Author: main-admin

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಹೆಚ್.ವಿ. ಅವರನ್ನು ನೇಮಕ ಮಾಡಲಾಗಿದೆ. ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ಬೆಂಗಳೂರಿನಲ್ಲಿ ನೋಂದಣಿ ಇಲಾಖೆಯ ಐಜಿ ಮತ್ತು ಸ್ಟಾಂಪ್ ವಿಭಾಗದ ಕಮಿಷನರ್ ಆಗಿ ವರ್ಗಾಯಿಸಲಾಗಿದೆ.ದರ್ಶನ್ ಹೆಚ್.ವಿ. ಅವರು ಈ ಹಿಂದೆ ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದರು. ಹಾಸನ ಜಿಲ್ಲಾಧಿಕಾರಿಯಾಗಿಯೂ ಸೇವೆ ಸಲ್ಲಿಸಿರುವ ಅವರನ್ನು ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಲು ನಿಯುಕ್ತಿಗೊಳಿಸಲಾಗಿತ್ತು.

Read More

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್‌ವೆಲ್ ನಡುವೆ ಕಾರ್ ಪಲ್ಟಿಯಾಗಿ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ಜೂ.16ರ ಸೋಮವಾರ ತಡರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ಕೇರಳದ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ ಅಲ್ಲಿಯೇ ಫಿಸಿಯೋಥೆರಪಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ಮೊಹಮ್ಮದ್ ಅಮಲ್ (29) ಎಂದು ಗುರುತಿಸಲಾಗಿದೆ. ನಂತೂರಿನ ತಾರೆತೋಟ ಬಳಿ ಘಟನೆ ನಡೆದಿದ್ದು, ರಾತ್ರಿ ಮಳೆ ಬರುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ಸ್ಕಿಡ್ ಆಗಿ ಡಿವೈಡರ್‌ಗೆ ಬಡಿದು ಬಳಿಕ ಮೂರು ಪಲ್ಟಿಯಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಈ ವೇಳೆ ಅವರು ಮೃತಪಟ್ಟಿದ್ದರು.ಕಾರಿನಲ್ಲಿದ್ದ ಕೇರಳ ಮೂಲದ ವೈದ್ಯ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ. ಘಟನೆ ವೇಳೆ ಹಿಂದಿನಿಂದ ಬರುತ್ತಿದ್ದ ಲೋಡ್ ತುಂಬಿದ ಲಾರಿಯೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದಾಗ ರಸ್ತೆಯಲ್ಲೇ ಪಲ್ಟಿಯಾಗಿದೆ. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಅಡ್ಯಾರ್‌ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ‌ 10 ತಿಂಗಳ ಅನೀಶ್ ಕುಮಾರ್ ಎಂಬ ಮಗು ಮೃತಪಟ್ಟಿದೆ. ಶನಿವಾರ ಮಧ್ಯಾಹ್ನ 1.30ರ ವೇಳೆಗೆ ಘಟನೆ ಸಂಭವಿಸಿದೆ. ಅಸ್ವಸ್ಥಗೊಂಡಿದ್ದ ಮಗುವನ್ನು ಮಧ್ಯಾಹ್ನ 3.30ರ ವೇಳೆಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಭಾನುವಾರ ಬೆಳಗ್ಗೆ 10.25ರ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ. ಈ ಬಗ್ಗೆ ಮಗುವಿನ ತಾಯಿ ಲಕ್ಷ್ಮೀದೇವಿ ಪ್ರತಿಕ್ರಿಯಿಸಿ, “ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಎಸೆಯದಂತೆ ಗಂಡನಿಗೆ ಹಲವು ಬಾರಿ ತಿಳಿಸಿದ್ದೆ. ಹೀಗಿದ್ದರೂ ನಿರ್ಲಕ್ಷಿಸಿದ ಪರಿಣಾಮ ಮಗುವಿನ ಪ್ರಾಣ ಹೋಗಿದೆ” ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಮಗುವಿನ ತಂದೆ ವೆಡ್ಡಿಂಗ್ ಈವೆಂಟ್ ಡೆಕೊರೇಶನ್ ಕೆಲಸ ಮಾಡಿಕೊಂಡಿದ್ದಾರೆ. ಜೂನ್ 14ರಂದು ಮಧ್ಯಾಹ್ನ ಮಗು ಆಟವಾಡುತಿದ್ದಾಗ ತಂದೆ ಸೇದಿ ಬಿಸಾಡಿದ್ದ ಬೀಡಿಯನ್ನು ನುಂಗಿ ಅಸ್ವಸ್ಥವಾಗಿದೆ.…

