ಮಂಗಳೂರು: ನಗರದ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ (18) ಎಂಬವರು ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದು, ಸೆಪ್ಟೆಂಬರ್ 1 ರಂದು ಕಾಲೇಜು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗುವುದಾಗಿ ತಾಯಿಯಲ್ಲಿ ತಿಳಿಸಿ ಹೋದವರು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ:- ಎತ್ತರ ಸುಮಾರು 5.3 ಅಡಿ, ಸಾಧಾರಣ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ, ಕಪ್ಪು ಕೂದಲು ಹೊಂದಿರುತ್ತಾರೆ. ಕನ್ನಡ, ತುಳು, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ಬ್ಲೂ ಬಣ್ಣದ ಅರ್ಧ ತೋಳಿನ ಕಾಲೇಜು ಸಮವಸ್ತ್ರ ಶರ್ಟ್ ಹಾಗೂ ಕಪ್ಪು ಬಣ್ಣದ ಕಾಲೇಜು ಸಮವಸ್ತ್ರ ಪ್ಯಾಂಟ್ ಧರಿಸಿದ್ದರು. ಕಾಣೆಯಾದವರ ಗುರುತು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: main-admin
ಮುಲ್ಕಿಯ ಕೊಲ್ನಾಡು ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿಯಿಂದ ಮಂಗಳೂರು ಕಡೆಗೆ ಹಾದು ಹೋಗುವ ರಸ್ತೆಯ ಬಳಿ ಪೊಲೀಸರು ವ್ಯಕ್ತಿಯೋರ್ವನಿಂದ ಸುಮಾರು 1 ಕೆ.ಜಿ 160 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರು ಕೋಡಿಕಲ್ ನಿವಾಸಿ ಧನೇಶ್ ಎಸ್. ಕುಮಾರ್ (35) ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಮುಲ್ಕಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ಬಿ.ಎಸ್ ರವರು ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದ್ದು, ಮೊಬೈಲ್ ಫೋನ್ ಹಾಗೂ ಗಾಂಜಾ ತೂಕ ಮಾಡುವ ಯಂತ್ರ ಮತ್ತು ಇತರೆ ವಸ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಮೂಡುಬಿದಿರೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೋರ್ವ ಕರೆ ಮಾಡಿ ಅಶ್ಲೀಲ ಮಾತನಾಡಿ ಕಿರುಕುಳ ನೀಡಿರುವ ಘಟನೆ ನಡೆದಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಕುಟುಂಬ ಸಮಸ್ಯೆಯ ಬಗ್ಗೆ ಆ.23ರಂದು ಮೂಡುಬಿದಿರೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಪತಿ ಹಾಗೂ ಪತ್ನಿಯನ್ನು ಠಾಣೆಗೆ ಕರೆಸಿ ಮಾತನಾಡಿ ಪ್ರಕರಣವನ್ನು ಇತ್ಯರ್ಥಗೊಳಿಸಿ ಕಳುಹಿಸಿದ್ದರು ಎಂದು ತಿಳಿದು ಬಂದಿದೆ. ಈ ನಡುವೆ ಮೂಡುಬಿದಿರೆ ಪೊಲೀಸ್ ಠಾಣೆಯ ಸಿಬ್ಬಂದಿ ಶಾಂತಪ್ಪ ಎಂಬಾತ ಸಂತ್ರಸ್ತ ಮಹಿಳೆ ನೀಡಿದ್ದ ದೂರು ಪ್ರತಿಯಲ್ಲಿದ್ದ ಆಕೆಯ ಮೊಬೈಲ್ ಸಂಖ್ಯೆಯನ್ನು ಪಡೆದು ಆ.25ರಿಂದ ಸೆ.1ರ ವರೆಗೂ ಆಕೆಗೆ ನಿರಂತರ ಮೆಸೇಜ್ ಮತ್ತು ಕರೆ ಮಾಡಿ ಅಶ್ಲೀಲವಾಗಿ ಮಾತನಾಡುತ್ತಾ, ತನ್ನೊಂದಿಗೆ ಬರುವಂತೆ ಕರೆಯುತ್ತಿದ್ದ ಎಂದು ಮಹಿಳೆ ಸೆ.1ರಂದು ಮೂಡುಬಿದಿರೆ ಠಾಣೆಗೆ ಬಂದು ಸಿಬ್ಬಂದಿ ಶಾಂತಪ್ಪನ ವಿರುದ್ಧ ಕಾಲ್ ರೆಕಾರ್ಡ್ ಸಹಿತ ದೂರು…
ಗೃಹ ಸಚಿವ ಪರಮೇಶ್ವರ ಅವರನ್ನು SIT ಮುಖ್ಯಸ್ಥ ಪ್ರಣಬ್ ಮೋಹಂತಿ ಇಂದು ಭೇಟಿಯಾದರು. ಜಿ ಪರಮೇಶ್ವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರಿನ ಸದಾಶಿವನಾಗರದಲ್ಲಿರುವ ಪರಮೇಶ್ವರ್ ನಿವಾಸದಲ್ಲಿ ಎಸ್ಐಟಿ ಮುಖ್ಯಸ್ಥ ಆಗಿರುವ ಪ್ರಣಬ್ ಮೋಹಂತಿ ಧರ್ಮಸ್ಥಳ ಪ್ರಕರಣದ ಕುರಿತು ಚರ್ಚಿಸಿದರು. ಬೆಂಗಳೂರಿನ ಸದಾಶಿವ ನಗರ ನಿವಾಸಕ್ಕೆ ಆಗಮಿಸಿದ ಎಸ್ ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ, ಗೃಹ ಸಚಿವ ಡಾ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಧರ್ಮಸ್ಥಳ ಪ್ರಕರಣದಲ್ಲಿ ಈವರೆಗಿನ ತನಿಖಾ ಬೆಳವಣಿಗೆ, ಎಸ್ ಐಟಿ ಕೈಗೊಳ್ಳಲಿರುವ ಮುಂದಿನ ನಡೆ ವಿಚಾರವಾಗಿ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.
ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಬಂಧಿತರನ್ನು ಬಿಹಾರ ರಾಜ್ಯದ ಹರ್ಷ ಕುಮಾರ್ (22) ಮತ್ತು ಅಮರ್ ಕುಮಾರ (28) ಎಂದು ಗುರುತಿಸಲಾಗಿದೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ ಮಾಡುತ್ತಿರುವ ಬಗ್ಗೆ ಪಣಂಬೂರು ಠಾಣಾ ಪಿಎಸ್ಐ ಜ್ಞಾನಶೇಖರರವರಿಗೆ ಬಾತ್ಮೀದಾರರಿಂದ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ನಗರ ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತಕರಾದ ಶ್ರೀಕಾಂತ್ ಕೆ ರವರ ನಿರ್ದೆಶನದಂತೆ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್ ರವರ ನೇತೃತ್ವದಲ್ಲಿ ಜ್ಞಾನಶೇಖರ ರವರು ತಮ್ಮ ಸಿಬ್ಬಂದಿಗಳ ಆರೋಪಿತರಾದ ಬಿಹಾರ ರಾಜ್ಯದ ಹರ್ಷ ಕುಮಾರ್ ಎಂಬಾತನಿಂದ…
ಮಂಗಳೂರು : ಹೈಲ್ಯಾಂಡ್, ಫಳ್ನಿರ್ ರಸ್ತೆಯಲ್ಲಿರುವ ಯೂನಿಟಿ ಆಸ್ಪತ್ರೆ, ಹೃದಯ ಹಾಗೂ ನರವ್ಯವಸ್ಥಾ ಚಿಕಿತ್ಸೆಗೆ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫಿಲಿಪ್ಸ್ ಅಜುರಿಯನ್ ಕ್ಯಾಥ್ಲ್ಯಾಬ್ – ಆವೃತ್ತಿ 3.0 ಅನ್ನು ಲೋಕಾರ್ಪಣೆಗೊಳಿಸಿದೆ. ಈ ಅತ್ಯಾಧುನಿಕ ಸೀಲಿಂಗ್-ಮೌಂಟೆಡ್ ಕ್ಯಾಥ್ಲ್ಯಾಬ್ ಕರಾವಳಿ ಕರ್ನಾಟಕದಲ್ಲಿ ಪ್ರಪ್ರಥಮವಾಗಿದ್ದು ಹೃದಯ, ನರವ್ಯವಸ್ಥೆ ಹಾಗೂ ಇಂಟರ್ವೆನ್ಶನಲ್ ರೇಡಿಯಾಲಜಿ ಚಿಕಿತ್ಸೆಗಳಿಗಾಗಿ ಜಾಗತಿಕ ಮಟ್ಟದ ನಿಖರತೆ ಹಾಗೂ ನವೀನತೆಯನ್ನು ಒದಗಿಸುತ್ತದೆ. ಇದು ರೋಗಿಗಳಿಗೆ ಉತ್ತಮ ಚಿಕಿತ್ಸಾ ಫಲಿತಾಂಶಗಳನ್ನು ನೀಡಲು, ಪ್ರಕ್ರಿಯೆಯ ಸಮಯವನ್ನು ಕಡಿಮೆ ಮಾಡಲು ಹಾಗೂ ಸುರಕ್ಷತೆ ಹೆಚ್ಚಿಸಲು ವಿನ್ಯಾಸಗೊಳಿಸಲಾಗಿದೆ. ಫಿಲಿಪ್ಸ್ ಅಜುರಿಯನ್ ವ್ಯವಸ್ಥೆ ಕಡಿಮೆ ಆಕ್ರಮಣಕಾರಿಯಾದ ಚಿಕಿತ್ಸೆಗಳಲ್ಲಿ ಒಂದು ಮಹತ್ತರವಾದ ಮೆಟ್ಟಿಲಾಗಿದೆ. ಮುಖ್ಯ ಲಕ್ಷಣಗಳು ಮತ್ತು ಲಾಭಗಳು:• ಆಧುನಿಕ ಚಿತ್ರಣ ಶಕ್ತಿ ಮತ್ತು ನಿಖರತೆ: ಸಂಕುಲ ಹೃದಯ ಹಾಗೂ ನರವ್ಯವಸ್ಥಾ ಚಿಕಿತ್ಸೆಗಳ ಸಮಯದಲ್ಲಿ ಅತ್ಯುತ್ತಮ ಚಿತ್ರ ಗುಣಮಟ್ಟವನ್ನು ಒದಗಿಸಿ, ನಿಖರತೆ ಹೆಚ್ಚಿಸುತ್ತದೆ.• ರೇಡಿಯೇಶನ್ ಸುರಕ್ಷತೆ: ಪಾರಂಪರಿಕ ಕ್ಯಾಥ್ಲ್ಯಾಬ್ಗಳಿಗಿಂತ ಸುಮಾರು 30% ವಿಕಿರಣ ಹಾಗೂ ಕಾಂಟ್ರಾಸ್ಟ್ ಮಾಧ್ಯಮ ಬಳಕೆಯನ್ನು ಕಡಿಮೆ ಮಾಡುತ್ತದೆ—ಇದರಿಂದ ರೋಗಿಗಳ ಹಾಗೂ…
ಉಳ್ಳಾಲ: ಇಲ್ಲಿನ ಪಜೀರು ಗ್ರಾಮದ ಕಂಬಳಪದವು ಶ್ರೀ ದುರ್ಗಾ ಕಾಳಿ ದೇವಸ್ಥಾನದ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಆಕ್ರಮವಾಗಿ ಮದ್ಯ ತಯಾರಿಸುತ್ತಿದ್ದ ಘಟಕವನ್ನು ಕೊಣಾಜೆ ಪೊಲೀಸರು ಪತ್ತೆ ಹಚ್ಚಿ, ಕೇರಳ ಮೂಲದ ಇಬ್ಬರನ್ನು ಬಂಧಿಸಿ 1,15,110 