Author: main-admin

ಮಂಗಳೂರು: ಚೂರಿಯಿಂದ ಇರಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿ, ಅವರ ಇಬ್ಬರು ಪುತ್ರರು ಗಾಯಗೊಂಡಿರುವ ಘಟನೆ ಮಂಗಳೂರು ನಗರದ ಹೊರವಲಯದ ವಳಚ್ಚಿಲ್ ಎಂಬಲ್ಲಿ ಮೇ 22ರ ರಾತ್ರಿ ನಡೆದಿದೆ. ಮೃತರನ್ನು ವಾಮಂಜೂರು ನಿವಾಸಿ ಪುತ್ರ ಸುಲೈಮಾನ್ (50) ಎಂದು ಗುರುತಿಸಲಾಗಿದೆ. ಅವರ ಪುತ್ರರಾದ ಸಿಯಾಬ್ ಹಾಗೂ ರಿಯಾಬ್ ಮೇಲೂ ಆರೋಪಿ ಮುಸ್ತಾಫ(30) ಹಲ್ಲೆ ನಡೆಸಿದ್ದಾನೆ. ಪ್ರಾಥಮಿಕ ತನಿಖೆಯ ಪ್ರಕಾರ, ಮದುವೆ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದ ಸುಲೈಮಾನ್, ಸುಮಾರು ಎಂಟು ತಿಂಗಳ ಹಿಂದೆ ತನ್ನ ಸಂಬಂಧಿ, ಆರೋಪಿ ಮುಸ್ತಫಾನೊಂದಿಗೆ ಶಾಹೀನಾಜ್ ಎಂಬ ಮಹಿಳೆಯ ಮದುವೆ ಏರ್ಪಡಿಸಿದ್ದರು. ಆದರೆ ವೈವಾಹಿಕ ಭಿನ್ನಾಭಿಪ್ರಾಯದಿಂದಾಗಿ, ಘಟನೆಯ ಎರಡು ತಿಂಗಳ ಮೊದಲು ಶಾಹೀನಾಜ್ ತನ್ನ ತವರು ಮನೆಗೆ ಹಿಂದಿರುಗಿದ್ದರು. ಇದರಿಂದಾಗಿ ಮುಸ್ತಫಾ ಮತ್ತು ಸುಲೈಮಾನ್ ನಡುವೆ ವೈಮನಸ್ಸು ಉಂಟಾಗಿತ್ತು. ಘಟನೆ ನಡೆದ ರಾತ್ರಿ, ಮುಸ್ತಫಾ ಸುಲೈಮಾನ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರೆ ಮಾಡಿದ್ದಾನೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಸುಲೈಮಾನ್ ತನ್ನ ಪುತ್ರರಾದ ರಿಯಾಬ್ ಮತ್ತು ಸಿಯಾಬ್ ಜೊತೆ ವಿಷಯವನ್ನು ಬಗೆಹರಿಸಲು ವಳಚ್ಚಿಲ್‌ನಲ್ಲಿರುವ…

Read More

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಉಡುಪಿಯಲ್ಲಿ ಬಂಧಿಸಲಾಗಿದೆ. ಬಂಧಿತನನ್ನು ಬಿಹಾರ ಮೂಲದ ಬ್ರಹ್ಮದೇವ್ ಯಾದವ್ (37) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಆರೋಪಿಯಿಂದ 60,680 ರೂ. ಮೌಲ್ಯದ 690 ಗ್ರಾಂ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ, ಅಧಿಕಾರಿಗಳು ಮೊಬೈಲ್ ಫೋನ್, 680 ರೂ. ನಗದು ಮತ್ತು ಇತರೆ ವಸ್ತುಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿರುವ ಮಣಿಪಾಲ ರೈಲ್ವೆ ನಿಲ್ದಾಣ ರಸ್ತೆಯ ಸಮೀಪದ ಡಯಾನಾ ಟಾಕೀಸ್ ರಸ್ತೆಯ ಕ್ರಾಸ್‌ರೋಡ್ ಬಳಿ ಆರೋಪಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಎಂದು ವರದಿಯಾಗಿದೆ. ಉಪ ಪೊಲೀಸ್ ಅಧೀಕ್ಷಕ ಎ.ಸಿ. ಲೋಕೇಶ್ ಮತ್ತು ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್ ಅವರ ಮೇಲ್ವಿಚಾರಣೆಯಲ್ಲಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ತಂಡವು ಈ ಬಂಧನ ಕಾರ್ಯಾಚರಣೆಯನ್ನು ನಡೆಸಿದೆ. ಈ ಕಾರ್ಯಾಚರಣೆಯಲ್ಲಿ ಎಎಸ್‌ಐ ಉಮೇಶ್, ಪ್ರವೀಣ್ ಕುಮಾರ್, ಪ್ರವೀಣ್, ರಾಜೇಶ್, ರಾಘವೇಂದ್ರ, ವೆಂಕಟೇಶ್, ಸಂತೋಷ್, ಧರ್ಮಪ್ಪ, ಅರುಣ್ ಕುಮಾರ್, ದೀಕ್ಷಿತ್, ಪವನ್, ನಿಲೇಶ್, ಪರಶುರಾಮ್, ಮುತ್ತಪ್ಪ,…

