ಬೆಳ್ತಂಗಡಿ : ಹಲವರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ವಿಶೇಷ ತನಿಖಾ ಸಂಸ್ಥೆ(SIT) ರಚನೆ ಮಾಡಿ ಅದಕ್ಕೆ ಮುಖ್ಯಸ್ಥರಾಗಿ ಐಪಿಎಸ್ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ ಐಪಿಎಸ್ ಗಳಾದ ಎಂ.ಎನ್.ಅನುಚೇತ್, ಸೌಮ್ಯಲತ, ಜಿತೇಂದ್ರ ಕುಮಾರ್ ದಯಾಮ ರವರನ್ನು ಜುಲೈ 19 ರಂದು ನೇಮಕ ಮಾಡಿತ್ತು.ಇದೀಗ ಈ ತಂಡಕ್ಕೆ 20 ಅಧಿಕಾರಿಗಳನ್ನು ಎಸ್.ಐ.ಟಿ ಮೆಮೋ ನೀಡಿದ ಹಿನ್ನಲೆಯಲ್ಲಿ ನೇಮಕ ಮಾಡಿ ಜುಲೈ 22 ರಂದು ಡಿಜಿಪಿ ಸಲೀಂ ಆದೇಶ ಹೊರಡಿಸಿದ್ದಾರೆ. 20 ಅಧಿಕಾರಿಗಳು: ಸಿ.ಎ.ಸೈಮನ್ ಎಸ್ಪಿ, ಡಿಸಿಆರ್ಇ, ಮಂಗಳೂರು, ಲೋಕೇಶ್ ಎ.ಸಿಡಿಎಸ್ಪಿ ಸಿಇಎನ್ ಪಿಎಸ್, ಉಡುಪಿ, ಮಂಜುನಾಥ್- ಡಿಎಸ್ಪಿ ಸಿಇಎನ್ ಪಿಎಸ್, ಡಿಕೆ, ಮಂಜುನಾಥ್- ಪಿಐ, ಸಿಎಸ್ಪಿ, ಸಂಪತ್ ಇ.ಸಿ-ಪಿಐ, ಸಿಎಸ್ಪಿ, ಕುಸುಮಾಧರ್ ಕೆ- ಪಿಐ, ಸಿಎಸ್ಪಿ,ಮಂಜುನಾಥ್ ಗೌಡ-ಪಿಐ ಶಿರಸಿ ಗ್ರಾಮಾಂತರ, ಉತ್ತರ ಕನ್ನಡ, ಸಾವಿತ್ರು ತೇಜ್ ಪಿ.ಡಿ- ಸಿಪಿಐ, ಬೈಂದೂರು, ಉಡುಪಿ, ಕೋಕಿಲಾ ನಾಯಕ್- ಪಿಎಸ್ಐ, ಸಿಎಸ್ಪಿ, ವಾಯ್ಲೆಟ್ ಫೆಮಿನಾ- ಪಿಎಸ್ಐ, ಸಿಎಸ್ಪಿ, ಶಿವಶಂಕರ್- ಪಿಎಸ್ಐ, ಸಿಎಸ್ಪಿ,ರಾಜ್ ಕುಮಾರ್ ಉಕ್ಕಲಿ-…
Author: main-admin
ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ದಿನಾಂಕ 22-07-2025 ರಂದು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ.ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು. ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಮೊಹಮ್ಮದ್ ಅಬ್ದುಲ್ ಫಯಾನ್(27), ತಂದೆ: ಕೆ ಎಂ ಅಬ್ಬಾಸ್. ವಾಸ: ಬಟ್ಯಡ್ಕ ಮನೆ, ಬದ್ರಿಯ ನಗರ. ಕಲ್ಕಟ್ಟ, ಮಂಜನಾಡಿ, ಮಂಗಳೂರುಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ. ಈತ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ, ಬಂಟ್ವಾಳ…
ಕಾರ್ಕಳ: ಯುವಕನೊಬ್ಬನಿಗೆ ಟೆಲಿಗ್ರಾಫ್ ಆ್ಯಪ್ ಗೆ ಸೇರುವಂತೆ ಹೇಳಿ, ಸೇರಿದಂತೆ ನಂತರ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ. ವಂಚನೆಗೊಳಾಗದವರು ಸಸಿಹಿತ್ಲು ನಿವಾಸಿ ಅಶ್ವಿತ್ ಎಂದು ತಿಳಿದು ಬಂದಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ವಿವರ : ದಿನಾಂಕ 28/01/2025 ರಂದು ಪಿರ್ಯಾದಿದಾರರಾದ ಅಶ್ವಿತ್ (34) ಸಸಿಹಿತ್ಲು ಅಂಚೆ ಮಂಗಳೂರು ಇವರ ವಾಟ್ಸಾಪ್ ನಂಬ್ರಕ್ಕೆ ಮೀನಾ ಸಕ್ಪಾಲ್ +918433053932 ನಂಬ್ರದಿಂದ ವಾಟ್ಸಾಪ್ ಮೆಸೇಜ್ ಮಾಡಿ ಟೆಲಿಗ್ರಾಫ್ App ನಲ್ಲಿ S-Coin Investemnet task ಗೆ Join ಆಗುವಂತೆ ಹೇಳಿದ್ದು ಅದರಂತೆ ಫಿರ್ಯಾದುದಾರರು ಮೇಲೆ ಕಾಣಸಿದ App ಗೆ Join ಅಗಿ Account Detais ಕಳುಹಿಸಿರು ತ್ತಾರೆ. ಸದ್ರಿ Task ಗೆ ಹೆಚ್ಚಿನ ಹಣ ಹಾಕಿದರೇ ಹೆಚ್ಚು ಹೆಚ್ಚು ಕಮೀಷನ್ ನೀಡುವುದಾಗಿ ನಂಬಿಸಿದ್ದು ಅದರಂತೆ ಫಿರ್ಯಾದುದಾರರ Maharastra Bank Mangalore Branch ನ ಖಾತೆ ಯಿಂದ ದಿನಾಂಕ 29/01/2025 ರಿಂದ ದಿನಾಂಕ…
ಬಂಟ್ವಾಳ: ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ ಸಾಹಿತ್ (24) ಎಂದು ಗುರುತಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಮೇ 27ರಂದು ಅಬ್ದುಲ್ ರಹ್ಮಾನ್ ಅವರನ್ನು ಮಾರಕಾಯುಧಗಳಿಂದ ಕಡಿದು ಹತ್ಯೆಗೈದಿದ್ದರು. ಅವರೊಂದಿಗಿದ್ದ ಸ್ನೇಹಿತ ಕಲಂದರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಇದೀಗ ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ ಸಾಹಿತ್ (24) ಬಂಧಿತಸಲಾಗಿದ್ದು. ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 11ಕ್ಕೆ ಏರಿದೆ. ಆರೋಪಿ ಶಾಹಿತ್ ಯಾನೆ ಸಾಹಿತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಈತನನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ.
ವಿಟ್ಲ : ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಅನೀಶ್ ಹಾಗೂ ಸಹೋದರಿ ಮಹಿಳೆ ಸಹಿತ ಮಗು ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ ನಡೆದಿದೆ.ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಚಾಲಕ ಹಾಗೂ ಸಹೋದರಿ ಮಹಿಳೆ ಹಾಗೂ ಮಗು ಗಂಭೀರ ಗಾಯ ಗೊಂಡಿ ದ್ದಾರೆ. ಗಾಯಳು ಗಳನ್ನು ಅನಂತಾಡಿ ಆಶ್ವತ್ತಡಿ ಮೂಲದದವರೆಂದು ಗುರುತಿಸಲಾಗಿದೆ. ಚಿಕೆತ್ಸೆ ಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನಿಸಲಾಗಿತ್ತು. ನಿನ್ನೆ ತಡರಾತ್ರಿ ಚಾಲಕ ಅನೀಶ್ ಅನಂತಾಡಿ (34) ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.ಎರಡು ತಿಂಗಳ ಹಿಂದೆ ಮದುವೆಯಾದ ಅನೀಶ್ ಅನಂತಾಡಿ ಚಿಕಿತ್ಸೆ ಫಲಕಾರಿಯಾಗದೆ ವಿಧಿಯ ಕ್ರೂರ ಲೀಲೆಗೆ ಬಲಿಯಾಗಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ ಹಾಕುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಸೈರನ್ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸುವುದು ಎಂದು ಸೂಚನೆ ನೀಡಲಾಗಿದೆ. ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದಲ್ಲದೆ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಇದಲ್ಲದೆ, ಅನಗತ್ಯ ಸೈರನ್ ಬಳಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವುದಲ್ಲದೇ ಶಬ್ದ ಮಾಲಿನ್ಯವೂ ಉಂಟಾಗುತ್ತದೆ. ಸಾರ್ವಜನಿಕ ರಸ್ತೆಗಳ ಮೇಲೆ ಹಠಾತ್ತಾಗಿ ಸೈರನ್ ಬಳಸುವುದರಿಂದ ಇತರ ವಾಹನ ಚಾಲಕರಿಗೆ ದ್ವಂದ್ವ ಉಂಟಾಗಿ ಯಾವ ಕಡೆಗೆ ಚಲಿಸಬೇಕೆಂಬುದು ತಿಳಿಯದೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಬೆಂಗಾವಲು ಮತ್ತು ಇತರ ವಾಹನಗಳಿಗೆ ಗೊಂದಲ ಉಂಟುಮಾಡುವ…
ಮಂಗಳೂರು: ಹಲವರಿಗೆ ಕೋಟ್ಯಂತರ ಹಣ ವಂಚಿದ ಆರೋಪಿ ಕಂಕನಾಡಿ ಬೊಳ್ಳಗುಡ್ಡೆ ನಿವಾಸಿ ರೋಶನ್ ಸಲ್ಡಾನ ನನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದ್ದು, ಜು.23ರಂದು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ವಂಚನೆಗೊಳಗಾದವರು ಇದೀಗ ಪೊಲೀಸರಿಗೆ ದೂರು ನೀಡುತ್ತಿದ್ದಾರೆ. ಬಿಹಾರ ಮೂಲದ ಉದ್ಯಮಿ ಯೊಬ್ಬರಿಗೆ ಭೂ ಖರೀದಿ ವಿಚಾರದಲ್ಲಿ 10 ಕೋಟಿ ರೂ. ವಂಚಿಸಿರುವುದಾಗಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲಾಗುವುದು ಆಯುಕ್ತರು ಮಾಹಿತಿ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುವಂತೆ ಈ ಮೊದಲು ಸಿಐಡಿಗೆ ಪತ್ರ ಬರೆಯಲಾಗಿತ್ತು. ಸಿಐಡಿ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ ಎಂದು ಅವರು ಹೇಳಿದ್ದಾರೆ. ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ತನಗೆ ರೋಶನ್ 1 ಕೋ.ರೂ. ವಂಚನೆ ಮಾಡಿರುವುದಾಗಿ ಆರೋಪಿಸಿ ದೂರು ನೀಡಿದ್ದಾರೆ. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದ ಉದ್ಯಮಿಯೊಬ್ಬರು ರೂ 5 ಕೋಟಿ ಹಣವನ್ನು ಜು.16ರಂದು…
ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಗಂಡ- ಹೆಂಡತಿ ಸಹಿತ ಮಗು ಗಂಭೀರ ಗಾಯಗೊಂಡ ಘಟನೆ ಕೆಲಿಂಜದಲ್ಲಿ ನಡೆದಿದೆ. ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಗಂಡ ಹೆಂಡತಿ ಮಗು ಗಂಭೀರ ಗಾಯಗೊಂಡಿದ್ದಾರೆ. ಗಾಯಳುಗಳನ್ನು ಅನಂತಾಡಿ ಆಶ್ವತ್ತಡಿ ಮೂಲದದವರೆಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರು ನಜ್ಜು ಗುಜ್ಜಾಗಿದ್ದು , ಗಾಯಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಬಂಟ್ವಾಳ: ಪೋಲಿಸ್ ಉಪನೀರಿಕ್ಷರುಗಳ ವರ್ಗಾವಣೆ ಆದೇಶವನ್ನು ಸರಕಾರ ಹೊರಡಿಸಿದ್ದು ಬಂಟ್ವಾಳ ನಗರ ಪೋಲಿಸ್ ಠಾಣೆಯ ಎಸೈ ಆಗಿ ಕಾರ್ಕಳ ಮೂಲದ ದಕ್ಷ ಪ್ರಾಮಣಿಕ ಜನಸ್ನೇಹಿ ಅಧಿಕಾರಿ ಸಂದೀಪ್ ಶೆಟ್ಟಿ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ ಸಂದೀಪ್ ಶೆಟ್ಟಿಯವರು ಈ ಹಿಂದೆ ವಿಟ್ಲ ಪೋಲಿಸ್ ಠಾಣೆಯ ಎಸೈ ಆಗಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ವಿಟ್ಲದಲ್ಲಿ ಕಾರ್ಯನಿರ್ವಹಿಸಿ ಜನರ ಪ್ರಶಂಸನೀಯಗೆ ಪಾತ್ರರಾಗಿದ್ದರು..
ಮಂಗಳೂರು: ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ, ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಡುಪಿಯ ಬಡಗುಬೆಟ್ಟುವಿನ ಬಸ್ ಕಂಡಕ್ಟರ್ ದೀಪಕ್ (19) ಮತ್ತು ಆತನ ಸ್ನೇಹಿತ, ಪರ್ಕಳ, ಅತ್ರಾಡಿ ನಿವಾಸಿ ನವೀನ್ ಶೆಟ್ಟಿ (21) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಆರೋಪಿಗಳು ಜುಲೈ 19 ರಂದು ಬಪ್ಪನಾಡು ಬಳಿಯಿಂದ ಸ್ಕೂಟರ್‌ನಲ್ಲಿ ಬಾಲಕಿಯನ್ನು ಅಪಹರಿಸಿ ಉಡುಪಿಗೆ ಕರೆದುಕೊಂಡು ಹೋಗಿ ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.










