ರಾಜಧಾನಿ ಬೆಂಗಳೂರಿನ ಪ್ರಮುಖ ನಕ್ಷತ್ರ (ಸ್ಟಾರ್) ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ದಿಢೀರ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. “ಹೋಟೆಲ್ ಎಷ್ಟೇ ದೊಡ್ಡದಿದ್ದರೂ ಅಥವಾ ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಕಾನೂನು ಎಲ್ಲರಿಗೂ ಒಂದೇ. ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡಿದರೆ ಉದ್ಯಮ ಪರವಾನಗಿ ರದ್ದುಪಡಿಸಿ ಜೈಲಿಗೆ ಕಳುಹಿಸುವುದು ಗ್ಯಾರಂಟಿ” ಎಂದು ಅವರು ಎಚ್ಚರಿಸಿದ್ದಾರೆ. ದಾಳಿಯ ಹಿನ್ನೆಲೆ ಮತ್ತು ಕಂಡುಬಂದ ಲೋಪಗಳು ಆಹಾರ ಸುರಕ್ಷತಾ ಇಲಾಖೆಯ ಸುಮಾರು 30 ಜಂಟಿ ಅಧಿಕಾರಿಗಳ ತಂಡಗಳು ನಗರದ 3-ಸ್ಟಾರ್, 5-ಸ್ಟಾರ್ ಸೇರಿದಂತೆ ಪ್ರಮುಖ ಪ್ರಸಿದ್ಧ ಹೋಟೆಲ್‌ಗಳಲ್ಲಿ ಸುದೀರ್ಘ ತಪಾಸಣೆ ನಡೆಸಿವೆ. ಈ ವೇಳೆ ಹಲವಾರು ಪ್ರತಿಷ್ಠಿತ ಹೋಟೆಲ್‌ಗಳ ಅಡುಗೆ ಮನೆಗಳಲ್ಲಿ ಅವಧಿ ಮುಗಿದ ಹಾಲು, ಕಳಪೆ ಗುಣಮಟ್ಟದ ಆಹಾರ ಧಾನ್ಯಗಳು, ಕೊಳೆತ ತರಕಾರಿಗಳು, ವಿದೇಶದಿಂದ ಆಮದು ಮಾಡಿಕೊಂಡು ಸಂಗ್ರಹಿಸಿಡಲಾಗಿದ್ದ ಹಳೆಯ ಮಾಂಸ ಹಾಗೂ ಕೃತಕ ರಾಸಾಯನಿಕ ಬಣ್ಣಗಳು ಪತ್ತೆಯಾಗಿವೆ. ಸಚಿವ…
Author: main-admin
ಬೆಂಗಳೂರಿನ ಪ್ರತಿಷ್ಠಿತ 5-ಸ್ಟಾರ್ ಮತ್ತು 3-ಸ್ಟಾರ್ ಹೋಟೆಲ್‌ಗಳು ತಮ್ಮ ಗ್ರಾಹಕರಿಗೆ ಅವಧಿ ಮೀರಿದ ಹಾಗೂ ನೈರ್ಮಲ್ಯ ರಹಿತ ಆಹಾರ ಪದಾರ್ಥಗಳನ್ನು ನೀಡುತ್ತಿರುವುದು ಆಹಾರ ಸುರಕ್ಷತಾ ಇಲಾಖೆಯ ದಾಳಿಯಿಂದ ಬಹಿರಂಗವಾಗಿದೆ. ಆಗಸ್ಟ್ 7ರಂದು ರಾಜ್ಯ ಆಹಾರ ಸುರಕ್ಷತಾ ವಿಭಾಗ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಬಿಬಿಎಂಪಿ ವ್ಯಾಪ್ತಿಯ ಜಂಟಿ ಸಹಯೋಗದೊಂದಿಗೆ ನಗರದಾದ್ಯಂತ ಈ ದಿಢೀರ್ ತಪಾಸಣೆ ನಡೆಸಿದೆ. ಬೆಂಗಳೂರಿನ ಬೇರೆ ಬೇರೆ ಭಾಗಗಳಲ್ಲಿ ಒಟ್ಟು 30 ವಿಶೇಷ ತಂಡಗಳನ್ನು ರಚಿಸಿ ದಾಳಿ ನಡೆಸಲಾಗಿದ್ದು, ನಗರದ ಪ್ರಮುಖ 26 ಸ್ಟಾರ್ ಹೋಟೆಲ್‌ಗಳ ಮೇಲೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ವೇಳೆ ಇಲಾಖೆಯ ಅಧಿಕಾರಿಗಳು ಒಟ್ಟು 35 ವಿಭಿನ್ನ ಆಹಾರ ಮಾದರಿಗಳನ್ನು (Food Samples) ವಶಕ್ಕೆ ಪಡೆದು, ಹೆಚ್ಚಿನ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ಕಾನೂನು ಉಲ್ಲಂಘನೆ ಮತ್ತು ಲೋಪಗಳು: ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ 2006 ಹಾಗೂ 2011ರ ಪರವಾನಗಿ ಮತ್ತು ನೋಂದಣಿ ನಿಯಮಾವಳಿಗಳ ಅಡಿಯಲ್ಲಿ ಈ ಪರಿಶೀಲನೆ ನೆರವೇರಿತು. ಕಾರ್ಯಾಚರಣೆಯ ಸಂದರ್ಭದಲ್ಲಿ…
