Author: main-admin

ಧರ್ಮಸ್ಥಳ : ಖಾಸಗಿ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದ ಗ್ರಾಮದ ಮುಳಿಕ್ಯಾರ್ ಸಮೀಪದ ಕಜೋಡಿ ಎಂಬಲ್ಲಿ ನಡೆದಿದೆ. ಕಜೋಡಿ ನಿವಾಸಿ ರಾಮಣ್ಣ ಹಾಗೂ ಗೀತಾ ದಂಪತಿಗಳ ಪುತ್ರ ವಿಘ್ನೇಶ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ . ಮನೆಯ ಕೊಟ್ಟಿಗೆಯಲ್ಲಿ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Read More

ಬೆಳ್ತಂಗಡಿ: ಪೊಲೀಸರ ಮೇಲೆ ಹತ್ತಕ್ಕೂ ಹೆಚ್ಚು ಮಂದಿಯ ತಂಡವೊಂದು ಹಲ್ಲೆ ನಡೆಸಿದ ಘಟನೆ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆ ಸಮೀಪ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ಧ ಹಾಗೂ ಇತರ ಅಪರಿಚಿತರ ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಹೇಶ್, ಸುರೇಶ್, ಅರುಣ್ ಹಾಗೂ ಇತರ ಹತ್ತಕ್ಕೂ ಹೆಚ್ಚು ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ವೇಣೂರು ಪೊಲೀಸ್‌ ಠಾಣೆಯ ಎ.ಎಸ್.ಐ ರಾಮಯ್ಯ ಹೆಗ್ಡೆ ಅವರು ಯುವಕರ ತಂಡ ಶಿವರಾತ್ರಿಯಂದು ರಸ್ತೆಯಲ್ಲಿ ದಾಂಧಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ್ದು, ತಡ ರಾತ್ರಿ ವೇಳೆ ರಸ್ತೆಯಲ್ಲಿದ್ದ ಯುವಕರನ್ನು ರಸ್ತೆಯಲ್ಲಿ ಗಾಜಿನ ಬಾಟ್ಲಿಗಳನ್ನು ಒಡೆದು ಹಾಕಿರುವ ಬಗ್ಗೆ ಎ.ಎಸ್.ಐ ಅವರು ಪ್ರಶ್ನಿಸಿದ್ದು, ಇದರಿಂದ ಸಿಟ್ಟುಗೊಂಡ ತಂಡ ಅವರ ಮೇಲೆ ದಾಳಿ ನಡೆಸಿ, ಅವರಿಗೆ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ಈ ಬಗ್ಗೆ ರಾಮಯ್ಯ ಅವರು ನೀಡಿರುವ ದೂರಿನಂತೆ ವೇಣೂರು ಪೊಲೀಸರು ಪ್ರಕರಣ‌ ದಾಖಲಿಸಿಕೊಂಡಿದ್ದು, ಐವರನ್ನು ವಶಕ್ಕೆ ಪಡೆದು ಕೊಂಡಿರುವುದಾಗಿ ತಿಳಿದು ಬಂದಿದೆ..…

