ಕಾರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಬಾಗಲೂರು ಕ್ರಾಸ್ ನಲ್ಲಿ ಬೆಳಕಿಗೆ ಬಂದಿದೆ. ಕಾರೊಂದರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವ ಪತ್ತೆಯಾಗಿದ್ದು, ದೇಹದ ಮೇಲೆ ಗಾಯದ ಗುರುತುಗಳಿದ್ದು, ಕೊಲೆ ಮಾಡಿರುವ ಶಂಕೆಯಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳು ಕೃಷ್ಣ ಯಾದವ್ ಅವರನ್ನು ಕೊಲೆ ಮಾಡಿ ಶವವನ್ನು ಕಾರಿನಲ್ಲಿಯೇ ಇಟ್ಟು ಎಸ್ಕೇಪ್ ಆಗಿದ್ದಾರೆ ಎಂದು ಶಂಕಿಸಲಾಗಿದೆ.
Author: main-admin
ಬಂಟ್ವಾಳ :ಬೈಕ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ನಡೆದಿದೆ. ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಅವಿವಾಹಿತ ಯುವಕ.ಅಕ್ಷಿತ್ ಅವರು ಮಂಗಳೂರು ಖಾಸಗಿ ಕಂಪೆನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸುಮಾರು 4 ಗಂಟೆಗೆ ಹೊರಟಿದ್ದ.ಅಂದಾಜು 4.30 ಗಂಟೆಗೆ ಮಾರಿಪಳ್ಳ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆದಾಗಲೇ ಆತ ಮೃತಪಟ್ಟಿದ್ದಾನೆ.ಮುಂಜಾವಿನ ವೇಳೆ ನಿದ್ದೆಯ ಮಂಪರಿನಲ್ಲಿ ಅಥವಾ ಇನ್ನಾವುದೇ ಕಾರಣದಿಂದ ಅಪಘಾತ ಸಂಭವಿಸಿದೆ ಎಂಬುದು ಇನ್ನು ತನಿಖೆಯ ವೇಳೆ ತಿಳಿಯಬೇಕಾಗಿದೆ.ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಟ್ವಾಳ: ಕಾನೂನು ಬಾಹಿರವಾಗಿ ಆಟೋರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೋಲೀಸರು ತಡೆದು ದಂಡ ಹಾಕಿದರು ಎಂಬ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ವಾಹನಕ್ಕೆ ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ಬಿಸಿರೋಡಿನ ಕೈಕಂಬ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಸಾರ್ವಜನಿಕವಾಗಿ ಪೆಟ್ರೋಲ್ ಸುರಿದು ಬೆಂಕಿ ಹಾಕಿ ಅನಾಹುತಕ್ಕೆ ಕಾರಣನಾದ ಆಟೋ ಚಾಲಕನ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಪ್ರಕರಣದ ಆರೋಪಿಯಾಗಿದ್ದು, ಸದ್ಯ ತಲೆಮರೆಸಿಕೊಂಡಿದ್ದಾನೆ. ಟ್ರಾಫಿಕ್ ಎಸ್‌ಐ.ಸುತೇಶ್ ಅವರು ಕೈಕಂಬದಲ್ಲಿ ವಾಹನಗಳ ತಪಾಸಣಾ ಕಾರ್ಯದಲ್ಲಿ ತೊಡಗಿದ್ದ ವೇಳೆ, ಯೂನಿಫಾರ್ಮ್ ( ಡ್ರೆಸ್ ಕೋಡ್) ಹಾಕದೆ ಮೊಬೈಲ್ ನಲ್ಲಿ ಮಾತನಾಡಿಕೊಂಡು ರಿಕ್ಷಾ ಓಡಿಸುತ್ತಿದ್ದ ಚಾಲಕನನ್ನು ನಿಲ್ಲಿಸಿ, ಆತನ ಮೇಲೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಕಾರಣಕ್ಕಾಗಿ 2 ಸಾವಿರ ದಂಡ ಹಾಕಿ ನೋಟೀಸ್ ನೀಡಿದರು. ಇದೇ ಕಾರಣದಿಂದ ಸಾರ್ವಜನಿಕವಾಗಿ ಬೀದಿ…
ಮಂಗಳೂರು: ಸೊಸೆಯೊಬ್ಬಳು ತನ್ನ ವೃದ್ದ ಮಾವನಿಗೆ ಮನಸೊ ಇಚ್ಚೆ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಇದೀಗ ಆರೋಪಿ ಸೊಸೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆ ಮಾಡಿದ ಸೊಸೆ ಉಮಾಶಂಕರಿ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ(86) ಎಂದು ಗುರುತಿಸಲಾಗಿದೆ. ಪದ್ಮನಾಭ ಅವರ ಮಗ ಪ್ರೀತಂ ಸುವರ್ಣ ವಿದೇಶದಲ್ಲಿ ಕೆಲಸದಲ್ಲಿದ್ದು, ಮನೆಯ ಸಿಸಿಟಿವಿಯನ್ನು ತನ್ನ ಮೊಬೈಲಿಗೆ ಕನೆಕ್ಟ್ ಮಾಡಿಕೊಂಡಿದ್ದರು. ಎರಡು ದಿನಗಳ ಹಿಂದೆ ತನ್ನ ವೃದ್ಧ ತಂದೆಗೆ ಪತ್ನಿ ಉಮಾಶಂಕರಿ ವಾಕಿಂಗ್ ಸ್ಟಿಕ್ ನಲ್ಲಿ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಮಗನ ಗಮನಕ್ಕೆ ಬಂದಿತ್ತು. ಅದರಂತೆ, ಪ್ರೀತಂ ಸುವರ್ಣ ತನ್ನ ತಂಗಿ ಮೂಡುಬಿದ್ರೆಯಲ್ಲಿ ಗಂಡನ ಮನೆಯಲ್ಲಿ ನೆಲೆಸಿರುವ ಪ್ರಿಯಾಗೆ ವಿಷಯ ತಿಳಿಸಿದ್ದರು. ಮಗಳು ಪ್ರಿಯಾ ಸುವರ್ಣ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದೀಗ ಆರೋಪಿ ಉಮಾಶಂಕರಿ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕರಾವಳಿಯ ಬುದ್ದಿವಂತರ ಜಿಲ್ಲೆಯಲ್ಲೇ…
ಬೆಂಗಳೂರು: ರಾಜ್ಯಾದ್ಯಾಂತ ಅಪಾಯಕಾರಿಯಾದ ಬಣ್ಣಯುಕ್ತ ಕಾಟನ್ ಕ್ಯಾಂಡಿ ಬ್ಯಾನ್ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಇಂದು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ.ಆದರೆ ಗೋಬಿ ಮಂಚೂರಿಗೆ ನಿರ್ಬಂಧ ಹೇರುವಂತಿಲ್ಲ. ಒಂದು ವೇಳೆ ನಿಯಮ ಮೀರಿ, ಕೃತಕ ಬಣ್ಣ ಬಳಸಿದರೆ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಹತ್ತು ಲಕ್ಷ ದಂಡ ಹಾಗೂ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ ಎಂದು ತಿಳಿಸಿದ್ದಾರೆ. ವಿವಿಧ ಕಡೆಗಳಲ್ಲಿ ಎರಡು ಪದಾರ್ಥಗಳಲ್ಲಿನ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಾಗಿದ್ದು, ಇವುಗಳಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿದ್ದು, ಇದರಿಂದ ಇದರ ಸೇವನೆ ಮಾಡುವುದು ಯೋಗ್ಯವಲ್ಲ. ಟಾರ್ಟ್ರಾಜಿನ್, ಸನ್ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ನಂತ ಕೃತಕ ಬಣ್ಣಗಳನ್ನು ಬಳಸಲಾಗಿದೆ ಇವು ಆರೋಗ್ಯಕ್ಕೆ ತುಂಬಾ ಅಪಾಯಕಾರಿಯಾಗಿದೆ. ಇವುಗಳಿಂದ ಕ್ಯಾನ್ಸರ್ ಹಾಗೂ ಅಸಾಂಕ್ರಮಿಕ ಖಾಯಿಲೆ ಹೆಚ್ಚಳವಾಗುತ್ತಿದೆ. ಕಾಟನ್ ಕ್ಯಾಂಡಿಯಲ್ಲಿ ಪಿಂಕ್ ಕಲರ್ ಬರಲು ರೊಡಮೈನ್…
