ಉಡುಪಿ: ಟೆಲಿಗ್ರಾಂ ನಲ್ಲಿ ಬಂದ ಆನ್ ಲೈನ್ ಹೂಡಿಕೆ ನಂಬಿ ವ್ಯಕ್ತಿಯೊಬ್ಬ ಬರೋಬ್ಬರಿ 29 ಲಕ್ಷ ಹಣ ಕಳೆದುಕೊಂಡ ಘಟನೆ ನಡೆದಿದೆ. ಸಿಇಎನ್ ಠಾಣೆಗೆ ನೀಡಿದ ದೂರಿನಲ್ಲಿ, ಸೆಪ್ಟೆಂಬರ್ 11 ರಂದು ಟೆಲಿಗ್ರಾಮ್‌ನಲ್ಲಿ @Anjana_198_off ಬಳಕೆದಾರರಿಂದ ಟೆಲಿಗ್ರಾಮ್‌ನಲ್ಲಿ ಸಂದೇಶ ಬಂದಿದೆ. ಇದನ್ನು ಅಧಿಕೃತ ಯುಕೆ ಸರ್ಕಾರ ಎಂದು ವಿವರಿಸಲಾಗಿದೆ. ಆ ಸಂದೇಶದಲ್ಲಿ ಚಿನ್ನ, ಬೆಳ್ಳಿ ನಾಣ್ಯಗಳು, ಬಾರ್‌ಗಳು ಮತ್ತು ಇತರ ಚಿನ್ನ-ಸಂಬಂಧಿತ ಉತ್ಪನ್ನಗಳ ಮೇಲೆ ಲಾಭದಾಯಕ ಆದಾಯದ ಭರವಸೆ ನೀಡಲಾಗಿದೆ. ಈ ವೇದಿಕೆಯಲ್ಲಿ “ಚಿನ್ನದ ಬಿಡ್ಡರ್” ಆಗಿ ಕೆಲಸ ಮಾಡುವ ಮೂಲಕ, ಅವರು ತಮ್ಮ ಮೊಬೈಲ್ ಫೋನ್ ಅಥವಾ ಲ್ಯಾಪ್‌ಟಾಪ್ ಅನ್ನು ಬಳಸಿಕೊಂಡು ದಿನಕ್ಕೆ ರೂ. 1,500 ರಿಂದ 5,000 ವರೆಗೂ ಆದಾಯ ಗಳಿಸಬಹುದು ಎಂದು ಚಂದ್ರಕಾಂತ್ ಅವರಿಗೆ ತಿಳಿಸಲಾಗಿದೆ
Author: main-admin
ಮಂಗಳೂರು: ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ. ಮೈಂದಗುರಿ ನಿವಾಸಿ ಹೈದರ್ ಅಲಿ ಅವರ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದು ಬಂದಿದೆ.ರಿದಾ ಫಾತಿಮ ಸಂಜೆಯ ವೇಳೆ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ವೇಳೆ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು ಅಲ್ಲಿಗೆ ಬಂದಿವೆ. ನಾಯಿಗಳ ಜಗಳ ಕಂಡು ಬೆಚ್ಚಿಬಿದ್ದ ಬಾಲಕಿ ಮನೆಗೆ ಹಿಂದಿರುಗಿ ಓಡುವ ಭರದಲ್ಲಿ ಕೈಯ್ಯಲ್ಲಿದ್ದ ಹಣ ಕೆಳಗೆ ಬಿದ್ದಿದೆ. ಅದನ್ನು ಹೆಕ್ಕುವಷ್ಟರಲ್ಲಿ ನಾಯಿಗಳ ಹಿಂಡು ಬಾಲಕಿಯ ಮೇಲೆ ದಾಳಿ ಮಾಡಿವೆ.ದಾಳಿಯಿಂದ ಬಾಲಕಿಯ ಕೈ, ಕಾಲಿಗೆ ಕಚ್ಚಿದ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಬಾಲಕಿಯ ಬೊಬ್ಬೆ ಕೇಳಿ ಸ್ಥಳಕ್ಕೆ ಬಂದ ಸಾರ್ವಜನಿಕರು ನಾಯಿಗಳ ಬಾಯಿಯಿಂದ ಬಾಲಕಿಯನ್ನು ರಕ್ಷಿಸಿ ಸುರತ್ಕಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಪ್ರಾಥಮಿಕ ಆರೋಗ್ಯ…
ಪೇಸ್ ಗ್ರೂಪ್ ತನ್ನ ರಜತ ಮಹೋತ್ಸವದ ಅಂಗವಾಗಿ “ಸಿಲ್ವಿಯೋರಾ 2025” ಎಂಬ ಶೀರ್ಷಿಕೆಯಲ್ಲಿ ಅತ್ಯಂತ ಸ್ಮರಣೀಯ ಕ್ಷಣವನ್ನು 2025ರ ಅಕ್ಟೋಬರ್ 14ರಂದು ಪೇಸ್ ಜ್ಞಾನ ನಗರದಲ್ಲಿ ಅಧಿಕೃತ ಬ್ಯಾನರ್ ಅನಾವರಣದೊಂದಿಗೆ ಆಚರಿಸಿತು. ಈ ಕಾರ್ಯಕ್ರಮವು ಸಂಸ್ಥೆಯ 25 ವರ್ಷದ ಯಶಸ್ವಿ ಪ್ರಯಾಣದ ಮಹತ್ವದ ಮೈಲುಗಲ್ಲುಗಳನ್ನು ಗುರುತಿಸಿತು. ಕಾರ್ಯಕ್ರಮವು ಮಧ್ಯಾಹ್ನ 3:30ಕ್ಕೆ ಪ್ರಾರಂಭವಾಯಿತು. ಪೇಸ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಅಬ್ದುಲ್ಲಾ ಇಬ್ರಾಹಿಂ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ತಮ್ಮ ಭಾಷಣದಲ್ಲಿ ಅವರು “ಸಿಲ್ವಿಯೋರಾ 2025” ಬ್ಯಾನರ್ ಅನ್ನು ಅನಾವರಣಗೊಳಿಸಿ, ಮುಂದಿನ ಮೂರು ತಿಂಗಳುಗಳ ಕಾಲ ನಡೆಯುವ ವೈಭವಶಾಲಿ ಉತ್ಸವಗಳ ಸರಣಿಗೆ ಅಧಿಕೃತ ಚಾಲನೆ ನೀಡಿದರು. ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರ್ಫ್ರಾಜ್ ಜೆ ಹಾಸಿಮ್ ಅವರು ಸಭಿಕರನ್ನು ಸ್ವಾಗತಿಸಿ, ರಜತ ಮಹೋತ್ಸವದ ಸಂಭ್ರಮದ ಕುರಿತು ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು. ಪಿ.ಎ. ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೀಸ್ ಎಂ.ಕೆ. ಅವರು ಸಂಸ್ಥೆಯ 25 ವರ್ಷದ ಪ್ರಯಾಣದ ಕುರಿತು ಸ್ಮರಣೀಯ ಅನುಭವವನ್ನು…
ಕೊಣಾಜೆ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಕೊಣಾಜೆಯ ಬಾಳೆಪುಣಿ ಗ್ರಾಮದ ಮುದುಂಗಾರುಕಟ್ಟೆಬಸ್ ತಂಗುದಾಣದಲ್ಲಿ ಕೊಣಾಜೆ ಠಾಣೆಯ ಸರಕಳ್ಳತನದ ಆರೋಪಿ ಯುವಕನ ಮೃತದೇಹ ಪತ್ತೆಯಾಗಿದ್ದು, ಮಾದಕ ಪದಾರ್ಥ ವ್ಯಸನದಿಂದ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿದೆ. ಮುದುಂಗಾರುಕಟ್ಟೆ ಬಳಿಯ ಪಾತೂರು ನಿವಾಸಿ ಮಹಮ್ಮದ್ ನಿಯಾಫ್ (28) ಸಾವನ್ನಪ್ಪಿರುವ ಯುವಕ ಎಂದು ತಿಳಿಯಲಾಗಿದೆ. ಇಂದು ಮಧ್ಯಾಹ್ನ ವ್ಯಕ್ತಿಯೋರ್ವರು ತಮ್ಮ ದ್ವಿಚಕ್ರ ವಾಹನವನ್ನು ಮುದುಂಗಾರು ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಲು ತೆರಳಿದಾಗ ಮೃತದೇಹ ಪತ್ತೆಯಾಗಿದೆ.ಸುದ್ದಿ ತಿಳಿಯುತ್ತಿದ್ದಂತೆ ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು.ಸ್ಥಳಕ್ಕೆ ಕೂಡಲೇ ಕೊಣಾಜೆ ಪೊಲೀಸರು ದೌಡಾಯಿಸಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಿ, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ನಿಯಾಫ್ ಬಾವಿಯ ರಿಂಗ್ ತಯಾರಿಕೆ ಹಾಗೂ ಇತರ ಕೂಲಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ. ಭಾನುವಾರ ಸಂಜೆ ಮನೆ ಬಿಟ್ಟಿದ್ದ ನಿಯಾಫ್ ನಿನ್ನೆ ಬೆಳಗ್ಗೆ ಚಿಕ್ಕಪ್ಪನ ಮನೆಗೆ ತೆರಳಿ ಮಾತಾನಾಡಿ ಹಿಂತಿರುಗಿದ್ದನಂತೆ.ಸಂಜೆ ಮನೆಗೆ ತೆರಳದ ನಿಯಾಫ್ ಫೋನ್ ಕೂಡ ಸ್ವಿಚ್ ಆಫ್ ಆಗಿದ್ದು, ಇಂದು ಮಧ್ಯಾಹ್ನ…
