ಬ್ರಹ್ಮಾವರ : ಕಾರ್ಮಿಕರಿಬ್ಬರ ನಡುವೆ ಶುರುವಾದ ಜಗಳ ಸಾವಿನಲ್ಲಿ ಅಂತ್ಯವಾಗಿದೆ. ಕಾರ್ಮಿಕರಿಬ್ಬರೂ ಹೊಡೆದಾಡಿಕೊಂಡು ಬಳಿಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆಯೇ ಮೃತಪಟ್ಟಿರುವ ಘಟನೆ ಬ್ರಹ್ಮಾವರದಲ್ಲಿ ಸಂಭವಿಸಿದೆ. ನೆಲ್ಯಾಡಿ ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ ಜಿ.ಎ.ಸಿದ್ದೀಕ್(40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಈ ಬಗ್ಗೆ ಸಿದ್ದಿಕ್ ಅವರ ಪತ್ನಿ ಮೈಮುನ ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿದ್ದೀಕ್ ಮೂಲತಃ ಸಕಲೇಶಪುರ ಆನೆಮಹಲ್ ನಿವಾಸಿ. ಹಲವು ವರ್ಷಗಳಿಂದ ನೆಲ್ಯಾಡಿಯಲ್ಲಿ ದ್ವಿಚಕ್ರ ವಾಹನಗಳ ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದು ಪತ್ನಿ, ಮಕ್ಕಳೊಂದಿಗೆ ಆಲಂಪಾಡಿಯಲ್ಲಿ ವಾಸವಾಗಿದ್ದರು. ಇತ್ತೀಚಿನ ಕೆಲ ಸಮಯದಿಂದ ಮೆಕ್ಯಾನಿಕ್ ವೃತ್ತಿ ಬಿಟ್ಟು ಬೇರೆ ಕೆಲಸ ನಿರ್ವಹಿಸುತ್ತಿದ್ದರು. ಜಿ.ಎ.ಸಿದ್ದೀಕ್ ಹಾಗೂ ನೆಲ್ಯಾಡಿಯ ಪ್ರಶಾಂತ ಎಂಬವರನ್ನು ಬೋಪಣ್ಣ ಎಂಬವರು ಇಂಟರ್‌ಲಾಕ್ ಅಳವಡಿಕೆ ಕೆಲಸಕ್ಕೆಂದು ಬ್ರಹ್ಮಾವರಕ್ಕೆ ಕರೆದೊಯ್ದಿದ್ದರು. ಬ್ರಹ್ಮಾವರದ ಹಾರಾಡಿ ನಿವಾಸಿ ಅರುಣ್ ಆಲ್ಪ್ರೇಡ್ ಎಂಬವರ ಅಂಗಳದಲ್ಲಿ ಬೆಳಗ್ಗೆ ಕೆಲಸ ಮಾಡುತ್ತಿದ್ದಾಗ ಸಿದ್ದಿಕ್ ಸಹ ಕಾರ್ಮಿಕರೊಂದಿಗೆ ಜಗಳ ಮಾಡಿ, ಹೊಡೆದಾಡಿಕೊಂಡು ಸುಸ್ತಾಗಿದ್ದರು. ಬಳಿಕ ಸಹ ಕಾರ್ಮಿಕರು…
Author: main-admin
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ಜಾರಿಯಾದ ದಿನದಿಂದ ಈವರೆಗೆ ಜಿಲ್ಲೆಯಲ್ಲಿ 5,64,80,734 . ರೂ. ಮೌಲ್ಯದ 1,42,160 ಲೀ. ಮದ್ಯ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಇದುವರೆಗೆ ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ 816 ಎಫ್‌ಐಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ನಡೆದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಟ್ಕಳ ಮೂಲದ ಗಿರಿಜಾ (30) ಮೃತ ದುರ್ದೈವಿ. ಆರೋಪಿ ನವೀನ್ ಸದ್ಯ ಪೊಲೀಸರ ವಶದಲ್ಲಿದ್ದಾನೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್ 8 ತಿಂಗಳ ಹಿಂದಷ್ಟೇ ಗಿರಿಜಾ ಜೊತೆ ಮದುವೆಯಾಗಿದ್ದ. ಕೆಲ ದಿನಗಳ ಹಿಂದಷ್ಟೇ ಗಿರಿಜಾಗೆ ಗರ್ಭಪಾತವಾಗಿತ್ತು. ಹೀಗಾಗಿ ಆಕೆ ಸದ್ಯಕ್ಕೆ ಮಗು ಬೇಡ ಎಂದು ಹೇಳಿದ್ದರು. ಈ ವಿಚಾರಕ್ಕೆ ಸದಾ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಏಪ್ರಿಲ್ 12ರಂದು ಈ ಜಗಳ ತಾರಕಕ್ಕೇರಿದಾಗ ನವೀನ್, ಗಿರಿಜಾರನ್ನು ಹತ್ಯೆಗೈದಿದ್ದ. ಈ ಸಂಬಂಧ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಮತ್ತು ಜರಟ್ ಲ್ಯಾಗ್ ಪಬ್ ಮಾಲೀಕ ಸೌಂದರ್ಯ ಜಗದೀಶ್ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣಿನ ಕುಣಿಯಲ್ಲಿ ನೇತಾಡುತ್ತಿದ್ದ ಜಗದೀಶರನ್ನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿತ್ತು. ಆದ್ರೆ ಆಸ್ಪತ್ರೆ ಸೇರಿಸೋ ಮೊದಲೆ ಜಗದೀಶ್ ಉಸಿರು ಚೆಲ್ಲಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಕ್ಲಬ್ ರಸ್ತೆಯಲ್ಲಿರೋ ನಿವಾಸದಲ್ಲಿ ಸೌಂದರ್ಯ ಜಗದೀಶ್ ಸೂಸೈಡ್ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬೇರೆ ಬೇರೆ ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದ ಸೌಂದರ್ಯ ಜಗದೀಶ್ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ರು ಎಂದು ಹೇಳಲಾಗ್ತಿದೆ. ಅಪ್ಪು ಪಪ್ಪು ಸಿನಿಮಾದಲ್ಲಿ ತಮ್ಮ ಮಗನನ್ನೇ ಪರಿಚಯಿಸಿದ್ದ ಸೌಂದರ್ಯ ಜಗದೀಶ್ ರಾಮ್ ಲೀಲಾ, ಸ್ನೇಹಿತರು ಸಿನಿಮಾಗಳನ್ನ ನಿರ್ಮಾಣ ಮಾಡಿದ್ರು. ಇನ್ನೂ ಕಳೆದ ತಿಂಗಳು ಜಗದೀಶ್ ಬಾಡಿಗಾರ್ಡ್ ಸಾವನ್ನಿಪ್ಪಿದ್ರೆ. ಎರಡು ವಾರದ ಹಿಂದಷ್ಟೇ ಜಗದೀಶ್ ಅತ್ತೆ ಸಾವನ್ನಪ್ಪಿದ್ರು. ಸದ್ಯ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ನಗರದ ಬೋಳಾರದಲ್ಲಿರುವ ಸಲೂನ್ ಮಾಲಕ ಎಡ್ವಿನ್ ವಿನಯ್ ಕುಮಾರ್ ಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಬರಿಮಾರು ಗ್ರಾಮ ನಿವಾಸಿ ಆನಂದ ಸಪಲ್ಯ(55) ಬಂಧಿತ ಆರೋಪಿ. ಆನಂದ ಸಪಲ್ಯ ಶನಿವಾರ ಸಂಜೆ ವೇಳೆ ಮದ್ಯಸೇವಿಸಿ ಬೋಳಾರದಲ್ಲಿರುವ ಸಲೂನ್ ಗೆ ಬಂದಿದ್ದಾನೆ. ಈ ವೇಳೆ ಆತ ಸಲೂನ್ ಮಾಲಕನ ಎಡ್ವಿನ್ ವಿನಯ್ ಕುಮಾರ್ ಎದೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಚೂರಿ ಇರಿತದ ಪರಿಣಾಮ ಗಾಯಗೊಂಡ ಎಡ್ವಿನ್ ವಿನಯ್ ಕುಮಾರ್ ಅವರನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಪರಾರಿಯಾಗಿದ್ದ ಆನಂದ ಸಪಲ್ಯನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆ ವೇಳೆ ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ.ಗೂ ಅಧಿಕ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯ ಪತ್ತೆಯಾಗಿದೆ. ಪ್ಲಾಸ್ಟಿಕ್‌ನಲ್ಲಿದ್ದ ತ್ಯಾಜ್ಯ ಅಜೀರ್ಣ ವಾದದ್ದು ಮೊಸಳೆಯ ಸಾವಿಗೆ ಕಾರಣವಾಯಿತೇ ಅಥವಾ ಪ್ಲಾಸ್ಟಿಕ್ ಕಾರಣವಾಯಿತೇ ಎಂಬುದು ಇನ್ನಷ್ಟು ತನಿಖೆಯಿಂದ ಹೊರಬರಬೇಕಿದೆ. ಇದು ಆತಂಕಕಾರಿ ಯಾಗಿದ್ದು, ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ಸೇವನೆಯಿಂದ ಮೊಸಳೆ ಸತ್ತ ಪ್ರಕರಣ ಇದು ಮೊದಲನೆಯದಾಗಿದೆ. ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು ಸೇತುವೆ ಕೆಳಭಾಗದ ಕುಮಾರಧಾರಾ ಹೊಳೆಯ ಕೊಡಿಂಬಾಳ ಗ್ರಾಮದ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಮೊಸಳೆಯ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ವೇಳೆ ತ್ಯಾಜ್ಯ ಪತ್ತೆಅರಣ್ಯ ಇಲಾಖೆಯ ಏನೆಕಲ್ಲು ನರ್ಸರಿ ಪ್ರದೇಶದಲ್ಲಿ ಮೊಸಳೆಯ ಮರಣೋತ್ತರ ಪರೀಕ್ಷೆಯನ್ನು ಕಡಬದ ಪಶುವೈದ್ಯಾಧಿಕಾರಿ ಡಾ| ಅಜಿತ್ ನಡೆಸಿದರು. ಮೊಸಳೆಯ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ಕವರ್‌ನಲ್ಲಿ ತುಂಬಿದ್ದ ಕೋಳಿ ತ್ಯಾಜ್ಯ, ಮಕ್ಕಳಿಗೆ ಬಳಸುವ…
ನವದೆಹಲಿ : ಮಕ್ಕಳಿಗೆ ಕುಡಿಸುವ ಬೋರ್ನ್ ವಿಟಾ ಇನ್ನು ಮುಂದೆ ಹೆಲ್ತ್ ಡ್ರಿಂಕ್ಸ್ ವರ್ಗದಿಂದ ತೆಗೆದು ಹಾಕುವಂತೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಸಲಹೆ ನೀಡಿದೆ. ಪೋರ್ಟಲ್ ಮತ್ತು ಪ್ಲಾಟ್‍ಫಾರ್ಮ್‍ಗಳಲ್ಲಿ ಬೋರ್ನ್‍ವಿಟಾ ಸೇರಿದಂತೆ ಎಲ್ಲಾ ಪಾನೀಯಗಳು ಈ ವರ್ಗದಿಂದ ಕೈಬಿಡುವಂತೆ ಆದೇಶ ನೀಡಲಾಗಿದೆ. ಕಾರಣ ಏನು… ಒಬ್ಬ ಯುಟ್ಯೂಬರ್ ಬೋರ್ನ್ ವೀಟಾದಲ್ಲಿ ಹೆಚ್ಚಿನ ಪ್ರಮಾಣ ಸಕ್ಕರೆ ಅಂಶ ಇರುವ ಬಗ್ಗೆ ವಿಡಿಯೋ ಮಾಡಿದ್ದ, ಅಲ್ಲದೆ ಪ್ರಯೋಗ ಮೂಲಕ ಆತ ಅದನ್ನು ತೋರಿಸಿದ್ದ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ನ್ಯಾಷನಲ್ ಕಮಿಷನ್ ಫಾರ್ ಪ್ರೊಟೆಕ್ಷನ್ ಆಫ್ ಚೈಲ್ಡ್ ರೈಟ್ಸ್‌ನ ತನಿಖೆಯಯಲ್ಲಿ ಬೋರ್ನ್‍ವಿಟಾ ಹೆಚ್ಚಿನ ಸಕ್ಕರೆ ಮಟ್ಟವನ್ನು ಹೊಂದಿದೆ ಎಂದು ತಿಳಿದುಬಂದಿದೆ. ಇದು ಸ್ವೀಕಾರಾರ್ಹ ಮಿತಿಗಳಿಗಿಂತ ಹೆಚ್ಚು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಂಪನಿಗಳು ಸುರಕ್ಷತಾ ಮಾನದಂಡಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಲು ವಿಫಲವಾಗಿವೆ. ಅಲ್ಲದೇ ಆರೋಗ್ಯಕರ ಪಾನೀಯಗಳು ಎಂದು ಬಿಂಬಿಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲು ಎನ್‍ಸಿಪಿಸಿಆರ್, ಭಾರತೀಯ ಆಹಾರ…
ಮಂಗಳೂರು : ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಸಮಯ ಬದಲಾವಣೆ ಆಗಿದೆ. ನಾಳೆ ರಾತ್ರಿ 7.45ಕ್ಕೆ ಲೇಡಿಹಿಲ್ ನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ನಿಂದ ರೋಡ್ ಶೋ ಆರಂಭವಾಗಲಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಸುನಿಲ್ ಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ನಾಳೆ ಸಂಜೆ 7.45 ಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಆರಂಭವಾಗಿ ನವಭಾರತ್ ಸರ್ಕಲ್ ವರೆಗೆ ರೋಡ್ ಶೋವರೆಗೆ ನಡೆಯಲಿದೆ. ವಿಜಯ ಸಂಕಲ್ಪ ರೋಡ್ ಶೋನಲ್ಲಿ ಭಾಗವಹಿಸಲು ಬರುವವರು 6.45 ರಿಂದ 7ರೊಳಗೆ ಬರಬೇಕು ಎಂದು ಹೇಳಿದರು.
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ ವಶಕ್ಕೆ ನೀಡಿ ಆದೇಶಿಸಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಉಗ್ರರನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಇಬ್ಬರು ಉಗ್ರರನ್ನು ಎನ್ಐಎ ಅಧಿಕಾರಿಗಳು ಮಂಡಿವಾಳದ ಎಫ್ಎಸ್ಎಲ್ ಸೆಂಟರ್ ಬಳಿಯಿರುವ ಇಂಟ್ರಾಗೇಷನ್ ಸೆಲ್ನಲ್ಲಿ ವಿಚಾರಣೆ ನಡೆಸಿದರು. ಬಳಿಕ ಬೆಳಿಗ್ಗೆ 10:30 ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಉಗ್ರರನ್ನು ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು 10 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ. ಕಳೆದ ಮಾರ್ಚ್ 1 ರಂದು ಬೆಂಗಳೂರಿನ ಐಟಿ ಕಾರಿಡಾರ್ ಕುಂದಲ ಹಳ್ಳಿ ಕಾಲೋನಿಯಲ್ಲಿರುವ ದಿ ರಾಮೇಶ್ವರ ಕೆಫೆಗೆ ಗ್ರಾಹಕನೆತ ತೆರಳಿ ಟಿಫನ್ ಬಾಕ್ಸ್ ಬ್ಯಾಗ್ ನಲ್ಲಿ ಬಾಂಬ್ ಇಟ್ಟು ಮುಸಾವೀರ್…
ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿಳಿಯೂರು ಗ್ರಾಮದ ಕರ್ವೇಲು ಬಳಿ ಎ.12ರಂದು ನಡೆದಿದೆ. ಕರ್ವೇಲು ಜನತಾ ಕಾಲನಿ ನಿವಾಸಿ ಹಕೀಂ (34) ಚೂರಿ ಇರಿತಕ್ಕೆ ಒಳಗಾಗಿ ಗಾಯಗೊಂಡ ಯುವಕ ಹಕೀಂ ಕರ್ವೇಲು ಜಂಕ್ಷನ್ ಬಳಿ ನಿಂತಿದ್ದ ಸಂದರ್ಭ ಅಲ್ಲಿಗೆ ಕಾರಿನಲ್ಲಿ ಬಂದ ತಂಡವೊಂದು ಚೂರಿಯಿಂದ ಇರಿದು ಪರಾರಿಯಾಗಿದ್ದು,ಗಾಯಗೊಂಡ ಹಕೀಂ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.