ಉಳ್ಳಾಲ: ವ್ಯಕ್ತಿಯೋರ್ವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಪಲದ, ಕುಜುಮ ಗದ್ದೆಯ ಒಂಟಿ ಮನೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕುಂಪಲ, ಕುಜುಮ ಗದ್ದೆ ನಿವಾಸಿ ಕಿರಣ್ ಕುಮಾರ್ (48) ಎಂದು ಗುರುತಿಸಲಾಗಿದೆ. ಕಿರಣ್ ವಿವಾಹಿತರಾಗಿದ್ದು 17 ವರ್ಷಗಳಾದರೂ ಮಕ್ಕಳಾಗಿರಲಿಲ್ಲ. ಇದೇ ಕೊರಗಿಂದ ಕಿರಣ್ ವಿಪರೀತ ಮದ್ಯ ಸೇವಿಸಿ ಪತ್ನಿಯಲ್ಲಿ ಜಗಳ ಮಾಡುತ್ತಿದ್ದ ಎನ್ನಲಾಗಿದ್ದು ಗಂಡನ ನಡವಳಿಕೆಯಿಂದ ಬೇಸತ್ತ ಪತ್ನಿ ಕಳೆದ ನಾಲ್ಕು ವರ್ಷಗಳ ಹಿಂದೆಯೇ ಗಂಡನ ತೊರೆದು ತವರು ಸೇರಿದ್ದರು. ಇದರ ಬಳಿಕ ಒಬ್ಬಂಟಿಯಾಗಿ ಮನೆಯಲ್ಲಿ ನೆಲೆಸಿದ್ದ ಕಿರಣ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಮನೆ ಸೇರಿದ್ದ ಕಿರಣ್ ಮತ್ತೆ ಹೊರ ಬಂದಿರಲಿಲ್ಲ. ಪರಿಸರದ ವಾಸನೆ ಬರುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಸಮಕ್ಷಮದಲ್ಲಿ ಸ್ಥಳೀಯ ಪುರಸಭಾ ಸದಸ್ಯ ದೀಪಕ್ ಪಿಲಾರ್ ಮನೆ ಬಾಗಿಲು ಮುರಿದಾಗ ಮನೆ ಛಾವಣಿಗೆ ನೇಣುಬಿಗಿದ ಸ್ಥಿತಿಯಲ್ಲಿ ಕಿರಣ್ ಅವರ ಕೊಳೆತ ಶವ ಪತ್ತೆಯಾಗಿದೆ. ಉಳ್ಳಾಲ ಪೊಲೀಸರು…
ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆಯಾಗಿದೆ. ಧರ್ಮಸ್ಥಳ ಠಾಣಾಧಿಕಾರಿ ಅನಿಲ್ ಕುಮಾರ್ ಕರೆ ಮಾಡಿ ತಿಳಿಸಿದ ಕೂಡಲೇ ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ಸ್ಪಂದಿಸಿಶವವನ್ನು ನೀರಿನಿಂದ ಮೇಲಕ್ಕೆತ್ತಿ ಧರ್ಮಸ್ಥಳ ಠಾಣೆಯ ಆರಕ್ಷಕರಾದ ಸಾಮ್ಯುವೆಲ್ ಹಾಗೂ ಧರ್ಮಪಾಲ ಅವರ ಉಪಸ್ಥಿತಿಯಲ್ಲಿ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ದಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಬೈಕ್ ಸೈಡ್ ಕೋಡುವ ಸಂದರ್ಭ ಕಾರು ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ದಂಪತಿಯನ್ನ ಸರ್ಕಾರಿ ಆಸ್ಪತ್ರೆಗೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಾಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.
