ಮಂಗಳೂರು: ದಕ್ಷಿಣ ಕನ್ನಡದಲ್ಲಿ ತಮ್ಮನೇ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೋರಿಯಾರ್ ಸಮೀಪ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಗಾಯಾಳು ಹನುಮಪ್ಪ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಮೂಲದ ಅಣ್ಣ-ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ಪ್ಯಾಸೆಂಜರ್ ರೈಲಿನಲ್ಲಿ ಆಗಮಿಸಿದ ಇವರು ಬಜಕರೆ ರೈಲು ನಿಲ್ದಾಣದಲ್ಲಿ ಇಳಿದಿದ್ದಾರೆ. ರೈಲು ಹೋದ ನಂತರ ಸುಮಾರು 500 ಮೀಟರ್ ದೂರದವರೆಗೂ ಅಣ್ಣನನ್ನು ಕರೆದುಕೊಂಡು ಹೋದ ತಮ್ಮ ನಿಂಗಪ್ಪ ಏಕಾಏಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಹನಮುಪ್ಪ ಚರಂಡಿಗೆ ಹಾರಿದ್ದು, ಚರಂಡಿ ನೀರಿಗೆ ಬಿದ್ದ ಕಾರಣ ಬೆಂಕಿ ನಂದಿದೆ. ಅವರ ಕಿರುಚಾಟ ಕೇಳಿದ ಸ್ಥಳೀಯರು ಓಡಿ ಬಂದು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಡಬ ಠಾಣೆ ಪೊಲೀಸರು ನಿಂಗಪ್ಪನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ.
Author: main-admin
ಮಂಗಳೂರು, ಜೂನ್ 07: ಸೆಮಿನಾರ್ ತಪ್ಪಿಸಲು ಓರ್ವ ವಿದ್ಯಾರ್ಥಿನಿ (Student) ತಾನು ವ್ಯಾಸಂಗ ಮಾಡುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ (Medical College) ಬಾಂಬ್ ಇದೆ ಎಂದು ಹುಸಿ ಬೆದರಿಕೆ ಕರೆ ಮಾಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ವಿದ್ಯಾರ್ಥಿನಿ ಡಾ.ಚಲಸಾನಿ ಮೋನಿಕಾ ಚೌಧರಿಯನ್ನು ಬಂಧಿಸಿದ್ದಾರೆ. ಡಾ.ಚಲಸಾನಿ ಮೋನಿಕಾ ಚೌಧರಿ ಜೂ.4 ರಂದು ಸೆಮಿನಾರ್ ಕೊಡಬೇಕಿತ್ತು. ಆದರೆ, ಈ ಸಮಿನಾರ್ನಿಂದ ತಪ್ಪಿಸಿಕೊಳ್ಳಲು ಮೋನಿಕಾ ಜೂನ್ 4ರ ಬೆಳಗ್ಗೆ 8.15ಕ್ಕೆ ತಾನು ಓದುತ್ತಿರುವ ಕಣಚೂರು ಮೆಡಿಕಲ್ ಕಾಲೇಜಿನ ಹೆರಿಗೆ ವಾರ್ಡ್ನ ಸ್ಥಿರ ದೂರವಾಣಿಗೆ ಕರೆ ಮಾಡಿ, “ಬೆಳಗ್ಗೆ 11ಕ್ಕೆ ಕಣಚೂರು ಆಸ್ಪತ್ರೆ ಸ್ಫೋಟಿಸುವುದಾಗಿ” ಬೆದರಿಕೆ ಹಾಕಿದ್ದಾರೆ. ನಂತರ, ಮೋನಿಕಾ ಚೌಧರಿಯೇ ನಮ್ಮ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ. ತನಿಖೆ ವೇಳೆ ತಾಂತ್ರಿಕ ವಿಶ್ಲೇಷಣೆ ನಡೆಸಿದಾಗ, ದೂರು ನೀಡಿದ ವಿದ್ಯಾರ್ಥಿನಿ…
