ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಯೋಜನೆಯಲ್ಲಿ ಸಬ್ಸಿಡಿ ಸಾಲ ತೆಗೆಸಿ ಕೊಡುವುದಾಗಿ ನಂಬಿಸಿ ಬ್ರಹ್ಮಾವರದಲ್ಲಿ ಕೋಟ್ಯಾಂತರ ರೂಪಾಯಿ ವಂಚಿಸಿರುವ ಜಾಲ ಪತ್ತೆ ಹೆಚ್ಚಲಾಗಿದೆ. ವಂಚನೆಗೆ ಒಳಗಾದವರು ಉಡುಪಿ, ಬ್ರಹ್ಮಾವರ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿದ್ದು,ಪೊಲೀಸರು ಕಾರ್ಯಾಚರಣೆ ನಡೆಸಿ ವಂಚನೆ ಜಾಲದ ಕಿಂಗ್ ಪಿನ್ ಬ್ರಹ್ಮಾವರ ತಾಲ್ಲೂಕು ಆರೂರು ಗ್ರಾಮ ಕೌಸಲ್ಯಾ ಎಂಬ ಮಹಿಳೆಯನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಈ ವಂಚನೆ ಜಾಲದ ಕೊಕ್ಕರ್ಣೆ ಮತ್ತು ಬೈಂದೂರಿನ ಇನ್ನಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮದಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವ ಆಸೆ ತೋರಿಸಿ ಸುಮಾರು ಒಂದೂವರೆ ಕೋಟಿ ರೂಪಾಯಿ ವಂಚಿಸಿದ್ದು ಈ ಬಗ್ಗೆ ಬ್ರಹ್ಮಾವರ ತಾಲ್ಲೂಕು ಹೆರಾಡಿ ಗ್ರಾಮದ ಸರಿತಾ ಲೂಯಿಸ್ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ರಿ ಪ್ರಕರಣದಲ್ಲಿ ಸರಿತಾ ಲೂಯಿಸ್ ಅವರಿಗೆ ಸುಮಾರು 80,72,000 ಹಾಗೂ ಅವರ ಸಂಬಂದಿ ಅಂಜಲಿನ್ ಡಿಸಿಲ್ವ ಅವರಿಗೆ 65,00,000 ವಂಚಿಸಿರುವ ಬಗ್ಗೆ…
Author: main-admin
ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾಡಿದ ವಿವಾದಾತ್ಮಕ ಭಾಷಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಅಕ್ಟೋಬರ್30ರಂದು ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಧಾರ್ಮಿಕ ದ್ವೇಷ ಪ್ರಚೋದನೆ ಮತ್ತು ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 25 ರಂದು ಪುತ್ತೂರು ತಾಲೂಕಿನ ಈಶ್ವರಿ ಪದ್ಮುಂಜ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇತ್ತೀಚೆಗೆಉಪ್ಪಳಿಗೆಯಲ್ಲಿ ಭಗತ್ ಸಿಂಗ್ ಸೇವಾ ಯುವಶಕ್ತಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್ ಅವರ ಭಾಷಣವು ಹಿಂದೂ-ಮುಸ್ಲಿಂ ಸಮುದಾಯಗಳ ಬಗ್ಗೆ ಅವಮಾನಕಾರಿ ಹೇಳಿಕೆಗಳನ್ನು ನೀಡಿ, ಮತದಾರರ ಸಂಖ್ಯೆಯ ಉಲ್ಲೇಖದ ಮೂಲಕ ಧಾರ್ಮಿಕ ವೈಮನಸ್ಸು ಸೃಷ್ಟಿಸಲು ಪ್ರಯತ್ನಿಸಿದೆ ಎಂಬ ಗಂಭೀರ ಆರೋಪವಿದೆ. ಭಾಷಣವು ಖಾಸಗಿ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಿತ್ತು.
