ಉಡುಪಿ: ದಿನಾಂಕ 09/10/2025ರಂದು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 9 ಕೆಜಿ 937 ಗ್ರಾಂ 209 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 7,12,963/- ಬೆಲೆಯ ಗಾಂಜಾ, 345 ಗ್ರಾಂ 596 ಮಿಲಿಗ್ರಾಂ ಎಂ.ಡಿ.ಎಂ.ಎ. ಅಂದಾಜು ಮೌಲ್ಯ ರೂಪಾಯಿ 8,08,464/- ಹಾಗೂ ಮೌಲ್ಯರಹಿತ 61 ಗ್ರಾಂ 430 ಮಿಲಿಗ್ರಾಂ ಬಿಳಿ ಪೌಡರ್‌ನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್ ಎನ್‌ವಿರೋಟೆಕ್ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ನಾಶಪಡಿಸಲಾಯಿತು. ನಾಶಪಡಿಸಿದ ಮಾದಕ ದ್ರವ್ಯದ ಒಟ್ಟು ಅಂದಾಜು ಮೌಲ್ಯ ರೂಪಾಯಿ 15,21,427/- ಆಗಿರುತ್ತದೆ. ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿಯ ಅಧ್ಯಕ್ಷರಾದ ಹರಿರಾಮ್ ಶಂಕರ್, ಐಪಿಎಸ್, ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿ ಸದಸ್ಯರು ಹಾಗೂ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಹರ್ಷಾ ಪ್ರಿಯಂವದಾ ಐ.ಪಿ.ಎಸ್. ಮತ್ತು ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಸದಸ್ಯರಾದ ಪ್ರಭು ಡಿ.ಟಿ. ಇತರ ಪೊಲೀಸ್ ಅಧಿಕಾರಿಯವರು…
Author: main-admin
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ಯುವಕನೋರ್ವನನ್ನು ಬೆಂಗಳೂರಿನಲ್ಲಿ 3 ತಿಂಗಳ ಕಾಲ ಅಕ್ರಮವಾಗಿ ಕೂಡಿ ಹಾಕಿ ಹಲ್ಲೆಗೈದ ಘಟನೆ ನಡೆದಿದೆ. ಈ ಬಗ್ಗೆ ಬೆಂಗಳೂರಿನ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಅಪಹರಣಕ್ಕೊಳಗಾದ ಸಫಾ ನಗರ ಮಠ ನಿವಾಸಿ ಮೊಹಮ್ಮದ್ ಮುಸ್ತಫಾ ಎಂಬವರು ನೀಡಿದ ದೂರಿನನ್ವಯ ಬಿಎನ್‌ಎಸ್ ಸೆಕ್ಷನ್ 118(1), 127(4), 140(2), 351(2),352,3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ದೇವನಹಳ್ಳಿ ಠಾಣಾ ಪೊಲೀಸರು, ಅಜಯ್, ಕಾರ್ತಿಕ್, ಜೀವನ್ ಎಂಬ ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ ನಾಲ್ಕನೇ ಆರೋಪಿ ಲಕ್ಷಣ್ ತಲೆ ಮರೆಸಿಕೊಂಡಿದ್ದು ಆತನ ಪತ್ತೆಗೆ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಚೀಫ್ ಫೈನಾಸ್ಸಿಂಗ್ ಆಫೀಸರ್ ಆಗಿ ಸಂತ್ರಸ್ಥ ಯುವಕ ಕೆಲಸಕ್ಕಿದ್ದು ಸ್ನೇಹಿತ ಮೊಹಮ್ಮದ್ ರಾಜೀ ಎಂಬಾತನ ಜೊತೆ ಇಂದಿರಾನಗರದ ಬಳಿಯಿರುವ ಲಾಡ್ಜೊಂದರಲಿ ವಾಸವಾಗಿದ್ದ. ಅಲ್ಲಿಗೆ ಬಂದ ಕಾರ್ತಿಕ್ ಎಂಬವರು ಮೊಹಮ್ಮದ್ ರಾಜೀ ಜೊತೆ ಮಾತುಕತೆ ನಡೆಸುತ್ತಿದ್ದ. ಆ ದಿನ ಮೊಹಮ್ಮದ್ ರಾಜೀಯು ತನಗೇನೋ…
ಚೆನ್ನೈ: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ಸೇವಿಸಿ ಮಕ್ಕಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರಪ್ ತಯಾರಿಕ ಕಂಪನಿಯ ಮಾಲೀಕನನ್ನು ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. ಸಿರಪ್ ಕುಡಿದು ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ 20ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಬಳಿಕ ಕೋಲ್ಡ್ರಿಫ್ ಸಿರಪ್ ಅನ್ನು ನಿಷೇಧಿಸಲಾಯಿತು. ಈ ಬೆನ್ನಲ್ಲೇ ಸಿರಪ್ ತಯಾರಿಸುತ್ತಿದ್ದ ಸ್ರೆಸನ್ ಫಾರ್ಮಾ ಕಂಪನಿಯ ಮಾಲೀಕ ರಂಗನಾಥನ್ ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 20,000 ರೂ. ಬಹುಮಾನವನ್ನೂ ಘೋಷಿಸಲಾಗಿತ್ತು. ಅಂತಿಮವಾಗಿ ಬುಧವಾರ ತಡರಾತ್ರಿ ಚೆನ್ನೈನಲ್ಲಿ ರಂಗನಾಥನ್‌ನನ್ನು ಬಂಧಿಸಲಾಗಿದೆ. ಸಿರಪ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಷಕಾರಿ ಕೈಗಾರಿಕಾ ರಾಸಾಯನಿಕ ಡೈಥಿಲೀನ್ ಗ್ಲೈಕೋಲ್ ಇರುವುದು ಪತ್ತೆಯಾದ ಬಳಿಕ ಮಾಲೀಕನನ್ನು ಅರೆಸ್ಟ್ ಮಾಡಲಾಗಿದೆ. ಸದ್ಯ ರಂಗನಾಥನ್‌ನನ್ನು ಚೆನ್ನೈನಿಂದ ಛಿಂದ್ವಾರಕ್ಕೆ ಪೊಲೀಸರು ಕರೆ ತರುತ್ತಿದ್ದು, ನಂತರ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ಈ ಹಿಂದೆ ಸ್ರೆಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಮಧ್ಯಪ್ರದೇಶವಲ್ಲದೆ ರಾಜಸ್ಥಾನದಲ್ಲೂ ಈ ಸಿರಪ್ ಸೇವಿಸಿದ ನಂತರ ಮಕ್ಕಳು ಸಾವನ್ನಪ್ಪಿರುವ ವರದಿಗಳಿವೆ. ಕೋಲ್ಡ್ರಿಫ್ ಹೆಸರಿನ ಈ ಸಿರಪ್…
ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ಸಮುದ್ರ ಪಾಲಾದ ಘಟನೆ ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಬುಧವಾರ ಸಂಜೆ ನಡೆದಿದೆ. ಮನೋಹರ್ ಪುತ್ರನ್ (53) ಮೃತ ದುರ್ದೈವಿಯಾಗಿದ್ದಾರೆ. ಸಾಯಂಕಾಲ ಸರಿ ಸುಮಾರು 6:30 ಸಮಯ ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು ಪುತ್ರನ್ ಹೋಗಿದ್ದರು ಎನ್ನಲಾಗಿದೆ. ಈ ಸಂದರ್ಭ ಆಕಸ್ಮಿಕವಾಗಿ ಸಮುದ್ರ ಪಾಲಾಗಿ ಕಣ್ಮರೆಯಾಗಿದ್ದರು. ಮಾಹಿತಿ ಪಡೆದ ಪಣಂಬೂರು ಠಾಣಾ ಪೋಲಿಸರು ಸ್ಥಳಕ್ಕೆ ಧಾವಿಸಿ ಸ್ಥಳೀಯ ಮೀನುಗಾರರ ಸಹಾಯದಿಂದ ಹುಡುಕಾಟ ಆರಂಭಿಸಿ ಸುಮಾರು ರಾತ್ರಿ 9:30 ಸಮಯ ಮೃತ ದೇಹವನ್ನು ಮೇಲಕ್ಕೆತ್ತಲಾಯಿತು. ಪಣಂಬೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಾಲಾಗಿದೆ
ಮಂಗಳೂರು: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ಮೋಟಾರ್ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ಮಾರುತಿ ಕಂಬಾಲ್ ಅವರಿಗೆ ದಂಡ ವಿಧಿಸಲಾಗಿದೆ. ಮಂಗಳೂರು ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್. ಬ್ಯಾಡಗಿ ಅವರು ಆರೋಪಿಯ ವಿರುದ್ಧ ನಡೆದ ವಿಚಾರಣೆಯಲ್ಲಿ ತಪ್ಪು ಸಾಬೀತಾಗಿದ್ದು, ಒಟ್ಟು ರೂ. 