ಉಡುಪಿ: ಮೀಶೋದಿಂದ ಕಾಲ್ ಮಾಡುತ್ತಿರುವುದಾಗಿ ತಿಳಿಸಿ ಸಾವಿರಾರು ರೂ. ಹಣ ವರ್ಗಾಯಿಸಿಕೊಂಡು ಮಹಿಳೆಗೆ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಶುಭಾ ಎಂಬವರು ಮೋಸ ಹೋದ ಮಹಿಳೆಯಾಗಿದ್ದಾರೆ. ಎರಡು ವರ್ಷದ ಹಿಂದೆಯೇ ಮೀಶೋದಲ್ಲಿ ವಸ್ತುಗಳನ್ನು ಆರ್ಡರ್ ಮಾಡಿ ತರಿಸುತ್ತಿದ್ದ ಇವರು ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಆರ್ಡರ್ ಮಾಡಿದ್ದರು. ಅದು ತಾನಾಗಿಯೇ ರದ್ದುಗೊಂಡಿತ್ತು. ಆದರೆ ಹಣ ಪಾವತಿಯಾಗಿರಲಿಲ್ಲ. ಆನಂತರ ಅಪರಿಚಿತ ವ್ಯಕ್ತಿಯೋರ್ವ ಕರೆಮಾಡಿ ಮೀಶೋದಿಂದ ಮಾತನಾಡುವಂತೆ ನಿಮ್ಮ ಆರ್ಡರ್ ಹಣವನ್ನು ನಿಮ್ಮ ಖಾತೆಗೆ ವರ್ಗಾಯಿಸುತ್ತೇವೆಂದು ಒಟಿಪಿ ಪಡೆದುಕೊಂಡಿದ್ದಾರೆ. ನಂತರ ಶುಭಾ ಅವರ ಯೂನಿಯನ್ ಬ್ಯಾಂಕ್ ಖಾತೆಯಿಂದ ನಲ್ವತ್ತು ಸಾವಿರದ ಐನೂರು ರೂಪಾಯಿ ವರ್ಗಾಯಿಸಿಕೊಂಡು ಅವರನ್ನು ನಂಬಿಸಿ ವಂಚಿಸಿದ್ದಾನೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಂದು ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಬದ್ಯಾರ್ ಸಮೀಪ ನಡೆದಿದೆ. ಮೃತಪಟ್ಟ ಚಾಲಕನನ್ನು ಮಾಲಾಡಿ ನಿವಾಸಿ ಶಿವಾನಂದ ಪಿ. ಮಾಳವ (33) ಎಂದು ಗುರುತಿಸಲಾಗಿದೆ. ಗುರುವಾಯನಕೆರೆಯಿಂದ ಅಳದಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಶಿವಾನಂದ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಮೃತಪಟ್ಟಿದ್ದರು. ಸಹಪ್ರಯಾಣಿಕ ಶಿವರಾಜ್ ಗಾಯಗೊಂಡಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಠಾಣೆಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಡಿಡಿ ಕೃಷ್ಣವೇಣಿ ಇಲಾಖೆ ತನಿಖೆ ಬಾಕಿ ಇರಿಸಿ ಅಮಾನತುಗೊಳಿಸಿ ಅಧೀನ ಕಾರ್ಯದರ್ಶಿ ಮಂಜುನಾಥ್ ಭಾನುವಾರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುವ ಮೂಲಕ ಕೃಷ್ಣವೇಣಿಯನ್ನು ಸೇವೆಯಿಂದ ಅಮಾನತುಗೊಳಿಸಿ ಮತ್ತು ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಡಿಡಿ ಕೃಷ್ಣವೇಣಿ ಅವರ ಮೇಲೆ 2ನೇ ಬಾರಿ ಲೋಕಾಯುಕ್ತ ದಾಳಿ ನಡೆದಿದ್ದು, ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಈ ವೇಳೆ 12 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿತ್ತು. ಇನ್ನು ಇತ್ತೀಚೆಗೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ವ್ಯಕ್ತಿಯೊಬ್ಬರ ಬಳಿ 50 ಸಾವಿರ ರೂ ಲಂಚ ಸ್ವೀಕರಿಸುವಾಗ ಬಂಧನಕೊಳ್ಳಗಾಗಿದ್ದರು. ಸರ್ಕಾರದ ನಿಯಮಗಳ ಪ್ರಕಾರ 48 ಗಂಟೆಗಳಿಗಿಂತ ಹೆಚ್ಚು ಕಾಲ ಪೊಲೀಸ್ ಕಸ್ಟಡಿಯಲ್ಲಿರುವ ಯಾವುದೇ ಅಧಿಕಾರಿಯನ್ನು ಅಮಾನತುಗೊಳಿಸಲಾಗುತ್ತದೆ. ಆದರೆ, ಕೃಷ್ಣವೇಣಿ 18 ದಿನ ಜೈಲಿನಲ್ಲಿದ್ದರೂ ಈ ನಿಯಮವನ್ನು ಪಾಲನೆ ಆಗಿಲ್ಲ ಎನ್ನಲಾಗಿದ್ದು, ಸಾರ್ವಜನಿಕರ ಟೀಕೆಗೂ ಗುರಿಯಾಗಿತ್ತು. ಜಾಮೀನು…
ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಯುವಕರ ಮೇಲೆ ದಾಳಿಗೆ ಯತ್ನ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿನಾಂಕ 21.06.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ:73/2025 ಕಲಂ: 125 ಬಿ ಎನ್ ಎಸ್ ಪ್ರಕರಣದ ಘಟನೆಗೆ ಸಂಬಂಧಿಸಿದಂತೆ, “ಮುಸ್ಲಿಂ ಯುವ ಬಳಗ” ಎಂಬ ಹೆಸರಿನ ವಾಟ್ಸಾಪ್ ಗ್ರೂಪಿನಲ್ಲಿ Ziyad Ummi ಎಂಬ ಹೆಸರಿನ ವ್ಯಕ್ತಿಯೋರ್ವ “ಸಜಿಪ ದೇರಾಜೆ ರಸ್ತೆಯ ಮಧ್ಯೆ ಯುವಕರಿಬ್ಬರ ಮೇಲೆ ದಾಳಿಗೆ ಯತ್ನ, ಘಟನಾ ಸ್ಥಳದಲ್ಲಿ ಸೇರಿದ ಜನರಿಂದ ಆಕ್ರೋಶ” ಎಂಬುದಾಗಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ ಸಾರ್ವಜನಿಕರಿಗೆ ಭಯ ಬೀತಿಯನ್ನುಂಟು ಮಾಡಿದ ಹಿನ್ನೆಲೆಯಲ್ಲಿ, Ziyad Ummi ಎಂಬ ಹೆಸರಿನಲ್ಲಿ ಸಂದೇಶ ಪ್ರಸಾರ ಮಾಡಿದ ವ್ಯಕ್ತಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ ಕ್ರ ನಂಬ್ರ : 74/2025, ಕಲಂ: 240 BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು. ಸದ್ರಿ ಪ್ರಕರಣಕ್ಕೆ…
ಪಿಎಸ್‌ಐ ನೇಮಕಾತಿ ಹಗರಣದ ನಂತರ ಐದು ವರ್ಷ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ ಒಂದು ಸಾವಿರ ಪಿಎಸ್‌ಐ ಹುದ್ದೆಗಳು ಖಾಲಿ ಇದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭಾನುವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 500 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ನಡೆದಿದ್ದು, ಅವರು ತರಬೇತಿ ಪಡೆಯುತ್ತಿದ್ದಾರೆ.ರಾಜ್ಯದಲ್ಲಿ 8000 ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇವೆ. ಆದ್ಯತೆಯ ಮೇರೆಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಂಗಳೂರು: ಐವತ್ತೆಂಟು ವರ್ಷಗಳಿಗೂ ಮಿಕ್ಕಿ ತೆಂಕು ಮತ್ತು ಬಡಗುತಿಟ್ಟು ಯಕ್ಷಗಾನದಲ್ಲಿ ಸೈ ಎನಿಸಿಕೊಂಡ ಖ್ಯಾತ ಕಲಾವಿದ, ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಹವ್ಯಾಸಿ ಕಲಾವಿದರಾಗಿ ನಾಲ್ಕು ವರ್ಷ, ಕಟೀಲು, ಸುಬ್ರಹ್ಮಣ್ಯ, ಮಂತ್ರಾಲಯ, ಮಂದಾರ್ತಿ ಹೀಗೆ ಅತ್ಯಂತ ಖ್ಯಾತ ಮೇಳಗಳಲ್ಲಿ ಇವರು ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ನವರಾತ್ರಿ ಸಂದರ್ಭ ಕಟೀಲಿನಲ್ಲಿ ಪ್ರತೀ ವರ್ಷ ಬಣ್ಣ ಹಚ್ಚುತ್ತಿದ್ದರು. ಯಕ್ಷಗಾನ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಸಿದ್ಧ ಪ್ರಶಸ್ತಿಗಳು ಸಂದಿವೆ. ಅವರ ಅಂತಿಮ ದರ್ಶನವು ಇಂದು ಮಧ್ಯಾಹ್ನ ಕಿನ್ನಿಗೋಳಿಯ ಅವರ ನಿವಾಸದಲ್ಲಿ ನಡೆಯಲಿದೆ.
ಉಡುಪಿ: ನಗರದಲ್ಲಿ ಅಪ್ರಾಪ್ತ ಬಾಲಕಿಯೋರ್ವಳಿಗೆ ಮೊಬೈಲ್ ನಲ್ಲಿ ಅನುಚಿತ ಸಂದೇಶಗಳನ್ನು ಕಳುಹಿಸಿದ್ದಲ್ಲದೆ ಬಾಲಕಿಗೆ ಕಿರುಕುಳ ನೀಡಿದ ಆರೋಪದಡಿ ತಲೆಮರೆಸಿ ಕೊಂಡಿದ್ದ ಇಬ್ಬರು ಆರೋಪಿಗಳಲ್ಲಿ ಪ್ರಮುಖ ಆರೋಪಿಯನ್ನು ಮಹಿಳಾ ಠಾಣ ಪೊಲೀಸರ ಬಂಧಿಸಿದ್ದಾರೆ. ಬಂಧನವಾದ ಪ್ರಮುಖ ಆರೋಪಿ ಗೌತಮ್ ಅಣ್ಣಯ್ಯ ರಾವ್ ಎಂದು ಗುರುತಿಸಲಾಗಿದೆ. ಗೌತಮ್ ಅಣ್ಣಯ್ಯ ರಾವ್ ನನ್ನು ಉಡುಪಿ ಮಹಿಳಾ ಠಾಣೆಯ ಪೊಲೀಸರು ಮುಂಬೈಯಲ್ಲಿ ಬಾರ್ ಒಂದಕ್ಕೆ ಕುಡಿಯಲು ಬಂದಾಗ ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಹಂಗಳೂರು ಮೂಲದ ಪಾಂಡುರಂಗ ನಾಯ್ಕ ತಲೆಮರೆಸಿ ಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆರೋಪಿಗೆ ಹದಿನೈದು ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇನ್ನೋರ್ವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ ಈ ಬಗ್ಗೆ ಉಡುಪಿ ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ನ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ರಾಜೇಶ್ ವೃತ್ತಿಯಲ್ಲಿ ಗಾಯಕರಾಗಿದ್ದು, ಅರವಿಂದ್ ವಿವೇಕ್ ಎಂಬ ಫೇಸ್ಬುಕ್ ಪೇಜ್ನಲ್ಲಿ ರಾಜೇಶ್ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ರಾಜೇಶ್ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್ಬುಕ್ ಮೂಲಕ ಪರಿಚಯವಾಗಿದ್ದಾಳೆ. ಸೌಜನ್ಯ ಹೆಲ್ಪ್ಲೈನ್ ಹೆಸರಿನಲ್ಲಿ ವಂಚನೆಗೊಳಗಾದವರಿಗೆ ನೆರವು ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಬಗೆಹರಿಸಿದ್ದೇನೆ ಅಂತ ರಾಜೇಶ್ ಅವರಿಗೆ ನಂಬಿಸಿದ್ದಾಳೆ. ಆಗ, ರಾಜೇಶ್ ಅವರು ಬಂಟ್ವಾಳ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಂಧ್ಯಾ ಪವಿತ್ರ ನಾಗರಾಜ್ಗೆ ತಿಳಿಸಿದ್ದಾರೆ. ಆಗ, ಸಂಧ್ಯಾ ಹೈಕೋರ್ಟ್ನಲ್ಲಿ ಕೇಸ್ ಬಗೆಹರಿಸುತ್ತೇನೆ, ಆದರೆ, ಸ್ವಲ್ಪ ಖರ್ಚು ಇದೆ ಎಂದಿದ್ದಾಳೆ. ನಂತರ, ರಾಜೇಶ್ ಅವರಿಂದ ಸಂಧ್ಯಾ…
ಬಂಟ್ವಾಳ: ಸಜಿಪನಡು ಎಂಬಲ್ಲಿ ತಲ್ವಾರ್ ದಾಳಿಯಾಗಿದೆ ಎಂದು ವಾಟ್ಸಾಪ್ ನಲ್ಲಿ ಸುಳ್ಳು ಸುದ್ದಿ ಪ್ರಸಾರವಾದ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಕಳೆದ ವಾರ ಬಂಟ್ವಾಳ ಸಜಿಪನಡು ಎಂಬಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದಲ್ಲಿ, ಘಟನಾ ಸ್ಥಳದ ಸಮೀಪ ಸಿಕ್ಕಿರುವ ಸಿಸಿಟಿವಿ ದೃಶ್ಯಾವಳಿಗಳಿಗೂ ದೂರುದಾರರು ನೀಡಿರುವ ದೂರಿಗೂ ವ್ಯತ್ಯಾಸಗಳು ಕಂಡುಬಂದಿದ್ದು, ಈ ಬಗ್ಗೆ ಪರಿಶೀಲನೆ ಮುಂದುವರಿದಿರುತ್ತದೆ.ಈ ನಡುವೆ, ಇಂದು ರಾತ್ರಿ ಸುಮಾರು 10 ಗಂಟೆ ಸಮಯದಲ್ಲಿ, ದೂರುದಾರರಾದ ಮೊಹಮ್ಮದ್ ಮುಕ್ಬುಲ್ (34) ರವರು ಸಂಬಂಧಿಯೊರ್ವರ ಸ್ಕೂಟರ್ ನಲ್ಲಿ ಸಹಪ್ರಯಾಣಿಕರಾಗಿ ಕುಳಿತು ಬೊಳ್ಯಾರ್ ಕಡೆಯಿಂದ ಮೆಲ್ಕಾರ್ ಕಡೆಗೆ ಸ್ಕೂಟರ್ ತೆರಳುತ್ತಾ, ದೇರಾಜೆ ಬಸ್ ನಿಲ್ದಾಣದ ಬಳಿ ತಲುಪಿದಾಗ, ಅಲ್ಲಿ ಬೊಳ್ಯಾರ್ ಕಡೆಗೆ ಮುಖಮಾಡಿ ನಿಲ್ಲಿಸಿದ್ದ ಸ್ಕೂಟರ್ ನಲ್ಲಿ ಇಬ್ಬರು ಅಪರಿಚಿತರು ಹೆಲ್ಮೆಟ್ ಧರಿಸಿ ಕುಳಿತಿದ್ದು, ಅವರ ಪೈಕಿ ಓರ್ವ ವ್ಯಕ್ತಿ ದೂರುದಾರರು ತೆರಳುತ್ತಿದ್ದ ಸ್ಕೂಟರ್ ಕಡೆಗೆ ಓಡಿ ಬಂದಿರುತ್ತಾನೆ. ಆ ವೇಳೆ ಆತನ ಕೈಯಲ್ಲಿ ತಲವಾರು ಅಥವಾ ಯಾವುದೇ ಮಾರಕಾಯುಧವನ್ನು ದೂರುದಾರರು ನೋಡಿರುವುದಿಲ್ಲ. ವ್ಯಕ್ತಿ…
ಮಂಗಳೂರು : ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ಗಂಭೀರವಾದ ಆರೋಪ ಕೇಳಿ ಬಂದ ಹಿನ್ನೆಲೆ ಇಂದು ಮಂಗಳೂರು ಪಾಲಿಕೆ ಕಚೇರಿಯ ಮೇಲೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಂದಾಯ ಇಂಜಿನಿಯರಿಂಗ್ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಮೇಲು ದಾಳಿ ಮಾಡಿದ್ದಾರೆ. ಹೌದು ಮಂಗಳೂರು ಮಹಾನಗರ ಪಾಲಿಕೆ ಕಚೇರಿಯ ಮೇಲೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಂದಾಯ, ಇಂಜಿನಿಯರಿಂಗ್ ಹಾಗು ಆರೋಗ್ಯ ವಿಭಾಹ ಸೇರಿದಂತೆ ಎಲ್ಲಾ ವಿಭಾಗಗಳ ಮೇಲು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಧಿಕಾರಿಗಳ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಬಿ ಕುಮಾರಚಂದ್ರ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ. ಪಾಲಿಕೆ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.









