ಕಾರ್ಕಳ : ಮನೆಮಂದಿ ಮಲಗಿದ್ದ ವೇಳೆ ಕಳ್ಳರು ಕಿಟಕಿಯ ಬಾಗಿಲ ಚಿಲಕ ಮುರಿದು ಮನೆಯ ಒಳನುಗ್ಗಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2.25 ಲಕ್ಷ ನಗದು ದೋಚಿದ ಘಟನೆ ಕುಕ್ಕುಂದೂರು ನಲ್ಲಿ ನಡೆದಿದೆ. ಇಲ್ಲಿನ ಜೋಡುರಸ್ತೆ ನಿವಾಸಿ ಜಗದೀಶ್ ಬಿ.ಎ. ಅವರ ಮನೆಯಲ್ಲಿ ಕಳ್ಳತನವಾಗಿದ್ದು, ರಾತ್ರಿ ಮನೆಯ ಬಾಗಿಲು ಹಾಕಿ ಭದ್ರಪಡಿಸಿ ಮಲಗಿದ್ದರು. ಆದರೆ ಬೆಳಗ್ಗಿನ ಜಾವ 3: 40 ಗಂಟೆಗೆ ಜಗದೀಶ್ ರವರು ಮಲಗಿದ್ದ ಕೋಣೆಯು ತೆರೆದ ಶಬ್ದ ಕೇಳಿ ಎದ್ದು ನೋಡಿದಾಗ ಮನೆಯ ಮುಂದಿನ ಬಾಗಿಲು ಅರ್ಧ ತೆರೆದಿದ್ದು, ಪಕ್ಕದಲ್ಲಿದ್ದ ಕಿಟಕಿಯ ಚಿಲಕವನ್ನು ತುಂಡರಿಸಿರುವುದು ಕಂಡುಬಂದಿದೆ. ಮನೆಯೊಳಗೆ ಪರಿಶೀಲಿಸಿ ನೋಡಿದಾಗ ಯಾರೋ ಕಳ್ಳರು ಮನೆಯ ಮುಖ್ಯದ್ವಾರದ ಪಕ್ಕದಲ್ಲಿದ್ದ ಕಿಟಕಿಯ ಚಿಲಕವನ್ನು ತುಂಡರಿಸಿ ಬಾಗಿಲಿನ ಚಿಲಕವನ್ನು ಕಿಟಿಕಿಯ ಮೂಲಕ ತೆರೆದು ಮನೆಯೊಳಗೆ ಪ್ರವೇಶಿಸಿ ಮನೆಯ ಇನ್ನೊಂದು ಕೋಣೆಯೊಳಗೆ ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿ ಹುಡುಕಾಡಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2,25,000 ರೂ. ನಗದು ಎಗರಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ…
Author: main-admin
ಕಡಬ : ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡ ಕೃಷಿಕ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡದ ಕಡಬದಲ್ಲಿ ನಡೆದಿದೆ. ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಬುಡಲೂರು ಎಂಬಲ್ಲಿ ಈ ಘಟನೆ ನಡೆದಿದ್ದು ಬೂಡಲೂರು ನಿವಾಸಿ ಶಿವಣ್ಣ ಗೌಡ(61ವ.)ಆತ್ಮಹತ್ಯೆ ಮಾಡಿಕೊಂಡ ಕೃಷಿಕರಾಗಿದ್ದಾರೆ. ತಮ್ಮ ಮನೆಯಿಂದ ಅನತಿ ದೂರದ ಗುಡ್ಡೆಯೊಂದರಲ್ಲಿ ಶಿವಣ್ಣ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಣ್ಣ ಗೌಡ ಅವರು ಸ್ಥಳೀಯ ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘ, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಗಾಗಿ ರೂ.10 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ. ಸಾಲ ಮರುಪಾವತಿಸಲು ಸಾಧ್ಯವಾಗುವುದಿಲ್ಲ ಎನ್ನುವ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪುತ್ರ ಹೇಮಂತ್ ಅವರು ಕಡಬ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಸುರತ್ಕಲ್: ಹೊಟೇಲ್ ಸೂರಜ್ ಬಳಿ ರಸ್ತೆ ದಾಟುತ್ತಿದ್ದ ದ್ವಿಚಕ್ರ ವಾಹನಕ್ಕೆ ಜೀಪೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರಿಬ್ಬರೂ ಮೃತಪಟ್ಟ ಘಟನೆ ಸಂಭವಿಸಿದೆ ಮೃತಪಟ್ಟವರು ಬೀಡಿ ಗುತ್ತಿಗೆದಾರ ನೋಣಯ್ಯ (64), ಸಹಸವಾರ ನಿಯಾಜ್ (34) ಎಂದು ತಿಳಿಯಲಾಗಿದೆ ಕುಳಾಯಿ ಪ್ರಗತಿ ನಗರ ನಿವಾಸಿ ನೋಣಯ್ಯ ಅವರು ಸುಮಾರು ಮೂವತ್ತು ವರ್ಷಗಳಿಂದ ಬೀಡಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕೆಲಸದ ನಿಮಿತ್ತ ತನ್ನ ಜತೆ ಕೆಲಸ ಮಾಡುವ ಕಾನ ನಿವಾಸಿ ನಿಯಾಜ್ ಜತೆ ಸ್ಕೂಟರ್‌ನಲ್ಲಿ ಮುಕ್ಕದಿಂದ ಬಂದವರು ಹೊಟೇಲ್ ಬಳಿ ಯೂ ಟರ್ನ್ ಮಾಡುತ್ತಿದ್ದ ವೇಳೆ ಜೀಪ್ ಢಿಕ್ಕಿ ಹೊಡೆಯಿತು. ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ಮೇಲೆ ಜೀಪ್ ಚಕ್ರ ಹರಿದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಸುರತ್ಕಲ್ ಉತ್ತರ ಸಂಚಾರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಉದ್ಯಮಿಯಿಂದ 25 ಲ.ರೂ. ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಟಿಡಿಆರ್‌ಗೆ ಸಂಬಂಧಿಸಿದಂತೆ ಮಾ.23ರಂದು ನಗರದ ಮಂಗಳಾ ಕ್ರೀಡಾಂಗಣದ ಬಳಿ ದಲ್ಲಾಳಿಯ ಮೂಲಕ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ದಲ್ಲಾಳಿ ಮುಹಮ್ಮದ್ ಸಲೀಂಗೂ ನ್ಯಾಯಾಂಗ 14 ದಿನಗಳ ಬಂಧನ ವಿಧಿಸಲಾಗಿದೆ.
ಉಡುಪಿ: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟು ಬಳಿ ಚಿರತೆಯೊಂದು ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ರವಿವಾರ ರಾತ್ರಿ ನಡೆದಿದೆ. ಬಿಹಾರ ಮೂಲದ ನದಿಯಲ್ಲಿ ಮರಳುಗಾರಿಕೆ ನಡೆಸುವ ಕಾರ್ಮಿಕ ಸುರೇಂದ್ರ (55 ವ) ಗಾಯಗೊಂಡ ವ್ಯಕ್ತಿ.ಆತ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್ ಅವರ ಮನೆ ಬಳಿಯ ಕಲ್ಲೊಟ್ಟು ಸಂತೋಷ್ ಪೂಜಾರಿ ಅವರ ಮನೆಯ ವರಾಂಡದಲ್ಲಿ ಮಲಗಿದ್ದು, ರಾತ್ರಿ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದೆ. ಕೆನ್ನೆ, ಗಲ್ಲ ಮತ್ತು ಮುಖಕ್ಕೆ ಗಾಯಗೊಳಿಸಿದ್ದು ರಕ್ತದ ಕೋಡಿ ಹರಿದಿದೆ. ಚಿಕಿತ್ಸೆಗಾಗಿ ಅವರನ್ನು ಉಡುಪಿಯ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ದಾಳಿ ನಡೆಸಿದ ಚಿರತೆಯೊಂದಿಗೆ ಮರಿ ಚಿರತೆಯೂ ಇತ್ತು ಎನ್ನಲಾಗಿದೆ. ಕಲ್ಲೊಟ್ಟು, ಸೊರ್ಪು, ಆಗೋಳಿಬೈಲು, ಪದವು ಪರಿಸರದಲ್ಲಿ ಕಳೆದ ಕೆಲವು ಸಮಯಗಳಿಂದ ಚಿರತೆ ಓಡಾಡುತ್ತಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಳೆದೆರಡು ದಿನಗಳಲ್ಲಿ ಕಲ್ಲೊಟ್ಟು ಸಂಗೀತಾ ನಾಯ್ಕ ಅವರ ಮನೆಯ ಎರಡು ಸಾಕು ನಾಯಿಗಳನ್ನು ಚಿರತೆ ಬೇಟೆಯಾಡಿ…
