ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಇಂದು ಬೆಳಿಗ್ಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಮೆರವಣಿಗೆಯಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿ ಪದ್ಮರಾಜ್ ಆರ್. ಅವರ ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ತಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಗೊಂಬೆ ಬಳಗ, ಚೆಂಡೆ, ಕೊಂಬು ಸಹಿತ ಮೆರವಣಿಗೆಯಲ್ಲಿ ಕಾರ್ಯಕರ್ತರು ಹೆಜ್ಜೆ ಹಾಕಿದರು. ತೆರೆದ ವಾಹನದಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್., ಕಾಂಗ್ರೆಸ್ ಧ್ವಜದೊಂದಿಗೆ ಕಾರ್ಯಕರ್ತರ ಘೋಷಣೆ, ನಡಿಗೆಗೆ ವೇಗ ತುಂಬುವಂತಿತ್ತು.
Author: main-admin
ವಿಟ್ಲ : ವ್ಯಕ್ತಿಯೋರ್ವರಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಎಂಬಲ್ಲಿ ನಡೆದಿದೆ. ನೆಟ್ಲಮುಡ್ನೂರು ಗ್ರಾಮ ಬಂಟ್ವಾಳ ನಿವಾಸಿ ನವೀನ ಶೆಟ್ಟಿ (61) ಎಂಬವರು, ದಿನಾಂಕ 1-04-2024 ರಂದು ರಾತ್ರಿ, ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಸಾರ್ವಜನಿಕ ರಸ್ತೆಯಲ್ಲಿ ನವೀನ ಶೆಟ್ಟಿಯವರು, ಕೊರಗಪ್ಪ ಮತ್ತು ಸುಂದರ ಎಂಬವರೊಂದಿಗೆ ಮಾತನಾಡುತ್ತಿರುವಾಗ ಆರೋಪಿ ವಸಂತ ಎಂಬಾತನು ಬಂದು ನವೀನ ಶೆಟ್ಟಿಯವರಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ನವೀನ ಶೆಟ್ಟಿಯವರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 57/2024, ಕಲಂ: 504,324,506 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 01 ರಿಂದ ಮಾರ್ಚ್ 23 ರವರೆಗು ನಡೆಸಲಾಗಿತ್ತು. ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ, ತಕ್ಷಣ ಶುರುವಾಗಿತ್ತು. ಕರ್ನಾಟಕದ 1,124 ಕೇಂದ್ರಗಳಲ್ಲಿ ಸುಮಾರು 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಮಾರ್ಚ್ 25ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿತ್ತು. ಹೀಗಾಗಿ ಇಂದು ಫಲಿತಾಂಶವು ಹೊರ ಬೀಳಲಿದೆ, ಎಂಬ ಸುದ್ದಿ ಹರಡಿತ್ತು. ಅಲ್ಲದೆ ಇದಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆನ ನಡೆಸಿದೆ ಎಂಬ ಸುಳ್ಳು ಸುದ್ದಿ ಹಬ್ಬಿದ್ದು. ಅದು ಸುಳ್ಳು ಎಂದು ಈಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿಯನ್ನ ನೀಡಿದೆ. ಹಾಗಾದ್ರೆ ಫಲಿತಾಂಶ ಯಾವಾಗ ಹೊರಬೀಳುತ್ತದೆ? ಬನ್ನಿ ತಿಳಿಯೋಣ. ಸುಳ್ಳು ಸುದ್ದಿಯನ್ನು ನಂಬಬೇಡಿ!ದ್ವಿತೀಯ ಪಿಯುಸಿ ಫಲಿತಾಂಶ ನೋಡಲು ಲಕ್ಷ ಲಕ್ಷ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಈ ಹಿನ್ನೆಲೆ ಆದಷ್ಟು ಬೇಗ ರಿಸಲ್ಟ್ ನೀಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೂಡ ಪ್ರಯತ್ನ…
ಗೃಹಲಕ್ಷ್ಮಿ ಯೋಜನೆಯ ಫೆಬ್ರುವರಿ ತಿಂಗಳ ಹಣ ಈಗಾಗಲೇ ಮಹಿಳೆಯರ ಖಾತೆಗೆ ಜಮೆ ಆಗಿದೆ. ಇನ್ನೂ ಕೆಲವರ ಖಾತೆಗೆ ಹಣ ಜಮೆ ಆಗಲು ಬಾಕಿ ಇದ್ದು, ಶೀಘ್ರದಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮಾ ಆಗುವ ಸಾಧ್ಯತೆ ಇದೆ. ಏಪ್ರಿಲ್ ಮೊದಲ ಅಥವಾ ಎರಡನೇ ವಾರ 8ನೇ ಕಂತಿನ ಹಣವು ಸಹ ಬಿಡುಗಡೆಯಾಗಲಿದ್ದು, ಮಹಿಳೆಯರ ಖಾತೆಯಲ್ಲಿ ಒಟ್ಟು 16,000ರೂ. ಉಳಿಯಲಿದೆ.
ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ನಗರದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು(ಎ.2). ಬೆಳಗ್ಗೆ ನಡೆದಿದೆ. ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಅವರು ಇಂದು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ತಕ್ಷಣ ಅವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ. 2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು. ಜಿಪಂ ಸಿಇಒ ಡಾ.ಆನಂದ್, ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಮ್ಮಯ್ಯ, ಜಿಲ್ಲಾ ಪಂಚಾಯತ ನ ಲೆಕ್ಕಾಧೀಕ್ಷ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಶ್ರೀಧರ್ ರ ಚಿಕಿತ್ಸೆಗೆ ನೆರವಾಗಿದ್ದಾರೆ.…
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾದ ದಿನದಿಂದ ಎಪ್ರಿಲ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 41,90,665 ರೂ. ಮೌಲ್ಯದ 12,844 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ 8,69,950 ರೂ. ಮೌಲ್ಯದ 15.5 ಕೆ.ಜಿ ಡ್ರಗ್ಸ್ ಅನ್ನು ವಶಕ್ಕೆ ಪಡೆಯಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಮಾಡಿದಕ್ಕೆ ಒಟ್ಟು 243 ಎಫ್ಐಆರ್ ಕೇಸ್‌ಗಳು ದಾಖಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಬಂಟ್ವಾಳ : ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಜಕ್ರಿ ಬೆಟ್ಟಿನಲ್ಲಿ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.
ಕಡಬ : ಅಕ್ರಮ ಸ್ಪೋಟಕ ಬಳಸಿ ಕಲ್ಲು ಒಡೆಯುತ್ತಿರುವ ಪರಿಣಾಮ ಮನೆಯ ಶೀಟುಗಳಿಗೆ ಹಾನಿಯಾಗುತ್ತಿರುವ ಹಾಗೂ ಪರಿಸರ ಮಾಲಿನ್ಯ ಉಂಟಾಗುತ್ತಿರುವ ಬಗ್ಗೆ ಮನೆ ಮಾಲಿಕ ಸ್ಫೋಟ ನಡೆಸುವವನ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ನಡೆದಿದೆ. ಕಡಬ ತಾಲೂಕು ಯೇನೆಕಲ್ಲು ಗ್ರಾಮದ ಕುಕ್ಕಿಪ್ಪನ ಮನೆ ಎಂಬಲ್ಲಿನ ನಿವಾಸಿ ಆನಂದ ಗೌಡ ಅವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಇವರ ಮನೆ ಸಮೀಪದ ನಿವಾಸಿ ದಯಾನಂದ ಎಂಬವರು ಏನೇಕಲ್ಲು ಗ್ರಾಮದ ಅಜಿರುಪೂಲಿ ಎಂಬಲ್ಲಿ ಅವರ ಜಮೀನಿನಲ್ಲಿ ಕಳೆದ ಎರಡು ತಿಂಗಳಿನಿಂದ ಅಕ್ರಮವಾಗಿ ಸ್ಪೋಟಕಗಳನ್ನು ಬಳಸಿ ಕಲ್ಲುಗಳನ್ನು ಒಡೆಡು ಸೈಜು ಕಲ್ಲಗಳನ್ನಾಗಿ ತಯಾರಿಸುತ್ತಿದ್ದು, ಇದರಿಂದ ಸ್ಪೋಟಗೊಂಡ ಕಲ್ಲುಗಳು ಆನಂದ ಗೌಡ ಅವರ ಮನೆಯ ಶೀಟುಗಳ ಮೇಲೆ ಸಿಡಿದು ಮನೆ ಶೀಟುಗಳು ಹಾನಿಗೊಂಡಿದೆ ಹಾಗೂ ಕಲ್ಲು ಹುಡಿಯಿಂದಾಗಿ ಪರಿಸರ ಮಾಲಿನ್ಯವೂ ಉಂಟಾಗುತ್ತಿದೆ ಎಂದು ನೀಡಿದ ದೂರಿನಂತೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ : 23 /2024, ಕಲಂ: 427 ಐಪಿಸಿ ಮತ್ತು…
ಉಡುಪಿ: ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಭೀಕರ ಘಟನೆ ನಡೆದಿದೆ. ಮೃತ ಸವಾರನನ್ನು ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಅಬ್ದುಲ್ ಖಾದರ್ ಎಂಬುವರ ಮಗ ಮೊಹಮ್ಮದ್ ಕಾಶಿಫ್ (17) ಎಂದು ಗುರುತಿಸಲಾಗಿದೆ. ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಮೊಹಮ್ಮದ್ ಫೈಜ್ (14) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಸ್ತು ವಾಹನ ಸ್ಥಳಕ್ಕಾಗಮಿಸಿ ರಸ್ತೆ ಸಂಚಾರ ಸುಗಮಗೊಳಿಸಿತು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ ಕ್ಷುಲ್ಲಕ ಕಾರಣಕ್ಕಾಗಿ ತಮ್ಮ ತನ್ನ ಅಣ್ಣನನ್ನೇ ದೊಣ್ಣೆಯಿಂದ ಹೊಡೆದು ಕೊಲೆಗೈದ ಘಟನೆ ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ನಾಲ್ಕೂರು ಗ್ರಾಮದ ಕಪೆ ಅರಮನೆಜೆಡ್ಡು ನಿವಾಸಿ ಗುಲಾಬಿ ಎಂಬವರ ಮಗ ಮಂಜುನಾಥ (35) ಹಾಗೂ ಕೊಲೆ ಮಾಡಿದ ಆರೋಪಿ ಮೃತರ ತಮ್ಮ ವಿಶ್ವನಾಥ್ (30) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಮತ್ತು ವಿಶ್ವನಾಥ ಒಂದೇ ಮನೆಯಲ್ಲಿ ವಾಸವಾಗಿದ್ದರು. ಆಗಾಗ ಇವರ ಮಧ್ಯೆ ಗಲಾಟೆ ಆಗುತ್ತಿದ್ದು, ಮಧ್ಯರಾತ್ರಿ ವೇಳೆ ಮಂಜುನಾಥ, ತನ್ನ ತಮ್ಮ ವಿಶ್ವನಾಥನನ್ನು ಉದ್ದೇಶಿಸಿ, ನನ್ನ ಹೆಂಡತಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿದನು. ಇದೇ ವಿಚಾರದಲ್ಲಿ ವಿಶ್ವನಾಥ ಕೋಪ ಗೊಂಡು ಛಾವಣಿಯಲ್ಲಿದ್ದ ದೊಣ್ಣೆಯಿಂದ ಮಂಜುನಾಥ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ. ಇದರ ಪರಿಣಾಮ ಮಂಜುನಾಥ್ ಅವರ ತಲೆಯಿಂದ ತೀವ್ರ ರಕ್ತ ಹರಿದು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು…