ಮಂಗಳೂರು: ಅಪ್ರಾಪ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಎಫ್‌ಟಿಎಸ್‌ಸಿ-1 ಪೊಕ್ಸೊ) ಸರಕಾರಿ ಬಸ್ ಕಂಡೆಕ್ಟರ್ ಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಬಾಗಲಕೋಟೆ ನಿವಾಸಿ ದಾವಲ್ ಸಾಬ್ (34) ಶಿಕ್ಷೆಗೊಳಗಾದ ಆರೋಪಿ. 2023ರ ಮಾರ್ಚ್‌ನಲ್ಲಿ ಬಾಲಕಿ ಶಾಲೆಯಿಂದ ಬಿ.ಸಿ ರೋಡ್‌ನಲ್ಲಿರುವ ತನ್ನ ಮನೆಗೆ ಮರಳಲು ಕಲ್ಲಡ್ಕದಲ್ಲಿ ಸರಕಾರಿ ಬಸ್ ಹತ್ತಿದ್ದಾಳೆ. ಈ ವೇಳೆ ಬಸ್‌ನಲ್ಲಿ 4-5 ಮಂದಿ ಮಾತ್ರ ಪ್ರಯಾಣಿಕರಿದ್ದರು. ಮುಂದಿನ ನಿಲ್ದಾಣದಲ್ಲಿ ಅವರೆಲ್ಲಾ ಬಸ್‌ನಿಂದ ಇಳಿದಿದ್ದಾರೆ. ಆಗ ಆರೋಪಿ ಕಂಡೆಕ್ಟರ್ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ತಾನು ಹೆತ್ತವರು, ಪೊಲೀಸರಿಗೆ ತಿಳಿಸುವುದಾಗಿ ಬಾಲಕಿ ಹೇಳಿದರೂ ಆರೋಪಿ ಅಸಭ್ಯತನ ಮುಂದುವರಿಸಿದ್ದ. ಇದರಿಂದ ನೊಂದ ಬಾಲಕಿ ಬಸ್‌ನ ಸಂಖ್ಯೆ ಸಮೇತ ಮನೆಗೆ ತೆರಳಿ ತಾಯಿ ಬಳಿ ಘಟನೆಯ ಬಗ್ಗೆ ವಿವರಿಸಿದ್ದಾಳೆ. ತಾಯಿ ಮತ್ತು ಬಾಲಕಿಯು ಬಂಟ್ವಾಳ ನಗರ ಠಾಣೆಗೆ ತೆರಳಿ ದೂರು ನೀಡಿದ್ದರು. ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಕಂಡೆಕ್ಟರ್‌ನನ್ನು ಬಂಧಿಸಿ ಕಾನೂನು…
Author: main-admin
ಬ್ರಹ್ಮಾವರ: ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ಮನೆಗೆ ಬಂದ ಇಬ್ಬರು ಅಪರಿಚಿತರು ಮಹಿಳೆಯರು ಮನೆಯಲ್ಲಿದ್ದ 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ನಡೆದಿದೆ. ಫೆ. 21ರಂದು ಬೆಳಿಗ್ಗೆ ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ ಬಂದ ಇಬ್ಬರು ಅಪರಿಚಿತ ಹೆಂಗಸರು ತಾವು ಬಾಂಬೆಯಿಂದ ಬಂದಿರುವುದಾಗಿ ತಿಳಿಸಿದ್ದಾರೆ.ಇನ್ನು ಮನೆಯವರ ವಿರೋಧದ ನಡುವೆಯೂ ಸೀದಾ ಮನೆಯೊಳಗೆ ಬಂದು ಮಹೀಮಾ ಅವರ 1 ವರ್ಷದ ಹೆಣ್ಣು ಮಗುವನ್ನು ಎತ್ತಿಕೊಂಡು ಮೊಬೈಲಿನಲ್ಲಿರುವ ವಿಡಿಯೋಗಳನ್ನು ತೋರಿಸುತ್ತಾ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕೂಡಲೇ ಮಹಿಮಾ ಅವರು ಅಪರಿಚಿತ ಹೆಂಗಸು ಎತ್ತಿಕೊಂಡು ಹೋದ ಮಗುವನ್ನು ಕರೆದುಕೊಂಡು ಬಂದಿರುತ್ತಾರೆ. ಅಷ್ಟರಲ್ಲಿ ಅಲ್ಲಿಗೆ ಮಹಿಮಾ ಅವರ ಅಣ್ಣ ಬಂದಿದ್ದನ್ನು ನೋಡಿದ ಆರೋಪಿಗಳು ಅಲ್ಲಿಂದ ಓಡಿ ಹೋಗಿದ್ದಾರೆ.ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ: ತಾನು ಲಂಡನ್ ವೈದ್ಯ ಎಂಬುದಾಗಿ ನಂಬಿಸಿ ಮಲ್ಪೆಯ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಂಕನಿಡಿಯೂರು ಗ್ರಾಮದ ವಿನೀತಾ (35) ಅವರು ಕಂಪೆನಿಯೊಂದರಲ್ಲಿ ಬಿಸಿನೆಸ್ ಪಾರ್ಟ್‌ನರ್ ಆಗಿ ಕೆಲಸ ಮಾಡಿಕೊಂಡಿದ್ದರು. ಈ ಸಂದರ್ಭ ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬದಾಗಿ ಪರಿಚಯ ಮಾಡಿಕೊಂಡು ವಾಟ್ಸಾಪ್ ಮೂಲಕ ಚಾಟ್ ಮಾಡುತ್ತಿದ್ದ. ಅನಂತರ ಆತನು ತಾನು ಲಂಡನ್‌ನಿಂದ ಭಾರತಕ್ಕೆ ಬರುವುದಾಗಿ ಹೇಳಿದ್ದನು. ವಿನೀತಾ ಅವರಿಗೆ ಬೇರೆ ಒಂದು ನಂಬರಿನಿಂದ ಕರೆ ಬಂದಿದ್ದು, ನಿಮ್ಮ ಸ್ನೇಹಿತ ದಿಲ್ಲಿ ವಿಮಾನ ನಿಲ್ದಾಣದಲ್ಲಿ ನಮ್ಮ ಕಸ್ಟಡಿಯಲ್ಲಿದ್ದಾರೆ. ಅವರನ್ನು ಬಿಡುಗಡೆ ಮಾಡಬೇಕಾದರೆ ದಂಡ ಕಟ್ಟಬೇಕಾಗುತ್ತದೆ ಎಂದು ಹೇಳಿದ್ದಾನೆ. ಸರಕಾರದಿಂದ ತಮ್ಮ ಮೇಲೆ ಕಾನೂನು ಕ್ರಮ ಆಗಬಹುದೆಂದು ಹೆದರಿ ವಿನೀತಾ ಹಣವನ್ನು ಪಾವತಿ ಮಾಡಿದರು. ಅವರು ಹೀಗೆ ಫೆಬ್ರವರಿ 16ರಿಂದ 20ರ ವರೆಗೆ ಒಟ್ಟು 4,96,000 ರೂ. ಹಣವನ್ನು ಕೆನರಾ ಬ್ಯಾಂಕ್ ಖಾತೆ ಮತ್ತು ಪೋನ್‌ಪೇ ಮೂಲಕ ವರ್ಗಾಯಿಸಿ ವಂಚನೆಗೆ ಒಳಗಾಗಿದ್ದಾರೆ. ಈ…
ಬೆಳ್ತಂಗಡಿ: ವೇಣೂರಿನ ತಿಮ್ಮಣ್ಣ ಅಜಿಲರು 1604ರಲ್ಲಿ ಪ್ರತಿಷ್ಠಾಪಿಸಿದ ಬಾಹುಬಲಿ ಮೂರ್ತಿಗೆ ಈ ಶತಮಾನದ ಮೂರನೇ ಮಹಾಮಸ್ತಕಾಭಿಷೇಕವು ಗುರುವಾರ ವಿದ್ಯುಕ್ತವಾಗಿ ಆರಂಭಗೊಂಡಿತು. ಗುರುವಾರ ಸಂಜೆ 7 ಗಂಟೆಗೆ 108 ಕಲಶಗಳ ಅಭಿಷೇಕ ಆರಂಭಗೊಂಡಿತು. ಬೆಳ್ತಂಗಡಿ ತಾಲೂಕಿನ ವೇಣೂರಿನ ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ಅಧಿಕೃತ ಚಾಲನೆ ಸಿಕ್ಕಿದ್ದು, 12 ವರ್ಷದ ಬಳಿಕ ಕಲಶದ ಮೂಲಕ 35 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಐದು ಅಂತಸ್ತಿನ ಅಟ್ಟಳಿಗೆ ಹತ್ತಿ ಅಭಿಷೇಕ ಮಾಡುತ್ತಿದ್ದಾರೆ. 12 ವರ್ಷದ ಬಳಿಕ ಕಲಶದ ಮೂಲಕ 35 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಐದು ಅಂತಸ್ತಿನ ಅಟ್ಟಳಿಗೆ ಹತ್ತಿ ಅಭಿಷೇಕ ಮಾಡುತ್ತಿದ್ದಾರೆ. ಇದನ್ನು ಕಣ್ತುಂಬಿಕೊಳ್ಳಲು ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದಾರೆ. ಇನ್ನು ಮಾರ್ಚ್ 1ರವರೆಗೂ ವಿವಿಧ ದ್ರವ್ಯಗಳಿಂದ ಬಾಹುಬಲಿ ಮೂರ್ತಿಗೆ ಅಭಿಷೇಕ ನಡೆಯಲಿದೆ.
