ಕೇಂದ್ರ ಸರ್ಕಾರ ಪೇಟಿಎಂ ಗೆ ಮತ್ತೊಂದು ಶಾಕ್ ನೀಡಿದ್ದು, ಮಾ. 15 ರೊಳಗೆ ಬೇರೆ ಬ್ಯಾಂಕ್ ಗೆ ಬದಲಾಗುವಂತೆ ‘ಪೇಟಿಎಂ ಫಾಸ್ಟ್ ಟ್ಯಾಗ್’ ಬಳಕೆದಾರರಿಗೆ ‘NHAI’ ಸೂಚನೆ ನೀಡಿದೆ. ಮಾರ್ಚ್ 13, 2024 ರಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಪೇಟಿಎಂ ಫಾಸ್ಟ್ಟ್ಯಾಗ್ ಬಳಕೆದಾರರಿಗೆ ಇತರ ಬ್ಯಾಂಕುಗಳ ಫಾಸ್ಟ್ ಟ್ಯಾಗ್ ಗೆ ಬದಲಾಯಿಸಲು ಸಲಹೆ ನೀಡಿದೆ.ಈ ಮೂಲಕ ಟೋಲ್ ಪ್ಲಾಜಾಗಳಲ್ಲಿ ಅನಾನುಕೂಲತೆಯನ್ನು ತಪ್ಪಿಸುವ ಗುರಿಯನ್ನು ಹೊಂದಿದೆ. ಮಾರ್ಚ್ 15, 2024 ರ ಶುಕ್ರವಾರಕ್ಕೂ ಮುನ್ನ ಹಾಗೆ ಮಾಡಲು ಎನ್‌ಎಚ್‌ಎಐ ಬಳಕೆದಾರರನ್ನು ಕೇಳಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲಿನ ನಿರ್ಬಂಧಗಳಿಗೆ ಸಂಬಂಧಿಸಿದಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ, ಪೇಟಿಎಂ ಫಾಸ್ಟ್ಟ್ಯಾಗ್ ಬಳಕೆದಾರರು ಮಾರ್ಚ್ 15, 2024 ರ ನಂತರ ಬ್ಯಾಲೆನ್ಸ್ ಅನ್ನು ರೀಚಾರ್ಜ್ ಮಾಡಲು ಅಥವಾ ಟಾಪ್-ಅಪ್ ಮಾಡಲು ಸಾಧ್ಯವಾಗುವುದಿಲ್ಲ. ಆದರೆ, ಅವರು ತಮ್ಮ ಅಸ್ತಿತ್ವದಲ್ಲಿರುವ ಬ್ಯಾಲೆನ್ಸ್ ಅನ್ನು ನಿಗದಿತ ದಿನಾಂಕದ ನಂತರ ಟೋಲ್ ಪಾವತಿಸಲು ಬಳಸಬಹುದು. ಪೇಟಿಎಂ ಫಾಸ್ಟ ಟ್ಯಾಗ್…
Author: main-admin
ಚಾಲಕನ ನಿಯಂಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾದ ಘಟನೆ ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿಘಾಟ್‌ನಲ್ಲಿ ನಡೆದಿದೆ. ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಸನಿಹದ ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾಗುತ್ತಿದೆ. ಮುನ್ನಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಪೊಲೀಸರು ಕಳುಹಿಸುತ್ತಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಪೊಲೀಸರು ತಲುಪಿದೆ. ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ. ಪಲ್ಟಿಯಾದ ಗ್ಯಾಸ್ ಟ್ಯಾಂಕರ್‌ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿದೆ. ಹೀಗಾಗಿ ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಎಲ್ಲಾ ವಾಹನಗಳ ಸಂಚಾರ ಬಂದ್ ಆಗಲಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಯಾವುದಾದರೂ ಒಂದು ನೋಂದಣಾಧಿಕಾರಿಗಳ ಕಚೇರಿ ಇನ್ನು ಮುಂದೆ ಭಾನುವಾರವೂ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಂಡಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲಸದ ಒತ್ತಡದಿಂದಾಗಿ ರಜೆ ಮಾಡುವುದಕ್ಕೆ ಕಷ್ಟವಾಗುವವರ ಅನುಕೂಲಕ್ಕೆ ಈ ವ್ಯವಸ್ಥೆ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ6 ರಿಂದ 7 ನೋಂದಣಾಧಿಕಾರಿಗಳ ಕಚೇರಿಗಳಿದ್ದು, ರೋಸ್ಟರ್ ಆಧಾರದಲ್ಲಿ ಒಂದೊಂದು ವಾರ ಒಂದೊಂದು ನೋಂದಣಾಧಿಕಾರಿಗಳ ಕಚೇರಿ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ. ಭಾನುವಾರ ಕೆಲಸ ಮಾಡುವ ಅಧಿಕಾರಿ, ಸಿಬ್ಬಂದಿಗೆ ಮಂಗಳವಾರ ಪರ್ಯಾಯ ರಜೆ ನೀಡಲಾಗುವುದು ಎಂದಿದ್ದಾರೆ. ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಈಗಾಗಲೇ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದೆ. ಅದರಂತೆ 19 ಲಕ್ಷ ಪಹಣಿದಾರರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡುವಂತೆ ಕೋರಲಾಗಿದೆ. ಏ.1ರಿಂದ ಅಧಿಕೃತವಾಗಿ ನನ್ನ ಆಸ್ತಿ ಹೆಸರಿನಲ್ಲಿ ನನ್ನ ಭೂಮಿ-ನನ್ನ ಗುರುತು ಧ್ಯೇಯದೊಂದಿಗೆ ಆಧಾರ್ ಜೋಡಣೆ ಕಾರ್ಯ ಆರಂಭಿಸಲಾಗುತ್ತದೆ. 19ಲಕ್ಷ ಪಹಣಿದಾರರ ಪೈಕಿ 6ಲಕ್ಷ ಪಹಣಿದಾರರು ಮೃತಪಟ್ಟಿರುವುದು ತಿಳಿದು ಬಂದಿದೆ. ಆಸ್ತಿ ಮೇಲೆ ಸಾಲ…
ಬೆಳ್ತಂಗಡಿ : ಪಶುವೈದ್ಯಕೀಯ ಚಿಕಿತ್ಸೆಯ ಅಂಬ್ಯುಲೆನ್ಸ್ ಚಾಲಕನ ಮೇಲೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿಯ ಲಾಯಿಲಾ ಎಂಬಲ್ಲಿ ಈ ಘಟನೆ ನಡೆದಿದ್ದು, ಗಾಯಾಳು ಅಂಬ್ಯುಲೆನ್ಸ್ ಚಾಲಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏನಿದು ಘಟನೆ ?