Author: main-admin

ಮಂಗಳೂರು: ನಗರ ಹೊರವಲಯದ ಅಡ್ಯಾರ್ ಪದವು ಎಂಬಲ್ಲಿನ ಮನೆಯೊಂದರಲ್ಲಿ ರವಿವಾರ ಸಂಜೆ ಎಸಿ ಸ್ಫೋಟಗೊಂಡು ಅಪಾರ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಫೈಝಲ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಕೃತ್ಯ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ ಮತ್ತು ಮನೆಗೆ ಬೀಗ ಹಾಕಲಾಗಿತ್ತು ಎನ್ನಲಾಗಿದೆ. ಸಂಜೆಯ ವೇಳೆಗೆ ಮನೆಯೊಳಗಿನಿಂದ ಹೊಗೆ ಹೊರಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ತಕ್ಷಣ ಮನೆಯ ಬಾಗಿಲು ಮುರಿದು ಒಳಹೊಕ್ಕಿ ಬೆಂಕಿ ನಂದಿಸಿರುವುದಾಗಿ ತಿಳಿದು ಬಂದಿದೆ. ಫೈಝಲ್ ಅವರು ಬೇರೊಂದು ಮನೆಯಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಈ ಮನೆಯಲ್ಲಿ ಮತ್ತೆ ವಾಸಿಸಲು ಬೇಕಾದ ಸಿದ್ಧತೆ ಮಾಡಿಕೊಂಡಿದ್ದರು. ಅದರಂತೆ ನಾಲೈದು ದಿನದ ಹಿಂದೆ ಎಸಿ ಅಳವಡಿಸಿದ್ದರು ಎನ್ನಲಾಗಿದೆ. ರವಿವಾರ ಸಂಜೆ ಈ ಎಸಿ ಸ್ಪೋಟಗೊಂಡಿದೆ. ಮನೆಯ ಬಾಗಿಲು ಮುಚ್ಚಲ್ಪಟ್ಟ ಕಾರಣ ಹೊಗೆ ಆವರಿಸಿದೆ, ಬೆಂಕಿ ಕಾಣಿಸಿದೆ. ಇದರಿಂದ ಪೀಠೋಪಕರಣಗಳು, ಬಟ್ಟೆಬರೆ, ನಗದು, ಪಾಸ್‌ಪೋರ್ಟ್ ಸಹಿತ ಮನೆಯ ಬೆಲೆ ಬಾಳುವ ಸಾಮಗ್ರಿಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.

Read More

ಕಾರ್ಕಳ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಕೆರೆಕಟ್ಟೆ ಬಳಿ ಇಬ್ಬರು ರೈತರ ಪ್ರಾಣವನ್ನು ಬಲಿ ಪಡೆದಿದ್ದ ಕಾಡು ಆನೆಯನ್ನು ಅರಣ್ಯ ಇಲಾಖೆ ಎರಡು ದಿನಗಳ ವ್ಯಾಪಕ ಕಾರ್ಯಾಚರಣೆಯ ನಂತರ ಕೊನೆಗೂ ಸೆರೆಹಿಡಿಯಲಾಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಭಾಗವತಿ ಪ್ರಕೃತಿ ಶಿಬಿರದ ಬಳಿಯ ಕಾಡಿನಲ್ಲಿ ಒಂಟಿ ಆನೆ ಅಡಗಿತ್ತು. ಮಂಗಳೂರು ಅರಣ್ಯ ವಿಭಾಗ ಮತ್ತು ಕುದುರೆಮುಖ ವನ್ಯಜೀವಿ ವಿಭಾಗದ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಈ ಬೃಹತ್ ಸೆರೆಹಿಡಿಯುವ ಕಾರ್ಯಾಚರಣೆಯನ್ನು ನಡೆಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್, ಕೊಡಗು ಜಿಲ್ಲೆಯ ದುಬಾರೆ ಮತ್ತು ನಾಗರಹೊಳೆ ಆನೆ ಶಿಬಿರದಿಂದ ಅನುಭವಿ ತಂಡಗಳು ಮತ್ತು ಐದು ತರಬೇತಿ ಪಡೆದ ಆನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು. ಡ್ರೋನ್‌ಗಳನ್ನು ಬಳಸಿ, ಅರಣ್ಯ ಅಧಿಕಾರಿಗಳು ಕುದುರೆಮುಖದ ಗುಡ್ಡಗಾಡು ಪ್ರದೇಶದಲ್ಲಿ ವ್ಯಾಪಕ ಹುಡುಕಾಟ ನಡೆಸಿದರು. ಆನೆಯು ಬೆಳಗಿನ ಜಾವ ಭಗವತಿ ಶಿಬಿರದ ಬಳಿ ಇದ್ದು, ನಿಖರವಾದ ಯೋಜನೆಯ ನಂತರ ಭಾನುವಾರ ಸಂಜೆಯ ವೇಳೆಗೆ ಸೆರೆಹಿಡಿಯಲಾಯಿತು. 50 ಕ್ಕೂ ಹೆಚ್ಚು ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ…