ಉಡುಪಿ : ಕಾರು ಚಾಲಕನ ಅಜಾಗರೂಕತೆಯ ಚಾಲನೆಗೆ ಎಂಬಿಎ ವಿಧ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ಪ್ರಸಿದ್ಧ ಭಕ್ತಿ ಗಾಯಕ ಮತ್ತು ತಬಲಾ ವಾದಕರೂ ಆಗಿದ್ದ ಎಂಬಿಎ ವಿದ್ಯಾರ್ಥಿ ಕಿದಿಯೂರು ನಿವಾಸಿ ಸಂಕೀರ್ತನ್ (28) ಎಂದು ಗುರುತಿಸಲಾಗಿದೆ. ಕುಂದಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರನ್ನು ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ್ದರಿಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ಸಂಭವಿಸಿದೆ. ಕಾರು ಮೊದಲು ಗೂಡ್ಸ್ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಡಿವೈಡರ್ ಏರಿ ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಕಾರಿನ ಹಿಂದೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿ ಸಂಕೀರ್ತನ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದರು. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಜನೆ ಹಾಡುಗಾರ ಕಿದಿಯೂರಿನ ಸುರೇಶ್ ಆಚಾರ್ಯ ಅವರ ಪುತ್ರನಾಗಿದ್ದ ಸಂಕೀರ್ತನ್ ತಬಲಾ,…
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ಸಿಬಿ, ಕೆಎಸ್ಸಿಎ, ಡಿಎನ್ಎ ಕಂಪನಿ ವಿರುದ್ಧ ಮೂರನೇ ಎಫ್ಐಆರ್ ದಾಖಲಾಗಿದೆ. ಗಾಯಾಳು ಬಿಕಾಂ ವಿದ್ಯಾರ್ಥಿ ಸಿ.ವೇಣು ಅವರು ನೀಡಿದ ದೂರು ಆಧಾರಸಿ, ಎಫ್ಐಆರ್ ದಾಖಲಾಗಿದೆ. ಆರ್ಸಿಬಿಯ ಉಚಿತ ಟಿಕೆಟ್ ಜಾಹೀರಾತು ನೋಡಿ ಕ್ರೀಡಾಂಗಣಕ್ಕೆ ಬಂದಿದ್ದೆ. ಕ್ರೀಡಾಂಗಣದ ಗೇಟ್ ನಂಬರ್ 6ರ ಬಳಿ ನೂಕುನುಗ್ಗಲು ಉಂಟಾಗಿತ್ತು. ನೂಕುನುಗ್ಗಲಿನಲ್ಲಿ ಬಲಗಾಲಿನ ಮೇಲೆ ಬ್ಯಾರಿಕೇಡ್ ಬಿದ್ದಿತ್ತು. ಇದರಿಂದ ಗಾಯಗೊಂಡು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಹಿಂದೆ ಎರಡು ಕೇಸ್ ದಾಖಲು ಕಾಲ್ತುಳಿತದಲ್ಲಿ ಗಾಯಗೊಂಡ ರೋಲನ್ ಗೊಮೆಸ್ ಎಂಬುವರು ಶುಕ್ರವಾರ ಸಂಜೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಆರ್ಸಿಬಿ ಫ್ರಾಂಚೈಸಿ, ಕೆಎಸ್ಸಿಎ ಮತ್ತು ಡಿಎನ್ಎ ಕಂಪನಿ ವಿರುದ್ಧ ಬಿಎನ್ಎಸ್ ಕಾಯ್ದೆ 2023 (U/s-125(a)) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಜಾಲತಾಣದಲ್ಲಿ ಆರ್ಸಿಬಿ ಪೋಸ್ಟ್ ನೋಡಿ ನನ್ನ ಗೆಳೆಯರ…
