ಮೂಡುಬಿದಿರೆ: ನಿಮೋನಿಯಾಕ್ಕೆ ತುತ್ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿದ್ದ ಬಾಲಕಿ ಅಶ್ರಿಜಾ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶಲಾಗಿದ್ದಾಳೆ. ಮೂಡುಬಿದ್ರಿ ಶಿರ್ತಾಡಿ ಮರೋಡಿಯ ನಿವಾಸಿಯಾಗಿದ್ದ ಅಶ್ರಿಜಾ ಶಿರ್ತಾಡಿಯ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೆಯ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಇನ್ನು ವಿದ್ಯಾರ್ಥಿನಿಯ ನಿಧನದ ಸಂತಾಪ ಸೂಚಕವಾಗಿ ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸಲಾಗಿದೆ.
Author: main-admin
ಬಂಟ್ವಾಳ: ಹೋಟೆಲ್ ಮಾಲಕನೋರ್ವ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದ್ದು, ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಜೀಪ ನಡು ಗ್ರಾಮದ ಅಬ್ದುಲ್ಲಾ ಆರೋಪಿಯಾಗಿದ್ದು, ಈತನಿಂದ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆಯಾದ ಬಗ್ಗೆ ಬಾಲಕಿಯ ತಾಯಿ ಗ್ರಾಮಾಂತರ ಪೋಲೀಸ್ ಠಾಣೆಗೆ ಫೆ.18 ರಂದು ದೂರು ನೀಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಮೂರ್ತಿ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರು ಶ್ರೀಬಾಹುಬಲಿ ಸ್ವಾಮಿಗೆ ನಾಳೆಯಿಂದ ಮಹಾಮಸ್ತಕಾಭಿಷೇಕ ಆರಂಭವಾಗಲಿದೆ. ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನ 3ಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಧಾರ್ಮಿಕ ಸಭೆ ಉದ್ಘಾಟಿಸಲಿದ್ದಾರೆ. ಕ್ರಿಸ್ತಶಕ 1604ರಲ್ಲಿ ವೇಣೂರಿನ ಬಾಹುಬಲಿ ಮೂರ್ತಿ ಸ್ಥಾಪನೆಯಾಗಿದೆ. ಈ ಬಾಹುಬಲಿ ಮೂರ್ತಿಗೆ ಪ್ರತಿ 12 ವರ್ಷಕ್ಕೊಮ್ಮೆ ಮಹಾಮಸ್ತಕಾಭಿಷೇಕ ನಡೆಯುತ್ತದೆ. ನಾಳೆಯಿಂದ ಮಾರ್ಚ್ 1ರವರೆಗೂ ಮಹಾ ಮಸ್ತಕಾಭಿಷೇಕ ನಡೆಯಲಿದೆ. ಪ್ರತಿದಿನ ಸಂಜೆ 6.45ರಿಂದ ಶ್ರೀ ಬಾಹುಬಲಿಸ್ವಾಮಿಗೆ ಮಹಾಮಸ್ತಕಾಭಿಷೇಕ ನಡೆಯಲಿದೆ. ಸೀಯಾಳ, ಹಾಲು, ಕಲ್ಕರಸ, ಅರಶಿಣ ಕಷಾಯ, ಕೇಸರಿ, ರಕ್ತಚಂದನ ಮೊದಲಾದ ದ್ರವ್ಯಗಳಿಂದ ಅಭಿಷೇಕ ನೆರವೇರಲಿದೆ. ಪ್ರಥಮ ನಾಲ್ಕು ದಿನಗಳು 108 ಕಳಶ, ಬಳಿಕ ಮೂರು ದಿನ 216 ಕಲಶ, 8ನೇ ದಿನ 504 ಕಲಶಗಳಿಂದ ಮಹಾಮಸ್ತಕಾಭಿಷೇಕ ನಡೆಯಲಿದೆ. ಪ್ರತಿದಿನ ಸಂಜೆ 20 ಸಾವಿರ ಮಂದಿಗೆ ಅನ್ನಪ್ರಸಾದ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪ ಪ್ರಕರಣದ ಮರು ತನಿಖೆಗೆ ಆದೇಶಿಸುವಂತೆ ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.