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕೇರಳದ ಕಾಸರಗೋಡಿನ ಬೀಚ್ ರೋಡ್ ನಿವಾಸಿ ಪ್ರಣವ್ ಪಿ ಶೆಣೈ (24) ಮತ್ತು ತಾಳಿಪಡ್ಪು ಅಡ್ಕತ್ತಬೈಲ್ ನಿವಾಸಿ ಅನೂಷ್ ಆರ್. ( 24) ಬಂಧಿತ ಆರೋಪಿಗಳು. ಆರೋಪಿಗಳಿಂದ ಅಕ್ರಮವಾಗಿ ಮದ್ಯ ತಯಾರಿಸುವ ಮೂರು ಮೆಶಿನ್ ಗಳು, ಮಿಕ್ಸರ್ ಮೆಶಿನ್, ಆಕ್ರಮ ಮದ್ಯದ ಬಾಟ್ಲಿಗಳು, ಗೋವಾ ರಾಜ್ಯದಲ್ಲಿ ಮಾತ್ರ ಮಾರಾಟ ಮಾಡುವ ಪರವಾನಿಗೆ ಇರುವ 8 ಮ್ಯಾನ್ಶನ್ ಹೌಸ್ ಎಂಬ ಹೆಸರಿನ ಮದ್ಯದ ಬಾಟ್ಲಿಗಳು ಹಾಗೂ ಮದ್ಯ ತಯಾರಿಕೆಗೆ ಬೇಕಾದ ಇತರ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ವಿ.ಸಿ. ತೋಮಸ್ ಮತ್ತು ಮಣಿಕುಟ್ಟನ್ ಎಂಬ ಇನ್ನಿಬ್ಬರು ಆರೋಪಿಗಳು ಬಂಧನಕ್ಕೆ ಬಾಕಿ ಇದ್ದು ಅವರ ಪತ್ತೆ ಕಾರ್ಯ ಮುಂದುವರಿದಿದೆ. ಮಂಗಳೂರು…
ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪೋಸ್ಟ್ಗಳನ್ನು ಅಪ್ಲೋಡ್ ಮಾಡುವ ಮುನ್ನ ನೀವು ಜಾಗರೂಕರಾಗಿರಬೇಕಾದದ್ದು ಬಹಳ ಮುಖ್ಯ. ಈ ಬಗ್ಗೆ ಕರ್ನಾಟಕ ಪೊಲೀಸರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಯಾವುದೇ ಸಂಘಟನೆ ಅಥವಾ ಸಂಸ್ಥೆಯ ವಿರುದ್ಧ ಅವಹೇಳನಕಾರಿಯಾಗಿ, ಅಥವಾ ಸಾರ್ವಜನಿಕ ಶಾಂತಿಭಂಗ ಕಾನೂನು ಸುವ್ಯವಸ್ಥೆಗೆ ತೊಡಕಾಗುವ ಪೋಸ್ಟ್ ಹಾಕಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ. ಇತ್ತೀಚೆಗೆ ಸಾರ್ವಜನಿಕ ವ್ಯಕ್ತಿಗಳ ಬಗ್ಗೆ, ಸಂಸ್ಥೆಗಳ ಬಗ್ಗೆ ಅವಹೇಳನಕಾರಿಯಾಗಿ ಕಾಮೆಂಟ್ ಹಾಕುವುದು, ಆದಾದ ಬಳಿಕ ಕೇಸ್ ಹಾಕಿಸಿಕೊಂಡು ಪೊಲೀಸರಿಂದ ಬಂಧನಕ್ಕೊಳಗಾದ ಜನರು ಇದ್ದಾರೆ. ಚಿತ್ರನಟಿ ರಮ್ಯಾ ಹಾಗೂ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿರನ್ನು ಸೋಷಿಯಲ್ ಮೀಡಿಯಾಗಳಲ್ಲಿ ನಿಂದಿಸಿ ಅನೇಕರು ಈಗ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಜೊತೆಗೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಬೇರೆಯವರನ್ನು ನಿಂದಿಸುವುದನ್ನು ಕೆಟ್ಟ ಪ್ರವೃತ್ತಿಯಾಗಿ ಬೆಳೆಸಿಕೊಂಡಿದ್ದಾರೆ. ಅಂಥವರಿಗೆ ಪೊಲೀಸ್ ಇಲಾಖೆಯ ಈ ಎಚ್ಚರಿಕೆ ಅನ್ವಯವಾಗುತ್ತೆ.
