ಮಂಗಳೂರು: ಯಾವುದೇ ಪ್ರಕರಣಗಳ ಆರೋಪಿಗಳಿಗೆ ಯಾರೇ ಆದರೂ ಆಶ್ರಯ ನೀಡಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಅಪರಾಧ ಪ್ರಕರಣ ಮಾಡಿದ ಬಳಿಕ ಆರೋಪಿಗಳಿಗೆ ಆಶ್ರಯ ನೀಡುವುದು, ಆರ್ಥಿಕ ಸಹಾಯ ಮಾಡುವುದು, ಆಹಾರ, ಫೋನ್, ವಾಹನ ಇತ್ಯಾದಿ ರೂಪದಲ್ಲಿ ನೀಡಿದರೆ ಅವರನ್ನೂ ಕೂಡ ಆರೋಪಿಗಳನ್ನಾಗಿ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಕೆಲವೊಂದು ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಪ್ರಕರಣದ ತನಿಖೆ ನಡೆಸಿದಾಗ ಕೃತ್ಯಕ್ಕೆ, ಆರೋಪಕ್ಕೆ ಸಹಕಾರ ನೀಡಿದ ವ್ಯಕ್ತಿ ಎಷ್ಟೇ ಪ್ರಭಾವಶಾಲಿಯಾದರೂ ಅವರನ್ನು ಬಂಧಿಸುತ್ತೇವೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.
Author: main-admin
ಮಂಗಳೂರು: ದ.ಕ. ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ಎಲ್ಲೇ, ಯಾವುದೇ ರೀತಿಯ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು ಮಂಗಳೂರಿನ ನೂತನ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕ್ರಿಮಿನಲ್ಗಳು ಜಿಲ್ಲೆಯ ಯಾವುದೇ ಮೂಲೆಯಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಎಸಗಿದರೂ ಎಸ್ಪಿ, ಡಿಸಿಪಿಗಳ ಜತೆ ಜಂಟಿ ಕಾರ್ಯಾಚರಣೆ ಮೂಲಕ ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು. ಈ ಕಾರ್ಯಾಚರಣೆ ಇತರ ಅಕ್ರಮ ಚಟುವಟಿಕೆಗಳಿಗೂ ಅನ್ವಯವಾಗಲಿದೆ ಎಂದು ಹೇಳಿದರು. ಈ ಸಂದರ್ಭ ಜತೆಯಲ್ಲಿದ್ದ ಎಸ್ಪಿ ಡಾ.ಅರುಣ್ ಕುಮಾರ್ ಅವರೂ ದನಿಗೂಡಿಸಿ, ಅದಕ್ಕಾಗಿಯೇ ನಾವು ಜತೆಯಲ್ಲಿಯೇ ಇಲ್ಲಿದ್ದೇವೆ ಎಂದರು. ಕೋಮುದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್ಗಳನ್ನು ಹಾಕುತ್ತಿರುವವರ ಕುರಿತು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸುಧೀರ್ ರೆಡ್ಡಿ ಅವರು, ಯಾರದ್ದೇ ಯಾವ ಮಾತು ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವಂತಿರಬಾರದು. ವಾಕ್ ಸ್ವಾತಂತ್ರ್ಯ…
ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ 66ರ ಉಪ್ಪಳ ಗೇಟ್ ಬಳಿ ಇಂದು ಸಂಜೆ ಮೀನಿನ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವರ್ಕಡಿ ಸಮೀಪದ ಕೋಳ್ಯೂರು ಪದವು ನಿವಾಸಿ ಮಹಿಳೆ ನವ್ಯ ಮೃತಪಟ್ಟಿದ್ದಾರೆ. ಪತಿ ಪದ್ಮನಾಭ (36) ಹಾಗೂ ಮಗು ಗಾಯನ್ (2)ಗಂಭೀರ ಗಾಯಗೊಂಡಿದ್ದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ನವ್ಯಾ.