ಮಂಗಳೂರು : ಕರಾವಳಿಯಿಂದ ಹೊರಗೆ ಕಂಬಳ ನಡೆಸುವುದಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿದೆ. ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋಟ್೯ ನಿನ್ನೆ ಅನುಮತಿ ನೀಡಿದೆ. ಪುತ್ತೂರು ಶಾಸಕ ಅಶೋಕ್ ರೈಯವರು ಬೆಂಗಳೂರಿನಲ್ಲಿ ಕಂಬಲ ಆಯೋಜಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಆದರೆ ಅದರ ಮರುವರ್ಷ ಬೆಂಗಳೂರಿನಲ್ಲಿ ಮತ್ತೆ ಕಂಬಳ ನಡೆಸಲು ಮುಂದಾದಾಗ ಪೆಟಾ ತಕರಾರು ತೆಗೆದು ಕೋರ್ಟ್ ಮೆಟ್ಟಿಲೇರಿತ್ತು. ಇದರಿಂದಾಗಿ ಮತ್ತೆ ಬೆಂಗಳೂರಿನಲ್ಲಿ ಕಂಬಳ ನಡೆದಿರಲಿಲ್ಲ. ಇದೀಗ ಹೈಕೋರ್ಟ್ ಕಂಬಳಕ್ಕೆ ಗ್ರೀನ್ ಸಿಗ್ನಲ್ ನೀಡಿರುವುದರಿಂದ ಈ ವರ್ಷ ಬೆಂಗಳೂರಿನಲ್ಲಿ ಕಂಬಳ ನಡೆಯಲಿದೆಯೇ ಎಂಬ ಕುತೂಹಲವಿದೆ. ಸರ್ಕಾರ ಅಧೀನದ ರಾಜ್ಯ ಕಂಬಳ ಅಸೋಸಿಯೇಷನ್‌ಗೆ ಹೈಕೋರ್ಟ್ ತೀರ್ಪಿನಿಂದ ಮೊದಲ ಜಯ ಸಿಕ್ಕಂತಾಗಿದೆ. ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಬೆಳಪು ಡಾ.ದೇವಿ ಪ್ರಸಾದ್ ಶೆಟ್ಟಿ, ಇದು ನಮ್ಮ ಹೋರಾಟಕ್ಕೆ ಸಂದ ಜಯ. ಕಂಬಳ ಕ್ಷೇತ್ರದಲ್ಲಿ ಸಂತಸದ ಕ್ಷಣ. ಸಾಗಾಟದ…
ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ತು ಬೀಚ್ ನಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳಾದ ಸಂಕೇತ್ (16), ಸೂರಜ್ (15), ಆಶೀಶ್ (14) ನೀರು ಪಾಲಾಗಿದ್ದಾರೆ. ಈಜಲು ತೆರಳಿದ್ದ ನಾಲ್ವರಲ್ಲಿ ಓರ್ವ ಪಾರಾಗಿದ್ದಾನೆ. ನೀರುಪಾಲಾದ ಮೂವರ ಮೃತದೇಹ ಪತ್ತೆಯಾಗಿದೆ. ಮೃತರಲ್ಲಿ ಓರ್ವ ಪಿಯುಸಿ ವಿದ್ಯಾರ್ಥಿಯಾಗಿದ್ದು ಇನ್ನಿಬ್ಬರು ಸರಕಾರಿ ಶಾಲೆಯಲ್ಲಿ ಓದುತ್ತಿದ್ದರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪಿಎಸ್ಐ ತಿಮ್ಮೇಶ್ ಭೇಟಿ ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುಳ್ಯ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೇರಳದ ತ್ರಿಶೂರ್ ಜಿಲ್ಲೆಯ ನಾಟಿ ಮನೆಯ ಬಾಲನ್(73) ಎಂದು ಗುರುತಿಸಲಾಗಿದೆ. 1990ರಲ್ಲಿ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ಶಾಂತಪ್ಪ ಮತ್ತು ಸುಬ್ಬಯ್ಯ ಎಂಬವರಿಗೆ ತಲ್ವಾರ್‌ನಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಕೃತ್ಯಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಈತನನ್ನು ಕೇರಳ ರಾಜ್ಯದ ತ್ರಿಶೂರ್‌ನಿಂದ ಅ.13ರಂದು ದಸ್ತಗಿರಿ ಮಾಡಿ ಸುಳ್ಯದ ನ್ಯಾಯಾಲಯದ ನ್ಯಾಯಧೀಶರು ಮುಂದೆ ಹಾಜರು ಪಡಿಸಿದ್ದು ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮೂಡುಬಿದಿರೆ: ವೇಶ್ಯಾವಾಟಿಕೆ ಅಡ್ಡಗೆ ದಾಳಿ ನಡೆಸಿದ ಮೂಡುಬಿದ್ರೆ ಪೊಲೀಸರು ನಾಲ್ವರನ್ನು ಬಂಧಿಸಿರುವ ಘಟನೆ ನಿಡ್ಡೋಡಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ನೇಶ್, ದಿಲೀಪ್ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ನಾಲ್ಕು ಮಂದಿ ಯುವಕರ ತಂಡವೊಂದು ನಿಡ್ಡೋಡಿಯ ಮನೆಯೊಂದರಲ್ಲಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇನ್ನೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸ್ ತಂಡವು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಹೇಶನ ಮನೆಯಲ್ಲಿ ಅವನೊಬ್ಬನೇ ವಾಸವಿದ್ದುದರಿಂದ ಆ ಮನೆಯನ್ನು ಈ ಕೃತ್ಯಕ್ಕೆ ಉಪಯೋಗಿಸುತ್ತಿದ್ದನು ಎಂಬ ಮಾಹಿತಿ ಲಭಿಸಿದೆ. ಆರೋಪಿಗಳ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯರನ್ನು ಮತ್ತು ಆರೋಪಿಗಳನ್ನು ಠಾಣೆಗೆ ತಂದು ವಿಚಾರಿಸಿದಾಗ ಎಲ್ಲ ವಿಚಾರಗಳನ್ನೂ ಬಾಯಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ.ಅವರ ಸಮಯಪ್ರಜ್ಞೆ ಮತ್ತು ಆರೋಪಿಗಳನ್ನು ಬಂಧಿಸಿರುವ ಕ್ರಮಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಉಡುಪಿ ಜಿಲ್ಲಾ ರಸ್ತೆ ಸಾರಿಗೆ ಅಧಿಕಾರಿ (ಆರ್‌ಟಿಒ) ಲಕ್ಷ್ಮಿನಾರಾಯಣ ಪಿ ನಾಯಕ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮಗಳ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಯಿತು ಎನ್ನಲಾಗಿದೆ. ಉಡುಪಿಯ ಕಿನ್ನಿಮೂಲ್ಕಿಯಲ್ಲಿರುವ ಅವರ ಅಪಾರ್ಟ್‌ಮೆಂಟ್ ಹಾಗೂ ಕುಮಟಾ (ಉತ್ತರ ಕನ್ನಡ ಜಿಲ್ಲೆ) ಮತ್ತು ಪಡು ಅಲೆವೂರಿನಲ್ಲಿರುವ ಅವರ ಸಂಬಂಧಿಕರ ನಿವಾಸಗಳಲ್ಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಕುಮಟಾ ಮೂಲದ ಲಕ್ಷ್ಮಿನಾರಾಯಣ ಪಿ ನಾಯಕ್ ಪ್ರಸ್ತುತ ಉಡುಪಿಯಲ್ಲಿ ಆರ್‌ಟಿಒ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತಂಡವು ಪಡು ಅಲೆವೂರಿನ ರವಿ ಎಂಬವರ ಮನೆಯಲ್ಲೂ ಶೋಧ ನಡೆಸಿದೆ ಎಂಬುವುದು ವರದಿಯಾಗಿದೆ.
ಮಂಗಳೂರು: ಮುಂಬೈನಿಂದ ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಫ್ ಸಿಬ್ಬಂದಿಗಳು ವಶಕ್ಕೆ ಪಡೆದು ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತನನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ. ಈತ ಅ.14ರಂದು ಸಂಜೆ 6:30ಕ್ಕೆ ಮುಂಬೈನಿ0ದ ಮಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆ ವಿಮಾನ ನಿಲ್ದಾಣ ಸಿಬ್ಬಂದಿ ಆಧರಿಸಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಸಿಐಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.










