Author: main-admin

ಮುಲ್ಕಿ : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಕೊಪ್ಪಳ ರೈಲ್ವೇ ಸೇತುವೆಯ ಕೆಳಭಾಗದ ನಂದಿನಿ ನದಿಯಲ್ಲಿ ನಾಲ್ವರು ಮಕ್ಕಳ ಮೃತ ದೇಹ ಪತ್ತೆಯಾಗಿದೆ. ಮೃತರನ್ನು ಸುರತ್ಕಲ್ ವಿದ್ಯಾದಾಯಿನಿ ಪ್ರೌಢ ಶಾಲೆಯ ಮಕ್ಕಳು ಎಂದು ಗುರುತಿಸಲಾಗಿದೆ. ಸುರತ್ಕಲ್ ವಿದ್ಯಾದಾಯಿನಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿತ್ ಚಂದ್ರಕಾಂತ್, ನಿರುಪ್, ಅನ್ವಿತ್, ರಾಘವೇಂದ್ರ ಮಂಗಳವಾರ ಮಧ್ಯಾಹ್ನ ಶಾಲೆಯಲ್ಲಿ ಪ್ರಿಪರೇಟರಿ ಪರೀಕ್ಷೆ ಬರೆದ ಬಳಿಕ ಏಕಾಏಕಿ ನಾಪತ್ತೆಯಾಗಿದ್ದರು. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಮಕ್ಕಳ ಮೃತದೇಹ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿಯ ಕೊಪ್ಪಳ ರೈಲ್ವೇ ಸೇತುವೆಯ ಕೆಳಭಾಗದಲ್ಲಿ ನಂದಿನಿ ನದಿಯಲ್ಲಿ ಪತ್ತೆಯಾಗಿದೆ. ಈ ನಡುವೆ ಸುರತ್ಕಲ್ ಪ್ರೌಢಶಾಲೆಯ ಒಟ್ಟು 7 ಮಕ್ಕಳು ಈಜಾಡಲು ತೆರಳಿದ್ದರು ಎನ್ನಲಾಗುತ್ತಿದ್ದು, ಮೂವರು ಸ್ಥಳದಿಂದ ಘಟನೆಯನ್ನು ಕಂಡು ಹೆದರಿ ಓಡಿ ಹೋಗಿದ್ದಾರೆ ಎನ್ನಲಾಗಿದೆ. ಮಕ್ಕಳ ಶವವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ…

Read More

ಸುಬ್ರಹ್ಮಣ್ಯ: ದೇವಸ್ಥಾನಕ್ಕೆ ಆಗಮಿಸಿದ ಮಹಿಳೆಯೊಬ್ಬರ ಮಗುವನ್ನು ಬೀದಿ ನಾಯಿಯೊಂದು ಹಾವಿನಿಂದ ರಕ್ಷಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ. ಆದಿ ಸುಬ್ರಹ್ಮಣ್ಯಕ್ಕೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿ ಮಾಡಲು ತೆರಳಿದ್ದರು. ಈ ವೇಳೆ ಮಗುವು ರಸ್ತೆ ಬದಿಗೆ ಬಂದಿದೆ. ಇದೇ ಸಂದರ್ಭ ನಾಗರಹಾವೊಂದು ರಸ್ತೆ ದಾಟುತ್ತಿತ್ತು. ರಸ್ತೆ ಬದಿಗೆ ಬಂದಿದ್ದ ಮಗು ಹಾವನ್ನು ತುಳಿಯುವಷ್ಟರಲ್ಲಿ ಅಲ್ಲಿಯೇ ಮಲಗಿದ್ದ ಬೀದಿ ನಾಯಿ ಓಡಿ ಹೋಗಿ ಮಗುವಿಗೆ ಅಡ್ಡ ನಿಂತಿಗೆ. ಮಗುವು ಹಾವನ್ನು ತುಳಿಯದಂತೆ, ಹಾವು ರಸ್ತೆ ದಾಟಲು ಅವಕಾಶ ಮಾಡಿಕೊಟ್ಟು ಮಗುವನ್ನು ಪ್ರಾಣಾಪಾಯದಿಂದ ಕಾಪಾಡಿದೆ.ಈ ಘಟನೆಯನ್ನ ಕಂಡ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಇನ್ನು ಈ ಕುರಿತ ಬರಹಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ

Read More

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಾರಂಟ್‌ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯನ್ನು ಕಾಪು ಪೊಲೀಸರು ಪಡುಬಿದ್ರಿಯಲ್ಲಿ ಬಂಧಿಸಿದ್ದಾರೆ ಎಂದು ತಿಳಿಯಲಾಗಿದೆ. ಬೈಂದೂರು ನಾವುಂದ ಬಡಾಕೆರೆ ಮುಸ್ಲಿಂ ಕೇರಿ ನಿವಾಸಿ ಮೊಹಮ್ಮದ್‌ ಆಸಿಫ್‌ ಯಾನೆ ಆಸಿಫ್‌(38)ನನ್ನು ಪಡುಬಿದ್ರಿ ನಡ್ಪಾಲು ಗ್ರಾಮದ ಸುಜ್ಲಾನ್‌ ಬಳಿ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಬೈಂದೂರು, ಗಂಗೊಳ್ಳಿ, ಮಂಗಳೂರು ಕಂಕನಾಡಿ ಗ್ರಾಮಾಂತರ ಪೊಲೀಸ್‌ ಠಾಣೆ ಮತ್ತು ಉಪ್ಪಿನಂಗಡಿ ಪೊಲೀಸ್‌ ಠಾಣೆಗಳ ಪ್ರಕರಣಗಳಿಗೆ ಸಂಬಂಧಿಸಿ ವಾರಂಟ್‌ ಜಾರಿಯಾಗಿತ್ತು. ಕಾಪು ಎಸ್‌ಐ ಅಬ್ದುಲ್‌ ಖಾದರ್‌ ಅವರ ಮಾರ್ಗದರ್ಶನದಂತೆ ಸಿಬಂದಿ ವರ್ಗದ ನಾರಾಯಣ ಮತ್ತು ರಫೀಕ್‌ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

Read More

ಉಡುಪಿ: ಶಂಕಿತ ಮಂಗನಕಾಯಿಲೆ(ಕೆಎಫ್‌ಡಿ)ಗಾಗಿ ಕಳೆದ ಶನಿವಾರ ಪರೀಕ್ಷೆಗಾಗಿ ಕಳುಹಿಸಲಾದ ಇಬ್ಬರು ಜ್ವರಪೀಡಿತ ವ್ಯಕ್ತಿಗಳ ಸ್ಯಾಂಪಲ್‌ಗಳು ‘ನೆಗೆಟಿವ್’ ಫಲಿತಾಂಶವನ್ನು ತೋರಿಸಿವೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ್ ತಿಳಿಸಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಮಂಗನಕಾಯಿಲೆಗಾಗಿ ಒಟ್ಟು ಮೂರು ಮಂದಿ ಶಂಕಿತರ ಸ್ಯಾಂಪಲ್‌ಗಳನ್ನು ಶಿವಮೊಗ್ಗದ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೆಂಚನೂರಿನ ಮಹಿಳೆಯೊಬ್ಬರಲ್ಲಿ ಮಾತ್ರ ಸೋಂಕು ಪತ್ತೆಯಾಗಿದ್ದು, ಉಳಿದ ಇಬ್ಬರದು ನೆಗೆಟಿವ್ ಆಗಿದೆ.ಹೀಗಾಗಿ ಸದ್ಯ ಜಿಲ್ಲೆಯಲ್ಲಿ ಯಾವುದೇ ಸಕ್ರಿಯ ಮಂಗನಕಾಯಿಲೆ ಪ್ರಕರಣಗಳು ಇಲ್ಲ.

Read More

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸ್‌ರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಪೊಲೀಸ್ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ. ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗುವ ಮುನ್ನ ಅರ್ಹ ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಂತರ್ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳ ಬಗ್ಗೆ ಕ್ರಮ ಕೈಗೊಂಡು, ಆ ಬಗ್ಗೆ ತಮಗೆ ವರದಿ ನೀಡುವಂತೆಯೂ ಗೃಹ ಸಚಿವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರದಲ್ಲಿ ನಿರ್ದೇಶಿಸಿದ್ದಾರೆ. ಅಂದ ಹಾಗೇ ಕಳೆದ ಮೂರು ವರ್ಷಗಳಿಂದ ಪೊಲೀಸ್ ಪೇದೆಗಳ ವರ್ಗಾವಣೆ ನಡೆದಿಲ್ಲ. ಈ ಸಂಬಂಧ ಗೃಹ ಸಚಿವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.…

Read More

ಕಾಸರಗೋಡು: ಪಿಕಪ್ ವ್ಯಾನ್‌‌ನಲ್ಲಿ ಸಾಗಿಸುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಅಬಕಾರಿ ದಳದ ವಿಶೇಷ ತಂಡ ಪೆರ್ಲದಿಂದ ವಶ ವಶಪಡಿಸಿಕೊಂಡಿದ್ದು,ಇಬ್ಬರನ್ನು ಬಂಧಿಸಿದ್ದಾರೆ. ಕುಂಬಳೆ ಶಾಂತಿಪಳ್ಳ ದ ಶಹೀನ್ ರಹೀಂ (36) ಮತ್ತು ಪೆರ್ಲ ಅಮ್ಮೆಕ್ಕಳದ ಶರೀಫ್ (32) ಬಂಧಿತ ಆರೋಪಿಗಳು.ಅಬಕಾರಿ ದಳದ ಸಿಬ್ಬಂದಿ ಗಳಿಗೆ ಲಭಿಸಿದ ಖಚಿತ ಮಾಹಿತಿಯಂತೆ ಪೆರ್ಲ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಪಿಕಪ್ ವ್ಯಾನ್ ಅನ್ನು ತಡೆದು ತಪಾಸಣೆ ನಡೆಸಿದಾಗ ಸುಮಾರು 107 ಕಿಲೋ ಗಾಂಜಾ ಪತ್ತೆಯಾಗಿದೆ.ಇನ್ನು ಯಾರಿಗೂ ಸಂಶಯ ಬಾರದಂತೆ ಬಚ್ಚಿಟ್ಟು ಗಾಂಜಾವನ್ನು ಸಾಗಿಸಲಾಗುತ್ತಿತ್ತುಆಂಧ್ರ ಪ್ರದೇಶದಿಂದ ಬೆಂಗಳೂರು ಮೂಲಕ ಈ ಗಾಂಜಾ ವನ್ನು ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎಂದು ಅಬಕಾರಿ ದಳದ ಸಿಬಂದಿಗಳು ತಿಳಿಸಿದ್ದಾರೆ.

Read More

ಮೂಡುಬಿದಿರೆ : ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರಾ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಇದ್ದು ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದ್ದು, ಸದ್ಯ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ, ವಿದ್ಯಾರ್ಥಿನಿ ತನ್ನ ಪ್ರಿಯಕರನ ಜೊತೆ ಮದುವೆಯಾಗಿದ್ದಾಳೆ ಎನ್ನಲಾಗಿದೆ.ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಆದಿರಾ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿರುವುದಾಗಿ ತಿಳಿದು ಬಂದಿದೆ. ಫೆ.23 ರಂದು ಬೆಳಿಗ್ಗೆ ಕಾಲೇಜಿನ ಬಸ್ಸಲ್ಲಿ ಬಂದಿದ್ದ ಆಕೆ ಕನ್ನಡ ಭವನ ಬಳಿ ಇಳಿದು ಹೋದಾಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಹೆತ್ತವರು ಮೂಡುಬಿದಿರೆ ಠಾಣೆಗೆ ದೂರು ನೀಡಿದ್ದರು. ಇದೀಗ ಆಕೆ ತನ್ನ ಪ್ರಿಯಕರನೊಂದಿಗೆ ಕೇರಳದಲ್ಲಿ ಮದುವೆಯಾಗಿರುವುದಾಗಿ ತಿಳಿದು ಬಂದಿದೆ. ತನ್ನದೇ ಊರಿನ ಯುವಕನನ್ನು ಪ್ರೀತಿಸುತ್ತಿದ್ದ ಆಕೆ ಆತನನ್ನೇ ಮದುವೆಯಾಗಿದ್ದಾಳೆಂದು ತಿಳಿದು ಬಂದಿದ್ದು…

