ಮಂಗಳೂರು: ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶ ನಂಬಿ ಹೋದ ವ್ಯಕ್ತಿಯೋರ್ವ ಬರೋಬ್ಬರಿ 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.16ರಂದು ತನಗೆ ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶದಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರುವುದಾಗಿ ತಿಳಿಸಲಾಗಿತ್ತು. ಅದನ್ನು ನಂಬಿದ ತಾನು ವಾಟ್ಸ್‌ಆ್ಯಪ್ ಗ್ರೂಪ್‌ಗೆ ಸೇರ್ಪಡೆಗೊಂಡೆ. ನಂತರ ಗ್ರೂಪ್ ಅಡ್ಮಿನ್ ಕಳುಹಿಸಿದ ಲಿಂಕ್ ಒತ್ತಿ ಅದಕ್ಕೂ ಜಾಯಿನ್ ಆದೆ. ಸೆಪ್ಟಂಬರ್ 1ರಿಂದ ಹಣ ಪಾವತಿಸುತ್ತಾ ಬಂದಿರುವೆ. ಬಳಿಕ ತಾನು ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದಾಗ ಆಗಲಿಲ್ಲ. ಹಾಗೇ ತನ್ನ ಮನೆಯವರು ಮತ್ತು ಸ್ನೇಹಿತರಲ್ಲಿ ವಿಚಾರಿಸಿದಾಗ ತಾನು ಮೋಸ ಹೋಗಿರುವ ವಿಚಾರ ತಿಳಿಯಿತು. ಒಟ್ಟಿನಲ್ಲಿ ಸೆ.1ರಿಂದ ಅಕ್ಟೋಬರ್ 7ರವರೆಗೆ ಅಪರಿಚಿತರು ನಕಲಿ ಟ್ರೇಡಿಂಗ್ ಹೆಸರಿನಲ್ಲಿ ತನ್ನಿಂದ 1,25,67,726 ರೂ. ವನ್ನು ಆನ್‌ಲೈನ್ ಮೂಲಕ ಮೋಸ ಮಾಡಿರುವುದಾಗಿ ಹಣ ಕಳೆದುಕೊಂಡ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದು ಈ ಬಗ್ಗೆ…
Author: main-admin
ಮಂಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುವುದಾಗಿ ವಾಟ್ಸಾಪ್ ಚಾಟಿಂಗ್‌ನಲ್ಲಿ ಅಪರಿಚಿತರು ಹೇಳಿರುವುದನ್ನು ನಂಬಿ 1,25,67, 726 ರೂ. ಕಳೆದುಕೊಂಡಿರುವ ಕುರಿತಂತೆ ಮಂಗಳೂರಿನ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರ ವಾಟ್ಸಾಪ್‌ಗೆ ಆನ್‌ಲೈನ್ ಟ್ರೇಡಿಂಗ್ ಕುರಿತಂತೆ ಮೆಸೇಜ್ ಬಂದಿದ್ದು, ಮೆಸೇಜ್ ಮಾಡಿದ ವ್ಯಕ್ತಿ ಚಾಟಿಂಗ್‌ನಲ್ಲಿ ತಿಳಿಸಿದಂತೆ ಹೂಡಿಕೆ ಮಾಡಲು ಒಪ್ಪಿಕೊಂಡಿದ್ದಾರೆ. ಅನಂತರ ವಿಐಪಿ ಎಚ್2 ಶೇರ್‌ಖಾನ್ ಕ್ಯಾಪಿಟಲ್ ಎಂಬ ವಾಟ್ಸಾಪ್ ಗ್ರೂಪ್ ಗೆ ದೂರುದಾರರನ್ನು ಸೇರಿಸಲಾಗಿದೆ. ಬಳಿಕ ಲಿಂಕ್ ಒಂದನ್ನು ಕಳುಹಿಸಿದ್ದು, ಅದನ್ನು ಒತ್ತುವ ಮೂಲಕ ಶೇರ್‌ಖಾನ್ ಇಂಟರ್‌ನ್ಯಾಷನಲ್ ಸೆಕ್ಯೂರಿಟಿ ಫ್ಲಾಟ್ ಫಾರಂಗೆ ಸೇರಿಸಿದ್ದಾರೆ. ಮೊದಲಿಗೆ 2024ರ -ಸೆ.1ರಂದು 1 ಲಕ್ಷ ರೂ. ಅನ್ನು ಅವರು ತಿಳಿಸಿದಂತೆ ಅವರ ಖಾತೆಗೆ ಯುಪಿಐ ಮಾಡಿದ್ದಾರೆ. ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ದೊರೆಯುತ್ತದೆ ಎಂದು ತಿಳಿಸಿದಂತೆ ಸೆ.1ರಿಂದ 15ರ ನಡುವೆ ಒಟ್ಟು 25 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಬಳಿಕ ಆ ಹಣವನ್ನು ವಿತ್ ಡ್ರಾ ಮಾಡಲು…
