Author: main-admin

ಮಂಗಳೂರಿನ ಕನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ಟೆಕ್ನಿಕಲ್ ಆಕ್ಟಿವಿಟಿ ಸೆಲ್ ಹಾಗೂ CSE, ISE, AI & ML, ECE, CSD ಮತ್ತು CSBS ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ “ಇನ್ನೋವೇಷನ್ ಶೋಕೆಸ್: ಮೇಜರ್ ಪ್ರಾಜೆಕ್ಟ್ ಎಕ್ಸಿಬಿಷನ್–2025” ಮತ್ತು “ಸಿಥೇರಿಯನ್–2025: 24-ಗಂಟೆಗಳ ಹ್ಯಾಕಥಾನ್” ಕಾರ್ಯಕ್ರಮಗಳು ನವೆಂಬರ್ 22 ಮತ್ತು 23, 2025 ರಂದು ಭವ್ಯವಾಗಿ ಜರುಗಿದವು. ಉದ್ಘಾಟನಾ ಸಮಾರಂಭವು ಡಾ. ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸಭಾಂಗಣದಲ್ಲಿ ನೆಡೆಯಿತು. ಮುಖ್ಯ ಅತಿಥಿ ಡಾ. ನಿರಂಜನ್ ಯು. ಸಿ., ಅಡ್ಜಂಕ್ಟ್ ಪ್ರೊಫೆಸರ್, MIT ಮಣಿಪಾಲ, ಅವರು ಶಿಕ್ಷಣದಲ್ಲಿನ 3Aಗಳ — Accessibility, Availability ಮತ್ತು Physical Proximity — ಅಗತ್ಯತೆಯನ್ನು ಹಿಗ್ಗಾಮುಗ್ಗವಾಗಿ ವಿವರಿಸಿದರು. ವಿದ್ಯಾರ್ಥಿಗಳು ತಂತ್ರಜ್ಞಾನ ಜ್ಞಾನದಲ್ಲಿ ಸದಾ ಮುನ್ನಡೆದು, ಉದ್ಯಮಶೀಲತೆ ಮತ್ತು ಶ್ರಮದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಪ್ರಾಚಾರ್ಯರು Dr. ನಾಗೇಶ್ ಹೆಚ್. ಆರ್., ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳಿಗೆ ಹೊಸ ಆವಿಷ್ಕಾರಗಳನ್ನು ರೂಪಿಸಿ, ತಮ್ಮ ಯೋಜನೆಗಳನ್ನು…

Read More

ಬೆಂಗಳೂರು :ನಗರದಲ್ಲಿ ನಡೆದಿದ್ದ 7 ಕೋಟಿ ರೂ. ದರೋಡೆಯ ಆರೋಪಿಯಾಗಿರುವ ಕಾನ್ಸ್ಟೇಬಲ್‌ ಅಣ್ಣಪ್ಪ ನಾಯಕ್‌ನನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ದರೋಡೆ ಪ್ರಕರಣದ ಆರೋಪಿಯಾಗಿರುವ ಅಣ್ಣಪ್ಪ ನಾಯಕ್ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದ. ಮೊದಲು ಕ್ಲೈಮ್‌ ಕೆಲಸ ಮಾಡುತ್ತಿದ್ದ ಆತನನ್ನು ಬೀಟ್ ಡ್ಯೂಟಿಗೆ ಹಾಕಲಾಗಿತ್ತು. ಸದ್ಯ 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಹಿನ್ನೆಲೆ ಅಣ್ಣಪ್ಪ ನಾಯಕ್‌ನನ್ನು ಅಮಾನತು ಮಾಡಿ, ಪೂರ್ವ ವಿಭಾಗದ ಡಿಸಿಪಿ ಬಿ.ದೇವರಾಜ್ ಆದೇಶ ಹೊರಡಿಸಿದ್ದಾರೆ. ಸದ್ಯ ದರೋಡೆ ಪ್ರಕರಣದ ತನಿಖೆ ನಡೆಯುತ್ತಿದ್ದು, 7.11 ಕೋಟಿ ರೂ. ಪೈಕಿ 6.29 ಕೋಟಿ ರೂ.ಯನ್ನು ಸೀಜ್ ಮಾಡಲಾಗಿದೆ. ಜೊತೆಗೆ 7 ಜನರನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರನ್ನು ರಾಕೇಶ್, ರವಿ, ಗೋವಿಂದಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್, ಕ್ಸೇವಿಯರ್, ಗೋಪಿ, ನವೀನ ಸೇರಿ ಒಟ್ಟು ಏಳು ದರೋಡೆಕೋರರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರಲ್ಲಿ ಕೆಲವರು ಪೊಲೀಸರ ಭಯಕ್ಕೆ ಸರೆಂಡರ್ ಆಗಿದ್ದಾರೆ