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ಶುಕ್ರವಾರ ಗುಂಡಿಕ್ಕೆ ಹತ್ಯೆಗೈದಿರುವುದು ಉತ್ತರ ಭಾರತದ ಸುಪಾರಿ ಕಿಲ್ಲರ್ ಗಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹಣಕಾಸಿನ ವಿಚಾರವಾಗಿ ಡೇವಿಡ್ ಡಿಸೋಜ ಅವರನ್ನು ಹತ್ಯೆಗೈಯ್ಯಲು ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರದ ಶಾರ್ಪ್ ಶೂಟರ್ ಗಳಿಗೆ ಸುಪಾರಿ ನೀಡಲಾಗಿತ್ತು. ಅದರಂತೆ ಮೂವರ ತಂಡ ಮುದರಂಗಡಿಗೆ ಆಗಮಿಸಿ ಈ ಕೃತ್ಯ ಎಸಗಿ ಪರಾರಿಯಾಗಲು ಯತ್ನಿಸಿದೆ.ಈ ಕುರಿತು ಮಿಂಚಿನ ಕಾರ್ಯಾಚರಣೆ ನಡೆಸಿದ ಉಡುಪಿ ಪೊಲೀಸರು ಆರೋಪಿಗಳನ್ನು ಉಡುಪಿ ಜಿಲ್ಲೆಯ ಗಡಿ ಪ್ರದೇಶವಾದ ಶಿರೂರು ಸಮೀಪ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಲ್ಲಿ ಒಬ್ಬಾತನನ್ನು ರಾಜು ಎಂದು ಗುರುತಿಸಲಾಗಿದ್ದು ಉಳಿದವರು ಹಲವು ರೀತಿಯ ನಕಲಿ ಗುರುತಿನ ಚೀಟಿ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಇವರೆಲ್ಲರ ಹೆಸರು ಇನ್ನಷ್ಟೇ ಸ್ಪಷ್ಟವಾಗಿ ತಿಳಿದು ಬರಬೇಕಾಗಿದೆ.ಇದೀಗ ಪೊಲೀಸರು ಹತ್ಯೆಗೆ ಸುಪಾರಿ ನೀಡಿದ ಪ್ರಮುಖ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 76 ವರ್ಷದ ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಪ್ರಕರಣವನ್ನು ಮಂಗಳೂರು ನಗರ ಪೊಲೀಸರು ಕೇವಲ ಮೂರು ದಿನಗಳಲ್ಲೇ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ದೋಚಲಾಗಿದ್ದ ಸಂಪೂರ್ಣ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಬಾಲ ಸುಬ್ರಮಣ್ಯ (49), ಉರ್ವ ಮಟದಕಣಿ ನಿವಾಸಿ ಹಾಗೂ ಶ್ಯಾಮ್ ಕುಮಾರ್ (33), ತೊಕ್ಕೊಟ್ಟು ಮೂಲದ, ಪ್ರಸ್ತುತ ಮಣ್ಣಗುಡ್ಡ ನಿವಾಸಿ ಹಾಗೂ ಆಟೋರಿಕ್ಷಾ ಮಾಲೀಕ ಎಂದು ಗುರುತಿಸಲಾಗಿದೆ. ಆಗಸ್ಟ್ 3ರಂದು ಮಧ್ಯಾಹ್ನ ಸುಮಾರು 1.15ರ ವೇಳೆಗೆ ವೃದ್ಧ ಮಹಿಳೆ ತಮ್ಮ ಮನೆಯಲ್ಲಿದ್ದ ವೇಳೆ, ಮನೆ ಬಾಗಿಲು ತಟ್ಟಿದ ಶಬ್ದ ಕೇಳಿ ಬಾಗಿಲು ತೆರೆದಿದ್ದಾರೆ. ಈ ವೇಳೆ ಮನೆ ಬಾಡಿಗೆ ಕುರಿತು ವಿಚಾರಿಸುವ ನೆಪದಲ್ಲಿ ಬಂದಿದ್ದ ಇಬ್ಬರು ಆರೋಪಿಗಳು ಏಕಾಏಕಿ ಬಾಗಿಲನ್ನು ಬಲವಂತವಾಗಿ ತಳ್ಳಿ ಮನೆಯೊಳಗೆ ನುಗ್ಗಿ, ವೃದ್ಧೆಯನ್ನು ಕೆಳಕ್ಕೆ ತಳ್ಳಿ ಹಲ್ಲೆ ನಡೆಸಿದ್ದಾರೆ. ಬಳಿಕ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ…
