Author: main-admin

ಮಂಗಳೂರು: ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಲಿ ಬಂಧನದೊಂದಿಗೆ ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸಿ ಬಂಧನಕ್ಕೊಳಗಾದವರ ಸಂಖ್ಯೆ 6ಕ್ಕೆ ಏರಿದಂತಾಗಿದೆ. ಆರೋಪಿಯನ್ನು ಗುರುಪುರದಲ್ಲಿ ಬಂಧಿಸಿದ್ದ ಪೊಲೀಸರು, ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದ್ದು, ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಗರದ ದಡ್ಡಲ್ ಕಾಡ್ ಎಂಬಲ್ಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ನಕಲಿಯಾಗಿ ಸೃಷ್ಟಿಸಿ ಸರಕಾರದ ಬೇರೆ ಬೇರೆ ಇಲಾಖೆಯ ಕಚೇರಿ ಮತ್ತು ನ್ಯಾಯಾಲಯಕ್ಕೆ ವಂಚಿಸುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ನಗರದ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ‌ ಪೊಲೀಸರು ಮುಲ್ಕಿ ನಿವಾಸಿ…

Read More

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಕಮೆಂಟ್ ಮಾಡಿದ ಪ್ರಕರಣವೊಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸೆಪ್ಟೆಂಬರ್ 18, 2025 ರಂದು ಬಂಟ್ವಾಳ ತಾಲೂಕು ನಿವಾಸಿ ಅಬ್ದುಲ್ ರಹಿಮಾನ್ (36) ಅವರು ತಮ್ಮ ಮೊಬೈಲ್‌ನಲ್ಲಿ ಫೇಸ್‌ಬುಕ್ ಅಪ್ಲಿಕೇಶನ್ ವೀಕ್ಷಿಸುತ್ತಿದ್ದಾಗ Vartha Bharati ಪೇಜ್‌ನಲ್ಲಿ ಹಾಕಿದ್ದ ನ್ಯೂಸ್ ರೀತಿಯ ಪೋಸ್ಟ್‌ಗೆ ಹಲವರು ಪ್ರತಿಕ್ರಿಯೆ ನೀಡಿರುವುದನ್ನು ಗಮನಿಸಿದ್ದಾರೆ. ಈ ವೇಳೆ ಸನಾತನಿ ಸಿಂಹ ಎಂಬ ಫೇಸ್‌ಬುಕ್ ಪೇಜ್‌ನಿಂದ ಸಮುದಾಯಗಳ ನಡುವೆ ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡುವ ರೀತಿಯ ಕಾಮೆಂಟ್ ಹಾಕಿರುವುದು ಕಂಡುಬಂದಿದೆ.ಈ ಕುರಿತು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 131/2025, ಕಲಂ 353(2) BNS 202303 ರಂತೆ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Read More

ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್ ಬಳಿ ವ್ಯಕ್ತಿಯೊಬ್ಬ ಟ್ರಾಫಿಕ್‌ನಲ್ಲಿ ಕರ್ತವ್ಯನಿರತ ಹೆಡ್‌ಕಾನ್‌ ಸ್ಟೇಬಲ್‌ರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಟೇಟ್‌ಬ್ಯಾಂಕ್ ವೃತ್ತದ ಬಳಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಟ್ರಾಫಿಕ್ ಎಚ್‌ಸಿ ವಾಹನಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಸ್ಕೂಟರ್ ಸವಾರ ನಾಟೆಕಲ್‌ನ ಆಸಿಫ್ ಬಾವ ಎಂಬಾತ ಅದನ್ನು ಲೆಕ್ಕಿಸದೆ ಸ್ಕೂಟರ್ ಚಲಾಯಿಸಿದ್ದು, ಈ ಸಂದರ್ಭ ಎಚ್‌ಸಿ ಸ್ಕೂಟರ್ ಸವಾರನಿಗೆ ಏಯ್ ಅಂತ ಹೇಳಿ ಕೈಯಿಂದ ಸವರಿದ್ದಾರೆ. ಇದರಿಂದ ಆಕ್ರೋಶಗೊಂಡ ಆಸಿಫ್ ಬಾವ ಟ್ರಾಫಿಕ್ ಎಚ್‌ಸಿ ಜೊತೆ ವಾಗ್ವಾದ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸ್ ಜೊತೆ ವಾಗ್ವಾದ ನಡೆಸುತ್ತಿರುವುದನ್ನು ಸಾರ್ವಜನಿಕರೊಬ್ಬರು ವೀಡಿಯೋ ಮಾಡಿದ್ದು, ಅದೀಗ ವೈರಲ್ ಆಗಿದೆ. ಈ ವೀಡಿಯೋವನ್ನು ಪರಿಶೀಲಿಸಿದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಕೂಟರ್ ಸವಾರನು ಟ್ರಾಫಿಕ್ ಪೊಲೀಸ್‌ ರ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಸ್ಪಷ್ಟವಾಗಿದೆ. ಆ ಹಿನ್ನಲೆಯಲ್ಲಿ ಸ್ಕೂಟರ್ ಸವಾರನ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಪೊಲೀಸ್ ನಿಂದನೆ ಪ್ರಕರಣ ದಾಖಲಿಸಲು…