ಬೆಳ್ತಂಗಡಿಯ ಪಶುವೈದ್ಯಕೀಯ ಅಂಬ್ಯುಲೆನ್ಸ್ ಸೇವೆ ಲಭ್ಯವಿಲ್ಲದ ಕಾರಣ ಕಡಬ ತಾಲೂಕಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಅಂಬ್ಯುಲೆನ್ಸ್ ಬೆಳ್ತಂಗಡಿಗೆ ಆಗಮಿಸಿತ್ತು. ನೆರಿಯದಲ್ಲಿ ತುರ್ತು ಚಿಕಿತ್ಸೆ ನೀಡಲು ಸೈರನ್ ಮೊಳಗಿಸಿಕೊಂಡೇ ಬರುತ್ತಿದ್ದ ಅಂಬ್ಯುಲೆನ್ಸ್ ಗೆ ಲಾಯಿಲಾ ಬಳಿ ಬೆಂಗಳೂರಿನ ವಾಹನವೊಂದು ಅಡ್ಡ ಹಾಕಿದೆ. ಬಳಿಕ ಚಾಲಕನ ಬಳಿಯ ಡೋರ್ ಓಪನ್ ಮಾಡಿ ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಸೈರನ್ ಮೊಳಗಿಸಿದ್ರೂ ವಾಹನ ಸವಾರರು ಸೈಡ್ ನೀಡದ ಹಿನ್ನೆಲೆಯಲ್ಲಿ ಅಂಬ್ಯುಲೆನ್ಸ್ ಚಾಲಕ ಸನ್ನೆಯ ಮೂಲಕ ಸೈರನ್ ಮೊಳಗುವುದು ಕೇಳಿಸುವುದಿಲ್ಲವೇ ಎಂದು ಪ್ರಶ್ನೆ ಮಾಡಿದ್ದ. ಇದೇ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದ್ದು, ಆರೋಪಿಗಳ ಕಾರ್ ನಂಬರ್ ಆಧಾರದಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆಸಿಡ್ ದಾಳಿ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಇದೀಗ ಕೇರಳ ಮೂಲದ ಮತ್ತಿಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಅಭಿನ್ ಗೆ ಆಸಿಡ್ ತಂದುಕೊಟ್ಟ ವ್ಯಕ್ತಿಯನ್ನು ಹಾಗೂ ಆಸಿಡ್ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್ ನ್ನು ಹೊಲಿದು ಕೊಟ್ಟ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಾರ್ಚ್ 5ರಂದು ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ದುಷ್ಕರ್ಮಿ, ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿದ್ದ. ಓರ್ವ ಯುವತಿಯ ಮುಖಕ್ಕೆ ಆಸಿಡ್ ಎರಚಲು ಹೋಗಿ ಆಕೆಯ ಪಕ್ಕದಲ್ಲಿ ನಿಂತಿದ್ದ ಇನ್ನಿಬ್ಬರು ವಿದ್ಯಾರ್ಥಿಗಳಿಗೂ ಆಸಿಡ್ ತಾಗಿ ಗಾಯಗಳಾಗಿತ್ತು. ಓರ್ವ ಯುವತಿಯ ಮುಖಕ್ಕೆ ಗಂಭೀರವಾದ ಸುಟ್ಟಗಾಯಗಳಾದ್ದು, ಮೂವರನ್ನು ಮಂಗಳೂರು…
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಅಂಡರ್ ಪಾಸ್ ಬಳಿ ಲೈನ್ ಸೇಲ್ ಮಾಡಿ ಹಣ ಸಂಗ್ರಹಿಸಿಕೊಂಡು ವಾಹನದತ್ತ ತೆರಳುತ್ತಿದ್ದ ವ್ಯಕ್ತಿಯನ್ನು ದರೋಡೆಗೈದ ಪ್ರಕರಣವನ್ನು ಕಾಪು ಪೊಲೀಸರು ಭೇದಿಸಿದ್ದಾರೆ. ಹಣ ಸುಲಿಗೆ ಮಾಡಿದ ಆರೋಪಿ ಕಾಪು ಪೊಲಿಪು ನಿವಾಸಿ ಸಂತೋಷ ಕುಮಾರ್ (28) ಎಂಬಾತನನ್ನು ಬಂದಿಸಿರುವ ಕಾಪು ಪೊಲೀಸ್ ವೃತ್ತ ನಿರೀಕ್ಷಕರ ನೇತೃತ್ವದ ಪೊಲೀಸರು ತಂಡವು ಆರೋಪಿಯಿಂದ 1,00,200/- ರೂ. ನಗದು, 1 ಮೊಬೈಲ್ ಪೋನ್ ಮತ್ತು ಕೃತ್ಯಕ್ಕೆ ಉಪಯೋಗಿಸಿದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ. ಲೈನ್ ಸೇಲ್ ಮಾಡುವ ವೃತ್ತಿ ಮಾಡಿಕೊಂಡಿರುವ ಉಡುಪಿ ಸಂತೆಕಟ್ಟೆ ನಿವಾಸಿ ಉಮೇಶ ಪ್ರಭು ಅವರು ಮಾರ್ಚ್ 2ರಂದು ಲೈನ್ ಸೇಲ್ ಮಾಡಿ ಅಂಗಡಿಗಳಿಂದ ಸಂಗ್ರಹಿಸಿದ ಹಣವನ್ನು ತನ್ನ ಬ್ಯಾಗ್‌ನಲ್ಲಿ ಹಾಕಿಕೊಂಡು ಕಾಪು ಅಂಡರ್‌ಪಾಸ್ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಾರಿಗುಡಿ ಎದುರಿನ ಸರ್ವಿಸ್ ರಸ್ತೆಯಲ್ಲಿ ಮಂಗಳೂರು ಕಡೆಯಿಂದ ಬಂದ ಬೈಕ್ ಸವಾರ ಬೈಕ್ ನಿಲ್ಲಿಸಿ 1.25 ಲಕ್ಷ ರೂ. ಮೊತ್ತವನ್ನು ದೋಚಿ ಪರಾರಿಯಾಗಿದ್ದರು.
ಉಳ್ಳಾಲ ಠಾಣಾಧಿಕಾರಿ ಎಚ್.ಎನ್.ಬಾಲಕೃಷ್ಣ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿರ್ಮಲ ಭಾರತ್ ಚಾರಿಟೇಬಲ್ ಟ್ರಸ್ಟ್‌ನ ಮಹಿಳಾ ಕಾರ್ಯದರ್ಶಿಗೆ ಅಡ್ಡಿಪಡಿಸುವುದು, ಹಲ್ಲೆ ಮಾಡುವುದು ಮತ್ತು ಜೀವ ಬೆದರಿಕೆ ಹಾಕಿರುವುದು ಆರೋಪದಲ್ಲಿ ಉಲ್ಲೇಖಿಸಲಾಗಿದೆ. ಕೊಣಾಜೆ ಗ್ರಾಮದ ಸರ್ವೆ ನಂ.149ರಲ್ಲಿ ಎರಡು ಎಕರೆ ಜಮೀನನ್ನು ಟ್ರಸ್ಟ್‌ಗೆ ಮಂಜೂರು ಮಾಡಲಾಗಿದೆ. ಜನವರಿ 26ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಟ್ರಸ್ಟ್‌ನ ಕಾರ್ಯದರ್ಶಿ ಲತಾ ರೈ, ಸದಸ್ಯರಾದ ಡಾ.ಸಿ.ಎನ್.ಶಂಕರ್ ರಾವ್ ಮತ್ತು ಪ್ರೊ.ಕೆ.ಎಂ.ಬಾಲಕೃಷ್ಣ ಅವರೊಂದಿಗೆ ನಿವೇಶನದ ಗಡಿಭಾಗಕ್ಕೆ ತೆರಳಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ ಕೊಣಾಜೆ ಠಾಣೆಯ ಅಂದಿನ ಠಾಣಾಧಿಕಾರಿ ಬಾಲಕೃಷ್ಣ ಎಚ್‌ಎನ್, ಸ್ಥಳದಲ್ಲಿದ್ದವರೆಲ್ಲರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.ನ್ಯಾಯಾಲಯದ ಆದೇಶದ ಬಗ್ಗೆ ಲತಾ ರೈ ಆರೋಪಿ ಬಾಲಕೃಷ್ಣ ಅವರಿಗೆ ತಿಳಿಸಿದ್ದರೂ, ಸ್ಥಳದಲ್ಲಿ ಕೆಲಸ ಸ್ಥಗಿತಗೊಳಿಸಲು ಉನ್ನತ ಅಧಿಕಾರಿಗಳಿಂದ ಆದೇಶವಿದೆ ಎಂದು ಆರೋಪಿಸಿ ಅವರು ಪಾಲಿಸಲು ನಿರಾಕರಿಸಿದರು.ಅವರು ಲತಾ ರೈ ಅವರ ಕೈಗೆ ಹೊಡೆದರು, ಅವರ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡರು ಮತ್ತು ಅದನ್ನು…