Read More

ಬಂಟ್ವಾಳ; ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆಯಾಗಿದೆ. ಬಂಟ್ವಾಳದ ಬೆಂಜನಪದವು ನಿವಾಸಿ ಸಾಗರ್ ( 28 ) ಮೃತ ಯುವಕ. ಬಂಟ್ವಾಳದ ಬೆಂಜನಪದವು ನಿವಾಸಿ ಸಾಗರ್ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಸಾಗರ್‌ ಗಾಗಿ ಮನೆಮಂದಿ ಹಾಗೂ ಸ್ನೇಹಿತರು ಹುಡುಕಾಟ ನಡೆಸಿದ್ದರು. ಟವರ್ ಲೋಕೇಶನ್ ಪ ತ್ತೆಮಾಡಲು ಪ್ರಕರಣ ದಾಖಲಿಸಿದ್ದರು. ಆದರೆ ಇಂದು ಪಕ್ಕದ ಹಳ್ಳದಲ್ಲಿ ಸಾಗರ್ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Read More

ಕಾಸರಗೋಡು: ಸಹಪಾಠಿಗಳ ಜೊತೆ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿ ಸಮೀಪದ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಜೆ ಬಾಡೂರು ಸಮೀಪದ ಓಣಿಬಾಗಿಲು ಎಂಬಲ್ಲಿ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಓಣಿಬಾಗಿಲು ವಿನ ಮುಹಮ್ಮದ್ – ಖದೀಜತ್ ಕುಬ್ರಾ ದಂಪತಿ ಪುತ್ರಿ ಫಾತಿಮಾ ಹಿಬಾ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸಹಪಾಠಿಗಳ ಜೊತೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದು ಈ ದುರ್ಘಟನೆ ನಡೆದಿದೆ. ಜೊತೆಗಿದ್ದ ಮಕ್ಕಳ ಬೊಬ್ಬೆ ಕೇಳಿ ಮನೆಯವರು ಹಾಗೂ ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿ ಬಾಲಕಿಯನ್ನು ಮೇಲಕ್ಕೆತ್ತಿ ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ಬಾಲಕಿಯ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ. ಬಾಲಕಿ ಬಾಡೂರು ಪದವು ಎ. ಎಲ್. ಪಿ ಶಾಲೆಯ ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

Read More

ಕಡಬ : ಪಂಪ್‌ಗೆ ಸ್ವಿಚ್ ಹಾಕುವಾಗ  ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವನ್ನಪ್ಪಿರುವ ಘಟನೆ  ಎಡಮಂಗಲ ಸಮೀಪದ ಚಾರ್ವಾಕ ಗ್ರಾಮದಲ್ಲಿ ಜೂನ್ 16ರ ಸಂಜೆ ನಡೆದಿದೆ. ದೋಳ್ಪಾಡಿ ನಿವಾಸಿ ಪುರಂದರ ಎಂಬವರ ಪತ್ನಿ ರೇಖಾ(35) ಮೃತಟ್ಟವರು. ರೇಖಾ ತಮ್ಮ ಮನೆಯಲ್ಲಿ ನೀರಿನ ಪಂಪ್ ಆನ್ ಆಗ್ತಿಲ್ಲ ಎಂದು ಕೇಬಲ್ ಮುಟ್ಟಿದ್ದಾರೆ. ಆಗ ವಿದ್ಯುತ್ ಶಾಕ್ ಹೊಡೆದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರಿಕ್ಷೇಗಾಗಿ ಆರೋಗ್ಯ ಕೇಂದ್ರದ ಶವಗಾರದಲ್ಲಿ ಇರಿಸಲಾಗಿದ್ದು, ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು: ನಗರದಲ್ಲಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಖೆಡ್ಡಾ ತೋಡಿ, ಹಣ ದೋಚುತ್ತಿದ್ದಂತ ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಠಾಣೆಯ ಕಾನ್ಸ್ ಸ್ಟೇಬಲ್ ಶಿವಣ್ಣ, ಮೂರ್ತಿ ಸೇರಿದಂತೆ ಐವರು ಆರೋಪಿಗಳು ಹನಿಟ್ರ್ಯಾಪ್ ಖೆಡ್ಡಾವನ್ನು ಬಟ್ಟೆ ಅಂಗಡಿಯ ಮಾಲೀಕ ದಿನೇಶ್ ಎಂಬುವರಿಗೆ ತೋಡಿದ್ದರು. ದಿನೇಶ್ ಕುಮಾರ್ ಅಂಗಡಿಗೆ ಬಟ್ಟೆ ಖರೀದಿಗೆ ತೆರಳಿದ್ದಂತ ಯುವತಿ, ಆತನನ್ನ ಪರಿಚಯಿಸಿಕೊಂಡು ಪೋನ್ ನಂಬರ್ ಪಡೆದು ವಾಟ್ಸ್ ಆಪ್ ಮೂಲಕ ಚಾಟ್ ಗೆ ಇಳಿದು, ಮನೆಯಲ್ಲಿ ಯಾರು ಇಲ್ಲ. ಕಾಪಿಗೆ ಬನ್ನಿ ಎಂಬುದಾಗಿ ದಿನೇಶ್ ಕುಮಾರ್ ಆಹ್ವಾನಿಸಿದ್ದರು. ಯುವತಿ ಮಾತಿಗೆ ಮರುಳಾಗಿ ತೆರಳಿದ್ದಂತ ವೇಳೆಯಲ್ಲಿ ಕಾನ್ಸ್ ಸ್ಟೇಬಲ್ ಶಿವಣ್ಣ, ಮೂರ್ತಿ ದಿಢೀರ್ ಮನೆಗೆ ನುಗ್ಗಿ ಹಿಗ್ಗಾಮುಗ್ಗಾ ದಿನೇಶ್ ಕುಮಾರ್ ಥಳಿಸಿ ವೀಡಿಯೋ ಮಾಡಿದ್ದರು. ಈ ಘಟನೆಯ ನಂತ್ರ ದಿನೇಶ್ ಕುಮಾರ್ ಗೆ ಬ್ಲಾಕ್ ಮೇಲ್ ಮಾಡಿ, ಈ ವಿಷಯ ಯಾರಿಗೂ ಹೇಳದಿರಲು 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮಾನ…

