ಪುತ್ತೂರು: ವ್ಯಕ್ತಿಗಳಿಬ್ಬರು ಗಾಂಜಾ ಸೇವಿಸಿ ಅನುಚಿತವಾಗಿ ವರ್ತನೆ ತೋರಿದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳಿಗ್ಗೆ ದಾಳಿ ನಡೆಸಿ ಪುತ್ತೂರು ನಗರ ಪೊಲೀಸರು ಮೂವರನ್ನು ದಸ್ತಗಿರಿ ಮಾಡಿದ ಘಟನೆ ಪುತ್ತೂರು ಕಸಬಾ ಗ್ರಾಮದ ಕಿಲ್ಲೆ ಮೈದಾನದಲ್ಲಿರುವ, ಟೌನ್‌ಹಾಲ್ ಬಳಿ ಸಾರ್ವಜನಿಕ ಪ್ರದೇಶದಲ್ಲಿ ನಡೆದಿದೆ. ಆರೋಪಿಗಳನ್ನು ಬಪ್ಪಳಿಗೆ ಮನೆ, ಪುತ್ತೂರು ಕಸಬಾ ಗ್ರಾಮದ ನಿವಾಸಿ ಬಿ . ಉಮ್ಮರ್ ಫಾರೂಕ್ (36) ಹಾಗೂ ಮುಕ್ಕಚೇರಿ, ಉಳ್ಳಾಲ, ಮಂಗಳೂರು ತಾಲೂಕು ನಿವಾಸಿ ಕೆ. ಮೊಹಿದ್ದಿನ್ (43) ಎಂದು ಗುರುತಿಸಲಾಗಿದೆ. ಪುತ್ತೂರು ಕಸಬಾ ಗ್ರಾಮದ ಕಿಲ್ಲೆ ಮೈದಾನದಲ್ಲಿರುವ, ಟೌನ್‌ಹಾಲ್ ಬಳಿ ಸಾರ್ವಜನಿಕ ಪ್ರದೇಶದಲ್ಲಿ, ಇಬ್ಬರು ವ್ಯಕ್ತಿ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಜಿ.ಜೆ ರವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದರು. ಈ ವೇಳೆ ಪರಾರಿಯಾಗಲು ಯತ್ನಿಸಿದ ಇಬ್ಬರನ್ನೂ ತಡೆದು ವಿಚಾರಿಸಲಾಗಿ, ಬಪ್ಪಳಿಗೆ ಮನೆ, ಪುತ್ತೂರು ಕಸಬಾ ಗ್ರಾಮದ ನಿವಾಸಿ ಬಿ . ಉಮ್ಮರ್…
Author: main-admin
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರಿಮಿನಲ್ ಕೇಸ್ ಹೊಂದಿದ್ದವರ ಗಡೀಪಾರು ಪ್ರಕ್ರಿಯೆ ಮುಂದುವರಿದಿದೆ. ಬುಧವಾರ ಮತ್ತೆ 10 ಮಂದಿಯನ್ನು ಗಡೀಪಾರು ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ. ಅಶಾಂತಿ ಸೃಷ್ಟಿ, ಹಲ್ಲೆ, ದೊಂಬಿ, ಕ್ರಿಮಿನಲ್ ಸಂಚು ಹೂಡುವಿಕೆ, ಕೊಲೆ ಯತ್ನ ಇತ್ಯಾದಿ ಪ್ರಕರಣಗಳನ್ನು ಹೊಂದಿರುವವರನ್ನು ಗಡೀಪಾರು ಮಾಡಲಾಗಿದೆ.