ಮಣಿಪಾಲ: ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ನಾಪತ್ತೆಯಾದ ಯುವಕ ಮಾರುತಿ ತಳವಾರ (27) ಎಂದು ಗುರುತಿಸಲಾಗಿದೆ. ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಇವರು ಮಾ.8ರಂದು ಮಧ್ಯಾಹ್ನ ತಾನು ವಾಸವಿದ್ದ ಬಾಡಿಗೆ ಮನೆಯಿಂದ ಹೋದವರು ಫೋನ್ ಸಂಪರ್ಕಕ್ಕೆ ಸಿಗದೇ, ಸಂಬಂಧಿಕರ ಮನೆಗೂ ಹೋಗದೇ, ಬೇರೆ ಕಡೆ ಕೆಲಸಕ್ಕೂ ಹೋಗದೇ ನಾಪತ್ತೆಯಾಗಿದ್ದಾರೆ. ಇವರು ಮಣಿಪಾಲದಲ್ಲಿ ಸೆಕ್ಯುರಿಟಿ ಕಲೆಸ ಮಾಡಿಕೊಂಡಿದ್ದು, ಕೆಲಸ ಕಷ್ಟ ಆಗುತ್ತಿದೆ. ಕೆಲಸ ಬಿಟ್ಟು ಬೇರೆ ಕಡೆ ಕೆಲಸ ಮಾಡುವುದಾಗಿಯೂ ಹೇಳುತ್ತಿದ್ದರು ಎನ್ನಲಾಗಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಕಾರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಬಾಗಲೂರು ಕ್ರಾಸ್ ನಲ್ಲಿ ಬೆಳಕಿಗೆ ಬಂದಿದೆ. ಕಾರೊಂದರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವ ಪತ್ತೆಯಾಗಿದ್ದು, ದೇಹದ ಮೇಲೆ ಗಾಯದ ಗುರುತುಗಳಿದ್ದು, ಕೊಲೆ ಮಾಡಿರುವ ಶಂಕೆಯಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳು ಕೃಷ್ಣ ಯಾದವ್ ಅವರನ್ನು ಕೊಲೆ ಮಾಡಿ ಶವವನ್ನು ಕಾರಿನಲ್ಲಿಯೇ ಇಟ್ಟು ಎಸ್ಕೇಪ್ ಆಗಿದ್ದಾರೆ ಎಂದು ಶಂಕಿಸಲಾಗಿದೆ.
ಬಂಟ್ವಾಳ :ಬೈಕ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ನಡೆದಿದೆ. ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಅವಿವಾಹಿತ ಯುವಕ.ಅಕ್ಷಿತ್ ಅವರು ಮಂಗಳೂರು ಖಾಸಗಿ ಕಂಪೆನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸುಮಾರು 4 ಗಂಟೆಗೆ ಹೊರಟಿದ್ದ.ಅಂದಾಜು 4.30 ಗಂಟೆಗೆ ಮಾರಿಪಳ್ಳ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆದಾಗಲೇ ಆತ ಮೃತಪಟ್ಟಿದ್ದಾನೆ.ಮುಂಜಾವಿನ ವೇಳೆ ನಿದ್ದೆಯ ಮಂಪರಿನಲ್ಲಿ ಅಥವಾ ಇನ್ನಾವುದೇ ಕಾರಣದಿಂದ ಅಪಘಾತ ಸಂಭವಿಸಿದೆ ಎಂಬುದು ಇನ್ನು ತನಿಖೆಯ ವೇಳೆ ತಿಳಿಯಬೇಕಾಗಿದೆ.ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.