ಬೆಳ್ತಂಗಡಿ: ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ CR NO. 99/2014 00, 406,420, 468, 478, 201 ಐಪಿಸಿ. ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯಕ್ಕೆ ಸುಮಾರು 2 ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಮಲಾಕ್ಷ ಮಂಜೇಶ್ವರ ಎಂಬವರನ್ನು ಅ.30ರಂದು ಕಾಸರಗೋಡು ವಿದ್ಯಾನಗರ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ.
Author: main-admin
ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ. ಡಿಸಿಪಿಗಳಾದ ಮಿಥುನ್ ಹಾಗೂ ರವಿಶಂಕರ್ ಅವರು ಈಗಾಗಲೆ ಸಂತ್ರಸ್ತೆಗೆ, ಅವರು ಕಳೆದುಕೊಂಡ 17 ಲಕ್ಷ ರೂಪಾಯಿಗಳ ವರ್ಗಾವಣೆಯ ಆದೇಶ ಪತ್ರವನ್ನು ಹಸ್ತಾಂತರಿಸಲಾಗಿದ್ದು, ಪೊಲೀಸ್ ಇಲಾಖೆಯ ಕಾರ್ಯ ನಿಜಕ್ಕೂ ಶ್ಲಾಘನೀಯ, ಇಂಥ ಕಾರ್ಯಚರಣೆ ಗಳಿಂದ ಸಾರ್ವಜನಿಕರಿಗೆ ಅದರಲ್ಲೂ ಹಿರಿಯ ನಾಗರಿಕರಿಗೆ ಪೊಲೀಸ್ ಇಲಾಖೆ ಮೇಲೆ ಮತ್ತಷ್ಟು ವಿಶ್ವಾಸ ಹೆಚ್ಚುತ್ತದೆ. ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ವಂಚನೆಗಳಿಂದ ನಾಗರಿಕರು ದೂರ ಉಳಿಯಬೇಕು, ಪೊಲೀಸರಿಗೆ ಸಹಕರಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮನವಿ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ Facebook ನಲ್ಲಿ purush acharya ಎಂಬ ಹೆಸರಿನ ಖಾತೆಯಿಂದ ದಸರಾ ಉದ್ಘಾಟನೆ ಮಾಡಿದ ಬಾನು ಮುಸ್ತಾಕ್ ರವರ ಬಗ್ಗೆ ಮತ್ತು ಮಾನ್ಯ ಮುಖ್ಯ ಮಂತ್ರಿಗಳ ಬಗ್ಗೆ ಅಸಭ್ಯ ಪದಗಳಲ್ಲಿ ನಿಂದಿಸಿ ಪೋಸ್ಟ್ ಮಾಡಿದ ಬಗ್ಗೆ ಸುಳ್ಯ ಪೊಲೀಸ್ ಠಾಣಾ ಅಕ್ರ 112/2025 ಕಲಂ 296,196,354 BNS ಹಾಗೂ ಸುಬ್ರಮಣ್ಯ ಠಾಣೆಯಲ್ಲಿ 55/2025 ಕಲಂ 353(3),353(4) BNS ರಂತೆ ಪ್ರಕರಣಗಳು ದಾಖಲಾಗಿರುತ್ತವೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ನ ಸಹಕಾರದಿಂದ ಸುಳ್ಯ ಪೊಲೀಸರು ಪ್ರಕರಣದ ಆರೋಪಿ ಪುರುಷೋತ್ತಮ ಆಚಾರ್ಯ ಬರಿಮಾರು ಬಂಟ್ವಾಳ ತಾಲೂಕು ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿರುತ್ತದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಮಂಗಳೂರು; ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಫೇಸ್ ಬುಕ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಡಿ ಮಂಗಳೂರಿನ ಕದ್ರಿ ಠಾಣೆ ಪೊಲೀಸರು ಶರಣ್ ಪಂಪ್ ವೆಲ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಆರ್ ಎಸ್ ಎಸ್ ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್ ಮಾಡಿದ್ದಾರೆ ಎಂಬ ಆರೋಪದಡಿ ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕದ್ರಿ ಪೊಲೀಸ್ ಠಾಣೆಗೆ ಆಗಮಿಸಿದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಚ ಸತೀಶ್ ಕುಂಪಲ ಆಗಮಿಸಿದ್ದಾರೆ. ಕದ್ರಿ ಠಾಣೆಯ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಸೇರಿದ್ದಾರೆ. ಯಾವುದೇ ನೊಟೀಸ್ ನೀಡದೇ ಕರೆದುಕೊಂಡು ಬಂದಿದ್ದಾರೆ ಎಂದು ಆರೋಪಿಸಲಾಗಿದ್ದು, ಸದ್ಯ ಪೊಲೀಸ್ ಅಧಿಕಾರಿಗಳ ಜೊತೆ ಶಾಸಕರು, ನಾಯಕರ ಮಾತುಕತೆ ನಡೆಸುತ್ತಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಯುವಕನೋರ್ವನನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆಗೊಳಾಗದ ಯುವಕ ನಿತಿನ್ ಎಂದು ತಿಳಿದು ಬಂದಿದೆ. ಹಲ್ಲೆ ನಡೆಸಿದ ಆರೋಪಿಗಳು ಸಂಪತ್, ಅಭಿಷೇಕ್ ಪಾಲನ್, ರಕ್ಷತ್, ಸನತ್ ಮತ್ತು ಚೇತನ್ ಎಂದು ತಿಳಿದು ಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ವಿವರ : ಪಿರ್ಯಾದಿದಾರರಾದ ನಿತಿನ್ (26), ಹಂದಾಡಿ ಗ್ರಾಮ, ಬ್ರಹ್ಮಾವರ ಇವರು ದಿನಾಂಕ 29/10/2025 ರಂದು ರಾತ್ರಿ 21:15 ಗಂಟೆಯ ವೇಳೆಗೆ ಬಾರ್ಕೂರಿನಲ್ಲಿ ಇರುವಾಗ, 1 ನೇ ಆರೋಪಿ ಸಂಪತ್ ಎಂಬಾತನು ಕರೆ ಮಾಡಿ ಎಲ್ಲಿದ್ದೀಯ ಎಂದು ಕೇಳಿ, ಸ್ವಲ್ಪ ಸಮಯದ ಬಳಿಕ ಅಲ್ಲಿಗೆ ಸಂಪತ್, ಅಭಿಷೇಕ್ ಪಾಲನ್, ರಕ್ಷತ್, ಸನತ್ ಮತ್ತು ಚೇತನ್ ರವರುಗಳು ಬೈಕಿನಲ್ಲಿ ಮತ್ತು ಕಾರಿನಲ್ಲಿ ಬಂದು, ಅವರೆಲ್ಲರೂ ಸೇರಿ ಪಿರ್ಯಾದಿದಾರರನ್ನು ಕಾರಿನಲ್ಲಿ ಎಳೆದು ಕೂರಿಸಿಕೊಂಡು ಬ್ರಹ್ಮಾವರ ತಾಲೂಕು 52 ನೇ ಹೇರೂರು ಗ್ರಾಮದ ಕೆ.ಇ.ಬಿ ಬಳಿ ಇರುವ ಗ್ರೌಂಡ್…
ಬಂಟ್ವಾಳ: ಅ.30ರಂದು ಬಿಸಿಲೆ ಘಾಟ್ ಘಾಟ್ ನಲ್ಲಿ ಸಂಭವಿಸಿದಅಪಘಾತದ ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದು ಅದರಂತೆ ಪುತ್ತೂರಿನಿಂದ ಮಂಗಳೂರಿಗೆ ಅಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ಲಿಂದ ಅಂಬ್ಯುಲೆನ್ಸ್ ಮುಂದಿನಿಂದ ದ್ವಿಚಕ್ರ ವಾಹನ ಸವಾರನೋರ್ವ ಅಂಬ್ಯುಲೆನ್ಸ್ ನ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ. ಈ ಹಿನ್ನೆಲೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಮಹಮ್ಮದ್ ಮನ್ಸೂರು (38ವ) ಎಂಬವರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 128/2025 ಕಲಂ: 110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು: ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್‌ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಾದ್ಯಂತ 120ಕ್ಕೂ ಹೆಚ್ಚು ಕ್ಲಬ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈ, ಜಿಲ್ಲಾ ಖಜಾಂಚಿ ಬಾಲಕೃಷ್ಣ ಹೆಗ್ಡೆ, ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ್ ರೈ, ಡೈರೆಕ್ಟರಿ ಸಂಪಾದಕಿ ಗೀತಾ ಕಲ್ಯಾಣಪುರ, ನ್ಯಾನ್ಸಿ ಮಸ್ಕರೆನಸ್, ದಯಾವತಿ ಮೆಂಡೋನ್, ಲಿಡಿಯಾ ಡಿ’ಕೋಸ್ಟಾ, ಹೇಮಾ ರಾವ್, ಸೀಮಾ ಮಯ್ಯಾ ಮತ್ತು ಮೊಹಿದಿನ್ ಕುಂಞಿ ಉಪಸ್ಥಿತರಿದ್ದರು
ಬಂಟ್ವಾಳ: ನಿನ್ನೆ ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟ್ರಿಕ್ ಆಟೋ ನಿಲ್ಲಿಸಿ ನಾಪತ್ತೆಯಾಗಿದ್ದ ಮಾರ್ನಬೈಲು ನಿವಾಸಿ ಆಟೋ ಚಾಲಕ ಪ್ರೀತಂ ಲೋಬೋ (35) ಅವರ ಮೃತದೇಹ ಇಂದು ನೇತ್ರಾವತಿ ನದಿಯ ಡ್ಯಾಂ ಸಮೀಪದ ಮರವೊಂದರಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ನದಿ ತೀರಕ್ಕೆ ತಂದು ಇಟ್ಟಿದ್ದಾರೆ. ನಿನ್ನೆ ಸಂಜೆ ವೇಳೆ ಪ್ರೀತಂ ಲೋಬೋ ಅವರು ತಮ್ಮ ಆಟೋವನ್ನು ಸೇತುವೆಯ ಬಳಿ ನಿಲ್ಲಿಸಿ ನಾಪತ್ತೆಯಾಗಿದ್ದರೆಂಬ ದೂರು ಕುಟುಂಬಸ್ಥರು ಪೊಲೀಸರಿಗೆ ನೀಡಿದ್ದರು. ಇಂದು ಬೆಳಿಗ್ಗೆ ಹುಡುಕಾಟದ ವೇಳೆ ನೇತ್ರಾವತಿ ನದಿಯ ತೀರದಲ್ಲಿ ಅವರ ಶವ ಪತ್ತೆಯಾಗಿದೆ.
