ಪುತ್ತೂರು: ಘಟನೆಯನ್ನು ಎಲ್ಲರೂ ವಿಮರ್ಶೆ ಮಾಡಬಹುದು, ಆದರೆ ಸತ್ಯವನ್ನು ತಿರುಚಿ ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರಕ್ಕೆ ಬಳಸಿಕೊಳ್ಳುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಎಸ್‌ಪಿ ಅರುಣ್ ಕುಮಾರ್ ಪುತ್ತೂರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಎಚ್ಚರಿಸಿದ್ದಾರೆ.ಈಶ್ವರಮಂಗಲದಲ್ಲಿ ಲಾರಿಯೊಂದರಲ್ಲಿ ಅನಧಿಕೃತ ಗೋ ಸಾಗಾಟ ಪ್ರಕರಣದಲ್ಲಿ 12 ಗೋವುಗಳನ್ನು ವಶಕ್ಕೆ ಪಡೆದು, ಓರ್ವ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಸೋಷಿಯಲ್ ಮೀಡಿಯಾದಲ್ಲಿ ನಾನಾ ರೀತಿಯ ಪೋಸ್ಟ್‌ಗಳನ್ನು ಹರಿಯಬಿಡುವುದಕ್ಕೆ ಸಂಬಂಧಿಸಿ ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಕೈಯಲ್ಲಿ ಕತ್ತಿ ಹಿಡಿದುಕೊಂಡು ಲಾರಿಯ ಹಗ್ಗ ಮತ್ತು ಟರ್ಪಾಲ್ ಕೊಯ್ಯುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಒಳಗೊಂಡಂತೆ ಪುತ್ತೂರಿನಲ್ಲಿ ನಡೆದ ಘಟನೆಯ ಬಗ್ಗೆ ಸಮಗ್ರ ವಿವರಣೆ ನೀಡಿರುವ ಎಸ್‌ಪಿ ಈ ಘಟನೆಯ ನಂತರ ಪೊಲೀಸರ…
Author: main-admin
ಸುರತ್ಕಲ್: ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ಕಟ್ಲ ನಿವಾಸಿಗಳಾದ ಸುಶಾಂತ್ ಯಾನೆ ಕಡವಿ (29), ಕೆ.ವಿ. ಅಲೆಕ್ಸ್ (27), ಸುರತ್ಕಲ್ ಇಂದಿರಾ ಕಟ್ಟೆ ನಿವಾಸಿ ನಿತಿನ್ (26) ಮತ್ತು ಆರೋಪಿಗಳಿಗೆ ಆಶ್ರಯ ನೀಡಿದ ಕುಳಾಯಿ ಹೊನ್ನಕಟ್ಟೆ ನಿವಾಸಿ ಅರುಣ್ ಶೆಟ್ಟಿ (56) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಮತ್ತು ಆರೋಪಿ ಗಳಿಗೆ ಆಶ್ರಯ ನೀಡಿದ್ದ ಅಶೋಕ್ ಎಂಬವರು ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಬಂಧನಕ್ಕಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗುರುವಾರ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಸುರತ್ಕಲ್ ಬಳಿಯ ದೀಪಕ್ ಬಾರ್ ಬಳಿ ಹಸನ್ ಮುಕ್ಷಿತ್ ಮತ್ತು ನಿಝಾಮ್ ಎಂಬವರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್…