ಮಂಗಳೂರು: ನವಮಂಗಳೂರು ಬಂದರ್ ನಿಂದ 100 ನಾಟಿಕಲ್ ಮೈಲು ದೂರದ ಅರಬ್ಬೀ ಸಮುದ್ರದಲ್ಲಿ ಶನಿವಾರ ಅಪಾಯಕಾರಿ ಸ್ಥಿತಿಯಲ್ಲಿದ್ದ ಬೋಟ್ ವೊಂದನ್ನು ಪತ್ತೆ ಹಚ್ಚಿದ ಇಂಡಿಯನ್ ಕೋಸ್ಟ್ ಗಾರ್ಡ್ 31 ಮೀನುಗಾರರನ್ನು ರಕ್ಷಿಸಿದೆ. ಅ.24ರಂದು ಗೋವಾ ತೀರದಲ್ಲಿ ಕಾಣಿಸಿಕೊಂಡಿದ್ದ ಈ ಬೋಟ್ ಬಳಿಕ ಕಾಣೆಯಾಗಿತ್ತು. ಮಾಹಿತಿ ಪಡೆದ ಕೋಸ್ಟ್ಗಾರ್ಡ್ ಅಧಿಕಾರಿಗಳು ಸಿಬ್ಬಂದಿ ಮೂಲಕ ಹುಡುಕಾಟ ಆರಂಭಿಸಿದರೂ ಪ್ರಯೋಜನವಾಗಲಿಲ್ಲ. ಕೆಲವು ದಿನದಿಂದ ಸುರಿಯುವ ಭಾರೀ ಮಳೆ, ಗಾಳಿಗೆ ಸಮುದ್ರ ಪ್ರಕ್ಷುಬ್ಧಗೊಂಡಿತ್ತು. ಈ ವೇಳೆ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಾಪತ್ತೆಯಾಗಿತ್ತು. ಬೋಟ್ ಪತ್ತೆಗೆ ಪ್ರಯತ್ನಿಸಿದರೂ ಫಲಿಸಿರಲಿಲ್ಲ. ಅಂತಿಮವಾಗಿ ಕೊಚ್ಚಿಯಿಂದ ಏರ್ ಕ್ರಾಫ್ಟ್ ತರಿಸಿ ಹುಡುಕಾಟ ಮುಂದುವರಿಸಲಾಯಿತು. ಶನಿವಾರ ಅಪಾಯಕ್ಕೆ ಸಿಲುಕಿದ್ದ ಬೋಟ್ ಅನ್ನು ಪತ್ತೆಹಚ್ಚಲಾಗಿದ್ದು, ಅದರಲ್ಲಿದ್ದ 31 ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಕೋಸ್ಟ್ ಗಾರ್ಡ್ ಪ್ರಕಟನೆ ತಿಳಿಸಿದೆ.
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ಹೊಳೆನರಸೀಪುರದ ಸಂಜಯ್ (25) ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಉಪ್ಪಿನಂಗಡಿ ಅಡ್ಡಹೊಳೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಸಂಭವಿಸಿದೆ. ಕಾರು ಚಾಲಕ ಅರಕಲಗೂಡು ನಿವಾಸಿ ಸಂದೀಪ್, ಕಾರಿನಲ್ಲಿದ್ದ ಶೇಷ, ಮಹೇಶ್ ಅವರು ಅಪಾಯದಿಂದ ಪಾರಾಗಿದ್ದಾರೆ. ಸಂಜಯ್ ಹಾಗೂ ಇತರರು ತಮ್ಮ ತೋಟದಲ್ಲಿ ಬೆಳೆದ ಹೂಗಳನ್ನು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾರಾಟ ಮಾಡಲು ಉಡುಪಿಗೆ ಬಂದಿದ್ದರು. ಹೂವು ಮಾರಾಟ ಮಾಡಿ ಮತ್ತೆ ಊರಿಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಪುತ್ತೂರು: ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅ.20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅವಮಾನಿಸಿ, ಗರ್ಭಿಣಿ ಮಹಿಳೆಯರನ್ನು ನಿಂದನೆ ಮಾಡಿದ್ದಾರೆಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ದೂರು ನೀಡಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ತನ್ನ ಭಾಷಣದಲ್ಲಿ ”ಆಚೆ ಮನೆಯಲ್ಲಿ ಒಬ್ಬಳು ಬ್ಯಾರ್ದಿ ಇದ್ದು, ಅವಳು 6ನೆಯದ್ದು ಆಗಿ 7ನೇ ಗರ್ಭಿಣಿಯಾಗಿದ್ದಳು. ಅವಳಿಗೆ ಯಾರಾದ್ರು ಕೇಳಿದ್ರಾ ? ನೀನು ನಾಯಿ ಮರಿ ಹಾಕಿದ ಹಾಗೆ ಹಾಕ್ತಾ ಇದ್ದೀಯಾ ಅಂತ ಕೇಳಿದ್ರಾ ? ಕೇಳುವ ದೈರ್ಯವೂ ಇಲ್ಲ. ಎರಡನೆಯದಾಗಿ ಅವರು ಹೇಳ್ತಾರೆ. ಅದು ಅಲ್ಲಾಹನಿಗೋಸ್ಕರ. ನಮ್ಮ ಮಕ್ಕಳು ಅಲ್ಲಾಹನಿಗೋಸ್ಕರ ಅನ್ನುತ್ತಾರೆ. ನೀವೇನಾದರೂ ಮಹಾಲಿಂಗೇಶ್ವರನಿಗಾಗಿ ಮಕ್ಕಳು ಮಾಡ್ತೀರಾ ? ನಮ್ಮ ಜನಸಂಖ್ಯೆ ಜಾಸ್ತಿಯಾಗಬೇಕು. ಮಂಗಳೂರು ವಿಧಾನಸಭಾ ಕ್ಷೇತ್ರ ಉಳ್ಳಾಲ ಅಂತ…
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಾರ್ ಎದುರು ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ರೌಡಿ ಶೀಟರ್ ಗುರುರಾಜ್ ಆಚಾರಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮತ್ತೊಬ್ಬ ಆರೋಪಿ ಅಶೋಕ್ ಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.ವರದಿಗಳ ಪ್ರಕಾರ, ಬಾರ್‌ನೊಳಗೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯು ತೀವ್ರಗೊಂಡು ಹೊರಗೆ ಚಾಕು ಇರಿತದಲ್ಲಿ ಅಂತ್ಯಗೊಂಡಿತ್ತು.ಈ ಘಟನೆಯಲ್ಲಿ ಗಾಯಗೊಂಡಿರುವ ನಿಝಾಮ್ ಮತ್ತು ಹಸನ್ ಮುಕ್ಷಿತ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅಕ್ಟೋಬರ್ 24ರಂದು, ಪೊಲೀಸರು ಆರೋಪಿಗಳಾದ ಸುಶಾಂತ್, ಅಲೆಕ್ಸ್, ನಿತಿನ್ ಮತ್ತು ಆರೋಪಿಗಳಿಗೆ ಸಹಾಯ ಮಾಡಿದ್ದ ಆರೋಪದ ಮೇಲೆ ಅರುಣ್ ಶೆಟ್ಟಿ ಅವರನ್ನು ಬಂಧಿಸಿದ್ದರು.