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗದಗ ಜಿಲ್ಲೆಯ ನರಗುಂದ ಮಾರುತಿ ನಗರದ ಸಂಜು ಪತ್ತಾರ್ ಯಾನೆ ಸಂಜು ಬಡಿಗೇರ್(36) ಎಂದು ಗುರುತಿಸಲಾಗಿದೆ. ಈತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಖಚಿತ ಮಾಹಿತಿ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯ ಸಿಬಂದಿ ರಾಘವೇಂದ್ರ ಮತ್ತು ಆನಂದಯ್ಯ ಎಂಬವರು ಬೆಳಗಾವಿಯ ಅನಗೋಳಿಯ ಅಂಬೇಡ್ಕರ್‌ಗಲ್ಲಿ ಎಂಬಲ್ಲಿ ಆಗಸ್ಟ್ 30ರಂದು ವಶಕ್ಕೆ ಪಡೆದು ಬಂಧಿಸಿದ್ದಾರೆ.
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೊಲ್ಪುಗುಡ್ಡೆ ಗ್ರಾಮದ ಮನೆಯೊಂದರಲ್ಲಿ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿದ್ದ 17 ಮಂದಿಯನ್ನು ಕಾವೂರು ಪೊಲೀಸರು ಶನಿವಾರ ರಾತ್ರಿ 11:30ಕ್ಕೆ ಬಂಧಿಸಿದ್ದಾರೆ. ಬಂಧಿತರನ್ನು ದೇರೆಬೈಲ್, ಕೊಂಚಾಡಿ, ಎಯ್ಯಾಡಿಯ ನಿವಾಸಿಗಳಾದ ದಿಕ್ಷೀತ್, ದಯಾನಂದ, ರಾಘವೇಂದ್ರ, ವೈಶಾಕ್ ಶೆಟ್ಟಿ, ಉಮೇಶ್, ಗೌತಮ್, ಫರಂಗಿಪೇಟೆಯ ಪ್ರವೀಣ್ ಕುಮಾರ್, ಕಾಪುವಿನ ಶಾಹುಲ್ ಹಮೀದ್, ಬಜ್ಪೆ ಕಟೀಲು ನಡುಗೋಡುವಿನ ತಿಲಕ್‌ರಾಜ್, ವಾಮಂಜೂರಿನ ಜಯಾನಂದ್ ಎಸ್., ಕೂಳೂರಿನ ಲಾರೆನ್ಸ್ ರಾಜಾ ಡಿಸೋಜ, ಉಳ್ಳಾಲ ಹೊಯ್ಗೆ ಗದ್ದೆಯ ಇನಸ್ ಡಿಸೋಜ, ಉಳ್ಳಾಲ ಬೈಲ್‌ನ ಮುಹಮ್ಮದ್ ಅಶ್ರಫ್, ಪೆರ್ಮನ್ನೂರಿನ ಮುಹಮ್ಮದ್ ಫಯಾಝ್, ಉಳ್ಳಾಲದ ಮುಸ್ತಫ, ಆಡಂಕುದ್ರುವಿನ ಸುನೀಲ್ ಡಿಸೋಜ, ತಮಿಳ್ ನಾಡಿನ ಕಣ್ಣನ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 1.92 ಲಕ್ಷ ರೂ. ನಗದು ಹಾಗೂ 18 ಮೊಬೈಲ್‌ಗಳನ್ನು ವಶಪಡಿಸಲಾಗಿದೆ. ಒಟ್ಟಾರೆ ವಶಪಡಿಸಿಕೊಂಡ ಸೊತ್ತಿನ ಮೌಲ್ಯ 4 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್ ಸಹಾಯಕ ಆಯುಕ್ತ ಶ್ರೀಕಾಂತ್ ಕೆ. ಅವರ ಸೂಚನೆಯಂತೆ ಕಾವೂರು ಠಾಣೆಯ ಎಸ್ಸೈ…










