Author: main-admin

ಮೂಡುಬಿದಿರೆ: ಕೋಲ್ಡ್ ಸ್ಟೋರೇಜ್ ನಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಸಿದ್ಧಕಟ್ಟೆಯ ಸಂಘಬೆಟ್ಟು ನಿವಾಸಿ ಇಸ್ಮಾಯಿಲ್ ಬಂಧಿತ. ಈತ ಮೂಡುಬಿದಿರೆಯ ತಾಜ್ ಕೋಲ್ಡ್ ಸ್ಟೋರೇಜ್ ನಲ್ಲಿ ದನದ ಮಾಂಸವನ್ನು ಶೇಖರಿಸಿಟ್ಟು ಮಾರಾಟ ಮಾಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿತ್ಯಾನಂದ ಅವರ ಮಾರ್ಗದರ್ಶನದಲ್ಲಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ದಾಳಿ ವೇಳೆ ಕೋಲ್ಡ್ ಸ್ಟೋರೆಜ್ ನಲ್ಲಿ 10 ಕೆ.ಜಿಯಷ್ಟು ದನದ ಮಾಂಸ ದೊರೆತಿದೆ. ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಬಗ್ಗೆ ಈ ಹಿಂದೆಯೂ ಇಸ್ಮಾಯಿಲ್ ಮೇಲೆ ಪ್ರಕರಣಗಳು ದಾಖಲಾಗಿವೆ.

Read More

ಮಂಗಳೂರು: ನಗರದ ಸೇಂಟ್‌ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಪಾಠ ಮಾಡುವಾಗ ಹಿಂದೂ ಧರ್ಮಕ್ಕೆ ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹಾಗೂ ನಂತರದ ಬೆಳವಣಿಗೆಗಳ ಬಗ್ಗೆ ಐಎಎಸ್‌ ಅಧಿಕಾರಿ ಆಕಾಶ್‌ ಶಂಕರ್‌ ಸೋಮವಾರ ವಿಚಾರಣೆ ಆರಂಭಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದ ಒಟ್ಟು ಬೆಳವಣಿಗೆ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ಅವರು ಸೋಮವಾರ ಪ್ರಾಥಮಿಕ ಮಾಹಿತಿ ಕಲೆಹಾಕಿದರು. ಇಲಾಖೆಯ ಒಬ್ಬೊಬ್ಬ ಅಧಿಕಾರಿಯನ್ನು ಪ್ರತ್ಯೇಕವಾಗಿ ಕರೆಯಿಸಿಕೊಂಡು ವಿಚಾರಣೆ ನಡೆಸಿದರು. ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಈ ಪ್ರಕರಣದ ಸತ್ಯಶೋಧನೆ ಪ್ರಕ್ರಿಯೆಯನ್ನು ಆರಂಭಿಸಿದ್ದೇನೆ. ಬೆಳಿಗ್ಗೆ 10ರಿಂದ ಸಂಬಂಧಪಟ್ಟ ಅಧಿಕಾರಿಗಳಿಂದ ಪ್ರಾಥಮಿಕ ಮಾಹಿತಿ ಕಲೆಹಾಕಿದ್ದೇನೆ. ಇನ್ನಷ್ಟು ಮಾಹಿತಿ ಕಲೆ ಹಾಕಬೇಕಿದೆ. ಈ ಹಂತದಲ್ಲಿ ವಿಚಾರಣೆ ಕುರಿತು ಏನನ್ನೂ ಹೇಳಲು ಇಷ್ಟಪಡುವುದಿಲ್ಲ. ತನಿಖೆಗೆ ಎಲ್ಲರೂ ಸಂಪೂರ್ಣ ಸಹಕಾರ ಕೊಡಬೇಕು’ ಎಂದರು. ‘ಎರಡು ದಿನಗಳು ಇಲ್ಲೇ ಇದ್ದು, ವಿಚಾರಣೆ ಪೂರ್ಣಗೊಳಿಸಿ ಆದಷ್ಟು ಬೇಗ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ. ಪ್ರಕರಣಕ್ಕೆ ಸಂಬಂಧಿಸಿ ವಸ್ತುನಿಷ್ಠ ವರದಿ ಸಲ್ಲಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದರು.

