ಮಂಗಳೂರು: ನಗರದ ಸೆಂಟ್ರಲ್ ಮಾರುಕಟ್ಟೆಯ ಬಳಿ ಅಪರಿಚಿತ ಯುವಕನೋರ್ವನ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಸುಮಾರು 35 ವರ್ಷ ಪ್ರಾಯದ ಈ ಅಪರಿಚಿತ ಯುವಕನ ಪತ್ತೆಯಾಗಿದ್ದು,ಕೊಲೆ ಶಂಕೆ ವ್ಯಕ್ತವಾಗಿದೆ. ಶವದ ಪಕ್ಕದಲ್ಲಿ ರಕ್ತದ ಕಲೆಗಳುಳ್ಳ 4 ಕಬ್ಬಿಣದ ರಾಡ್ ಗಳು ಕೂಡ ಪತ್ತೆಯಾಗಿವೆ.ಸ್ಥಳಕ್ಕೆ ಬಂದರ್ ಠಾಣೆಯ ಹಾಗೂ ವಿಧಿವಿಜ್ಣಾನ ವಿಭಾಗದ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Author: main-admin
ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ಬೈಕ್ ಮತ್ತು ಮೊಬೈಲ್ ಇಟ್ಟು ಪುತ್ತೂರು ನಗರಸಭೆ ಸದಸ್ಯ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರುವವರನ್ನು ಪುತ್ತೂರು ನಗರಸಭೆಯ ನೆಲ್ಲಿಕಟ್ಟೆ ವಾರ್ಡ್ ಸದಸ್ಯ ರಮೇಶ್ ರೈ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಇದು ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರಿಗೆ ಸೊತ್ತುಗಳು ಎಂದು ಗೊತ್ತಾಗಿದೆ. ರಮೇಶ್ ರೈ, ಇತ್ತೀಚಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಇಂದು ಬೆಳಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು ಬಂದಿವೆ ಎಂದು ಸ್ಥಳೀಯರು ಪೋಲೀಸರಿಗೆ ತಿಳಿಸಿದ್ದಾರೆ. ಇದೀಗ ಸ್ಥಳದಲ್ಲಿ ರಮೇಶ್ ರೈ ಅವರ ಕುಟುಂಬದ ಸದಸ್ಯರು ಪೋಲೀಸರು ಹಾಗೂ ಸ್ಥಳೀಯರು ಜಮಾಯಿಸಿದ್ದು ಸುತ್ತ ಮುತ್ತಲಿನ ಜಾಗದಲ್ಲಿ ಹುಡುಕಲು ಪ್ರಾರಂಭಿಸಿದ್ದಾರೆ.
ಕಡಬ: ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ ದ.ಕ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಪೊಲೀಸರು ರಾತ್ರಿ ವೇಳೆ ಮನೆಗೆ ಪ್ರವೇಶಿಸಿ ಜಿಪಿಎಸ್ ಫೋಟೋ ತೆಗೆದಿರುವುದನ್ನು ಪ್ರಶ್ನಿಸಿದ್ದಕ್ಕೆ ನಮ್ಮ ಮುಖಂಡರ ಮೇಲೆ ಸ್ವಯಂಪ್ರೇರಿತ ಕೇಸ್ ದಾಖಲಿಸಿರುವುದನ್ನು ಖಂಡಿಸಿ ಬುಧವಾರ ಸಂಜೆ ಕಡಬ ಪೊಲೀಸ್ ಠಾಣೆಯ ಎದರು ಸಂಘ ಪರಿವಾರದ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದರಲ್ಲಿ ಭಾಗವಹಿಸಿದ್ದ ವಿಶ್ವ ಹಿಂದೂ ಪರಿಷತ್ ದ.ಕ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಪೊಲೀಸರನ್ನು ಉದ್ದೇಶಿಸಿ ದ್ವೇಷದ ಭಾಷಣ ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ನವೀನ್ ವಿರುದ್ದ ಜೂನ್ 4 ರಂದು ಕಡಬ ಪೊಲೀಸ್ ಠಾಣಾ ಅ.