ಈ ಸಂಬಂಧ ಮೃತ ಸೌಜನ್ಯ ತಂದೆಯೂ ಆದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಆರ್.ಬಾಲಕೃಷ್ಣ, ‘ಪ್ರಕರಣದಿಂದ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿ ಜೊತೆಗೆ ಈ ಅರ್ಜಿಯನ್ನೂ ವಿಚಾರಣೆಗೆ ನಿಗದಿಪಡಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ರೋಸ್ಟರ್ ಅನುಸಾರ ಸೂಕ್ತ ವಿಭಾಗೀಯ ನ್ಯಾಯಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿತು.…
ಸುಳ್ಯ: ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಸುಳ್ಯ ಕನಕಮಜಲಿನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಲ್ಲಿ ಏಕಾಹ ಭಜನೆ ಮಂಗಳವಾರ ನಡೆಯುತ್ತಿತ್ತು. ಈ ವೇಳೆ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ ಅವರು ಪಟಾಕಿಯೊಂದನ್ನು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡಿದ್ದು ಕೈಯ ಬೆರಳುಗಳಿಗೆ ಗಂಭೀರವಾಗಿ ಗಾಯವಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ಅವರನ್ನು ಸುಳ್ಯದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಂಗಳೂರು : ಮಂಗಳೂರು ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮಕ್ಕೆ ಅವಹೇಳನ ಆರೋಪದ ಪ್ರಕರಣದಲ್ಲಿ ಎರಡನೇ ದಿನವು ಡಿಡಿಪಿಐ ಕಛೇರಿಯಲ್ಲಿ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ವಿಚಾರಣೆ ಮುಂದುವರೆಸಿದರು. ಈ ಪ್ರಕ್ರಿಯೆಯಲ್ಲಿ ಕೆಲವೊಂದು ಮಾಹಿತಿ, ದಾಖಲೆ, ಪುರಾವೆಗಳನ್ನು ಪಡೆದುಕೊಂಡು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈಗಾಗಲೇ ವಿಚಾರಣಾಧಿಕಾರಿ ಆಕಾಶ್ ಶಂಕರ್ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳು, ಪೋಷಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಜೊತೆಗೆ ಎಲ್ಲಾರಿಗೂ ಮುಕ್ತವಾದ ಅವಕಾಶ ನೀಡಲಾಗಿದೆ.