Read More

ಬೆಂಗಳೂರು : ಪತಿಯ ನಿಧನದ ನಂತರ ಸೊಸೆ, ಅತ್ತೆ-ಮಾವನ ವಿರುದ್ಧ ಜೀವನಾಂಶದ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಸೊಸೆಗೆ ಜೀವನ ನಿರ್ವಹಣೆಗಾಗಿ ಹಣ ನೀಡುವಂತೆ ಅತ್ತೆ-ಮಾವನಿಗೆ ಆದೇಶಿಸಿದ್ದ ಬಳ್ಳಾರಿಯ ಕೌಟುಂಬಿಕ ನ್ಯಾಯಾಲಯದ ತೀರ್ಪು ರದ್ದುಗೊಳಿಸಿದೆ. ಅಲ್ಲದೆ, ಈ ಕುರಿತಾಗಿ ಸಲ್ಲಿಕೆಯಾದ ಮರುಪರಿಶೀಲನಾ ಅರ್ಜಿಯನ್ನು ಅಂಗೀಕರಿಸಿದೆ. ಪತಿಯ ನಿಧನದ ಬಳಿಕ ಪತ್ನಿ (ಸೊಸೆ) ಹಾಗೂ ಮಕ್ಕಳ ಕುರಿತು ಅತ್ತೆ ಮಾವ ಕಾಳಜಿ ವಹಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಜೀವನ ನಿರ್ವಹಣೆಗಾಗಿ ಅತ್ತೆ-ಮಾವನ ಬಳಿ ಜೀವನಾಂಶ ಕೋರಿದ್ದಾರೆ. ಇದು ಆಕೆ ಜೀವನ ನಡೆಸಲು ಅಗತ್ಯವೂ ಹೌದು. ಕೌಟುಂಬಿಕ ನ್ಯಾಯಾಲಯದ ಆದೇಶದಂತೆ ಜೀವನಾಂಶ ನೀಡುವುದು ಸೂಕ್ತ. ಈ ನಿಟ್ಟಿನಲ್ಲಿ ಮರುಪರಿಶೀಲನಾ ಅರ್ಜಿ ವಜಾಗೊಳಿಸುವಂತೆ ಪ್ರತಿವಾದಿ ಪರ ವಕೀಲರು ಮನವಿ ಮಾಡಿದರು.ಪತಿಯ ನಿಧನದ ಬಳಿಕ ಪತ್ನಿ (ಸೊಸೆ) ಹಾಗೂ ಮಕ್ಕಳ ಕುರಿತು ಅತ್ತೆ ಮಾವ ಕಾಳಜಿ ವಹಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಜೀವನ ನಿರ್ವಹಣೆಗಾಗಿ ಅತ್ತೆ-ಮಾವನ ಬಳಿ ಜೀವನಾಂಶ ಕೋರಿದ್ದಾರೆ. ಇದು ಆಕೆ ಜೀವನ ನಡೆಸಲು ಅಗತ್ಯವೂ ಹೌದು.…

Read More

ಕಡಬ:ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ನಿಗದಿತ ಸ್ಥಳದಲ್ಲಿ ನಿಲ್ಲಿಸದೆ ಯುವತಿಯ ಜೊತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಬಸ್ ನಿರ್ವಾಹಕನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ಮಾ.9 ರಂದು ನಡೆದಿದೆ. ಕಡಬ ತಾಲೂಕು ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಬಸ್ ಏರಿದ್ದರು. ಆಲಂಕಾರಿಗೆ ಎಂದು ಯುವತಿ ಹೇಳಿದರೂ ಕಡಬಕ್ಕೆ ಟಿಕೆಟ್ ನೀಡಿ ಯುವತಿ ಹೇಳಿದ ಸ್ಥಳದಲ್ಲಿ ನಿಲ್ಲಿಸದೆ ಕಡಬದತ್ತ ಬಸ್ ಹೊರಟಿತ್ತು ಎನ್ನಲಾಗಿದೆ.ತಾನು ಇಳಿಯುವ ಸ್ಥಳ ಬಂದಾಗ ಮೈ‌ಮುಟ್ಟಿ ಇಲ್ಲಿ ಇಳಿಯಬೇಡಿ ಎಂದು ನಿರ್ವಾಹಕ ಸೂಚಿಸಿದ್ದ ಎಂದು‌ ಆರೋಪಿಸಲಾಗಿದೆ. ಬಸ್ ನಿಲ್ಲಿಸದೆ ಅನುಚಿತ ವರ್ತನೆ ತೋರಿದ ಬಗ್ಗೆ ಯುವತಿ ಪರಿಚಿತರಿಗೆ ಮಾಹಿತಿ ನೀಡಿದ ಹಿನ್ನೆಲೆ ಕಡಬ ಸಮೀಪದ ಕಳಾರ ಮಸೀದಿ ಬಳಿ ಬಸ್ ನ್ನು ಭೀಮ್ ಆರ್ಮಿ ಸಂಘಟನೆಯ ಸದಸ್ಯರು ತಡೆದು ನಿಲ್ಲಿಸಿದ್ದರು. ಬಳಿಕ ಠಾಣೆ ಬಳಿ ನಿಲ್ಲಿಸಲು ಸೂಚಿಸಿದ್ದರು. ಆಲಂಕಾರಿನಲ್ಲಿ‌ ಇಳಿಯುವ ವೇಳೆ ತನ್ನ ಮೈ ಮುಟ್ಟಿ ಇಲ್ಲಿ ಇಳಿಯಬೇಡಿ ಎಂದು…