Read More

ಉಡುಪಿ: ನದಿ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನಡೆದಿದೆ.ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಇಳಿದಿದ್ದ ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ ಮೂಲದ ಶೈನು ಡೇನಿಯಲ್ ಸಾವನ್ನಪ್ಪಿದ್ದಾರೆ. ಪ್ರವಾಸಕ್ಕೆಂದು ಬಂದಿದ್ದ ಮೂವರು ಗೆಳೆಯರ ತಂಡದ ಇಬ್ಬರು ಈಜು ಬಾರದೆ ಮುಳುಗಿರುವ ಸಾಧ್ಯತೆ ಇದೆ. ಶೃಂಗೇರಿಯಲ್ಲಿ ವೈದ್ಯರಾಗಿರುವ ಡಾ. ದೀಪಕ್ ಹಾಗೂ ಶಿವಮೊಗ್ಗದ ವ್ಯಾಪಾರಿ ಶೈನು ಡೇನಿಯಲ್ ಸಾವನ್ನಪ್ಪಿದ್ದಾರೆ. ಹೆಬ್ರಿಗೆ ಪ್ರವಾಸಕ್ಕೆ ಬಂದು ವಾಪಾಸ್ಸಾಗುವಾಗ ನದಿಗೆ ಇಳಿದಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

Read More

ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಫೆ. 24ರಂದು ನೀರಾಟವಾಡುತ್ತಿದ್ದಾಗ ಬೃಹತ್‌ ಅಲೆಗೆ ಕೊಚ್ಚಿಹೋಗಿ ಮುಳುಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತುಕಾರಾಮ (13) ಅವರ ಮೃತದೇಹ ರವಿವಾರ ಮುಂಜಾನೆ ತಣ್ಣೀರುಬಾವಿ ಬಳಿ ಪತ್ತೆಯಾಗಿದೆ. ಮೀನುಗಾರರು ಮೃತದೇಹ ತೇಲುತ್ತಿರುವುದನ್ನು ಕಂಡಿದ್ದು, ಧನಪಾಲ್‌ ಸಾಲ್ಯನ್‌ ಅವರು ದಡಕ್ಕೆ ಎಳೆದು ತಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆಬೈಕಂಪಾಡಿ ಮೀನಕಳಿಯ ಸರಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ತುಕಾರಾಮ್ ಶಾಲೆ ಬಿಟ್ಟ ಬಳಿಕ ಸ್ನೇಹಿತ ಮಾರುತಿ ಜತೆ ಪಣಂಬೂರು ಬೀಚ್‌ಗೆ ಆಗಮಿಸಿ ನೀರಾಟದಲ್ಲಿ ತೊಡಗಿದ್ದ. ಆದರೆ ಈ ವೇಳೆ ಬೃಹತ್ ಅಲೆಗೆ ಕೊಚ್ಚಿ ಹೋಗಿದ್ದ. ಬೀಚ್‌ನಲ್ಲಿದ್ದ ಇತರರು ವಿದ್ಯಾರ್ಥಿ ಮುಳುಗುತ್ತಿರುವುದನ್ನು ಕಂಡು ಬೀಚ್‌ನ ರಕ್ಷಣ ದಳಕ್ಕೆ ತಿಳಿಸಿದ್ದರು. ತತ್‌ಕ್ಷಣ ಜೆಟ್‌ ಸ್ಕೀ ಮೂಲಕ ಕಾಪಾಡಲು ಯತ್ನಿಸಿದರೂ ಆತನ ಸುಳಿವು ಸಿಕ್ಕಿರಲಿಲ್ಲಬಾಲಕ ಉತ್ತರ ಕರ್ನಾಟಕ ಮೂಲದವರಾಗಿದ್ದು, ಕೆಲಸದ ನಿಮಿತ್ತ ಬಂದಿದ್ದ ಇವರ ಪೋಷಕರು ಬೈಕಂಪಾಡಿ ಮೀನಕಳಿಯ ಬಳಿ ವಾಸವಿದ್ದರು.

