ಪುತ್ತೂರು: ಅಂಗನವಾಡಿ ಕೇಂದ್ರದ ಬೀಗ ಮುರಿದು ಒಳನುಗ್ಗಿದ ಕಿಡಿಗೇಡಿಗಳು ಪುಟಾಣಿಗಳಿಗೆಂದು ಇಡಲಾಗಿದ್ದ ಕೋಳಿ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದು ತೆರಳಿರುವ ಘಟನೆ ಮಾ. 18ರಂದು ಬೆಳಕಿಗೆ ಬಂದಿದೆ. ನೆಲ್ಲಿಕಟ್ಟೆಯ ಶ್ರೀ ರಾಮಕೃಷ್ಣ ಸಮಾಜ ಸೇವಾ ಸಂಸ್ಥೆಯ ಬಳಿಯ ಅಂಗನವಾಡಿ ಕೇಂದ್ರಕ್ಕೆ ಬೆಳಿಗ್ಗೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಕೇಂದ್ರದ ಬಾಗಿಲ ಬೀಗ ಒಡೆದಿತ್ತು. ಒಳಗೆ ನೋಡಿದಾಗ ಅಡುಗೆ ಕೋಣೆಯಲ್ಲಿ ಪುಟಾಣಿಗಳಿಗೆಂದು ದಾಸ್ತಾನಿರಿಸಲಾಗಿದ್ದ ಮೊಟ್ಟೆಗಳು ಒಡೆದಿದ್ದು, ಪಕ್ಕದಲ್ಲಿರುವ ಗ್ಯಾಸ್ ಸ್ಟವ್ ನ ಬಾನಲೆಯಲ್ಲಿ ಆಮ್ಲೆಟ್ ತುಂಡು ಇರುವುದು ಕಂಡುಬಂದಿದೆ. ಯಾರೋ ಕಿಡಿಗೇಡಿಗಳು ರಾತ್ರಿ ವೇಳೆ ಅಂಗನವಾಡಿಗೆ ನುಗ್ಗಿ ಆಮ್ಲೆಟ್ ಮಾಡಿ ತಿಂದು ಹೋಗಿದ್ದಾರೆ. ಘಟನೆ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.
Author: main-admin
ಮಂಗಳೂರು: ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ. ಬೀದರ್ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಕೊಪ್ಪಳದಲ್ಲಿ ಮಾರ್ಚ್ 21ರಿಂದ 2 ದಿನಗಳ ಕಾಲ ಮಳೆಯಾಗಲಿದೆ, ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಾರ್ಚ್ 22ರಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ 1 ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾ. 14ರಂದು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಿರುವೈಲ್ ಗ್ರಾಮದ ವಾಮಾಂಜೂರು ಗ್ರಾಮದಲ್ಲಿ ನಡೆದಿದೆ.ಆರೋಪಿಗಳನ್ನು ದೇರಳಕಟ್ಟೆ ಬೆಳ್ಮ ಗ್ರಾಮದ ಕನಕೂರು ಪದವು ಮನೆ ನಿವಾಸಿ ಅಶ್ರಫ್ ಯಾನೆ ಪೊಂಗ ಅಶ್ರಫ್ (30), ಅದೇ ಗ್ರಾಮದ ತಿಲಕನಗರ ನಿವಾಸಿ ಮೊಹಮ್ಮದ್ ಅಲ್ಫಾಜ್ (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 115 ಗ್ರಾಂ ಮೌಲ್ಯದ ಗಾಂಜಾ, ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಪೊಲೀಸರು ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಮೌಲ್ಯ 10,300 ರೂ. ಆಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಅಶ್ರಫ್ ಯಾನೆ ಪೊಂಗ ಆಶ್ರಫ್ ಮೇಲೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ವಾರೆಂಟ್ ಜಾರಿಯಲ್ಲಿದೆ. ಈತ ಸುಮಾರು 6 ತಿಂಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಬಂಟ್ವಾಳ: ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ಐವರ ಪೈಕಿ ವ್ಯಕ್ತಿಯೋರ್ವನು ನೇತ್ರಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶಂಭೂರು ಗ್ರಾಮದ ದೇವಸ್ಥಾನವೊಂದರ ಸಮೀಪ ನದಿಯಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ. ಬೆಳ್ತಂಗಡಿ ನಿವಾಸಿ ಲೋಹಿತಾಕ್ಷ ಮೃತಪಟ್ಟ ವ್ಯಕ್ತಿ. ಬೆಳ್ತಂಗಡಿ ನಿವಾಸಿಗಳಾದ ವಿನ್ಸಿ,ಮ್ಯಾಕ್ಸಿ,ಪ್ರಮೋದ್, ದಯಾನಂದ ಎಂಬವರ ಜೊತೆಗೆ ನೇತ್ರಾವತಿ ನದಿಗೆ ಈಜಾಡಲು ಬಂದಿದ್ಧ ವೇಳೆ ಘಟನೆ ನಡೆದಿದೆ. ವಿನ್ಸಿ ಎಂಬವರ ಪತ್ನಿಯ ಮನೆ ಶಂಭೂರಿನಲ್ಲಿದ್ದು, ಇಲ್ಲಿಗೆ ಆಗ್ಗಾಗ್ಗೆ ಬಂದು ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಿ ಹೋಗುತ್ತಿದ್ದರು ಎಂದು ಹೇಳಲಾಗಿದೆ.ಇಂದು ಕೂಡ ಅದೇ ರೀತಿ ಸ್ನೇಹಿತರು ಬೆಳ್ತಂಗಡಿಯಿಂದ ಕಾರಿನಲ್ಲಿ ಬಂದಿದ್ದು, ನದಿಗೆ ಸ್ನಾನ ಮಾಡಲು ಬಂದಿದ್ದರು. ಸಂಜೆ ಸುಮಾರು 4 ಗಂಟೆ ವೇಳೆಗೆ ನದಿಯಿಂದ ಲೋಹಿತಾಕ್ಷ ಅವರು ಕಾರಿನ ಬಳಿಗೆ ಹೋಗುವುದಾಗಿ ಬಂದಿದ್ದರು. ಆದರೆ ಸ್ನೇಹಿತರು ಸ್ನಾನ ಮುಗಿಸಿ ಕಾರಿನತ್ತ ಬಂದಾಗ ಈತ ಕಾರಿನ ಬಳಿ ಇಲ್ಲದಿರುವುದನ್ನು ಕಂಡು ಗಾಬರಿಯಾಗಿ ಮತ್ತೆ ನದಿಯತ್ತ ತೆರಳಿದಾಗ ನದಿಯ ಬದಿ ನೀರಿನಲ್ಲಿ ಬಿದ್ದಿದ್ದರು. ಬಿದ್ದ ವೇಳೆ ತಲೆಯ ಭಾಗಕ್ಕೆ…
ಮಂಗಳೂರು: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತರನ್ನು ಮಂಗಳೂರಿನ ಸದಕತ್.ಯು ಆಲಿಯಾಸ್ ಶಾನ್ ನವಾಜ್(31), ಮಹಮ್ಮದ್ ಅಶ್ಫಕ್ ಆಲಿಯಾಸ್ ಅಶ್ಫಾ(25) ಎಂದು ಗುರುತಿಸಲಾಗಿದೆ. ಆರೋಪಿಗಳು ಮಂಗಳೂರು ನಗರಕ್ಕೆ ಗೋವಾ ರಾಜ್ಯದಿಂದ ನಿಷೇದಿತ ಮಾದಕ ವಸ್ತುವಾದ ಕೋಕೆನ್ ನ್ನು ಖರೀದಿಸಿಕೊಂಡು ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರಪಿಂದ ರೂ. 2,72,000/- ರೂ ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೋಕೆನ್, 3 ಮೊಬೈಲ್ ಫೋನ್ ಗಳನ್ನು, ಡಿಜಿಟಲ್ ತೂಕ ಮಾಪಕ, ನಗದು ರೂ. 5560/-ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ…
ಮಡಿಕೇರಿ : 6 ವರ್ಷದ ಬಳಿಕ ಮತ್ತೆ ಕೊಡಗಿನಲ್ಲಿ ಪ್ರತ್ಯಕ್ಷಗೊಂಡ ನಕ್ಸಲರು ಸುಳ್ಯ ಸಮಪಾಜೆ ಗಡಿಯ ಮಡಿಕೇರಿ ಭಾಗದ ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡಿದ್ದಾರೆ . 