ಮೂಡುಬಿದಿರೆ: ದೇಶದ ಅತಿದೊಡ್ಡ ಉದ್ಯೋಗ ಮೇಳವೆಂದು ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ–2026’ರ 16ನೇ ಆವೃತ್ತಿಗೆ ಶುಕ್ರವಾರ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ಯುವ ಉದ್ಯೋಗಾಕಾಂಕ್ಷಿಗಳು ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು, ವೃತ್ತಿಪರ ಸಂಪರ್ಕ ಜಾಲವನ್ನು ಬೆಳೆಸಿಕೊಳ್ಳಬೇಕು ಹಾಗೂ ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣವೊಂದೇ ಇಂದಿನ ವೇಗವಾಗಿ ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಕಾಗುವುದಿಲ್ಲ. ಶಿಕ್ಷಣದ ಜೊತೆಗೆ ಕೌಶಲ್ಯವೂ ಅತ್ಯಗತ್ಯವಾಗಿದ್ದು, ಉದ್ಯೋಗ ಕ್ಷೇತ್ರದಲ್ಲಿ ಪ್ರಸ್ತುತವಾಗಿರಲು ಕೌಶಲ್ಯಗಳನ್ನು ನಿರಂತರವಾಗಿ ಉನ್ನತೀಕರಿಸಿಕೊಳ್ಳಬೇಕು. “ಶಿಕ್ಷಣ ಪಾಸ್‌ಪೋರ್ಟ್ನಂತಿದ್ದರೆ, ಕೌಶಲ್ಯ ವೀಸಾದಂತೆ” ಎಂದು ರೂಪಕದ ಮೂಲಕ ವಿವರಿಸಿದ ಅವರು, ಯುವಜನರು ಪ್ರಾಯೋಗಿಕ ಹಾಗೂ ಉದ್ಯಮ ಕ್ಷೇತ್ರಕ್ಕೆ ಅಗತ್ಯವಾದ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳನ್ನು ಕೇವಲ ಮನರಂಜನೆಗಾಗಿ ಬಳಸದೆ, ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು,…
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ರಾಜು ಎಂಬಾತನಿಗೆ ಪೊಲೀಸರು ಗುಂಡೇಟು ಹಾರಿಸಿರುವ ಘಟನೆ ಉಡುಪಿ ಜಿಲ್ಲೆಯ ಗಡಿಭಾಗದ ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ನಡೆದಿದೆ. ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಆರೋಪಿಯನ್ನು ಕಾಪು ಪಿಎಸ್ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ತಂಡವು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪ ಒತ್ತಿನೆಣೆ ಪೋಲಿಸರಿಗೆ ಹಲ್ಲೆ ನಡೆಸಿ ಅರೋಪಿ ರಾಜು ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಕಾಪು ಪಿಎಸ್ಐ ತೇಜಸ್ವಿಯವರು ತಮ್ಮ ಸರ್ವೀಸ್ ಪಿಸ್ತೂಲಿನಿಂದ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ರಾಜುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ವೇಳೆ ಎಸ್ಐ ತೇಜಸ್ವಿ ಅವರಿಗೂ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.…
ಪಡುಬಿದ್ರಿ: ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರರಾದ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ವಾಹನದಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ. ಗುಂಡಿನ ದಾಳಿಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಮಂಗಳೂರು: ಮಾದಕವಸ್ತು ಸೇವನೆ ಮಾಡಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಮೂಲದ 6 ಮಂದಿ ಯುವಕರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರದ ಕುಪ್‌ವಾರ ಜಿಲ್ಲೆಯ ನಿವಾಸಿಗಳಾದ ಜುನೈದ್ ಅಹ್ಮದ್ ಗುಜ್ಜರ್ (19), ಅಬೀದ್ ಗೋಜಾರ್ ಕೋಂಶಿ (21), ಸಜದ್ ಅಹ್ಮದ್ ಕಟಾರಿಯಾ (23), ಮೋಕ್ ಮಲ್ಲಿ ಕೋಂಶಿ (19), ಇಸ್ತಾಯಾಕ್ ಅಹಖಾನ್ (21) ಮತ್ತು ಜಹಾನ್ ಜರ್ ಅಹ್ಮದ್ ತಾಸ್ (29) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಠಾಣಾ ಸಿಬ್ಬಂದಿ ಶೀತಲ್ ಅಲಗೂರು ಗಸ್ತು ನಿರತರಾಗಿದ್ದ ಬಂದರು ಹೊಟೇಲ್ ಬಳಿ ಆರು ಮಂದಿ ಯುವಕರು ಮಾದಕ ವಸ್ತು ಸೇವನೆ ಮಾಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಯಿತು. ವೈದ್ಯಕೀಯ ಪರೀಕ್ಷೆಯಲ್ಲಿ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಈ ಕುರಿತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಗುರುವಾರ ಸಂಜೆ ಸುಮಾರು 6.30 ಗಂಟೆಗೆ ಕಲ್ಲಡ್ಕ ಕಡೆಯಿಂದ ಲೊರೆಟ್ಟೊ ಕಡೆಗೆ ತೆರಳುತ್ತಿದ್ದ KA-19-AF-8073 ನೋಂದಣಿಯ ಟಿಪ್ಪರ್ ಲಾರಿಯನ್ನು ಪಲ್ಲಮಜಲು ನಿವಾಸಿ ಸಲ್ಮಾನ್ ಫಾರುಕ್ (33) ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು, ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ KA-70-H-5059 ನೋಂದಣಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸವಾರ ಪಾಣೆಮಂಗಳೂರು ಸಮೀಪದ ಬೋರುಗುಡ್ಡೆ ದಯಾನಂದ ಹಾಗೂ ಹಿಂಬದಿಯಲ್ಲಿ ಪ್ರಯಾಣಿಸುತ್ತಿದ್ದ ನಾಯಿಲ ನಿವಾಸಿ ಯಶ್ವಂತ್ ಕುಲಾಲ್ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರ ನೆರವಿನಿಂದ ಇಬ್ಬರನ್ನೂ ತಕ್ಷಣ ಮಂಗಳೂರು ಜಿಲ್ಲಾ ಸರ್ಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಹಸವಾರ ಯಶ್ವಂತ್ ಕುಲಾಲ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದರು. ಬಳಿಕ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ದಯಾನಂದ ಕೂಡ…
ಉಡುಪಿ: ಮಲ್ಪೆ ಕಲ್ಮಾಡಿಯ ಯುವತಿಯೊರ್ವಳು ನೇಣಿಗೆ ಶರಣಾದ ಘಟನೆ ಬುಧವಾರ ನಡೆದಿದೆ. ಹೊಟೇಲ್‌ನ ಉದ್ಯೋಗಿ, ಮಾಡೆಲಿಂಗ್‌ನಲ್ಲಿ ಆಸಕ್ತಿ ಹೊಂದಿದ್ದ ಕೃತಿ ಬಂಗೇರ(27) ಆತ್ಮಹತ್ಯೆ ಮಾಡಿಕೊಂಡ ಯುವತಿ. ತನ್ನ ತಾಯಿ ಮತ್ತು ಸಹೋದರಿಯೊಂದಿಗೆ ಕಲ್ಮಾಡಿಯ ಮನೆಯಲ್ಲಿ ವಾಸವಾಗಿದ್ದ ಕೃತಿ ಇಂದು ಮನೆಯ ಕೊಠಡಿಯಲ್ಲಿ ಚೂಡಿದಾರದ ಶಾಲಿನಲ್ಲಿ ಕುತ್ತಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕಳೆದ ಕೆಲವು ದಿನಗಳಲ್ಲಿ ಒತ್ತಡ ರೀತಿಯಲ್ಲಿ ವರ್ತಿಸುತ್ತಿದ್ದಳು ಎಂದು ಮನೆಯವರು ತಿಳಿಸಿದ್ದಾರೆ. ಸಹೋದರಿ ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










