ಸುರತ್ಕಲ್: “ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಸುರತ್ಕಲ್ ಇಡ್ಯಾದ ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಯೊಬ್ಬಳಿಗೆ ವಾಟ್ಸಾಪ್ ಸಂದೇಶ ಕಳುಹಿಸಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಈ ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈತ ಯುವತಿಯ ಸಹೋದರನಿಗೆ ವಾಟ್ಸ್‌ಆ್ಯಪ್ ಮೆಸೇಜ್ ಮಾಡಿ ಬೆದರಿಕೆ ಹಾಕಿದ್ದಾನೆ. ಇದರಿಂದ ಆತಂಕಗೊಂಡ ಯುವತಿಯ ಕುಟುಂಬ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಸುರತ್ಕಲ್ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
Author: main-admin
ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ. 7ರಂದು ಮಧ್ಯಾಹ್ನ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಹೆಸರಿನಲ್ಲಿ ಎರಡು ಸಿಮ್ ಇದೆ. ನಿಮ್ಮ ವಿರುದ್ಧ ದೂರು ಇದ್ದು, ಮುಂಬೈಯ ಎಗ್ರಿಪಾಡ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ತನಗೆ ಅಸಾಧ್ಯ ಎಂದಾಗ ಬೇರೆ ಬೇರೆ ರೂಪದಲ್ಲಿ ಬೇರೆ ಬೇರೆ ಮಂದಿ ಮಾತನಾಡಿ ಸಿಬಿಐ ಅಧಿಕಾರಿ ಎಂದು ನಂಬಿಸಿ ಹಂತ ಹಂತವಾಗಿ 31,12,000 ರೂ. ವನ್ನು ವಿವಿಧ ಬ್ಯಾಂಕ್ ಖಾತೆಗೆ ವರ್ಗಾಯಿಸಿ ಮೋಸ ಮಾಡಿದ್ದಾರೆ. ಆರೋಪಿಗಳಾದ ಸಂದೀಪ್ ರಾವ್, ಸಂಜನಾ, ನವೋಜೋತ್ ಸಿಮಿ ಎಂಬವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಮನವಿ ಮಾಡಿದ್ದಾರೆ.
ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಅಕ್ಟೋಬರ್ 24ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, 12 ಮೇಜುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು ‘ಡಿ’ ಗ್ರೂಪ್ ಸಿಬಂದಿ ಇರಲಿದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್‌ಗೆ 33ರಂತೆ ಮತಪೆಟ್ಟಿಗೆಗಳನ್ನು ಹಂಚಿಕೆ ಮಾಡಲಾಗುತ್ತದೆ. ಮೊದಲು ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ಅನಂತರ ಒಂದನೇ ಪ್ರಾಶಸ್ತ್ರದ ಮತಗಳ ಎಣಿಕೆ ಮಾಡಲಾಗುತ್ತದೆ. ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ರದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆಯನ್ನು ಘೋಷಿಸಲಾಗುವುದು. ಅಕ್ಟೋಬರ್ 21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392…
