Author: main-admin

ಮಂಗಳೂರು: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಸೂಚಿಸಿದೆ. ಮುಸ್ಲಿಂ ಮಹಿಳೆಯರ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಲ್ಲಡ್ಕ ಭಟ್ ವಿರುದ್ಧ ಎಫ್‌ಐಆ‌ರ್ ದಾಖಲಾಗಿತ್ತು. ಅಲ್ಲದೆ, ಕೇಸು ದಾಖಲು ಹಿನ್ನೆಲೆಯಲ್ಲಿ ಅ.30ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಪ್ರಭಾಕರ ಭಟ್ ಅವರಿಗೆ ನೋಟೀಸ್ ನೀಡಿದ್ದರು. ಇದರ ಬೆನ್ನಲ್ಲೇ ಪುತ್ತೂರು ಸೆಶನ್ಸ್ ಕೋರ್ಟಿನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಪ್ರಭಾಕರ ಭಟ್ ಪರವಾಗಿ ಅಪೀಲು ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ವಿಚಾರಣೆ ದಿನಾಂಕದ ವರೆಗೆ ಬಲವಂತದ ಕ್ರಮ ಬೇಡವೆಂದು ಹೇಳಿ ಅ.29ಕ್ಕೆ ಮುಂದೂಡಿದೆ. ಅಲ್ಲದೆ, ಪ್ರತಿವಾದಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ.

Read More

ಕಾಸರಗೋಡು: ಅನಂತಪುರದ ಪ್ರೈವುಡ್ ಕಾರ್ಖಾನೆಯಲ್ಲಿ ಸುಮಾರು 300 ಕಾರ್ಮಿಕರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಅ.27ರಂದು ಸುಮಾರು ಗಂಟೆ 7ರಿಂದ 7.30ರೊಳಗೆ ನಡೆದ ದುರ್ಘಟನೆ ನಡೆದಿದೆ. ಇದರಲ್ಲಿ ಒಬ್ಬ ವಲಸೆ ಕಾರ್ಮಿಕ ಮೃತಪಟ್ಟಿದ್ದಾರೆ. ಅನಂತಪುರ ಬಳಿಯ ಕಣ್ಣೂರು ಕುನ್ನಿಲ್ ಸಮೀಪದ ಡೆಕ್ಕೂರು ಪ್ರೈವುಡ್ ಫ್ಯಾಕ್ಟರಿಯಲ್ಲಿನ ಬಾಯ್ಸರ್ ಸ್ಪೋಟಗೊಂಡಿದ್ದು ವಿವಿದೆಡೆ ಬೆಂಕಿ ಹರಡಿತು. 300 ರಷ್ಟು ಕಾರ್ಮಿಕರು ಸ್ಪೋಟ ಸಮಯದಲ್ಲಿ ಸ್ಥಳದಲ್ಲಿದ್ದರು ಎಂದು ವರದಿಯಾಗಿದೆ. ಸ್ಫೋಟದ ಪರಿಣಾಮ ಪೆರಾಲ್ ಕಣ್ಣೂರು, ಸಿದ್ದಿಬಯಲು ಸಮೀಪದವರೆಗೆ ಇದರ ಅಪಾಯ ಸಂಭವಿಸಿದೆ. ಈ ಬಗ್ಗೆ ಅಗ್ನಿಶಾಮಕ ದಳ ಸಮೇತ ಹಲವರು ಪರಿಸ್ಥಿತಿ ನಿಯಂತ್ರಣದಲ್ಲಿ ತೊಡಗಿದ್ದಾರೆ. ಈ ಭಾಗಕ್ಕೆ ವಾಹನ ಸಂಚಾರ ನಿಷೇಧಿಸಲಾಗಿದೆ.

Read More

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ಟೋಬರ್ 31ರ ಒಳಗೆ ಧರ್ಮಸ್ಥಳ ಪ್ರಕರಣ ಸಂಪೂರ್ಣಗೊಳ್ಳುತ್ತದೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಜಿ ಪರಮೇಶ್ವರ್ ಮಹತ್ವದ ಸುಳಿವು ನೀಡಿದ್ದು, ಅಕ್ಟೋಬರ್ 31ರ ಒಳಗಾಗಿ ಸೊಸೈಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದ ಕುರಿತು ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ಧರ್ಮಸ್ಥಳ ವಿರುದ್ಧ ರೂಪಿಸಿದ ಆರೋಪಕ್ಕೆ ಸಂಬಂಧಪಟ್ಟಂತೆ ಅಕ್ಟೋಬರ್ ನಲ್ಲಿ ಎಸ್ಐಟಿ ವರದಿ ನೀಡುವುದಾಗಿ ಹೇಳಿದೆ ಅಕ್ಟೋಬರ್ 31ರ ಒಳಗೆ ತನಿಖಾ ವರದಿ ಕೊಡಬಹುದು ಒಂದೆರಡು ದಿನ ಹಿಂದೆ ಮುಂದೆ ಆಗಬಹುದು ಅಷ್ಟೇ ಎಲ್ಲವನ್ನು ಸೇರಿಸಿ ಕೊಡಲು ಹೇಳಿದ್ದೇವೆ ಯಾವ ರೀತಿ ವರದಿ ಕೊಡುತ್ತಾರೆ ಅನ್ನುವುದು ನೋಡಬೇಕು ಅಂತ ಹೇಳಿದ್ದಾರೆ ಎಂದು ಜಿ ಪರಮೇಶ್ವರ್ ತಿಳಿಸಿದರು

Read More

ಬೆಂಗಳೂರು : ಡಿಜೆ ಹಳ್ಳಿ ಇನ್ಸ್ಪೆಕ್ಟರ್ ಸುನಿಲ್ ವಿರುದ್ಧ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನಿಲ್ ನನ್ನು ಸಸ್ಪೆಂಡ್ ಮಾಡಲಾಗಿದೆ ನಗರ ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದು ಇನ್ಸ್ಪೆಕ್ಟರ್ ಹಾಗೂ ಎ ಎಸ್ ಐ ವಿರುದ್ಧ ಪ್ರಕರಣ ದಾಖಲಾಗಿದ್ದು ಮಾಡಲಾಗಿದೆ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಸಿಂಗ್ ಹೇಳಿಕೆ ನೀಡಿದರು. ಕಳೆದ ಕೆಲವು ದಿನಗಳ ಹಿಂದೆ ಸಂತ್ರಸ್ತ ಮಹಿಳೆ ಡಿಜಿ ಕಚೇರಿಗೆ ದೂರು ನೀಡಿದ್ದರು. ಕಳೆದ ಒಂದು ವರ್ಷದಿಂದ ಮನೆ ಹಾಗೂ ಹೋಟೆಲ್ಗೆ ಕರೆಸಿಕೊಂಡು ಇನ್ಸ್ಪೆಕ್ಟರ್ ಸುನಿಲ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ ಬ್ಯೂಟಿ ಪಾರ್ಲರ್ ಹಾಕಿ ಬಿಸಿನೆಸ್ ಮಾಡಲು ಹಣ ಕೊಡುತ್ತೇನೆ ಎಂದು ಹೇಳಿ ನನ್ನ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸೆಗಿದ್ದಾರೆ. ಖಾಸಗಿ ಫೋಟೋ ಮತ್ತು ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ದೂರು…

Read More

ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಯೋಜನೆಯಲ್ಲಿ ಸಬ್ಸಿಡಿ ಸಾಲ ತೆಗೆಸಿ ಕೊಡುವುದಾಗಿ ನಂಬಿಸಿ ಬ್ರಹ್ಮಾವರದಲ್ಲಿ ಕೋಟ್ಯಾಂತರ ರೂಪಾಯಿ ವಂಚಿಸಿರುವ ಜಾಲ ಪತ್ತೆ ಹೆಚ್ಚಲಾಗಿದೆ. ವಂಚನೆಗೆ ಒಳಗಾದವರು ಉಡುಪಿ, ಬ್ರಹ್ಮಾವರ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿದ್ದು,ಪೊಲೀಸರು ಕಾರ್ಯಾಚರಣೆ ನಡೆಸಿ ವಂಚನೆ ಜಾಲದ ಕಿಂಗ್ ಪಿನ್ ಬ್ರಹ್ಮಾವರ ತಾಲ್ಲೂಕು ಆರೂರು ಗ್ರಾಮ ಕೌಸಲ್ಯಾ ಎಂಬ ಮಹಿಳೆಯನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಈ ವಂಚನೆ ಜಾಲದ ಕೊಕ್ಕರ್ಣೆ ಮತ್ತು ಬೈಂದೂರಿನ ಇನ್ನಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮದಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವ ಆಸೆ ತೋರಿಸಿ ಸುಮಾರು ಒಂದೂವರೆ ಕೋಟಿ ರೂಪಾಯಿ ವಂಚಿಸಿದ್ದು ಈ ಬಗ್ಗೆ ಬ್ರಹ್ಮಾವರ ತಾಲ್ಲೂಕು ಹೆರಾಡಿ ಗ್ರಾಮದ ಸರಿತಾ ಲೂಯಿಸ್ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ರಿ ಪ್ರಕರಣದಲ್ಲಿ ಸರಿತಾ ಲೂಯಿಸ್ ಅವರಿಗೆ ಸುಮಾರು 80,72,000 ಹಾಗೂ ಅವರ ಸಂಬಂದಿ ಅಂಜಲಿನ್ ಡಿಸಿಲ್ವ ಅವರಿಗೆ 65,00,000 ವಂಚಿಸಿರುವ ಬಗ್ಗೆ…

