ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಅಡ್ವಾನ್ಸ್ಡ್ ಕಂಪ್ಯೂಟಿoಗ್ ವಿಭಾಗವು, 2025ರ ಜುಲೈ 24ರಂದು ತನ್ನ ವಿದ್ಯಾರ್ಥಿ ಸಂಘಟನೆಗಳಾದ ಸಿಗ್ಮಾ ಸ್ಕ್ವೇರ್ಡ್ ಮತ್ತು ಅನಾಲಿಟಿಕಾ ಸಂಸ್ಥೆಗಳ ಪದಗ್ರಹಣ ಸಮಾರಂಭವನ್ನು ವಿಜೃಂಭಣೆಯಿ0ದ ಆಯೋಜಿಸಿತು. ಹೊಸದಾಗಿ ಆಯ್ಕೆಯಾದ ಕಾರ್ಯದರ್ಶಿಗಳನ್ನು ಅಧಿಕೃತವಾಗಿ ಪದಗ್ರಹಣಗೊಳಿಸಲು ಹಾಗೂ ಅವರ ಮುಂದಿನ ನಾಯಕತ್ವದ ಪ್ರಯಾಣವನ್ನು ಸಮಾರಂಭಾತ್ಮಕವಾಗಿ ಶುಭಾಶಯಗಳೊಂದಿಗೆ ಆಚರಿಸಲು ಈ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ಕಾರ್ಯಕ್ರಮವು ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸುವ ಮೂಲಕ ಪ್ರಾರಂಭವಾಯಿತು. ಬಳಿಕ ವಿಶ್ವವಿದ್ಯಾಲಯದ ಗಾಯನ ತಂಡವು ಪ್ರಾರ್ಥನೆ ಗೀತೆಯನ್ನು ಹಾಡಿದರೆ, ವಿದ್ಯಾರ್ಥಿಗಳಿಂದ ಸ್ವಾಗತ ನೃತ್ಯವಾಗಿ ಪ್ರದರ್ಶಿತವಾದ ಸಾಂಸ್ಕೃತಿಕ ಸ್ವಾಗತ ಪ್ರದರ್ಶನವು ಸಮಾರಂಭಕ್ಕೆ ಹರ್ಷಭರಿತ ಉತ್ಸಾಹದ ವಾತಾವರಣ ನೀಡಿತು. ಗಣ್ಯರಿಂದ ದೀಪ ಬೆಳಗಿಸುವ ಮೂಲಕ ಜ್ಞಾನ, ಬೆಳಕು ಮತ್ತು ಹೊಸ ಶೈಕ್ಷಣಿಕ ಅವಧಿಯ ಶುಭಾರಂಭವನ್ನು ಸಂಕೇತಿಸಿದoತೆ ಆಚರಿಸಲಾಯಿತು. ಅಡ್ವಾನ್ಸ್ಡ್ ಕಂಪ್ಯೂಟಿoಗ್ ವಿಭಾಗದ ಮುಖ್ಯಸ್ಥೆ ಡಾ. ಜಯತಿ ಭದ್ರಾ, ಸ್ವಾಗತ ಭಾಷಣವನ್ನು ನೀಡಿ ಸಮಾರಂಭದ ಉದ್ದೇಶವನ್ನು ತಿಳಿಸಿದರು. ಮುಖ್ಯ ಅತಿಥಿಯನ್ನು ಗೌರವಿಸುವ ಮೂಲಕ ಅವರನ್ನು ಪರಿಚಯಿಸಲು ಶ್ರೀ ಆ್ಯರೆನ್ ಲಾರೆನ್ಸ್ ಡಿ’ಲಿಮಾ ಆವರಣ ರೂಪದಲ್ಲಿ…
Author: main-admin
ಉಡುಪಿ: ನಿನ್ನೆ ಬೆಳಿಗ್ಗೆ 2:30ರ ಸುಮಾರಿಗೆ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ತಡೆದು ನಿಲ್ಲಿಸಿದಾಗ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನನ್ನು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.ಆರೋಪಿಯನ್ನು ಉಡುಪಿ ತಾಲ್ಲೂಕು ಕೊಡವೂರು ಗ್ರಾಮದ ಜುಮಾದಿನಗರ ನಿವಾಸಿ ಸಾಗರ್ (25) ಎಂದು ಗುರುತಿಸಲಾಗಿದೆ. ಮಣಿಪಾಲ ಪೊಲೀಸರು ಕೂಡಲೇ ಆತನನ್ನು ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಈತ ವಿಚಾರಣೆಯ ಸಂದರ್ಭ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಧಿಕಾರಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಮತ್ತು