ಎಲ್ಲರು ಬಂದಿದ್ದಾರೆ ಅವರೊಂದಿಗೆ ಮುಕ್ತವಾಗಿ ಚರ್ಚೆ ನಡೆಸಿದ್ದೇನೆ ಎಂದು ತನಿಖೆ ಬಳಿಕ ಮಾಧ್ಯಮಗಳಿಗೆ ಆಕಾಶ್ ಶಂಕರ್ ಹೇಳಿಕೆ ನೀಡಿದ್ದಾರೆ. ಪ್ರಕರಣದ ಬಗ್ಗೆ ಪ್ರಾಥಮಿಕ ವರದಿ, ಪ್ರಾಥಮಿಕ ತನಿಖೆ ನಡೆದಿದೆ. ನಮ್ಮ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಮಾಹಿತಿ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರಿಗೂ ನೋಟಿಸ್ ನೀಡಿ ತನಿಖೆ ನಡೆಸಲಾಗಿದೆ.ಇನ್ನೂ ಕೆಲವೊಂದು ಮಾಹಿತಿ ಕಲೆ ಹಾಕಬೇಕಿದ್ದು, ವಿಚಾರಣೆಯನ್ನು ಎರಡು ದಿನದಲ್ಲಿ ಮುಗಿಸಬಹುದು ಎಂದು ಅನಿಸಿದ್ದೇನೆ. ಆದ್ರೆ ಇನ್ನೂ ಕೆಲವು ಮಾಹಿತಿ ಕಲೆ ಹಾಕಬೇಕಿದೆ. ಆ ಬಳಿಕ ಸರ್ಕಾರಕ್ಕೆ…
ಕರ್ತವ್ಯನಿರತ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ತಾನು ಕರ್ತವ್ಯ ನಿರ್ವಹಿಸುತ್ತಿರುವ ಠಾಣೆಯ ಕ್ಯಾಬಿನ್ ನಲ್ಲೇ ಸರ್ವೀಸ್ ರಿವಾಲ್ವರ್ನಿಂದ ತನ್ನ ತಲೆಗೆ ಗುಂಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಶಿಕ್ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ.ಮೃತ ಪೊಲೀಸ್ ಇನ್ಸ್ಪೆಕ್ಟರ್ರನ್ನು ಅಶೋಕ್ ನಾಜನ್ ಎಂದು ಗುರುತಿಸಲಾಗಿದೆ. ಅವರು ನಾಶಿಕ್ ನಗರದ ಅಂಬಾದ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಂದು ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ಅವರು ಬಳಿಕ ಕೆಲವೇ ಕ್ಷಣಗಳಲ್ಲಿ ತಲೆಯಲ್ಲಿ ಬುಲೆಟ್ ಗಾಯದೊಂದಿಗೆ ಅವರ ಟೇಬಲ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಠಾಣೆಯ ಎಲ್ಲಾ ಸಿಬಂದಿ ಕರ್ತವ್ಯಕ್ಕೆ ಹಾಜರಾದ ಕೆಲವೇ ಕ್ಷಣದಲ್ಲಿ ಕ್ಯಾಬಿನ್ ನಿಂದ ಗುಂಡಿನ ಶಬ್ದ ಕೇಳಿಸಿತ್ತು. ಸಿಬಂದಿ ಕ್ಯಾಬಿನ್ ಒಳಗೆ ಹೋಗಿ ನೋಡಿದಾಗ ಇನ್ಸ್ಪೆಕ್ಟರ್ ಅಶೋಕ್ ನಾಜನ್ ಶವವಾಗಿ ಬಿದ್ದಿರುವುದು ಕಂಡು ಬಂತು. ಈ ಘಟನೆ ನಾಶಿಕ್ ನಗರದಲ್ಲಿ ಭಾರಿ ಸಂಚಲನ ಸೃಷ್ಟಿ ಮಾಡಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ಮಹಿಳೆಯೋರ್ವರಿಗೆ ಢಿಕ್ಕಿ ಹೊಡೆದು, ಮಹಿಳೆ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ಈ ಘಟನೆ ನಡೆದಿದೆ. ಮೂಡುಶೆಡ್ಡೆ ನಿವಾಸಿ ಮಮತಾ ಗಾಯಗೊಂಡ ಮಹಿಳೆ ಎಂದು ಗುರುತಿಸಲಾಗಿದೆ.