ಕಸಬಬೆಂಗ್ರೆಯ ಮೊಹಮ್ಮದ್ ಸುಹೈಲ್ (21), ಕಣ್ಣೂರು ಕೊಡಕ್ಕಲ್‌ನ ನಿಕ್ಷಿತ್ ಪೂಜಾರಿ (21), ಉಳ್ಳಾಲ ಸೋಮೇಶ್ವರದ ಸುನಿಲ್ (24), ಉಳ್ಳಾಲ ಬಸ್ತಿಪಡುವಿನ ಯತೀಶ್ (46), ಮೂಲ್ಕಿ ಕಾರ್ನಾಡು ಬಿಜಾಪುರ ಕಾಲನಿಯ ಧರ್ಮಲಿಂಗ (34), ಕಣ್ಣೂರಿನ ಮೊಹಮ್ಮದ್ ಹನೀಜ್ (32), ಮೂಲ್ಕಿ ಚಿತ್ರಾಪುರದ ತೇಜಪಾಲ್ ಆರ್. ಕುಕ್ಯಾನ್ (40), ವಾಮಂಜೂರು ಉಳಾçಬೆಟ್ಟು ಮೊಹಮ್ಮದ್ ಅನ್ಸಾರ್ (31), ಪಾಂಡೇಶ್ವರ ಶಿವನಗರದ ಅಭಿಶೇಕ್ (29) ಗಡೀಪಾರಿಗೊಳಗಾದವರು.ಇದುವರೆಗೆ 26 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಶಾಂತಿಯುತ ಚುನಾವಣೆ ನಡೆಯುವುದಕ್ಕಾಗಿ ಇವರೆಲ್ಲರನ್ನೂ ವಿವಿಧ ಜಿಲ್ಲೆಗಳಿಗೆ ಗಡೀಪಾರು ಮಾಡಲಾಗಿದೆ. ಅಲ್ಲದೆ ಶಾಂತಿಕಾಪಾಡುವುದು, ಉತ್ತಮ ವರ್ತನೆಗಾಗಿ 381 ಮಂದಿಯಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲಾಗಿದೆ…
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಗತೋಟದಲ್ಲಿನ ಖಾಸಗಿ ಜಾಗದ ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಹೊಳೆಯಲ್ಲಿ ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಸಮುದ್ರ ತೀರದಿಂದ ನಿತ್ಯವೂ ಅಕ್ರಮವಾಗಿ ಮರಳು ತೆಗೆದು ನಾಡ ದೋಣಿಗಳ ಮೂಲಕ ಹೊಳೆಯಲ್ಲಿ ಸಾಗಾಟ ನಡೆಸಿ ನಾಗತೋಟ ನಿವಾಸಿ ಮಹಮ್ಮದ್ ಆಲಿ ಅವರ ಖಾಸಗಿ ಜಮೀನಿನಲ್ಲಿ ದಾಸ್ತಾನು ಇರಿಸಲಾಗುತ್ತಿತ್ತು.ಈ ಮರಳನ್ನು ಮಧ್ಯ ರಾತ್ರಿ ಕೇರಳಕ್ಕೆ ಸಾಗಾಟ ನಡೆಸಲಾಗುತ್ತಿತ್ತು. ಈ ಮರಳು ಮಾಫಿಯಾ ಬಗ್ಗೆ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಉಳ್ಳಾಲ ಠಾಣೆಗೆ ದೂರು ನೀಡಿದ್ದರೂ ಅಕ್ರಮ ಮರಳುಗಾರಿಕೆಗೆ ಕಡಿವಾಣ ಬಿದ್ದಿರಲಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ದೂರು ನೀಡಿದ್ದು, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮರಳು ಅಡ್ಡೆಗೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಸಿಸಿಬಿ…
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 20 ರವರೆಗೆ 12,300 ರೂಪಾಯಿ ಮೌಲ್ಯದ 21.34 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 3,13,500 ರೂ.ಗಳ ಮೌಲ್ಯದ 1.65 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ. 2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಕ್ರಮಗಳನ್ನು ತಡೆಹಿಡಿಯಲು ಜಿಲ್ಲೆಯಲ್ಲಿ ಒಟ್ಟು 8 ಖರ್ಚು ವೆಚ್ಚ ಪರೀವೀಕ್ಷಕರರನ್ನು, 72 ಪ್ಲೈಯಿಂಗ್ ಸ್ವ್ಯಾಡ್ (ಎಫ್.ಎಸ್.ಟಿ), 69 ಎಸ್.ಎಸ್.ಟಿ ತಂಡಗಳು ಮತ್ತು 8 ಅಬಕಾರಿ ತಂಡಗಳನ್ನು ಜಿಲ್ಲೆಯಾದ್ಯಂತ ನಿಯೋಜಿಸಲಾಗಿದೆ.ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 20 ವರೆಗೆ ದೂರವಾಣಿ ಮೂಲಕ (1950) 75 ಸಾರ್ವಜನಿಕರಿಂದ ಮಾಹಿತಿ ಕೋರಿಕೆಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲಾಗಿದೆ. ಸಿ-ವಿಸಿಲ್ ಆಪ್ ಮೂಲಕ ಇಲ್ಲಿಯವರೆಗೆ 11 ದೂರುಗಳು ಸ್ವೀಕೃತಗೊಂಡಿದ್ದು ಎಲ್ಲಾ ದೂರುಗಳನ್ನು ವಿಲೇವಾರಿ ಮಾಡಲಾಗಿರುತ್ತದೆ.ಎನ್.ಜಿ.ಆರ್.ಎಸ್ ಪೋರ್ಟಲ್ (ರಾಷ್ಟ್ರೀಯ ಕುಂದುಕೊರತೆಗಳ ಪರಿಹಾರ ವ್ಯವಸ್ಥೆ )ಮೂಲಕ ಜಿಲ್ಲೆಯಲ್ಲಿ ಒಟ್ಟು 27 ದೂರುಗಳು ಸ್ವೀಕೃತಗೊಂಡಿದ್ದು, 22 ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು/…
ಬಂಟ್ವಾಳ: ಇಲ್ಲಿನ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪ ನೇತ್ರಾವತಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಂಜೊಟ್ಟಿ ನಿವಾಸಿ ಲೋಹಿತಾಕ್ಷ (28) ಮೃತಪಟ್ಟ ಯುವಕ. ಲೋಹಿತಾಶ್ವ ಅವರು ಸ್ನೇಹಿತರಾದ ವಿನ್ಸೆಂಟ್, ಮ್ಯಾಕ್ಸಿಂ, ಪ್ರಮೋದ್, ದಯಾನಂದ ಅವರಿಂದಿಗೆ ಕಾರ್‌ನಲ್ಲಿ ಶಂಭೂರಿಗೆ ಹೋಗಿದ್ದರು. ಈ ವೇಳೆ ಸ್ನೇಹಿತರು ಸ್ನಾನಕ್ಕೆಂದು ನದಿಗೆ ಇಳಿದಿದ್ದರೂ ಲೋಹಿತಾಕ್ಷ ಅವರು ದಡದಲ್ಲಿ ಕುಳಿತಿದ್ದರು. ಅದರೆ ಸ್ನೇಹಿತರು ಸ್ನಾನ ಮಾಡಿ ಹಿಂದಿರುಗಿದ ವೇಳೆ ಅವರು