Read More

ಬಂಟ್ವಾಳ:  ಕಂಟೈನರ್  ಟ್ರಕ್  ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಟ್ರಕ್ ಚಾಲಕ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಸ್ಥಳೀಯರು ರಕ್ಷಿಸಿ ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ .  ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕ ಸಹಿತ ಬಸ್ ನಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಬಸ್ ನಲ್ಲಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳ ಸಹಿತ ಅನೇಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತ ಸಂಭವಿಸಿದ ರಸ್ತೆಯ ಎದುರು ಭಾಗದಲ್ಲಿ ದೊಡ್ಡ ಪ್ರಪಾತವಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.

Read More

ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಂನೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್‌ ಎಂದು ಗುರುತಿಸಲಾಗಿದೆ. ಅಭಿಷೇಕ್‌ ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ ಕೆಲಸ ಮಾಡಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಾ.6ರ ಸಂಜೆ 5.30ರಿಂದ ಮಾ.7 ರ ರಾತ್ರಿ 8ಗಂಟೆಯ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ :  ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಸ್ವಸ್ತಿಕ್ ಮೃತ ಯುವಕನಾಗಿದ್ದಾನೆ. ಇವರು ಮಾ.7ರಂದು ಮಧ್ಯರಾತ್ರಿ ವೇಳೆ ಬೈಕಿನಲ್ಲಿ ನಿಟ್ಟೂರು ಕಡೆಯಿಂದ ಉಡುಪಿ ಕರಾವಳಿ ಕಡೆಗೆ ಹೋಗುತ್ತಿದ್ದು, ಅತೀವೇಗದಿಂದ ಚಲಾಯಿಸಿದ ಪರಿಣಾಮ ಬೈಕ್, ಶೋರೂಮಿನ ಎದುರುಗಡೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ ಕಾರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಸವಾರ ಸ್ವಸ್ತಿಕ್ ಬೈಕ್ ಸಮೇತ ಬಿದ್ದು ಗಂಭೀರವಾಗಿ ಗಾಯಗೊಂಡರು. ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಾಸರಗೋಡು: ಟಿಪ್ಪರ್ ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿರುವ ಅಪಘಾತಕ್ಕೆ ಬೈಕ್ ಸವಾರ ಮಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿಯಾಗಿರುವ ಘಟನೆ ಬಂದ್ಯೋಡು ಸಮೀಪದ ಮುಟ್ಟಂ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಸಹಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಉಪ್ಪಳ ನಯಾಬಜಾ‌ರ್ ನಾಟೇಕಲ್ ನಿವಾಸಿ ಮುಹಮ್ಮದ್ ಮಿಸ್ಸಾಹ್ (21) ಮೃತಪಟ್ಟ ಯುವಕ. ಸಹಸವಾರ ಮಿಸ್ಲಾಬ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಸ್ಸಾಹ್ ಬೈಕಿನಲ್ಲಿ ಕಾಸರಗೋಡಿಗೆ ತೆರಳಿ ಮಿಸ್ಲಾಬ್ ನೊಂದಿಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇವರಿಬ್ಬರೂ ಮಂಗಳೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು. ಈ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧರ್ಮಸ್ಥಳ:ಶಿವರಾತ್ರಿಯಂದೇ ಶ್ರೀಕ್ಷೇತ್ರ ಧರ್ಮಸ್ಥಳದ ಆನೆ ಶಿವೈಕ್ಯವಾಗಿದೆ.ಲತಾ ಹೆಸರಿನ ಆನೆಯು ಶಿವರಾತ್ರಿಯಂದು ಮೃತಪಟ್ಟಿದೆ.60ವರ್ಷ ಪ್ರಾಯದ ಲತಾ ಕಳೆದ 50ವರ್ಷಗಳಿಂದ ಶ್ರೀಕ್ಷೇತ್ರಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಇಂದುಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ. ಲತಾಆನೆಯನ್ನು ಕಳೆದುಕೊಂಡಿರುವ ಶಿವಾನಿ ಹಾಗೂ ಲಕ್ಷ್ಮಿ, ಇಬ್ಬರುಮಂಕಾಗಿದ್ದಾರೆ. ಲತಾ ಅನೆಯ ಅಂತ್ಯ ಸಂಸ್ಕಾರ ಇಂದು ಸಂಜೆವೇಳೆಗೆ ನಡೆಯುವ ಸಾಧ್ಯತೆ ಇದೆ. ಆನೆ ಸಾವಿನ ಸುದ್ದಿ ತಿಳಿದುಸುತ್ತಮುತ್ತಲ ಭಕ್ತರು ದೇವಸ್ಥಾನದ ಬಳಿ ಆಗಮಿಸುತ್ತಿದ್ದಾರೆ.