Read More

ಬೆಂಗಳೂರು :ಪೊಲೀಸ್ ಇಲಾಖೆಯ ಪಿಸಿ ಹಾಗೂ ಹೆಚ್‌ಸಿ ರವರುಗಳಿಗೆ NAVY BLUE PEAK CAP ಗಳನ್ನು ವಿತರಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸೆಬಲ್ ಮತ್ತು ಹೆಡ್ ಕಾನ್ಸಬಲ್ ರವರುಗಳಿಗೆ ನೀಡಲಾಗುತ್ತಿರುವ ಖಾಕಿ ಗ್ಲೋಚ್ ಹ್ಯಾಟ್ ಬದಲಿಗೆ NAVY BLUE PEAK CAP ಗಳನ್ನು ವಿತರಿಸುವ ಕುರಿತು ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಸಹಮತಿ ನೀಡಿ ಆದೇಶಿಸಲಾಗಿದೆ. ಅದರಂತೆ, ದಿನಾಂಕ: 28.10.2025 ರಂದು ನಡೆದ ಪೊಲೀಸ್ ಸಿಬ್ಬಂದಿಗಳ ಪೀಕ್-ಕ್ಯಾಪ್ ಪರಿಚಯಮತ್ತು ವಿತರಣೆ ಸಮಾರಂಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಹಾಗೂ ಮುಖ್ಯ ಅತಿಥಿಗಳ ಉಪಸ್ಥಿತಿಯಲ್ಲಿ NAVY BLUE PEAK CAP ಗಳನ್ನು ಬಿಡುಗಡೆ ಮಾಡಲಾಗಿರುತ್ತದೆ. “ಸದರಿ ಸಮಾರಂಭದಲ್ಲಿ ಪೊಲೀಸ್ ಪ್ರಧಾನ ಕಛೇರಿ ವತಿಯಿಂದ 600 ಸಂಖ್ಯೆಯ ಪೀಕ್ ಕ್ಯಾಪ್‌ ಗಳನ್ನು ತಲಾ ಒಂದಕ್ಕೆ ರೂ.226/-(ತೆರಿಗೆ ಸೇರಿ) ಗಳ ವೆಚ್ಚದಲ್ಲಿ ಖರೀದಿಸಿ ವಿತರಿಸಲಾಗಿರುತ್ತದೆ. ಸರ್ಕಾರದ ವತಿಯಿಂದ ನೀಡಿಲಾದ ಆದೇಶದಂತೆ, ಇಲಾಖೆಯ ಎಲ್ಲಾ ಪೊಲೀಸ್ ಕಾನ್ಸಬಲ್…