ಬೆಂಗಳೂರು : ಇತ್ತೀಚಿಗೆ RSS ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತುಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಾನೂನು ಹೋರಾಟದಲ್ಲಿ ನೆರವಾಗಿದ್ದು, ಈ ಆದೇಶದಿಂದ ಸರ್ಕಾರದ ನಿರ್ಧಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಹೌದು ಆರೆಸ್ಸೆಸ್ ಶತಮಾನೋತ್ಸವ ಹಿನ್ನಲೆ ಅಕ್ಟೋಬರ್ 12ರಂದು ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಪಥಸಂಚಲನದಲ್ಲಿ ಸಂಘದ ಸಮವಸ್ತ್ರ ಧರಿಸಿ, ಕೈನಲ್ಲಿ ದೊಣ್ಣೆ ಹಿಡಿದ ಗಣವೇಷಧಾರಿಯಾಗಿ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓ ಪ್ರವೀಣ್ ಭಾಗವಹಿಸಿದ್ದರು. ಅಮಾನತು ಬೆನ್ನಲ್ಲೇ ಪ್ರವೀಣ್ ಜೊತೆ ಈ ಬಗ್ಗೆ ಚರ್ಚಿಸಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಕಾನೂನುಬಾಹಿರ ಮತ್ತು ಅಕ್ರಮ ಅಮಾನತನ್ನು ಪ್ರಶ್ನಿಸಲು ನಾನು ವೈಯಕ್ತಿಕವಾಗಿ ಸಂಬಂಧಪಟ್ಟ ನ್ಯಾಯಾಧಿಕರಣ ಮತ್ತು ನ್ಯಾಯಾಲಯಗಳ ಮುಂದೆ ಹಾಜರಾಗುತ್ತೇನೆ ಎಂದು ಅವರಿಗೆ ಭರವಸೆ ನೀಡಿದ್ದರು. ಆರ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸರ್ಕಾರಿ ನೌಕರರ ಹಕ್ಕನ್ನು ಎತ್ತಿಹಿಡಿದಿರುವ ಹೈಕೋರ್ಟ್‌ಗಳ ಅನೇಕ ತೀರ್ಪುಗಳಿವೆ. ಈ ಅಕ್ರಮ ಅಮಾನತು ರದ್ದಾಗುವುದರಲ್ಲಿ…
ಬೆಳ್ತಂಗಡಿ: ಧರ್ಮಸ್ಥಳ ವಿರುದ್ಧ ದೂರದಾರ ಚಿನ್ನಯ್ಯನ ಹೇಳಿಕೆ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಬುರುಡೆ ಗ್ಯಾಂಗ್ ಗಿರೀಶ್ ಮಟ್ಟಣ್ಣನವರ್ , ಮಹೇಶ್ ತಿಮರೋಡಿ, ಜಯಂತ್ ಹಾಗೂ ವಿಠಲ ಗೌಡ ಹೈಕೋರ್ಟ್ ಮೆಟ್ಟಿಲೇರಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ತಮ್ಮ ವಿರುದ್ದ ದಾಖಲಾಗಿರುವ ಎಫ್ ಐಆರ್, ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ಹಾಗೂ ವಿಠಲಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ರುವಾರ ವಿಚಾರಣೆಗೆ ನಿಗದಿಯಾಗಿದೆ. ಪ್ರತಿಭಟನೆಗೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದ ಪ್ರಕರಣದಲ್ಲಿ ಬುರುಡೆ ತಂದು ಆರೋಪಗಳ ಸುರಿಮಳೆಗೈದಿದ್ದ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದರಿಂದ ಇಡೀ ಬುರುಡೆ ಗ್ಯಾಂಗ್ ಸಂಕಷ್ಟಕ್ಕೆ ಸಿಲುಕಿದೆ ಎನ್ನಲಾಗಿದೆ. ಧರ್ಮಸ್ಥಳ ಪ್ರಕರಣದ ಕುರಿತು ಎಸ್ ಐಟಿ ತನಿಖೆ ಮುಂದುವರಿದ ನಡುವೆಯೇ ಬುರುಡೆ ಗ್ಯಾಂಗ್ ನ…