ಕೆ (24) ಅವರು ತಲಪಾಡಿ ಗ್ಯಾರೇಜಿನ ಶಿವರಾಮ ಆಚಾರ್ಯ ಅವರ ಪುತ್ರಿಯಾಗಿದ್ದು ಇಂದು ಔಷಧಿ ಗೆಂದು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಮಂಗಳೂರು : ದಾಳಿ ಮಾಡದಂತೆ ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗೆ ಲಂಚ ನೀಡಲು ಬಂದ ಆರೋಪದ ಮೇಲೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಕರ್ತವ್ಯದಲ್ಲಿರುವಾಗ ಬೆಳಿಗ್ಗೆ 11.15 ಗಂಟೆಯ ಸುಮಾರಿಗೆ ಕೋಟೆಕಣಿ ಪ್ರಶಾಂತ್ ಆಯಿಲ್ ಇಂಡಸ್ಟ್ರೀಸ್ ಮಾಲೀಕ ಪ್ರವೀಣ್ ನಾಯ್ಕ್ ಮತ್ತು ಗಜೇಂದ್ರ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಬಂದಿದ್ದರು. ಬಂದವರು ಇನ್‌ಸ್ಪೆಕ್ಟರ್ ಅವರಲ್ಲಿ ಮಾತನಾಡುತ್ತಾ ತನ್ನ ವಿರುದ್ಧ ಹಾಗೂ ತನ್ನ ಇಲಾಖೆಯ ವಿರುದ್ಧ ಲೋಕಾಯುಕ್ತ ಸಂಸ್ಥೆಯಿಂದ ಯಾವುದೇ ಪ್ರಕರಣ ದಾಖಲಿಸಬಾರದು ಅಥವಾ ದಾಳಿ ಮಾಡಬಾರದು ಎಂಬುದಾಗಿ ತಿಳಿಸಿದ್ದಾರೆ. ಇದಕ್ಕಾಗಿ ತಾನು 3 ತಿಂಗಳಿಗೊಮ್ಮೆ 25,000 ರೂ ಹಣವನ್ನು ಲಂಚವಾಗಿ ಮಂಗಳೂರು ಲೋಕಾಯುಕ್ತ ಠಾಣೆಗೆ ನೀಡುವುದಾಗಿ ಲಂಚದ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಗಜೇಂದ್ರ ಅವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು: ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ನೂತನ ಪೋಲಿಸ್ ಕಮೀಶನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿರ್ಗಮನ ಕಮೀಷನರ್ ಅನುಪಮ್ ಅಗರ್ವಾಲ್ ಅವರು ನೂತನ ಪೊಲೀಸ್ ಆಯುಕ್ತರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.
ಬೆಂಗಳೂರು : ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯದ ವಾತಾವರಣವನ್ನು ನಿರ್ಮಾಣ ಮಾಡುವ ಅಗತ್ಯ ಎಂದಿಗಿಂತಲೂ ಈಗ ಹೆಚ್ಚಾಗಿದೆ. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮುವಾದಿ ದುಷ್ಕರ್ಮಿಗಳು ವಿದ್ವೇಷಕಾರಿ ಚಟುವಟಿಕೆಗಳ ಮೂಲಕ ಧಾರ್ಮಿಕ ಸಾಮರಸ್ಯವನ್ನು ಕೆಡಿಸಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಗೆಡಹುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಕಾನೂನು ವಿರೋಧಿ ಚಟಿವಟಿಕೆಗಳನ್ನು ನಿಗ್ರಹಿಸಲು ನಮ್ಮ ಸರ್ಕಾರ ವಿಶೇಷ ಕಾರ್ಯಪಡೆಯನ್ನು ರಚಿಸಿದೆ. ಈಗಾಗಲೇ ಅಸ್ತಿತ್ವದಲ್ಲಿರುವ ನಕ್ಸಲ್ ನಿಗ್ರಹ ಪಡೆಯಿಂದ ಒಬ್ಬರು ಡಿಜಿಪಿ, ಒಬ್ಬರು ಡಿವೈಎಸ್‌ಪಿ, ಒಬ್ಬರು ಸಹಾಯಕ ಕಮಾಂಡೆಂಟ್, ನಾಲ್ವರು ಪೊಲೀಸ್ ಇನ್ಸ್‌ಪೆಕ್ಟರ್, 16 ಪಿಎಸ್‌ಐ ಸೇರಿ 248 ಹುದ್ದೆಗಳನ್ನು ಬೇರ್ಪಡಿಸಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಕೋಮು ಭಾವನೆ ಕೆರಳಿಸುವ ಮತ್ತು ಸಮಾಜದಲ್ಲಿ ಶಾಂತಿ ಕದಡುವ…
ಮಂಗಳೂರು: ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಶುಕ್ರವಾರ ನಿರ್ಗಮನ ಎಸ್ಪಿ ಯತೀಶ್ ಎನ್. ಅವರಿಂದ ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್‌ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ಮೊಬೈಲ್ ಸಂಖ್ಯೆ: 9480805301 ಅಥವಾ ಕಛೇರಿ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು ಎಂದು ನೂತನ ಎಸ್ಪಿ ಡಾ. ಅರುಣ್. ಕೆ ತಿಳಿಸಿದ್ದಾರೆ.