Read More

ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಆಗಸದಲ್ಲೇ ಆಲಿಕಲ್ಲು ಹೊಡೆದ ಪರಿಣಾಮ ವಿಮಾನದ ಮುಂಭಾಗ ಜಖಂಗೊಂಡ ಘಟನೆ ನಡೆದಿದ್ದು, 227 ಮಂದಿ ಪ್ರಯಾಣಿಕರಿದ್ದ ವಿಮಾನ ಶ್ರೀನಗರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವು ಮಂಗಳವಾರ ಸಂಜೆ ಗಾಳಿಯಲ್ಲಿ ತೀವ್ರ ಹವಾಮಾನ ಪ್ರಕ್ಷುಬ್ಧತೆಯನ್ನು ಅನುಭವಿಸಿತು. ಇದರಿಂದಾಗಿ ಪೈಲಟ್ ವಾಯು ಸಂಚಾರ ನಿಯಂತ್ರಣ (ಎಟಿಸಿ) ದೊಂದಿಗೆ ತುರ್ತು ಪರಿಸ್ಥಿತಿ ಘೋಷಿಸಿದರು. 6E2142 ವಿಮಾನವು ಶ್ರೀನಗರ ಸಮೀಪಿಸುತ್ತಿದ್ದಾಗ ಆಲಿಕಲ್ಲು ಮಳೆಯಿಂದ ತೀವ್ರ ಹಾನಿಗೆ ಒಳಗಾಯಿತು. ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಡ್ಯಾಮೇಜ್‌ ಆಯಿತು. ಆದರೆ ಸಿಬ್ಬಂದಿ ಸಂಜೆ 6:30 ಕ್ಕೆ ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸುವಲ್ಲಿ ಯಶಸ್ವಿಯಾದರು. ವಿಮಾನ ಇಳಿದ ನಂತರ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.ವಿಮಾನದಲ್ಲಿದ್ದ ಎಲ್ಲ 227 ಮಂದಿಯೂ‌ ಸೇಫ್ ಆಗಿದ್ದಾರೆ. ಪೈಲಟ್‌ಗಳ‌ ಚಾಕಚಕ್ಯತೆಯಿಂದ ಎಲ್ಲ ಪ್ರಯಾಣಿಕರು ಸೇಫ್ ಆಗಿ ಬದುಕುಳಿದಿದ್ದಾರೆ. ವಿಮಾನದ ಮುಂಭಾಗ (Nose damage) ಭಾರೀ ಪ್ರಮಾಣದಲ್ಲಿ‌ ಹಾನಿಗೀಡಾಗಿದ್ದು,…

Read More

ವಿಟ್ಲ : ಮಹಾರಾಷ್ಟ್ರ ಮೂಲದ ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕಳ್ಳತನ ಮಾಡಿದ ಪ್ರಕರಣದ ಆರೋಪಿಗಳ ಪೈಕಿ ಓರ್ವನ ಮನೆ ಕೇಪು ಕಲ್ಲಂಗಳದಲ್ಲಿದ್ದು, ಮೇ 20ರ ಮಂಗಳವಾರ ಕಾರವಾರ ಪೊಲೀಸರು ವಿಟ್ಲ ಪೊಲೀಸರ ಸಹಕಾರದೊಂದಿಗೆ ತನಿಖೆ ನಡೆಸಿದ್ದಾರೆ. ಈ ಪ್ರಕರಣ ಸಂಬಂಧಿಸಿದಂತೆ ಒಟ್ಟು 11 ಮಂದಿ ಭಾಗಿಯಾದ ಶಂಕೆಯಿದ್ದು, ಪೊಲೀಸ್ ಇಲಾಖೆ ತನಿಖೆಗೆ ನಡೆಸುತ್ತಿದೆ. ಈ ಪ್ರಕರಣದಲ್ಲಿ 8 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 3 ಮಂದಿ ವಿದೇಶಕ್ಕೆ ಪಲಾಯನ ಮಾಡಿದ್ದು, ಕೇಪು ಕಲ್ಲಂಗಳ ನಿವಾಸಿ ಮಹಮ್ಮದ್ ಇಸಾಮ್ ಓರ್ವ ಆರೋಪಿಯಾಗಿದ್ದಾನೆ. ಇಸಾಮ್ ಮನೆಯನ್ನು ಪೊಲೀಸರು ಸರ್ಚ್ ವಾರೆಂಟ್ ಮೇಲೆ ಪರಿಶೀಲಿಸಿ ಮಾಹಿತಿಗಾಗಿ ತಡಕಾಡಿದ್ದಾರೆ. ಸುಮಾರು 2 ಗಂಟೆ ತನಿಖೆ ನಡೆಸಿದ್ದಾರೆಂಬ ಮಾಹಿತಿಯಿದೆ. ಮನೆಯವರ ಜತೆಗೆ ಸಂಪರ್ಕ ಇದೆಯೇ ಮತ್ತು ಆತನ ವಿವಿಧ ಮಾಹಿತಿಯನ್ನು ಈ ಸಂದರ್ಭ ಸಂಗ್ರಹಿಸಿದ್ದಾರೆನ್ನಲಾಗಿದೆ.

