರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಶಿಕ್ಷಕ ವಿರಾಜ್ ಜೈನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬೆಂಗಳೂರು: ಹಿರಿಯ ನಟ ದ್ವಾರಕೀಶ್ (81) ವಿಧೀವಶರಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ. ದ್ವಾರಕೀಶ್ 1942ರ ಆಗಸ್ಟ್ 19ರಂದು ಜನಿಸಿದರು. ಅವರು ಮೈಸೂರಿನ ಇಟ್ಟಿಗೆಗೂಡಿನಲ್ಲಿ ಬೆಳೆದರು. ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಶಾರದಾ ವಿಲಾಸ್ ಮತ್ತು ಬನುಮಯ್ಯ ಅವರ ಶಾಲೆಯಲ್ಲಿ ಪಡೆದರು ಮತ್ತು ಅವರು ಸಿಪಿಸಿ ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಪಡೆದರುಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ದ್ವಾರಕೀಶ್ ಮತ್ತು ಅವರ ಸಹೋದರ ಮೈಸೂರಿನ ಗಾಂಧಿ ಚೌಕದಲ್ಲಿ “ಭಾರತ್ ಆಟೋ ಸ್ಪೇರ್ಸ್” ಎಂಬ ಆಟೋಮೋಟಿವ್ ಬಿಡಿಭಾಗಗಳ ವ್ಯವಹಾರವನ್ನು ಪ್ರಾರಂಭಿಸಿದರು. ಅವರು ನಟನೆಯತ್ತ ಬಲವಾಗಿ ಆಕರ್ಷಿತರಾದರು ಮತ್ತು ಆಗಾಗ್ಗೆ ತಮ್ಮ ಸೋದರಮಾವ, ಪ್ರಸಿದ್ಧ ಚಲನಚಿತ್ರ ನಿರ್ದೇಶಕ ಹುಣಸೂರು ಕೃಷ್ಣಮೂರ್ತಿ ಅವರನ್ನು ಚಲನಚಿತ್ರಗಳಲ್ಲಿ ನಟಿಸಲು ಅವಕಾಶ ನೀಡುವಂತೆ ಕೇಳಿಕೊಳ್ಳುತ್ತಿದ್ದರು ಎನ್ನಲಾಗಿದೆ. 1963 ರಲ್ಲಿ, ಅವರು ವ್ಯವಹಾರವನ್ನು ತೊರೆದು ಚಲನಚಿತ್ರಗಳಲ್ಲಿ ನಟಿಸಲು ನಿರ್ಧರಿಸಿದರು.
ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತ್ಯು.ಸ್ವಸ್ತಿ ಶೆಟ್ಟಿ ಅವರು ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್ ನಲ್ಲಿ ನ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು.ಸ್ವಸ್ತಿ ಅವರು ತ್ರೋಬಾಲ್ ಆಟಗಾರ್ತಿಯಾಗಿದ್ದು, ಉತ್ತಮ ನೃತ್ಯಪಟುವೂ ಆಗಿದ್ದರು. ತಂದೆ ಸತೀಶ್ ಶೆಟ್ಟಿ ಗೋವಾದಲ್ಲಿ ಉದ್ಯೋಗದಲ್ಲಿದ್ದು ತಾಯಿ ಸರಿತಾ ಶೆಟ್ಟಿ ಶಿರ್ತಾಡಿ ನವಮೈತ್ರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉದ್ಯೋಗಿಯಾಗಿದ್ದಾರೆ. ಮೂಲತಃ ವಾಲ್ಪಾಡಿಯವರಾದ ಇವರು ಸದ್ಯ ಮೂಡುಬಿದಿರೆಯಲ್ಲಿ ವಾಸಿಸುತ್ತಿದ್ದಾರೆ.
ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದೆ. ಗಾಯಾಳು ಸ್ಕೂಟರ್ ಸವಾರನನ್ನು ಸಫ್ಘಾನ್ ಎಂದು ಗುರುತಿಸಲಾಗಿದೆ. ಸಫ್ಘಾನ್ ಸ್ಕೂಟರಿನಲ್ಲಿ ಸಹಸವಾರನಾಗಿ ತನ್ನ ಸ್ನೇಹಿತ ಮುಝಮಿಲ್ ಎಂಬಾತನನ್ನು ಕುಳ್ಳಿರಿಸಿಕೊಂಡು ತೆರಳುತ್ತಿದ್ದಾಗ ಮಾರಿಪಳ್ಳ ಎಂಬಲ್ಲಿ ಅಬ್ದುಲ್ ಲತೀಫ್ ಎಂಬವರು ಚಲಾಯಿಸಿಕೊಂಡು ಬಂದ ಅಟೋ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಿಂದ ಸ್ಕೂಟರ್ ಸಮೇತ ಸವಾರರು ರಸ್ತೆಗೆ ಬಿದ್ದಿದ್ದು, ಸವಾರ ಸಫ್ಘಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಸಫ್ಘಾನ್ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಯುನಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸಹಸವಾರ ಮುಝಮಿಲ್ ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು:ದ.ಕ. ಲೋಕಸಭಾ ಕ್ಷೇತ್ರದಲ್ಲಿ 6,053 ಹಿರಿಯ ನಾಗರಿಕರು ಹಾಗೂ 1,957 ವಿಶೇಷ ಚೇತನರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ದ.ಕ. ಜಿಲ್ಲಾಧಿಕಾರಿ ಮುಟ್ಟೆ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಮಾಹಿತಿ ನೀಡುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಭಾರತೀಯ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯಲ್ಲಿ 85 ವರ್ಷ ಮೇಲ್ಪಟ್ಟ 6,053 ಮತದಾರರಿಗೆ ಹಾಗೂ ಶೇ.40ಕ್ಕಿಂತ ಮೇಲ್ಪಟ್ಟು ಅಂಗವೈಕಲ್ಯ ಹೊಂದಿರುವ 1,957 ಮತದಾರರಿಗೆ ಮನೆಮನೆ ಭೇಟಿ ಮಾಡಿ ಅಂಚೆ ಮತ ಪತ್ರದ ಮೂಲಕ ಮತದಾನ ಸೌಲಭ್ಯ ಒದಗಿಸಿದೆ ಎಂದರು. ಅಂಚೆ ಮತಪತ್ರಗಳ ವಿತರಣೆಗಾಗಿ ಈಗಾಗಲೇ ಪೋಲಿಂಗ್ ಅಧಿಕಾರಿಗಳ ತಂಡ ರಚಿಸಲಾಗಿದ್ದು ಈ ತಂಡಗಳು ಕಾರ್ಯನಿವಹಿಸುವ ಬಗ್ಗೆ ನಿಗದಿಪಡಿಸಲಾದ ದಿನಾಂಕ, ಸಮಯದ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ…
ವಿಟ್ಲ: ಪುಣಚ ಗ್ರಾಮದ ಬರೆಂಜ – ಕುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7ಮಂದಿಗೆ ಗಾಯವಾಗಿದೆ.ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್ ಜಾರಿದ ಹಿನ್ನಲೆಯಲ್ಲಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಕುಸಿದು ಬಿದ್ದಿದೆ.ಸೇತುವೆ ಸಾಮಾಗ್ರಿಯ ನಡುವಿನಲ್ಲಿ ಓರ್ವ ವ್ಯಕ್ತಿ ಸಿಕ್ಕಿ ಹಾಕಿಕೊಂಡಿದ್ದು, ಆರು ಮಂದಿಯನ್ನು ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. . ಸ್ಥಳದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಕಾರ್ಯಾಚರಣೆಯ ಮೂಲಕ ರಕ್ಷಣೆ ಮಾಡಲಾಗಿದೆ.
ಮಂಗಳೂರು: ಪೊಲೀಸರು ಹಿಂಬಾಲಿಸುತ್ತಿದ್ದವೇಳೆ ಕಾರು ಮಗುಚಿ ಬಿದ್ದು ವಿದ್ಯಾರ್ಥಿ ಸಾವಿಗೀಡಾದ ಘಟನೆ ಬಗ್ಗೆ ಹೈಕೋರ್ಟ್ ಗಡಿ ರಾಜ್ಯ ಕೇರಳ ಸರಕಾರದಿಂದ ಸ್ಪಷ್ಟಿಕರಣ ಕೇಳಿದೆ. ಕಳೆದ ವರ್ಷ ಆ.25ರಂದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಂಗಡಿಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿ ಕುಂಬಳೆ ಪೇರಾಲ್ ಕಣ್ಣೂರು ನಿವಾಸಿ (17) ಶಾಲೆಯಲ್ಲಿ ನಡೆದ ಓಣಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ನೇಹಿತರ ಜತೆ ಕಾರಿನಲ್ಲಿಮರಳುತ್ತಿದ್ದರು. ಆಗ ಆ ದಾರಿಯಾಗಿ ಬಂದ ಪೊಲೀಸರು ಯಾವುದೋ ಅನುಮಾನದಿಂದ ಆ ಕಾರನ್ನು ತಮ್ಮ ವಾಹನದಲ್ಲಿ ಹಿಂಬಾಲಿಸಿರುವುದಾಗಿ ಆರೋಪಿಸಲಾಗಿತ್ತು. ಆ ವೇಳೆ ಆ ಕಾರು ಅಪಘಾತಕ್ಕೀಡಾಗಿ ಅದರಲ್ಲಿದ್ದ ಫರ್ಹಾಸ್ ಗಂಭೀರ ಗಾಯಗೊಂಡು ಬಳಿಕ ಮಂಗಳೂರಿನ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವು ಸಂಭವಿಸಿತ್ತು. ಆಸ್ಪತ್ರೆಗೆ ಚಿಕಿತ್ಸೆ ಆ.29ರಂದು ಆ ಘಟನೆಗೆ ಸಂಬಂಧಿಸಿ ಕಾರನ್ನು ಹಿಂಬಾಲಿಸಿದ ಪೊಲೀಸರ ವಿರುದ್ಧ ಇಲಾಖಾ ಮಟ್ಟದ ತನಿಖೆ ನಡೆಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮಾತ್ರವಲ್ಲದೆ, ನಷ್ಟ ಪರಿಹಾರವನ್ನೂ ನೀಡಬೇಕೆಂದು ಕೋರಿ ಮೃತ ಫರ್ಹಾಸ್‌ನ…