Read More

ಕಾಸರಗೋಡು: ಜನಪ್ರಿಯ ಗಾಯಕ ಮತ್ತು ವ್ಲೋಗರ್ ಹನಾನ್ ಶಾ ಅವರ ಗಾನಮೇಳದ ವೇಳೆ ಉಂಟಾದ ಭಾರಿ ನೂಕುನುಗ್ಗಲಿನಲ್ಲಿ ಉಸಿರಾಟದ ತೊಂದರೆಯಿಂದ ಹಲವು ಮಂದಿ ಕುಸಿದುಬಿದ್ದ ಘಟನೆ ಕಾಸರಗೋಡಿನ ನುಳ್ಳಿಪ್ಪಾಡಿ ಮೈದಾನದಲ್ಲಿ ಭಾನುವಾರ ರಾತ್ರಿ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿ ಜನರನ್ನು ಚದುರಿಸಿದ್ದಾರೆ. ಯುವಜನರ ಒಕ್ಕೂಟವಾದ ‘ಫ್ರೀ’ ಆಯೋಜಿಸಿದ್ದ ಈ ಗಾನಮೇಳದ ಸಮಾಪನಾ ದಿನದ ಮುಖ್ಯ ಅತಿಥಿಯಾಗಿ ಖ್ಯಾತ ಗಾಯಕ ಹನಾನ್ ಶಾ ಭಾಗವಹಿಸಿದ್ದರು. ಇವರನ್ನು ನೋಡಲು ಮತ್ತು ಹಾಡುಗಳನ್ನು ಕೇಳಲು ಮಹಿಳೆಯರು ಮತ್ತು ಮಕ್ಕಳೂ ಸೇರಿದಂತೆ ನೂರಾರು ಜನರು ನುಳ್ಳಿಪ್ಪಾಡಿ ಮೈದಾನದಲ್ಲಿ ಕಿಕ್ಕಿರಿದು ಸೇರಿದ್ದರು. ರಾತ್ರಿ ಸುಮಾರು 8:30ರ ಸುಮಾರಿಗೆ ಜನರ ಸಂಖ್ಯೆ ಮಿತಿಮೀರಿ ನೂಕುನುಗ್ಗಲು ಉಂಟಾಗಿದೆ. ಈ ಸಂದರ್ಭದಲ್ಲಿ, ಸರಿಯಾದ ಗಾಳಿ ಮತ್ತು ಉಸಿರಾಟದ ತೊಂದರೆಯಿಂದಾಗಿ ಹಲವಾರು ಮಂದಿ ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು…

Read More

ಬೆಂಗಳೂರು : ನಾನು ಯಾವಾಗ್ಲು ರೇಸ್ ಅಲ್ಲಿ ಇರ್ತೀನಿ. 2013ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿದ್ದಾಗ, ಎಲ್ಲರೂ ಸೇರಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೆವು. ಆದರೆ ನಾನು ಸೋತೆ. ಒಂದು ವೇಳೆ ನಾನು ಗೆದ್ದಿದ್ದರೆ ಏನಾಗುತ್ತಿತ್ತು ಗೊತ್ತಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ, ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ವಂಶಿಕೃಷ್ಣ ಅವರೊಂದಿಗೆ ಎಟಿಎಂ ಹಣ ದರೋಡೆ ಪ್ರಕರಣದ ತನಿಖೆಯ ಕುರಿತು ಚರ್ಚಿಸಿದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿರು. ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯ ವಿಚಾರಕ್ಕೆ ಸಂಬಂಧಪಟ್ಟಂತೆ, ನಾನು ಕೂಡ ಸಿಎಂ ಆಕಾಂಕ್ಷಿ ನನಗೂ ಸಿಎಂ ಆಗುವ ಆಸೆ ಇದೆ. ಆದರೆ ಈ ಸಂದರ್ಭ ಆ ರೀತಿ ಇಲ್ಲ ಸಿಎಂ ಬದಲಾವಣೆಯನ್ನು ವಿಚಾರ ಬಂದಾಗ ಆ ಕುರಿತು ವಿಚಾರ ಮಾಡೋಣ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.…

Read More

ಉಡುಪಿ : ಮಣಿಪಾಲದ ಎರಡು ಹಾಸ್ಟೆಲ್‌ಗಳ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಂದ ಸುಮಾರು 36,000 ರೂ. ಮೌಲ್ಯದ 727 ಗ್ರಾಂ ಗಾಂಜಾ ಮತ್ತು 30,000 ರೂ. ಮೌಲ್ಯದ ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ಗುಜರಾತ್ ಮೂಲದ ಕುಶ್‌ಕೆಯುಶ್ ಪಟೇಲ್ (20) ಮತ್ತು ಉತ್ತರ ಪ್ರದೇಶದ ದೇವಾಂಶ್ ತ್ಯಾಗಿ (22) ಎಂದು ಗುರುತಿಸಲಾಗಿದೆ. ಆರೋಪಿಗಳು ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಸಂಗ್ರಹಿಸಿಟ್ಟಿದ್ದರು. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬ ದರೋಡೆ ಕೃತ್ಯದಲ್ಲಿ ಶಾಮೀಲಾಗಿ ಇಡೀ ಪೊಲೀಸ್‌ ಇಲಾಖೆ ತಲೆತಗ್ಗಿಸುವಂತಾದ ಬೆನ್ನಿಗೆ ಇಂಥದ್ದೇ ಮತ್ತೊಂದು ಕೃತ್ಯ ಬೆಂಗಳೂರಿನಲ್ಲಿ ಸಂಭವಿಸಿದೆ. ಕಾಲ್‌ಸೆಂಟರ್ ಉದ್ಯೋಗಿಗಳನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಪ್ರಕರಣ ಸಂಬಂಧ ಘಟನೆ ನಡೆದು 12 ಗಂಟೆ ಒಳಗೆ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಛಲಪತಿ, ಭರತ್, ಪವನ್, ಪ್ರಸನ್ನ, ಅತೀಕ್, ಜಬಿವುಲ್ಲ ಸೇರಿದಂತೆ 8 ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದು, ಆ ಪೈಕಿ ಛಲಪತಿ ಕೋಲಾರ ಜಿಲ್ಲೆಯ ಹೆಡ್‌ಕಾನ್‌ಸ್ಟೆಟೇಬಲ್ ಎಂದು ತಿಳಿದುಬಂದಿದೆ. ಕೋರಮಂಗಲದಲ್ಲಿರುವ ಗ್ಲೋಬಲ್ ಕನೆಕ್ಟ್​​ ಟೆಲಿಕಾಂ ಪ್ರೈ.ಲಿ. ಸಂಸ್ಥೆಯ ನಾಲ್ವರು ಕಾಲ್ ಸೆಂಟರ್ ಉದ್ಯೋಗಿಗಳನ್ನು ಆರೋಪಿಗಳು ಕಿಡ್ನಾಪ್​ ಮಾಡಿದ್ದರು. ಮಧ್ಯರಾತ್ರಿ ಕಾಲ್‌ಸೆಂಟರ್ ಬಳಿ ಹೋಗಿದ್ದ ಆರೋಪಿಗಳು, ನಾಲ್ವರು ಸಿಬ್ಬಂದಿಯನ್ನು ಕರೆದು ನಾವು ಪೊಲೀಸರು ಎಂದು ಬೆದರಿಸಿದ್ದರು. ಬಳಿಕ ಪವನ್, ರಾಜ್‌ವೀರ್, ಆಕಾಶ್, ಅನಸ್ ಎಂಬವರನ್ನು ಅಪಹರಣ ಮಾಡಿ 25 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಾಗೆ ಆಪರೇಷನ್ ಮ್ಯಾನೇಜರ್ ಅಕೌಂಟ್​​ನಿಂದ 18 ಲಕ್ಷ…

Read More

ಕುಂದಾಪುರ: ಆರು ತಿಂಗಳ ಹಿಂದೆ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಬೀತಾಗಿದ್ದು, ಆತ ಅಪರಾಧಿಯೆಂದು ಕುಂದಾಪುರದ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಟಿ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಬಿ. ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಕಾರ್ಕಳ ಮೂಲದ ಉಮಾನಾಥ ಪ್ರಭು (59) ಅಪರಾಧಿಯಾಗಿದ್ದು, ಪ್ರಸ್ತುತ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಈ ಕಳವು ಪ್ರಕರಣದಲ್ಲಿ 1 ವರ್ಷ 6 ತಿಂಗಳು ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಲಾಗಿದೆ. 2025ರ ಮೇ ತಿಂಗಳಿನಲ್ಲಿ ಕೊಲ್ಲೂರು ಠಾಣಾ ವ್ಯಾಪ್ತಿಯ ಇಡೂರು-ಕುಂಜ್ಞಾಡಿ ಗ್ರಾಮದ ಜನತಾ ಕಾಲನಿಯ ಮನೆಯೊಂದರಲ್ಲಿ ರಾತ್ರಿ ಯಾರೂ ಇಲ್ಲದ ವೇಳೆ ಎರಡು ಚಿನ್ನದ ಬಳೆಗಳ ಕಳ್ಳತನ ನಡೆದಿದ್ದು, ಬೆಳಿಗ್ಗೆ ಘಟನೆ ಬೆಳಕಿಗೆ ಬಂದು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಜಾಡು ಹಿಡಿದ ಪೊಲೀಸರು ಜೂ.17ರಂದು ಅಜೆಕಾರು ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದರು. ಅಭಿಯೋಜನೆ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ಉದಯ್ ಕುಮಾರ್ ವಾದಿಸಿದ್ದರು.…