Read More

ಕಾಸರಗೋಡು: ಮಾವಿನ ಹಣ್ಣು ತಿನ್ನುತ್ತಿರುವಾಗ ವಾಟೆ ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಕಾಸರಗೋಡು ನಗರದ ಜವುಳಿ ಅಂಗಡಿಯಲ್ಲಿ ಟೈಲರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೊಗ್ರಾಲು ಪುತ್ತೂರು ಶಾಸ್ತಾ ನಗರ ನಿವಾಸಿ ರಾಘವನ್(76) ಮೃತಪಟ್ಟ ವ್ಯಕ್ತಿ. ಅವರು ಬುಧವಾರ ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ಹೋಗಿದ್ದರು. ಆದರೆ ದಾರಿ ಮಧ್ಯೆ ಅರೆ ಪ್ರಜ್ಞಾವಸ್ತೆಯಲ್ಲಿ ಬಿದ್ದಿರುವುದನ್ನು ಕಂಡ ಸ್ಥಳೀಯರು ಆಸ್ಪತ್ರೆಗೆ ತಲುಪಿಸಿದರೂ ಪ್ರಾಣ ಉಳಿಸಲಾಗಲಿಲ್ಲ. ಅವರು ಮಾವಿನ ಹಣ್ಣು ತಿಂದಾಗ ವಾಟೆ ಗಂಟಲಲ್ಲಿ ಸಿಲುಕಿ ಮೃತಪಟ್ಟಿರಬೇಕು ಎ೦ದು ಸಂಶಯಿಸಲಾಗಿದೆ. ಕಾಸರಗೋಡು ನಗರ ಠಾಣಾ ಪೊಲೀಸರು ಕೇಸು ದಾಖಲಿಸಿದ್ದಾರೆ.