Read More

ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾಡಿದ ವಿವಾದಾತ್ಮಕ ಭಾಷಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಅಕ್ಟೋಬರ್30ರಂದು ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಧಾರ್ಮಿಕ ದ್ವೇಷ ಪ್ರಚೋದನೆ ಮತ್ತು ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 25 ರಂದು ಪುತ್ತೂರು ತಾಲೂಕಿನ ಈಶ್ವರಿ ಪದ್ಮುಂಜ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇತ್ತೀಚೆಗೆಉಪ್ಪಳಿಗೆಯಲ್ಲಿ ಭಗತ್ ಸಿಂಗ್ ಸೇವಾ ಯುವಶಕ್ತಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್ ಅವರ ಭಾಷಣವು ಹಿಂದೂ-ಮುಸ್ಲಿಂ ಸಮುದಾಯಗಳ ಬಗ್ಗೆ ಅವಮಾನಕಾರಿ ಹೇಳಿಕೆಗಳನ್ನು ನೀಡಿ, ಮತದಾರರ ಸಂಖ್ಯೆಯ ಉಲ್ಲೇಖದ ಮೂಲಕ ಧಾರ್ಮಿಕ ವೈಮನಸ್ಸು ಸೃಷ್ಟಿಸಲು ಪ್ರಯತ್ನಿಸಿದೆ ಎಂಬ ಗಂಭೀರ ಆರೋಪವಿದೆ. ಭಾಷಣವು ಖಾಸಗಿ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಿತ್ತು.

Read More

ಮಂಗಳೂರು: ನವಮಂಗಳೂರು ಬಂದರ್ ನಿಂದ 100 ನಾಟಿಕಲ್ ಮೈಲು ದೂರದ ಅರಬ್ಬೀ ಸಮುದ್ರದಲ್ಲಿ ಶನಿವಾರ ಅಪಾಯಕಾರಿ ಸ್ಥಿತಿಯಲ್ಲಿದ್ದ ಬೋಟ್ ವೊಂದನ್ನು ಪತ್ತೆ ಹಚ್ಚಿದ ಇಂಡಿಯನ್ ಕೋಸ್ಟ್ ಗಾರ್ಡ್ 31 ಮೀನುಗಾರರನ್ನು ರಕ್ಷಿಸಿದೆ. ಅ.24ರಂದು ಗೋವಾ ತೀರದಲ್ಲಿ ಕಾಣಿಸಿಕೊಂಡಿದ್ದ ಈ ಬೋಟ್ ಬಳಿಕ ಕಾಣೆಯಾಗಿತ್ತು. ಮಾಹಿತಿ ಪಡೆದ ಕೋಸ್ಟ್ಗಾರ್ಡ್ ಅಧಿಕಾರಿಗಳು ಸಿಬ್ಬಂದಿ ಮೂಲಕ ಹುಡುಕಾಟ ಆರಂಭಿಸಿದರೂ ಪ್ರಯೋಜನವಾಗಲಿಲ್ಲ. ಕೆಲವು ದಿನದಿಂದ ಸುರಿಯುವ ಭಾರೀ ಮಳೆ, ಗಾಳಿಗೆ ಸಮುದ್ರ ಪ್ರಕ್ಷುಬ್ಧಗೊಂಡಿತ್ತು. ಈ ವೇಳೆ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಾಪತ್ತೆಯಾಗಿತ್ತು. ಬೋಟ್ ಪತ್ತೆಗೆ ಪ್ರಯತ್ನಿಸಿದರೂ ಫಲಿಸಿರಲಿಲ್ಲ. ಅಂತಿಮವಾಗಿ ಕೊಚ್ಚಿಯಿಂದ ಏರ್ ಕ್ರಾಫ್ಟ್ ತರಿಸಿ ಹುಡುಕಾಟ ಮುಂದುವರಿಸಲಾಯಿತು. ಶನಿವಾರ ಅಪಾಯಕ್ಕೆ ಸಿಲುಕಿದ್ದ ಬೋಟ್ ಅನ್ನು ಪತ್ತೆಹಚ್ಚಲಾಗಿದ್ದು, ಅದರಲ್ಲಿದ್ದ 31 ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಕೋಸ್ಟ್ ಗಾರ್ಡ್ ಪ್ರಕಟನೆ ತಿಳಿಸಿದೆ.