ಉಳ್ಳಾಲ ತೊಕ್ಕೊಟು ಸಮೀಪದ ರೈಲು ಹಳಿಯ ಮೇಲೆ ಕಿಡಿಗೇಡಿಗಳು ಜಲ್ಲಿ ಕಲ್ಲುಅನ್ನು ಇಟ್ಟಿರುವ ಘಟನೆಯೊಂದು ಶನಿವಾರ ರಾತ್ರಿ ನಡೆದಿದ್ದು, ರೈಲು ಸಂಚರಿಸುವಾಗ ಉಂಟಾದ ಶಬ್ದಕ್ಕೆ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಶನಿವಾರ ರಾತ್ರಿ ಕೇರಳದಿಂದ ಮಂಗಳೂರು ಕಡೆಗೆ ರೈಲು ಸಂಚರಿಸಿದ ವೇಳೆ ದೊಡ್ಡ ಪ್ರಮಾಣದ ಸದ್ದು ಕೇಳಿಸಿದೆ. ಇದರಿಂದ ಸ್ಥಳೀಯರ ಮನೆಗಳಲ್ಲಿ ಕಂಪನದ ಅನುಭವ ಉಂಟಾಗಿದ್ದು, ಜನರು ಭಯಕ್ಕೆ ಕಾರಣವಾಗಿದೆ. ಬಾರಿ ಸದ್ದು ಉಂಟಾಗಿದ್ದರಿಂದ ಸ್ಥಳೀಯರು ಟಾರ್ಚ್ ಹಿಡಿದು ಹಳಿ ಸಮೀಪ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಹಳಿಗಳ ಮೇಲೆ ಜಲ್ಲಿಕಲ್ಲಿನ ರಾಶಿ ಜೋಡಿಸಿ ಇಟ್ಟಿರುವುದು ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಇಬ್ಬರು ಹಳಿ ಮೇಳೆ ಸಂಚರಿಸುವುದು ಕಂಡಿದ್ದು, ಅವರೇ ಈ ಕೃತ್ಯ ಎಸಗಿರುವ ಶಂಕೆ ಇರುವುದಾಗಿ ರೈಲ್ವೆ ಪೊಲೀಸರು ತಿಳಿಸಿದ್ದಾರೆ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ರಾತ್ರಿ ವೇಳೆ ಸಿಸಿಟಿವಿ ಪರಿಶೀಲನೆ ಮಾಡಲಿಲ್ಲ. ಇದೀಗ ಎಂಜಿನಿಯರ್, ಅಧಿಕಾರಿಗಳು ಎಲ್ಲರ ಜತೆಗೆ ಸೇರಿ ಪರಿಶೀಲನೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚುವ…
ಮಂಗಳೂರು: ತಾನು ಬೋಧಿಸುತ್ತಿದ್ದ ಶಾಲೆಯ ವಿದ್ಯಾರ್ಥಿನಿಯರಿಗೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಸಾಬೀತಾದ ಅಪರಾಧಿ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ ವಿಶೇಷ ನ್ಯಾಯಾಲಯ) ತೀರ್ಪು ನೀಡಿದೆ. ಕಲ್ಲಮುಂಡ್ಕೂರು ನಿವಾಸಿ ಗುರುವ ಮೊಗೇರ (49) ಶಿಕ್ಷೆಗೊಳಗಾದ ಶಿಕ್ಷಕ. ಗುರುವ ಮೊಗೇರಾ ವಿದ್ಯಾರ್ಥಿನಿಯರನ್ನು ಶಾಲೆಯಲ್ಲಿರುವ ಪ್ರತ್ಯೇಕ ಕೊಠಡಿಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ವಿದ್ಯಾರ್ಥಿನಿಯರು ಶಾಲೆಯ ಮುಖ್ಯ ಶಿಕ್ಷಕರಲ್ಲಿ ದೂರು ನೀಡಿದ್ದರು. ಆದ್ದರಿಂದ ಅವರು ಗುರುವ ಮೊಗೇರನ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಠಾಣೆಯ ಉಪನಿರೀಕ್ಷಕಿ ಶಿವರುದ್ರಮ್ಮ ಎಸ್. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಡಿ. ವಿನಯ್ ಸಮಗ್ರ ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ…
ಬೆಳ್ತಂಗಡಿ: ನಾರಾವಿ ಗ್ರಾಮದ ನೂಜೋಡಿಯಲ್ಲಿ ವ್ಯಕ್ತಿಯೋರ್ವರು ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾದ ಘಟನೆ ನಡೆದಿದೆ. ನೂಜೋಡಿ ಮೊಂಟ ಮಲೆಕುಡಿಯ ಅವರು ತನ್ನ ಜಮೀನಿನ ಬಳಿ ಹಾದು ಹೋಗುವ ಸಿಂಗಲ್ ಪೇಸ್ ಇರುವ 3 ವಿದ್ಯುತ್ ವಯರ್ ಹಾದುಹೋಗುವ ವಿದ್ಯುತ್ ಲೈನ್ ಮೇಲೆ ತೆಂಗಿನ ಮರದ ಗರಿ (ಮಡಲು) ಬಿದ್ದಿರುವುದನ್ನು ಕಂಡರು.ಅದನ್ನು ಕೋಲಿನಿಂದ ಎಳೆದಾಗ ತಂತಿ ತುಂಡಾಗಿ ಕೆಳಗೆ ಬಿದ್ದು ಇವರು ಆಘಾತಕ್ಕೊಳಗಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಪುತ್ರ ನೀಡಿದ ದೂರಿನಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ
ಮಂಗಳೂರು : ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ. ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ.ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ ಹಾಗೂ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರುಗಳನ್ನು ನೇಮಕ ಮಾಡಲಾಗಿದೆ.ಈಗಾಗಲೇ ಆಯಾ ಗ್ರಾಮ ಪಂಚಾಯತ್‍ಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಸಿಸಿಟಿವಿಗಳನ್ನು ಚುನಾವಣಾ ಪ್ರಕ್ರಿಯೆಗೆ ಬಳಸಲಾಗುತ್ತಿದೆ ಎಂದು ಅವರು ತಿಳಿಸಿದರು. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,552 ಹಾಗೂ ಉಡುಪಿ ಜಿಲ್ಲೆಯಲ್ಲಿ 2,480 ಮತದಾರರಿದ್ದಾರೆ ಎಂದು ಅವರು ತಿಳಿಸಿದರು.ಮತದಾರರು ಮತಗಟ್ಟೆಯಲ್ಲಿ ನೀಡುವ ನೇರಳೆ ಪೆನ್ನಿನಿಂದ ಮತಪತ್ರದಲ್ಲಿ ಪ್ರಾಶಸ್ತ್ಯ ಅನುಸಾರ ಮತ ಚಲಾಯಿಸಬೇಕು ಮೊದಲನೇ ಪ್ರಾಶಸ್ತ್ಯದ ಮತವನ್ನು ಯಾವ ಅಭ್ಯರ್ಥಿಗೆ ಚಲಾಯಿಸುತ್ತಿದ್ದಾರೆ ಎಂಬುದನ್ನು ಕ್ರಮ ಸಂಖ್ಯೆ “1” ಎಂದು…
ಮಂಗಳೂರು: ನಗರದ ಹೊರವಲಯದ ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದಲ್ಲಿ ದೊಡ್ಡಮ್ಮನ ಮನೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಬೈಕ್ ನಲ್ಲಿ ಬಂದ ಆರೋಪಿಗಳಿಬ್ಬರು ಹಲ್ಲೆ ನಡೆಸಿ, ಮಾನಹಾನಿಗೊಳಿಸಿರುವ ಬಗ್ಗೆ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳಾದ ರುಫೈದ್ ಹಾಗೂ ಮತ್ತೊರ್ವ ಆರೋಪಿ ಬೈಕ್‌ನಲ್ಲಿ ಬಂದು ಬೆದರಿಕೆಯೊಡ್ಡಿ ಚೂರಿ ಹಾಗೂ ಕೋಲಿನಿಂದ ಹಲ್ಲೆ ನಡೆಸಿದ್ದಲ್ಲದೆ ಮೈಗೆ ಕೈ ಹಾಕಿ ಮಾನಹಾನಿಗೊಳಿಸಿದ್ದಾರೆ ಎಂದು ಆರೋಪಿಸಿ ಕೊಣಾಜೆ ಠಾಣೆಗೆ ದೂರು ನೀಡಲಾಗಿದೆ. ಈಬಗ್ಗೆ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಪ್ಪಿನಂಗಡಿ: ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರಿಡ್ಜ್ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಸ್ವಾಧೀನಪಡಿಸಿಕೊಂಡ ಘಟನೆ ಸಂಭವಿಸಿದೆ. ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಅದನ್ನು ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಪ್ರೀಝರ್‌ನಲ್ಲಿ ಇರಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ ಅರಣ್ಯಾಧಿ ಕಾರಿಗಳ ನಿರ್ದೇಶನದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಯತೀಂದ್ರ ಇಲಾಖಾ ಸಿಬಂದಿ ಸುನಿಲ್, ಶಿವಾನಂದ ಅವರ ತಂಡ ಸುರೇಶ್ ಮನೆಗೆ ದಾಳಿ ನಡೆಸಿ ಸಂಗ್ರಹಿಸಿಟ್ಟ ಮಾಂಸ ಹಾಗೂ ಹತ್ಯೆಗೆ ಬಳಸಲಾದ ಕೋವಿಯನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಆರೋಪಿಗಳು ಗುಂಡ್ಯ ಹೊಳೆಯನ್ನು ಈಜಿ ದಾಟುವ ಮೂಲಕ ಪರಾರಿಯಾಗಿದ್ದಾರೆ. ವಲಯಾಧಿಕಾರಿಯಿಂದ ತನಿಖೆ ಉಪ್ಪಿನಂಗಡಿ ವಲಯ ಅರಣ್ಯಾಧಿ ಕಾರಿ ರಾಘವೇಂದ್ರ ಪ್ರಕರಣದ…
ಬೆಂಗಳೂರು: ರಾಜ್ಯದ ವಿವಿಧ ಭಾಗಗಳ 7 ಡಿವೈಎಸ್‌ಪಿ ಹಾಗೂ 55 ಪೊಲೀಸ್ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಪೊಲೀಸ್ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ತಕ್ಷಣವೇ ವರ್ಗಾಯಣೆಯಾದ ಸ್ಥಳಕ್ಕೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ವರ್ಗಾವಣೆ ಮಾಡಲಾಗಿದೆ. ಡಿವೈಎಸ್‌ಪಿಗಳಾದ ಕೆ.ಎಂ.ಸತೀಶ್ ಅವರನ್ನು ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗ ಹಾಗೂ ಗೋಪಾಲ್ ನಾಯಕ್ ಅವರನ್ನು ಬೆಂಗಳೂರಿನ ಬಿಎಂಟಿಎಫ್‌ಗೆ ವರ್ಗಾವಣೆ ಮಾಡಲಾಗಿದೆ. ಉಳಿದ ಡಿವೈಎಸ್‌ಪಿಗಳನ್ನು ಇತರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿದೆ. ರಾಜ್ಯ ಗುಪ್ತವಾರ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್‌ಪಿ ರಘುಕುಮಾರ್ ವಿ ಅವರನ್ನು ವಲಯ ಕಚೇರಿ, ಬಳ್ಳಾರಿಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಲುವರಾಜು ಬಿ ಅವರನ್ನು ಮಂಡ್ಯ ಜಿಲ್ಲೆಯ ನಾಗಮಂಗಲ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಲೋಕಾಯುಕ್ತದಲ್ಲಿದ್ದ ನೀಲಪ್ಪ ಮಲ್ಲಪ್ಪ ಓಲೇಕಾರ ಅವರನ್ನು ಖಾನಾಪುರ ಪಿಟಿಎಸ್‌ಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಗೋಪಾಲ್ ನಾಯಕ್‌ರನ್ನು ಬಿಎಂಟಿಎಫ್, ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.…
ಮಂಗಳೂರು: ವಸತಿ ಗೃಹದಲ್ಲಿ ನಿಲ್ಲಿಸಿದ್ದ ಪೆಟ್ರೋಲ್ ಚಾಲಿತ ಟಿವಿಎಸ್ ಎನ್‌ಟಾರ್ಕ್ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ನಡೆದಿದೆ. ಎರಡು ತಿಂಗಳ ಹಿಂದೆಯಷ್ಟೇ ಸ್ಕೂಟರ್ ಖರೀದಿಸಿದ್ದ ಐಟಿಐ ವಿದ್ಯಾರ್ಥಿ ರಾಕೇಶ್ ಮಾಲೀಕತ್ವದ ಸ್ಕೂಟರ್ 12:30 ರ ಸುಮಾರಿಗೆ ಹೊತ್ತಿ ಉರಿದಿದ್ದು, ಮನೆಯ ಕಿಟಕಿ ಮತ್ತು ವಿದ್ಯುತ್ ತಂತಿಗಳಿಗೆ ವೇಗವಾಗಿ ಬೆಂಕಿ ವ್ಯಾಪಿಸಿದೆ. ಅದೃಷ್ಟವಶಾತ್, ಕುಟುಂಬವು ಆ ಸಮಯಕ್ಕೆ ಎಚ್ಚರವಾಯಿತು ಮತ್ತು ದೊಡ್ಡ ಅನಾಹುತ ಸಂಭವಿಸುವ ಮೊದಲು ಅಗ್ನಿಯನ್ನು ನಂದಿಸಿದರು. ಅದರ ಹೊರತಾಗಿಯೂ, ಆಸ್ತಿಗೆ ಸ್ವಲ್ಪ ಹಾನಿಯಾಗಿದೆ.ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.