Read More

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗಿದ್ದು ಬಿಟ್ಟರೆ ದೊಡ್ಡದಾದ ಅನಾಹುತಗಳು ನಡೆದ ವರದಿಯಾಗಿರುವುದಿಲ್ಲ. ಹೀಗಾಗಿ ಮಳೆಹಾನಿ ಪ್ರದೇಶಗಳಲ್ಲಿ ಈಗಾಗಲೇ ಸಮೀಕ್ಷೆಯನ್ನು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಸಮಾಲೋಚನೆಯನ್ನು ನಡೆಸಿದ್ದು ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆ, ಗಾಳಿಯಿಂದ ಹೆಚ್ಚಿನ ಅಪಾಯ ಮತ್ತು ಹಾನಿಯುಂಟಾಗುವುದನ್ನು ತಡೆಯಲು ವಿಪತ್ತು ನಿರ್ವಹಣಾ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸುವಂತೆ ನಿರ್ದೇಶನವನ್ನು ನೀಡಿದ್ದೇನೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವರ ಬಗ್ಗೆ ಈ ಕುರಿತು ಮಾತಾಡಿ ಜಿಲ್ಲೆಯಲ್ಲಿ ಮಳೆಯಿಂದ ಆಗುವ ತೊಂದರೆಗಳ ಬಗ್ಗೆ ಗಮನ ಸೆಳೆಯಲಾಗಿದೆ ಎಂದವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರ ಸೇವಾವಧಿ ಬುಧವಾರ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾಗಲಿರುವ ಹುದ್ದೆಗೆ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಆಯ್ಕೆ ಬಹುತೇಕ ಖಚಿತವಾಗಿದೆ. ಕೆಲ ದಿನಗಳ ಮಟ್ಟಿಗೆ ಪ್ರಭಾರಿ ಡಿಜಿ-ಐಜಿಪಿಯಾಗಿ ಸಲೀಂ ಅವರನ್ನು ನೇಮಿಸಿ ತದನಂತರ ಕೇಂದ್ರ ಲೋಕಸೇವಾ ಆಯೋಗದ ಸಮ್ಮತಿ ಬಳಿಕ ಅವರನ್ನು ಕಾಯಂಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ಸಲೀಮ್ ನೇಮಕಗೊಂಡರೆ, ಹಲವಾರು ವರ್ಷಗಳಲ್ಲಿ ರಾಜ್ಯ ಪೊಲೀಸ್ ಪಡೆಯ ಮುಖ್ಯಸ್ಥರಾಗಲಿರುವ ಮೊದಲ ಕನ್ನಡ ಮಾತನಾಡುವ ಐಪಿಎಸ್ ಅಧಿಕಾರಿಯಾಗಲಿದ್ದಾರೆ. ಆದಾಗ್ಯೂ, ಸರ್ಕಾರವು ಸಲೀಮ್ ಅವರನ್ನು ಮತ್ತೊಬ್ಬ ಹಿರಿಯ ಅಧಿಕಾರಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಅವರ ಸೇವೆಯಲ್ಲಿ ಒಂದು ವರ್ಷ ಹಿರಿಯರ ಮೇಲೆ ಒಲವು ತೋರಲಿದೆಯೇ ಎಂಬ ಊಹಾಪೋಹಗಳಿವೆ. ಠಾಕೂರ್ 1992 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದರೆ, ಸಲೀಮ್ 1993 ರ ಬ್ಯಾಚ್‌ಗೆ ಸೇರಿದವರು. ಇದು ಸರ್ಕಾರ ಅಂತಿಮವಾಗಿ ಯಾರನ್ನು ಆಯ್ಕೆ ಮಾಡುತ್ತದೆ ಎಂಬ ಕುತೂಹಲವನ್ನು…

Read More

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಇ.ಡಿ ದಾಳಿ ನಡೆಸಿದೆ. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಇಂಜಿನಿಯರಿಂಗ್‌ ಕಾಲೇಜು ಅಲ್ಲದೆ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕನ್ನಡ ನಟಿ ರನ್ಯಾ ರಾವ್‌ ಒಳಗೊಂಡಿರುವ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿಗೆ ಸಂಬಂಧಪಟ್ಟಂತೆ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಆದರೆ ಈ ಕುರಿತು ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ನಾಲ್ಕು ವರ್ಷದ ಹಿಂದೆಯೂ ಆದಾಯ ತೆರಿಗೆ ಇಲಾಖೆ ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು. ಕೋಟಿಗಟ್ಟಲೆ ಮೊತ್ತದ ಚಿನ್ನ ದುಬೈಯಿಂದ ಕಳ್ಳದಾರಿಯಲ್ಲಿ ತಂದ ಪ್ರಕರಣಕ್ಕೆ ಸಂಬಂಧಿಸಿ ಸೆರೆಯಾಗಿ ಕೆಲವು ತಿಂಗಳಿಂದ ಜೈಲಿನಲ್ಲಿದ್ದ ರನ್ಯಾ ರಾವ್‌ಗೆ ನಿನ್ನೆಯಷ್ಟೇ ನ್ಯಾಯಾಲಯ ಜಾಮೀನು…

Read More

ರಾಜ್ಯದಲ್ಲಿ ವರುಣಾರ್ಭಟ ಮತ್ತಷ್ಟು ಹೆಚ್ಚಲಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಈಗಾಗಲೇ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಜಿಲ್ಲೆಗಳಿಗೆ ಆರೇಂಝ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರೌರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೇ. 24ರ ವರೆಗೆ ಗುಡುಗು ಮಿಂಚು ಸಮೇತವಾಗಿ ಮಳೆ ಆಗುವ ಹೆಚ್ಚಿನ ಸಾಧ್ಯತೆಗಳಿವೆ. ಕರಾವಳಿ ಭಾಗಗಳಲ್ಲಿ ಪ್ರತಿ ಗಂಟೆಗೆ 55 ಕೀ.ಮೀ ವೇಗದಲ್ಲಿ…

Read More

ಮಂಗಳೂರು: ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳು ನಿಷೇದಿಸಲಾಗಿದೆ . ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮಥ್ರ್ಯದ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ. ಮೀನುಗಾರಿಕೆ ನಿಷೇದಿಶಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲಾ ಮೀನುಗಾರರು ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು…

Read More