Read More

ಉಡುಪಿ: ಮಲ್ಪೆ ಸಮೀಪದ ಕೋಡಿ ಬೆಂಗ್ರೆ ಡೆಲ್ಟಾ ಬೀಚ್‌ನಲ್ಲಿ ನೀರಿಗೆ ಇಳಿದು ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ಮೀನುಗಾರಿಕಾ ದೋಣಿಯ ಸಿಬಂದಿ ರಕ್ಷಿಸಿರುವ ಘಟನೆ ನಡೆದಿದೆ.ಬೆಂಗಳೂರು ಮೂಲದವರೆನ್ನಲಾದ ಇಬ್ಬರು ಯುವಕರು ಮತ್ತು ಮೂವರು ಯುವತಿಯರು ಸೇರಿದಂತೆ ಒಟ್ಟು 5 ಮಂದಿ ನೀರಿಗೆ ಇಳಿದಿದ್ದು, ಇಬ್ಬರು ಯುವಕರು ನೀರಿನಲ್ಲಿ ಈಜಲು ಮುಂದಾಗಿದ್ದರು. ಈಜುತ್ತಾ ಮುಂದೆ ಹೋದ ಅವರು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದರು.ಇನ್ನು ಈ ಸಂದರ್ಭದಲ್ಲಿ ಅವರ ಬೊಬ್ಬೆ ಕೇಳಿ ಸ್ಥಳೀಯ ಸೀಬರ್ಡ್‌ ಮತ್ತು ಡೆಲ್ಟಾ ಬೋಟ್‌ ಹಾಗೂ ವಾಟರ್‌ ಸ್ಪೋರ್ಟ್ಸ್ ಬೋಟುಗಳ ಸಿಬಂದಿ ವಿವೇಕ್‌ ಪುತ್ರನ್‌, ರಮೇಶ್‌ ಬಂಗೇರ, ಕೃಷ್ಣ ಅವರು ತಕ್ಷಣ ಧಾವಿಸಿ ಬಂದರು ಬೋಟಿನ ಸಹಾಯದಿಂದ ಮುಳುಗುತ್ತಿದ್ದ ಇಬ್ಬರನ್ನೂ ರಕ್ಷಿಸಿದ್ದಾರೆ.