ಮುಂಬೈ: ಪೊಲೀಸ್ ಇಲಾಖೆಯಲ್ಲೇ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದ್ದ ಕಾರ್ಕಳ ಎಣ್ಣೆಹೊಳೆ ಮೂಲದ ಮುಂಬೈ ಪೊಲೀಸ್ ಅಧಿಕಾರಿ ದಯಾನಾಯಕ್ ಅವರು ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ಆಗಿ ಭಡ್ತಿ ಹೊಂದಿದ್ದಾರೆ. ಮುಂಬೈ ಭೂಗತ ಲೋಕದ ಎಂಭತ್ತೈದಕ್ಕೂ ಹೆಚ್ಚು ಪಾತಕಿಗಳನ್ನು ಎನ್ಕೌಂಟರ್ ಮಾಡಿದ್ದ ಧುರೀಣ ದಯಾ ನಾಯಕ್ ಅವರು ಮುಂಬೈ ಕ್ರೈಂ ಬ್ರ್ಯಾಂಚ್ ಸೀನಿಯರ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕುವಲ್ಲಿ ಕೂಡಾ ಇವರು ಪ್ರಮುಖ ಪಾತ್ರ ವಹಿಸಿದ್ದರು. ಮಹಾರಾಷ್ಟ್ರ ಭಯೋತ್ಪಾದಕ ನಿಗ್ರ ದಳದಲ್ಲೂ ಕರ್ತವ್ಯ ನಿರ್ವಹಿಸಿದ ಅನುಭವ ಇವರದ್ದು.
ಉಳ್ಳಾಲ: ಎಡೆಬಿಡದೆ ಸುರಿದ ವಿಪರೀತ ಮಳೆಗೆ ಎರಡು ಮನೆಗಳಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಓರ್ವ ಮಹಿಳೆ ಮೃತ ಪಟ್ಟ ಘಟನೆ ತಾಲೂಕಿನ ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಂಟೆ ಪದವು ಸಮೀಪದ ಕೋಡಿ ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಮೃತ ಮಹಿಳೆಯನ್ನು ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ (50) ಎಂದು ಗುರುತಿಸಲಾಗಿದೆ. ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು,ಕಾಂತಪ್ಪ ಪೂಜಾರಿ ಅವರ ಕುಟುಂಬ ಮಲಗಿದ್ದ ಕೊಠಡಿಯ ಭಾಗಕ್ಕೆ ಗುಡ್ಡ ಜರಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಕಾಂತಪ್ಪ ಪೂಜಾರಿ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು, ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎನ್ ಡಿಆರ್ ಎಫ್, ಎಸ್ ಡಿ ಆರ್ ಎಫ್ , ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ನಿರೀಕ್ಷಕ ಪ್ರಮೋದ್ ಮತ್ತಿತರರು ಭೇಟಿ…
ಕೋಮು ಸೂಕ್ಷ್ಮವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ ಮೇ 29 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.ಸುಧೀರ್ ಕುಮಾರ್ ರೆಡ್ಡಿ ಇದುವರೆಗೂ ಬೇಹುಗಾರಿಕಾ ಇಲಾಖೆಯ ಡಿ ಐ ಜಿ ಆಗಿದ್ದರು. ಅವರು ವರ್ಗಾವಣೆಯಾಗಿರುವ ಅನುಪಮ್ ಅಗ್ರವಾಲ್ ಅವರ ಸ್ಥಾನಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ. ಉಡುಪಿ ಎಸ್ಪಿಯಾದ್ದ ಡಾ.ಅರುಣ್ ಕೆ. ಅವರು ವರ್ಗಾವಣೆಯಾಗಿರುವ ಯತೀಶ್ ಎನ್. ಅವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್. ಪಿ ಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ…