ಬ್ರಹ್ಮಾವರ: ಕರ್ನಾಟಕ ಲೋಕಾಯುಕ್ತರು ನಡೆಸಿದ ಸುಸಂಘಟಿತ ಕಾರ್ಯಾಚರಣೆಯಲ್ಲಿ, ಬ್ರಹ್ಮಾವರದ ಮೆಸ್ಕಾಂ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಪೂಜಾರಿ ಅವರು ಜೂನ್ 6 ರ ಶುಕ್ರವಾರ ಬೆಳಿಗ್ಗೆ ಸಾರ್ವಜನಿಕರೊಬ್ಬರಿಂದ 20,000 ರೂ. ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುಮಾರು ಎರಡು ತಿಂಗಳಿನಿಂದ ದೂರುದಾರರಿಗೆ ಕಿರುಕುಳ ನೀಡುತ್ತಿದ್ದರು, ಅವರ ಮನೆಗೆ ವಿದ್ಯುತ್ ಸಂಪರ್ಕ ನೀಡುವುದನ್ನು ವಿಳಂಬ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಕೆಲವು ಅವರ ಅಧಿಕೃತ ಕರ್ತವ್ಯದ ಭಾಗವಾಗಿದ್ದರೂ, ಮುಂದುವರಿಯಲು ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಆದರೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದ ಕಾರಣ ದೂರುದಾರರು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಈ ದೂರಿನ ಆಧಾರದ ಮೇಲೆ ಬಲೆ ಬೀಸಲಾಗಿದ್ದು, ಪೂಜಾರಿ ಬ್ರಹ್ಮಾವರದ ಮೆಸ್ಕಾಂ ಕಚೇರಿಯೊಳಗೆ ಲಂಚ ಸ್ವೀಕರಿಸುತ್ತಿದ್ದಾಗ ಬಂಧಿಸಲಾಗಿದೆ.ಅಶೋಕ್ ಪೂಜಾರಿ ಈ ಹಿಂದೆ ಕುಂದಾಪುರದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು ಮತ್ತು ಕಳೆದ…
ಮಂಗಳೂರು: ನಗರ ಹೊರವಲಯದ ಕುಡುಪುವಿನಲ್ಲಿ ಎ.27ರಂದು ನಡೆದ ವಯನಾಡಿನ ಅಶ್ರಫ್ ಎಂಬವರ ಗುಂಪು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಶುಕ್ರವಾರ ಜಾಮೀನು ಆಗಿದೆ. ಪ್ರಕರಣದ 18ನೆ ಆರೋಪಿ ಆದರ್ಶ್ ಎಂಬಾತನಿಗೆ ಮಂಗಳೂರಿನ 2ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. ಮೇ 31ರಂದು ಆರೋಪಿಗಳಾದ ರಾಹುಲ್ ಮತ್ತು ಕೆ.ಸುಶಾಂತ್ ಎಂಬವರಿಗೆ ಜಾಮೀನು ಲಭಿಸಿತ್ತು. ಜೂ.4ರಂದು ಸಂದೀಪ್, ದೀಕ್ಷಿತ್, ಸಚಿನ್‌ಗೆ ನ್ಯಾಯಾಲಯ ಜಾಮೀನು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 16 ಮಂದಿಯನ್ನು ಬಂಧಿಸಿದ್ದರು. ಆ ಪೈಕಿ ಈವರೆಗೆ 6 ಮಂದಿಗೆ ಜಾಮೀನು ಲಭಿಸಿದೆ. ಮೂವರ ಜಾಮೀನು ಅರ್ಜಿ ತಿರಸ್ಕೃತಗೊಂಡಿವೆ. ಉಳಿದ 7 ಮಂದಿ ಆರೋಪಿಗಳ ಅರ್ಜಿಯು ಸೋಮವಾರ ವಿಚಾರಣೆಗೆ ಬರಲಿದೆ ಎಂದು ತಿಳಿದು ಬಂದಿದೆ. ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಲು ವಿಳಂಬ, ದೂರಿನಲ್ಲಿದ್ದ ವ್ಯತ್ಯಾಸಗಳನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡಿವೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ಇನ್‌ಸ್ಪೆಕ್ಟರ್ ಸಹಿತ ಮೂವರು…