Read More

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ಹೊಳೆನರಸೀಪುರದ ಸಂಜಯ್‌ (25) ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಉಪ್ಪಿನಂಗಡಿ ಅಡ್ಡಹೊಳೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಸಂಭವಿಸಿದೆ. ಕಾರು ಚಾಲಕ ಅರಕಲಗೂಡು ನಿವಾಸಿ ಸಂದೀಪ್‌, ಕಾರಿನಲ್ಲಿದ್ದ ಶೇಷ, ಮಹೇಶ್‌ ಅವರು ಅಪಾಯದಿಂದ ಪಾರಾಗಿದ್ದಾರೆ. ಸಂಜಯ್‌ ಹಾಗೂ ಇತರರು ತಮ್ಮ ತೋಟದಲ್ಲಿ ಬೆಳೆದ ಹೂಗಳನ್ನು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾರಾಟ ಮಾಡಲು ಉಡುಪಿಗೆ ಬಂದಿದ್ದರು. ಹೂವು ಮಾರಾಟ ಮಾಡಿ ಮತ್ತೆ ಊರಿಗೆ ಮರಳುತ್ತಿದ್ದ ವೇಳೆ ಈ ದುರ್ಘ‌ಟನೆ ಸಂಭವಿಸಿದೆ.

Read More

ಪುತ್ತೂರು: ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಸಂಪ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅ.20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅವಮಾನಿಸಿ, ಗರ್ಭಿಣಿ ಮಹಿಳೆಯರನ್ನು ನಿಂದನೆ ಮಾಡಿದ್ದಾರೆಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ದೂರು ನೀಡಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ತನ್ನ ಭಾಷಣದಲ್ಲಿ ”ಆಚೆ ಮನೆಯಲ್ಲಿ ಒಬ್ಬಳು ಬ್ಯಾರ್ದಿ ಇದ್ದು, ಅವಳು 6ನೆಯದ್ದು ಆಗಿ 7ನೇ ಗರ್ಭಿಣಿಯಾಗಿದ್ದಳು. ಅವಳಿಗೆ ಯಾರಾದ್ರು ಕೇಳಿದ್ರಾ ? ನೀನು ನಾಯಿ ಮರಿ ಹಾಕಿದ ಹಾಗೆ ಹಾಕ್ತಾ ಇದ್ದೀಯಾ ಅಂತ ಕೇಳಿದ್ರಾ ? ಕೇಳುವ ದೈರ್ಯವೂ ಇಲ್ಲ. ಎರಡನೆಯದಾಗಿ ಅವರು ಹೇಳ್ತಾರೆ. ಅದು ಅಲ್ಲಾಹನಿಗೋಸ್ಕರ. ನಮ್ಮ ಮಕ್ಕಳು ಅಲ್ಲಾಹನಿಗೋಸ್ಕರ ಅನ್ನುತ್ತಾರೆ. ನೀವೇನಾದರೂ ಮಹಾಲಿಂಗೇಶ್ವರನಿಗಾಗಿ ಮಕ್ಕಳು ಮಾಡ್ತೀರಾ ? ನಮ್ಮ ಜನಸಂಖ್ಯೆ ಜಾಸ್ತಿಯಾಗಬೇಕು. ಮಂಗಳೂರು ವಿಧಾನಸಭಾ ಕ್ಷೇತ್ರ ಉಳ್ಳಾಲ ಅಂತ…

Read More

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಾರ್ ಎದುರು ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ರೌಡಿ ಶೀಟರ್ ಗುರುರಾಜ್ ಆಚಾರಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮತ್ತೊಬ್ಬ ಆರೋಪಿ ಅಶೋಕ್ ಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.ವರದಿಗಳ ಪ್ರಕಾರ, ಬಾರ್‌ನೊಳಗೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯು ತೀವ್ರಗೊಂಡು ಹೊರಗೆ ಚಾಕು ಇರಿತದಲ್ಲಿ ಅಂತ್ಯಗೊಂಡಿತ್ತು.ಈ ಘಟನೆಯಲ್ಲಿ ಗಾಯಗೊಂಡಿರುವ ನಿಝಾಮ್ ಮತ್ತು ಹಸನ್ ಮುಕ್ಷಿತ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅಕ್ಟೋಬರ್ 24ರಂದು, ಪೊಲೀಸರು ಆರೋಪಿಗಳಾದ ಸುಶಾಂತ್, ಅಲೆಕ್ಸ್, ನಿತಿನ್ ಮತ್ತು ಆರೋಪಿಗಳಿಗೆ ಸಹಾಯ ಮಾಡಿದ್ದ ಆರೋಪದ ಮೇಲೆ ಅರುಣ್ ಶೆಟ್ಟಿ ಅವರನ್ನು ಬಂಧಿಸಿದ್ದರು.

Read More