Read More

ಮಾದಕ ಪದಾರ್ಥಗಳ ಸಾಗಾಟಕ್ಕೆ ಆ್ಯಂಬುಲೆನ್ಸ್‌ಗಳ ಬಳಕೆಯಾಗುತ್ತಿರುವ ಅಘಾತಕಾರಿ ಸುದ್ದಿ ಕೇರಳದಲ್ಲಿ ಬಯಲಾಗಿದೆ.  ಆಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದ 4 ಕೆಜಿ ಗಾಂಜಾ ಸಹಿತ ಇಬ್ಬರನ್ನು ಕೊಲ್ಲಂನ ಪತ್ತನಪುರಂ ಪಿಟವೂರ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಾರವೂರು ಮೂಲದ ವಿಷ್ಣು ಹಾಗೂ ಪುನಲೂರಿನ ನಾಸೀರ್ ಬಂಧಿತ ಆರೋಪಿಗಳಾಗಿದ್ದಾರೆ. ಪುನಲೂರಿಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದಾಗ ಇವರು ಸಿಕ್ಕಿಬಿದ್ದಿದ್ದಾರೆ. ಪುನಲೂರು ತಾಲೂಕು ಆಸ್ಪತ್ರೆ ಬಳಿ ಆಂಬ್ಯುಲೆನ್ಸ್ ಓಡುತ್ತಿತ್ತು ಸಮಶಯವಾಗಿ ನಿಲ್ಲಿಸಿ ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ.  ಪಠಾಣಪುರಂ ಪ್ರದೇಶಕ್ಕೆ ಗಾಂಜಾ ವ್ಯಾಪಕವಾಗಿ ಸಾಗಾಟವಾಗುತ್ತಿದೆ ಎಂದು ರಹಸ್ಯ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದಾಗ ಈ ಅಕ್ರಮ ಜಾಲ ಬಯಲಾಗಿದೆ. ತಲಾ 2 ಕೆಜಿಯ ಎರಡು ಪೊಟ್ಟಣಗಳಲ್ಲಿ 4 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ಅಕ್ರಮವಾಗಿ ಮೀನುಗಾರಿಕೆಯಲ್ಲಿ ನಿರತವಾಗಿದ್ದ ಆರೋಪದಲ್ಲಿ ಕರ್ನಾಟಕಕ್ಕೆ ಸೇರಿದ ಮೂರು ಬೋಟ್‌ಗಳನ್ನು ಕೇರಳ ಕರಾವಳಿ ಪೊಲೀಸರು ವಶಕ್ಕೆ ಪಡೆದು 7.5 ಲಕ್ಷ ರೂ. ದಂಡ ವಿಧಿಸಿದ್ದಾರೆ. ಕೇರಳ ಮೀನುಗಾರಿಕಾ ಇಲಾಖೆ ಹಾಗೂ ಕರಾವಳಿ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರಿ ಸಮಯದಲ್ಲಿ ಅಕ್ರಮವಾಗಿ ಈ ಬೋಟ್‌ಗಳು ಟ್ರಾಲಿಂಗ್ ನಡೆಸಿದ್ದವು. ಕೇರಳ ಸಮುದ್ರ ಮೀನುಗಾರಿಕಾ ನಿಯಂತ್ರಣ ಕಾಯ್ದೆಯಂತೆ ಕ್ರಮ ತೆಗೆದು ಕೊಳ್ಳಲಾಗಿದೆ. ಬೋಟ್ ಮಾಲಕರಾದ ಗಣೇಶ್ ಪ್ರಸನ್ನ, ಶ್ರೀರಂಗ ಹಾಗೂ ಏಷ್ಯನ್ ಬ್ಲೂ ಬೋಟ್ ಗಳನ್ನು ಕುಂಬಳೆ ತೀರದಿಂದ 12 ನಾಟಿಕಲ್ ಮೈಲ್ ದೂರದಿಂದ ವಶಪಡಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲೂ ಕಾರ್ಯಾಚರಣೆ ಎಂದು ಮೀನುಗಾರಿಕಾ ಇಲಾಖಾ ನಿರ್ದೇಶಕ ಕೆ.ಎ.ಲಬೀಬ್ ತಿಳಿಸಿದ್ದಾರೆ.

Read More

ಕಾಸರಗೋಡು: ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕನೋರ್ವ ಹೃದಯಘಾತದಿಂದ ಮೃತಪಟ್ಟ ಘಟನೆ ಚೇವಾರ್ ಸಮೀಪದ ಕುಂಟಗೇರಡ್ಕದಲ್ಲಿ ನಡೆದಿದೆ. ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ ಎನ್ನಬಹುದು. ಚೇವಾರ್ ಕುಂಟಗೇರಡ್ಕದ ಅಬ್ದುಲ್ ರಹಮಾನ್ (42) ಮೃತ ಪಟ್ಟವರು. ಧರ್ಮತ್ತಡ್ಕ – ಕಾಸರಗೋಡು ರಸ್ತೆಯಲ್ಲಿ ಸಂಚರಿಸುವ ಗಝಲ್ ಬಸ್ಸು ಚಾಲಕರಾಗಿದ್ದರು. ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಘಟನೆ ನಡೆದಿದೆ. ಪೆರ್ಮುದೆ ಜಂಕ್ಷನ್ ಗೆ ಬಸ್ಸು ತಲಪಿದಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ಬಸ್ಸಿನಿಂದ ಇಳಿದು ಸಮೀಪದ ಅಂಗಡಿಯಿಂದ ನೀರು ಕುಡಿದಿದ್ದರು. ಬಳಿಕ ಬಸ್ಸು ಚಲಾಯಿಸಿಕೊಂಡು ಬಂದಿದ್ದಾರೆ. ಸುಮಾರು ಮೂರು ಕಿಲೋ ಮೀಟರ್ ತನಕ ಬಸ್ಸು ಚಲಾಯಿಸಿಕೊಂಡು ಬಂದಿದ್ದು, ಚೇವಾರ್ ಕುಂಟಗೇರಡ್ಕ ಸ್ಟಾಪ್ ತಲುಪಿದಾಗ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದ ಬಸ್ಸು ಕೆಲ ನಿಮಿಷವಾದರೂ ಮುಂದಕ್ಕೆ ಸಾಗದಿದ್ದುದರಿಂದ ಗಮನಿಸಿದಾಗ ಸ್ಟಿಯರಿಂಗ್ ಮೇಲೆ ತಲೆ ಇಟ್ಟು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆದರೆ ಚಾಲಕ ಬಸ್ಸು ನಿಲ್ಲಿಸಿದರಿಂದ ಭಾರೀ ದುರಂತ ತಪ್ಪಿದೆ ಎನ್ನಬಹುದು. ಬಸ್ಸು ಸ್ಟಾರ್ಟ್ ನಲ್ಲಿತ್ತು. ಪ್ರಯಾಣಿಕರು ಹಾಗೂ ನಾಗರಿಕರು ಕೂಡಲೇ ಬಂದ್ಯೋಡಿನ…