ನೀರಿನಲ್ಲಿ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ನದಿ ದಡದಲ್ಲಿ ಕುಳಿತಿದ್ದ ಅವರ ಆರೋಗ್ಯದಲ್ಲಿ ತೊಂದರೆ ಉಂಟಾಗಿ ತಲೆ ತಿರುಗಿ ಬಿದ್ದಿರುವ ಶಂಕೆಯಿದೆ. ಒಂದು ವೇಳೆ ಅವರು ಸ್ನಾನಕ್ಕಿಳಿದಿದ್ದರೆ ಅವರ ಕೈಯಲ್ಲಿ ವಾಚ್ ಇರುತ್ತಿರಲಿಲ್ಲ. ಮೈಮೇಲೆ ಬಟ್ಟೆ ಇರುತ್ತಿರಲಿಲ್ಲ. ಅವರು ಬಿದ್ದ ರಭಸಕ್ಕೆ ಲೋಹಿತಾಕ್ಷರ ತಲೆಗೆ ಗಾಯವಾಗಿದ್ದು, ಇದರಿಂದ ಮೃತಪಟ್ಟಿರುವ ಸಾಧ್ಯತೆಯೂ ಇದೆ. ಆದ್ದರಿಂದ ಇವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಲೋಹಿತಾಕ್ಷ ಅವರು ಇಲೆಕ್ಟ್ರಿಕಲ್ ಗುತ್ತಿಗೆ ಕೆಲಸಕ್ಕೆ…
ಇನ್ಮುಂದೆ ಕಾರಿನ ಹಿಂಬದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಕಡ್ಡಾಯವಾಗಿದೆ. ಒಂದು ವೇಳೆ ಸೀಟ್ ಬೆಲ್ಟ್ ಧರಿಸದಿದ್ರೆ 1000 ದಂಡ ವಿಧಿಸಲಾಗುತ್ತದೆ. ಸಾರಿಗೆ ಸಚಿವಾಲಯ ಹೊರಡಿಸಿದ ಕರಡು ಅಧಿಸೂಚನೆಯ ಪ್ರಕಾರ, ಏಪ್ರಿಲ್ 1, 2025 ರಿಂದ ತಯಾರಾದ ಎಲ್ಲಾ ಕಾರುಗಳು ‘ರಿಯರ್ ಸೀಟ್ ಬೆಲ್ಟ್ ಅಲಾರಂ’ ಅನ್ನು ಒದಗಿಸಬೇಕಾಗುತ್ತದೆ. ಅಲ್ಲದೇ ಕಾರಿನ ಮುಂಬದಿ ಮಾತ್ರವಲ್ಲ ಹಿಂಬದಿ ಕುಳಿತವರು ಕೂಡ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕಾಗುತ್ತದೆ. ನಿಯಮ ಉಲ್ಲಂಘನೆಗೆ ಈ ಹಿಂದೆ ಇದ್ದ ದಂಡದ ಮೊತ್ತವನ್ನು 500 ರೂ. ನಿಂದ 1 ಸಾವಿರ ರೂ.ಗೆ ಹೆಚ್ಚಿಸಿದೆ. ಬಾಡಿಗೆ ಅಥವಾ ಖಾಸಗಿ ಕಾರುಗಳಲ್ಲಿ ಚಾಲಕನ ಜತೆಗೆ ಸಹ ಪ್ರಯಾಣಿಕರೂ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕಿದೆ. ಈಗಾಗಲೇ ಕಾರಿನ ಹಿಂಬದಿ ಪ್ರಯಾಣಿಕರೂ ಸೀಟ್ ಬೆಲ್ಟ್ ಧರಿಸಬೇಕೆಂಬ ನಿಯಮ ಜಾರಿಯಲ್ಲಿದೆ. ಇದನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿರುವ ಸರ್ಕಾರ 2025 ಏಪ್ರಿಲ್ 1ರಿಂದ ಮಾರಾಟವಾಗುವ ಕಾರುಗಳಲ್ಲಿ ಕಡ್ಡಾಯವಾಗಿ ರಿಯರ್ ಸೀಟ್ ಬೆಲ್ಟ್ ಅಲಾರಂ ಸೀಟ್ ಅಳವಡಿಸಬೇಕೆಂದು ಸೂಚನೆ ನೀಡಿದೆ.