ಅವರ ಕರ್ತವ್ಯಗಳನ್ನು ನಿರ್ವಹಿಸದಂತೆ ತಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಲಾಗಿರುವ ಶವಗಳ ಕುರಿತಂತೆ ರಾಜ್ಯ ಸರಕಾರ ನಡೆಸುತ್ತಿರುವ ಎಸ್ಐಟಿ ತನಿಖೆ ಚುರುಕುಗೊಂಡಿದೆ. ಈಗಾಗಲೇ ಎಸ್ ಐಟಿ ದೂರುದಾರನ ವಿಚಾರಣೆ ಪ್ರಾರಂಭಿಸಿದ್ದು. ಇಂದು ಎರಡನೇ ಮತ್ತೆ ದೂರುದಾರನ ವಿಚಾರಣೆ ಪ್ರಾರಂಭಿಸಿದೆ. ಎಸ್‌ಐಟಿ ತಂಡದ ಮುಖ್ಯಸ್ಥ ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ರವಿವಾರ ಎಸ್‌ಐಟಿ ತಂಡವು ದೂರುದಾರನ ವಿಚಾರಣೆ ನಡೆಸುತ್ತಿದೆ. ರವಿವಾರ ಬೆಳಗ್ಗೆ 10.30ರ ಸುಮಾರಿಗೆ ದೂರುದಾರ ತನ್ನ ವಕೀಲರೊಂದಿಗೆ ಮಂಗಳೂರಿನ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ ಎನ್ನಲಾಗಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಪ್ರಣಬ್ ಮೊಹಾಂತಿ ಎಸ್.ಐ.ಟಿ ಕಚೇರಿಗೆ ಆಗಮಿಸಿ, ದೂರುದಾರನ ವಿಚಾರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ. ಜುಲೈ 26ರಂದು ದೂರುದಾರನನ್ನು ಪೊಲೀಸ್ ಅಧಿಕಾರಿಗಳಾದ ಅನುಚೇತ್, ಜಿತೇಂದ್ರ ಕುಮಾರ್ ದಯಾಮ ಸಹಿತ ಇತರ ಸಿಬ್ಬಂದಿ ಸತತ 8 ಗಂಟೆಗಳ ಕಾಲ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ ಬಳಿಕ ಸಂಜೆ ವೇಳೆ ಅವರ ವಕೀಲರ ಜೊತೆ ಕಳುಹಿಸಿ ಕೊಟ್ಟಿದ್ದರು. ರವಿವಾರ ಮತ್ತೆ ದೂರುದಾರನನ್ನು ಎಸ್.ಐ.ಟಿ ಕಚೇರಿಗೆ ಕರೆಸಿದ್ದು,…
ಬ್ಯಾಂಕಿಂಗ್’ನಲ್ಲಿ ಹೊಸ ದಿಗಂತಗಳನ್ನು ಅನ್ವೇಷಿಸಲು ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು, ಎಂಸಿಸಿ ಬ್ಯಾಂಕ್ ಜುಲೈ 24, 2025 ರಂದು ಮಂಗಳೂರಿನ ಅತ್ತಾವರದಲ್ಲಿರುವ ಹೋಟೆಲ್ ಅವತಾರ್‌ನಲ್ಲಿ ‘ಐಡಿಯಾ ಸಮ್ಮಿತ್ 2025’ (Idea Summit 2025) ಅನ್ನು ಆಯೋಜಿಸಲಾಗಿತ್ತು. ಈ ಸಮ್ಮಿತ್’ನ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರು ವಹಿಸಿದ್ದರು. ಗಣ್ಯ ಭಾಷಣಕಾರರಲ್ಲಿ ಹೆಸರಾಂತ ಎನ್‌ಆರ್‌ಐ ಉದ್ಯಮಿ ಮತ್ತು ಉದಾರ ದಾನಿ ಶ್ರೀ ಮೈಕಲ್ ಡಿಸೋಜಾ, ಎನ್‌ಐಟಿಕೆ ಸುರತ್ಕಲ್‌ನ ನಿವೃತ್ತ ಪ್ರಾಧ್ಯಾಪಕರು (HAG) ಪ್ರೊ. ಡಾ| ಅಲೋಶಿಯಸ್ ಸಿಕ್ವೇರಾ, ಆರ್‌ಎಂಸಿಆರ್ & ಕಂ., ಪಾಲುದಾರರಾದ ಸಿಎ ಮ್ಯಾಕ್ಸಿಮ್ ಎಂ. ಫೆರ್ನಾಂಡಿಸ್, ಚಾರ್ಟರ್ಡ್ ಅಕೌಂಟೆಂಟ್, ಆರ್ಬಿಟ್ರೇಟರ್ ಮತ್ತು IIM kozhikode ಇದರ ಅತಿಥಿ ಪ್ರಾಧ್ಯಾಪಕ ಪ್ರೊ. ಸಿಎ ಲಾಯ್ನಲ್ ಅರಾನ್ಹಾ ಮತ್ತು ಅನುಭವಿ ಬ್ಯಾಂಕರ್ ಹಾಗೂ ಬ್ಯಾಂಕ್ ಆಫ್ ಮಹಾರಾಷ್ಟ್ರದ ಮಾಜಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶ್ರೀ ಅಲೆನ್ ಸಿ.…