ಪುತ್ತೂರು ಜೂನ್ 06:ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದ್ದು, ಗಡಿಪಾರು ನೊಟೀಸ್ ಪಡೆದ 8 ಮಂದಿ ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ದಕ್ಷಿಣಕನ್ನಡ ಪೋಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ ಸಂಬಂಧಿಸಿದಂತೆ ಸುಮಾರು 36 ಮಂದಿ ಹಳೆ ಆರೋಪಿಗಳಿಗೆ ದಕ್ಷಿಣಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲು ಪಟ್ಟಿತಯಾರಿಸಲಾಗಿತ್ತು, ಅದರಲ್ಲಿ 8 ಮಂದಿಗೆ ಪೊಲೀಸ್ ಇಲಾಖೆ ನೋಟೀಸ್ ನೀಡಿತ್ತು. ಅದರಂತೆ ಇಂದು ನೋಟೀಸ್ ಜಾರಿಯಾದ 8 ಮಂದಿ ತಮ್ಮ ವಕೀಲರು ಸಹಾಯಕ ಆಯುಕ್ತರ ಮುಂದೆ ಹಾಜರಾಗಿದ್ದಾರೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ, ಅಬ್ದುಲ್ ರಹಮಾನ್, ಅಝೀಜ್, ಮಹಮ್ಮದ್ ಶಕೀರ್, ಅಬ್ದುಲ್ ಅಝೀಜ್, ಅಶ್ರಫ್, ಮನೋಜ್ ಕುಮಾರ್ ವಿಚಾರಣೆ ತಮ್ಮ ವಕೀಲರ ಮೂಲಕ ಹಾಜರಾಗಿದ್ದಾರೆ. ಸದ್ಯ ಜೂನ್ 21 ಕ್ಕೆ ಮುಂದಿನ ವಿಚಾರಣೆ ಮುಂದೂಡಲಾಗಿದೆ.
ಮಂಗಳೂರು : ಇತ್ತೀಚೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬಳಿಕ ಕಾನೂನು ಸುವವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರ ಲೊಕೇಶನ್ ಮತ್ತು ಮಾಹಿತಿ ಸಂಗ್ರಹದಂತಹ ಕ್ರಮ ಕೈಗೊಂಡಿದ್ದ ದಕ್ಷಿಣಕನ್ನಡ ಪೊಲೀಸ್ ಇಲಾಖೆಗೆ ಇದೀಗ ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ದಕ್ಷಿಣಕನ್ನಡ ಜಿಲ್ಲೆಗೆ ನೂತನ ಎಸ್ಪಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಪೊಲೀಸರು ಹಿಂದೂ ಸಂಘಟನೆಗಳ ಮುಖಂಡರ ಮನೆಗೆ ಮಧ್ಯರಾತ್ರಿ ಆಗಮಿಸಿ ಅವರ ಪೋಟೋ ಮತ್ತು ಲೊಕೇಶನ್ ಕುರಿತ ಮಾಹಿತಿ ಕಲೆಹಾಕಿದ್ದಾರೆ. ಇದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ದ.ಕ. ಜಿಲ್ಲಾ ಪೊಲೀಸ್ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಾಧಿಕಾರವು ದ.ಕ. ಜಿಲ್ಲಾ ಪೊಲೀಸ್ ಇಲಾಖೆಗೆ ಕಾರಣ ಕೇಳಿ ನೋಟಿಸ್ ನೀಡಿದೆ. ಡಾ.ಅರುಣ್ ಅವರು ಜಿಲ್ಲೆಗೆ ನೂತನ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕಳೆದ 10…