Read More

ಕೇರಳ: ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣದಲ್ಲಿ ಪೊಲೀಸ್‌ ಅಧಿಕಾರಿಗೆ ನ್ಯಾಯಾಂಗ ನಿಂದನೆ ಆರೋಪದಡಿ 2 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿ ಶ್ರೀ ದೇವನ್ ರಾಮಚಂದ್ರನ್ ಅವರಿದ್ದ ನ್ಯಾಯಪೀಠ ಈ ಶಿಕ್ಷೆ ವಿಧಿಸಿದೆ. ಅಲತ್ತೂರು ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ವಿ.ಆರ್. ರಿನೀಶ್ ವಕೀಲರೊಬ್ಬರಿಗೆ ನಿಂದಿಸಿದ ಕುರಿತಂತೆ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ. “ಕಾನೂನು ವೃತ್ತಿಪರರನ್ನು ಅಗೌರವಿಸುವ ಪರಿಣಾಮಗಳ ಬಗ್ಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಈ ತೀರ್ಪು ಎಚ್ಚರಿಕೆಯಂತಿರಬೇಕು. ಈ ಪ್ರಕರಣ ಎಲ್ಲರಿಗೂ ಉದಾಹರಣೆಯಾಗಬೇಕು” ಎಂದು ಹೈಕೋರ್ಟ್ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಹೇಳಿದೆ. ಇದೇ ವೇಳೆ, ಶಿಕ್ಷೆಯನ್ನು ಷರತ್ತಿನ ಮೇಲೆ ಅಮಾನತಿನಲ್ಲಿಟ್ಟಿರುವ ಹೈಕೋರ್ಟ್, ತಪ್ಪಿತಸ್ಥ ಪೊಲೀಸ್ ಅಧಿಕಾರಿ ಮುಂದಿನ ಒಂದು ವರ್ಷ ಇಂತಹ ಪ್ರಕರಣಗಳಲ್ಲಿ ಭಾಗಿಯಾಗಬಾರದು. ಭಾಗಿಯಾದಲ್ಲಿ ಶಿಕ್ಷೆ ಜಾರಿಯಾಗಲಿದೆ ಎಂದು ಸ್ಪಷ್ಟಪಡಿಸಿದೆ. ಆಲತ್ತೂರಿನಲ್ಲಿ ಎಸ್‌ಐ ರಿನೀಶ್ ಅವರು ವಕೀಲರ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ…

Read More

ಹೃದಯಾಘಾತದಿಂದ ನಿಧನರಾದ ಉಡುಪಿಯ ಮಲ್ಪೆ ಠಾಣಾ ಎಎಸ್ಐ ವಿಶ್ವನಾಥ್ ಅವರ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಉಡುಪಿಯ ಆದರ್ಶ ಆಸ್ಪತ್ರೆಯಿಂದ ವಿಶ್ವನಾಥ್ ಅವರ ಪಾರ್ಥಿವ ಶರೀರವನ್ನು ಉಡುಪಿ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ಕೊಂಡೋಯ್ದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಳಿಕ ಸಂತೆಕಟ್ಟೆ ಕಲ್ಯಾಣಪುರ ಸಮೀಪದ ನಿಡಂಬಳ್ಳಿಯ ಅವರ ನಿವಾಸಕ್ಕೇ ಕೊಂಡೋಯ್ದು ಸಕಲ ವಿಧಿ ವಿಧಾನ ನೆರವೇರಿಸಲಾಯಿತು. ಉಡುಪಿ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್ ಅವರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಪೊಲೀಸರು ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಮಲ್ಪೆಯ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಈ ವೇಳೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಎಸ್ಐ ವಿಶ್ವನಾಥ್ ಅವರು ಎದೆನೋವಿನಿಂದ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು. ಪೊಲೀಸ್ ಇಲಾಖೆಗೆ ಸೇರುವ ಮೊದಲು…

Read More

ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿನಂದಿಸಿದರು. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಡಿಸಿಪಿಗಳಾದ ಮಿಥುನ್‌ ಹಾಗೂ ರವಿಶಂಕರ್ ಅವರನ್ನು ಸಚಿವರು ಅಭಿನಂದಿಸಿದರು. ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಸಚಿವರು, ಹಿರಿಯ ನಾಗರಿಕರಿಗೆ ವಂಚನೆ ಆಗುವುದು ತಪ್ಪಿತು. ಉತ್ತಮ ಕೆಲಸ ಮಾಡಿದ ನಿಮ್ಮ ಸೇವೆ ಹೀಗೆ ಮುಂದುವರಿಯಲಿ ಎಂದು‌‌ ಹೇಳಿದರು. ಈ ವೇಳೆ ಯುವ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ‌ ಉಪಸ್ಥಿತರಿದ್ದರು.