ಮಂಗಳೂರು : ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿಅಗಸ್ಟ್ 1 ರಿಂದ 2 ರವರೆಗೆ 15ನೇ ಆವೃತ್ತಿಯ ಉದ್ಯೋಗ ಮೇಳವು ನಡೆಯಲಿದ್ದು, ವಿವಿಧ ವಲಯಗಳ 300ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, 15,900ಕ್ಕೂ ಅಧಿಕ ಉದ್ಯೋಗಾವಕಾಶಗಳು ತೆರೆದುಕೊಂಡಿವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಮಾನ್ಯುಫ್ಯಾಕ್ಟರಿಂಗ್, ಲಾಜಿಸ್ಟಿಕ್ಸ್, ಐಟಿ, ಐಟಿಇಎಸ್, ಬ್ಯಾಂಕಿಂಗ್ ಹಾಗೂ ಹಣಕಾಸು, ಹೆಲ್ತ್‌ಕೇರ್, ಫಾರ್ಮಾ, ಮಾಧ್ಯಮ, ಮಾರಾಟ ಮತ್ತು ಚಿಲ್ಲರೆ, ಆತಿಥ್ಯ ವಲಯಗಳ ಪ್ರಮುಖ ಕಂಪನಿಗಳು ಈಗಾಗಲೇ ನೋಂದಣಿ ಮಾಡಿಕೊಂಡಿವೆ’ ಎಂದರು.ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬರುವವರಿಗೆ ಜುಲೈ 31ರಿಂದ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನೋಂದಣಿ ಹಾಗೂ ಪಾಲ್ಗೊಳ್ಳುವ ಕಂಪನಿಗಳ ವಿವರಕ್ಕೆ www.alvaspragati.com ಈ ತಾಣಕ್ಕೆ ಭೇಟಿ ನೀಡಬಹುದು ಎಂದು ಹೇಳಿದರು. ಮಾಹಿತಿಗೆ ಸಂಪರ್ಕ ಸಂಖ್ಯೆ: 9741440490, 7975223865.
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ದೂರುದಾರ ಎಸ್ ಐ ಟಿ ಎದುರು ವಿಚಾರಣೆಗೆ ಹಾಜರಾಗಿದ್ದಾನೆ. ರಾಜ್ಯ ಸರ್ಕಾರ ನಿಯೋಜಿಸಿರುವ ಎಸ್ ಐ ಟಿ ( ವಿಶೇಷ ತನಿಖಾ ತಂಡ) ದ ಎದುರು ಈತ ವಿಚಾರಣೆಗೆ ಹಾಜರಾಗಿದ್ದಾನೆ. ಕದ್ರಿಯಲ್ಲಿರುವ ಐಬಿ ಕಚೇರಿಯಲ್ಲಿ ತೆರೆದಿರುವ ಎಸ್ ಐ ಟಿ ಕಚೇರಿಗೆ ದೂರುದಾರ ತನ್ನ ವಕೀಲರ ಜೊತೆ ಆಗಮಿಸಿದ್ದಾನೆ. ಡಿಐಜಿ ಎಂಎನ್ ಅನುಚೇತ್ ಸಮ್ಮುಖದಲ್ಲಿ ದೂರುದಾರನ ವಿಚಾರಣೆ ನಡೆಯಲಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆಗೆ ಇಂದು ಎಸ್ಐಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳಿದ್ದು, ಇಂದಿನಿಂದ ತನಿಖೆ ನಡೆಸಲಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ಆದೇಶಿಸಿದೆ.