29,000/- ದಂಡ ಪಾವತಿಸಲು ಆದೇಶ ಹೊರಡಿಸಿದ್ದಾರೆ.ಅಪ್ರಾಪ್ತ ವಯಸ್ಕರಿಗೆ ವಾಹನ ನೀಡುವುದು ರಸ್ತೆ ಅಪಘಾತಗಳಿಗೆ ಕಾರಣವಾಗುವ ಗಂಭೀರ ತಪ್ಪು ಎಂದು ನ್ಯಾಯಾಲಯ ತೀರ್ಪಿನಲ್ಲಿ ಸೂಚಿಸಿದ್ದು, ಇಂತಹ ಕೃತ್ಯಗಳಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಮಂಗಳೂರು : ನಗರದ ಸುರತ್ಕಲ್ ಸಮೀಪ ಕಾಟಿಪಳ್ಳದ 8ನೇ ಬ್ಲಾಕ್ ಚೊಕ್ಕಬೆಟ್ಟುವಿನ ಅಂಚೆ ಕಚೇರಿ ರಸ್ತೆಯ ಅಬ್ದುಲ್ ಖಾದರ್ ರವರ ಮನೆಯಲ್ಲಿ ಅಕ್ರಮವಾಗಿ ದನ ವಧೆಯನ್ನು ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಮತ್ತೋರ್ವ ತಲೆಮರೆಸಿಕೊಂಡಿದ್ದಾನೆ. ಬಂಧಿತರು ಚೊಕ್ಕಬೆಟ್ಟುವಿನ ಅಜೀಜ್ ಅಹಮ್ಮದ್(55), ಇಮ್ಮಿಯಾಜ್ (41), ಎ ಕೆ ಆಶೀಕ್(22) ಎಂದು ಗುರುತಿಸಲಾಗಿದೆ.. ಮತ್ತೋರ್ವ ಆರೋಪಿ ಬಶೀರ್ ಚೊಕ್ಕಬೆಟ್ಟು ಎಂಬಾತನು ತಲೆಮರೆಸಿಕೊಂಡಿದ್ದಾನೆ. ಆರೋಪಿ ಇಮ್ಮಿಯಾಜ್ ನು ತಂದಿದ್ದ 2 ಹೆಣ್ಣು ಕರುಗಳನ್ನು ಬಶೀರ್ ಹಾಗೂ ಅಶಿಕ್ ಇವರೊಂದಿಗೆ ಸೇರಿಕೊಂಡು ವಧೆ ಮಾಡಿ ದನದ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡಲು ಮುಂದಾಗಿದ್ದರು ಎಂದು ಹೇಳಲಾಗಿದೆ. ಈ ಸಂದರ್ಭ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.
ಉಳ್ಳಾಲ: ಮರದ ಕೊಂಬೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆಬುರುಡೆ, ಅಸ್ಥಿಪಂಜರ ಪತ್ತೆಯಾದ ಘಟನೆ ಸಂಬಂಧಿಸಿ ಉಳ್ಳಾಲ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಷಯ ಫಾರ್ಮ್ ಒಳಗಡೆಯ ಮರದ ಕೆಳಗಡೆ ಮಾನವನ ಅಸ್ಥಿ,ತಲೆಬುರುಡೆ ಮತ್ತು ಅವಶೇಷಗಳು ಪತ್ತೆಯಾಗಿವೆ. ಫಾರ್ಮ್ ನೊಳಗಡೆ ತೋಟದ ಕೆಲಸ ಮಾಡುತ್ತಿದ್ದ ಸ್ಥಳೀಯ ಕಾರ್ಮಿಕರಿಗೆ ಮಂಗಳವಾರ ಬೆಳಿಗ್ಗೆ ಅಸ್ಥಿಗಳು ಕಾಣಸಿಕ್ಕಿವೆ. ಸ್ಥಳದಲ್ಲಿ ಹಸಿರು ಬರ್ಮುಡ ಚಡ್ಡಿ, ಹಸಿರು ಟೀ ಶರ್ಟ್ ಪತ್ತೆಯಾಗಿದ್ದು ,ಮರದ ಗೆಲ್ಲಲ್ಲಿ ನೈಲಾನ್ ಹಗ್ಗದ ನೇಣಿನ ಕುಣಿಕೆ ಇದ್ದು ಅದರಲ್ಲಿ ಹೆಡ್ ಫೋನ್ ಮತ್ತು ಎಲುಬುಗಳು ನೇತಾಡುತ್ತಿವೆ. ಮತ್ತೊಂದು ಗೆಲ್ಲಲ್ಲಿ ಕೇಸರಿ ಶಾಲು ಜೋತು ಬಿದ್ದಿದೆ. ಬರ್ಮುಡದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೇರಳ ಗಡಿಭಾಗದ ಮಂಜೇಶ್ವರ ಠಾಣಾ ವ್ತಾಪ್ತಿಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಬಿಹಾರ ಮೂಲದ ಅಪ್ರಾಪ್ತ ವಲಸೆ ಕಾರ್ಮಿಕನೊಬ್ಬ ನಾಪತ್ತೆಯಾಗಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಅದೇ ವ್ಯಕ್ತಿಯ ಶವ ಇದಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮಂಗಳೂರು : ನಗರದ ಸಮೀಪ ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಸಬ ಬೆಂಗ್ರೆ ನಿವಾಸಿ ಅಲ್ತಾಫ್ (47) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ದಂಗೆ, ಶಸ್ತ್ರ ಪ್ರಯೋಗ, ಹಾನಿ ಮತ್ತು ಬೆದರಿಕೆ ಸೇರಿ ಹಲವು ಪ್ರಕರಣ ದಾಖಲಾಗಿತ್ತು. ಈತನ ಬಗ್ಗೆ ಮಂಗಳೂರು 2ನೇ ಸಿ.ಜೆ.ಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ವಿಚಾರಣೆ ನಡೆಯುತ್ತಿತ್ತು. ಆದರೆ ವಿಚಾರಣೆಯ ಸಮಯದಲ್ಲಿ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದರಿಂದ, ನ್ಯಾಯಾಲಯವು ದೀರ್ಘಕಾಲದಿಂದ ಬಾಕಿ ಇರುವ ಪ್ರಕರಣ ಎಂದು ಪರಿಗಣಿಸಿತ್ತು. ಖಚಿತ ಮಾಹಿತಿಯ ಮೇರೆಗೆ, ಉತ್ತರ ಠಾಣೆಯ ಎಎಸ್‌ಐ ಬಾಬು, ಗುರು ಬಿ.ಟಿ ಮತ್ತು ಸುನಿಲ್ ಕುಮಾರ್ ಎನ್ ಅವರ ತಂಡವು ಅಕ್ಟೋಬರ್ 5ರಂದು ಮಂಗಳೂರು ಬಂದರು ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಬಂಧಿತನನ್ನು ಮಂಗಳೂರು…
ಉಡುಪಿ: ಅಂಬಾಗಿಲು ಜಂಕ್ಷನ್ ನಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಕುರಿತು ವರದಿಯಾಗಿದೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೈಕ್ ಬಸ್ಸಿನಡಿ ಸಿಲುಕಿಕೊಂಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಚಾಲಕನನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಾಯಾಳು ಮೃತಪಟ್ಟಿರುವ ಕುರಿತು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮೃತರನ್ನು ರವಿ ಪೂಜಾರಿ (44) ಸುಬ್ರಮಣ್ಯ ನಗರ ಪುತ್ತೂರು ಎಂದು ಗುರುತಿಸಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.
ಸುರತ್ಕಲ್ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ ಪಿಕಪ್ ವಾಹನ ಹಾಗೂ ಬೈಕ್‌ನ್ನು ಸುರತ್ಕಲ್ ಪೊಲೀಸರು ವಶಪಡಿಸಿದ್ದಾರೆ. ಸೆ.30ರಂದು ರಾತ್ರಿ ಸುಮಾರು 9 ಗಂಟೆಗೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯ ಸುಕುಮಾರ್ ಎಂಬವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ KA-19-AE-8017 ನೇ ನಂಬ್ರದ ಪಿಕಪ್ ವಾಹನವನ್ನು ರಾತ್ರಿ 10 ಗಂಟೆಗೆ ನೋಡಿದಾಗ ಪಿಕಪ್ ವಾಹನವು ಇಲ್ಲದೇ ಇದ್ದು, ರಾತ್ರಿ ಯಾರೋ ಕಳವು ಮಾಡಿಕೊಂಡು ಹೋಗಿದ್ದಾರೆಂದು ಅ.3 ರಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಗಳ ಪತ್ತೆ ಕಾರ್ಯ ನಡೆಸುತ್ತಿದ್ದ ಪೊಲೀಸರು ಅ.7ರಂದು ಬೈಕ್‌ವೊಂದರಲ್ಲಿ ಅನುಮಾನಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಯುವಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಯನ್ನು ತಿರುವನಂತಪುರಂ ನಿವಾಸಿ ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್(29) ಎಂದು ಗುರುತಿಸಲಾಗಿದೆ.…