ಬ್ರಹ್ಮಾವರದ ಹೊಸೂರು ಗ್ರಾಮದಲ್ಲಿ ಮೃತರ ಕಾರ್ಯದ ಪೂಜಾ ಕಾರ್ಯದ ವೇಳೆ ಮನೆಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಹೊಸೂರು ಗ್ರಾಮದ ರಾಘವೆಂದ್ರ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಅವರ ತಾಯಿ ರಾಧಾ ಬಾಯಿಯವರು ಮೃತಪಟ್ಟ ಬಗ್ಗೆ ಮಾ.6 ರಂದು ಮನೆಯಲ್ಲಿ ನಡೆಯುವ ತಾಯಿಯ ಕಾರ್ಯದ ಪೂಜಾ ಕಾರ್ಯವನ್ನು ನಡೆಸುತ್ತಿದ್ದರು. ಈ ವೇಳೆ ಪೂಜಾ ಕಾರ್ಯವನ್ನು ಸ್ಥಳೀಯ ಅರ್ಚಕ ರಾಮಕೃಷ್ಣ ಅವರಿಗೆ ನೀಡದೇ ಬೇರೆ ಪುರೋಹಿತರಿಂದ ಮಾಡಿಸುತ್ತಿದ್ದ ಕಾರಣ ಮಧ್ಯಾಹ್ನದ ವೇಳೆ ರಾಮಕೃಷ್ಣ ಅವರು ಏಕಾಏಕಿ ಮನೆಯ ಅಂಗಳಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ, ಅವಾಚ್ಯ ಶಬ್ಧಗಳಿಂದ ಜಾತಿ ನಿಂದನೆ ಮಾಡಿರುವುದಲ್ಲದೇ, ಇಡಿ ಸಂತಾನ ಸರ್ವನಾಶ ಮಾಡುತ್ತೇನೆ ಎಂದು ಬೆದರಿಕೆ ಹಾಕಿರುತ್ತಾರೆ ಎಂಬುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ: ಕಳೆದ ತಾಲೂಕಿನ ಒಂದಲ್ಲ ಒಂದು ಕಾಡಾನೆಗಳ ಹಾವಳಿ ಸಾಮಾನ್ಯವಾಗಿದೆ. ತಾಲ್ಲೂಕಿನ ಚಾರ್ಮಾಡಿಯ ತೋಟ ಒಂದರಲ್ಲಿ ಕಾಣಿಸಿಕೊಂಡಿದ್ದ ಆನೆ ಬಳಿಕ ಮುಂಡಾಜೆ, ಪಟ್ರಮೆ, ಧರ್ಮಸ್ಥಳ, ಕಲ್ಮಂಜ ಮೊದಲಾದ ಗ್ರಾಮಗಳಲ್ಲಿ ಓಡಾಟ ನಡೆಸಿತ್ತು. ಧರ್ಮಸ್ಥಳ ದೊಂಡೋಲೆ ಹಾಗೂ ನೀರಚಿಲುಮೆ ಸಮೀಪ ಕಾಡನೆಯನ್ನು ನೋಡಿದ ಜನರು ಅರಣ್ಯ ಇಲಾಖೆಯ ಸಹಕಾರದೊಂದಿಗೆ ಆನೆಯನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ನಡೆಸಿದ್ದರು. ಅಲ್ಲಿಂದ ಹೋದ ಒಂಟಿಸಲಗ ಆ ಬಳಿಕ ಶುಕ್ರವಾರ ಬೆಳಾಲು, ಬಂದಾರು ಮೊದಲಾದೆಡೆ ಒಂಟಿಸಲಗ ಸುತ್ತಾಡಿ ನಾಳ ಸನಿಹದ ಕಾಡಿನತ್ತ ಹೋಗಿ ಕೊಯ್ಯರು, ಕಲಾಯಿ ಮೊದಲಾದ ಸ್ಥಳಗಳಲ್ಲಿ ಓಡಾಟ ನಡೆಸಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಸರದಲ್ಲಿ ಪರಿಶೀಲನೆ ನಡೆಸಿ ಸ್ಥಳೀಯರಿಗೆ ಮುಂಜಾಗ್ರತೆ ಕೈಗೊಳ್ಳುವಂತೆ ಸೂಚಿಸಿ ಪಟಾಕಿಗಳನ್ನು ನೀಡಿದ್ದು ಆನೆ ಕಂಡು ಬಂದಲ್ಲಿ ತಕ್ಷಣ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಕಾಡಾನೆ ಮನಬಂದಂತೆ ಜನವಸತಿ ಪ್ರದೇಶಗಳ ನಡುವೆ ಓಡಾಟ ನಡೆಸುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ.