ಉಡುಪಿ : ನಗರ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಬಡಿಗೇರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಜುನಾಥ್ ಬಡಿಗೇರ್ ಅವರನ್ನು ಬೆಳಗಾವಿ ನಗರ ವಿಶೇಷ ಶಾಖೆಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ. ಇವರು ಕಳೆದ ಏಳು ತಿಂಗಳಿನಿಂದ ಉಡುಪಿ ನಗರ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
Author: main-admin
ಮಂಗಳೂರು: ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ಶೀಘ್ರ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24,78,274 ರೂ. ಸೈಬರ್ ವಂಚನೆ ನಡೆಸಿದ ಆರೋಪದಲ್ಲಿ ಯವಂತಪುರದ ವಾಸುವೇವ ಆರ್(32) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಿದ 4 ಮೊಬೈಲ್ ಫೋನ್‌ಗಳು ಹಾಗೂ ರೂ. 20,300 ನಗದು ಹಣವನ್ನು ಸ್ವಾಧೀನಪಡಿಸಿಕೊಂಡಿದ್ದು, ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ.1,60,300 ಆಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ನ.5 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರು: ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಸವಾರ ಮಾಡಿದ ಆರೋಪದ ಹಿನ್ನಲೆಯಲ್ಲಿ ವಾಹನದ ಮಾಲಕಿಗೆ ಮಂಗಳೂರಿನ ನಾಲ್ಕನೆ ಜೆಎಂಎಫ್‌ಸಿ ನ್ಯಾಯಾಲಯ ದಂಡ ವಿಧಿಸಿದೆ. ದ್ವಿಚಕ್ರ ವಾಹನವನ್ನು ಅದರ ಮಾಲಕಿ ಅತಿಜಮ್ಮರ ಅಪ್ರಾಪ್ತ ವಯಸ್ಸಿನ ಪುತ್ರ ಅ.10ರಂದು ಬೈಕಂಪಾಡಿಯಲ್ಲಿ ಚಲಾಯಿಸುತ್ತಿದ್ದ. ಈ ಬಗ್ಗೆ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ನ್ಯಾಯಾಲಯವು ವಿಚಾರಣೆ ನಡೆಸಿ ಅಪ್ರಾಪ್ತ ಬಾಲಕನಿಗೆ ವಾಹನ ಚಲಾಯಿಸಲು ನೀಡಿದ್ದಕ್ಕೆ ವಾಹನದ ಮಾಲಕಿಗೆ 26,000 ರೂ.ದಂಡ ವಿಧಿಸಿ ಅದೇಶಿದೆ.
ಮಂಗಳೂರು: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ವ್ಯಕ್ತಿಯೋರ್ವ ನಕಲಿ ಖಾತೆ ಸೃಷ್ಟಿಸಿದ ಕುರಿತು ವರದಿಯಾಗಿದೆ. ಕೆಲವು ದಿನಗಳ ಹಿಂದೆ ಈ ಖಾತೆಯನ್ನು ಸೃಷ್ಟಿಸಲಾಗಿದೆ. ಇದಕ್ಕೆ 9 ಮಂದಿ ಸೇರ್ಪಡೆಗೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಪೊಲೀಸ್ ಆಯುಕ್ತರು ಸಂಬಂಧಪಟ್ಟ ಸಂಸ್ಥೆಗೆ ವರದಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ನಕಲಿ ಖಾತೆ ಸೃಷ್ಟಿಸಿದ ವ್ಯಕ್ತಿಯು ತನ್ನ ಪ್ರೊಫೈಲ್ ಲಾಕ್ ಮಾಡಿರುವುದು ಕಂಡು ಬಂದಿದೆ ಎಂದು ತಿಳಿದು ಬಂದಿದೆ.
ಮಂಗಳೂರು: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಬ್ದುಲ್ ಸತ್ತಾರ್ (35) , ಮುಹಮ್ಮದ್ ರಫೀಕ್ (42) , ರಜತ್, ( 29 ) ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಸಿರಾಜ್ (46) ಎಂಬಾತನನ್ನು ಕೊಣಾಜೆ ಪೊಲೀಸರು, ಮರವೂರು ಪೇಟೆಯಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ ಸಾಹೂದ್ (27 ) ಎಂಬಾತನನ್ನು ಬಜ್ಪೆ ಠಾಣಾ ಪೊಲೀಸರು, ಲಾಲ್ ಬಾಗ್ ಬಳಿ ಸೋಮವಾರಪೇಟೆಯ ವಿಷ್ಣು ಜಿ.ಕೆ (22 )ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಉರ್ವಾ ಪೊಲೀಸರು ಕೋಡಿಕಲ್ ಶಾಲೆಯ ಬಳಿ ಪ್ರಜ್ವಲ್ ಸಿ.ಯಾನೆ ಪಜ್ಜು (26) ಎಂಬಾತನನ್ನು ಮತ್ತು ಕಾರ್ನಾಡ್ ಗ್ರಾಮದ ಲಿಂಗಪ್ಪಯ್ಯ ಕಾಡು ಬಳಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ ಧರ್ಮಲಿಂಗ ಎಂಬಾತನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.
ರಾಜ್ಯಸರ್ಕಾರವು ನೂತನವಾಗಿ ಘೋಷಿಸಿರುವ ಬೆಳ್ತಂಗಡಿ ಪೊಲೀಸ್ ಉಪವಿಭಾಗಕ್ಕೆ ಸಿ.ಕೆ ರೋಹಿಣಿ ಅವರನ್ನು ಡಿವೈಎಸ್ಪಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿದ್ದ ಸಿ.ಕೆ.ರೋಹಿಣಿ ಅವರನ್ನು ಬೆಳ್ತಂಗಡಿ ಡಿವೈಎಸ್ಪಿಯಾಗಿ ನೇಮಕ ಮಾಡಿ ನ.4 ರಂದು ಸರಕಾರ ಆದೇಶ ಹೊರಡಿಸಿದೆ. ಸಿ.ಕೆ.ರೋಹಿಣಿ ಅವರು 2022 ರ ಬ್ಯಾಚ್ ನಲ್ಲಿ ನೇರ ನೇಮಕವಾದ ಡಿವೈಎಸ್ಪಿಯಾಗಿದ್ದಾರೆ. ಬೆಳ್ತಂಗಡಿ ಉಪ ವಿಭಾಗದ ವ್ಯಾಪ್ತಿಗೆ ಬೆಳ್ತಂಗಡಿ ತಾಲೂಕಿನ ಐದು ಪೊಲೀಸ್ ಠಾಣೆಗಳು ಬರುತ್ತವೆ.
ಮಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದು ತನ್ನ ಮಗುವಿನೊಂದಿಗೆ ಆತ್ಮಹತ್ಯೆಗೆ ಮುಂದಾಗಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ ಘಟನೆ ಸೋಮವಾರ ಮುಸ್ಸಂಜೆ ವೇಳೆಗೆ ಸಂಭವಿಸಿದೆ. ಕೂಳೂರು ಪಂಜಿಮೊಗರು ಅಂಬಿಕಾ ನಗರ ನಿವಾಸಿ ರಾಜೇಶ್(35) ಮತ್ತವರ ನಾಲ್ಕು ವರ್ಷದ ಪುತ್ರಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ ರಾಜೇಶ್ ತನ್ನ ಮಗಳೊಂದಿಗೆ ತಣ್ಣೀರುಬಾವಿ ಬೀಚ್‌ಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೆಲ್ಫಿ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವೀಡಿಯೊವನ್ನು ಸಾರ್ವಜನಿಕರೊಬ್ಬರು ಪಣಂಬೂರು ಉಪವಿಭಾಗದ ಎಸಿಪಿ ಶ್ರೀಕಾಂತ್‌ರಿಗೆ ಕಳುಹಿಸಿದ್ದರು. ವೀಡಿಯೊವನ್ನು ಗಂಭೀರವಾಗಿ ಪರಿಗಣಿಸಿದ ಎಸಿಪಿ ತಕ್ಷಣ ಪಣಂಬೂರು ಪೊಲೀಸರಿಗೆ ನೀಡಿದ್ದರು. ಆದರೆ ಆ ವೀಡಿಯೊ ಯಾವ ಬೀಚ್‌ನಲ್ಲಿ ಚಿತ್ರೀಕರಿಸಿದ್ದು ಎಂದು ಗೊತ್ತಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಎರಡು ತಂಡಗಳಾಗಿ ಪಣಂಬೂರು ಮತ್ತು ತಣ್ಣೀರುಬಾವಿ ಬೀಚ್‌ಗೆ ತೆರಳಿ ಪರಿಶೀಲಿಸಿದ್ದರು. ತಣ್ಣೀರುಬಾವಿ ಬೀಚ್‌ನಲ್ಲಿ ಗಂಟೆಯ ಹಿಂದೆ ವೀಡಿಯೋದಲ್ಲಿದ್ದ ತಂದೆ-ಮಗಳನ್ನು ನೋಡಿದ್ದಾಗಿ ಸಾರ್ವಜನಿಕರೊಬ್ಬರು ಮಾಹಿತಿ ನೀಡಿದ್ದರು. ಆ ಮಾಹಿತಿಯನ್ನು ಆಧರಿಸಿ ವಿಚಾರಿಸಿದಾಗ…
ಕೋಮುಸೌಹಾರ್ದತೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ಇಂದೂ ಇತ್ಯರ್ಥವಾಗದೆ ಮುಂದೂಡಲ್ಪಟ್ಟಿತು.ಬಿಎನ್ಎಸ್ಎಸ್ ಸೆಕ್ಷನ್ 338, 339 ಪ್ರಕಾರ ಜನವಾದಿ ಮಹಿಳಾ ಸಂಘಟನೆಯ ನಾಯಕಿ ಈಶ್ವರಿ ಪದ್ಮುಂಜ ಪರ ಹಿರಿಯ ವಕೀಲ ಸತೀಶನ್ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ವಾದ ಮಂಡಿಸಲು ಸಮಾಯಾವಕಾಶ ಕೇಳಿದರು.ಪೊಲೀಸರ ಪರ ಸರ್ಕಾರಿ ವಕೀಲರು ಜಾಮೀನು ಅರ್ಜಿಗೆ ಆರು ಪುಟಗಳ ತಕರಾರು ಅರ್ಜಿ ಸಲ್ಲಿಸಿದ್ದು, ನ್ಯಾಯಾಲವು ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ. ಪ್ರಭಾಕರ ಭಟ್ ತಾನು ಮಾಡಿದ ಭಾಷಣದ ವಿರುದ್ದ ದಾಖಲಾಗಿರುವ ಎಫ್ಐಆರ್ ಗೆ ನಿರೀಕ್ಷಣಾ ಜಾಮೀನು ಕೋರಿ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ 27 ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ‘ಬಲವಂತದ ಕ್ರಮ ತೆಗೆದುಕೊಳ್ಳದಂತೆ ಮಧ್ಯಂತರ ಆದೇಶ’ ನೀಡಿ ಪೂರ್ಣ ಪ್ರಮಾಣದ ವಿಚಾರಣೆ ಮತ್ತು ನಿರೀಕ್ಷಣಾ ಜಾಮೀನು ಸಂಬಂಧ ಅದೇಶವನ್ನು ಅಕ್ಟೋಬರ್…
ಮಂಗಳೂರು: ಲೋಕೋಪಯೋಗಿ ಹಾಗೂ ಅಬಕಾರಿ ಇಲಾಖೆಗಳ ಭ್ರಷ್ಟಾಚಾರದ ಬಗ್ಗೆ ವಿವರ ನೀಡಲು ದಿನಾಂಕ 3-11-2025 ಸೋಮವಾರದಂದು ಚಿತ್ರ ನಿರ್ಮಾಪಕರಾದ ಆರ್ ಧನರಾಜ್ ರವರು ಪತ್ರಿಕಾಗೋಷ್ಠಿ ನಡೆಸಿದರು ಚಿತ್ರ ನಿರ್ಮಾಪಕರಾದ ಆರ್. ಧನರಾಜ್ ರವರ ಪತ್ರಿಕಾಗೋಷ್ಟಿಯಲ್ಲಿ 3 ಬೇಡಿಕೆಗಳನ್ನು ಹಾಕಲಾಯಿತು. ತುಳು ನಿರ್ಮಾಪಕರಿಗೆ ಮಾನ್ಯತೆ ಕೊಡಬೇಕು. ಅಬಕಾರಿ ಇಲಾಖೆಯ ಸಿ ಆರ್7 ಲೈಸನ್ಸ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ, ಅಬಕಾರಿ ಸುಂಕ ಜಾಸ್ತಿಯಾಗುತ್ತಿದೆ. ಆದುದರಿಂದ ಅಬಕಾರಿ ಸಚಿವರನ್ನು ಬದಲಾಯಿಸಬೇಕು. ಲೋಕೋಪಯೋಗಿ ಇಲಾಖೆಯಲ್ಲಿ 9 ವರ್ಷಗಳಿಂದ ಆಫಿಸರ್ ಆಗಿ ಕೆಲಸಮಾಡುತ್ತಿರುವ ಭ್ರಷ್ಟ ಅಧಿಕಾರಿಯನ್ನು, ಸಚಿವರಾದ ಸತೀಶ್ ಜಾರಕಿಯವರು ವರ್ಗಾವಣೆ ಮಾಡಬೇಕು.
ಪೂಂಜಾಲಕಟ್ಟೆ: ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕ್ತಶ್ವರಿಪದವು ನಿವಾಸಿ ಸದಾನಂದ ಪೂಜಾರಿ ಮಗ ಸಂಕೇತ್ (28) ಎಂದು ಗುರುತಿಸಲಾಗಿದೆ. ಈತನನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ನಿಷೇಧಿತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದ. ಈ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.