ಮಂಗಳೂರು: ಪಾರ್ಟ್ ಟೈಮ್ ಜಾಬ್ ಆಮಿಷವೊಡ್ಡಿ 1.15 ಲಕ್ಷ ರೂ. ಲಪಟಾಯಿಸಿರುವ ಪ್ರಕರಣದಲ್ಲಿ ಮಂಗಳೂರು ಪೊಲೀಸರು ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ರಾಜಸ್ಥಾನ ಜೋಧಪುರ ಜಿಲ್ಲೆಯ ಮುಸಲ್ಮಾನ್ ಕಾ ಬಾವುರಿ, ರಾಮ್ ದೇವ್ ಮಂದಿರ ಹತ್ತಿರದ ನಿವಾಸಿ ಸದ್ದಾಂ ಗೌರಿ ಅಲಿಯಾಸ್ ಬಾವುರಿ (30) ಬಂಧಿತ ಆರೋಪಿ. ಈತ ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ವಾಟ್ಸ್ಆಪ್ ಗೆ ಲಿಂಕ್ ಕಳುಹಿಸುತ್ತಾನೆ. ಈ ಲಿಂಕ್ ಮೂಲಕ ಹಣ ತೊಡಗಿಸಿ, ಟಾಸ್ಕ್ ಕಂಪ್ಲಿಟ್ ಮಾಡುವ ಮುಖಾಂತರ ಹಣ ಮಾಡಬಹುದು ಎಂಬುದಾಗಿ ಪಿರ್ಯಾದಿದಾರರನ್ನು ನಂಬಿಸಿ ಒಟ್ಟು 1,15,000 ಹಣ ಪಡೆದು ವಂಚನೆ ಮಾಡಿದ್ದಾನೆ. ಈ ಬಗ್ಗೆ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಸೆನ್ ಠಾಣಾ ಪೊಲೀಸರು, ಆರೋಪಿಯನ್ನು ಜೋಧಪುರ್ ಜಿಲ್ಲೆಯ ಬಾವುರಿಯಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ. ಆರೋಪಿತನಿಂದ ಕೃತ್ಯಕ್ಕೆ ಬಳಸಿದ ಎರಡು ಮೊಬೈಲ್ ಫೋನ್ ಗಳು, ಎಂಟು ಡೆಬಿಟ್ ಕಾರ್ಡ್, ನಾಲ್ಕು ಬ್ಯಾಂಕ್ ಚೆಕ್ ಬುಕ್, ಆಧಾರ್ ಕಾರ್ಡ್, ಪಾನ್ ಕಾರ್ಡ್…
ಉಪ್ಪಿನಂಗಡಿ ಸಮೀಪ ನದಿ ನೀರಿನಲ್ಲಿ ಮುಳುಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ಹಳೆಗೇಟು ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿ ಸವಣೂರು ಸಮೀಪದ ಅಂಕತ್ತಡ್ಕದ ಮಂಜುನಾಥ್ (35) ಎಂದು ತಿಳಿಯಲಾಗಿದೆ. ಬಿಳಿಯೂರು ಅಣೆಕಟ್ಟಿನಿಂದಾಗಿ ಹಳೆಗೇಟು ಬಳಿ ನೇತ್ರಾವತಿ ನದಿಯಲ್ಲಿ ಹಿನ್ನೀರು ತುಂಬಿಕೊಂಡಿದ್ದು, ನದಿಯ ಆಳ ತಿಳಿಯದೇ ನದಿಗೆ ಇಳಿದಿದ್ದ ಅವರು ಮುಳುಗಿದರು. ಆಗ ಅವರೊಂದಿಗಿದ್ದವರು ಬೊಬ್ಬೆ ಹಾಕಿದ್ದು, ಆಸುಪಾಸಿನ ಮಂದಿ ಧಾವಿಸಿ ಬಂದು ಹಗ್ಗದ ಸಹಾಯದಿಂದ ನದಿ ನೀರಿಗಿಳಿದು ಅವರನ್ನು ಮೇಲೆತ್ತಿ ತಂದು ಪ್ರಥಮ ಚಿಕಿತ್ಸೆಯ ಬಳಿಕ ಆ್ಯಂಬುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಸಾಗಿಸಿದರು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪುತ್ತೂರು: ಪುತ್ತೂರಿನಲ್ಲಿ ಅಕ್ರಮ ಗೋ ಸಾಗಾಟದ ಜಾಲವನ್ನು ಬಜರಂಗದಳ ಬಯಲಿಗೆಳೆದಿದ್ದು, ಸಂಘಟನೆಯ ಕಾರ್ಯಕರ್ತರನ್ನು ನೋಡಿ ಆರೋಪಿಗಳು ಕಾರು , ದನಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.ಪುತ್ತೂರಿನ ಕಬಕ ಅಡ್ಯಲಾಯ ದೈವಸ್ಥಾನದ ಸಮೀಪವೇ ಈ ಕೃತ್ಯ ನಡೆದಿದೆ. ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ.ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದೆ. ಅದರ ಕಾಲುಗಳನ್ನು ಹಿಂಸಾತ್ಮಕ ರಿತಿಯಲ್ಲಿ ಕಟ್ಟಲಾಗಿತ್ತು. ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಕಾರನ್ನು ನಿಲ್ಲಿಸಲು ಸೂಚಿಸಿದ್ದಾರೆ .ಈ ವೇಳೆ ಕಾರು ಸಮೇತ ಚಾಲಕ ಪರಾರಿಯಾಗಲು ಯತ್ನಿಸಿದಾಗ ಕಾರು ಚರಂಡಿಗೆ ಬಿದ್ದಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸ್ ಅಧಿಕಾರಿಗಳು ನಾಲ್ಕು ಗೋವುಗಳನ್ನು ಮತ್ತು ಜಖಂಗೊಂಡ ವಾಹನವನ್ನು ಪುತ್ತೂರು ನಗರ ಠಾಣೆಗೆ ಸಾಗಿಸಿದ್ದಾರೆ. ಗೋವುಗಳಿಗೆ…
ಉಳ್ಳಾಲ: ನಾಟೆಕಲ್ ಸಮೀಪ ಇಂದು ಮದ್ಯಾಹ್ನ ವೇಳೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಸಹಸವಾರೆ ವಿವಾಹಿತ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದು, ಸವಾರ ಸಂಬಂಧಿ ಗಂಭೀರ ಸ್ಥಿತಿಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೋಂದೇಲ್ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಸಾವನ್ನಪ್ಪಿದವರು. ಸಹಸವಾರ ಯತೀಶ್ ದೇವಾಡಿಗ ಗಂಭೀರ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಮುಡಿಪುವಿನಲ್ಲಿ ಇಂದು ಜರಗಿದ್ದ ಸಂಬಂಧಿಕರ ಗೃಹಪ್ರವೇಶದಲ್ಲಿ ಭಾಗವಹಿಸಿ ವಾಪಸ್ಸಾಗುವ ಸಂದರ್ಭ ಬೈಕ್, ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ನಿಧಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಯತೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುಳ್ಯ : ವಾರದ ಹಿಂದೆ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಗಡಿಭಾಗದ ಕೂಜಿಮಲೆಯ ಎಸ್ಟೇಟ್ ಬಳಿಯ ಅಂಗಡಿಯೊಂದಕ್ಕೆ ಬಂದಿದ್ದ ಶಂಕಿತ ನಕ್ಸಲರು ದಿನಸಿ ಸಾಮಾಗ್ರಿ ಪಡೆದು ತೆರಳಿದ್ದರು ಎಂಬ ಸುದ್ದಿ ಭಾರೀ ಸದ್ದು ಮಾಡಿತ್ತು. ಈ ಭಾಗದಲ್ಲಿ ನಕ್ಸಲ್ ನಿಗ್ರಹದಳ ನಿರಂತರ ಶೋಧ ಕಾರ್ಯ ನಡೆಸಿತ್ತು. ಆದರೆ ಎಎನ್‌ಎಫ್ ತಂಡಕ್ಕೆ ನಕ್ಸಲರು ಕಾಣಿಸಿರಲಿಲ್ಲ. ಇದೀಗ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಮೂವರು ಅಪರಿಚಿತರಿದ್ದ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬುವರ ಮನೆಗೆ ಭೇಟಿ ನೀಡಿದ್ದಾರೆ. ಮನೆಯವರೊಂದಿಗೆ ಸುಮಾರು ಒಂದು ಗಂಟೆಗ ಅಧಿಕ ಕಾಲ ತಂಡ ಮಾತುಕತೆ ನಡೆಸಿದೆ. ಬಳಿಕ ಎರಡು ಕೆಜಿಯಷ್ಟು ಅಕ್ಕಿ ಪಡೆದು, ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ. ಮೂವರ ಬಳಿಯೂ ಶಸ್ತ್ರಾಸ್ತ್ರಗಳಿತ್ತು ಎಂದು ಹೇಳಲಾಗಿದೆ. ಕಳೆದ ಬಾರಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನಲಾದ ಕೂಜಿಮಲೆ ಮತ್ತು…