ಮಂಗಳೂರು ಹಳೇ ಬಂದರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ನೌಕೆಯೊಂದು ಲಕ್ಷದ್ವೀಪ ಕರಾವಳಿಯಲ್ಲಿ ಮುಳುಗಿದ ಘಟನೆ ನಡೆದಿದೆ. ಅದರಲ್ಲಿದ್ದ 8 ಜನ ಸಿಬಂದಿ ಸಮುದ್ರದಲ್ಲೇ ಮೂರು ದಿನ ಅನ್ನ ಆಹಾರ, ನೀರಿಲ್ಲದೇ ಪವಾಡ ಸದೃಶ್ಯರಾಗಿ ಬದುಕಿ ಮರು ಜನ್ಮ ಪಡೆದಿದ್ದಾರೆ. ಮಾರ್ಚ್ 12 ತಮಿಳುನಾಡು ಮೂಲದ MSV ವರದರಾಜು ಎಂಬ ಸರಕು ಸಾಗಣೆಯ ನೌಕೆ ಮಂಗಳೂರು ಹಳೇ ಬಂದರಿಂದ ಸರಕು ತುಂಬಿಸಿ ಲಕ್ಷದ್ವೀಪದತ್ತ ಅಗತಿ ದ್ವೀಪದತ್ತ ಪ್ರಯಾಣ ಬೆಳೆಸಿತ್ತು. ಹಡಗಿನಲ್ಲಿ ಕ್ಯಾಪ್ಟನ್ ಭಾಸ್ಕರನ್, ಸಿಬಂದಿಗಳಾದ ನಾಗಲಿಂಗಂ, ನಲ್ಲಮುತ್ತು, ಮಣಿದೇವನ್ ವೇಲು, ಅಜಿತ್, ವಿಘ್ನೇಶ್ ಕುಮಾರ್, ಕುಪ್ಪುರಾಮನ್, ಮುರುಗನ್ ಸೇರಿ 8 ಜನ ಸಿಬಂದಿಗಳಿದ್ದರು. 13 ರಂದು ಅಂದರೋತ್ ದ್ವೀಪದಲ್ಲಿ ಅರ್ಧದಷ್ಟು ಸರಕು ಖಾಲಿ ಮಾಡಿ ರಾತ್ರೀಯೇ ಅಗತ್ತಿ ದ್ವೀಪದತ್ತ ಪ್ರಯಾಣ ಬೆಳೆಸಿತ್ತು. ಮುಂಜಾನೆ ಸುಮಾರಿಗೆ ದೋಣಿಯ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದು ಮುಳುಗಲಾರಂಭಿದೆ. ಸಿಬಂದಿ ದುರಸ್ತಿ ಮಾಡಲು ಸಾಕಷ್ಟು ಪ್ರಯತ್ನಿದರೂ ವಿಫಲವಾಗಿ ದೋಣಿ ಮುಳುಗಡೆಯಾಗಿದೆ. ಕೊನೆಗೆ ಅದರಲ್ಲಿದ್ದ ಜೀವರಕ್ಷಕ ಸಾಧನಗಳೊಂದಿಗೆ ಪುಟ್ಟ…
ಮಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವ 19 ರೌಡಿಶೀಟರ್‌ಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ. ಮೂಡುಬಿದಿರೆಯ ಅತ್ತೂರು ನಸೀಬ್, ಕಾಟಿಪಳ್ಳದ ಶ್ರೀನಿವಾಸ್ ಎಚ್., ಬಜ್ಪೆ ಶಾಂತಿಗುಡ್ಡದ ಸಫ್ವಾನ್, ಬೋಂದೆಲ್‌ನ ಜಯೇಶ್ ಯಾನೆ ಸಾಚು, ನೀರುಮಾರ್ಗದ ಭಟ್ರಕೋಡಿಯ ವರುಣ್ ಪೂಜಾರಿ, ಅಶೋಕ ನಗರದ ಅಝೀಝ್, ಕಾವೂರಿನ ಇಶಾಮ್, ಸುರತ್ಕಲ್ ಇಡ್ಯಾದ ಕಾರ್ತಿಕ್ ಶೆಟ್ಟಿ, ಕೈಕಂಬ-ಗಣೇಶ್‌ಪುರದ ದೀಕ್ಷಿತ್ ಪೂಜಾರಿ, ಕೃಷ್ಣಾಪುರದ ಲಕ್ಷ್ಮೀಶ ಉಳ್ಳಾಲ, ಬೊಂಡಂತಿಲದ ಕಿಶೋರ್ ಸನಿಲ್, ಉಳ್ಳಾಲ ಕೋಡಿಯ ಹಸೈನಾರ್ ಅಲಿ, ಕುದ್ರೋಳಿ ಕರ್ಬಲಾ ರಸ್ತೆಯ ಅಬ್ದುಲ್ ಜಲೀಲ್, ಬೋಳೂರಿನ ರೋಶನ್ ಕಿಣಿ, ಕಸಬಾ ಬೆಂಗರೆಯ ಅಹ್ಮದ್ ಸಿನಾನ್, ಜಪ್ಪಿನಮೊಗರಿನ ದಿತೇಶ್ ಕುಮಾರ್, ಬಜಾಲ್ ಕುತ್ತಡ್ಕದ ಗುರುಪ್ರಸಾದ್, ಭರತ್ ಪೂಜಾರಿ, ಜಪ್ಪು ಕುಡ್ಪಾಡಿಯ ಸಂದೀಪ್ ಶೆಟ್ಟಿ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿದೆ. ಈ ರೌಡಿಶೀಟರ್‌ಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು,…
