ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ ಐ ಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಇದುವರೆಗೆ ಪ್ರಮುಖ ಆರೋಪಿ ಪತ್ತೆಯಾಗಿಲ್ಲ. ಆದರೆ ಆತ ಓಡಾಟ ನಡೆಸಿರುವ ಸಿಸಿಟಿವಿ ದೃಶ್ಯಾವಳಿಗಳು ಸೆರೆಯಾಗಿದೆ. ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾದ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ.ಗಳ ನಗದು ಬಹುಮಾನವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಘೋಷಿಸಿದೆ. ‘ವಾಂಟೆಡ್’ ಪೋಸ್ಟರ್ನಲ್ಲಿ ಆರೋಪಿಗಳ ರೇಖಾಚಿತ್ರವನ್ನು ಎನ್‌ಐಎ ಬಿಡುಗಡೆ ಮಾಡಿದೆ ಮತ್ತು ಮಾಹಿತಿದಾರರ ಗುರುತನ್ನು ರಹಸ್ಯವಾಗಿಡಲಾಗುವುದು ಎಂದು ಹೇಳಿದೆ.
Author: main-admin
ಬೆಂಗಳೂರು : ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ನೇ ತರಗತಿಗಳ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿತ್ತು. ಈ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಏಕಸದಸ್ಯ ಪೀಠ ಪ್ರಸ್ತುತ ತೀರ್ಪು ನೀಡಿದೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಹೈಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ. ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ ಬೋರ್ಡ್ ಮಟ್ಟದ ಪರೀಕ್ಷೆ…
ಮಲ್ಪೆ: ಯುವಕನೋರ್ವ ನಾಪತ್ತೆಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ನಾಪತ್ತೆಯಾದ ಯುವಕ ಅಲೋಕ್ ತಂತಿ(24) ಎಂದು ಗುರುತಿಸಲಾಗಿದೆ. ಶಾಂಭವಿ ಬೋಟಿನಲ್ಲಿ ಕಲಾಸಿಯಾಗಿ ಕೆಲಸ ಮಾಡಿಕೊಂಡಿದ್ದ ಯುವಕ ಮಾ.3ರಂದು ಮುಂಜಾನೆ ತನ್ನ ಮೊಬೈಲ್‌ನನ್ನು ರೂಮಿನಲ್ಲಿಯೇ ಬಿಟ್ಟು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ: ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಪುತ್ತೂರು ಅರಣ್ಯ ಇಲಾಖೆಗೆ ಸೇರಿದ ವಾಹನ ಇದಾಗಿದ್ದು, ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಸಂಚಾರ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಪುತ್ತೂರು ಅರಣ್ಯ ಇಲಾಖೆಯ ಆರ್.ಎಫ್.ಓ ಸಂಚಾರ ಮಾಡುತ್ತಿದ್ಧ ಬೊಲೆರೋ ವಾಹನ ಪರಂಗಿಪೇಟೆಯ ರಿಕ್ಷಾ ಪಾರ್ಕ್ ನ ಎದುರು ಪಾದಚಾರಿಗೆ ಡಿಕ್ಕಿಹೊಡೆದಿದೆ. ಕೂಡಲೇ ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿದಾಖಲಿಸಿದ್ರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲಕ್ಷಾಂತರ ರೂ ಹಣದ ಕಟ್ಟು ಇಲಾಖಾ ವಾಹನದಲ್ಲಿ: ಅರಣ್ಯ ಇಲಾಖೆಯ ವಾಹನ ಅಪಘಾತ ಸಂಭವಿಸಿದ ಕೂಡಲೇ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದ. ರಕ್ತಸಿಕ್ತವಾಗಿ ಒದ್ದಾಡುತ್ತಿದ್ದಾತನನ್ನು ಅಲ್ಲೇ ಇದ್ದ ರಿಕ್ಷಾ ಚಾಲಕರಿಬ್ಬರು ಅದೇ ಸರಕಾರಿ ಇಲಾಖೆಯ ವಾಹನದಲ್ಲಿ ಹಾಕಿಕೊಂಡು ಮಂಗಳೂರು…
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಕುಲಪತಿಗಳಾಗಿ ಪ್ರೊ.ಪಿ.ಎಲ್. ಧರ್ಮ ಅವರನ್ನು ನೇಮಕ ಮಾಡಿ ರಾಜ್ಯಪಾಲರೂ, ಮಂಗಳೂರು ವಿಶ್ವವಿದ್ಯಾಲಯ ಕುಲಾಧಿಪತಿಗಳಾಗಿರುವ ಥಾವರ್ ಚಂದ್ ಗೆಹ್ಲೋಟ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಈ ಮೂಲಕ ಪಿ.ಎಲ್.ಧರ್ಮ ಮಂಗಳೂರು ವಿವಿಯ 10ನೇ ಕುಲಪತಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ, ಪ್ರಾಧ್ಯಾಪಕರಾಗಿ ಪ್ರೊ.ಪಿ.ಎಲ್. ಧರ್ಮ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕುಲಸಚಿವ (ಮೌಲ್ಯಮಾಪನ)ರಾಗಿ ಕರ್ತವ್ಯ ನಿರ್ವಹಿಸಿದ್ದರು. ಮುಂದಿನ ನಾಲ್ಕು ವರ್ಷಗಳ ಅವಧಿಯವರೆಗೆ ಅಥವಾ ಪ್ರೊ.ಪಿ.ಎಲ್. ಧರ್ಮ ಅವರಿಗೆ 67ವರ್ಷ ತುಂಬುವವರೆಗೆ, ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಅವರು ಮಂಗಳೂರು ವಿಶ್ವವಿದ್ಯಾಲಯ ಕುಲಪತಿಗಳಾಗಿ ಮುಂದುವರಿಯಲಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಈ ಹಿಂದಿನ ಕುಲಪತಿಗಳಾಗಿದ್ದ ಪಿ.ಎಸ್.ಯಡಪಡಿತ್ತಾಯರ ಅಧಿಕಾರ ಅವಧಿ 2023ರ ಜೂನ್ 3ರಂದು ಮುಗಿದಿತ್ತು. ಆ ಬಳಿಕ ಮಂಗಳೂರು ವಿಶ್ವವಿದ್ಯಾಲಯದ ಅತ್ಯಂತ ಹಿರಿಯ ಡೀನ್ ಆಗಿದ್ದ ರಾಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ.ಜಯರಾಜ್ ಅಮೀನ್ ಅವರನ್ನು ಹಂಗಾಮಿ ಕುಲಪತಿಗಳಾನ್ನಾಗಿ…
ಉಳ್ಳಾಲ ಸಮೀಪ ಒಂದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಕೊಲ್ಯ ಬಳಿ ಇಂದು ನಡೆದಿದೆ ಸಾವನ್ನಪ್ಪಿದವರು ಕೊಲ್ಯ ನಿವಾಸಿ ಸಂತೋಷ್ ಬೆಳ್ಚಾಡ (45) ಎಂದು ತಿಳಿದು ಬಂದಿದೆ. ಜೀಪಿನಲ್ಲಿದ್ದ ಯುವಕರು ಗಾಂಜಾ ನಶೆಯಲ್ಲಿದ್ದು, ಅವರ ಅಜಾಗರೂಕತೆಯ ವಾಹನ ಚಾಲನೆ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಸಂತೋಷ್ ಬಾಳೆಹಣ್ಣು ವ್ಯಾಪಾರಿಯಾಗಿದ್ದು, ಕೆಲಸ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯಲ್ಲಿದ್ದ ಜೀಪ್ ಎದುರಿನಲ್ಲಿ ಧರ್ಮಸ್ಥಳದಿಂದ ಕಾಞಂಗಾಡ್ ಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದ ಬಲೇನೋ ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಆಯತಪ್ಪಿದ ಕಾರು ಎದುರಿನಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ದ್ವಿಚಕ್ರ ವಾಹನದ ಹಿಂಬದಿಗೆ ಢಿಕ್ಕಿ…
ಬೆಳ್ಳಾರೆ: ಕಡಬ ತಾ| ನಿಂತಿಕಲ್ಲು ಸಮೀಪದ ಎಣ್ಮೂರು ಎಂಬಲ್ಲಿರುವ ಮನೆಯೊಂದರ ಮೇಲೆ ಎನ್ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡಿನ ಮನೆಯ ಕೊಠಡಿಯೊಂದರಲ್ಲಿ ಬಾಡಿಗೆಗೆ ವಾಸವಿದ್ದ ಕೇರಳ ಮೂಲದ ವ್ಯಕ್ತಿ ಬಿಜು ಅಬ್ರಹಾಂ ಎಂಬಾತನ ಪತ್ತೆಗಾಗಿ ಎನ್ಐಎ ಅಧಿಕಾರಿಗಳು ಬಂದಿದ್ದಾರೆ ಎಂದು ಹೇಳಲಾಗಿದೆ. ಎಣ್ಮೂರಿನ ಚಿದಾನಂದ ಎಂಬವರ ಮನೆಯಲ್ಲಿ ಬಿಜು ವಾಸಿಸುತ್ತಿದ್ದು ಆತನ ಮೇಲೆ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಹಿನ್ನಲೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಸುಲ್ತಾನ್ ಪಾಳ್ಯ ಎಂಬಲ್ಲಿ ಭಯೋತ್ಪಾದನಾ ಚಟುವಟಿಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಆರೋಪದಲ್ಲಿ ಬಿಜು ವಾಸವಿದ್ದ ಮನೆಯ ಶೋಧವನ್ನು ಎನ್ಐಎ ಅಧಿಕಾರಿಗಳು ನಡೆಸಿದ್ದಾರೆ. ಈ ಪ್ರಕರಣ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಈಗಾಗಲೇ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಉಡುಪಿ: ಅನಾಮಧೇಯ ಆ್ಯಪ್ ಡೌನ್ಲೋಡ್ ಮಾಡಿದ ವ್ಯಕ್ತಿಯೊಬ್ಬರ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆಯಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ವಂಷಚನೆಗೊಳಗಾದ ಮಣಿಪಾಲ ನಿವಾಸಿ ಉಮಾಕಾಂತ್ ಸಿಂಗ್ ಎಂದು ಗುರುತಿಸಲಾಗಿದೆ. ಮಣಿಪಾಲ ನಿವಾಸಿ ಉಮಾಕಾಂತ್ ಸಿಂಗ್ ಅವರಿಗೆ ಮಾ.4ರಂದು ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಸಂದೇಶವೊಂದು ಬಂದಿತ್ತು. ಈ ಹಿನ್ನೆಲೆ ಸಂದೇಶ ಬಂದ ಸಂಖ್ಯೆಗೆ ಉಮಾಕಾಂತ್ ಅವರು ಕರೆ ಮಾಡಿದ್ದಾರೆ. ಆ ಬಳಿಕ ಆರೋಪಿಯು ಅದಕ್ಕೆ ಸಂಬಂಧಿಸಿದ ಅರ್ಜಿಯೊಂದನ್ನು ಭರ್ತಿ ಮಾಡಬೇಕಿದೆ. ಅದಕ್ಕಾಗಿ ಆ್ಯಪ್ ಒಂದನ್ನು ಡೌನ್ಲೋಡ್ ಮಾಡುವಂತೆ ಹೇಳಿದ್ದಾನೆ. ಆರೋಪಿಯ ಮಾತಿನಂತೆ ಉಮಾಕಾಂತ್ ಅವರು ಆ್ಯಪ್ ಡೌನ್ಲೋಡ್ ಮಾಡಿದ್ದು, ಅದರಲ್ಲಿ ಅರ್ಜಿ ತುಂಬಿಸುವ ವೇಳೆಗೆ ಅವರ ಖಾತೆಯಿಂದ 1,69,950 ರೂ.ಗಳು ಅಪರಿಚಿತ ವ್ಯಕ್ತಿಯ ಖಾತೆಗೆ ವರ್ಗಾವಣೆಗೊಂಡಿದೆ. ಇನ್ನು ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು : 15 ದಿನಗಳ ಹಿಂದೆ ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿನಿ ಐವರ್ನಾಡು ಸಮೀಪದ ಪಾಂಬಾರು ಸೋಮಸುಂದರ ಎಂಬುವವರ ಪುತ್ರಿ ಆರತಿ ಎಂದು ಗುರುತಿಸಲಾಗಿದೆ. ಆರತಿ 15 ದಿನಗಳ ಹಿಂದೆ ವಿಷ ಸೇವಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ., ಅಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಅಲ್ಲದೇ ವೈದ್ಯರ ಸಲಹೆ ಮೇರೆಗೆ ಸುಳ್ಯಕ್ಕೆ ತಂದು ಚಿಕಿತ್ಸೆ ಕೊಡಲಾಗುತ್ತಿತ್ತು ಆದರೇ ಚಿಕಿತ್ಸೆ ಫಲಕಾರಿಯಾಗದೇ ಅವರು ನಿನ್ನೆ ಮೃತಪಟ್ಟಿದ್ದಾರೆ. ಆರತಿಯು ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಮೃತ ವಿದ್ಯಾರ್ಥಿನಿ ತಂದೆ, ತಾಯಿ ಮತ್ತು ಓರ್ವ ಸಹೋದರರನ್ನು ಅಗಲಿದ್ದಾರೆ.
ಮಂಗಳೂರು: ಮೊಬೈಲ್ ಆ್ಯಪ್ ಟೆಲಿಗ್ರಾಂನಲ್ಲಿ ರೇಟಿಂಗ್ ಟಾಸ್ಕ್ ನೀಡಿ ಗಾಯತ್ರಿ ಎಂಬವರಿಂದ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ದಾಖಲಾಗಿದೆ. ಫೆ.23ರಂದು ತನಗೆ ಟೆಲಿಗ್ರಾಂ ನಂಬರ್‌ಗೆ ಲಿಂಕ್ ಮೂಲಕ ಮೆಸೇಜ್ ಬಂದಿತ್ತು. ಅದನ್ನು ತೆರೆದಾಗ ಟೆಲಿಗ್ರಾಂ ಗ್ರೂಪ್‌ಗೆ ಸೇರ್ಪಡೆಗೊಳಿಸಲಾಗಿತ್ತು. ಬಳಿಕ ಸ್ಟಾರ್ ರೇಟಿಂಗ್ ಎಂಬ ಟಾಸ್ಕ್ ನೀಡಲಾಗಿದ್ದು, ತನಗೆ ಅವರಿಂದ 3,000 ರೂ. ಜಮೆ ಆಗಿತ್ತು. ಅದಕ್ಕೆ ಪ್ರತಿಯಾಗಿ 9,440 ರೂ. ಗಳನ್ನು ಅವರ ಖಾತೆಗೆ ಜಮೆ ಮಾಡಲಾಯಿತು. ಬಳಿಕ ಗ್ರೂಪ್ ಮರ್ಚೆಂಟ್ ಟಾಸ್ಟ್ ಮಿಷನ್ ಪೂರ್ಣಗೊಳಿಸಲು ಹಣ ಪಾವತಿಸುವಂತೆ ತಿಳಿಸಿ ಫೆ.24ರಿಂದ 28ರವರೆಗೆ ಹಂತಹಂತವಾಗಿ 11,15,500 ರೂ. ವರ್ಗಾಯಿಸಿಕೊಂಡು ವಂಚಿಸಲಾಗಿದೆ ಎಂದು ಗಾಯತ್ರಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