ಉಳ್ಳಾಲ: ಕಾರಿನಲ್ಲಿ ಎಂಡಿಎಂಎ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಬ್ದುಲ್ ರಶೀದ್ ಮೊಯುದ್ದೀನ್ ಎಂದು ಗುರುತಿಸಲಾಗಿದೆ. ಈತನು ದೇರಳಕಟ್ಟೆಯ ಪನೀರ್ ನಿವಾಸಿಗಳಾದ ಇಲ್ಯಾಸ್ ಯಾನೆ ಎರಿಟಿಗಾ ಇಲ್ಯಾಸ್ ಹಾಗೂ ಅಟೋ ಅಬ್ಬಾಸ್ ಅವರಿಂದ ಮಾದಕವನ್ನು ಖರೀದಿ ಮಾಡಿ ಅದನ್ನು ಕಾರ್‌ನಲ್ಲಿ ಸೋಮೇಶ್ವರ ರೆಸಾರ್ಟ್ ಒಂದರ ಬಳಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಎನ್ನಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ರೆಸಾರ್ಟ್ ಗೆ ದಾಳಿ ಮಾಡಿ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಆರೋಪಿ ಅಬ್ದುಲ್ ರಶೀದ್ ಪರಾರಿ ಆಗಲು ಯತ್ನಿಸಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತನ ಕಾರಿನಲ್ಲಿದ್ದ ಎಂಡಿಎಂಎ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Author: main-admin
ಮಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ ಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಸಾರ್ವಜನಿಕರಿಗೆ ಕೆಲವು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಇದರ ಪರಿಣಾಮ ಕುಟುಂಬ ಮತ್ತು ಅವಲಂಭಿತರ ಮೇಲೆ ಪ್ರಭಾವ ಬಿದ್ದು ದು:ಖ ಅನುಭವಿಸುತ್ತಾರೆ. ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದಲ್ಲಿ ಭಾರತೀಯ ಮೋಟಾರು ವಾಹನ ಕಾಯ್ದೆ ಕಲಂ 185ರ ಅನ್ವಯ ಪ್ರಕರಣ ದಾಖಲಿಸಿ 10,000ರೂ. ವರೆಗೆ ದಂಡ ಪಾವತಿಸಬೇಕಾಗುತ್ತದೆ. ಅತೀವೇಗದಿಂದ ವಾಹನ ಚಲಾಯಿಸಿದರೆ ಭಾರತೀಯ ಮೋಟಾರು ವಾಹನ ಕಾಯ್ದೆ ಕಲಂ 183ರ ಅನ್ವಯ ಪ್ರಕರಣ ದಾಖಲಿಸಿ 2/3/ಎಲ್‌ಎಂವಿ ವಾಹನಗಳಿಗೆ 1,000 ರೂ., ಎಚ್‌ಎಂವಿ /ಎಚ್‌ಜಿವಿ/ಇತರ ವಾಹನಗಳಿಗೆ 2,000 ರೂ.ವರೆಗೆ ದಂಡ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಬಂಟ್ವಾಳ ಸಮೀಪ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಗಂಡ ಹೆಂಡತಿ ಇಬ್ಬರ ಮೃತದೇಹ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಇಂದು ಗುರುವಾರ ಪತ್ತೆಯಾಗಿದೆ. ಸಜಿಪಮೂಡ ಗ್ರಾಮದ ತಿಮ್ಮಪ್ಪ ಮೂಲ್ಯ (50)ಹಾಗೂ ಆತನ ಪತ್ನಿ ತುಂಬು ಗರ್ಭಿಣಿ ಜಯಂತಿ (40) ಇಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಇದ್ದರೆ ತಿಮ್ಮಪ್ಪ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದೆ. ಪತ್ನಿಯ ಕುತ್ತಿಗೆ ಹಿಸುಕಿದ ರೀತಿಯಲ್ಲಿ ಕಂಡುಬಂದಿದೆ ಎನ್ನಲಾಗಿದ್ದು, ಮೇಲ್ನೋಟಕ್ಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ಬು ಪೋಲೀಸರು ವ್ಯಕ್ತಪಡಿಸಿದ್ದಾರೆ. 15 ವರ್ಷಗಳ ಹಿಂದೆ ಮದುವೆಯಾಗಿದ್ದ ಇವರಿಗೆ ಮಕ್ಕಳಾಗಿರಲಿಲ್ಲ. ಜಯಂತಿ ಅವರು ಇದೀಗ ಗರ್ಭಿಣಿಯಾಗಿದ್ದು, ಜುಲೈ 2 ರಂದು ಸೀಮಂತ ದಿನ ನಿಗದಿಯಾಗಿತ್ತು.ಆದರೆ ಈ ನಡುವೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಟುಂಬ ವರ್ಗವನ್ನು ದುಖಃತಪ್ತಗೊಳಿಸಿದೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ…
