ಪಡುಬಿದ್ರಿ: ಹೆಜಮಾಡಿ ಗ್ರಾಮದ ಕ್ರಿಸ್ಟನ್ ಡಿ’ಸೋಜಾ ಅವರಿಗೆ 2023ರ ಅಕ್ಟೋಬರ್‌ನಿಂದ 2024ರ ಫೆಬ್ರವರಿವರೆಗೆ ಬೇರೆ ಬೇರೆ ದಿನಗಳಲ್ಲಿ ಗ್ಲೋಬಲ್ ಕೆರಿಯರ್ ಸೊಲ್ಯೂಶನ್ ಎಂಬ ಕಂಪೆನಿಯ ಹೆಸರಿನಲ್ಲಿ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಈರ್ವರು 4,42,645 ಲಕ್ಷ ರೂ. ವಂಚಿಸಿರುವುದಾಗಿ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಿತ್ ಮತ್ತು ಸುಭಾಸ್ ಎಂಬವರು ಒಟ್ಟು 3 ಮೊಬೈಲ್ ನಂಬರ್‌ಗಳಿಂದ ಪರಿಚಯಿಸಿಕೊಂಡು, ಕರೆ ಮಾಡಿ ಕ್ರಿಸ್ಟನ್‌ರಿಂದ ಹಣವನ್ನು ಗೂಗಲ್ ಪೇ ಮೂಲಕ ಪಡೆದು, ಉದ್ಯೋಗವನ್ನೂ ನೀಡಲೇ, ಹಣವನ್ನೂ ಹಿಂತಿರುಗಿಸದೇ ಮೋಸ ಮಾಡಿರುವುದಾಗಿ ದೂರಲ್ಲಿ ವಿವರಿಸಲಾಗಿದೆ.
Author: main-admin
ಉಡುಪಿ: ಭಕ್ತನ ರೂಪದಲ್ಲಿ ದೈವಸ್ಥಾನಕ್ಕೆ ಬಂದ ಅನಾಮಿಕ, ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿ ಪರಾರಿಯಾದ ಘಟನೆ ಉಡುಪಿ ಉದ್ಯಾವರ ಬಳಿಯ ಕಂಪನಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ ಸಿಸಿಟಿವಿ ಅಳವಡಿಕೆ ಆಗಿರುವುದು ಗಮನಕ್ಕೆ ಬಂದರೂ ಹುಂಡಿಯಿಂದ ಕಳ್ಳತನ ಮಾಡಿದ್ದಾನೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.
ಸುರತ್ಕಲ್: ಸುರತ್ಕಲ್ ನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝೀಲ್ ಅವರ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಮುಖ ಮೂವರು ಆರೋಪಿಗಳಿಗೆ ರಾಜ್ಯ ಉಚ್ಛ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಕವ್ವಳಮಡೂರು ಗ್ರಾಮ, ಬಂಟ್ವಾಳ ತಾಲೂಕು ನಿವಾಸಿ ಸುಹಾಸ್ ಶೆಟ್ಟಿ ಯಾನೆ ಸುಭಾಶ್, ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಅಭಿಷೆಕ್ ಯಾನೆ ಅಭಿ, ಕುಳಾಯಿ ನಿವಾಸಿ ಮೋಹನ್ ಸಿಂಗ್ ಯಾನೆ ನೇಪಾಲಿ ಮೋಹನ್ ಗೆ ಹೈಕೋರ್ಟ್ ಜಾಮೀನು ನೀಡಿ ಆದೇಶಿಸಿದೆ ಎಂದು ತಿಳಿದು ಬಂದಿದೆ. ಫಾಝಿಲ್ ಕೊಲೆ ಕುರಿತು ಸುರತ್ಕಲ್ ಪೊಲೀಸರು ಈ ಮೂವರನ್ನು ಎ1, ಎ2, ಮತ್ತು ಎ3 ಆರೋಪಿಗಳೆಂದು ಗುರುತಿಸಿ ಮಂಗಳೂರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ. ಪ್ರಕರಣದಲ್ಲಿ ಜಾಮಿನುಕೋರಿ ಆರೋಪಿಗಳ ಪರ ವಕೀಲರು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಮೂವರಿಗೆ ನ್ಯಾಯಾಲಯವು ಆರೋಪಿಗಳು ತಲಾ ಒಂದು ಲಕ್ಷ ರೂ. ಬಾಂಡ್ ನ್ಯಾಯಾಲಯಕ್ಕೆ ಕಟ್ಟಬೇಕು. ಪ್ರಕರಣ…