ಬಜ್ಪೆ: ಪೆರ್ಮುದೆ ಬಂಡಸಾಲೆಯ ಬಳಿಯ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮನೆಯೆಲ್ಲ ಜಾಲಾಡಿ ಬರಿಗೈಯಲ್ಲಿ ಮರಳಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಶಿಕ್ಷಕಿ ಶೋಭಾ ಬ್ರಿಟೋ ಎಂಬವರ ಮನೆಗೆ ಕಳ್ಳರು ನುಗ್ಗಿದ್ದಾರೆ ಎಂದು ತಿಳಿದು ಬಂದಿದೆ. ಅ.22ರಂದು ಶಿಕ್ಷಕಿ ಶೋಭಾ ಬ್ರಿಟೋ ಅವರು ತಾಯಿಯ ಮನೆಗೆ ತೆರಳಿದ್ದಾಗ ಅವರ ಮನೆಗೆ ಕಳ್ಳರು ನುಗ್ಗಿದ್ದಾರೆ. ಕಳ್ಳರು ರಾತ್ರಿ 10ರಿಂದ 11ರ ವರೆಗೆ ಮನೆಯಲ್ಲಿದ್ದುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ ಎಂದು ತಿಳಿದು ಬಂದಿದೆ. ಶಿಕ್ಷಕಿ ಅ.23ರಂದು ಸಂಜೆ ಶಾಲೆಯಿಂದ ಮನೆಗೆ ಬಂದಾಗ ಕಳವು ಬಗ್ಗೆ ಮಾಹಿತಿ ತಿಳಿದು ಬಂದಿದೆ. ಮನೆಯೆಲ್ಲ ಜಾಲಾಡಿದ ಕಳ್ಳರಿಗೆ ಯಾವುದೇ ಆಭರಣ ಸಿಗದಿರುವುದು ಹಾಗೂ ಅಲ್ಲಿದ್ದ ಲ್ಯಾಪ್‌ಟಾಪ್‌ನ್ನು ಕಳವು ಮಾಡದೇ ಇರುವುದು ಕಂಡು ಬಂದಿದೆ. ಕಳ್ಳರು ಅ.23ರಂದು ರಾತ್ರಿ ಅಲ್ಲಿಯೇ ಪಕ್ಕದ ಗುಜರಿ ಅಂಗಡಿಯ ಶಟರ್‌ನ್ನು ಮುರಿಯುವ ವಿಫಲ ಪ್ರಯತ್ನ ಮಾಡಿರುವುದು ಕಂಡು ಬಂದಿದೆ.
ಪುತ್ತೂರು: ಈಶ್ವರಮಂಗಲ ಸಮೀಪದ ಬೆಳ್ಳಿಚಡಾವು ಬಳಿ ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್‌ಗೆ ಚಾರ್ಜ್ ಮೆಮೋ ಜಾರಿ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಘಟನೆಯ ಬಳಿಕ ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ಬಂದು ಒಂದು ಜಾನುವಾರು ಸತ್ತಿರುವುದನ್ನು ಗಮನಿಸಿ ಉಳಿದ ಜಾನುವಾರುಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಅದರಲ್ಲಿ ಇರುವ ಜಾನುವಾರುಗಳನ್ನು ಇಳಿಸಬಹುದೇ ಎಂದು ಕೇಳಿದ್ದಾರೆ. ಅನಂತರ ಕಾನ್‌ಸ್ಟೆಬಲ್ ಇನ್‌ಸ್ಪೆಕ್ಟರ್‌ಗೆ ದೂರವಾಣಿ ಮೂಲಕ ವಿಷಯ ತಿಳಿಸುವಾಗ ಅರುಣ್ ಕುಮಾರ್‌ಪುತ್ತಿಲ ಮೊಬೈಲ್ ಕೇಳಿ ಪಡೆದುಕೊಂಡು ಇನ್‌ಸ್ಪೆಕ್ಟರ್ ಜತೆ ಮಾತನಾಡಿದ್ದರು ಮತ್ತು ಅದಕ್ಕೆ ಅದಕ್ಕೆ ಒಪ್ಪಿಗೆ ಪಡೆದಿದ್ದರು. ಆದರೆ ಇಲ್ಲಿ ಮುನ್ನೆಚ್ಚರಿಕೆ ವಹಿಸದೆ ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ ತೆಗೆದುಕೊಂಡಿರುವುದು ಇನ್‌ಸ್ಪೆಕ್ಟರ್ ತಪ್ಪಾಗಿದ್ದು ಆದ್ದರಿಂದ ಇನ್‌ಸ್ಪೆಕ್ಟರ್‌ಗೆ ಚಾರ್ಜ್ ಮೆಮೋ ನೀಡಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವುದು ಈ ಹಿಂದೆ ಕಂಡುಬಂದಿತ್ತು.