ಕ್ರ 42/2025 ಕಲಂ: 353(2)BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವ್ಯಕ್ತಿಯೋರ್ವನ ಗಡಿಪಾರಿಗೆ ಸಂಬಂಧಿಸಿದ ವಿಚಾರದಲ್ಲಿ ವಾಟ್ಸ್ ಆಪ್ ಮೂಲಕ ಆರೋಪಿ ಕಬಕ ಗ್ರಾಮದ ಪುತ್ತೂರು ನಿವಾಸಿ ಗಣೇಶ್ ಪ್ರಸಾದ್ ಎಂಬಾತನು ಉದ್ದೇಶಪೂರ್ವಕವಾಗಿ ಸಾರ್ವಜನಿಕರಿಗೆ ಗಾಳಿ ಸುದ್ದಿಯನ್ನು ಹರಡುತ್ತಾ ಹಾಗೂ ಸ್ಥಳಿಯ ಆಡಳಿತಕ್ಕೆ ಭಯ ಹಾಗೂ ಅಪರಾಧಿಕ ಬೆದರಿಕೆಯನ್ನೊಡ್ಡಿರುವ ಕಾರಣ, ಮಾನ್ಯ ನ್ಯಾಯಾಲಯದ ಅನುಮತಿ ಪಡೆದು ಆರೋಪಿಯ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ: 41/2025 ಕಲಂ: 353(1), (b), 351(3) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ತಿಳಿಸಿದ್ದಾರೆ
ಬಂಟ್ವಾಳ : ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಮನೆಗೆ ಪೊಲೀಸರು ನ್ಯಾಯಾಲಯದ ಆದೇಶದ ಜೊತೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಜಿಲ್ಲೆಯಿಂದ ಗಡಿಪಾರಿನ ಭೀತಿಯಲ್ಲಿರುವ ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಅವರ ಮನೆಗೆ ಪೊಲೀಸರು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಪರಿಶೀಲನೆ ಮಾಡಿದ್ದಾರೆ. ತನಿಖಾ ತಂಡವು ದಿನಾಂಕ : 04.06.2025 ರಂದು ಮಾನ್ಯ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಬಂಟ್ವಾಳ ಪುದು ಗ್ರಾಮದ ನಿವಾಸಿ ಭರತ್ ಕುಮ್ಡೇಲ್ ಎಂಬಾತನ ಮನೆಯನ್ನು ಶೋಧ ನಡೆಸಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
2025ರ ಜುಲೈ 03ರಂದು ಸೈಂಟ್ ಅಲೋಶಿಯಸ್ (ಮಾನ್ಯ ವಿಶ್ವವಿದ್ಯಾನಿಲಯ), AIMIT ಕೇಂದ್ರ ಮತ್ತು IBM ನಡುವಿನ ಒಡಂಬಡಿಕೆಯನ್ನು ಅಧಿಕೃತವಾಗಿ ಸಹಿ ಹಾಕಲಾಯಿತು. ಈ ಸಹಿ ಸಮಾರಂಭದಲ್ಲಿ AIMIT ಕೇಂದ್ರದ ನಿರ್ದೇಶಕರಾದ ಡಾ. ಫಾ. ಕಿರಣ್ ಕೋಟ, IBM ನ ಸಾಫ್ಟ್‌ವೇರ್ ಸೇವೆಗಳ ರಾಷ್ಟ್ರೀಯ ನಿರ್ವಾಹಕರು ಶ್ರೀ ಜಗದೀಶ್ ಭಟ್, IBMನ ಪ್ರಾದೇಶಿಕ ನಿರ್ವಾಹಕರು ಶ್ರೀ ಮಧುಸೂಧನ್, ಟೆಕ್‌ಪಾಥ್‌ನ ಪ್ರಾದೇಶಿಕ ನಿರ್ವಾಹಕ ಶ್ರೀ ಜಿತೇಶ್ ಹಾಗೂ AIMITನ ಡೀನ್‌ಗಳಾದ ಡಾ. ರಜನಿ ಸುರೇಶ್ ಮತ್ತು ಡಾ. ಹೆಮಲತಾ ಎನ್. ಉಪಸ್ಥಿತರಿದ್ದರು. ಈ ಒಡಂಬಡಿಕೆಯು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವಿವಿಧ ಆಯಾಮಗಳಲ್ಲಿ ಶೈಕ್ಷಣಿಕ ವಲಯದಲ್ಲಿ ಸ್ಪರ್ಧಾತ್ಮಕ ಸಂಸ್ಥೆಗಳಾಗಿ ಗುರುತಿಸಿಕೊಳ್ಳುವ ಮಹತ್ವದ ಅವಕಾಶವನ್ನು ನೀಡುತ್ತದೆ. ತಂತ್ರಜ್ಞಾನ ಮತ್ತು ಸಾಫ್ಟ್‌ವೇರ್‌ಗಳ ಶಿಕ್ಷಣ ಹಾಗೂ ತರಬೇತಿಗಾಗಿ ಉದ್ಯಮ ಮತ್ತು ಶೈಕ್ಷಣಿಕ ವಲಯಗಳಲ್ಲಿ ಆದ್ಯತೆಯ ಸಂಸ್ಥೆಯಾಗಿ ಗುರುತಿಸಿಕೊಳ್ಳುವ ಅವಕಾಶವಿದೆ. ಈ ಮೂಲಕ ವಿದ್ಯಾರ್ಥಿಗಳು ಹಾಗೂ ಬೋಧಕರು IBMನ ಶ್ರೇಷ್ಠ ಸಾಫ್ಟ್‌ವೇರ್‌ಗಳ ಬಳಕೆಯ ಮೂಲಕ ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ವೃದ್ಧಿಸಿಕೊಳ್ಳಬಹುದು.…
ಮಂಗಳೂರು : ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಬೆದರಿಕೆ ಒಡ್ಡಿದ ಘಟನೆ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಇಂದು ಬೆಳಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಲ್ಯಾಂಡ್ ಲೈನ್ ಗೆ ದೂರವಾಣಿಗೆ ಕರೆಯೊಂದು ಬಂದಿದೆ. ಪಿಜಿ ವಿದ್ಯಾರ್ಥಿನಿಯೋರ್ವಳು ಕರೆಯನ್ನ ಸ್ವೀಕರಿಸಿದ್ದು ಇಂಗ್ಲೀಷಲ್ಲಿ ಮಾತನಾಡಿದ ವ್ಯಕ್ತಿಯೋರ್ವ ಬೆಳಗ್ಗೆ 11 ಗಂಟೆಗೆ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಲ್ಲಿ ಬಾಂಬ್ ಸ್ಪೋಟಿಸುವುದಾಗಿ ಹೇಳಿದ್ದು ಎಲ್ಲರನ್ನು ಕೂಡಲೇ ಆಸ್ಪತ್ರೆಯಿಂದ ಹೊರಗೆ ಕಳುಹಿಸುವಂತೆ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಕರೆಯ ಬಗ್ಗೆ ಆಸ್ಪತ್ರೆಯ ಆಡಳಿತಾಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಆಸ್ಪತ್ರೆ ಹಾಗೂ ಕಾಲೇಜನ್ನು ಪರಿಶೀಲಿಸಿ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮೊಬೈಲ್ ನಂಬರ್ ಪರಿಶೀಲಿಸಿ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.
ಹೆಬ್ರಿ : ಒಂದು ಬಾರಿ ದೈವಸ್ಥಾನದ ಕಾಣಿಕೆ ಹುಂಡಿ ಕದ್ದಿದ್ದ ಕಳ್ಳ ಮತ್ತೊಮ್ಮೆ ಅದೇ ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕದಿಯಲು ಬಂದು ಸಿಕ್ಕಿಹಾಕಿಕೊಂಡ ಘಟನೆ ಮುದ್ರಾಡಿ ಗ್ರಾಮದ ನಾಟ್ಕದೂರು ಅಭಯಹಸ್ತೆ ಆದಿಶಕ್ತಿ ಶ್ರೀ ಕ್ಷೇತ್ರದಲ್ಲಿ ನಡೆದಿದೆ. ಈ ಹಿಂದೆ ಕಳ್ಳತನ ನಡೆದಾಗ ದೈವ ನೀಡಿದ್ದ ಅಭಯದಂತೆ ಕಳ್ಳ ಸಿಕ್ಕಿದ್ದು ದೈವದ ಕಾರಣಿಕ ಎಂದು ಜನರು ನಂಬಿದ್ದಾರೆ. ಮುದ್ರಾಡಿ ಗ್ರಾಮದ ನಾಟ್ಕದೂರು ಅಭಯಹಸ್ತೆ ಆದಿಶಕ್ತಿ ಶ್ರೀ ಕ್ಷೇತ್ರದಲ್ಲಿ ದೇವರ ಹುಂಡಿ ಹಾಗೂ ಕಲ್ಕುಡ ಕಲ್ಲುರ್ಟಿಯ ಕಾಣಿಕೆ ಡಬ್ಬಿಯಿಂದ ಮೇ 25ರಂದು ರಾತ್ರಿ ಕಳ್ಳತನವಾಗಿತ್ತು, ಕಳ್ಳತನೊಬ್ಬ ದೈವಸ್ಥಾನದ ಕಾಣಿಕೆ ಡಬ್ಬಿ ಕಳ್ಳತ ಮಾಡಿದ್ದ, ಬಳಿಕ ಮತ್ತೆ ಜೂನ್ 2 ರಂದು ಮಧ್ಯರಾತ್ರಿ ಮತ್ತೆ ಅದೇ ದೈವಸ್ಥಾನದ ಹುಂಡಿ ಕಳ್ಳತನಕ್ಕೆ ಬಂದಿದ್ದು, ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನಲ್ಲಿದ್ದವರು ಕಳ್ಳನನ್ನು ನೋಡಿದ್ದಾರೆ. ಕೂಡಲೇ ಕಾರನ್ನು ನಿಲ್ಲಿಸಿ ಹಿಂದಕ್ಕೆ ಬಂದಾಗ ಆತ ಗೋಡೆ ಹಾರಿ ಬೈಕಿನಲ್ಲಿ ಪರಾರಿ ಯಾಗಿದ್ದ. ಕಾರಿನವರು ಸಮೀಪದ ಮನೆಯ ವರಿಗೆ ವಿಷಯ ತಿಳಿಸಿ…
ಶಿವಮೊಗ್ಗ : ಐಪಿಎಸ್ ಆರ್ ಸಿಬಿ ತಂಡ ಗೆಲವು ಸಾಧಿಸಿದ ಹಿನ್ನಲೆ ನಡೆದ ಸಂಭ್ರಮಾಚರಣೆ ವೇಳೆ ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನಪ್ಪಿದ ಘಟನೆ ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಅಪಘಾತ ಸಂಭವಿಸಿದೆ. ಮೃತರನ್ನು ವೆಂಕಟೇಶ ನಗರದ ನಿವಾಸಿ ಅಭಿನಂದನ್ (21) ಎಂದು ಗುರುತಿಸಲಾಗಿದೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಯುವಕರು ಬೈಕ್ ಗಳಲ್ಲಿ ಹೊರಟಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿವೆ. ತೀವ್ರ ಗಾಯಗೊಂಡಿದ್ದ ಅಭಿನಂದನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಟಿಂಟ್ ಗ್ಲಾಸ್ ಆಳವಡಿಸಿರುವ ಕಾರುಗಳ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಎರಡು ದಿನಗಳ ಅಂತರದಲ್ಲಿ 223 ಪ್ರಕರಣ ದಾಖಲಿಸಿ 1 ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ 02-06-2025 ಮತ್ತು 03-06-2025 ರಂದು ನಗರದ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿ ಕಾರಿನ ಗ್ಲಾಸ್ಗಳಲ್ಲಿ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ ವಿರುದ್ದ ಒಟ್ಟು 223 ಪ್ರಕರಣವನ್ನು ದಾಖಲಿಸಿ, ರೂ. 1,11,500/- ದಂಡವನ್ನು ವಿಧಿಸಲಾಗಿದೆ. ಅಲ್ಲದೇ 223 ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್ಗಳನ್ನು ವಾಹನ ಚಾಲಕರಿಂದ ತೆಗೆಸಿ ಸೂಕ್ತ ಕ್ರಮ ಕೈಗೊಂಡು ಅವರುಗಳಿಗೆ ತಿಳುವಳಿಕೆಯನ್ನು ಸಹ ನೀಡಲಾಗಿರುತ್ತದೆ. ಅಲ್ಲದೇ ದಿನಾಂಕ 03-06-2025 ರಂದು ಪೊಲೀಸ್ ಆಯುಕ್ತಕರ ಕಛೇರಿಯ ಸಭಾಂಗಣದಲ್ಲಿ ಹಾಗೂ ಪೊಲೀಸ್ ಠಾಣೆಗಳಲ್ಲಿ,…