ಉಡುಪಿ: ಹೊಸದಾಗಿ ಖರೀದಿಸಿದ ಎಸ್‌ಯುವಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರದಲ್ಲಿರುವ ಕಿಯಾ ಶೋ ರೂಂ ಬಳಿ ಶುಕ್ರವಾರ ಮುಂಜಾನೆ ನಡೆದಿದೆ. ಹರಿಯಾಣ ಮೂಲದ ವ್ಯಕ್ತಿಗೆ ಸೇರಿದ್ದು ಎನ್ನಲಾದ ಈ ವಾಹನವನ್ನು ಕೆಲವೇ ದಿನಗಳ ಹಿಂದೆ ಖರೀದಿಸಲಾಗಿತ್ತು. ಕಾರು ಮಂಗಳೂರಿನಿಂದ ಹರಿಯಾಣ ಕಡೆಗೆ ಪ್ರಯಾಣಿಸುತ್ತಿತ್ತು. ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಮತ್ತು ಡಿವೈಡರ್‌ನಲ್ಲಿದ್ದ ಕ್ರಾಶ್ ಗಾರ್ಡ್‌ಗೆ ಗಣನೀಯ ಹಾನಿಯಾಗಿದೆ. ಘಟನೆಯ ಬಗ್ಗೆ ಕಾಪು ಪೊಲೀಸ್ ಠಾಣೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಉಪ್ಪಿನಂಗಡಿ:ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಹಿರೆಬಂಡಾಡಿ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಪತ್ನಿ ಪುಷ್ಪಲತಾ (34) ಅವರನ್ನು ಹಾಡುಹಗಲೇ ಉಪ್ಪಿನಂಗಡಿಯ ಅವರ ವಾಸ್ತವ್ಯದ ಮನೆಯಲ್ಲಿ ಕತ್ತು ಕೊಯ್ದು ಕೊಲೆಗೈದ ಪ್ರಕರಣ ನಡೆದು ಇದೀಗ ಸರಿಯಾಗಿ ಹನ್ನೊಂದು ವರ್ಷ ಪೂರ್ಣಗೊಂಡರೂ ಹಂತಕನ ಪತ್ತೆ ಅಸಾದ್ಯವಾಗಿರುವುದು ಪೊಲೀಸ್ ವ್ಯವಸ್ಥೆ ಮೇಲಿನ ನಂಬಿಕೆಗೆ ಚ್ಯುತಿಯುಂಟಾಗಿದೆ. ಅಂದು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಹಿರೆಬಂಡಾಡಿ ಸರಕಾರಿ ಪ್ರೌಢ ಶಾಲಾ ಮುಖ್ಯೋಪಧ್ಯಾಯರಾಗಿದ್ದ ಗುರುಮೂರ್ತಿ ಎಂಬವರ ಮಡದಿ ಇಬ್ಬರು ಮಕ್ಕಳ ತಾಯಿಯಾಗಿರುವ ಪುಷ್ಪಲತಾ ರವರು ಮೈಸೂರು ಮೂಲದವರಾಗಿದ್ದು, ,ತನ್ನ ವಾಸ್ತವ್ಯದ ಉಪ್ಪಿನಂಗಡಿ ಕ್ರೆçಸ್ತ ದೇಗುಲದ ಒಡೆತನದ ಬಾಡಿಗೆ ಮನೆಯಲ್ಲಿ ದಿನಾಂಕ 5/6/2014 ರ ಗುರುವಾರದಂದು ಮಾರಕಾಯುಧದಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಕೊಲೆಗೀಡಾಗಿದ್ದರು. ಪತಿ ಮತ್ತು ಮಕ್ಕಳು ಶಾಲೆಗೆ ಹೋದ ಬಳಿಕ ಎಂದಿನಂತೆ ಬಟ್ಟೆ ಬರೆಗಳನ್ನು ಒಗೆಯುವ ಕಾರ್ಯದಲ್ಲಿ ನಿರತಳಾಗಿದ್ದ ಈಕೆಯನ್ನು ಹಂತಕ ನೆಂಟನಂತೆಯೋ , ಪರಿಚಯಸ್ಥನಂತೆಯೋ ಬಂದು ಕೊಲೆಗೈದಿರುವ ಸಾಧ್ಯತೆಯನ್ನು ಮನೆಯಲ್ಲಿ ಕಂಡು ಬಂದ ತುಂಪು ಪಾನೀಯವನ್ನು ಲೋಟ ಶಂಕಿಸುವಂತೆ ಮಾಡಿತ್ತು. ತನ್ನ ವಾಸ್ತವ್ಯದ…