ಆದರೆ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿಯ ಕಳ್ಳಾಟ ಮತ್ತೊಮ್ಮೆ ಬಯಲಾಗಿದೆ. ಜೈಲಿನೊಳಗೆ ಫೋನ್ ತೆಗೆದುಕೊಂಡು ಹೋಗುತ್ತಿದ್ದ ಸಿಬ್ಬಂದಿ ಸಿಗಿ ಬಿದ್ದಿದ್ದಾನೆ. ತಪಾಸಣೆಯ ವೇಳೆ ಸಿಬ್ಬಂದಿ ಅಮರ್ ಪ್ರಾಂಜೆ ಸಿಗಿ ಬಿದ್ದಿದ್ದಾನೆ. ಒಂದು ಸ್ಮಾರ್ಟ್ ಫೋನ್ ಮತ್ತು ಒಂದು ಬ್ಯಾಕ್ ಕವರ್ ಇಟ್ಟುಕೊಂಡಿದ್ದ. ಅಲ್ಲದೆ ಎರಡು ಇಯರ್ ಫೋನ್ ಗಳನ್ನು ಸಹ ತೆಗೆದುಕೊಂಡು ಹೋಗುತ್ತಿದ್ದ. ಖಾಸಗಿ ಸ್ಥಳದಲ್ಲಿ ಜೈಲು ಸಿಬ್ಬಂದಿ ಅಮರ್ ಇಟ್ಟುಕೊಂಡು ಒಳಗಡೆ ತೆರಳುವ ವೇಳೆ ತಪಾಸನೆ ನಡೆಸಿದ್ದಾರೆ. ಜೈಲಾಧಿಕಾರಿಗಳು ಸಿಬ್ಬಂದಿಯನ್ನು ತಪಾಸನೆ ನಡೆಸಿ ವಸ್ತುಗಳು ಪತ್ತೆಯಾದ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು: ಘಟನೆಯನ್ನು ಎಲ್ಲರೂ ವಿಮರ್ಶೆ ಮಾಡಬಹುದು, ಆದರೆ ಸತ್ಯವನ್ನು ತಿರುಚಿ ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರಕ್ಕೆ ಬಳಸಿಕೊಳ್ಳುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಎಸ್‌ಪಿ ಅರುಣ್ ಕುಮಾರ್ ಪುತ್ತೂರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಎಚ್ಚರಿಸಿದ್ದಾರೆ.ಈಶ್ವರಮಂಗಲದಲ್ಲಿ ಲಾರಿಯೊಂದರಲ್ಲಿ ಅನಧಿಕೃತ ಗೋ ಸಾಗಾಟ ಪ್ರಕರಣದಲ್ಲಿ 12 ಗೋವುಗಳನ್ನು ವಶಕ್ಕೆ ಪಡೆದು, ಓರ್ವ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಸೋಷಿಯಲ್ ಮೀಡಿಯಾದಲ್ಲಿ ನಾನಾ ರೀತಿಯ ಪೋಸ್ಟ್‌ಗಳನ್ನು ಹರಿಯಬಿಡುವುದಕ್ಕೆ ಸಂಬಂಧಿಸಿ ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಕೈಯಲ್ಲಿ ಕತ್ತಿ ಹಿಡಿದುಕೊಂಡು ಲಾರಿಯ ಹಗ್ಗ ಮತ್ತು ಟರ್ಪಾಲ್ ಕೊಯ್ಯುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಒಳಗೊಂಡಂತೆ ಪುತ್ತೂರಿನಲ್ಲಿ ನಡೆದ ಘಟನೆಯ ಬಗ್ಗೆ ಸಮಗ್ರ ವಿವರಣೆ ನೀಡಿರುವ ಎಸ್‌ಪಿ ಈ ಘಟನೆಯ ನಂತರ ಪೊಲೀಸರ…