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ಪರೀಕ್ಷೆ ನಡೆಯುವ ದಿನಾಂಕಗಳಂದು ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಉಚಿತವಾಗಿ ತೆರಳಲು ಅವಕಾಶ ನೀಡಲಾಗಿದೆ. ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಈ ಅವಧಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಕೆಎಸ್ ಆರ್ ಟಿಸಿಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ (ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ) 01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ 04-03-2024 ಸೋಮವಾರ ಗಣಿತ ಪರೀಕ್ಷೆ 05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ 06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ 07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ 09-03-2024…
ಬಜಪೆ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬನನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಮೂಡುಪೆರಾರ ಗ್ರಾಮದ ಮಿತ್ತಕೊಳಪಿಲದ ನಿವಾಸಿ ಪ್ರತಾಪ್ ಬಂಧಿತ ಆರೋಪಿ. ಫೆ.13 ರಂದು ಮದ್ಯಾಹ್ನದ ವೇಳೆ ಮೂಡುಪೆರಾರ ಗ್ರಾಮದ ಮಿತ್ತಕೊಳಪಿಲದ ಬಳಿ ದೇವಸ ಎಂಬಲ್ಲಿರುವ ಜನಾರ್ದನ ಗೌಡ ಎಂಬವರ ಮನೆಯ ಹಿಂಬದಿಯ ಭಾಗಿಲಿನ ಚಿಲಕದ ನಟ್ ಬೋಲ್ಟ್ ಗಳನ್ನು ಸ್ಪಾನರ್ ನಿಂದ ಬಿಚ್ಚಿ ಮನೆಯ ಒಳಗಡೆ ಹೋಗಿ ಮನೆಯಲ್ಲಿದ್ದ ಒಟ್ಟು 40,000/- ರೂಪಾಯಿ ಹಣವನ್ನು ಕಳವು ಗೈದಿದ್ದು,ಈ ಬಗ್ಗೆ ಬಜಪೆ ಠಾಣಿಯಲ್ಲಿ ಪ್ರಕರಣ ದಾಖಲಾಗಿತ್ತು. ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎಸ್ ರವರ ಅಪರಾಧ ಪತ್ತೆ ವಿಭಾಗದ ತಂಡವು ಈ ಬಗ್ಗೆ ಕಾರ್ಯಾಚರಣೆ ನಡೆಸಿ ಸಂಶಯದ ಮೇಲೆ ಆರೋಪಿ ಪ್ರತಾಪ್ ನನ್ನುಬಜಪೆ ಬಸ್ಸು ನಿಲ್ದಾಣದ ಬಳಿ ವಶಕ್ಕೆ ಪಡೆದಿದ್ದು,ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿಯು ಜನಾರ್ದನ ಗೌಡ ರವರ ಮನೆಯಿಂದ ಹಣ ಕಳವು ಮಾಡಿರುವ ಬಗ್ಗೆ ಮತ್ತು ಕಳೆದ ಸಪ್ಟೆಂಬರ್ ತಿಂಗಳಲ್ಲಿ ಕೊಂಪದವು ನೆಲ್ಲಿಗುಡ್ಡೆಯ ನಿವಾಸಿ ಗೋವಿಂದ ಗೌಡ ಎಂಬವರ ಮನೆಯಿಂದ…
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದ ದಂಧೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ದಳವನ್ನು ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ಮಾಡಿ ಮನವಿ ಮಾಡಿದರು. ರಾಷ್ಟ್ರದಲ್ಲಿಯೇ ಶಿಕ್ಷಣ ವ್ಯವಸ್ಥೆಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಮಣಿಪಾಲ ಸಹಿತ ಉಡುಪಿ ಜಿಲ್ಲೆಯ ವಿವಿಧೆಡೆ ಡ್ರಗ್ಸ್ ಸೇವನೆಯಿಂದ ವಿದ್ಯಾರ್ಥಿಗಳು, ಯುವಜನತೆ ದಾರಿತಪ್ಪುತ್ತಿದ್ದಾರೆ. ಆದ್ದರಿಂದ ಪರಿಣಾಮಕಾರಿಯಾಗಿ ಡ್ರಗ್ಸ್ ದಂಧೆಯನ್ನು ನಿಯಂತ್ರಿಸಲು ಪ್ರತ್ಯೇಕ ವಿಶೇಷ ದಳವನ್ನು ರಚಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಉಡುಪಿ ಕ್ಷೇತ್ರದ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿದ ಯಶ್ ಪಾಲ್ ಸುವರ್ಣ, ಕ್ಷೇತ್ರದ ಕಡಲ್ಕೊರೆತ ತಡೆಗೋಡೆ ನಿರ್ಮಾಣ , ಕಿಂಡಿ ಅಣೆಕಟ್ಟು, ಸರಕಾರಿ ಶಾಲೆಗಳ ಅಭಿವೃದ್ಧಿ, ಹಾಸ್ಟೆಲ್ ಕಟ್ಟಡ ಹಾಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರುಗೊಳಿಸಿದರೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು.
ಸುಳ್ಯ: ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ ಮಾಡಿ ತೀವ್ರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ದುಗಲಡ್ಕ ಕೂಟೇಲಿನಲ್ಲಿ ನಡೆದಿದೆ. ಗಾಯಗೊಂಡ ಮಹಿಳೆ ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂದು ಗುರುತಿಸಲಾಗಿದೆ. ಪದ್ಮಾವತಿ ಎಂಬವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಫೆ. 22 ರಂದು ಮುಂಜಾನೆ ದುಗಲಡ್ಕ ಘಟಕದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವಾಗ ಈ ಘಟನೆ ನಡೆದಿದೆ. ಪೊದೆಯಲ್ಲಿದ್ದ ಕಾಡುಹಂದಿ ಪದ್ಮಾವತಿ ಮೇಲೆ ಏಕಾಏಕಿ ಧಾಳಿ ನಡೆಸಿತೆನ್ನಲಾಗಿದೆ. ದಾಳಿಯಿಂದ ಪಾರಾಗಲು ಓಡಿದ ಮಹಿಳೆಯನ್ನು ಬೆನ್ನಟ್ಟಿದ ಕಾಡುಹಂದಿ ಮತ್ತೊಮ್ಮ ಕಚ್ಚಿ ತೀವ್ರ ಗಾಯಗೊಳಿಸಿತೆಂದು ತಿಳಿದುಬಂದಿದೆ. ವಿಷಯ ತಿಳಿದ ಇತರ ಟ್ಯಾಪರ್ ಗಳು ಕೆ.ಎಫ್.ಡಿ.ಸಿ. ಅಧಿಕಾರಿಗಳಿಗೆ ತಿಳಿಸಿದ ಕೂಡಲೇ ಅವರು ವಾಹನ ತಂದು, ನಿಗಮದ ಸಿಬ್ಬಂದಿ ಮತ್ತು ಊರವರು, ಬಂಧುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ. ರಬ್ಬರ್ ತೋಟದಲ್ಲಿ ಪೂದೆಗಳು ಹೆಚ್ಚಾಗಿ ಆಳೆತ್ತರಕ್ಕೆ ಬೆಳೆದಿದ್ದು ಇದರಲ್ಲಿ ಕಾಡು…
ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಇನ್ಸ್‌ಪೆಕ್ಟರ್ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನು ಕನಿಷ್ಠ ಎರಡು ವರ್ಷಗಳ ಕಾಲ ಒಂದು ಸ್ಥಳದಿಂದ ವರ್ಗಾವಣೆ ಮಾಡದಂತೆ ನಿರ್ಬಂಧವಿಧಿಸುವ ಕರ್ನಾಟಕಪೊಲೀಸು ತಿದ್ದುಪಡಿ ವಿಧೇಯಕಕ್ಕೆ ಬುಧವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಪೊಲೀಸ್ ಅಧಿಕಾರಿ ಮೇಲೆ ಗುರುತರ ಆರೋಪ, ದೋಷಾರೋಪ ಪಟ್ಟಿ ಸಲ್ಲಿಕೆ, ಪದೋನ್ನತಿಯಂತಹ ಅನಿವಾರ್ಯ ಪರಿಸ್ಥಿತಿ ಹೊರತುಪಡಿಸಿ ಸುಖಾಸುಮ್ಮನೆ ವರ್ಗಾವಣೆ ಮಾಡುವಂತಿಲ್ಲ. ಕನಿಷ್ಠ ಎರಡು ವರ್ಷ ಒಂದೆಡೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡುವ ಮೂಲಕ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ನಿರ್ಮಾಣ, ಅಪರಾಧ ಪತ್ತೆ ಹಾಗೂ ಅಪರಾಧ ತಡೆಗೆ ಸಹಕರಿಸಲು ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ. ಗೃಹ ಸಚಿವ ಡಾ.ಜಿ. ಪರಮೇಶ್ವರ್, ಈವರೆಗೆ ಒಂದು ವರ್ಷದವರೆಗೆ ಪೊಲೀಸ್ ವರ್ಗಾವಣೆ ಮಾಡುವಂತಿಲ್ಲ ಬಳಿಕ ಮಾಡಬಹುದು ಎಂದು ಕಾನೂನಿನಲ್ಲಿ ಇದೆ. ಇದರಿಂದ ಒಬ್ಬ ಪೊಲೀಸ್ ಅಧಿಕಾರಿ ಹೋಗಿ ವರದಿ ಮಾಡಿಕೊಂಡು ಠಾಣೆ, ಜನ, ಕೇಸುಗಳನ್ನು ತಿಳಿದುಕೊಳ್ಳುವಾಗಲೇ ಸಮಯ ಕಳೆದು ಹೋಗಿರುತ್ತದೆ. ಆ ವೇಳೆಗಾಗಲೇ ಬೇರೆಯವರು ಬರುತ್ತಾರೆ. ಇದನ್ನು ತಪ್ಪಿಸಲು…
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಂಜನಾಡಿಯ ಮೊಹಮ್ಮದ್ ಅಬ್ದುಲ್ ಫಯಾನ್ (26) ಮತ್ತು ಮೊಯಿದ್ದೀನ್ ಹಾಫಿಸ್ ಅಲಿಯಾಸ್ ಅಭಿ (47) ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಮಂಗಳೂರು ನಗರ ಕಮಿಷನರೇಟ್ ಮತ್ತು ದ. ಕನ್ನಡ ಜಿಲ್ಲೆಯಾದ್ಯಂತ ಹಲವಾರು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಕಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಅಬ್ದುಲ್ ಫಯಾನ್ ಕಳ್ಳತನ, ಕೊಲೆ ಯತ್ನ ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ಸೇರಿದಂತೆ 23 ಪ್ರಕರಣಗಳಲ್ಲಿ ಭಾಗಿಯಾಗಿರುವ ಕುಖ್ಯಾತ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ಅಪರಾಧ ಚಟುವಟಿಕೆಗಳು ಕೊಣಾಜೆ, ಉಳ್ಳಾಲ, ಬಂಟ್ವಾಳ ಟೌನ್ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ. ಹಲವು ನ್ಯಾಯಾಲಯದ ವಾರಂಟ್‌ಗಳ ಹೊರತಾಗಿಯೂ, ಫಯಾನ್ ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವವರೆಗೂ ತಪ್ಪಿಸಿಕೊಳ್ಳುತ್ತಿದ್ದ. ಇನ್ನು ಮೊಯಿದ್ದೀನ್ ಹಾಫಿಸ್ ಅಲಿಯಾಸ್ ಅಭಿಯನ್ನು ಕಾಸರಗೋಡು ಜಿಲ್ಲೆಯ…