ಮಂಗಳೂರು: ನಗರದಲ್ಲಿ ಮಂಗಳವಾರ ನಸುಕಿನ ವೇಳೆ ಸಂಭವಿಸಿರುವ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ. ಮಂಗಳವಾರ ನಸುಕಿನ ವೇಳೆ ಸುಮಾರು 3:40ರ ಸುಮಾರಿಗೆ ನಗರದ ಕೆಪಿಟಿ ಬಳಿ ಪಿಕ್‌ಅಪ್ ವಾಹನ ಹಾಗೂ ಕಂಟೈನರ್ ಲಾರಿಯ ಮಧ್ಯೆ ಅಪಘಾತ ಸಂಭವಿಸಿತ್ತು. ಲಾರಿಯ ಕ್ಲೀನರ್ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಾಹಿತಿ ಪಡೆದ ಕದ್ರಿ ಠಾಣೆಯ ಮಹಿಳಾ ಪೊಲೀಸ್ ಕಾನ್ಸಬಲ್ ಮನ್ಶಿದಾ ಬಾನು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುವನ್ನು ತನ್ನ ಸ್ಕೂಟಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವಿಚಾರವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಕಮಿಷನರೇಟ್ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಾನ್ ಸ್ಟೇಬಲ್ ಮನ್ಶಿದಾ ಬಾನು ಅವರ ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 5.051 ಗ್ರಾಂ ಗಾಂಜಾ ಹಾಗೂ ಒಟ್ಟು 9.460 ಗ್ರಾಂ ಎಂಡಿಎಂ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅ.18ರಂದು ಬೈಕಂಪಾಡಿಯ ಕೆ.ಎಸ್.ಬಿ.ಸಿ.ಎಲ್ ಡಿಪೋ-2ಕ್ಕೆ ಹಾಸನದಿಂದ ಒಟ್ಟು 1,100 ಪೆಟ್ಟಿಗೆ (10,680 ಲೀ.) ಬಿಯರ್ ಅವಧಿ ಮೀರಿದ ರಹದಾರಿ ಪತ್ರದೊಂದಿಗೆ ಲಾರಿಯ ಮೂಲಕ ಸರಬರಾಜಾಗಿದ್ದು, ಅವಧಿ ಮೀರಿದ ರಹದಾರಿ ಪತ್ರದೊಂದಿಗೆ ಬಿಯರ್ ಸರಬರಾಜು ‘ ಮಾಡಿ ಅಬಕಾರಿ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಪತ್ತೆಹಚ್ಚಿ ವಾಹನ ಮತ್ತು ಬಿಯರ್ ಅನ್ನು ಜಪ್ತಿಪಡಿಸಿ ಕೇಸು ದಾಖಲಿಸಲಾಗಿದೆ. ಅ.14ರಂದು ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಗೂನಡ್ಕದ ಅಂಗಡಿಯೊಂದರಲ್ಲಿ ಹೋಮ್ ಮೇಡ್ ವೈನ್ ಅನ್ನು ಅಕ್ರಮವಾಗಿ ದಾಸ್ತಾನು ಹೊಂದಿ ಮಾರಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿ ಒಟ್ಟು 111.750 ಲೀ. ವೈನ್ ಜಪ್ತಿ ಮಾಡಿ ಅಬಕಾರಿ ಇಲಾಖೆಯ ಅಧಿಕಾರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅ. 20ರಂದು ಬೈಕಂಪಾಡಿಯಿಂದ ಬಜಪೆಗೆ ಹೋಗುವ…
ಬಂಟ್ವಾಳ: ಪೂರ್ವದ್ವೇಷದ ಹಿನ್ನೆಲೆಯಲ್ಲಿ ಹತ್ತಕ್ಕೂ ಹೆಚ್ಚು ಯುವಕರ ತಂಡ ಇಬ್ಬರ ಮೇಲೆ ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದ್ದು ದಾಳಿಯಿಂದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ್@ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂದು ಗುರುತಿಸಲಾಗಿದೆ. ತಲವಾರು ದಾಳಿಯಿಂದ ಗಂಭೀರವಾಗಿ ಗಾಯಗೊಂಡವರನ್ನು ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂದು ಗುರುತಿಸಲಾಗಿದೆ. ಅಮ್ಮೆಮಾರ್ ನಿವಾಸಿ ತಸ್ಲೀಮ್, ಮಹಮ್ಮದ್ ಶಾಕೀರ್, ನಾಸೀರ್, ಸಿಯಾಬು, ಸೈಫುದ್ದೀನ್ ಅವರು ಮಾತನಾಡುತ್ತಿದ್ದ ವೇಳೆ ತಸ್ಲೀಮ್‌ಗೆ ಕರೆಯೊಂದು ಬಂದಿದ್ದು, ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ಬೈದು ನಾಲ್ಕು ಮಾರ್ಗಕ್ಕೆ ಬರುವಂತೆ ಸವಾಲು ಒಡ್ಡಿದ್ದಾನೆ. ಅಮ್ಮೆಮಾರ್ ಶಾಲಾ ಬಳಿಗೆ ಹೋದಾಗ, ಆರೋಪಿ ಮನ್ಸೂರ್ ಹಾಗೂ ಇತರರಿದ್ದು, ಈ ವೇಳೆ ಪಲ್ಟಿ ಇಮ್ರಾನ್ ತಲವಾರಿನಿಂದ ತಸ್ಲೀಮ್‌ನ ಬಲ ಕಾಲು, ಮತ್ತೋರ್ವ ಆರೋಪಿ ಮುಸ್ತಾಕನು ಬಲಗೈಗೆ ಕಡಿದಿದ್ದು, ಸರ್ಫುದ್ದೀನ್ ಕಲ್ಲಿನಿಂದ ಹೊಡೆದಿದ್ದಾನೆ.…
ಬೆಳ್ತಂಗಡಿ: ಇಲ್ಲಿಯ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಾರುತಿ ಓಮ್ನಿ ಕಾರೊಂದು ಸುಟ್ಟು ಹೋದ ಘಟನೆ ಅ.22ರಂದು ರಾತ್ರಿ ಸಂಭವಿಸಿದೆ. ಕಾರು ಚಲಿಸುತ್ತಿರುವ ಸಮಯ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಬೆಂಕಿಯನ್ನು ನಂದಿಸಿದ್ದಾರೆ. ಕಾರು ಚರಂಡಿಯಲ್ಲಿದ್ದು, ಕಾರು ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ್ದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್‌ಸರ್ಕಿಟ್‌ನಿಂದ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದೆ.
ಸುರತ್ಕಲ್: ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ನಿನ್ನೆ ಸಂಜೆ ಸುರತ್ಕಲ್ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ. ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ನಿನ್ನೆ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಯುವಕನ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು: ಎನ್‌ಡಿಪಿಎಸ್ ಆ್ಯಕ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದ ಬಳಿಕ 4ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ, ಒಳಪೇಟೆಯ, ಟಿ.ಸಿ.ರಸ್ತೆಯ ನಿವಾಸಿ ಸಲೀಂ ಅಲಿಯಾಸ್ ಮೊಹಮ್ಮದ್ ಸಲೀಂ(38) ಬಂಧಿತ ಆರೋಪಿ. ಇಎನ್‌ಸಿ ಠಾಣೆಯಲ್ಲಿ ಕಲಂ : 8©,20(b) (ii) (a) NDPS ACT ಪ್ರಕರಣಕ್ಕೆ ಸಂಬಂಧಿಸಿದ 2019ರಲ್ಲಿ ಈತನನ್ನು ದಸ್ತಗಿರಿ ಮಾಡಲಾಗಿತ್ತು. ನ್ಯಾಯಾಲಯ ಈತನಿಗೆ ಜಾಮೀನು ನೀಡಿತ್ತು. ಬಳಿಕ ಈತನು ಇಲ್ಲಿಯವರೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಅಕ್ಟೋಬರ್ 22ರಂದು ಸೆನ್ ಕ್ರೈಂ ಪೊಲೀಸ್ ಠಾಣಾ ಸಿಬ್ಬಂದಿ ಆತನನ್ನು ಪತ್ತೆ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಪುತ್ತೂರು: ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ಕೃಷ್ಣ ಶೆಟ್ಟಿ ಅವರು ಅ.22 ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಪುತ್ತೂರು ಮರ್ದಾಳ ಮೂಲದವರಾದ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ನಿವೃತ್ತಿಗೊಂಡಿದ್ದರು. ಬಳಿಕ ಅವರು ಬೆಂಗಳೂರಿನಲ್ಲಿ ನೆಲೆಸಿದ್ದರು ಎಂದು ತಿಳಿದು ಬಂದಿದೆ.