ಬೆಳ್ತಂಗಡಿ: ನೆರಿಯ ಪೆಟ್ರೋನೆಟ್ ಪೈಪ್‌ಲೈನ್‌ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ನಿವಾಸಿ ತಮ್ಮಯ್ಯ(35) ಎಂದು ಗುರುತಿಸಲಾಗಿದೆ. ಸೆ.28ರಂದು ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದವನನ್ನು ನೋಡಿ ಸುರತ್ಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ಉಮೇಶ್ ಅವರು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ ಆರೋಪಿಯು ತಾನು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಿಬಿದ್ರೆ ನಿವಾಸಿ ಎಂದು ತಿಳಿಸಿದ್ದು, ಅದರಂತೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ವಿಚಾರಿಸಿದಾಗ ವಾರಂಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ತಮ್ಮಯ್ಯ ಎಂದು ತಿಳಿದುಬಂದಿದೆ. ಆರೋಪಿಯನ್ನು ಸೆ.29 ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Author: main-admin
ಬೆಂಗಳೂರು : ಸೌಜನ್ಯಪರ ಹೋರಾಟಗಾರ ಮತ್ತು ಧರ್ಮಸ್ಥಳ ‘ಬುರುಡೆ’ ಪ್ರಕರಣದಲ್ಲಿಯೂ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ವಿಚಾರಕ್ಕೆ ಸಂಬಂಧಪಟ್ಟಂತೆ ಗಡಿಪಾರು ಪ್ರಶ್ನಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಆದೇಶ ಹೊರಡಿಸಿದೆ. ಹೌದು ಹೈಕೋರ್ಟ್ ನಲ್ಲಿ ಪಾರು ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಗಡಿಪಾರು ಸಂಬಂಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಸೂಚನೆ ನೀಡಿ, ಅಕ್ಟೋಬರ್ 8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿತು. ಅಕ್ಟೋಬರ್ 8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸಿದಂತೆ ಹೈಕೋರ್ಟ್ ಸೂಚನೆ ನೀಡಿದೆ.
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ಮಾಣಿ-ಮೈಸೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕನಕಮಜಲು ಸಮೀಪದ ಪಂಜಿಗುಂಡಿ ಬಳಿ ನಡೆದಿದೆ. ಸುಳ್ಯದಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಲೇನೋ ಕಾರು ಹಾಗೂ ಪುತ್ತೂರಿನಿಂದ ಗುತ್ತಿಗಾರು ಕಡೆಗೆ ಬರುತ್ತಿದ್ದ ಆಲ್ಟೊ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಎರಡು ಕಾರುಗಳು ಜಖಂ ಗೊಂಡಿದ್ದು ಬಲೇನೋ ಕಾರು ಚಾಲಕ ಹಾಗೂ ಆಲ್ಟೊಕಾರಿನಲ್ಲಿದ್ದ ಗುತ್ತಿಗಾರಿನ ಮೂವರಿಗೂ ಗಾಯವಾಗಿದ್ದು ಅವರೆಲ್ಲರನ್ನೂ ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಪಡುಬಿದ್ರೆ: ಇಲ್ಲಿಗೆ ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ ಮೃತ ಬೈಕ್ ಸವಾರನ ಗುರುತು ಇನ್ನೂ ಪತ್ತೆಯಾಗಿಲ್ಲ. ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಪುತ್ತೂರು ನೋಂದಣಿ ಇರುವ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತದೇಹವನ್ನು ಸಾಮಾಜಿಕ ಕಾರ್ಯಕರ್ತ ಜಮಾಲುದ್ದೀನ್ ಉಚ್ಚಿಲ, ಮೂಳೂರು ಅಂಬುಲೆನ್ಸ್ ನ ಹಮೀದ್, ರೈಸ್, ರಜಾಕ್, ಅನ್ವರ್ ಕೋಟೇಶ್ವರ, ಸಾದಿಕ್ ಮತದಾನವನ್ನು ಪಡುಬಿದ್ರೆಯ ಸಹಕಾರಕ್ಕೆ ಸಾಗಿಸಲು ಸಹಕರಿಸಿದರು. ಸ್ಥಳಕ್ಕೆ ಆಗಮಿಸಿರುವ ಪಡುಬಿದ್ರೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ಈ ಬಾರಿ ಅ.1ರಂದು ನಡೆಯಲಿರುವ ‘ಪಿಲಿನಲಿಕೆ ಪಂಥ- 10’ಕ್ಕೆ ಕರಾವಳಿ ಉತ್ಸವ ಮೈದಾನ ಸಜ್ಜುಗೊಳ್ಳುತ್ತಿದೆ ಎಂದು ಪಿಲಿನಲಿಕೆ ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪಿಲಿನಲಿಕೆಯಲ್ಲಿ ಭಾಗವಹಿಸುವ ಪ್ರತಿಯೊಂದು ತಂಡಗಳಿಗೂ 20 ನಿಮಿಷ ಕಾಲಾವಕಾಶ ನೀಡಲಾಗುವುದು.ಆ.1ರಂದು ಬೆಳಗ್ಗೆ 10ಗಂಟೆಗೆ ಆರಂಭವಾಗುವ ಸ್ಪರ್ಧೆ ರಾತ್ರಿ 10ರವರೆಗೆ ನಡೆಯಲಿದೆ. ಈ ಸ್ಪರ್ಧೆ ವಿಶ್ವಕ್ಕೆ ತುಳುನಾಡಿನ ಸಾಂಪ್ರದಾಯಿಕ ಪಿಲಿನಲಿಕೆಯನ್ನು ನವರಾತ್ರಿಯ ಶಿಷ್ಟಾಚಾರದೊಂದಿಗೆ ಪರಿಚಯಿಸುವ ಮುಖ್ಯ ಉದ್ದೇಶ ಹೊಂದಿದೆ. ಈ ನಿಟ್ಟಿನಲ್ಲಿ ಸಾಕಷ್ಟು ಉತ್ತಮ ಬೆಳವಣಿಗೆ ಆಗಿದೆ ಎಂದರು. ಪಿಲಿನಲಿಕೆ ಪಂಥ ಸ್ಪರ್ಧೆಗೆ ಅಂತಿಮವಾಗಿ ಅಗಸ್ತ್ಯ ಮಂಗಳೂರು, ಶ್ರೀ ವೈದ್ಯನಾಥೇಶ್ವರ ಫ್ರೆಂಡ್ಸ್ ಟೈಗರ್. ಮುಳಿಹಿತ್ತು ಗೇಮ್ಸ್ ಟೀಮ್, ಅನಿಲ್ ಕಡಂಬೆಟ್ಟು, ಜೂನಿಯರ್ ಬಾಯ್ಸ್ ಚಿಲಿಂಬಿ, ಎಮ್ಮೆಕೆರೆ ಫ್ರೆಂಡ್ಸ್ ಸರ್ಕಲ್, ಟ್ಯಾಲೆಂಟ್ ಟೈಗರ್ಸ್ ತುಳುನಾಡು, ಸೋಮೇಶ್ವರ ಫ್ರೆಂಡ್ಸ್,ಪೊಳಲಿ ಟೈಗರ್ಸ್, ಗೋಕರ್ಣ ನಾಥ ಹುಲಿ ತಂಡಗಳು ಭಾಗವಹಿಸಲಿವೆ ಎಂದರು. ಈ ಬಾರಿ 10ತಂಡಗಳನ್ನು ಪಿಲಿನಲಿಕೆ -10ಕ್ಕೆ ಆಯ್ಕೆ ಮಾಡಲಾಗಿದೆ. ವಿಶೇಷವಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ. ರಾಜ್ಯಸಭಾ…
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ ವಹಿಸುವ ಉದ್ದೇಶದಿಂದ, ಸೆಪ್ಟೆಂಬರ್ 29 ರಂದು ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ವಿತರಣೆ ಮಾಡುವ ಮೂಲಕ ಸಾಮಾಜಿಕ ಕಾರ್ಯವನ್ನು ಹಮ್ಮಿಕೊಂಡಿತು.ಈ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀರವಿಚಂದ್ರ ನಾಯಕ್ ಉಪಸ್ಥಿತರಿದ್ದರು. ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ ಕಾರ್ಮಿಕರಿಗೆ ಪಾದರಕ್ಷೆಗಳನ್ನು ಹಸ್ತಾಂತರಿಸಿದರು.“ಪೌರ ಕಾರ್ಮಿಕರು ನಮ್ಮ ಸಮಾಜದ ಬೆನ್ನೆಲುಬು. ಅವರ ಶ್ರಮದಿಂದಲೇ ನಗರ ಸ್ವಚ್ಛವಾಗಿರುತ್ತದೆ. ಅವರ ಸುರಕ್ಷತೆಗಾಗಿ ನಾವು ಕೈಗೊಂಡಿರುವ ಈ ಉಪಕ್ರಮ ನಮ್ಮ ಸಾಮಾಜಿಕ ಜವಾಬ್ದಾರಿಯ ಭಾಗವಾಗಿದೆ” ಎಂದು ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ ಹೇಳಿದರು. ಮಹಾ ನಗರ ಪಾಲಿಕೆ ಆಯುಕ್ತರು ಈ ಸಂದರ್ಭದಲ್ಲಿ, ಪೌರ ಕಾರ್ಮಿಕರ ಸುರಕ್ಷತೆಯ ಕಡೆ ಗಮನ ಹರಿಸಿರುವ ರೋಹನ್ ಕಾರ್ಪೊರೇಶನ್ ನ ಸಮಾಜಮುಖಿ ಕಾರ್ಯವನ್ನು ಮೆಚ್ಚಿ,…
ಧರ್ಮಸ್ಥಳ ಪ್ರಕರಣದ ತನಿಖೆ ಚುರುಕುಗೊಳಿಸಿದ ಎಸ್ಐಟಿ ಧರ್ಮಸ್ಥಳ ಗ್ರಾಂ ಪಂಚಾಯಿತಿ ಮಾಜಿ ಅಧ್ಯಕ್ಷರಿಗೆ ಬುಲಾವ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ನಾಲ್ವರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು ವಿಚಾರಣೆಗೆ ಹಾಜರಾಗಿದ್ದಾರೆ. ಧರ್ಮಸ್ಥಳ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಕೇಶವ ಬೆಳಾಲು, ಗೀತಾ, ಚಂದನ್ ಕಾಮತ್, ಪ್ರಭಾಕರ್ ವಿಚಾರಣೆಗೆ ಹಾಜರಾಗಿದ್ದಾರೆ. ಶವ ಹೂತು ಹಾಕಿರುವ ಕುರಿತು ಎಸ್ಐಟಿ ಅಧಿಕಾರಿಗಳು ಗ್ರಾಂ ಪಂಚಾಯಿತಿ ಮಾಜಿ ಅಧ್ಯಕ್ಷರಿಗೆ ಬುಲಾವ್ ನೀಡಿದ್ದರು. ಹೀಗಾಗಿ ಗ್ರಾಮ ಪಂಚಾಯತಿ ನಾಲ್ವರು ಅಧ್ಯಕ್ಷರು ಬೆಳ್ತಂಗಡಿ ತಾಲೂಕಿನಲ್ಲಿರುವ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಮಂಗಳೂರು: ಬೈಕ್‌ನಲ್ಲಿ ಬಂದ ಯುವಕನೊಬ್ಬ 74 ವರ್ಷದ ವೃದ್ಧೆಯ ಕತ್ತಿನಲ್ಲಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾಗಿದ್ದು, ಘಟನೆಯಲ್ಲಿ ವೃದ್ಧೆ ಗಾಯಗೊಂಡಿರುವ ಘಟನೆ ಮುಲ್ಕಿ ಪೋಸ್ಟ್ ಆಫೀಸ್ ಬಳಿಯ ಅಕ್ಕಸಾಲಿಗರ ಕೇರಿ ವೀರ ಮಾರುತಿ ದೇವಸ್ಥಾನದ ಸಮೀಪದ ಒಳ ರಸ್ತೆಯಲ್ಲಿ ನಡೆದಿದೆ. ಗಾಯಗೊಂಡ ವೃದ್ಧೆಯನ್ನು ಪೋಸ್ಟ್ ಆಫೀಸ್ ಬಳಿಯ ನಿವಾಸಿ ನಳಿನಿ ಎ ನಾಯಕ್ ಎಂದು ಗುರುತಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮಧ್ಯಾಹ್ನದ ಊಟದ ಬಳಿಕ ನಳಿನಿಯವರು ಎಂದಿನಂತೆ ವಾಕಿಂಗ್‌ಗೆ ಹೋಗಲು ಸಿದ್ಧರಾಗಿ ಗೇಟ್ ಬಳಿ ಬಂದಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಯುವಕನೊಬ್ಬ ಮುಲ್ಕಿ ಕಡೆಯಿಂದ ಬಂದು, ನಾಗೇಶ್ ರಾವ್ ಅವರ ಮನೆ ಎಲ್ಲಿದೆ ಎಂದು ವಿಚಾರಿಸಿದ್ದಾನೆ. ತನಗೆ ಗೊತ್ತಿಲ್ಲ ಎಂದು ಉತ್ತರಿಸಿದ ನಳಿನಿಯವರು, ವೀರ ಮಾರುತಿ ದೇವಸ್ಥಾನಕ್ಕೆ ಹೋಗುವ ಒಳ ರಸ್ತೆಯಲ್ಲಿ ನಡೆದು ಹೋಗುತ್ತಿದ್ದರು. ಆ ಯುವಕ ಬೈಕ್‌ನಲ್ಲಿ ಅವರನ್ನು ಹಿಂಬಾಲಿಸಿ, ರಸ್ತೆಯ ಮೇಲಿದ್ದ ನೀರಿನ ಟ್ಯಾಂಕ್ ಬಳಿ ತಡೆದು, ಚಾಕು…
ಉಡುಪಿ : ಸಿ.ಎನ್.ಜಿ ಗ್ಯಾಸ್ ಡೀಲರ್ ಶಿಪ್ ಹೆಸರಿನಲ್ಲಿ ಉಡುಪಿಯ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಸಂತೆಕಟ್ಟೆಯ ತೇಜಸ್ವಿನಿ ಅವರು ಸೆ.11ರಂದು petrol pumpdelearship.co.in ವೆಬ್ ಸೈಟ್‌ನಲ್ಲಿ ಸಿ.ಎನ್.ಜಿ. ಗ್ಯಾಸ್ ಡೀಲರ್ ಶಿಪ್‌ಗೆ ಅರ್ಜಿ ಸಲ್ಲಿಸಿದ್ದರು. ಸೆ.18ರಂದು ಮಹೇಶ್. ಜೈನ್ ಎಂಬವರು ಕರೆಮಾಡಿ ತಾನು ಅದಾನಿ ಟೋಟಲ್ ಗ್ಯಾಸ್ ಲಿಮಿಟೆಡ್‌ನ ಸಂಸ್ಥೆಯವರೆಂದು ನಂಬಿಸಿ ಸಿ.ಎನ್.ಜಿ. ಗ್ಯಾಸ್ ಡೀಲರ್ ಶಿಪ್‌ಗೆ ಸಲ್ಲಿಸಿದ ಅರ್ಜಿ ಪುರಸ್ಕಾರಗೊಂಡಿದೆ. ಅದಕ್ಕೆ ಸಂಬಂಧಪಟ್ಟಂತೆ ಪೂರಕ ದಾಖಲಾತಿಯನ್ನು ಸಲ್ಲಿಸಿ ಎಂದು ಇ.ಮೇಲ್ ಐಡಿ support@ adanicng.com ನ್ನು ಕಳುಹಿಸಿದ್ದರು. ಅದೇ ದಿನ ಇ-ಮೇಲ್ ಐಡಿ ಮೂಲಕ ಅರ್ಜಿಯ ಪ್ರತಿಯನ್ನು ತೇಜಸ್ವಿನಿ ಅವರ ಇ-ಮೇಲ್ ಐಡಿಗೆ ಕಳುಹಿಸಿಕೊಟ್ಟಿದ್ದು, ಅದರೊಂದಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಖಾತೆ 5851213174 ಗೆ 49,500ರೂ. ನೆಫ್ಟ್ ಮಾಡುವಂತೆ ತಿಳಿಸಿದ್ದರು. ಅದರಂತೆ ತೇಜಸ್ವಿನಿ ಅವರು ನೆಫ್ಟ್ ಮಾಡಿದ್ದರು. ಅನಂತರ ರಾಕೇಶ್ ವರ್ಮ ಎಂಬವರು ಕರೆ ಮಾಡಿ ತಿಳಿಸಿದಂತೆ ತೇಜಸ್ವಿನಿ ಅವರು ಹಂತ ಹಂತವಾಗಿ 7,99,500…
ಉಡುಪಿ : ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಅತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮುಹಮದ್ ಫೈಸಲ್ ಖಾನ್(27), ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮುಹಮದ್ ಶರೀಫ್(37) ಹಾಗೂ ಸುರತ್ಕಲ್ ಕೃಷಾಪುರದ ಅಬ್ದುಲ್ ಶುಕೂರು ಯಾನೆ ಅದ್ದು(43) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯನ್ನು ಉಡುಪಿ ಡಿವೈಎಸ್ಪಿ ಡಿ.ಟಿ.ಪ್ರಭು ಮಾರ್ಗದರ್ಶನದಲ್ಲಿ ಮಲ್ಪೆ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಮಲ್ಪೆ ಎಸ್ಸೆ ಅನಿಲ್ ಕುಮಾರ್ ಡಿ. ಹಾಗೂ ಸಿಬ್ಬಂದಿಯವರ ವಿಶೇಷ ತಂಡ ನಡೆಸಿದೆ.