8 ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ ವಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,ಗುತ್ತಿಗಾರು, ಕೊಲ್ಲಮೊಗರು, ಕಲ್ಮಕರ್, ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಪ್ರದೇಶದಲ್ಲಿ ನಕ್ಸಲರು ಬೀಡು ಬಿಟ್ಟಿದ್ದಾರೆ ಎಂದು ಹೇಳಲಾಗಿದೆ. ಕೂಜಿಮಲೆ ಅಂಗಡಿಯೊಂದರಿಂದ 4 ಸಾವಿರ ರೂಪಾಯಿ ನಗದು ನೀಡಿ ದಿನಸಿ ಸಾಮಗ್ರಿ ಖರೀದಿಸಿ ತೆರಳಿದ್ದಾರೆ ಎಂದು ಹೇಳಲಾಗಿದೆ. 2012 ರಲ್ಲಿ ಕಾಲೂರು ಗ್ರಾಮದಲ್ಲಿ ಪ್ರತ್ಯಕ್ಷಗೊಂಡಿದ್ದರು.2018 ರಲ್ಲೂ ಫೆಬ್ರವರಿ ತಿಂಗಳಿನಲ್ಲಿ ಇದೆ ವ್ಯಾಪ್ತಿ ಸಂಪಾಜೆ ಗುಡ್ಡೆಗದ್ದೆಯಲ್ಲಿ ಪ್ರತ್ಯಕ್ಷಗೊಂಡಿದ್ದ ತಂಡ. ಲೋಕಸಭಾ ಚುನಾವಣೆ ಹಿನ್ನಲೆ ನಕ್ಸಲರು ಆಕ್ಟಿವ್ ಆಗಿದ್ದು ಕೇರಳದಿಂದ ಬಂದಿರಬಹುದೆಂದು ಶಂಕಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಪೊಲೀಸರಿಂದ ಕಟ್ಟೆಚ್ಚರ ವಹಿಸಿದ್ದು ತಪಾಸಣೆ ನಡೆಸುತ್ತಿದ್ದಾರೆ.
ಉಳ್ಳಾಲ: ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49) ಮೃತ ವ್ಯಕ್ತಿ. ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ ತಂಗುದಾಣದ ಬಳಿ ಬೇಕರಿ ಇದ್ದು, ಎದುರು ಭಾಗದ ಹೆದ್ದಾರಿ ಬದಿಯಲ್ಲೇ ಮನೆ ಹೊಂದಿದ್ದಾರೆ. ಭಾನುವಾರ ತಲಪಾಡಿ ದೇವಿಪುರದಲ್ಲಿ ರಥೋತ್ಸವ ಇದ್ದ ಹಿನ್ನೆಲೆ ರಾಜೇಶ್ ಅವರು ಮನೆಗೆ ಬಂದಿದ್ದ ನೆಂಟರನ್ನ ಉಪಚರಿಸಿ ಮಧ್ಯಾಹ್ನ ವೇಳೆ ಬೇಕರಿಗೆ ತೆರಳುತ್ತಿದ್ದರು. ಹೆದ್ದಾರಿ ದಾಟಲು ನಿಂತಿದ್ದ ವೇಳೆ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಧಾವಿಸಿ ಬಂದಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ರಾಜೇಶ್ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಮೃತ ರಾಜೇಶ್ ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ. ಹಿರಿಯ ಮಗಳು ಪದವಿ ಶಿಕ್ಷಣ ಪಡೆಯುತ್ತಿದ್ದು, ಕಿರಿಯ…
ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ರೆಸಾರ್ಟ್ ವೊಂದರ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಹೇರೂರು ಜಂಗಲ್ ರೆಸಾರ್ಟ್ ನ ಸಮೀಪದಲ್ಲಿ ನಡೆದಿದೆ. 7ನೇ ಹೊಸಕೋಟೆ ಕಲ್ಲೂರು ಗ್ರಾಮದ ಅಬ್ಬಾಸ್ ಎಂಬುವವರ ಅಪ್ರಾಪ್ತ ಪುತ್ರ ಆಲ್ಟೊ ಕಾರನ್ನು ಬಾಡಿಗೆಗೆ ಪಡೆದುಕೊಂಡಿದ್ದಾನೆ. ಈತ ಕಾರನ್ನು ಚಲಾಯಿಸಿಕೊಂಡು ಬಸವನಹಳ್ಳಿ ಮಾರ್ಗವಾಗಿ ಅತೀ ವೇಗದಿಂದ ಬಂದಿದ್ದಾನೆ. ಆದರೆ ಅದಾಗಲೇ ನಿಯಂತ್ರಣ ಕಳೆದುಕೊಂಡಿದ್ದ ಕಾರು ರಸ್ತೆಯ ಇನ್ನೊಂದು ಬದಿಯಲ್ಲಿರುವ ರೆಸಾರ್ಟ್ ನ ವಾಹನ ಪಾರ್ಕಿಂಗ್ ಮಾಡುವ ಸ್ಥಳದಲ್ಲಿನ ಕಾಂಪೌಂಡ್ ಗೆ ಅಪ್ಪಳಿಸಿ ರಸ್ತೆಯಲ್ಲಿ ಮೂರು ಸಲ ಪಲ್ಟಿ ಹೊಡೆದಿದೆ. ಈ ಸಂದರ್ಭ ರೆಸಾರ್ಟ್ ನ ವಾಹನ ಪಾರ್ಕಿಂಗ್ ಮಾಡುವ ಸ್ಥಳದಲ್ಲಿ ಕಾಂಪೌಂಡ್ ಸಮೀಪ ಕರ್ತವ್ಯ ನಿರತರಾಗಿದ್ದ ಇಬ್ಬರು ಮಹಿಳಾ ಸಿಬ್ಬಂದಿಗಳಿಗೆ ಕೂಡ ಕಾರು ಡಿಕ್ಕಿಯಾಗಿದ್ದು, ಗಂಭೀರವಾಗಿ ಗಾಯಗೊಂಡು ಚಿಂತಾಜನಕರಾಗಿರುವ ಇವರನ್ನು ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿಯ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ. ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಎಎಸ್ಐ ಆಗಿದ್ದಾರೆ. ಘಟನೆ ಬೆನ್ನಲ್ಲೇ ದೊಡವಾಡ ಠಾಣೆ ಪಿಎಸ್ಐ ನಂದೀಶರನ್ನು ಅಮಾನತು ಮಾಡಿ ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ ಗುಳೇದ ಆದೇಶ ಹೊರಡಿಸಿದ್ದಾರೆ. ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದೇ ಎಎಸ್ಐ ಸಾವಿಗೆ ಕಾರಣ ಎಂಬುದು ಸಾಬೀತಾಗಿದೆ. ವಿಜಯಕಾಂತ ಮಿಕಲಿ ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ತವ್ಯ ಮುಗಿಸಿ ಯರಗಟ್ಟಿಯಲ್ಲಿರುವ ಮನೆಗೆ ಬರುವಾಗ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗದಿಂದ ಬೈಕ್ ಚಲಾಯಿಸುವಾಗ ಹಂಪ್ ಜಿಗಿಸಿ ರಸ್ತೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಕೆಲ ತಿಂಗಳ ಹಿಂದೆಯೇ ಎಲ್ಲ ಪೊಲೀಸರು ಹೆಲ್ಮೆಟ್ ಧರಿಸುವುದನ್ನು ಬೆಳಗಾವಿ ಎಸ್ಪಿ ಕಡ್ಡಾಯಗೊಳಿಸಿದ್ದಾರೆ. ಮೇಲಾಧಿಕಾರಿಗಳ ನಿರ್ದೇಶನ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಕಾರಣಕ್ಕೆ ದೊಡವಾಡ ಠಾಣೆ ಪಿಎಸ್ಐ ನಂದೀಶ ಅಮಾನತು ಮಾಡಿ…
ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಾರ್ಕಳ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕುಕ್ಕುಂದೂರು ಗ್ರಾಮದ ಸದಾನಂದ ಪೂಜಾರಿ (40) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಸದಾನಂದ ಅವರ ಮೃತದೇಹ ಶನಿವಾರ ಬೆಳಿಗ್ಗೆ ಮನೆ ಎದುರಿನ ತೆರೆದ ಬಾವಿಯಲ್ಲಿ ಪತ್ತೆಯಾಗಿತ್ತು. ರಾತ್ರಿ ನಿದ್ದೆಯಿಂದ ಎದ್ದು ಮನೆ ಹೊರಗಡೆ ಬಂದ ಸದಾನಂದರು ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬೇಕೆಂದು ಶಂಕಿಸಲಾಗಿದೆ. ಬೆಂಗಳೂರಿನಲ್ಲಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಸಿಬ್ಬಂದಿಯಾಗಿದ್ದ ಸದಾನಂದ ಅವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದುಕೊಂಡು ಹತ್ತಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅವಿವಾಹಿತರಾಗಿದ್ದ ಸದಾನಂದ ಅವರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.