Read More

ಬೆಂಗಳೂರು : ಇನ್ಮುಂದೆ ಸಿಗ್ನಲ್ ಜಂಪ್ ಮಾಡಿದರೆ ಹುಷಾರ್! ಇದನ್ನು ನಾವು ಹೇಳ್ತಾಯಿಲ್ಲ ಸಂಚಾರ ಪೊಲೀಸರೇ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ನಿಮಯ ಉಲ್ಲಂಘಿಸಿ ತಪ್ಪಿಸಿಕೊಂಡು ಬಿಡಬಹುದು ಎಂದು ಖುಷಿ ಪಡುವವರಿಗೆ ಇದೊಂದು ಬಿಗ್ ಶಾಕ್.ಹೌದು… ಮೊಬೈಲ್‌ನಲ್ಲಿ ಮಾತನಾಡುತ್ತ ವಾಹನ ಚಾಲನೆ, ಹೆಲ್ಮೆಟ್ ಇಲ್ಲದೆ ಸವಾರಿ ಹೀಗೆ ಸಂಚಾರ ನಿಯಮ ಉಲ್ಲಘಿಸಿದ ಎರಡನೇ ನಿಮಿಷದಲ್ಲಿ ನಾಗರಿಕರ ಮುಬೈಲ್‌ಗೆ ದಂಡ ಪಾವತಿಸುವಂತೆ ಸಂದೇಶ ಬರಲಿದೆ. ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ತ್ವರಿತ ಸಂದೇಶ ರವಾನಿಸುವ ಹೊಸ ವ್ಯವಸ್ಥೆಯನ್ನು ರಾಜ್ಯ ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗವು ಜಾರಿಗೊಳಿಸಿದೆ. ಇದಕ್ಕಾಗಿ ಅತ್ಯಾಧುನಿಕ ಕ್ಯಾಮೆರಾಗಳನ್ನು ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಸಂಚಾರ ಪೊಲೀಸರು ಅಳವಡಿಸಲಿದ್ದಾರೆ. ಆ ಕ್ಯಾಮೆರಾಗಳು ಸೆರೆಹಿಡಿದ ಫೋಟೋಗಳನ್ನು ಆಧರಿಸಿ ಎರಡು ನಿಮಿಷದಲ್ಲಿ ನಿಯಮ ಉಲ್ಲಂಘಿಸಿದವರಿಗೆ ಸಂದೇಶ ಕಳುಹಿಸಲಿದ್ದಾರೆ.ಈ ಸಂದೇಶದಲ್ಲಿ ಲಿಂಕ್ ಇರುತ್ತದೆ. ಅದರಲ್ಲಿ ಯಾವ ರೀತಿಯ ಸಂಚಾರ ನಿಯಮ ಉಲ್ಲಂಘನೆಯಾಗಿದೆ ಎಂಬ ಫೋಟೋ, ಮಾಹಿತಿ ಇರುತ್ತದೆ.ಅಲ್ಲೇ ದಂಡ ಪಾವತಿಸಬಹುದು. ಈ…

Read More