ಮಂಗಳೂರು: ಸುರತ್ಕಲ್ ದೀಪಕ್ ಬಾರ್ ಬಳಿಯಲ್ಲಿ ಮಂಗಳವಾರ ರಾತ್ರಿ ಸುಮಾರು 11 ಗಂಟೆಯ ಸಮಯದಲ್ಲಿ ನಡೆದ ಚೂರಿ ಇರಿತ ಘಟನೆಯಲ್ಲಿ ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಎರಡು ಗುಂಪಿನವರ ನಡುವೆ ನಡೆದ ವಾಗ್ವಾದ ಹಿಂಸಾಚಾರಕ್ಕೆ ತಿರುಗಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮುಕ್ಷಿದ್, ನಿಜಾಂ ಹಾಗೂ ಅವರ ಇಬ್ಬರು ಸ್ನೇಹಿತರು ರಾತ್ರಿ ಬಾರ್ಗೆ ತೆರಳಿ ಮದ್ಯಪಾನ ಮಾಡುತ್ತಿದ್ದರು. ಅದೇ ವೇಳೆಗೆ ನಾಲ್ವರು ಅನಪರಿಚಿತರು ಸಹ ಅಲ್ಲೇ ಮದ್ಯಪಾನ ಮಾಡುತ್ತಿದ್ದರು. ಇಬ್ಬರ ನಡುವಿನ ವಾಗ್ವಾದ ಬಾರ್ ಒಳಗೇ ಪ್ರಾರಂಭವಾಗಿ ಹೊರಗೆ ಬಂದು ಮುಂದುವರಿದಿದೆ. ವಾಗ್ವಾದದ ವೇಳೆ ಆ ಗುಂಪಿನಲ್ಲಿದ್ದ ಒಬ್ಬನು ಕೈಯಲ್ಲಿದ್ದ ಚೂರಿಯಿಂದ ಮುಕ್ಷಿದ್ನ ಹೊಟ್ಟೆ ಹಾಗೂ ಕಿವಿಯ ಬಳಿಗೆ ಇರಿದಿದ್ದಾನೆ. ನಿಜಾಂ ಅವರು ಮಧ್ಯೆ ತಡೆಗಟ್ಟಲು ಯತ್ನಿಸಿದ ವೇಳೆ ಅವರ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ (BNS) 307ನೇ ವಿಧಿಯಡಿ (ಹತ್ಯೆಗೆ ಯತ್ನ) ಪ್ರಕರಣವನ್ನು ಸೂರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಘಟನೆಯ…
ಮಂಗಳೂರು: ರೌಡಿ ಶೀಟರ್ ಒಬ್ಬ ಮತ್ತೊಬ್ಬನೊಂದಿಗೆ ಸೇರಿಕೊಂಡು ಪಟಾಕಿ ಅಂಗಡಿ ಮಾಲೀಕನಿಗೆ ಬೆದರಿಕೆ ಹಾಕಿ ಸುಲಿಗೆಗೆ ಯತ್ನಿಸಿರುವ ಘಟನೆ ಬಜಪೆಯಲ್ಲಿ ವರದಿಯಾಗಿದೆ. ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫಾಝಿಲ್ ಕೊಲೆ ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಪ್ರಶಾಂತ್ ಅಲಿಯಾಸ್ ಪಚ್ಚು ಮತ್ತು ಆತನ ಸಹಚರ ಅಶ್ವಿತ್ ಎಂಬುವವರ ವಿರುದ್ಧ ಈ ದೂರು ದಾಖಲಾಗಿದೆ. ಬಜಪೆಯಲ್ಲಿ ಪಟಾಕಿ ಅಂಗಡಿ ಹೊಂದಿರುವ ದಾಮೋದರ ಅವರು ಬೆದರಿಕೆಗೆ ಒಳಗಾದವರು.ವರದಿಗಳ ಪ್ರಕಾರ, ಆರೋಪಿಗಳಿಬ್ಬರೂ ಅಕ್ಟೋಬರ್ 22ರಂದು ದಾಮೋದರ್ ಅವರ ಅಂಗಡಿಗೆ ಹೋಗಿ ಅವರಿಗೆ ಬೆದರಿಕೆ ಹಾಕಿದ್ದಾರೆ. ಸುಲಿಗೆ ಮಾಡುವ ಉದ್ದೇಶದಿಂದ ಮಾಲೀಕರಿಗೆ ಜೀವ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರೌಡಿ ಶೀಟರ್‌ನ ಬೆದರಿಕೆಗೆ ಹೆದರಿದ ಪಟಾಕಿ ಅಂಗಡಿ ಮಾಲೀಕ ದಾಮೋದರ ಅವರು ಕೂಡಲೇ ದೂರು ನೀಡಲು ಹಿಂಜರಿದ್ದರು. ಪೊಲೀಸರು ಅವರಿಗೆ ಸಮಗ್ರ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ ನಂತರವೇ ಅವರು ಧೈರ್ಯ ಮಾಡಿ ಗುರುವಾರ ಬಜಪೆ ಪೊಲೀಸ್…