Read More

ಬೆಳ್ತಂಗಡಿ: ಯುವಕರಿಬ್ಬರು ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ರವಿವಾರ ನಡೆದಿದೆ. ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಅಪಾಯದಿಂದ ಪಾರಾದ ಯುವಕರು. ಇವರು ಕೆಲಸಕ್ಕೆ ಹೋಗುವಾಗ ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ನದಿಯನ್ನು ಬೈಕ್ ಸಮೇತ ದಾಟುತ್ತಿದ್ದರು. ಈ ವೇಳೆ ನದಿ ನೀರಿನಲ್ಲಿ ಕೊಚ್ಚಿ ಹೋದ ಇವರ ಬೈಕ್ ನದಿ ಬದಿಯಲ್ಲಿ ಅದೃಷ್ಟವಶಾತ್ ಸಿಲುಕಿಕೊಂಡಿದೆ ಎನ್ನಲಾಗಿದೆ. ಕೂಡಲೇ ಯುವಕರಿಬ್ಬರು ಕೈಗೆ ಸಿಕ್ಕ ಯಾವುದೋ ಬಳ್ಳಿಯ ಸಹಾಯದಿಂದ ಸಿನಿಮೀಯ ರೀತಿಯಲ್ಲಿ ಪಾರಾಗಿ ಬದುಕುಳಿದಿದ್ದಾರೆ ಎಂದು ತಿಳಿದು ಬಂದಿದೆ.

Read More

ಪುತ್ತೂರು: ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಪುತ್ತೂರು ಎಂಬಲ್ಲಿ ರವಿವಾರ ತಡರಾತ್ರಿ ನಡೆದಿದೆ. ಚಿಕ್ಕಪುತ್ತೂರಿನ ನಿವಾಸಿ, ಚಿಂತನ್ ಎಂಬವರ ಪತ್ನಿ ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಏಳು ತಿಂಗಳ ಗರ್ಭಿಣಿಯಾಗಿದ್ದರು. ಸುರತ್ಕಲ್ ಮೂಲದ ರೇಷ್ಮಾರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.

Read More

ಉಡುಪಿ : ನಗರದ ಸಮೀಪ ಉದ್ಯಾವರ ಎಂಬಲ್ಲಿ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ತೋಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟವರು ಉದ್ಯಾವರ ಕೇದಾರ್ ನಿವಾಸಿ ರೊನಾಲ್ಡ್ ಫೆರ್ನಾಂಡಿಸ್ (52) ಎಂದು ತಿಳಿಯಲಾಗಿದೆ. ಇವರು ಕೆಲಸ ಮುಗಿಸಿ ಮನೆ ಬಳಿ ಬರುತ್ತಿದ್ದಾಗ, ಮನೆ ಹಿಂಬದಿಯ ತೋಡಿ ಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ಮೃತರು ಅವಿವಾಹಿತರು. ತಾಯಿ ಸಹೋದರರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Read More