ಉಡುಪಿ: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯಲ್ಲೂ ನಕಲಿ ಅಂಕಪಟ್ಟಿ ತಯಾರಿಸಿ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವ ಜಾಲ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಅನೇಕ ರೀತಿಯ ಅನುಮಾನ ಸೃಷ್ಟಿಯಾಗಿದೆ. ಮೊನ್ನೆ ತಾನೇ ಪ್ರಕಟಗೊಂಡ ನೀಟ್ ಪರೀಕ್ಷೆಯ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ, ರಾಜ್ಯಮಟ್ಟದಲ್ಲಿ ಎಂಟನೇ ಸ್ಥಾನ ಸಿಕ್ಕ ವಿದ್ಯಾರ್ಥಿಯ ಬಗ್ಗೆ ವರದಿಗಳು ಬಿತ್ತರಗೊಂಡಿತ್ತು. ಆದರೆ ಸಂಶಯ ಬಂದು ಪರಿಶೀಲಿಸಿದಾಗ ಅದು ನಕಲಿ ಅಂಕಪಟ್ಟಿ ಎಂಬುವುದು ಸಾಬೀತಾಗಿದೆ. ಆತನಿಗೆ ಧಕ್ಕಿದ್ದು ಹದಿನೇಳು ಲಕ್ಷ ಸರಣಿಯ ರ್ಯಾಂಕ್. ನೀಟ್ ನಲ್ಲಿ ದೇಶದಲ್ಲಿಯೇ 107 ರ್ಯಾಂಕ್ ಪಡೆದಿದ್ದಾತನ ನಿಜವಾದ ರ್ಯಾಂಕ್ 1762258. ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಗಿಟ್ಟಿಸಿಕೊಳ್ಳುವ ಹುನ್ನಾರವಾದರೆ, ಹಣಬಲದಿಂದ ಫೇಕ್ ಸರ್ಟಿಫಿಕೇಟ್ ಗಳನ್ನು ತಯಾರಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಈ ರೀತಿ ಶೈಕ್ಷಣಿಕ ವಿಚಾರದಲ್ಲೂ ನಕಲಿ ದಂಧೆ ಮಾಡುತ್ತಿರುವ ಜಾಲಗಳು ಇನ್ನೂ ರಾಜ್ಯದಲ್ಲಿ ಸಕ್ರಿಯವಾಗಿದ್ದು ಈ ಬಗ್ಗೆ ಸಮಗ್ರ ತನಿಖೆಯಾಗಲಿ ಎಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.
ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಬಜ್ಪೆ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ರಶೀದ್ ಸೇರಿ ಹಲವು ಪೊಲೀಸರನ್ನು ಮಂಗಳೂರು ಕಮಿಷನರೇಟ್ ವಲಯ ವರ್ಗಾಯಿಸಿದೆ. ಬಜ್ಪೆ ಠಾಣೆ ಹೆಡ್‌ಕಾನ್ಸ್‌ಟೇಬಲ್ ರಶೀದ್ರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆಗೆ ರಶೀದ್ ಪರೋಕ್ಷವಾಗಿ ನೆರವು ನೀಡಿದ್ದಾರೆಂದು ಕೆಲವು ಹಿಂದು ಮುಖಂಡರು ಮತ್ತು ಬಿಜೆಪಿ ನಾಯಕರು ನೇರವಾಗಿ ಆರೋಪಿಸಿದ್ದರು. ಸೋಷಿಯಲ್ ಮೀಡಿಯಾಗಳಲ್ಲಿ ಕೂಡ ರಶೀದ್ ಪಾತ್ರದ ಕುರಿತು ಬಹಳ ಚರ್ಚೆಯಾಗಿತ್ತು. ಈ ಆರೋಪಗಳನ್ನೆಲ್ಲ ನಿರಾಕರಿಸಿದ್ದ ರಶೀದ್ ತನ್ನ ವಿರುದ್ಧ ಆರೋಪ ಮಾಡಿದವರ ವಿರುದ್ಧ ಕೇಸ್ ಕೂಡ ದಾಖಲಿಸಿದ್ದಾರೆ. ಒಟ್ಟಾರೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಹಲವು ವರ್ಷಗಳಿಂದ ಒಂದೇ ಕಡೆ ಇದ್ದ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಕರಾವಳಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆಯಾಗುತ್ತಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಕೋಮು ಸೌಹಾರ್ದ ಕಾಪಾಡುವ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅವರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. 2016 ಐಎಎಸ್ ಬ್ಯಾಚ್‌ನ ಅಧಿಕಾರಿಯಾಗಿರುವ ದರ್ಶನ್ ಎಚ್.ವಿ. ಅವರು ವಾಣಿಜ್ಯ ತೆರಿಗೆಗಳ ಇಲಾಖೆಯ ಬೆಂಗಳೂರಿನ ಸೇವಾ ವಿಶ್ಲೇಷಣೆ ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದರು. ಮುಲ್ಲೈ ಮುಗಿಲನ್ ಎಂಪಿ 2023 ಜೂನ್ 17 ರಂದು ದ.ಕ. ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ 2 ವರ್ಷ ಪುರ್ಣಗೊಳಿಸಿರುವ ಬೆನ್ನಲ್ಲೆ ಅವರಿಗೆ ವರ್ಗಾವಣೆಯಾಗಿದೆ.
ಮಂಗಳೂರು : ಸಿಂಗಲ್ ಸೈಟ್ ನಕ್ಷೆ ಮತ್ತು ಪ್ರಾಪರ್ಟಿ ಕಾರ್ಡ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು ಲಂಚ ಸ್ವೀಕರಿಸುತ್ತಿದ್ದಾಗ (ಯು.ಪಿ.ಓ.ಆರ್) ಮಂಗಳೂರು ಮಿನಿ ವಿಧಾನಸೌಧ ಪಕ್ಕದಲ್ಲಿರುವ ನಗರ ಮಾಪನ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸರ್ವೆಯರ್ ಮತ್ತು ಬ್ರೋಕರ್ ಇಬ್ಬರು ಮಂಗಳೂರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಗಳೂರಲ್ಲಿ ಜೂ.18 ರಂದು ಸಂಜೆ ನಡೆದಿದೆ. ಪ್ರಕರಣದ ವಿವಿರ: ದೂರುದಾರ ತಾಯಿ ತನ್ನ ಹೆಸರಿನಲ್ಲಿರುವ ಕಂಕನಾಡಿ ಗ್ರಾಮದ ಮತ್ತು ಬಜಾಲ್ ಗ್ರಾಮದ ಜಮೀನಿನ ಸಿಂಗಲ್ ಸೈಟ್ ನಕ್ಷೆ ಮತ್ತು ಪ್ರಾಪರ್ಟಿ ಕಾರ್ಡ್ ಮಾಡಿಸಲು ಫೆಬ್ರವರಿ 2025 ರಂದು ಮಂಗಳೂರು ಯು.ಪಿ.ಓ.ಆರ್ ಕಛೇರಿಗೆ ಅರ್ಜಿ ಸಲ್ಲಿಸಿದ್ದು,ದೂರುದಾರ ತಾಯಿಗೆ ವಯಸ್ಸಾಗಿರುವುದರಿಂದ ದೂರುದಾರ ಮಂಗಳೂರು ಯು.ಪಿ.ಓ.ಆರ್ ಕಛೇರಿಗೆ ಹೋಗಿ ಕಡತದ ಬಗ್ಗೆ ವಿಚಾರಿಸಿರುತ್ತಾರೆ. ಅಲ್ಲಿನ ಸರ್ವೆಯರ್ ನಂದೀಶ್ ನಾಯ್ಕ್ ರವರು ಎಪ್ರಿಲ್ 2025 ರಂದು ಸರ್ವೆ ನಡೆಸಿ ನಂತರ 6,500 ರೂಪಾಯಿ ಲಂಚದ ಹಣವನ್ನು ತಾನು ಸ್ವೀಕರಿಸಿದ್ದು ಹಾಗೂ 20,000 ರೂಪಾಯಿ ಲಂಚದ ಹಣವನ್ನು ಮಂಗಳೂರು ನಗರದ ಬಿಜೈ ನಿವಾಸಿ ದಿವಾಕರ್…
ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನೆಹರುನಗರದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮುರ ನಿವಾಸಿ ತನ್ಸೀರ್ ಎಂದು ಗುರುತಿಸಲಾಗಿದೆ. ತನ್ಸೀರ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ: ಮನೆಯೊಂದರಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿ ದಾಳಿ ನಡೆಸಿ ಒಂಬತ್ತು ಮಂದಿಯನ್ನು ಬಂಧಿಸಿದ ಘಟನೆ ಓಡಿನ್ನಾಳ ಗ್ರಾಮದ ಪಣೆಜಾಲು ಎಂಬಲ್ಲಿ ನಡೆದಿದೆ. ದಾಳಿ ಸಂದರ್ಭ ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಲಾಗಿದ್ದು, ಜೊತೆಗೆ ಸ್ಥಳದಲ್ಲಿ ಜೂಜಾಟಕ್ಕೆ ಬಳಸಲಾಗಿದ್ದ ಎಲೆಗಳು, 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ ಹಾಗೂ 26,778 ರೂಪಾಯಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ 78,80 KP Act -1963 ಮತ್ತು ಕಲಂ 112(1) BNS 23 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ, ಸಬ್ ಇನ್ಸೆಕ್ಟರ್ ಮುರುಳೀಧರ್ ನಾಯ್ ಸಬ್ ಇನ್ಸ್ಪೆಕ್ಟರ್ ಮಲ್ಲಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕಕ್ಕೆ ಜಿಮ್ಮಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ. ಸಾವನ್ನಪ್ಪಿದವರು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ತಿಳಿದು ಬಂದಿದೆ. ಓಂಶ್ರೀ ಅವರು ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಟಲಿಯ ಪ್ರಜೆ ಸಹಿತ ಮೂವರಿಗೆ ಗಾಯಗಳಾಗಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಯಲಾಗಿದೆ. ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.