Read More

ಮಲ್ಪೆ: ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ (58) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ನವೆಂಬರ್ 1ರಂದು ರಾತ್ರಿ ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಹೃದಯಾಘಾತದಿಂದ ವಿಶ್ವನಾಥ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ವಿಶ್ವನಾಥ್‌ ಅವರು ಜನಸಾಮಾನ್ಯರಿಗೆ ಹತ್ತಿರವಾಗಿದ್ದರು. ಇತ್ತೀಚೆಗಷ್ಟೇ ಮಲ್ಪೆ ಠಾಣೆಗೆ ವರ್ಗಾವಣೆಗೊಂಡಿದ್ದರು. ಅವರ ಅಕಾಲಿಕ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತವಾಗಿದೆ.

Read More

ಹಿಂದೂ ಪರ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಅಧಿಕಾರಿಗಳು 11 ಆರೋಪಿಗಳ ವಿರುದ್ಧ ಬೆಂಗಳೂರು ಎನ್‌ಐಎ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ದೇಶದ್ರೋಹ ಕಾಯ್ದೆ ಸೇರಿದಂತೆ ವಿವಿಧ ಕಾಯಿದೆಗಳಡಿ ಪ್ರಕರಣ ದಾಖಲಾಗಿದ್ದು, ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.  2025ರ ಮೇ 1ರಂದು ಸುಹಾಸ್ ಶೆಟ್ಟಿಯನ್ನು ಬಜ್ಜೆಯಲ್ಲಿ ನಡುರಸ್ತೆಯಲ್ಲಿ ಕೊಲೆ ಮಾಡಲಾಗಿತ್ತು. ಹಲವು ಸಮಯದಿಂದ ಹೊಂಚು ಹಾಕಿ ಜನರಲ್ಲಿ ಭಯ ಮೂಡಿಸುವುದಕ್ಕಾಗಿಯೇ ಈ ರೀತಿ ಭಯಾನಕವಾಗಿ ಕೊಲೆ ಮಾಡಲಾಗಿತ್ತು ಎಂದು ಎನ್‌ಐಎ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದೆ. ಸುಹಾಸ್ ಶೆಟ್ಟಿ ಕೊಲೆ ನಡೆಸುವುದಕ್ಕಾಗಿ ನಿಷೇಧಿತ ಪಿಎಫ್‌ಐ ಸಂಘಟನೆಯ ಮಾಜಿ ಸದಸ್ಯ ಅಬ್ದುಲ್ ಸಫಾನ್ ಎಂಬಾತ ನಿಯಾಜ್, ಮುಹಮ್ಮದ್ ಮುಸಾಮಿರ್, ಮಹಮ್ಮದ್ ಮುಜಾಮಿಲ್, ಇನ್ನೊಬ್ಬ ಪಿಎಫ್‌ಐ ಸದಸ್ಯ ವಾಮಂಜೂರು ನೌಶಾದ್ ಮತ್ತು ಆದಿಲ್ ಮಹರೂಫ್ ಜೊತೆಗೂಡಿ ಸಂಚು ನಡೆಸಿದ್ದರು. ಕೃತ್ಯ ನಡೆಸುವುದಕ್ಕಾಗಿ ಆದಿಲ್ ಆರೋಪಿಗಳಿಗೆ ಹಣಕಾಸಿನ ನೆರವು ನೀಡಿದ್ದ ಎಂದು ಎನ್‌ಐಎ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ. ಚಿಕ್ಕಮಗಳೂರು ಮೂಲದ…

Read More

ಕೇರಳ: ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್ ಬರ್ಬರ ಹತ್ಯೆ ಮಾಡಲಾಗಿದೆ. ನಟೋರಿಯಸ್ ರೌಡಿಶೀಟರ್ ಟೋಪಿ ನೌಫಾಲ್ ಎಂಬಾತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳದ ರೈಲ್ವೆ ಗೇಟ್ ಬಳಿಯಲ್ಲಿ ಕೊಚ್ಚಿ ನೌಫಾಲ್ ಕೊಲೆ ಮಾಡಲಾಗಿದೆ. ನೌಫಾಲ್, ಫರಂಗಿಪೇಟೆ ಜೋಡಿ ಕೊಲೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದನು. ಮಾರಕಾಸ್ತ್ರಗಳಿಂದ ಕೊಚ್ಚಿ ನೌಫಾಲ್ ಅನ್ನು ದುಷ್ಕರ್ಮಿಗಳು ಕೊಂದಿದ್ದಾರೆ. ಮಂಗಳೂರಿನ ಫೈಸಲ್ ನಗರದ ನಿವಾಸಿ ಟೋಪಿ ನೌಫಾಲ್ ಆಗಿದ್ದನು. ಉಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು ನಗರದಲ್ಲಿ ಸುಗಮ ಸಂಚಾರ ಅನುವು ಮಾಡಿಕೊಡಲು ಹಾಗೂ ರಸ್ತೆಗಳಲ್ಲಿ ಅನಧಿಕೃತವಾಗಿ ವಾಹನಗಳನ್ನು ನಿಲುಗಡೆಗೊಳಿಸಿ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನಲೆಯಲ್ಲಿ, ಈ ಬಗ್ಗೆಮಂಗಳೂರು ನಗರ ಪೊಲೀಸರು ಕಳೆದ ಮೂರು ತಿಂಗಳಲ್ಲಿ ವಿಶೇಷ ಕಾರ್ಯಾಚರಣೆಗಳನ್ನು ಕೈಗೊಂಡಿದ್ದಾರೆ. ಕಳೆದ ಮೂರು ತಿಂಗಳಲ್ಲಿ ವಿಶೇಷ ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರು, ‘ನೋ ಪಾರ್ಕಿಂಗ್, ರಾಂಗ್ ಪಾರ್ಕಿಂಗ್, ಡಬಲ್ ಪಾರ್ಕಿಂಗ್, ಫುಟ್‌ಪಾತ್ ಪಾರ್ಕಿಂಗ್’ ಮಾಡಿದ ವಾಹನ ಮಾಲಕ ಮತ್ತು ಚಾಲಕರ ವಿರುದ್ಧ 4793 ಪ್ರಕರಣಗಳನ್ನು ದಾಖಲಿಸಿ ರೂ. 23,21,200 ರೂ. ದಂಡವನ್ನು ವಿಧಿಸಲಾಗಿದೆ. ಕೆಲವು ವಾಣಿಜ್ಯ ಸಂಕೀರ್ಣ ಮತ್ತು ದೊಡ್ಡ ವ್ಯಾಪಾರ ಮಳಿಗೆಗಳಿಂದ ಸಂಚಾರಕ್ಕೆ ಅಡಚಣೆಯಾಗುತ್ತಿರುವುದರಿಂದ, ಅವುಗಳ ನಿರ್ವಹಣಾ ಮಂಡಳಿಗಳೊಂದಿಗೆ ಸಭೆಗಳನ್ನು ನಡೆಸಲಾಗಿದೆ. ಈ ಮೂಲಕ ಸೂಕ್ತ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿ ನೋಟಿಸ್ ಜಾರಿಗೊಳಿಸಲಾಗಿದೆ. ಅಪಘಾತವನ್ನು ತಡೆಗಟ್ಟುವ ನಿಟ್ಟಿನಲ್ಲಿ, ಬ್ಲಾಕ್ ಸ್ಪಾಟ್‌ಗಳ (ಹೆಚ್ಚು ಅಪಘಾತಗಳಾಗುವ) ಬಳಿ ಅತೀ ವೇಗವಾಗಿ ಚಾಲನೆ ಮಾಡುವ ವಾಹನಗಳ ವಿರುದ್ಧ್ದ ಕ್ರಮ ಕೈಗೊಂಡು…

Read More