ಮಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಜಮೀನಿನ ನಿರಾಕ್ಷೇಪಣಾ ಪತ್ರಕ್ಕೆ ಸಂಬಂಧಿಸಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ತಹಶೀಲ್ದಾರ್ ಎಸ್.ಬಿ. ಕೂಡಲಗಿ ವಿರುದ್ಧ ಆ.28ರಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 09/2025ರಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪುತ್ತೂರು ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುನೀಲ್ ಕುಮಾರ್ ಎಸ್.ಎಂ ಹಾಗೂ ತಹಶೀಲ್ದಾರ್ ಎಸ್.ಬಿ. ಕೂಡಲಗಿ ವಿರುದ್ಧ ಭ್ರಷ್ಟಾಚಾರ ನಿರ್ಬಂಧಕ ಕಾಯ್ದೆ, 1988 (ತಿದ್ದುಪಡಿ ಕಾಯ್ದೆ 2018) ಅಡಿಯಲ್ಲಿ ಆರೋಪ ದಾಖಲಿಸಲಾಗಿತ್ತು. ಟ್ರ್ಯಾಪ್ ಕಾರ್ಯಾಚರಣೆಯ ವೇಳೆ ಪ್ರಥಮ ದರ್ಜೆ ಸಹಾಯಕ ಸುನಿಲ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಆದರೆ ತಹಶೀಲ್ದಾರ್ ಕೂಡಲಗಿ ತಲೆಮರೆಸಿಕೊಂಡಿದ್ದರು ಬಳಿಕ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ನ್ಯಾಯಾಲಯವು ಅವರ ಜಾಮೀನು…
Author: main-admin
ಚಿಕ್ಕಮಗಳೂರು ಜಿಲ್ಲೆಯ ಕಳಸ ಪೊಲೀಸ್ ಠಾಣೆಯಲ್ಲಿ ಪಿಎಸ್ಸೈ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಪತ್ನಿಗೆ ಕಿರುಕುಳ ನೀಡಿದ್ದ ಆರೋಪದಲ್ಲಿ ಕರ್ತವ್ಯದಿಂದ ಅಮಾನತುಗೊಂಡಿದ್ದ ಪಿಎಸ್ಸೈ ಪಿ.ಡಿ.ನಿತ್ಯಾನಂದಗೌಡ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. 2005-06ನೇ ಸಾಲಿನಲ್ಲಿ ಪಿಎಸ್ಸೈ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಿತ್ಯಾನಂದ ಗೌಡ ಅವರು ಪರೀಕ್ಷೆಗೂ ಮುನ್ನ ಪ್ರಶ್ನೆ ಪತ್ರಿಕೆ ಪಡೆದು ಅಕ್ರಮವಾಗಿ ಸರಕಾರಿ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ. ಈ ಸಂಬ0ಧ ತನಿಖೆ ನಡೆಸಿ ಆರೋಪಿಯನ್ನು ಸೇವೆಯಿಂದ ವಜಾ ಮಾಡುವುದರೊಂದಿಗೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಪಂ ಕೆಡಿಪಿ ಸದಸ್ಯ, ಕಳಸ ಬ್ಲಾಕ್ ಕಾಂಗ್ರೆಸ್ ಮುಖಂಡ ಮುಹಮ್ಮದ್ ರಫೀಕ್ ಎಂಬವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಎಸ್ಪಿಗೆ ಕಚೇರಿಗೆ ಆಗಮಿಸಿ ದೂರು ನೀಡಿರುವ ರಫೀಕ್, ನಿತ್ಯಾನಂದಗೌಡ ಅವರು ಪಿಎಸ್ಸೈ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಪಶ್ನೆ ಪತ್ರಿಕೆ ಪಡೆದು ಪರೀಕ್ಷೆ ಬರೆದು ಸರಕಾರಿ ಹುದ್ದೆ ಗಿಟ್ಟಿಸಿಕೊಂಡಿರುವುದು, ಭ್ರಷ್ಟಾಚಾರ ನಡೆಸಿರುವುದು, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಅವರ ಪತ್ನಿ ಈ ಹಿಂದೆಯೇ…
ಮಂಗಳೂರು: ರಸ್ತೆ ಸಂಚಾರಕ್ಕೆ ತಡೆಯೊಡ್ಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಆಟೊ ರಿಕ್ಷಾ ಚಾಲಕನಿಗೆ ದಂಡ ವಿಧಿಸಿದ ಘಟನೆ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.ಸೆ.24ರಂದು ರಾತ್ರಿ 9:30ಕ್ಕೆ ಆಟೊ ರಿಕ್ಷಾ ಚಾಲಕ ಶೈಲೇಶ್ (28) ಎಂಬಾತ ಕುದ್ರೋಳಿ ದೇವಸ್ಥಾನದ ಮುಖ್ಯ ದ್ವಾರದ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ ಈ ಬಗ್ಗೆ ಪೊಲೀಸ್ ಸಿಬ್ಬಂದಿ ಕಾನೂನು ಉಲ್ಲಂಘನೆ ನೋಟಿಸ್ ದಾಖಲು ಮಾಡಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶೈಲೇಶ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದ. ಬಳಿಕ ಆತ ಕ್ಷಮೆ ಯಾಚಿಸಿದ್ದಾನೆ. ಚಾಲಕನ ವಿರುದ್ದ ಐಎಂವಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಸಿವಿಲ್ ವ್ಯಾಜ್ಯಗಳಲ್ಲಿ ಮೊದಲಿಂದಲೂ ಪೊಲೀಸರು ಸುಖಾ ಸುಮ್ನೆ ತಲೆ ಹಾಕುತ್ತಿದ್ದಾರೆ ಎನ್ನುವ ಆರೋಪ ಇದ್ದೇ, ತಮ್ಮ ವ್ಯಾಪ್ತಿಯನ್ನು ಹಲವು ಸಾರಿ ಪೊಲೀಸರು ಸಿವಿಲ್ ವ್ಯಾಜ್ಯಗಳಲ್ಲಿ ತಲೆ ಹಾಕಿರುವ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ. ಇದಲ್ಲದೇ ಸುಪ್ರಿಂಕೋರ್ಟ್ ಮತ್ತು ಹೈಕೋರ್ಟ್‌ಗಳು ಸಿವಿಲ್ ವ್ಯಾಜ್ಯಗಳಲ್ಲಿ ಪೋಲಿಸರ ಕೆಲಸ ಮತ್ತು ಕಾರ್ಯ ವ್ಯಾಪ್ತಿಗಳ ಬಗ್ಗೆ ತಿಳಿಸುತ್ತಲೇ ಬಂದಿದ್ದು, ಯಾವುದೇ ಕಾರಣಕ್ಕೂ ಕೂಡ ಸಿವಿಲ್ ವ್ಯಾಜ್ಯದಲ್ಲಿ ಪೊಲೀಸರು ತಲೆ ಹಾಕುವ ಹಾಗೇ ಇಲ್ಲ ಅಂತ ಖಡಕ್ ಆಗಿ ಹೇಳಿದೆ. ಆದರೆ ಸುಪ್ರಿಂಕೋರ್ಟ್ ಮತ್ತು ಹೈಕೋರ್ಟ್ ಏನು ಹೇಳಿದರು ಕೂಡ ಪೊಲೀಸರು ಸಿವಿಲ್ ವ್ಯಾಜ್ಯಗಳಲ್ಲಿ ತಲೆ ಹಾಕುತ್ತಾರೆ ಎನ್ನಲಾಗುತ್ತಿದೆ. ಇದಲ್ಲದೇ ನ್ಯಾಯಾಲಗಳು ಕೂಡ ಅಂತಹ ಪೊಲೀಸ್ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಂಡಿದೆ. ಕೂಡ ಈಗ ಮತ್ತೆ ಪೊಲೀಸ್ ಮಹಾ ನಿರ್ದೇಶಕ ಸಲೀಂ ಅವರು ತಮ್ಮ ಇಲಾಖೆ ಅಧೀನದ ಪೊಲೀಸರಿಗೆ ತಿಳಿ ಹೇಳುವ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು ಅದರ ವಿವರ ಈ ಕೆಳಕಂಡತಿದೆ. CRM-3/105/2018, Dated 14.11.2018.…
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ತನಿಖೆ ಮತ್ತಷ್ಟು ಚುರುಕುಗೊಳಿಸಿದ್ದು, ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಗೃಹ ಸಚಿವರ ಕಚೇರಿಯಲ್ಲಿ ಜಿ ಪರಮೇಶ್ವರ್ ಅವರನ್ನು SIT ಮುಖ್ಯಸ್ಥ ಪ್ರಣಬ್ ಮೋಹಂತಿ ಭೇಟಿಯಾಗಿ ಚರ್ಚಿಸಿದ್ದಾರೆ. ಇನ್ನು ಸಿಐಡಿ ಮುಖ್ಯಸ್ಥರ ನೇಮಕಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು ಎಸ್ಐಟಿ, ಮುಖ್ಯಸ್ಥ ಪ್ರಣಬ್ ಮೊಹಂತಿಯವರನ್ನೇ ನೇಮಕ ಮಾಡುವ ಸಾಧ್ಯತೆ ಇದೆ. ಹೌದು ಸಿಐಡಿ ಮುಖ್ಯಸ್ಥರ ಹುದ್ದೆಗೆ ನೇಮಕಕ್ಕೆ ರಾಜ್ಯ ಸರ್ಕಾರ ಇದೀಗ ತಯಾರಿ ಮಾಡಿಕೊಂಡಿದ್ದು, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಮಾಡುವ ಸಾಧ್ಯತೆ ಇದೆ ಎಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಲಾಗಿದ್ದು ಸಿಎಂ ಸಿದ್ದರಾಮಯ್ಯ ಕರೆಯ ಮೇರೆಗೆ ಪ್ರಣವ್ ಮೋಹಂತಿ ಭೇಟಿಯಾಗಿದ್ದಾರೆ. ವಿಧಾನಸೌಧದಲ್ಲಿ ಗೃಹ ಸಚಿವರನ್ನು ಭೇಟಿಯಾಗಿದ್ದು ಸರ್ಕಾರ ಇದೀಗ ಒಲವು ತೋರಿದೆ ಇಂದು ಈ ಕುರಿತು ಅಧಿಕೃತ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.
ಉಡುಪಿ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು, ಯುವ ಸಮುದಾಯವನ್ನೇ ಗುರಿಯಾಗಿರಿಸಿಕೊಂಡು ಸಕ್ರಿಯವಾಗಿರುವ ಡ್ರಗ್ಸ್ ಜಾಲವನ್ನು ಮಟ್ಟ ಹಾಕಲು ಉಡುಪಿ ಜಿಲ್ಲಾ ಪೊಲೀಸ್ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ ಸಾರ್ವಜನಿಕರು ಈ ದಂಧೆಯ ಬಗ್ಗೆ ಅನಾಮಧೇಯವಾಗಿ ಮಾಹಿತಿ ನೀಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಕ್ಯೂಆರ್ ಕೋಡ್‌ನ್ನು ರಚಿಸಿದೆ. ಅಕ್ರಮ ಡ್ರಗ್ಸ್ ಹಾಗೂ ಸಿಗರೇಟ್ ಮಾರಾಟಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಅನಾಮಧೇಯರಾಗಿ ಕ್ಯೂಆರ್ ಕೋಡ್‌ನ್ನು ಸ್ಕ್ಯಾನ್ ಮಾಡಿ ಈ ಮೂಲಕ ಮಾಹಿತಿ ನೀಡಬಹುದಾಗಿದೆ. ಸ್ಕ್ಯಾನ್ ಮಾಡಿದಾಗ ಒಟ್ಟು 15 ಹಂತ ಗಳು ಬರಲಿದ್ದು, ಅದನ್ನು ಸಾರ್ವಜನಿಕರು ಅನುಸರಿಸಿ ಆಯ್ಕೆ ಮಾಡಿ ವರದಿ ಮಾಡಬೇಕು. ಆ ಮೂಲಕ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಬಹುದು. ಮೊದಲ ಹಂತದಲ್ಲಿ ನೀವು ಏನು ವರದಿ ಮಾಡುತ್ತಿದ್ದೀರಿ ಎಂಬುದಕ್ಕೆ ಸೂಕ್ತವಾಗಿರುವುದನ್ನು ಆಯ್ಕೆ ಮಾಡಬೇಕು. ಮುಂದಿನ ವಿವಿಧ ಹಂತಗಳಲ್ಲಿ, ಅಕ್ರಮ ಮಾದಕ ವಸ್ತುಗಳ ಬಳಕೆ ಎಲ್ಲಿ ನಡೆಯುತ್ತಿದೆ, ಕಾಲೇಜು, ಸ್ನಾತಕೋತ್ತರ ಪದವಿ ಸಂಸ್ಥೆಯ ಹೆಸರು ಹಾಗೂ ಅಲ್ಲಿ ಏನು ನಡೆಯುತ್ತಿದೆ ಎಂಬುದರ ವಿವರ ನೀಡಬಹುದು. ಮಾದಕ…
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 6 ಮಂದಿ ಡಿವೈಎಸ್‌ಪಿ (ಸಿಎಲ್) ರವರುಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ/ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ. ವರ್ಗಾವಣೆಗೊಂಡು ಡಿವೈಎಸ್ ಪಿ (ಸಿವಿಲ್) ಅಧಿಕಾರಿಗಳು 1 ಮ್ಯಾಥೀವ್ ಥಾಮಸ್ ಕೆ.ಟಿ 2 ರಾಜಣ್ಣ ಟಿ.ಬಿ 3 ಸ್ನೇಹರಾಜ್ ಎನ್ 4 ಸಿ.ಕೆ. ಅಶ್ವಥನಾರಾಯಣ 5 ಲಕ್ಷ್ಮಯ್ಯ.ವಿ 6 ಪದ್ಮಶ್ರೀ ಗುಂಜೀಕರ್
ಮಂಗಳೂರು : ಸ್ಕ್ಯಾನಿಂಗ್ ಸೆಂಟರ್‌ಗಳು ರೋಗಿಗಳಿಂದ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಪಡೆದು ನಂತರವೇ ಸ್ಕ್ಯಾನ್ ಮಾಡಬೇಕು, ಇಲ್ಲದಿದ್ದರೆ ಅಂತಹ ಕೇಂದ್ರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ. ಎಚ್ ಆರ್ ತಿಮ್ಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ನಡೆದ ಪ್ರಸವಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರ (ನಿರ್ಬಂಧ ಕಾಯ್ದೆ), 1994 ರ ಕುರಿತ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಗುರುತಿನ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಬೇಕು. ಅಧಿಕಾರಿಗಳು ಸ್ಕ್ಯಾನಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಾರೆ. ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿನ ವರದಿಗಳಿಗೆ ಸಿಬ್ಬಂದಿ ಸದಸ್ಯರಿಂದ ಸಹಿ ಮಾಡಿಸದೇ, ಆಯಾ ತಜ್ಞ ವೈದ್ಯರಿಂದ ಮಾತ್ರ ಸಹಿ ಮಾಡಿಸಬೇಕು” ಎಂದು ಅವರು ಹೇಳಿದರು.ಪ್ರಸ್ತುತ ಜಿಲ್ಲೆಯಲ್ಲಿ 189 ಸ್ಕ್ಯಾನಿಂಗ್ ಸೆಂಟರ್‌ಗಳಿವೆ. ಅದರಲ್ಲಿ 12 ಸರ್ಕಾರಿ ಸ್ವಾಮ್ಯದ ಮತ್ತು 177 ಖಾಸಗಿ ಕೇಂದ್ರಗಳಿವೆ. ವಿಶೇಷ ತಪಾಸಣಾ ತಂಡವನ್ನು ರಚಿಸಲಾಗಿದ್ದು, 2025 ರ ಏಪ್ರಿಲ್‌ನಿಂದ ಆಗಸ್ಟ್ ವರೆಗೆ 274 ಖಾಸಗಿ ಸ್ಕ್ಯಾನಿಂಗ್ ಕೇಂದ್ರಗಳು…
ಮಂಗಳೂರು: ನಗರದ ಬಿಜೈ ಕಾಪಿಕಾಡ್ ಬಳಿಯ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಅವಧಿ ಮೀರಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಾರ್ ಮಾಲಕ, ಸಿಬ್ಬಂದಿ ಮತ್ತು ಗ್ರಾಹಕರ ವಿರುದ್ಧ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲಕ, ಮ್ಯಾನೇಜರ್ ಪ್ರವೀಣ್, ಸಿಬ್ಬಂದಿ ಅನ್ವಿತ್, ಗ್ರಾಹಕರಾಗಿದ್ದ ಪ್ರೀತೇಶ್, ಪರೇಶ್ ಮತ್ತು ಇನ್ನೊಬ್ಬ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉರ್ವ ಠಾಣೆಯ ಎಸ್ಸೈ ಗುರಪ್ಪಕಾಂತಿ ಪೊಲೀಸ್ ಸಿಬ್ಬಂದಿಯ ಜತೆ ಸೆ.21ರಂದು ರಾತ್ರಿ 12:10ಕ್ಕೆ ಕರ್ತವ್ಯದಲ್ಲಿ ರುವಾಗ ಬಿಜೈ ಕಾಪಿಕಾಡ್ ಬಳಿಯ ಬಾರ್ ಆ್ಯಂಡ್ ರೆಸ್ಟೋರೆಂಟ್ ಒಂದರ ಮುಖ್ಯದ್ವಾರ ಮುಚ್ಚಿದ್ದರೂ ಒಳಗಡೆ ಗ್ರಾಹಕರು ಇರುವುದನ್ನು ಕಂಡು ಪ್ರಶ್ನಿಸಿದ್ದಾರೆ. ಬಾಗಿಲು ತೆರೆಯುವಂತೆ ಸಿಬ್ಬಂದಿಗೆ ಸೂಚಿಸಿದ್ದಾರೆ. ಆದರೆ ಬಾಗಿಲು ತೆರೆದಿಲ್ಲ. ರಾತ್ರಿ 12:55ಕ್ಕೆ ಬಾರ್ ಮ್ಯಾನೇಜರ್ ಪ್ರವೀಣ್ ಕರೆ ಮಾಡಿದ ಬಳಿಕ ಒಳಗಡೆ ಇದ್ದ ಸಿಬಂದಿ ಅನ್ವಿತ್ ಎಂಬಾತ ಬಾಗಿಲು ತೆರೆದಿದ್ದಾನೆ. ಯಾಕೆ ಸಮಯಕ್ಕೆ…
ಬಂಟ್ವಾಳ:ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ನಾರಾಯಣ (42) ಬಂಧಿತ ಆರೋಪಿ. ದಿನಾಂಕ:22-09-2025 ರಂದು ದೂರುದಾರರು ಮನೆಯಿಂದ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಂಟ್ವಾಳ ತಾಲೂಕು ಎಂಬ ವ್ಯಕ್ತಿಯು ಲೈಂಗಿಕ ಕಿರುಕುಳ ನೀಡಿದ ದೂರಿಗೆ ಸಂಬಂದಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದಿನಾಂಕ 22-09-2025 ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.