ಬೆಳ್ತಂಗಡಿ: ಆಟೋ ರಿಕ್ಷಾ ಡಿಕ್ಕಿಯಾಗಿ ಮೂರು ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆ ಸೋಣಂದೂರು ಪಣಕಜೆಯಲ್ಲಿ ನಡೆದಿದೆ. ಪಣಕಜೆ ಮುಂಡಾಡಿ ನಿವಾಸಿ ಚಂದ್ರಶೇಖರ್ ಮತ್ತು ಉಷಾ ದಂಪತಿಯ ಪುತ್ರ ಕೌಶಿಕ್ ಮೃತಪಟ್ಟ ಮಗು.ಮುಂಡಾಡಿಯಲ್ಲಿ ಚಂದ್ರಶೇಖರ್ ಅವರ ಮನೆ ರಸ್ತೆಯ ಹತ್ತಿರವಿದ್ದು, ಮನೆಯಲ್ಲಿದ್ದ ಮಗು ಓಡಿ ರಸ್ತೆಗೆ ಬಂದಿದೆ ಎನ್ನಲಾಗಿದೆ. ಈ ವೇಳೆ ಅದೇ ಸಮಯಕ್ಕೆ ಬಂದ ಮಗುವಿಗೆ ರಿಕ್ಷಾ ತಾಗಿ ಗಂಭೀರ ಗಾಯಗೊಂಡಿದ್ದು, ಮಗುವನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ದರೂ, ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ . ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕವನ್ನ ಘೋಷಿಸಿದ್ದು, ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನ ಪ್ರಕಟಿಸಿದ್ದಾರೆ. ಅಂದ್ಹಾಗೆ, ದೇಶದ 543 ಕ್ಷೇತ್ರಗಳಲ್ಲಿ ಈ ಚುನಾವಣೆ ನಡೆಯಿದೆ. ಇನ್ನೀದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸರ್ಕಾರದ ನೇತೃತ್ವದ ಪ್ರಸ್ತುತ ಲೋಕಸಭಾ ಅಧಿವೇಶನದ ಅಂತ್ಯವನ್ನು ಸೂಚಿಸುತ್ತದೆ. 17ನೇ ಲೋಕಸಭೆಯ ಅಧಿವೇಶನವು ಜೂನ್ 16, 2024 ರಂದು ಕೊನೆಗೊಳ್ಳಲಿದೆ. ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರವನ್ನ ಮುಂದುವರಿಸುತ್ತಿರುವುದರಿಂದ, NDA ಮತ್ತು ಇತ್ತೀಚೆಗೆ ರೂಪುಗೊಂಡ I.N.D.I.A. ಬಣವು ಮುಖಾಮುಖಿ ಯುದ್ಧಕ್ಕೆ ಸಜ್ಜಾಗಿದೆ. 2019ರ 17ನೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDA 543 ಸ್ಥಾನಗಳಲ್ಲಿ 353 ಸ್ಥಾನಗಳನ್ನು ಗಳಿಸಿತು. ಬಿಜೆಪಿ ಏಕಾಂಗಿಯಾಗಿ 303 ಸ್ಥಾನಗಳನ್ನ ಪಡೆದುಕೊಂಡಿದ್ದು, ಅಗತ್ಯ ಬಹುಮತದ 272 ಸ್ಥಾನಗಳನ್ನ ಮೀರಿದೆ.
ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ, ಶಿವಮೊಗ್ಗದ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದ್ದು, ಇಂದು ಈ ವಿಚಾರ ಬೆಳಕಿಗೆ ಬಂದಿದೆ. ಇಲ್ಲಿನ ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಈ ಘಟನೆ ನಡೆದಿದ್ದು, ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಎಂಬ ಯುವಕನೇ ಭೀಕರವಾಗಿ ಹತ್ಯೆಗೀಡಾದವ ಎಂದು ತಿಳಿದು ಬಂದಿದೆ. ಯುವಕ ವೀರೇಶ್ ನನ್ನು ಆತನ ಕಾರಿನಲ್ಲೇ ಕೂಡಿ ಹಾಕಿ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ. ಆತ ಕೊಂಡೊಯ್ದಿದ್ದ ಇನ್ನೋವಾ ಕಾರಿನ ಡಿಕ್ಕಿಯಲ್ಲಿ, ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹಂತಕರು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿರುವುದರಿಂದ ದೇಹವು ಸಂಪೂರ್ಣ ಸುಟ್ಟು ಕರಕಲಾಗಿದೆ. ಶುಕ್ರವಾರ ರಾತ್ರಿ ಗಾಡಿಕೊಪ್ಪದ ಮನೆಯಲ್ಲಿದ್ದ ಯುವಕನಿಗೆ, ಕೆಲ ಪರಿಚಿತರು ಆತನಿ ಕರೆ ಮಾಡಿದ್ದರು ಎನ್ನಲಾಗಿದ್ದು, ಸ್ನೇಹಿತರೋರ್ವರ ಇನ್ನೋವಾ ಕಾರಿನಲ್ಲಿ ವೀರೇಶ್ ತೆರಳಿದ್ದರು. ಬಳಿಕ ಮನೆಗೆ ಹಿಂದಿರುಗಿರಲಿಲ್ಲ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಶಿಕಾರಿಪುರ ಡಿವೈಎಸ್‌ಪಿ ಕೇಶವ್,…
ಪಿಎಂಜೆಡಿವೈ ಯೋಜನೆಯಡಿ ಸಾಲ ಮಂಜೂರು ಮಾಡಿಕೊಡುವುದಾಗಿ ನಂಬಿಸಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ಲೇಟ್ ಮಾಡುವ ವ್ಯವಹಾರಕ್ಕೆ ಪಿಎಂಜೆಡಿವೈ ಯೋಜನೆಯಡಿ ಜನ್‌ಧನ್ ಸಬ್ಸಿಡಿ ಲೋನ್ ಮಂಜೂರು ಮಾಡಿ ಕೊಡುವುದಾಗಿಯೂ ಬಿದ್ಕಲ್‌ಕಟ್ಟೆಯ ಹರ್ಷವರ್ಧನ (40) ಎಂಬವರಿಗೆ ಡಿ.29ರಂದು ಫೇಸ್‌ಬುಕ್ ಸಂದೇಶ ಬಂದಿದ್ದು ಅದರಂತೆ ಅವರು ಅದರಲ್ಲಿ ನಮೂದಿಸಿದ ನಂಬರಿಗೆ ಕರೆ ಮಾಡಿದ್ದರು. ಸಾಲಕ್ಕಾಗಿ ಇವರು ವೈಯಕ್ತಿಕ ಗುರುತಿನ ದಾಖಲೆಗಳನ್ನು ಕಳುಹಿಸಿದ್ದರು. ಸಾಲ ಮಂಜೂರಾತಿಗೆ ವಿವಿಧ ಶುಲ್ಕ ಪಾವತಿಸಲು ಸೂಚಿಸಿದಂತೆ ಹರ್ಷ ವರ್ಧನ ಹಂತ ಹಂತವಾಗಿ ಒಟ್ಟು 98,551ರೂ. ಹಣವನ್ನು ಪಾವತಿಸಿದರು. ಆದರೆ ಹರ್ಷವರ್ಧನಗೆ ಸಾಲ ಮಂಜೂರು ಮಾಡಿಕೊಡದೆ ನಂಬಿಸಿ ವಂಚಿಸಿರುವುದಾಗಿ ದೂರಲಾಗಿದೆ.
ಮಂಗಳೂರು: ಲೋಕಸಭಾ ಚುನಾವಣಾ ಪ್ರಣಾಳಿಕೆಗೆ ಬಿಜೆಪಿ ವಿವಿಧ ಸಲಹೆಗಳನ್ನು ಜನರಿಂದ ಪಡೆಯಲು ಉದ್ದೇಶಿಸಿದ್ದು, ಅದಕ್ಕಾಗಿ ‘ನಿಮ್ಮ ಸಲಹೆ ನಮ್ಮ ಗುರಿ’ ಎಂಬ ವಿನೂತನ ಪ್ರಯೋಗ ಆರಂಭಿಸಿದೆ. ದ.ಕ.ಜಿಲ್ಲೆಯಿಂದ 50ಸಾವಿರ ಸಲಹೆಗಳ ಗುರಿಯಿದೆ ಎಂದು ದ.ಕ.ಜಿಲ್ಲಾ ಲೋಕಸಭಾ ಚುನಾವಣಾ ಪ್ರಣಾಳಿಕಾ ಉಸ್ತುವಾರಿ ಸಿಎ ಶಾಂತರಾಂ ಶೆಟ್ಟಿ ತಿಳಿಸಿದರು. ನಗರದ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಹಿಂದಿನ ಪ್ರಣಾಳಿಕೆ ಹೇಳಿರುವ 95% ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ. ಆದ್ದರಿಂದ ಈ ಬಾರಿಯ ಪ್ರಣಾಳಿಕೆಗೆ ಸಲಹೆಗಳನ್ನು ಪಡೆಯಲು ಶಾಲೆ, ಕಾಲೇಜು, ದೇವಸ್ಥಾನ, ಮಾಲ್ ಗಳಲ್ಲಿ ಸಲಹಾ ಪೆಟ್ಟಿಗೆಗಳನ್ನು ಇಡಲಾಗುತ್ತದೆ. ಅದಕ್ಕೆ ಜನರು ತಮ್ಮ ಸಲಹೆಗಳನ್ನು ಬರೆದು ಹಾಕಬಹುದು ಎಂದರು. ಅಲ್ಲದೆ ನಮೋ ಆ್ಯಪ್, ಮಿಸ್ ಕಾಲ್ ನೀಡಿ ಸಲಹೆ ನೀಡಲು ಅವಕಾಶವಿದೆ. 9090902024 ಸಂಖ್ಯೆಗೆ ಕರೆ ಮಾಡಬಹುದು. ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ವೈವಿಧ್ಯಮಯ ವಿಷಯಗಳಲ್ಲಿ ಸಲಹೆಗಳನ್ನು ನೀಡಬಹುದು. ಜೊತೆಗೆ ಪ್ರತೀ ಜಿಲ್ಲೆಗೆ ಎರಡು ಎಲ್ ಇಡಿ ವಾಹನಗಳು ಸಂಚರಿಸಲಿದ್ದು, ವಿಕಸಿತ ಭಾರತದ…