ಉಡುಪಿ: ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಕೋರ್ಟ್ ಗೆ ಸಿಐಡಿ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಕಾಯುತ್ತಿದ್ದ ಸಿಐಡಿ, ಇದೀಗ ಎಫ್ಎಸ್ಎಲ್ ವರದಿ ಬಂದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲಾಗಿದೆ. 2023ರ ಜುಲೈ 18ರಂದು ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ಘಟನೆ ನಡೆದಿತ್ತು. ಬಳಿಕ ಇದು ದೊಡ್ಡ ವಿವಾದವಾಗಿತ್ತು. ನಂತರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿತ್ತು.
ಸುಳ್ಯ: ದಕ್ಷಿಣಕನ್ನಡ ಹಾಗೂ ಕೊಡಗಿನ ಗಡಿಭಾಗ ಕಲ್ಮಕಾರಿನ ಗಡಿಯೊಂದರಲ್ಲಿ ದಿನಸಿ ಅಂಗಡಿಯಲ್ಲಿ ಸಾಮಾಗ್ರಿ ಖರೀದಿಸಿದ್ದ ನಕ್ಸಲರ ತಂಡದ ಪತ್ತೆಗಾಗಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆಸಲಾಗಿದೆ. ದಕ್ಷಿಣ ಕನ್ನಡ ಗಡಿ ಮತ್ತು ಮಡಿಕೇರಿ ತಾಲ್ಲೂಕಿನ ಕಡಮಕಲ್ಲು, ಕೂಜಿಮಲೆ ಅರಣ್ಯ ವ್ಯಾಪ್ತಿಯ ಕಲ್ಮಕಾಡು ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಾಲ್ವರು ಬಂದೂಕುದಾರಿಗಳು ಆಗಮಿಸಿದ್ದರು. ಗ್ರಾಮದ ಅಂಗಡಿಯೊಂದಕ್ಕೆ ಆಗಮಿಸಿದ ಅವರು, 25 ಕೆಜಿ ಅಕ್ಕಿ ಸೇರಿ ಸುಮಾರು 3,500 ರೂಪಾಯಿಯ ದಿನಸಿ ಪದಾರ್ಥವನ್ನ ಖರೀದಿಸಿ ಅಲ್ಲಿಂದ ತೆರಳಿದ್ದಾರೆ. ತಂಡದಲ್ಲಿ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.ಇದೀಗ ಪತ್ತೆಯಾದ ನಕ್ಸಲರ ಪತ್ತೆಗೆ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆಸಲಾಗಿದ್ದು, ನಕ್ಸಲ್ ನಿಗ್ರಹ ದಳದ 3 ತುಕಡಿಯಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಅಲ್ಲದೆ ನಕ್ಸಲ್ ರ ಪತ್ತೆಗೆ ಡ್ರೋನ್ ಕ್ಯಾಮರಾ ನೆರವನ್ನು ಬಳಸಲಾಗಿದೆ.