ಬೆಳ್ತಂಗಡಿ: ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿ ಅಟೋ ರಿಕ್ಷಾ ಹಾಗೂ ಗೋ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅ.23 ರಂದು ಮಧ್ಯಾಹ್ನ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ ಆಟೋ ರಿಕ್ಷಾದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ನಡೆಸುತ್ತಿರುವ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಲಾಯಿಲ ಜಂಕ್ಷನ್ ನಲ್ಲಿ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಲಾಯಿಲ ನಿವಾಸಿ ಹಕೀಂ (27) ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಪರಿಶೀಲನೆ ವೇಳೆ ಆಟೋ ರಿಕ್ಷಾದೊಳಗೆ ಪತ್ತೆಯಾಗಿದ್ದ 85 ಕೆ.ಜಿ ಗೋಮಾಂಸ ಮತ್ತು 2,50,000 ಲಕ್ಷ ರೂ. ಮೌಲ್ಯದ ಆಟೋವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಇಲಾಖೆಯಲ್ಲಿ 4600 ಪೊಲೀಸ್ ಕಾನ್ ಸ್ಟೆಬಲ್ ನೇಮಕಾತಿಗೆ ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪೊಲೀಸ್ ಇಲಾಖೆಯಲ್ಲಿ 4600 ಪೊಲೀಸ್ ಕಾನ್ ಸ್ಟೆಬಲ್ ನೇಮಕಾತಿಗೆ 2-3 ದಿನದಲ್ಲಿ ಅಧಿಸೂಚನೆ ಹೊರಡಿಸಲಾಗುವುದು.ಈ ಕುರಿತಾದ ಕಡತವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ. ಒಂದೇ ಬಾರಿ ನೇಮಕ ಮಾಡಿಕೊಂಡರೆ ಪೂರಕ ತರಬೇತಿ ಕಷ್ಟವಾಗುತ್ತದೆ ಎನ್ನುವ ಕಾರಣಕ್ಕೆ ಖಾಲಿ ಇರುವ 15000 ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳನ್ನು ಒಂದು ಬಾರಿಗೆ 5 ಸಾವಿರದಂತೆ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಮೂಲಕ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಈಗಾಗಲೇ 545 ಸಬ್ ಇನ್ಸ್ಪೆಕ್ಟರ್ ನೇಮಕಾತಿ ನಡೆಯುತ್ತಿದ್ದು, ತರಬೇತಿ ನೀಡಲಾಗುತ್ತಿದೆ. ಮುಂದಿನ 4 ತಿಂಗಳಲ್ಲಿ ಎಲ್ಲರೂ ಇಲಾಖೆಗೆ ಸೇರಲಿದ್ದಾರೆ. 402 ಸಬ್ ಇನ್ಸ್ಪೆಕ್ಟರ್ ನೇಮಕಾತಿಗೆ ಆದೇಶ ನೀಡಲಾಗಿದ್ದು, ಇನ್ನು 2-3 ದಿನಗಳಲ್ಲಿ 4600 ಪೊಲೀಸ್ ಕಾನ್ ಸ್ಟೆಬಲ್…
ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಎಂಬಲ್ಲಿನ ದೀಪಕ್ ಬಾರ್ ಮುಂಭಾಗ ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳ ತಂಡ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ. ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ನಿಝಾಮ್ (23) ಮತ್ತು ಕೃಷ್ಣಾಪುರ ಹಿಲ್ ಸೈಡ್ ನಿವಾಸಿ ಹಸನ್ ಮುರ್ಷಿದ್ (18) ಗಾಯಗೊಂಡವರು. ಆರೋಪಿಗಳನ್ನು ಬಜರಂಗದಳ ಕಾರ್ಯಕರ್ತ ಸುರತ್ಕಲ್ ಠಾಣೆಯ ರೌಡಿಶೀಟರ್ ಗುರುರಾಜ್, ಅಲೆಕ್ಸ್ ಸಂತೋಷ್, ಸುಶಾಂತ್ ಮತ್ತು ನಿತಿನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ನಿಝಮ್ ಮತ್ತು ಮುರ್ಷಿದ್ ಇತರ ಸ್ನೇಹಿತರೊಂದಿಗೆ ದೀಪಕ್ ಬಾರ್ ಗೆ ಮದ್ಯ ಖರೀದಿಸಲು ಹೋಗಿದ್ದು ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರ ತಂಡ ಚೂರಿಯಿಂದ ಇರಿದಿದೆ. ನಿಝಾಮ್ ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು ಆತನನ್ನು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಸನ್ ಮುರ್ಷಿದ್…
ನವದೆಹಲಿ : ಈ ವಾರ ದೆಹಲಿ-ದಿಮಾಪುರ ಇಂಡಿಗೋ ವಿಮಾನದಲ್ಲಿ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ, ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ವಿಮಾನದಲ್ಲಿ ಪವರ್ ಬ್ಯಾಂಕ್’ಗಳ ಬಳಕೆಯ ಮೇಲೆ ಕಠಿಣ ನಿಯಂತ್ರಣವನ್ನ ಜಾರಿಗೆ ತರಲು ಯೋಜಿಸುತ್ತಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ನಿರ್ಗಮನಕ್ಕಾಗಿ ಟ್ಯಾಕ್ಸಿ ಮಾಡುವಾಗ ದೆಹಲಿ-ದಿಮಾಪುರ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರ ಪವರ್ ಬ್ಯಾಂಕ್ ಬೆಂಕಿಗೆ ಆಹುತಿಯಾದ ಘಟನೆಯ ನಂತರ ಈ ಬೆಳವಣಿಗೆ ಸಂಭವಿಸಿದೆ. ಆದಾಗ್ಯೂ, ಕ್ಯಾಬಿನ್ ಸಿಬ್ಬಂದಿ ತಕ್ಷಣ ಬೆಂಕಿಯನ್ನು ನಂದಿಸಿದ್ದರಿಂದ ಯಾವುದೇ ಗಾಯಗಳಾಗಿಲ್ಲ. ವಿಮಾನಗಳಲ್ಲಿ ಪವರ್ ಬ್ಯಾಂಕ್‌ಗಳ ಬಳಕೆಯ ಬಗ್ಗೆ ಹೆಚ್ಚುತ್ತಿರುವ ಕಳವಳ.!ಇಂಡಿಗೋ ವಿಮಾನದಲ್ಲಿ ದಿಮಾಪುರಕ್ಕೆ ಪ್ರಯಾಣಿಸುವಾಗ ಪ್ರಯಾಣಿಕರ ಪವರ್ ಬ್ಯಾಂಕ್ ಬೆಂಕಿಗೆ ಆಹುತಿಯಾದ ನಂತರ ಲಿಥಿಯಂ ಬ್ಯಾಟರಿ ಚಾಲಿತ ಸಾಧನಗಳ ಬಗ್ಗೆ ಸುರಕ್ಷತಾ ಕಾಳಜಿ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ, ಪ್ರಯಾಣಿಕರು ಮತ್ತು ವಿಮಾನಯಾನ ಸಂಸ್ಥೆಗಳು ವಿಮಾನಗಳಲ್ಲಿ ಪವರ್ ಬ್ಯಾಂಕ್‌ಗಳನ್ನು ಹೇಗೆ ನಿರ್ವಹಿಸುತ್ತವೆ ಎಂಬುದರ ಕುರಿತು ಡಿಜಿಸಿಎ ಸಮಗ್ರ ಪರಿಶೀಲನೆಯನ್ನು ಪ್ರಾರಂಭಿಸಿದೆ.…
ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಅಕ್ಟೋಬರ್ 28 ರಂದು ಪಿ-ಕ್ಯಾಪ್ ವಿತರಣೆಗೆ ರಾಜ್ಯ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ದಿನಾಂಕ 28-10-2025 ರಂದು ಬ್ಯಾಂಕ್ವೆಟ್ ಹಾಲ್, ವಿಧಾನ ಸೌಧ, ಬೆಂಗಳೂರು ಇಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಗೃಹ ಸಚಿವರಿಂದ ಪಿ-ಕ್ಯಾಪ್ ಘೋಷಣೆ ಹಾಗೂ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಆದುದರಿಂದ, ಎಲ್ಲಾ ಕಮೀಷನರೇಟ್ ಹಾಗೂ ಜಿಲ್ಲೆಗಳಿಂದ ತಲಾ ಒಬ್ಬರು ಪಿಸಿ ಅಥವಾ ಹೆಚ್ಸಿ ಗಳನ್ನು ಸದರಿ ಕಾರ್ಯಕ್ರಮಕ್ಕೆ ನಿಯೋಜಿಸಿ, ಸದರಿಯವರು ದಿನಾಂಕ 27-10-2025 ರಂದು ಬೆಳಿಗ್ಗೆ 9.00 ಘಂಟೆಗೆ ಡಿ.ಸಿ.ಪಿ., ವಿಧಾನ ಸೌಧ ಸೆಕ್ಯೂರಿಟಿ, ಬೆಂಗಳೂರು ಇವರ ಮುಂದೆ ವಿಧಾನ ಸೌಧ, ಬ್ಯಾಂಕ್ವೆಟ್ ಹಾಲ್ನಲ್ಲಿ ವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿ ಕಳುಹಿಸಲು ಸೂಚಿಸಲಾಗಿದೆ. ಸದರಿ ಕಾರ್ಯಕ್ರಮಕ್ಕೆ ನಿಯೋಜಿಸುವ ಪಿಸಿ ಅಥವಾ ಹೆಚ್ಸಿ ರವರ ಪಿ-ಕ್ಯಾಪ್ ಅಳತೆಯ ವಿವರವನ್ನು ದಿನಾಂಕ 23-10-2025 ರಂದು ಸಂಜೆ 4.00 ಘಂಟೆಯೊಳಗೆ ಐ.ಜಿ.ಪಿ., ಕೇಂದ್ರಸ್ಥಾನ, ಪೊಲೀಸ್ ಪ್ರಧಾನ…
ಮಂಗಳೂರು: ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಸಂದೇಶವನ್ನು ಹಂಚಿದ ಆರೋಪದ ಮೇರೆಗೆ ಕಂಕನಾಡಿ ನಗರ ಠಾಣೆಯಲ್ಲಿ ನಝೀರ್ ಮಂಗಳೂರು ಮತ್ತು Gandhian Nehruvian Magar ಎಂಬ ಎರಡು ಫೇಸ್‌ಬುಕ್ ಖಾತೆಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅ.21ರಂದು ಅಪರಾಹ್ನ 3 ಗಂಟೆಗೆ ತಾನು ಸಾಮಾಜಿಕ ಜಾಲತಾಣಾ ಮಾನಿಟರಿಂಗ್ ನಿಗಾವಣೆ ಕರ್ತವ್ಯದ ಮೇರೆಗೆ ಫೇಸ್‌ಬುಕ್ ವೀಕ್ಷಿಸುತ್ತಿರುವಾಗ ನಝೀರ್ ಮಂಗಳೂರ್ ಎಂಬ ಫೇಸ್‌ಬುಕ್ ಖಾತೆಯಿಂದ Mumthas Abdul Nelyadka ಮತ್ತು Mahesh Vikram Hegde ಎಂಬ ಫೇಸ್‌ಬುಕ್ ಖಾತೆಗಳಿಗೆ ಟ್ಯಾಗ್ ಮಾಡಿರುವ Gandhian Nehruvian Magar ಎಂಬ ಫೇಸ್‌ಬುಕ್ ಖಾತೆಯ ಮೂಲಕ Ai video but funny ಎಂಬ ಶೀರ್ಷೀಕೆ ಇರುವ 10 ಸೆಕೆಂಡ್‌ಗಳ ವಿಡಿಯೋ ತುಣುಕನ್ನು ಶೇರ್ ಮಾಡಿ ಸಮಾಜದ ವಿವಿಧ ಧರ್ಮ ಹಾಗೂ ವರ್ಗಗಳ ಜನರಲ್ಲಿ ದ್ವೇಷದ ಭಾವನೆ ಹುಟ್ಟು ಹಾಕಿ ಅಪರಾಧ ಕೃತ್ಯ ಎಸಗುವಂತೆ ಮಾಡಲಾಗಿದೆ. ಹಾಗಾಗಿ ನಝೀರ್ ಮಂಗಳೂರ್ ಮತ್ತು Gandhian Nehruvian Magar ಎಂಬ ಫೇಸ್‌ಬುಕ್ ಖಾತೆದಾರರ ವಿರುದ್ಧ ಕಾನೂನು ಕ್ರಮ…