Read More

ಮಂಗಳೂರು: ವಾಮಂಜೂರು ಅಮೃತೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆದ ಸಂಕುಪೂಂಜ- ದೇವುಪೂಂಜ ಜೋಡುಕರೆ ಕಂಬಳವು ಈ ಬಾರಿಯ ಕಂಬಳ ಕೂಟದಲ್ಲಿಯೇ ಅತ್ಯಂತ ಕಡಿಮೆ ಸಮಯದಲ್ಲಿ ಮುಗಿಯುವ ಮೂಲಕ ದಾಖಲೆ ನಿರ್ಮಿಸಿದೆ .ಶನಿವಾರ ಬೆಳಗ್ಗೆ 9.45 ಸುಮಾರಿಗೆ ಆರಂಭವಾಗಿದ್ದ 166 ಜತೆ ಕೋಣಗಳು ಭಾಗವಹಿಸಿದ್ದ ವಾಮಂಜೂರು ಕಂಬಳದ ಅಂತಿಮ ಹಂತದ ಸ್ಪರ್ಧೆಯು ರವಿವಾರ ಬೆಳಗ್ಗೆ 8.50ಕ್ಕೆ ಮುಕ್ತಾಯವಾಗಿದೆ.ಕಳೆದ ವರ್ಷವು 23 ಗಂಟೆಯೊಳಗೆ ಮುಗಿದಿದ್ದ ವಾಮಂಜೂರು ತಿರುವೈಲುಗುತ್ತು ಕಂಬಳವು ಈ ಬಾರಿಯೂ 23 ಗಂಟೆಯೊಳಗೆ ಸಂಪನ್ನವಾಗಿ ಮಾದರಿಯಾಗಿದೆ. ಕಂಬಳವನ್ನು ಸರಿಯಾದ ಸಮಯದಲ್ಲಿ ಮುಗಿಸಲು ಹೊಸ ಹೊಸ ತಂತ್ರಜ್ಞಾನದ ಮೊರೆ ಹೋಗುತ್ತಿರುವ ಸಂದರ್ಭದಲ್ಲಿ ವಾಮಂಜೂರು ಕಂಬಳವು ಇತರ ಕೂಟಗಳಿಗೆ ಮಾದರಿಯಾಗಿದೆ.ಕನೆಹಲಗೆ ವಿಭಾಗದಲ್ಲಿ ಆರು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಐದು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 14 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 35 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 23 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 83 ಜೊತೆ ಕೋಣಗಳು ಭಾಗವಹಿಸಿದ್ದವು.ವಾಮಂಜೂರು ತಿರುವೈಲುಗುತ್ತು ಕಂಬಳ ಫಲಿತಾಂಶ…