ಮಂಗಳೂರು: ಮುಡಾ’ ಕಚೇರಿಯಲ್ಲಿ ಮಾ. 13ರಂದು ನಡೆದ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಹಣದ ಬ್ಯಾಗ್ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ತಿಳಿಸಿದ್ದಾರೆ.ಮಂಗಳೂರು ಮೂಡ ಕಚೇರಿಯಲ್ಲಿ ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಛೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿತ್ತು. ದೂರುಗಳು ಬಂದ ಹಿನ್ನೆಲೆಯಲ್ಲಿ ಮಾ. 13ರಂದು ಸಂಜೆ ದಾಳಿ ನಡೆಸಿ ರಾತ್ರಿ ಸುಮಾರು 18 ಗಂಟೆಗಳ ದೀರ್ಘಕಾಲ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಕಚೇರಿಯ ಅಧಿಕಾರಿಗಳಲ್ಲಿ ಮತ್ತು ಹಲವಾರು ವ್ಯಕ್ತಿ ಗಳಲ್ಲಿ ದೊಡ್ಡ ಮೊತ್ತದ ಹಣವಿತ್ತು.ಪರಿಶೀಲನೆ ನಡೆಸುತ್ತಿರುವ ವೇಳೆ ಹಲವು ಸಾರ್ವಜನಿಕರು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ಹಾಗೂ ಕಚೇರಿಯಲ್ಲಿ ಅಧಿಕಾರಿಗಳು ನೀಡುತ್ತಿರುವ ಕಿರುಕುಳ ಕುರಿತು ಹೇಳಿಕೊಂಡಿರುತ್ತಾರೆ. ಪರಿಶೀಲನೆ ಸಂದರ್ಭ ದೀರ್ಘಕಾಲದಿಂದ ವಿಲೇವಾರಿಯಾಗದ ಹಲವಾರು ಅರ್ಜಿದಾರರ ಕಡತಗಳು ಸಿಕ್ಕಿರುತ್ತದೆ. ಅಧಿಕಾರಿಗಳು ಬ್ರೋಕರ್ ಗಳೊಡನೆ ಫೋನ್ ಮುಖಾಂತರ ಹೊಂದಾಣಿಕೆ ಮಾಡಿಕೊಂಡು ಕಡತ ವಿಲೇವಾರಿ ಮಾಡುತ್ತಿರುವುದಾಗಿ ಸಾಕ್ಷಿ ದೊರೆತಿರುತ್ತದೆ.…
ದಕ್ಷಿಣ ಕನ್ನಡ: ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತ ಮೊಬೈಲ್ ಪೋನ್ ರಿಪೇರಿ ತರಬೇತಿಗೆ ಅರ್ಜಿಯನ್ನು ರುಡ್ ಸೆಟ್ ಸಂಸ್ಥೆಯಿಂದ ಕರೆಯಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಉಜಿರೆಯ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದಂತ ಸುರೇಶ್.ಎಂ ಅವರು, ಧರ್ಮಸ್ಥಳದ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗಾಗಿ ವಿವಿಧ ಉಚಿತ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ದಿನಾಂಕ 04-04-2024 ರಿಂದ 03-05-2024ರವರೆಗೆ ಒಂದು ತಿಂಗಳವರೆಗೆ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತವಾಗಿ ಮೊಬೈರ್ ಪೋನ್ ರಿಪೇರಿ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ. ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು 18-45 ವರ್ಷದ ಒಳಗೆ ಇರುವವರು ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಉಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯಿಂದ ಸಮವಸ್ತ್ರವನ್ನು ಉಚಿತವಾಗಿ ನೀಡಲಾಗುತ್ತದೆ. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ಕೂಡ ನೀಡಲಾಗುತ್ತದೆ ಎಂದಿದ್ದಾರೆ.…