ನವದೆಹಲಿ: ಮಂಗಳೂರಿನ ಹಳೇ ಬಂದರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರತ್ಯೇಕ ಲಕ್ಷದ್ವೀಪ ಜೆಟ್ಟಿ ನಿರ್ಮಾಣ ಯೋಜನೆ ಮಂಜೂರಾತಿ ಪಡೆದು ಮೂರು ವರ್ಷ ಕಳೆದರೂ ಇನ್ನು ಕೂಡ ಪರಿಸರ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ ಹಲವು ಅಗತ್ಯ ಅನುಮತಿ ಬಾಕಿಯಿದ್ದು, ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನ ಪ್ರಕ್ರಿಯೆ ಸಾಕಷ್ಟು ವಿಳಂಬವಾಗಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಬಂದರು ಸಚಿವ ಸರ್ಬಾನಂದ ಸೋನೋವಾಲ್ ಅವರ ಗಮನಸೆಳೆದಿದ್ದಾರೆ. ಸಂಸತ್ತಿನಲ್ಲಿ ನಿಯಮ 377ರಡಿ ವಿಷಯ ಪ್ರಸ್ತಾಪಿಸಿರುವ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಸಾಗರಮಾಲಾ-1 ಯೋಜನೆಯಡಿ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಣೆ ಹಾಗೂ ವ್ಯಾಪಾರ-ವಹಿವಾಟು ವೃದ್ಧಿಸುವ ಉದ್ದೇಶದಿಂದ ಮಂಗಳೂರಿನ ಹಳೇ ಬಂದರಿನಲ್ಲಿ ಪ್ರತ್ಯೇಕ ಲಕ್ಷದ್ವೀಪ ಜೆಟ್ಟಿ ನಿರ್ಮಾಣ ಯೋಜನೆ 2022 ಘೋಷಣೆಯಾಗಿತ್ತು. 2023ರಲ್ಲಿ ಟೆಂಡರ್ ಪ್ರಕ್ರಿಯೆ ಕೂಡ ನಡೆದಿತ್ತು. ಆದರೆ, ಆ ಬಳಿಕ ಈ ಯೋಜನೆ ಅನುಷ್ಠಾನಕ್ಕೆ ಬರುವಲ್ಲಿ ಯಾವುದೇ ಆಡಳಿತಾತ್ಮಕ ಕ್ರಮಗಳಾಗಿಲ್ಲ…
ಬಂಟ್ವಾಳ: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ ೨೭ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಜು. 25ರಂದು ಬಂಧಿಸಿದ್ದಾರೆ. ಪುದು ಗ್ರಾಮದ ರೊಟಿ ಗುಡ್ಡೆ ನಿವಾಸಿ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ (32) ಬಂಧಿತ ಆರೋಪಿ.ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸರು 10 ಮಂದಿ ಆರೋಪಿಯನ್ನು ಬಂಧಿಸಿದ್ದರು. ಜು. 21ರಂದು 11ನೇ ಆರೋಪಿ ಅಮ್ಮುಂಜೆ ಗ್ರಾಮದ ಶಾಹಿತ್ ಯಾನೆ ಸಾಹಿತ್‌ನನ್ನು ಬಂಧಿಸಿ ಕಸ್ಟಡಿಗೆ ಪಡೆದಿದ್ದರು. ಪ್ರಾರಂಭದಲ್ಲಿ ಬಂಧಿತ ಬಹುತೇಕ ಎಲ್ಲಾ ಆರೋಪಿಗಳನ್ನು ಪೊಲೀಸರು ಕೆಲ ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದು, ಪ್ರಸ್ತುತ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಕೊಟ್ಟ ದೂರಿನ ತನಿಖೆಯನ್ನು ಎಸ್ಐಟಿ (SIT) ಇಂದಿನಿಂದ ನಡೆಸಲಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆಗೆ ಇಂದು ಎಸ್ಐಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳಿದ್ದು, ಇಂದಿನಿಂದ ತನಿಖೆ ನಡೆಸಲಿದೆ. ಎಸ್ಐಟಿ ಮುಖ್ಯಸ್ಥ ಡಿಜಿಪಿ ಪ್ರಣವ್ ಮೊಹಾಂತಿ ನೇತೃತ್ವದ ಅಧಿಕಾರಿಗಳ ತಂಡವು ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಕ್ವಾಟ್ರಸ್ನಲ್ಲಿ ಎಸ್ಐಟಿ ಕಚೇರಿ ಆರಂಭಿಸಲಿದೆ ಎನ್ನಲಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ಆದೇಶಿಸಿದೆ.
ಸುಳ್ಯ: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರೂ ಸಾವನ್ನಪ್ಪಿರುವ ಘಟನೆ ಸಂಪಾಜೆಯ ಕೊಯನಾಡಿನಲ್ಲಿ ನಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತಕ್ಕೊಳಗಾದ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪ ಮೂಲದ್ದೆಂದು ತಿಳಿದು ಬಂದಿದ್ದು, ಮೃತಪಟ್ಟವರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಲಾಗಿದೆ. ಈ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪಲಿನಲ್ಲಿದ್ದು ಎನ್ನಲಾಗಿದ್ದು, ಮೃತಪಟ್ಟವರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಮೃತ ಯುವಕನ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.