Read More

ಕುಂದಾಪುರ: ಬೈಕ್ ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ,ಬ್ಯಾಂಕ್ ಮ್ಯಾನೇಜರಗ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಾಡು ಗ್ರಾಮದ ಅರಾಟೆ ಬಳಿ ಸಂಭವಿಸಿದೆ. ಮೃತರು ಮಹಾರಾಷ್ಟ್ರದ ನವಿ ಮುಂಬೈ ನಿವಾಸಿ ರಾಹುಲ್ ಬಾಲಕೃಷ್ಣ ರಂಕಂಬೆ ಎಂದು ಗುರುತಿಸಲಾಗಿದೆ. ಇವರು ಮರವಂತೆಯ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ರಾತ್ರಿ ಮರವಂತೆಯ ಬ್ಯಾಂಕಿನಲ್ಲಿ ಕೆಲಸ ಮುಗಿಸಿ ತನ್ನ ಬೈಕಿನಲ್ಲಿ ಕುಂದಾಪುರದ ಮನೆ ಕಡೆಗೆ ಬರುತ್ತಿದ್ದರು. ಈ ಸಂದರ್ಭ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಗಂಭೀರ ಗಾಯಗೊಂಡ ರಾಹುಲ್ ಅವರನ್ನು ಗಂಗೊಳ್ಳಿಯ 24*7 ಆಪದ್ಬಾಂಧವ ಅಂಬುಲೆನ್ಸ್ ನ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ತಕ್ಷಣ ಕುಂದಾಪುರದ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ರಾಹುಲ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಗಂಗೊಳ್ಳಿ ಠಾಣೆ ಎಸ್‌ಐ ಹರೀಶ್‌ ಮತ್ತು ಸಿಬ್ಬಂದಿ ಘಟನೆ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು…

Read More

ಜೈಲಿನಿಂದಲೇ ರೌಡಿಶೀಟರ್ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಸೇರಿದಂತೆ ಮೂವರು ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ, ಸುಭಾಷ್ ಹಾಗೂ ಯೋಗೇಶ್ ಬಂಧಿತ ಆರೋಪಿಗಳು. ರೌಡಿಶೀಟರ್ ಮನೋಜ್ ಜೈಲಿನಲ್ಲಿ ಕುಳಿತು ಮಾರ್ಫ್ ಮಾಡಿದ ಮಹಿಳೆಯ ಬೆತ್ತಲೆ ಫೋಟೋ, ವಿಡಿಯೋಗಳನ್ನು ಕಳುಹಿಸಿ ಮಹಿಳೆಯ ತಾಯಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ನಿನ್ನ ಅಳಿಯನಿಗೆ ಫೋಟೋ, ವಿಡಿಯೋ ಕಳುಹಿಸಿ ಸಂಸಾರ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೇ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇದರಿಂದ ಮಹಿಳೆ ತಾಯಿ ಆರಂಭದಲ್ಲಿ 40,000 ಹಣ ನೀಡಿದ್ದರು. ಬಳಿಕ ಫೆ.9ರಂದು ಮನೋಜ್ ಸಹಚರ ಕಾರ್ತಿಕ್ ಮಹಿಳೆಯ ತಾಯಿಗೆ ವಾಟ್ಸಪ್ ಮೂಲಕ ಫೊಟೋ ಕಳುಹಿಸಿ ಬೆದರಿಕೆ ಹಾಕಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ. ಅಲ್ಲದೇ ಜೈಲಿನಲ್ಲಿದ್ದ ಮನೋಜ್ ಕೂಡ ಕರೆ ಮಾಡಿ ಹಣ ನೀಡದಿದ್ದರೆ ನಿನ್ನ ಮಗಳ ಫೋಟೋ, ವಿಡಿಯೋವನ್ನು ಅಳಿಯನಿಗೆ ಕಳುಹಿಸುವುದಾಗಿ…

Read More

ಪಡುಬಿದ್ರಿ: ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ಶನಿವಾರ ತಡರಾತ್ರಿಯ ವೇಳೆ ಯಾವುದೋ ವಾಹನ ಢಿಕ್ಕಿಯಾಗಿ ಸುಮಾರು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದ ನಡೆದ ಬಳಿಕ ಇನ್ನಷ್ಟು ವಾಹನಗಳು ರಸ್ತೆ ಮಧ್ಯದಲ್ಲಿದ್ದ ಈ ವ್ಯಕ್ತಿಯ ಮೇಲೆ ಚಲಿಸಿದ್ದರಿಂದ ದೇಹವಿಡೀ ಜರ್ಝರಿತಗೊಂಡು ಮಾಂಸದ ಮುದ್ದೆಯಂತಾಗಿದ್ದು ಗುರುತೂ ಸಿಗದಂತಾಗಿದೆ.ಇನ್ನು ಈ ಬಗ್ಗೆ ಪಡುಬಿದ್ರಿ ಪಿಎಸ್ ಐ ಪ್ರಸನ್ನ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.

Read More