Read More

ಬೆಳ್ತಂಗಡಿ : ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ನಿವೃತ್ತಿ ಬಳಿಕ ಖಾಲಿ ಇದ್ದ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ಸ್ಥಾನಕ್ಕೆ ಉಪ್ಪಿನಂಗಡಿ ವೃತ್ತ ನಿರೀಕ್ಚಕ ಪೊಲೀಸ್ ಠಾಣೆಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆದೇಶವಾಗಿದ್ದ ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ಅವರನ್ನು ನೇಮಕ ಮಾಡಿ ನ.21 ರಂದು ಆದೇಶ ಮಾಡಲಾಗಿದೆ. ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ಈ ಹಿಂದೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.ಬಳಿಕ ಚಿಕ್ಕಮಗಳೂರು, ಕಾರ್ಕಳ, ಸುಳ್ಯ,ಸಂಪ್ಯ,ಪುತ್ತೂರು ಗ್ರಾಮಾಂತರ ಕಡೆ ಕರ್ತವ್ಯ ನಿರ್ವಹಿಸಿ ಇನ್ಸ್‌ಪೆಕ್ಟರ್ ಆಗಿ ಭಡ್ತಿ ಹೊಂದಿ ಶೃಂಗೇರಿ,ಉಪ್ಪಿನಂಗಡಿ ವೃತ್ತ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದರು.

Read More

ಪುತ್ತೂರು: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಪುರುಷರಕಟ್ಟೆಯ ಇಂದಿರಾನಗರದ ಯುವಕನೊಬ್ಬ ನೇಣು ಬಿಗಿದು‌ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತನನ್ನು ಪ್ರತೀಕ್ ಜೋಗಿ (23) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಶೋ ರೂಮ್ ವರ್ಕ್ ಶಾಪ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗಷ್ಟೇ ಊರಿಗೆ ಬಂದಿದ್ದ. ನ. 21 ರಂದು ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ನೋಡುತ್ತಿದ್ದ, ಬಳಿಕ ಕಾಣೆಯಾಗಿದ್ದ. ಅನುಮಾನಗೊಂಡ ಮನೆ ಮಂದಿ ಆತನನ್ನು ಹುಡುಕಾಡಿದ್ದು, ಈ ವೇಳೆ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈತನ ತಂದೆ ಪ್ರವೀಣ್ ಜೋಗಿ ಮತ್ತು ತಾಯಿ ಕಾವ್ಯ ಅವರು ಸಹ ಈ ಹಿಂದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ ಪುತ್ರ ಸಹ ಅವರದ್ದೇ ದಾರಿ ಹಿಡಿದಿದ್ದಾನೆ. ಮೃತ ಪ್ರತೀಕ್ ‌ಸಹೋದರಿ, ಚಿಕ್ಕಪ್ಪನನ್ನು ಅಗಲಿದ್ದಾನೆ.

Read More

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ ಚಿನ್ನಯ್ಯ ಜಾಮೀನು ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದಾನೆ. ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಸುಳ್ಳು ಸಾಕ್ಷಿ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ನೀಡಲು ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಚಿನ್ನಯ್ಯ ಪರ ವಕೀಲರು ನ.21ರಂದು ಎರಡನೇ ಭಾರಿಗೆ ಜಾಮೀನು ನೀಡಲು ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ಮುಂದೆ ಸರಕಾರಿ ವಕೀಲರಾದ ದಿವ್ಯರಾಜ್ ಮತ್ತು ಚಿನ್ನಯ್ಯ ಪರ ವಕೀಲರು ವಾದ-ಪ್ರತಿವಾದ ನಡೆಸಿದ್ದು. ಸರ್ಕಾರಿ ವಕೀಲರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ನ.24 ರಂದು ಸೋಮವಾರಕ್ಕೆ ಮುಂದೂಡಿದೆ.

Read More