ಮಮತಾ ಅವರು ಪ್ರತಿನಿತ್ಯದಂತೆ ಕೆಲಸಕ್ಕೆ ತೆರಳಲೆಂದು ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಕಾರು ಅವರಿಗೆ ಢಿಕ್ಕಿ ಹೊಡೆದಿದೆನ್ನಲಾಗಿದೆ. ಅಪಘಾತಕ್ಕೀಡಾದ ಕಾರನ್ನು 9ನೇ ತರಗತಿಯ ಬಾಲಕ ಚಾಲನೆ ಮಾಡುತ್ತಿದ್ದುದಾಗಿ ಮಾಹಿತಿ ಲಭ್ಯವಾಗಿದ್ದು, ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಇನ್ನು ಮಹಿಳೆಗೆ ಢಿಕ್ಕಿಯಾದ ಕಾರು ಸ್ವಲ್ಪ ದೂರ ಮಹಿಳೆಯನ್ನು ಎಳೆದುಕೊಂಡು ಹೋಗಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಡುಪಿ: ಉಡುಪಿ ಸಿಟಿ ಆಸ್ಪತ್ರೆಯ ಹತ್ತಿರ ಮತ್ತು ಕಾಡುಬೆಟ್ಟು ಪರಿಸರದಲ್ಲಿ ರಾತ್ರಿ ಹೊತ್ತಿನಲ್ಲಿ ವಿನಾಕಾರಣ ದಾಂಧಲೆ ನಡೆಸುತ್ತ ಭಯದ ವಾತಾವರಣ ಸೃಷ್ಟಿಸಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಹಾಗೂ, ನಗರ ಪೋಲಿಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರಿಯಾಝ್ ಮತ್ತು 112 ಪೋಲಿಸ್ ತುರ್ತು ಸಾಹಯವಾಣಿಯ ಸಿಬ್ಬಂದಿ ವಶಕ್ಕೆ ಪಡೆದು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ. ದಾಂಧಲೇ ಸೃಷ್ಟಿಸಿದ ವ್ಯಕ್ಯಿಯನ್ನು ಒಡಿಶಾ ಮೂಲದ ಸುಶೀಲ್ ಕೂಜೂರ್(35) ಎಂದು ಗುರುತಿಸಲಾಗಿದೆ. ಈತ ಮಾನಸಿಕ ಅಸ್ವಸ್ಥನಂತೆ ಕಂಡುಬಂದಿದ್ದು, ದಾಂಧಲೇ ನಡೆಸುವ ಸಂದರ್ಭ ಗಾಯಗೊಂಡಿದ್ದಾನೆ. ಜಿಲ್ಲಾಸ್ಪತ್ರೆಯ ಚಿಕಿತ್ಸೆ ಪಡೆದ ಬಳಿಕ ಆತನನ್ನು ಮಾನಸಿಕ ಚಿಕಿತ್ಸೆಗೆ ಒಳಪಡಿಸಬೇಕಾಗಿದೆ. ರೋಗಿಯ ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಸುಳ್ಯ: ಮನೆಯ ಹಿಂಬದಿ ಗ್ಯಾಸ್ ಒಲೆಗೆ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರನ್ನು ಕಳವುಗೈದು ತಾನು ತಂದ ಖಾಲಿ ಜಾಡಿಯನ್ನು ಅಲ್ಲಿರಿಸಿ ಹೋಗಿರುವ ಘಟನೆ ಸುಳ್ಯದ ಜಯನಗರದಲ್ಲಿ ಫೆ. 18ರ ರಾತ್ರಿ ಬೆಳಕಿಗೆ ಬಂದಿದೆ. ಜಯನಗರ ನಿವಾಸಿ ದಿ| ನೌಶಾದ್ ಅವರ ಮನೆಯ ಹಿಂಬದಿಯಲ್ಲಿ ಗ್ಯಾಸ್ ಒಲೆಗೆ ಅಳವಡಿಸಲಾಗಿದ್ದ ಗ್ಯಾಸ್ ತುಂಬಿದ್ದ ಸಿಲಿಂಡರ್ ಕಳ್ಳತನವಾಗಿದೆ. ಮನೆಯಲ್ಲಿ ಮಹಿಳೆ ಮತ್ತು ಮಕ್ಕಳು ಮಾತ್ರ ಇದ್ದು ಅವರು ಮನೆಯ ಒಳಗೆ ಇದ್ದಾಗಲೇ ಕಳ್ಳ ಇಂಡೇನ್ ಕಂಪೆನಿಯ ಸಿಲಿಂಡರನ್ನು ಇರಿಸಿ ನೂತನ ಎಚ್‌ಪಿ ಕಂಪೆನಿಯ ಸಿಲಿಂಡರನ್ನು ಹೊತ್ತು ಪರಾರಿಯಾಗಿದ್ದಾನೆ. ರಾತ್ರಿ ಮನೆಯವರು ಗ್ಯಾಸ್ ಸ್ಟವ್ ಉರಿಸುವ ಸಂದರ್ಭ ಒಲೆ ಉರಿಯದ ಕಾರಣ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