Read More

ಬೆಳ್ತಂಗಡಿ ಸಮೀಪ ವೇಶ್ಯಾವಾಟಿಕೆ ನಡೆಸುತ್ತಿರುವ ಅನುಮಾನದ ಮೇರೆಗೆ ಉಜಿರೆ ಹಳೆ ಪೇಟೆ ಸಮೀಪವಿರುವ ಎರಡು ಲಾಡ್ಜ್ಗಳಿಗೆ ದಾಳಿ ಮಾಡಿರುವ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಮಹಿಳೆಯನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ‌ ಪೊಲೀಸರು ಬಂಧಿಸಿದ ವ್ಯಕ್ತಿಗಳು ತುಮಕೂರು ಅರಳೇ ಪೇಟೆಯ ರೇಣುಕಾ ಪ್ರಸಾದ್‌ (29), ಕಾರ್ಕಳ ನಿಟ್ಟೆ ಗ್ರಾಮದ ರಾಜೇಶ್‌ ಮೋಹನ್‌ ನಾಯರ್‌ (34), ಕಾರ್ಕಳ ನೂರಾಲ್‌ ಬೆಟ್ಟು ಗ್ರಾಮದ ನಿತಿನ್‌ ಕುಮಾರ್‌(28) ಎಂದು ಗುರುತಿಸಲ್ಪಟ್ಟಿದ್ದಾರೆ. ವೇಶ್ಯಾವಾಟಿಕೆ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್‌ ನಿರೀಕ್ಷಕರಾದ ಬಿ.ಜಿ. ಸುಬ್ಟಾಪೂರ ಮಠ್ ಅವರು ಸಿಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಿರತರಾಗಿರುವುದು ಕಂಡುಬಂದಿದೆ. ಸ್ಥಳದಲ್ಲಿದ್ದ ಮಹಿಳೆಯನ್ನು ಮಹಿಳಾ ಸಿಬಂದಿಗಳ ಸಮಕ್ಷಮದಲ್ಲಿ ರಕ್ಷಿಸಿ ಆರೋಪಿಗಳ ವಿರುದ್ಧ ಹಾಗೂ ದಾಳಿಯ ವೇಳೆ ಓರ್ವ ಪರಾರಿಯಾದ ಆರೋಪಿಯ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ಪೊಲೀಸರು ಆರೋಪಿಗಳ ವಿಚಾರಣೆ ನಡೆಸಿದ್ದಾರೆ.

Read More