Read More

ಮಂಗಳೂರು: ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 317 ಡಿ ಇದರ ಆಶ್ರಯದಲ್ಲಿ “ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ ಸೆಪ್ಟೆಂಬರ್ 21 ರಂದು ಭಾನುವಾರ ಬೆಳಿಗ್ಗೆ 8.30 ಕ್ಕೆ ಕುದ್ಮಲ್ ರಂಗರಾವ್ ಪುರಭವನ ಮಂಗಳೂರಿನಲ್ಲಿ ನಡೆಯಲಿದೆ ಎಂದು ಲಯನ್ ರಾಜೇಶ್ ಶೆಟ್ಟಿ ಶಬರಿ ತಿಳಿಸಿದರು. ಅವರು ನಗರದ ಲಯನ್ ಅಶೋಕದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಮಾರು 25 ತಂಡಗಳು ಭಾಗವಹಿಸಲಿದ್ದು, ಸೆಟ್ಟಿಂಗ್ ಸೇರಿ ಒಂದು ತಂಡಕ್ಕೆ 20 ನಿಮಿಷಗಳ ಕಾಲಾವಧಿ ನೀಡಲಾಗಿದೆ. ಪ್ರಶಸ್ತಿ ಪುರಸ್ಕೃತರಿಗೆ ನಗದು ಸಹಿತ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಪ್ರಧಾನ ಅತಿಥಿಗಳಾಗಿ ಖ್ಯಾತ ಹಿನ್ನಲೆ ಗಾಯಕಿ ಬಿ.ಕೆ. ಸುಮಿತ್ರ ಭಾಗವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕರಾದ ವೇದಮೂರ್ತಿ ಹರಿನಾರಾಯಣ ಅಸ್ರಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಲಯನ್ಸ್ ಜಿಲ್ಲೆ 317 ಡಿ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಹಾಗೂ ಬಹುಮಾನ ವಿತರಿಸಲಿದ್ದಾರೆ. ಗೌರವ ಅತಿಥಿಗಳಾಗಿ…

Read More

ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಬಿಪಿಎಲ್ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್ಗೆ ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನು ರದ್ದು ಮಾಡಲ್ಲ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿರುವ ಎಲ್ಲಾ ಕಾರ್ಡ್ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ

Read More

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ಸೆ.16 ಕ್ಕೆ ವಜಾಗೊಂಡಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬುರುಡೆ ಜೊತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ಬಳಿಕ ಹಲವಾರು ಬೆಳವಣಿಗಳು ನಡೆದಿದ್ದವು. ಬೆಳ್ತಂಗಡಿ ಎಸ್‌‌‌ಐಟಿ ಅಧಿಕಾರಿಗಳು ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 23 ರಂದು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ 12 ದಿನಗಳ ಕಾಲ ಕಸ್ಟಡಿಗೆ ಪಡೆದ ತನಿಖೆ ನಡೆಸಿ ಸೆ.3 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಆರೋಪಿ ಚಿನ್ನಯ್ಯನನ್ನು ಮತ್ತೆ ಮೂರು ದಿನಗಳ ಕಾಲ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ನಡೆಸಿ ಸೆ.6 ರಂದು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು‌. ಸದ್ಯ ಆರೋಪಿ ಚಿನ್ನಯ್ಯ ಶಿವಮೊಗ್ಗ ಜೈಲಿನಲ್ಲಿದ್ದಾನೆ. ಚಿನ್ನಯ್ಯ ಪರ ಜಿಲ್ಲಾ ಉಚಿತ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಕೀಲರನ್ನು ಪಡೆದುಕೊಂಡು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಸೆ.12 ಕ್ಕೆ ಜಾಮೀನು ಅರ್ಜಿ ವಾದ…

Read More

18 ವರ್ಷದೊಳಗಿನ ಮಕ್ಕಳು ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವಂತಿಲ್ಲ ಈ ನಿಟ್ಟಿನಲ್ಲಿ ಯಾವುದೇ ಪದವಿ ಪೂರ್ವ ಕಾಲೇಜುಗಳಿಗೆ ಮಕ್ಕಳು ದ್ವಿಚಕ್ರ ವಾಹನಗಳಲ್ಲಿ ಬರುತ್ತಿದ್ದಲ್ಲಿ ಅಂತಹ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಲಾಗಿದೆ. ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಅಪಘಾತವಲಯಗಳನ್ನು ಗುರುತಿಸಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಅಧಿಕಾರಿಗಳು ಹೆಚ್ಚಿನ ಗಮನಹರಿಸಿ ಅವೈಜ್ಞಾನಿಕವಾಗಿರುವ ರಸ್ತೆಗಳನ್ನು ಗುರುತಿಸಿ ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರಲ್ಲದೆ, ಹೆಚ್ಚು ಸಾವು ಸಂಭವಿಸುತ್ತಿರುವುದು ಅಪಘಾತಗಳಿಂದ ಇದರ ಬಗ್ಗೆ ಯಾರಿಗೂ ಅರಿವಿಲ್ಲ, ಉದಾಸೀನದಿಂದ ವಾಹನ ಚಲಾಯಿಸಿ ಅವಘÀಡÀಗಳು ಸಂಭವಿಸುವುದರಿAದ ಅಮಾಯಕ ಕುಟುಂಬಗಳು ನೋವು ಅನುಭವಿಸುತ್ತಾರೆ ಎಂದರು. ರಸ್ತೆ ಒತ್ತುವರಿ ತೆರವುಗೊಳಿಸುವುದು, ಮುಖ್ಯ ರಸ್ತೆಗಳಲ್ಲಿ ಪಾದಾಚಾರಿಗಳ ಸಂಚಾರಕ್ಕೆ ಮೀಸಲಿರುವ ಸ್ಥಳದಲ್ಲಿ ಯಾವುದೇ ಪದಾರ್ಥಗಳನ್ನು ಮಾರಾಟ ಮಾಡಲು ಅವಕಾಶ ನೀಡದಂತೆ ತೆರವುಗೊಳಿಸುವ ನಿಟ್ಟಿನಲ್ಲಿ…

Read More

ಉಪ್ಪಿನಂಗಡಿ: ಮಹಿಳೆಗೆ ತೊಂದರೆ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 12 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು  ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಶಿವಾಜಿನಗರದ ಇಮ್ರಾನ್‌ ಖಾನ್ (36) ಬಂಧಿತ ಆರೋಪಿ. ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನನ್ನು, ಬೆಂಗಳೂರು ನಗರದ ಕೆ,ಜಿ‌ ಹಳ್ಳಿ ಎಂಬಲ್ಲಿಂದ 13/9/2025 ರಂದು ದಸ್ತಗಿರಿ‌ ಮಾಡಿ ದಿನಾಂಕ 14/9/2025 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ

Read More

ಮಣಿಪಾಲ: ಮಣಿಪಾಲದ ವಿದ್ಯಾರತ್ನನಗರದ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ಬಳಿ ಸ್ಕೂಟಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಮಹಮ್ಮದ್‌ ಅರ್ಫಾನ್‌ (26) ಎಂದು ಗುರುತಿಸಲಾಗಿದೆ. ಆರೋಪಿಯು ಸ್ಕೂಟಿಯ ಡ್ಯಾಶ್‌ ಬೋರ್ಡ ನಲ್ಲಿದ್ದ ಬಿಳಿ ಬಣ್ಣದ MDMA 6.61 ಗ್ರಾಂ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರ ಅಂದಾಜು ಮೌಲ್ಯ 13000 ರೂ. ಆಗಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Read More

ಪುತ್ತೂರು: ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 2013 ರಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಶಿವಾಜಿನಗರದ ಇಮ್ರಾನ್ ಖಾನ್‌ (36) ಬಂಧಿತ ಆರೋಪಿಯಾಗಿದ್ದಾನೆ. ಕಳೆದ 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಇಮ್ರಾನ್ ಖಾನ್‌ ಬಂಧನಕ್ಕಾಗಿ ನ್ಯಾಯಾಲಯವು ವಾರಂಟ್‌ ಹೊರಡಿಸಿತ್ತು. ಇದನ್ನೂ ಓದಿ: ಕೋಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ದುರಂತ; ಬೈಕಿಗೆ ಡಿಕ್ಕಿ ಹೊಡೆದು ಸವಾರನನ್ನು ಎಳೆದೊಯ್ದ ಲಾರಿ ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸರು ಹುಡುಕಾಟ ನಡೆಸಿ ಆರೋಪಿಯನ್ನು ಬೆಂಗಳೂರು ನಗರದ ಕೆ,ಜಿ‌ ಹಳ್ಳಿ ಎಂಬಲ್ಲಿ ಪತ್ತೆ ಹಚ್ಚಿ ಸಪ್ಟೆಂಬರ್ 13 ರಂದು ದಸ್ತಗಿರಿ‌ ಮಾಡಿ ಸೆ. 14 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ

Read More